ಎನ್ ಡಿ ಟಿ ವಿ ವಿಶ್ವ ಶೃಂಗಸಭೆಯಲ್ಲಿ ಪ್ರಧಾನಮಂತ್ರಿಯವರ ಭಾಷಣ

October 21st, 10:25 am

ನಾವು ಹಿಂದಿನ 4-5 ವರ್ಷಗಳ ಚರ್ಚೆಗಳನ್ನು ನೋಡಿದರೆ ಬಹುತೇಕ ಚರ್ಚೆಗಳಲ್ಲಿ ಒಂದು ಸಾಮಾನ್ಯ ವಿಷಯವಿದೆ ಎಂಬುದನ್ನು ಗಮನಿಸಬಹುದು. ಅದುವೇ ಭವಿಷ್ಯದ ಬಗ್ಗೆ ಕಾಳಜಿ/ಕಳವಳ. ಕೊರೊನಾ ಸಾಂಕ್ರಾಮಿಕದ ಅವಧಿಯಲ್ಲಿ ಜಾಗತಿಕ ಸಾಂಕ್ರಾಮಿಕ ರೋಗವನ್ನು ಹೇಗೆ ನಿಭಾಯಿಸುವುದು ಎಂಬ ಚಿಂತೆ ಇತ್ತು. ಕೋವಿಡ್ ಹರಡುತ್ತಿದ್ದಂತೆ, ಜಾಗತಿಕ ಆರ್ಥಿಕತೆಯ ಬಗ್ಗೆ ಕಳವಳಗಳು ಹೆಚ್ಚಾದವು. ಸಾಂಕ್ರಾಮಿಕ ರೋಗವು ಹಣದುಬ್ಬರ, ನಿರುದ್ಯೋಗ ಮತ್ತು ಹವಾಮಾನ ಬದಲಾವಣೆಯ ಬಗ್ಗೆ ಚಿಂತೆಗಳನ್ನು ಹೆಚ್ಚಿಸಿತು. ನಂತರ, ಭುಗಿಲೆದ್ದ ಯುದ್ಧಗಳು ಈ ಕುರಿತಾದ ಚರ್ಚೆಗಳು ಮತ್ತು ಆತಂಕಗಳನ್ನು ತೀವ್ರಗೊಳಿಸಿತು. ಜಾಗತಿಕ ಪೂರೈಕೆ ಸರಪಳಿಗೆ ಅಡೆತಡೆಗಳು ಮತ್ತು ಅನೇಕ ಅಮಾಯಕ ಜೀವಿಗಳು ಪ್ರಾಣ ಕಳೆದುಕೊಳ್ಳಬೇಕಾದ ಬಗ್ಗೆ ಆತಂಕ ಉಂಟಾಗಿತ್ತು. ಜಾಗತಿಕ ಶೃಂಗಸಭೆಗಳು ಮತ್ತು ಉಪನ್ಯಾಸಗಳಲ್ಲಿ ಉದ್ವಿಗ್ನತೆಗಳು, ಸಂಘರ್ಷಗಳು ಮತ್ತು ಒತ್ತಡಗಳು ಚರ್ಚಾ ವಿಷಯಗಳಾದವು. ಜಾಗತಿಕವಾಗಿ ಪ್ರಸ್ತುತದ ಚರ್ಚೆಗಳು ಈ ಕಳವಳದ ಬಗ್ಗೆ ಕೇಂದ್ರೀಕೃತವಾಗಿರುವಾಗ, ಭಾರತದಲ್ಲಿ ಯಾವ ರೀತಿಯ ಚಿಂತನೆ ನಡೆಯುತ್ತಿದೆ? ಇದು ಜಾಗತಿಕ ಚಿಂತೆಗೆ ವ್ಯತಿರಿಕ್ತವಾಗಿದೆ. ಭಾರತದಲ್ಲಿ ನಾವು ಈ ಜಾಗತಿಕ ಪ್ರಕ್ಷುಬ್ಧತೆಯ ನಡುವೆಯೂ “ಭಾರತೀಯ ಶತಮಾನ”ದ ಬಗ್ಗೆ ಮಾತನಾಡುತ್ತಿದ್ದೇವೆ. ಭಾರತ ಆಶಾಕಿರಣವಾಗಿದೆ. ಜಗತ್ತು ಚಿಂತೆಯಲ್ಲಿ ಮುಳುಗಿರುವಾಗ, ಭಾರತವು ಭರವಸೆಯನ್ನು ಹರಡುತ್ತಿದೆ. ಹಾಗೆಂದ ಮಾತ್ರಕ್ಕೆ ಜಾಗತಿಕ ಸನ್ನಿವೇಶಗಳು ನಮ್ಮ ಮೇಲೆ ಪರಿಣಾಮ ಬೀರುವುದಿಲ್ಲ ಎಂದಲ್ಲ – ಅದು ಪ್ರಭಾವವನ್ನು ಖಂಡಿತವಾಗಿಯೂ ಬೀರಲಿದೆ. ಭಾರತವು ಸವಾಲುಗಳನ್ನು ಎದುರಿಸುತ್ತಿದೆ, ಆದರೆ ಇಲ್ಲಿ ಸಕಾರಾತ್ಮಕತೆಯ ಭಾವವಿದೆ, ನಾವೆಲ್ಲರೂ ಅದರ ಅನುಭೂತಿ ಪಡೆಯಬಹುದು. ಹೀಗಾಗಿ 'ದಿ ಇಂಡಿಯನ್ ಸೆಂಚುರಿ – (ಭಾರತದ ಶತಮಾನದ)' ದ ಬಗ್ಗೆ ಮಾತು ಕೇಳಿಬರುತ್ತಿದೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ಎನ್‌ ಡಿ ಟಿ ವಿ ವಿಶ್ವ ಶೃಂಗಸಭೆ 2024 ಅನ್ನು ಉದ್ದೇಶಿಸಿ ಮಾತನಾಡಿದರು

October 21st, 10:16 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ಎನ್‌ ಡಿ ಟಿ ವಿ ವಿಶ್ವ ಶೃಂಗಸಭೆ 2024 ಅನ್ನು ಉದ್ದೇಶಿಸಿ ಮಾತನಾಡಿದರು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು ಎಲ್ಲಾ ಗಣ್ಯರನ್ನು ಸ್ವಾಗತಿಸಿದರು ಮತ್ತು ಶೃಂಗಸಭೆಯಲ್ಲಿ ಹಲವು ವಿಷಯಗಳನ್ನು ಕುರಿತು ಚರ್ಚೆಗಳು ನಡೆಯಲಿವೆ ಎಂದು ಹೇಳಿದರು. ತಮ್ಮ ಅಭಿಪ್ರಾಯಗಳನ್ನು ಮಂಡಿಸುವ ವಿವಿಧ ವಲಯಗಳ ಜಾಗತಿಕ ನಾಯಕರ ಉಪಸ್ಥಿತಿಯನ್ನು ಅವರು ಶ್ಲಾಘಿಸಿದರು.

ಗುಜರಾತ್‌ನ ಗಾಂಧಿನಗರದಲ್ಲಿ ರಿ-ಇನ್ವೆಸ್ಟ್ 2024 ಸಮ್ಮೇಳನದ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ

September 16th, 11:30 am

ಗುಜರಾತ್ ರಾಜ್ಯಪಾಲರಾದ ಶ್ರೀ ಆಚಾರ್ಯ ದೇವವ್ರತ್ ಜಿ, ಗುಜರಾತ್ ಮುಖ್ಯಮಂತ್ರಿ, ಶ್ರೀ ಭೂಪೇಂದ್ರಭಾಯಿ ಪಟೇಲ್, ಆಂಧ್ರ ಪ್ರದೇಶ ಮುಖ್ಯಮಂತ್ರಿ ಶ್ರೀ ಚಂದ್ರಬಾಬು ನಾಯ್ಡು ಜಿ, ರಾಜಸ್ಥಾನ ಮುಖ್ಯಮಂತ್ರಿ ಶ್ರೀ ಭಜನ್ ಲಾಲ್ ಶರ್ಮಾ ಜಿ, ಮಧ್ಯಪ್ರದೇಶ ಮುಖ್ಯಮಂತ್ರಿ ಶ್ರೀ ಮೋಹನ್ ಯಾದವ್ ಜಿ, ಛತ್ತೀಸ್‌ಗಢ ಮುಖ್ಯಮಂತ್ರಿ ಮತ್ತು ಗೋವಾ ಮುಖ್ಯಮಂತ್ರಿಗಳೆ, ಸಂಪು ಸಹೋದ್ಯೋಗಿಗಳಾದ ಪ್ರಲ್ಹಾದ್ ಜೋಶಿ ಮತ್ತು ಶ್ರೀಪಾದ್ ನಾಯ್ಕ್ ಜಿ, ಜರ್ಮನಿಯ ಆರ್ಥಿಕ ಸಹಕಾರ ಸಚಿವರು ಮತ್ತು ಡೆನ್ಮಾರ್ಕ್‌ನ ಕೈಗಾರಿಕಾ ವ್ಯವಹಾರ ಸಚಿವರು ಸೇರಿದಂತೆ ವಿದೇಶಿ ಗಣ್ಯ ಅತಿಥಿಗಳೆ, ವಿವಿಧ ರಾಜ್ಯಗಳ ಇಂಧನ ಸಚಿವರೆ, ಹಲವಾರು ದೇಶಗಳ ಪ್ರತಿನಿಧಿಗಳೆ, ಇಲ್ಲಿ ನೆರೆದಿರುವ ಮಹಿಳೆಯರೆ ಮತ್ತು ಮಹನೀಯರೆ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್ ನ ಗಾಂಧಿನಗರದಲ್ಲಿ 4ನೇ ಜಾಗತಿಕ ನವೀಕರಿಸಬಹುದಾದ ಇಂಧನ ಹೂಡಿಕೆದಾರರ ಸಮಾವೇಶ ಮತ್ತು ಎಕ್ಸ್ ಪೋ (ಮರು ಹೂಡಿಕೆ) ಉದ್ಘಾಟಿಸಿದರು

September 16th, 11:11 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತ್ ನ ಗಾಂಧಿನಗರದ ಮಹಾತ್ಮಾ ಮಂದಿರದಲ್ಲಿ 4ನೇ ಜಾಗತಿಕ ನವೀಕರಿಸಬಹುದಾದ ಇಂಧನ ಹೂಡಿಕೆದಾರರ ಸಮಾವೇಶ ಮತ್ತು ಎಕ್ಸ್ ಪೋ (ಮರು ಹೂಡಿಕೆ) ಉದ್ಘಾಟಿಸಿದರು. 3 ದಿನಗಳ ಶೃಂಗಸಭೆಯು 200 ಗಿಗಾವ್ಯಾಟ್ ಗಿಂತ ಹೆಚ್ಚು ಸ್ಥಾಪಿತ ಪಳೆಯುಳಿಕೆಯೇತರ ಇಂಧನ ಸಾಮರ್ಥ್ಯದ ಭಾರತದ ಗಮನಾರ್ಹ ಸಾಧನೆಗೆ ಪ್ರಮುಖ ಕೊಡುಗೆ ನೀಡಿದವರನ್ನು ಗೌರವಿಸುತ್ತದೆ. ಸಾರ್ವಜನಿಕ ಮತ್ತು ಖಾಸಗಿ ವಲಯದ ಕಂಪನಿಗಳು, ನವೋದ್ಯಮಗಳು ಮತ್ತು ಪ್ರಮುಖ ಉದ್ಯಮದ ಉದ್ದಿಮಿಗಳ ಅತ್ಯಾಧುನಿಕ ಆವಿಷ್ಕಾರಗಳನ್ನು ಪ್ರದರ್ಶಿಸುವ ಪ್ರದರ್ಶನವನ್ನು ಶ್ರೀ ನರೇಂದ್ರ ಮೋದಿ ವೀಕ್ಷಿಸಿದರು.

ಮಾರ್ಚ್ 4-6ರಂದು ತೆಲಂಗಾಣ, ತಮಿಳುನಾಡು, ಒಡಿಶಾ, ಪಶ್ಚಿಮ ಬಂಗಾಳ ಮತ್ತು ಬಿಹಾರಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

March 03rd, 11:58 am

ಮಾರ್ಚ್ 4ರಂದು ಬೆಳಗ್ಗೆ 10.30ಕ್ಕೆ ಪ್ರಧಾನಮಂತ್ರಿಯವರು ತೆಲಂಗಾಣದ ಅದಿಲಾಬಾದ್ ನಲ್ಲಿ 56,000 ಕೋಟಿ ರೂ.ಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ, ಸಮರ್ಪಿಸಲಿದ್ದಾರೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಬಳಿಕ ಮಧ್ಯಾಹ್ನ 3.30ಕ್ಕೆ ಪ್ರಧಾನಮಂತ್ರಿಯವರು ತಮಿಳುನಾಡಿನ ಕಲ್ಪಕ್ಕಂನಲ್ಲಿರುವ ಭವಿನಿಗೆ ಭೇಟಿ ನೀಡಲಿದ್ದಾರೆ.

ಬೋಯಿಂಗ್ ಇಂಡಿಯಾ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕೇಂದ್ರದ ಉದ್ಘಾಟನೆ ಮತ್ತು ಬೋಯಿಂಗ್ ಸುಕನ್ಯಾ ಕಾರ್ಯಕ್ರಮದ ಉದ್ಘಾಟನೆಯಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅನುವಾದ

January 19th, 03:15 pm

ಕರ್ನಾಟಕದ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಜೀ, ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಜೀ, ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಜೀ, ಭಾರತದಲ್ಲಿ ಬೋಯಿಂಗ್ ಕಂಪನಿಯ ಸಿಒಒ ಸ್ಟೆಫನಿ ಪೋಪ್, ಇತರ ಉದ್ಯಮ ಪಾಲುದಾರರು, ಮಹಿಳೆಯರೇ ಮತ್ತು ಮಹನೀಯರೇ!

ಪ್ರಧಾನಿ ಅವರಿಂದ ಕರ್ನಾಟಕದ ಬೆಂಗಳೂರಿನಲ್ಲಿ ಅತ್ಯಾಧುನಿಕ ಬೋಯಿಂಗ್ ಇಂಡಿಯಾ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕೇಂದ್ರದ ಕ್ಯಾಂಪಸ್ ಉದ್ಘಾಟನೆ

January 19th, 02:52 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕರ್ನಾಟಕದ ಬೆಂಗಳೂರಿನಲ್ಲಿಂದು ಅತ್ಯಾಧುನಿಕ ಬೋಯಿಂಗ್ ಇಂಡಿಯಾ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆ (ಬಿಐಇಟಿಸಿ)ಯ ಹೊಸ ಕ್ಯಾಂಪಸ್ ಅನ್ನು ಉದ್ಘಾಟಿಸಿದರು. ಇದನ್ನು 1,600 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದ್ದು, 43 ಎಕರೆ ಪ್ರದೇಶದಲ್ಲಿ ನಿರ್ಮಿಸಲಾಗಿರುವ ಇದು ಅಮೆರಿಕಾದ ಹೊರಗೆ ಸ್ಥಾಪನೆಯಾಗಿರುವ ಬೃಹತ್ ಬೋಯಿಂಗ್ ಆಗಿದೆ. ಪ್ರಧಾನಮಂತ್ರಿ ಅವರು ದೇಶದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ವೈಮಾನಿಕ ವಲಯದಲ್ಲಿ ಹೆಚ್ಚಿನ ಹೆಣ್ಣು ಮಕ್ಕಳ ಪ್ರವೇಶವನ್ನು ಬೆಂಬಲಿಸುವ ಗುರಿ ಇರುವ ಬೋಯಿಂಗ್ ಸುಕನ್ಯಾ ಕಾರ್ಯಕ್ರಮಕ್ಕೂ ಚಾಲನೆ ನೀಡಿದರು.

ಗ್ರೀಸ್‌ನ ಅಥೆನ್ಸ್‌ನಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಪಠ್ಯಾಂತರ

August 25th, 09:30 pm

ಸಂಭ್ರಮದ ವಾತಾವರಣ, ಹಬ್ಬದ ಉತ್ಸಾಹ ಇದ್ದಾಗ, ಥಟ್ಟನೆ ಯಾರೊಬ್ಬರೂ ತಮ್ಮ ಕುಟುಂಬ ಸದಸ್ಯರ ನಡುವೆ ಇರಲು ಬಯಸುತ್ತಾರೆ. ನಾನು ಕೂಡ ಇಂದು ನನ್ನ ಕುಟುಂಬ ಸದಸ್ಯರ ನಡುವೆ ಬಂದಿದ್ದೇನೆ. ಇದು ಶ್ರಾವಣ ಮಾಸ. ಒಂದು ರೀತಿಯಲ್ಲಿ ಶಿವನ ತಿಂಗಳು ಎಂದು ಪರಿಗಣಿಸಲಾಗಿದೆ, ಮತ್ತು ನಮ್ಮ ದೇಶವು ಈ ಪವಿತ್ರ ತಿಂಗಳಲ್ಲಿ ಹೊಸ ಮೈಲಿಗಲ್ಲನ್ನು ಸಾಧಿಸಿದೆ. ಚಂದ್ರನ ಕತ್ತಲ ವಲಯವಾದ ದಕ್ಷಿಣ ಧ್ರುವದಲ್ಲಿ ಇಳಿದ ವಿಶ್ವದ ಮೊದಲ ರಾಷ್ಟ್ರ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ. ಭಾರತವು ಚಂದ್ರನ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸಿದೆ, ಭಾರತ ತನ್ನ ಸಾಮರ್ಥ್ಯವನ್ನು ಇಡೀ ಜಗತ್ತಿಗೆ ತೋರಿಸಿದೆ. ಪ್ರಪಂಚದಾದ್ಯಂತ ಅಭಿನಂದನಾ ಸಂದೇಶಗಳು ಹರಿದು ಬರುತ್ತಿವೆ. ಜನರು ತಮ್ಮ ಶುಭ ಹಾರೈಕೆಗಳನ್ನು ಕಳುಹಿಸುತ್ತಿದ್ದಾರೆ. ಜನರು ನಿಮ್ಮನ್ನು ಅಭಿನಂದಿಸುತ್ತಿದ್ದಾರೆ ಎಂದು ನಾನು ದೃಢವಾಗಿ ನಂಬುತ್ತೇನೆ, ಹೌದಲ್ಲವೇ? ನೀವು ಸಹ ಅನೇಕ ಅಭಿನಂದನೆಗಳನ್ನು ಸ್ವೀಕರಿಸುತ್ತಿದ್ದೀರಿ, ಅಲ್ಲವೇ? ಪ್ರತಿಯೊಬ್ಬ ಭಾರತೀಯನಿಗೂ ಅಭಿನಂದನೆಗಳು ಹರಿದುಬರುತ್ತಿವೆ. ಇಡೀ ಸಾಮಾಜಿಕ ಮಾಧ್ಯಮವು ಅಭಿನಂದನಾ ಸಂದೇಶಗಳಿಂದ ತುಂಬಿ ಹೋಗಿದೆ. ಯಶಸ್ಸು ತುಂಬಾ ಮಹತ್ವದ್ದಾಗಿದ್ದಾಗ, ಆ ಯಶಸ್ಸಿನ ಉತ್ಸಾಹವು ಎಲ್ಲೆಡೆ ಸಮಾನವಾಗಿರುತ್ತದೆ. ನೀವು ವಿಶ್ವದ ಯಾವ ಮೂಲೆಯಲ್ಲಾದರೂ ವಾಸಿಸಬಹುದು, ಆದರೆ ಭಾರತವು ನಿಮ್ಮ ಹೃದಯದಲ್ಲಿ ಮಿಡಿಯುತ್ತದೆ ಎಂದು ನಿಮ್ಮ ಮುಖವೇ ನನಗೆ ಹೇಳುತ್ತಿದೆ. ಭಾರತ ನಿಮ್ಮ ಹೃದಯದಲ್ಲಿ ಮಿಡಿಯುತ್ತದೆ, ಭಾರತ ನಿಮ್ಮ ಹೃದಯದಲ್ಲಿ ಮಿಡಿಯುತ್ತದೆ, ಭಾರತ ನಿಮ್ಮ ಮನದಲ್ಲಿ ಮಿಡಿಯುತ್ತದೆ. ಇಂದು, ನಾನು ನಿಮ್ಮೆಲ್ಲರ ನಡುವೆ ಗ್ರೀಸ್‌ನಲ್ಲಿದ್ದೇನೆ, ಮತ್ತೊಮ್ಮೆ, ಚಂದ್ರಯಾನದ ಅದ್ಭುತ ಯಶಸ್ಸಿಗಾಗಿ ನಾನು ಎಲ್ಲರಿಗೂ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.

ಅಥೆನ್ಸ್ ನಲ್ಲಿ ಭಾರತೀಯ ಸಮುದಾಯದೊಂದಿಗೆ ಪ್ರಧಾನಮಂತ್ರಿ ಅವರ ಸಂವಾದ

August 25th, 09:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2023ರ ಆಗಸ್ಟ್ 25ರಂದು ಅಥೆನ್ಸ್ ನ ಅಥೆನ್ಸ್ ಕನ್ಸರ್ವೇಟರಿಯಲ್ಲಿ ಭಾರತೀಯ ಸಮುದಾಯವನ್ನುದ್ದೇಶಿಸಿ ಭಾಷಣ ಮಾಡಿದರು.

ಹೆಲಿಕಾಪ್ಟರ್ ಗಳಿಗೆ ಕಾರ್ಯಕ್ಷಮತೆ ಆಧಾರಿತ ನ್ಯಾವಿಗೇಷನ್ ಗೆ ಸಂಬಂಧಿಸಿದ ಏಷ್ಯಾದ ಮೊದಲ ಪ್ರಾತ್ಯಕ್ಷಿಕೆಯನ್ನು ಶ್ಲಾಘಿಸಿದ ಪ್ರಧಾನ ಮಂತ್ರಿ

June 02nd, 08:43 pm

ಗಗನ್ ಉಪಗ್ರಹ ತಂತ್ರಜ್ಞಾನವನ್ನು ಬಳಸಿಕೊಂಡು ಜುಹುದಿಂದ ಪುಣೆಗೆ ಹೆಲಿಕಾಪ್ಟರ್ ಹಾರಾಟಕ್ಕಾಗಿ ಕಾರ್ಯಕ್ಷಮತೆ ಆಧಾರಿತ ನ್ಯಾವಿಗೇಷನ್ ಗೆ ಸಂಬಂಧಿಸಿದ ಏಷ್ಯಾದ ಮೊದಲ ಪ್ರಾತ್ಯಕ್ಷಿಕೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ.

PM Shares glimpses from his recent airport related programmes

April 12th, 07:24 pm

PM Modi shared glimpses from recent airport programs, highlighting the importance of top-quality infrastructure and the government's commitment to the development of civil aviation infrastructure.

'ಮಿಷನ್ ಮೋಡ್ ನಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ' ಕುರಿತ ಬಜೆಟ್ ನಂತರದ ವೆಬಿನಾರ್ ನಲ್ಲಿ ಪ್ರಧಾನ ಮಂತ್ರಿಯವರ ಭಾಷಣದ ಕನ್ನಡ ಅನುವಾದ

March 03rd, 10:21 am

ಈ ವೆಬಿನಾರ್ ನಲ್ಲಿ ಉಪಸ್ಥಿತರಿರುವ ಎಲ್ಲ ಗಣ್ಯರಿಗೆ ಸ್ವಾಗತ. ಇಂದಿನ ನವ ಭಾರತವು ಹೊಸ ಕೆಲಸದ ಸಂಸ್ಕೃತಿಯೊಂದಿಗೆ ಮುಂದುವರಿಯುತ್ತಿದೆ. ಈ ವರ್ಷದ ಬಜೆಟ್ ಸಾಕಷ್ಟು ಚಪ್ಪಾಳೆಯನ್ನು ಪಡೆದಿದೆ ಮತ್ತು ದೇಶದ ಜನರು ಇದನ್ನು ಬಹಳ ಸಕಾರಾತ್ಮಕವಾಗಿ ತೆಗೆದುಕೊಂಡಿದ್ದಾರೆ. ಅದೇ ಹಳೆಯ ಕೆಲಸದ ಸಂಸ್ಕೃತಿ ಮುಂದುವರಿದಿದ್ದರೆ, ಅಂತಹ ಬಜೆಟ್ ವೆಬಿನಾರ್ ಗಳ ಬಗ್ಗೆ ಯಾರೂ ಯೋಚಿಸುತ್ತಿರಲಿಲ್ಲ. ಆದರೆ ಇಂದು ನಮ್ಮ ಸರ್ಕಾರವು ಬಜೆಟ್ ಮಂಡನೆಯ ಮೊದಲು ಮತ್ತು ನಂತರ ಪ್ರತಿಯೊಬ್ಬ ಮಧ್ಯಸ್ಥಗಾರರೊಂದಿಗೆ ವಿವರವಾಗಿ ಚರ್ಚಿಸುತ್ತದೆ ಮತ್ತು ಅವರನ್ನು ಜೊತೆಯಲ್ಲಿ ಕರೆದೊಯ್ಯಲು ಪ್ರಯತ್ನಿಸುತ್ತದೆ. ಈ ವೆಬಿನಾರ್ ಬಜೆಟ್ ನ ಗರಿಷ್ಠ ಫಲಿತಾಂಶವನ್ನು ಪಡೆಯಲು, ಬಜೆಟ್ ಪ್ರಸ್ತಾಪಗಳನ್ನು ನಿಗದಿತ ಸಮಯದ ಚೌಕಟ್ಟಿನೊಳಗೆ ಅನುಷ್ಠಾನಗೊಳಿಸುವಲ್ಲಿ ಮತ್ತು ಬಜೆಟ್ ಗುರಿಗಳನ್ನು ಸಾಧಿಸುವಲ್ಲಿ ವೇಗವರ್ಧಕವಾಗಿ ಕಾರ್ಯನಿರ್ವಹಿಸುತ್ತದೆ. ಸರ್ಕಾರದ ಮುಖ್ಯಸ್ಥನಾಗಿ ಕೆಲಸ ಮಾಡುವಾಗ ನನಗೆ 20 ವರ್ಷಗಳಿಗಿಂತ ಹೆಚ್ಚು ಅನುಭವವಿದೆ ಎಂದು ನಿಮಗೆ ತಿಳಿದಿದೆ. ಈ ಅನುಭವದ ಸಾರವೇನೆಂದರೆ, ಎಲ್ಲಾ ಪಾಲುದಾರರು ನೀತಿ ನಿರ್ಧಾರದಲ್ಲಿ ತೊಡಗಿಸಿಕೊಂಡಾಗ, ಅಪೇಕ್ಷಿತ ಫಲಿತಾಂಶವೂ ಕಾಲಮಿತಿಯೊಳಗೆ ಬರುತ್ತದೆ. ಕಳೆದ ಕೆಲವು ದಿನಗಳಲ್ಲಿ ನಡೆದ ವೆಬಿನಾರ್ ಗಳಲ್ಲಿ ಸಾವಿರಾರು ಜನರು ನಮ್ಮೊಂದಿಗೆ ಸೇರಿಕೊಂಡಿದ್ದಾರೆ ಎಂದು ನಾವು ನೋಡಿದ್ದೇವೆ. ಪ್ರತಿಯೊಬ್ಬರೂ ದಿನವಿಡೀ ಚಿಂತನ-ಮಂಥನ ಮಾಡುತ್ತಿದ್ದರು ಮತ್ತು ಭವಿಷ್ಯಕ್ಕಾಗಿ ಬಹಳ ಮುಖ್ಯವಾದ ಸಲಹೆಗಳು ಬಂದವು ಎಂದು ನಾನು ಹೇಳಬಲ್ಲೆ. ಪ್ರತಿಯೊಬ್ಬರೂ ಬಜೆಟ್ ಮೇಲೆ ಕೇಂದ್ರೀಕರಿಸಿದರು ಮತ್ತು ಹೇಗೆ ಮುಂದುವರಿಯಬೇಕು ಎಂಬುದರ ಬಗ್ಗೆ ಉತ್ತಮ ಸಲಹೆಗಳಿವೆ. ಇಂದು ನಾವು ದೇಶದ ಪ್ರವಾಸೋದ್ಯಮ ಕ್ಷೇತ್ರದ ಪರಿವರ್ತನೆಗಾಗಿ ಈ ಬಜೆಟ್ ವೆಬಿನಾರ್ ನಡೆಸುತ್ತಿದ್ದೇವೆ.

'ಅಭಿಯಾನದೋಪಾದಿಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ' ಕುರಿತ ಬಜೆಟೋತ್ತರ ವೆಬಿನಾರ್ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

March 03rd, 10:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಜೆಟೋತ್ತರ ವೆಬಿನಾರ್ ಉದ್ದೇಶಿಸಿ 'ಅಭಿಯಾನದೋಪಾದಿಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ' ಎಂಬ ವಿಷಯದ ಕುರಿತು ಭಾಷಣ ಮಾಡಿದರು. ಕೇಂದ್ರ ಬಜೆಟ್ 2023ರಲ್ಲಿ ಘೋಷಿಸಲಾದ ಉಪಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನನಕ್ಕೆ ತರಲು ಕಲ್ಪನೆಗಳು ಮತ್ತು ಸಲಹೆಗಳನ್ನು ಪಡೆಯಲು ಸರ್ಕಾರ ಆಯೋಜಿಸುತ್ತಿರುವ 12 ಬಜೆಟೋತ್ತರ ವೆಬಿನಾರ್ ಗಳ ಸರಣಿಯಲ್ಲಿ ಇದು ಏಳನೆಯದಾಗಿದೆ.

ವೈಮಾನಿಕ ವಲಯ ಜನರ ಪ್ರಯಾಣ ಸಮಯ ತಗ್ಗಿಸಿ ಮತ್ತಷ್ಟು ಹತ್ತಿರಗೊಳಿಸುತ್ತಿದೆ ಮತ್ತು ರಾಷ್ಟ್ರೀಯ ಪ್ರಗತಿಯನ್ನು ಉತ್ತೇಜಿಸುತ್ತಿದೆ: ಪ್ರಧಾನಮಂತ್ರಿ

February 22nd, 12:45 pm

ಕೋವಿಡ್ ನಂತರದ ಹೊಸ ದಾಖಲೆಯ ದೇಶೀಯ ವಿಮಾನ ಪ್ರಯಾಣಿಕರ ಸಂಖ್ಯೆ 4.45 ಲಕ್ಷಕ್ಕೆ ತಲುಪಿದ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣಗಳ ಸಂಖ್ಯೆಯಲ್ಲಿನ ಹೆಚ್ಚಳವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಶ್ಲಾಘಿಸಿದ್ದಾರೆ.

ಫ್ರಾನ್ಸ್ ಅಧ್ಯಕ್ಷರೊಂದಿಗಿನ ನಡೆದ ವರ್ಚುವಲ್ ಸಭೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಮಾಡಿದ ಭಾಷಣದ ಕನ್ನಡ ಅವತರಣಿಕೆ

February 14th, 04:31 pm

ಮೊದಲನೆಯದಾಗಿ, ಈ ಮಹತ್ವದ ಒಪ್ಪಂದಕ್ಕಾಗಿ ನಾನು ಏರ್ ಇಂಡಿಯಾ ಮತ್ತು ಏರ್‌ ಬಸ್‌ ಸಂಸ್ಥೆಗಳನ್ನು ಅಭಿನಂದಿಸುತ್ತೇನೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಕ್ಕಾಗಿ ನನ್ನ ಸ್ನೇಹಿತ ಅಧ್ಯಕ್ಷ ಶ‍್ರೀ ಮ್ಯಾಕ್ರನ್ ಅವರಿಗೆ ನಾನು ವಿಶೇಷವಾಗಿ ಧನ್ಯವಾದ ಹೇಳುತ್ತೇನೆ.

ಏರ್ ಇಂಡಿಯಾ-ಏರ್‌ಬಸ್ ಪಾಲುದಾರಿಕೆಯನ್ನು ಪ್ರಾರಂಭಿಸುವ ಕುರಿತು ಫ್ರೆಂಚ್ ಅಧ್ಯಕ್ಷರೊಂದಿಗೆ ವರ್ಚುವಲ್ ಸಭೆಯಲ್ಲಿ ಪ್ರಧಾನಿ ಮೋದಿ ಭಾಗವಹಿಸಿದರು

February 14th, 04:30 pm

ಪ್ರಧಾನಿ ನರೇಂದ್ರ ಮೋದಿ ಅವರು ಫ್ರಾನ್ಸ್ ಅಧ್ಯಕ್ಷ ಎಚ್.ಇ ಅವರೊಂದಿಗೆ ವಿಡಿಯೋ ಕರೆಯಲ್ಲಿ ಭಾಗವಹಿಸಿದ್ದಾರೆ. ಹೊಸ ಏರ್ ಇಂಡಿಯಾ-ಏರ್‌ಬಸ್ ಸಹಭಾಗಿತ್ವದ ಪ್ರಾರಂಭದಲ್ಲಿ ಎಮ್ಯಾನುಯೆಲ್ ಮ್ಯಾಕ್ರನ್

ಕೋವಿಡ್ -19 ಸಾಂಕ್ರಾಮಿಕಕ್ಕೂ ಮೊದಲಿನ ಹೆಚ್ಚಿನ ಸಂಖ್ಯೆಯ ಪ್ರಯಾಣಿಕರ ಸಂಚಾರಕ್ಕಾಗಿ ಭಾರತ ನಾಗರಿಕ ವಿಮಾನಯಾನ ಕ್ಷೇತ್ರವನ್ನು ಶ್ಲಾಘಿಸಿದ ಪ್ರಧಾನಿ

October 11th, 10:26 am

ಭಾರತದ ನಾಗರಿಕ ವಿಮಾನಯಾನ ಕ್ಷೇತ್ರವು ಪ್ರತಿದಿನ 4 ಲಕ್ಷ ಪ್ರಯಾಣಿಕರ ಸಂಚಾರವನ್ನು ತಲುಪಿರುವುದಕ್ಕೆ ಹಾಗೂ ಕೋವಿಡ್ -19 ಸಾಂಕ್ರಾಮಿಕಕ್ಕೂ ಮೊದಲಿನ ಹೆಚ್ಚಿನ ಸಂಖ್ಯೆಯನ್ನು ಸಾಧಿಸಿದ್ದಕ್ಕಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 'ಸುಗಮ ಜೀವನ' ಮತ್ತು ಆರ್ಥಿಕ ಪ್ರಗತಿಗೆ ಮುಖ್ಯವಾಗಿರುವ ಸಂಪರ್ಕ ಕ್ಷೇತ್ರವನ್ನು ಭಾರತದಾದ್ಯಂತ ಇನ್ನಷ್ಟು ಸುಧಾರಿಸಲು ಗಮನಹರಿಸಲಾಗಿದೆ ಎಂದು ಶ್ರೀ ಮೋದಿ ಹೇಳಿದ್ದಾರೆ.

ಸ್ವೀಡನ್ ಪ್ರಧಾನಿಯೊಂದಿಗೆ ಭಾರತದ ಪ್ರಧಾನಮಂತ್ರಿಯವರ ಸಭೆ

May 04th, 02:28 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು. ಕೋಪನ್‌ಹೇಗನ್‌ನಲ್ಲಿ ನಡೆದ 2ನೇ ಭಾರತ-ನಾರ್ಡಿಕ್ ಶೃಂಗಸಭೆಯ ಸಂದರ್ಭದಲ್ಲಿ ಸ್ವೀಡನ್‌ನ ಪ್ರಧಾನ ಮಂತ್ರಿ ಶ್ರೀಮತಿ ಮ್ಯಾಗ್ಡಲೀನಾ ಆಂಡರ್ಸನ್ ಅವರ್ನು ಭೇಟಿ ಮಾಡಿದರು. ಉಭಯ ನಾಯಕರ ನಡುವಿನ ಭೇಟಿ ಇದೇ ಮೊದಲಾಗಿದೆ.

ದೊಡ್ಡದಾದನ್ನು ಯೋಚಿಸಿ, ದೊಡ್ಡದರ ಕನಸು ಕಾಣಿ ಮತ್ತು ಅವುಗಳನ್ನು ನನಸಾಗಿಸಲು ಶ್ರಮಿಸಿ: ಮನ್ ಕಿ ಬಾತ್ ಸಮಯದಲ್ಲಿ ಪ್ರಧಾನಿ ಮೋದಿ

December 26th, 11:30 am

ನನ್ನ ಪ್ರಿಯ ದೇಶಬಾಂಧವರೆ, ನಮಸ್ಕಾರ. ಈಗ ನೀವು 2021 ರ ಬೀಳ್ಕೊಡುಗೆ ಮತ್ತು 2022 ರ ಸ್ವಾಗತಕ್ಕೆ ಸಿದ್ಧರಾಗಿರಬಹುದು. ಹೊಸ ವರ್ಷದಲ್ಲಿ ಪ್ರತಿ ವ್ಯಕ್ತಿ, ಪ್ರತಿ ಸಂಸ್ಥೆ ಮುಂಬರುವ ವರ್ಷದಲ್ಲಿ ಮತ್ತಷ್ಟು ಅಭಿವೃದ್ಧಿಯ ಮತ್ತು ಸುಧಾರಣೆಯ ಸಂಕಲ್ಪಗೈಯ್ಯುತ್ತಾರೆ. ಕಳೆದ 7 ವರ್ಷಗಳಲ್ಲಿ ನಮ್ಮ ಈ ಮನದ ಮಾತು ಕೂಡಾ ವ್ಯಕ್ತಿಗಳ, ಸಮಾಜದ ದೇಶದ ಒಳ್ಳೆತನವನ್ನು ಬೆಳಕಿಗೆ ತಂದು ಮತ್ತಷ್ಟು ಸಾಧಿಸುವ ಮತ್ತಷ್ಟು ಸುಧಾರಿಸುವ ಪ್ರೇರಣೆ ನೀಡುತ್ತಾ ಬಂದಿದೆ. ಈ 7 ವರ್ಷಗಳಲ್ಲಿ ಮನದ ಮಾತಿನಲ್ಲಿ ನಾನು ಸರ್ಕಾರದ ಸಾಧನೆಗಳ ಬಗ್ಗೆಯೂ ಚರ್ಚೆ ಮಾಡಬಹುದಿತ್ತು. ನಿಮಗೂ ಹಿತವೆನಿಸುತ್ತಿತ್ತು ನೀವೂ ಶ್ಲಾಘಿಸಬಹುದಿತ್ತು. ಮಾಧ್ಯಮದ ಥಳಕು ಬೆಳಕಿನ ಹೊರತಾಗಿ, ವೃತ್ತ ಪತ್ರಿಕೆಗಳ ಮುಖ್ಯಾಂಶಗಳ ಹೊರತಾಗಿಯೂ ಬಹಳಷ್ಟು ಉತ್ತಮ ಕೆಲಸಗಳನ್ನು ಮಾಡುತ್ತಿರುವ ಕೋಟಿ ಕೋಟಿ ಜನರಿದ್ದಾರೆ ಎಂಬುದು ದಶಕಗಳ ನನ್ನ ಅನುಭವವಾಗಿದೆ. ಅವರು ದೇಶದ ಭವಿಷ್ಯಕ್ಕಾಗಿ ತಮ್ಮ ವರ್ತಮಾನವನ್ನು ವ್ಯಯಿಸುತ್ತಿದ್ದಾರೆ. ಮುಂಬರುವ ದೇಶದ ಪೀಳಿಗೆಗಾಗಿ ತಮ್ಮ ಪ್ರಯತ್ನಗಳಲ್ಲಿ ಇಂದು ತನುಮನದಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಇಂಥವರ ವಿಷಯಗಳು ಆಹ್ಲಾದವನ್ನು ನೀಡುತ್ತವೆ ಮತ್ತು ಪ್ರೇರಣೆ ಒದಗಿಸುತ್ತವೆ. ನನಗೆ ಮನದ ಮಾತು ಎಂದರೆ ಎಂದೆಂದಿಗೂ ಇಂತಹ ಜನರ ಪ್ರಯತ್ನಗಳಿಂದ ತುಂಬಿದ, ಅಲಂಕೃತವಾದ, ಅರಳಿದಂತಹ ಉದ್ಯಾನದಂತಿದೆ. ಮನದ ಮಾತಿನಲ್ಲಿ ಪ್ರತಿ ತಿಂಗಳು ನಾನು ಉದ್ಯಾನದ ಯಾವ ಹೂವಿನ ವಿಚಾರ ನಿಮ್ಮೊಂದಿಗೆ ಹಂಚಿಕೊಳ್ಳಲಿ ಎಂಬುದೇ ನನ್ನ ಪ್ರಯತ್ನವಾಗಿರುತ್ತದೆ.

ಉತ್ತರ ಪ್ರದೇಶದ ಕುಶಿನಗರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಭಾಷಣ

October 20th, 10:33 am

ಉತ್ತರ ಪ್ರದೇಶದ ಗೌರವಾನ್ವಿತ ರಾಜ್ಯಪಾಲರಾದ ಶ್ರೀಮತಿ ಆನಂದಿಬೆನ್ ಜೀ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜೀ, ನನ್ನ ಸಂಪುಟ ಸಹೋದ್ಯೋಗಿಗಳಾದ ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ ಜೀ, ಶ್ರೀ ಕಿರೆನ್ ರಿಜಿಜು, ಶ್ರೀ ಕೆಶೆನ್ ರೆಡ್ಡಿ, ಜನರಲ್ ವಿ.ಕೆ. ಸಿಂಗ್, ಶ್ರೀ ಅರ್ಜುನ್ ರಾಮ್ ಮೇಘ್ವಾಲ್, ಶ್ರೀಪಾದ್ ನಾಯಿಕ್, ಶ್ರೀಮತಿ ಮೀನಾಕ್ಷಿ ಲೇಖಿ, ಉತ್ತರ ಪ್ರದೇಶ ಸಚಿವರಾದ ಶ್ರೀ ನಂದಗೋಪಾಲ್ ನಂದಿ, ಸಂಸತ್ತಿನ ನನ್ನ ಸಹೋದ್ಯೋಗಿ ಶ್ರೀ ವಿಜಯ್ ಕುಮಾರ್ ದುಬೆ, ಶಾಸಕರಾದ ಶ್ರೀ ರಜನೀಕಾಂತ್ ಮಣಿ ತ್ರಿಪಾಠಿ, ವಿವಿಧ ರಾಷ್ಟ್ರಗಳ ರಾಯಭಾರಿಗಳು ಮತ್ತು ದೂತವಾಸ ಅಧಿಕಾರಿಗಳು ಮತ್ತು ಇಲ್ಲಿ ಉಪಸ್ಥಿತರಿರುವ ಎಲ್ಲ ಜನಪ್ರತಿನಿಧಿಗಳೇ....