ಶ್ರೀ ಗಿರಿಧರ್ ಮಾಳವೀಯ ಅವರ ನಿಧನಕ್ಕೆ ಪ್ರಧಾನಮಂತ್ರಿಯವರಿಂದ ಸಂತಾಪ ಸೂಚನೆ

November 18th, 06:18 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಭಾರತ ರತ್ನ ಮಹಾಮನ ಪಂಡಿತ್ ಮದನ್ ಮೋಹನ್ ಮಾಳವೀಯ ಅವರ ಮೊಮ್ಮಗ ಶ್ರೀ ಗಿರಿಧರ್ ಮಾಳವೀಯ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಗಂಗಾ ಸ್ವಚ್ಛತಾ ಅಭಿಯಾನ ಮತ್ತು ಶಿಕ್ಷಣ ಜಗತ್ತಿಗೆ ಶ್ರೀ ಗಿರಿಧರ್ ಮಾಳವೀಯ ಅವರ ಕೊಡುಗೆಯನ್ನು ಶ್ರೀ ಮೋದಿಯವರು ಶ್ಲಾಘಿಸಿದ್ದಾರೆ.

ಉತ್ತರ ಪ್ರದೇಶದ ಗೋರಖ್‌ಪುರದಲ್ಲಿ ʻಗೀತಾ ಪ್ರೆಸ್‌ʼನ ಶತಮಾನೋತ್ಸವದ ಸಮಾರೋಪ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅನುವಾದ

July 07th, 04:00 pm

ಉತ್ತರ ಪ್ರದೇಶದ ಗೌರವಾನ್ವಿತ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರೇ, ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಅವರೇ, `ಗೀತಾ ಪ್ರೆಸ್’ನ ಶ್ರೀ ಕೇಶೋರಾಮ್ ಅಗರ್ವಾಲ್ ಅವರೇ, ಶ್ರೀ ವಿಷ್ಣು ಪ್ರಸಾದ್ ಅವರೇ, ಸಂಸತ್ ಸದಸ್ಯ ರವಿ ಕಿಶನ್ ಅವರೇ, ಇತರ ಎಲ್ಲಾ ಗಣ್ಯರೇ, ಮಹಿಳೆಯರೇ ಮತ್ತು ಮಹನೀಯರೇ!

ಉತ್ತರ ಪ್ರದೇಶದ ಗೋರಖಪುರದಲ್ಲಿ ಗೀತಾ ಪ್ರೆಸ್ ಶತಮಾನೋತ್ಸವ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಪ್ರಧಾನಮಂತ್ರಿಯವರ ಮಾತನಾಡಿದರು

July 07th, 03:23 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ಗೋರಖಪುರದಲ್ಲಿ ಐತಿಹಾಸಿಕ ಗೀತಾ ಪ್ರೆಸ್ ಶತಮಾನೋತ್ಸವ ಸಮಾರಂಭದ ಸಮಾರೋಪ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು ಮತ್ತು ಚಿತ್ರಮಯ ಶಿವ ಪುರಾಣ ಗ್ರಂಥವನ್ನು ಬಿಡುಗಡೆ ಮಾಡಿದರು. ಪ್ರಧಾನಮಂತ್ರಿಯವರು ಗೀತಾ ಪ್ರೆಸ್ ನಲ್ಲಿರುವ ಲೀಲಾ ಚಿತ್ರ ದೇವಾಲಯಕ್ಕೆ ಭೇಟಿ ನೀಡಿ ಶ್ರೀರಾಮನಿಗೆ ಪುಷ್ಪನಮನ ಸಲ್ಲಿಸಿದರು.

ರಾಜಸ್ಥಾನದ ಅಬು ರಸ್ತೆಯಲ್ಲಿರುವ ಬ್ರಹ್ಮ ಕುಮಾರಿಗಳ ಶಾಂತಿವನ ಸಂಕೀರ್ಣದಲ್ಲಿ ವಿವಿಧ ಯೋಜನೆಗಳ ಉದ್ಘಾಟನೆಯಲ್ಲಿ ಪ್ರಧಾನಮಂತ್ರಿಯವರ ಭಾಷಣದ ಇಂಗ್ಲಿಷ್ ಅನುವಾದ

May 10th, 07:02 pm

ಗೌರವಾನ್ವಿತ ರಾಜಯೋಗಿನಿ ದಾದಿ ರತನ್ ಮೋಹಿನಿ ಜೀ, ಬ್ರಹ್ಮಕುಮಾರಿಗಳ ಎಲ್ಲ ಹಿರಿಯ ಸದಸ್ಯರು ಮತ್ತು ಭಾರತದ ವಿವಿಧ ಭಾಗಗಳಿಂದ ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದಿರುವ ನನ್ನ ಪ್ರೀತಿಯ ಸಹೋದರ ಸಹೋದರಿಯರೇ!

ರಾಜಸ್ತಾನದ ಅಬು ರಸ್ತೆಯಲ್ಲಿರುವ ಬ್ರಹ್ಮಕುಮಾರಿಗಳ ಶಾಂತಿವನ ಸಂಕೀರ್ಣಕ್ಕೆ ಪ್ರಧಾನಮಂತ್ರಿ ಭೇಟಿ

May 10th, 03:45 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಾಜಸ್ಥಾನದ ಅಬು ರಸ್ತೆಯಲ್ಲಿರುವ ಬ್ರಹ್ಮಕುಮಾರಿಗಳ ಶಾಂತಿವನ ಸಂಕೀರ್ಣಕ್ಕೆ ಭೇಟಿ ನೀಡಿದರು. ಸೂಪರ್ ಸ್ಪೆಷಾಲಿಟಿ ಚಾರಿಟಬಲ್ ಗ್ಲೋಬಲ್ ಆಸ್ಪತ್ರೆ, ಶಿವಮಣಿ ವೃದ್ಧಾಶ್ರಮದ ಎರಡನೇ ಹಂತ ಮತ್ತು ನರ್ಸಿಂಗ್ ಕಾಲೇಜಿನ ವಿಸ್ತರಣೆಗೆ ಅವರು ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಸಾಂಸ್ಕೃತಿಕ ಪ್ರದರ್ಶನಕ್ಕೂ ಸಾಕ್ಷಿಯಾದರು.

ಉತ್ತರ ಪ್ರದೇಶದ ವಾರಣಾಸಿಯಲ್ಲಿ ವಿವಿಧ ಯೋಜನೆಗಳ ಲೋಕಾರ್ಪಣೆ ಮತ್ತು ಶಂಕುಸ್ಥಾಪನೆ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅನುವಾದ

March 24th, 05:42 pm

ಇದು ಮಂಗಳಕರ ನವರಾತ್ರಿ ಅವಧಿಯಾಗಿದೆ. ಇಂದು ಚಂದ್ರಘಂಟಾ ಮಾತೆಯ ಆರಾಧನಾ ದಿನವಾಗಿದೆ. ಇಂದು ಕಾಶಿಯ ಈ ಶುಭ ಸಂದರ್ಭದಲ್ಲಿ ನಾನು ನಿಮ್ಮ ನಡುವೆ ಇರುವುದು ನನ್ನ ಸೌಭಾಗ್ಯ. ಚಂದ್ರಘಂಟಾ ಮಾತೆಯ ಆಶೀರ್ವಾದದಿಂದ, ಇಂದು ಬನಾರಸ್‌ನ ಸಂತೋಷ ಮತ್ತು ಸಮೃದ್ಧಿಗೆ ಮತ್ತೊಂದು ಅಧ್ಯಾಯ ಸೇರ್ಪಡೆಯಾಗುತ್ತಿದೆ. ಇಂದು ಇಲ್ಲಿ ಸಾರ್ವಜನಿಕ ಸಾರಿಗೆ ʻರೋಪ್ ವೇʼಗೆ ಶಂಕುಸ್ಥಾಪನೆ ಮಾಡಲಾಗಿದೆ. ಬನಾರಸ್‌ನ ಸರ್ವಾಂಗೀಣ ಅಭಿವೃದ್ಧಿಗೆ ಸಂಬಂಧಿಸಿದ ಸಾವಿರಾರು ಕೋಟಿ ರೂಪಾಯಿಗಳ ಇತರ ಯೋಜನೆಗಳನ್ನು ಉದ್ಘಾಟಿಸಲಾಗಿದೆ ಅಥವಾ ಶಂಕುಸ್ಥಾಪನೆ ಮಾಡಲಾಗಿದೆ. ಇವುಗಳಲ್ಲಿ ಕುಡಿಯುವ ನೀರು, ಆರೋಗ್ಯ, ಶಿಕ್ಷಣ, ಗಂಗಾ ಮಾತೆಯ ಸ್ವಚ್ಛತೆ, ಪ್ರವಾಹ ನಿಯಂತ್ರಣ, ಪೊಲೀಸ್ ಘಟಕ, ಕ್ರೀಡಾ ಘಟಕ ಮುಂತಾದ ಅನೇಕ ಯೋಜನೆಗಳು ಸೇರಿವೆ. ಇಂದು, ʻಐಐಟಿ ಬಿಎಚ್‌ಯುʼನಲ್ಲಿ 'ಮೆಷಿನ್ ಟೂಲ್ಸ್ ಡಿಸೈನ್ ಕುರಿತಾದ ಉತ್ಕೃಷ್ಟತಾ ಕೇಂದ್ರʼಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗಿದೆ. ಬನಾರಸ್ ಮತ್ತೊಂದು ವಿಶ್ವದರ್ಜೆಯ ಸಂಸ್ಥೆಯನ್ನು ಪಡೆಯಲಿದೆ. ಈ ಎಲ್ಲಾ ಯೋಜನೆಗಳಿಗಾಗಿ ಬನಾರಸ್ ಮತ್ತು ಪೂರ್ವಾಂಚಲದ ಜನರಿಗೆ ಅನೇಕ ಅಭಿನಂದನೆಗಳು.

​​​​​​​ಉತ್ತರ ಪ್ರದೇಶದ ವಾರಾಣಸಿಯಲ್ಲಿ ಪ್ರಧಾನಮಂತ್ರಿಯವರು 1780 ಕೋಟಿ ರೂ.ಗೂ ಹೆಚ್ಚು ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ನೆರವೇರಿಸಿದರು

March 24th, 01:15 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಾರಾಣಸಿಯಲ್ಲಿ 1780 ಕೋಟಿ ರೂ.ಗೂ ಹೆಚ್ಚು ವೆಚ್ಚದ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ಮಾಡಿದರು. ವಾರಾಣಸಿ ಕಂಟೋನ್ಮೆಂಟ್‌ ನಿಲ್ದಾಣದಿಂದ ಗೋಡೋಲಿಯಾವರೆಗಿನ ಪ್ರಯಾಣಿಕರ ರೋಪ್‌ವೇಗೆ ಶಂಕುಸ್ಥಾಪನೆ, ನಮಾಮಿ ಗಂಗಾ ಯೋಜನೆಯಡಿ ಭಗವಾನ್‌ಪುರದಲ್ಲಿ 55 ಎಂಎಲ್‌ಡಿ ಒಳಚರಂಡಿ ಸಂಸ್ಕರಣಾ ಘಟಕ, ಸೇವಾಪುರಿಯ ಇಸರ್ವಾರ್ ಗ್ರಾಮದಲ್ಲಿ ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್‌ನಿಂದ ನಿರ್ಮಾಣಗೊಳ್ಳಲಿರುವ ಎಲ್‌ಪಿಜಿ ಬಾಟ್ಲಿಂಗ್ ಘಟಕ, ಸಿಗ್ರಾ ಸ್ಟೇಡಿಯಂನ 2 ಮತ್ತು 3 ನೇ ಹಂತಗಳ ಪುನರಾಭಿವೃದ್ಧಿ, ಭರ್ತರಾ ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಬಟ್ಟೆ ಬದಲಾಯಿಸುವ ಕೊಠಡಿಗಳೊಂದಿಗೆ ತೇಲುವ ಜೆಟ್ಟಿ ಈ ಯೋಜನೆಗಳಲ್ಲಿ ಸೇರಿವೆ. ಪ್ರಧಾನಮಂತ್ರಿಯವರು ಜಲ ಜೀವನ್ ಮಿಷನ್ ಅಡಿಯಲ್ಲಿ 19 ಕುಡಿಯುವ ನೀರಿನ ಯೋಜನೆಗಳನ್ನು ಲೋಕಾರ್ಪಣೆ ಮಾಡಿದರು, ಇದು 63 ಗ್ರಾಮ ಪಂಚಾಯತ್‌ಗಳ 3 ಲಕ್ಷಕ್ಕೂ ಹೆಚ್ಚು ಜನರಿಗೆ ಪ್ರಯೋಜನವನ್ನು ನೀಡುತ್ತದೆ. ಮಿಷನ್ ಅಡಿಯಲ್ಲಿ 59 ಕುಡಿಯುವ ನೀರಿನ ಯೋಜನೆಗಳ ಶಂಕುಸ್ಥಾಪನೆಯನ್ನೂ ಅವರು ನೆರವೇರಿಸಿದರು. ಹಣ್ಣುಗಳು ಮತ್ತು ತರಕಾರಿಗಳ ಶ್ರೇಣೀಕರಣ, ವಿಂಗಡಣೆ ಮತ್ತು ಸಂಸ್ಕರಣೆಗಾಗಿ ಕಾರ್ಖಿಯಾನ್‌ನಲ್ಲಿ ನಿರ್ಮಿಸಿರುವ ಸಮಗ್ರ ಪ್ಯಾಕ್ ಹೌಸ್ ಅನ್ನು ಅವರು ದೇಶಕ್ಕೆ ಸಮರ್ಪಿಸಿದರು. ವಾರಾಣಸಿ ಸ್ಮಾರ್ಟ್ ಸಿಟಿ ಮಿಷನ್ ಅಡಿಯಲ್ಲಿ ವಿವಿಧ ಯೋಜನೆಗಳನ್ನು ಪ್ರಧಾನಿ ಲೋಕಾರ್ಪಣೆ ಮಾಡಿದರು.

ಬ್ರಹ್ಮಕುಮಾರಿಯವರ 'ಜಲ-ಜನ ಅಭಿಯಾನ'ಕ್ಕೆ ಚಾಲನೆ ನೀಡಿದ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ನೀಡಿದ ವಿಡಿಯೋ ಸಂದೇಶದ ಇಂಗ್ಲಿಷ್ ಅವತರಣಿಕೆ

February 16th, 01:00 pm

ಬ್ರಹ್ಮಕುಮಾರೀಸ್ ಸಂಸ್ಥೆಯ ಪ್ರಮುಖ್ ರಾಜಯೋಗಿನಿ ದಾದಿ ರತನ್ ಮೋಹಿನಿ ಜೀ, ನನ್ನ ಸಂಪುಟ ಸಹೋದ್ಯೋಗಿ ಗಜೇಂದ್ರ ಸಿಂಗ್ ಶೇಖಾವತ್ ಜೀ, ಬ್ರಹ್ಮ ಕುಮಾರಿಸ್ ಸಂಘಟನೆಯ ಎಲ್ಲಾ ಸದಸ್ಯರೇ, ಇತರ ಗಣ್ಯರೇ, ಮಹಿಳೆಯರೇ ಮತ್ತು ಮಹನೀಯರೇ! ಬ್ರಹ್ಮಕುಮಾರಿಯವರು ಪ್ರಾರಂಭಿಸಿದ 'ಜಲ-ಜನ ಅಭಿಯಾನ'ದ ಉದ್ಘಾಟನೆಗೆ ನಾನು ಇಲ್ಲಿಗೆ ಬಂದಿರುವುದು ನನಗೆ ಸಂತೋಷ ತಂದಿದೆ. ನಿಮ್ಮೆಲ್ಲರ ನಡುವೆ ಬರುವುದು ಮತ್ತು ನಿಮ್ಮಿಂದ ಕಲಿಯುವುದು ನನಗೆ ಸದಾ ವಿಶೇಷ ಸಂಗತಿಯಾಗಿದೆ. ದಿವಂಗತ ರಾಜಯೋಗಿನಿ ದಾದಿ ಜಾನಕಿ ಜೀ ಅವರಿಂದ ನಾನು ಪಡೆದ ಆಶೀರ್ವಾದಗಳು ನನ್ನ ದೊಡ್ಡ ಆಸ್ತಿ. ದಾದಿ ಪ್ರಕಾಶ್ ಮಣಿ ಜಿ ಅವರ ನಿಧನದ ನಂತರ ಅಬು ರೋಡ್ ನಲ್ಲಿ ಅವರಿಗೆ ನನ್ನ ಶ್ರದ್ಧಾಂಜಲಿಯನ್ನು ಅರ್ಪಿಸಿದ್ದು ನನಗೆ ನೆನಪಿದೆ. ಕಳೆದ ಕೆಲವು ವರ್ಷಗಳಿಂದ, ವಿವಿಧ ಕಾರ್ಯಕ್ರಮಗಳಿಗೆ ಬ್ರಹ್ಮ ಕುಮಾರಿ ಸಹೋದರಿಯರಿಂದ ನನಗೆ ಅನೇಕ ಆತ್ಮೀಯ ಆಹ್ವಾನಗಳು ಬಂದಿವೆ. ಈ ಆಧ್ಯಾತ್ಮಿಕ ಕುಟುಂಬದ ಸದಸ್ಯನಾಗಿ ನಾನು ಸದಾ ನಿಮ್ಮ ನಡುವೆ ಇರಲು ಪ್ರಯತ್ನಿಸುತ್ತೇನೆ.

ವಿಡಿಯೋ ಸಂದೇಶದ ಮೂಲಕ 'ಜಲ-ಜನ ಅಭಿಯಾನ'ಕ್ಕೆ ಚಾಲನೆ ನೀಡಿದ ಪ್ರಧಾನ ಮಂತ್ರಿಯವರ ಭಾಷಣ

February 16th, 12:55 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ವಿಡಿಯೋ ಸಂದೇಶದ ಮೂಲಕ ಬ್ರಹ್ಮಕುಮಾರಿಯವರ 'ಜಲ-ಜನ ಅಭಿಯಾನ'ವನ್ನು ಉದ್ದೇಶಿಸಿ ಭಾಷಣ ಮಾಡಿದರು.

ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ ವಾರಣಾಸಿಯಲ್ಲಿ ವಿಶ್ವದ ಅತಿ ಉದ್ದದ ನದಿ ವಿಹಾರ-ಎಂವಿ ಗಂಗಾ ವಿಲಾಸ್ ಮತ್ತು ಟೆಂಟ್ ಸಿಟಿಯ ಉದ್ಘಾಟನಾ ಸಮಾರಂಭದಲ್ಲಿನ ಪ್ರಧಾನಮಂತ್ರಿಯವರ ಭಾಷಣದ ಪಠ್ಯ...

January 13th, 10:35 am

ಇಂದು ಲೋಹ್ರಿ ಹಬ್ಬವು ಉತ್ಸಾಹದಿಂದ ಕೂಡಿದೆ. ಮುಂದಿನ ದಿನಗಳಲ್ಲಿ ಉತ್ತರಾಯಣ, ಮಕರ ಸಂಕ್ರಾಂತಿ, ಭೋಗಿ, ಬಿಹು, ಪೊಂಗಲ್ ಹೀಗೆ ಹಲವು ಹಬ್ಬಗಳನ್ನೂ ಆಚರಿಸುತ್ತೇವೆ. ದೇಶ ಮತ್ತು ಪ್ರಪಂಚದಲ್ಲಿ ಈ ಹಬ್ಬಗಳನ್ನು ಆಚರಿಸುತ್ತಿರುವ ಎಲ್ಲ ಜನರನ್ನು ನಾನು ಅಭಿನಂದಿಸಿ ಎಲ್ಲರಿಗೂ ನನ್ನ ಶುಭಾಶಯಗಳನ್ನು ಕೋರುತ್ತೇನೆ.

ಪ್ರಧಾನಮಂತ್ರಿಯವರಿಂದ ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ ವಾರಾಣಸಿಯಲ್ಲಿ ವಿಶ್ವದ ಅತಿ ಉದ್ದದ ನದಿ ವಿಹಾರ - ಎಂವಿ ಗಂಗಾ ವಿಲಾಸ್‌ಗೆ ಚಾಲನೆ ಮತ್ತು ಟೆಂಟ್ ಸಿಟಿ ಉದ್ಘಾಟನೆ

January 13th, 10:18 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಾರಣಾಸಿಯಲ್ಲಿ ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ವಿಶ್ವದ ಅತಿ ಉದ್ದದ ನದಿ ವಿಹಾರ-ಎಂವಿ ಗಂಗಾ ವಿಲಾಸ್‌ಗೆ ಹಸಿರು ನಿಶಾನೆ ತೋರಿದರು ಮತ್ತು ಟೆಂಟ್ ಸಿಟಿಯನ್ನು ಉದ್ಘಾಟಿಸಿದರು. ಸಮಾರಂಭದಲ್ಲಿ 1000 ಕೋಟಿ ರೂ.ಗೂ ಅಧಿಕ ಮೊತ್ತದ ಇತರ ಹಲವು ಒಳನಾಡು ಜಲಮಾರ್ಗ ಯೋಜನೆಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆಯನ್ನು ಅವರು ನೆರವೇರಿಸಿದರು. ನದಿ ವಿಹಾರ (ರಿವರ್ ಕ್ರೂಸ್) ಪ್ರವಾಸೋದ್ಯಮವನ್ನು ಉತ್ತೇಜಿಸುವ ಪ್ರಧಾನ ಮಂತ್ರಿಯವರ ಪ್ರಯತ್ನಕ್ಕೆ ಅನುಗುಣವಾಗಿ, ಈ ಸೇವೆಯು ನದಿ ವಿಹಾರದ ಬೃಹತ್ ಸಾಮರ್ಥ್ಯವನ್ನು ಬಳಸಿಕೊಳ್ಳುತ್ತದೆ ಮತ್ತು ಇದು ಭಾರತದಲ್ಲಿ ನದಿ ವಿಹಾರ ಪ್ರವಾಸೋದ್ಯಮದ ಹೊಸ ಯುಗಕ್ಕೆ ನಾಂದಿ ಹಾಡುತ್ತದೆ.

ವೀಡಿಯೊ ಕಾನ್ಫರೆನ್ಸಿಂಗ್ ಮುಖೇನ ಹೌರಾದಿಂದ ನ್ಯೂ ಜಲ್ಪೈಗುರಿಗೆ ಸಂಪರ್ಕ ಕಲ್ಪಿಸುವ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಫ್ಲ್ಯಾಗ್‌ಆಫ್ ಮತ್ತು ಕೋಲ್ಕತ್ತಾ ಮೆಟ್ರೋದ ಪರ್ಪಲ್ ಲೈನ್‌ನ ಜೋಕಾ-ತಾರಾಟ್ಲಾ ವಿಭಾಗದ ಉದ್ಘಾಟನೆಯ ಪ್ರಧಾನಮಂತ್ರಿಯವರ ಭಾಷಣದ ಪಠ್ಯ..

December 30th, 11:50 am

ಪಶ್ಚಿಮ ಬಂಗಾಳದ ರಾಜ್ಯಪಾಲರಾದ ಸಿ.ವಿ.ಆನಂದ ಬೋಸ್ ಅವರೇ, ಮುಖ್ಯಮಂತ್ರಿ ಗೌರವಾನ್ವಿತ ಮಮತಾ ಬ್ಯಾನರ್ಜಿ ಅವರೇ ಹಾಗೂ ನನ್ನ ಕೇಂದ್ರ ಸಂಪುಟದ ಸಹೋದ್ಯೋಗಿ ಅಶ್ವಿನಿ ವೈಷ್ಣವ್, ಸುಭಾಷ್ ಸರ್ಕಾರ್, ನಿಸಿತ್ ಪ್ರಮಾಣಿಕ್, ಜಾನ್ ಬಾರ್ಲಾ, ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ, ಸಂಸದ ಪ್ರಸೂನ್, ವೇದಿಕೆಯ ಮೇಲೆ ಕುಳಿತಿರುವ ಇತರ ಸಹೋದ್ಯೋಗಿಗಳೇ.. ಮಹಿಳೆಯರೇ ಮತ್ತು ಪುರುಷರೇ..ಈ ದೇಶದ ಸಜ್ಜನರೇ...

PM flags off Vande Bharat Express connecting Howrah to New Jalpaiguri via video conferencing

December 30th, 11:25 am

PM Modi flagged off the Vande Bharat Express, connecting Howrah to New Jalpaiguri as well as inaugurated other metro and railway projects in West Bengal via video conferencing. The PM linked reforms and development of Indian Railways with the development of the country. He said that the central government was making record investments in the modern railway infrastructure.

ಡಿಸೆಂಬರ್ 30 ರಂದು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

December 29th, 12:35 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2022 ರ ಡಿಸೆಂಬರ್ 30 ರಂದು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 11.15ಕ್ಕೆ ಪ್ರಧಾನಮಂತ್ರಿ ಅವರು ಹೌರಾ ರೈಲ್ವೆ ನಿಲ್ದಾಣವನ್ನು ತಲುಪಲಿದ್ದು, ಅಲ್ಲಿ ಅವರು ಹೌರಾದಿಂದ ನ್ಯೂ ಜಲಪಾಯಿಗುರಿಯನ್ನು ಸಂಪರ್ಕಿಸುವ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಹಸಿರು ನಿಶಾನೆ ತೋರುವರು. ಅವರು ಕೋಲ್ಕತಾ ಮೆಟ್ರೋದ ನೇರಳೆ ಮಾರ್ಗದ ಜೋಕಾ-ತಾರತಲಾ ವಿಸ್ತರಣೆಯನ್ನು ಉದ್ಘಾಟಿಸಲಿದ್ದಾರೆ ಮತ್ತು ವಿವಿಧ ರೈಲ್ವೆ ಯೋಜನೆಗಳಿಗೆ ಶಂಕುಸ್ಥಾಪನೆ ಹಾಗೂ ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಪ್ರಧಾನಮಂತ್ರಿ ಅವರು ಐಎನ್ಎಸ್ ನೇತಾಜಿ ಸುಭಾಸ್ ತಲುಪಿ, ನೇತಾಜಿ ಸುಭಾಷ್ ಅವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಲಿದ್ದಾರೆ ಮತ್ತು ಡಾ. ಶ್ಯಾಮ ಪ್ರಸಾದ್ ಮುಖರ್ಜಿ - ರಾಷ್ಟ್ರೀಯ ನೀರು ಮತ್ತು ನೈರ್ಮಲ್ಯ ಸಂಸ್ಥೆ (ಡಿಎಸ್ ಪಿಎಂ - ಎನ್ಐಡಬ್ಲ್ಯುಎಎಸ್) ಅನ್ನು ಉದ್ಘಾಟಿಸಲಿದ್ದಾರೆ. ಅವರು ಗಂಗಾ ಶುದ್ಧೀಕರಣಕ್ಕಾಗಿ ರಾಷ್ಟ್ರೀಯ ಅಭಿಯಾನದ ಅಡಿಯಲ್ಲಿ ಪಶ್ಚಿಮ ಬಂಗಾಳಕ್ಕಾಗಿ ಅನೇಕ ಒಳಚರಂಡಿ ಮೂಲಸೌಕರ್ಯ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಮಧ್ಯಾಹ್ನ 12.25ರ ಸುಮಾರಿಗೆ ಪ್ರಧಾನಮಂತ್ರಿ ಅವರು ರಾಷ್ಟ್ರೀಯ ಗಂಗಾ ಮಂಡಳಿಯ ಎರಡನೇ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ.

ಆಧ್ಯಾತ್ಮಿಕ ನಾಯಕರ ಸಂದೇಶದಿಂದಾಗಿ ಭಾರತವು ಇತರ ದೇಶಗಳಲ್ಲಿ ಕಂಡುಬರುವಂತೆ ಲಸಿಕೆ ಹಿಂಜರಿಕೆಯನ್ನು ಎದುರಿಸಲಿಲ್ಲ: ಪ್ರಧಾನಿ

August 24th, 11:01 am

ಫರಿದಾಬಾದ್‌ನಲ್ಲಿ ಅತ್ಯಾಧುನಿಕ ಅಮೃತಾ ಆಸ್ಪತ್ರೆಯನ್ನು ಪ್ರಧಾನಿ ಮೋದಿ ಉದ್ಘಾಟಿಸಿದರು. ಆಸ್ಪತ್ರೆಯು ಆಧುನಿಕತೆ ಮತ್ತು ಆಧ್ಯಾತ್ಮಿಕತೆಯ ಮಿಶ್ರಣವಾಗಿದ್ದು, ನಿರ್ಗತಿಕ ರೋಗಿಗಳಿಗೆ ಕೈಗೆಟುಕುವ ಮತ್ತು ಕೈಗೆಟುಕುವ ಚಿಕಿತ್ಸೆಯ ಮಾಧ್ಯಮವಾಗಲಿದೆ ಎಂದು ಅವರು ಹೇಳಿದರು.

ಫರಿದಾಬಾದ್ ನಲ್ಲಿ ಅತ್ಯಾಧುನಿಕ ಅಮೃತಾ ಆಸ್ಪತ್ರೆ ಉದ್ಘಾಟಿಸಿದ ಪ್ರಧಾನಿ

August 24th, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಫರಿದಾಬಾದ್‌ನಲ್ಲಿ ಅತ್ಯಾಧುನಿಕ ಅಮೃತಾ ಆಸ್ಪತ್ರೆಯನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಹರಿಯಾಣದ ರಾಜ್ಯಪಾಲ ಶ್ರೀ ಬಂಡಾರು ದತ್ತಾತ್ರೇಯ, ಮುಖ್ಯಮಂತ್ರಿ ಶ್ರೀ ಮನೋಹರ್ ಲಾಲ್, ಉಪಮುಖ್ಯಮಂತ್ರಿ ಶ್ರೀ ದುಷ್ಯಂತ್ ಚೌತಾಲಾ, ಕೇಂದ್ರ ಸಚಿವ ಶ್ರೀ ಕೃಷ್ಣ ಪಾಲ್ ಗುರ್ಜಾರ್, ಶ್ರೀ ಮಾತಾ ಅಮೃತಾನಂದಮಯಿ ಸೇರಿ ಹಲವರು ಗಣ್ಯರು ಉಪಸ್ಥಿತರಿದ್ದರು.

ಉತ್ತರಾಖಂಡದ ರುದ್ರಪುರದಲ್ಲಿ ವಿಜಯ್ ಸಂಕಲ್ಪ ರ್ಯಾಲಿಯನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು

February 12th, 01:31 pm

ತಮ್ಮ ಚುನಾವಣಾ ಪ್ರಚಾರದ ಅಬ್ಬರವನ್ನು ಮುಂದುವರೆಸಿದ ಪ್ರಧಾನಿ ಮೋದಿ ಉತ್ತರಾಖಂಡದ ರುದ್ರಪುರದಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದರು. ರಾಜ್ಯದ ಜನರನ್ನು ಶ್ಲಾಘಿಸಿದ ಪ್ರಧಾನಿ ಮೋದಿ, “ಉತ್ತರಾಖಂಡ್ ದಾಖಲೆ ಸಮಯದಲ್ಲಿ 100% ಏಕ ಡೋಸ್ ಲಸಿಕೆಯನ್ನು ಸಾಧಿಸಿದೆ. ಈ ಅರಿವು ಮತ್ತು ನಿಷ್ಠೆಗಾಗಿ ನಾನು ಇಲ್ಲಿನ ಜನರನ್ನು ಅಭಿನಂದಿಸುತ್ತೇನೆ. ನಾನು ನಿಮ್ಮ ಯುವ ಮುಖ್ಯಮಂತ್ರಿ ಧಾಮಿ ಜಿ ಅವರನ್ನು ಅಭಿನಂದಿಸುತ್ತೇನೆ. ಗುಡ್ಡಗಾಡು ಪ್ರದೇಶಗಳಿಗೆ ಲಸಿಕೆ ಸಿಗುವುದಿಲ್ಲ ಎಂದು ಹೇಳುತ್ತಿದ್ದವರ ಬಾಯಿ ಮುಚ್ಚಿಸಲು ನಿಮ್ಮ ಮುಖ್ಯಮಂತ್ರಿ ಕೆಲಸ ಮಾಡಿದೆ.

ಭಾರತವನ್ನು ರಾಷ್ಟ್ರವೆಂದು ಪರಿಗಣಿಸಲು ಕಾಂಗ್ರೆಸ್ ಸಿದ್ಧವಿಲ್ಲ: ಪ್ರಧಾನಿ ಮೋದಿ

February 12th, 01:30 pm

ತಮ್ಮ ಚುನಾವಣಾ ಪ್ರಚಾರದ ಅಬ್ಬರವನ್ನು ಮುಂದುವರೆಸಿದ ಪ್ರಧಾನಿ ಮೋದಿ ಉತ್ತರಾಖಂಡದ ರುದ್ರಪುರದಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದರು. ರಾಜ್ಯದ ಜನರನ್ನು ಶ್ಲಾಘಿಸಿದ ಪ್ರಧಾನಿ ಮೋದಿ, “ಉತ್ತರಾಖಂಡ್ ದಾಖಲೆ ಸಮಯದಲ್ಲಿ 100% ಏಕ ಡೋಸ್ ಲಸಿಕೆಯನ್ನು ಸಾಧಿಸಿದೆ. ಈ ಅರಿವು ಮತ್ತು ನಿಷ್ಠೆಗಾಗಿ ನಾನು ಇಲ್ಲಿನ ಜನರನ್ನು ಅಭಿನಂದಿಸುತ್ತೇನೆ. ನಾನು ನಿಮ್ಮ ಯುವ ಮುಖ್ಯಮಂತ್ರಿ ಧಾಮಿ ಜಿ ಅವರನ್ನು ಅಭಿನಂದಿಸುತ್ತೇನೆ. ಗುಡ್ಡಗಾಡು ಪ್ರದೇಶಗಳಿಗೆ ಲಸಿಕೆ ಸಿಗುವುದಿಲ್ಲ ಎಂದು ಹೇಳುತ್ತಿದ್ದವರ ಬಾಯಿ ಮುಚ್ಚಿಸಲು ನಿಮ್ಮ ಮುಖ್ಯಮಂತ್ರಿ ಕೆಲಸ ಮಾಡಿದೆ.

This is Uttarakhand's decade: PM Modi in Haldwani

December 30th, 01:55 pm

Prime Minister Narendra Modi inaugurated and laid the foundation stone of 23 projects worth over Rs 17500 crore in Uttarakhand. In his remarks, PM Modi said, The strength of the people of Uttarakhand will make this decade the decade of Uttarakhand. Modern infrastructure in Uttarakhand, Char Dham project, new rail routes being built, will make this decade the decade of Uttarakhand.

ಉತ್ತರಾಖಂಡದಲ್ಲಿ 17500 ಕೋಟಿ ರೂ.ಗೂ ಹೆಚ್ಚು ಮೌಲ್ಯದ 23 ಯೋಜನೆಗಳನ್ನು ಉದ್ಘಾಟಿಸಿ, ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ

December 30th, 01:53 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರಾಖಂಡದಲ್ಲಿ 17500 ಕೋಟಿ ರೂ.ಗೂ ಹೆಚ್ಚು ಮೌಲ್ಯದ 23 ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಅವರು 1976 ರಲ್ಲಿ ಮೊದಲ ಬಾರಿಗೆ ರೂಪುಗೊಂಡ ಮತ್ತು ಅನೇಕ ವರ್ಷಗಳವರೆಗೆ ನೆನೆಗುದಿಗೆ ಬಿದ್ದಿದ್ದ ಲಖ್ವಾರ್ ವಿವಿಧೋದ್ದೇಶ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದರು. 8700 ಕೋಟಿ ರೂ.ಗಳ ರಸ್ತೆ ವಲಯದ ಯೋಜನೆಗಳನ್ನು ಉದ್ಘಾಟಿಸಿ, ಶಂಕುಸ್ಥಾಪನೆ ನೆರವೇರಿಸಿದರು.