PM Modi speaks with His Majesty King Charles III of the UK
December 19th, 06:15 pm
Prime Minister Shri Narendra Modi spoke today with His Majesty King Charles III of the United Kingdom.ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ಗ್ರೆನಡಾದ ಪ್ರಧಾನಮಂತ್ರಿಯವರ ಭೇಟಿ
November 21st, 10:44 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗ್ರೆನಡಾದ ಪ್ರಧಾನಿ ಶ್ರೀ. ಡಿಕನ್ ಮಿಚೆಲ್ ಅವರನ್ನು ನವೆಂಬರ್ 20 ರಂದು ಗಯಾನಾದ ಜಾರ್ಜ್ಟೌನ್ ನಲ್ಲಿ 2ನೇ ಭಾರತ-ಕ್ಯಾರಿಕಾಮ್ ಶೃಂಗಸಭೆಯ ಜೊತೆಜೊತೆಗೆ ಭೇಟಿಯಾದರು.The bond between India & Guyana is of soil, of sweat, of hard work: PM Modi
November 21st, 08:00 pm
Prime Minister Shri Narendra Modi addressed the National Assembly of the Parliament of Guyana today. He is the first Indian Prime Minister to do so. A special session of the Parliament was convened by Hon’ble Speaker Mr. Manzoor Nadir for the address.ಗಯಾನಾ ಸಂಸತ್ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
November 21st, 07:50 pm
ಗಯಾನಾ ಸಂಸತ್ತಿನ ರಾಷ್ಟ್ರೀಯ ಸಭೆಯನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಭಾಷಣ ಮಾಡಿದರು. ಅಲ್ಲಿನ ಸಂಸತ್ ಉದ್ದೇಶಿಸಿ ಮಾತನಾಡಿದ ಭಾರತದ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಪ್ರಧಾನಮಂತ್ರಿಗಳ ಭಾಷಣಕ್ಕಾಗಿ ಮಾನ್ಯ ಸ್ಪೀಕರ್ ಶ್ರೀ ಮಂಜೂರ್ ನಾದಿರ್ ಅವರು ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆದಿದ್ದರು.ಪ್ರಧಾನಮಂತ್ರಿಯವರಿಂದ ಆಂಟಿಗುವಾ ಮತ್ತು ಬಾರ್ಬುಡಾದ ಪ್ರಧಾನಿಯವರ ಭೇಟಿ
November 21st, 09:37 am
ಅಭಿವೃದ್ಧಿ ಹೊಂದುತ್ತಿರುವ ಕಿರು ದ್ವೀಪ ರಾಷ್ಟ್ರಗಳು (ಎಸ್ ಐ ಡಿ ಎಸ್) ಗಾಗಿ ಸಾಮರ್ಥ್ಯ ನಿರ್ಮಾಣ ಹಾಗೂ ವ್ಯಾಪಾರ ಮತ್ತು ಹೂಡಿಕೆ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಕಾರ ಕುರಿತು ಉಭಯ ನಾಯಕರು ಚರ್ಚಿಸಿದರು. ಭಾರತ- ಕ್ಯಾರಿಕಾಮ್ ಪಾಲುದಾರಿಕೆಯನ್ನು ಬಲಪಡಿಸಲು ಪ್ರಧಾನಮಂತ್ರಿಗಳ ಏಳು ಅಂಶಗಳ ಯೋಜನೆಯನ್ನು ಪ್ರಧಾನಿ ಬ್ರೌನ್ ಶ್ಲಾಘಿಸಿದರು. ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತದ ಖಾಯಂ ಸದಸ್ಯತ್ವಕ್ಕೆ ಬೆಂಬಲವನ್ನು ಅವರು ಪುನರುಚ್ಚರಿಸಿದರು.PM Modi meets with the Prime Minister of Barbados
November 21st, 09:13 am
PM Modi met Barbados PM Mia Amor Mottley during the India-CARICOM Summit, discussing cooperation in health, pharma, climate action, and cultural ties. They reviewed bilateral relations, global institutional reforms, and India’s leadership in the Global South.ಗಯಾನದ ಅಧ್ಯಕ್ಷರೊಂದಿಗೆ ಅಧಿಕೃತ ಮಾತುಕತೆ ನಡೆಸಿದ ಪ್ರಧಾನಮಂತ್ರಿ
November 21st, 04:23 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024ರ ನವೆಂಬರ್ 20ರಂದು ಜಾರ್ಜ್ ಟೌನ್ ನ ಸ್ಟೇಟ್ ಹೌಸ್ ನಲ್ಲಿ ಅಧ್ಯಕ್ಷ ಗೌರವಾನ್ವಿತ ಡಾ.ಮೊಹಮ್ಮದ್ ಇರ್ಫಾನ್ ಆಲಿ ಅವರನ್ನು ಭೇಟಿ ಮಾಡಿದ್ದರು. ಪ್ರಧಾನಿ ಅವರು ಸ್ಟೇಟ್ ಹೌಸ್ ಗೆ ಆಗಮಿಸುತ್ತಿದ್ದಂತೆಯೇ ಅಧ್ಯಕ್ಷ ಆಲಿ ಅವರು ಸ್ವಾಗತಿಸಿದರು ಮತ್ತು ಸಾಂಪ್ರದಾಯಿಕ ಗೌರವ ವಂದನೆ ಸಲ್ಲಿಸಿದರು.Be it COVID, disasters, or development, India has stood by you as a reliable partner: PM in Guyana
November 21st, 02:15 am
PM Modi and Grenada PM Dickon Mitchell co-chaired the 2nd India-CARICOM Summit in Georgetown. PM Modi expressed solidarity with CARICOM nations for Hurricane Beryl's impact and reaffirmed India's commitment as a reliable partner, focusing on development cooperation aligned with CARICOM's priorities.ಎರಡನೇ ಭಾರತ-ಕಾರಿಕಾಮ್ ಶೃಂಗಸಭೆ
November 21st, 02:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಪ್ರಸ್ತುತ ಕಾರಿಕಾಮ್ ಒಕ್ಕೂಟದ ಅಧ್ಯಕ್ಷರಾದ ಗ್ರೆನಡಾದ ಪ್ರಧಾನಮಂತ್ರಿ ಘನತೆವೆತ್ತ ಶ್ರೀ ಡಿಕಾನ್ ಮಿಚೆಲ್ ಅವರು 20 ನವೆಂಬರ್ 2024 ರಂದು ಜಾರ್ಜ್ಟೌನ್ ನಲ್ಲಿ ನಡೆದ 2ನೇ ಭಾರತ-ಕಾರಿಕಾಮ್ ಶೃಂಗಸಭೆಯ ಅಧ್ಯಕ್ಷತೆ ವಹಿಸಿದ್ದರು. ಶೃಂಗಸಭೆಯನ್ನು ಸೌಜನ್ಯದಿಂದ ಆಯೋಜಿಸಿದ್ದಕ್ಕಾಗಿ ಗಯಾನಾ ಅಧ್ಯಕ್ಷರಾದ ಘನತೆವೆತ್ತ ಶ್ರೀ ಇರ್ಫಾನ್ ಅಲಿ ಅವರನ್ನು ಪ್ರಧಾನಮಂತ್ರಿಯವರು ಅಭಿನಂದಿಸಿದರು.PM Modi and President of Guyana, Dr. Irfaan Ali take part in the ‘Ek Ped Maa Ke Naam’ movement
November 20th, 11:27 pm
PM Modi and President Dr. Irfaan Ali participated in the ‘Ek Ped Maa Ke Naam’ movement in Georgetown, symbolizing a shared commitment to sustainability. President Ali planted a tree alongside his grandmother and mother-in-law, marking a special gesture of environmental care."ಸಾಮಾಜಿಕ ಒಳಗೊಳ್ಳುವಿಕೆ ಮತ್ತು ಹಸಿವು ಹಾಗು ಬಡತನದ ವಿರುದ್ಧದ ಹೋರಾಟ" ಕುರಿತ ಜಿ 20 ಅಧಿವೇಶನದಲ್ಲಿ ಪ್ರಧಾನಮಂತ್ರಿಯವರ ಹೇಳಿಕೆಗಳು
November 18th, 08:00 pm
ಮೊದಲಿಗೆ, ಜಿ 20 ಶೃಂಗಸಭೆಯ ಆಯೋಜನೆಗಾಗಿ ಮಾಡಿದ ಭವ್ಯ ವ್ಯವಸ್ಥೆಗಳಿಗಾಗಿ ಮತ್ತು ಯಶಸ್ವಿ ಜಿ 20 ಅಧ್ಯಕ್ಷತೆಗಾಗಿ ನಾನು ಅಧ್ಯಕ್ಷ ಲುಲಾ ಅವರನ್ನು ಅಭಿನಂದಿಸಲು ಬಯಸುತ್ತೇನೆ.ಸಾಮಾಜಿಕ ಒಳಗೊಳ್ಳುವಿಕೆ ಮತ್ತು ಹಸಿವು ಮತ್ತು ಬಡತನದ ವಿರುದ್ಧದ ಹೋರಾಟ ಕುರಿತ ಜಿ 20 ಅಧಿವೇಶನವನ್ನುದ್ದೇಶಿಸಿ ಪ್ರಧಾನಮಂತ್ರಿ ಭಾಷಣ
November 18th, 07:55 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು 'ಸಾಮಾಜಿಕ ಒಳಗೊಳ್ಳುವಿಕೆ ಮತ್ತು ಹಸಿವು ಮತ್ತು ಬಡತನದ ವಿರುದ್ಧದ ಹೋರಾಟ' ಕುರಿತ ಜಿ 20 ಶೃಂಗಸಭೆಯ ಉದ್ಘಾಟನಾ ಅಧಿವೇಶನವನ್ನುದ್ದೇಶಿಸಿ ಭಾಷಣ ಮಾಡಿದರು. ಶೃಂಗಸಭೆಯ ಆತಿಥ್ಯ ವಹಿಸಿದ್ದಕ್ಕಾಗಿ ಮತ್ತು ಅವರ ಆತ್ಮೀಯ ಆತಿಥ್ಯಕ್ಕಾಗಿ ಬ್ರೆಜಿಲ್ ಅಧ್ಯಕ್ಷ ಘನತೆವೆತ್ತ ಶ್ರೀ ಲೂಯಿಸ್ ಇನಾಸಿಯೊ ಲುಲಾ ಡಾ ಸಿಲ್ವಾ ಅವರಿಗೆ ಪ್ರಧಾನಮಂತ್ರಿಯವರು ಧನ್ಯವಾದ ಅರ್ಪಿಸಿದರು. ಸುಸ್ಥಿರ ಅಭಿವೃದ್ಧಿ ಗುರಿಗಳ ಮೇಲೆ ಕೇಂದ್ರೀಕರಿಸಿದ ಬ್ರೆಜಿಲ್ ಜಿ 20 ಕಾರ್ಯಸೂಚಿಯನ್ನು ಅವರು ಶ್ಲಾಘಿಸಿದರು, ಈ ವಿಧಾನವು ಜಾಗತಿಕ ದಕ್ಷಿಣದ ಕಾಳಜಿಗಳನ್ನು ಎತ್ತಿ ತೋರಿಸಿದೆ ಮತ್ತು ಹೊಸದಿಲ್ಲಿ ಜಿ 20 ಶೃಂಗಸಭೆಯ ಜನ ಕೇಂದ್ರಿತ ನಿರ್ಧಾರಗಳನ್ನು ಮುಂದಕ್ಕೆ ಕೊಂಡೊಯ್ದಿದೆ ಎಂದು ಹೇಳಿದರು. ಒಂದು ಭೂಮಿ, ಒಂದು ಕುಟುಂಬ, ಒಂದು ಭವಿಷ್ಯ ಕ್ಕಾಗಿ ಭಾರತದ ಜಿ 20 ಅಧ್ಯಕ್ಷತೆಯ ಕರೆ ರಿಯೋ ಸಂಭಾಷಣೆಗಳಲ್ಲಿ ಪ್ರತಿಧ್ವನಿಸುತ್ತಲೇ ಇದೆ ಎಂದು ಅವರು ಒತ್ತಿ ಹೇಳಿದರು.ಪ್ರಧಾನಮಂತ್ರಿಯವರು ಕೃತಜ್ಞತೆಯನ್ನು ವ್ಯಕ್ತಪಡಿಸುತ್ತಾ, ತಮ್ಮ ತಾಯಿಯ ಗೌರವಾರ್ಥವಾಗಿ ಒಂದು ಮರವನ್ನು ನೆಟ್ಟು ಸುಸ್ಥಿರ ಪ್ರಪಂಚಕ್ಕೆ ಕೊಡುಗೆ ನೀಡುವಂತೆ ಜನರನ್ನು ಮನವಿ ಮಾಡಿದ್ದಾರೆ
November 16th, 09:56 pm
ಹೆಚ್ಚಿನ ಜನರು ಇಂದು ತಮ್ಮ ತಾಯಿಯ ಗೌರವಾರ್ಥವಾಗಿ ಒಂದು ಮರವನ್ನು ನೆಟ್ಟು ಸುಸ್ಥಿರ ಪ್ರಪಂಚಕ್ಕೆ ಕೊಡುಗೆ ನೀಡುವಂತೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ದೇಶದ ಜನತೆಯನ್ನು ಮನವಿ ಮಾಡಿದ್ದಾರೆ. ಏಕ್ ಪೆಡ್ ಮಾ ಕಾ ನಾಮ್ ಅಭಿಯಾನಕ್ಕೆ ಸಹಕಾರ ನೀಡಿದ ಎಲ್ಲರಿಗೂ ಶ್ರೀ ಮೋದಿಯವರು ಕೃತಜ್ಞತೆ ಅರ್ಪಿಸಿದ್ದಾರೆ.ಬಿಹಾರದ ಜಮುಯಿಯಲ್ಲಿ ಆಯೋಜಿತವಾಗಿದ್ದ ಜನಜಾತಿಯ ಗೌರವ್ ದಿವಸ್ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
November 15th, 11:20 am
ಬಿಹಾರದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ರಾಜೇಂದ್ರ ಅರ್ಲೇಕರ್ ಜಿ, ಬಿಹಾರದ ಜನಪ್ರಿಯ ಮುಖ್ಯಮಂತ್ರಿ ಶ್ರೀ ನಿತೀಶ್ ಕುಮಾರ್ ಜಿ, ಕೇಂದ್ರ ಸಂಪುಟದ ನನ್ನ ಸಹೋದ್ಯೋಗಿಗಳಾದ ಜುಯಲ್ ಓರಾಮ್ ಜಿ, ಜಿತನ್ ರಾಮ್ ಮಾಂಝಿ ಜಿ, ಗಿರಿರಾಜ್ ಸಿಂಗ್ ಜಿ, ಚಿರಾಗ್ ಪಾಸ್ವಾನ್ ಜಿ, ಮತ್ತು ಯು ಕೆ ದುರ್ಗಾದಾಸ್ ಜಿ ಮತ್ತು ಇಂದು ನಮ್ಮೆಲ್ಲರ ನಡುವೆ ಬಿರ್ಸಾ ಮುಂಡಾ ಜಿ ಅವರ ವಂಶಸ್ಥರು ಇದ್ದಾರೆ ಎಂಬುದು ನಮ್ಮೆಲ್ಲರ ಸೌಭಾಗ್ಯ. ಇಂದು ಅವರ ಮನೆಯಲ್ಲಿ ಪ್ರಮುಖ ಧಾರ್ಮಿಕ ಆಚರಣೆ ಇದ್ದರೂ. ಅವರ ಕುಟುಂಬ ಧಾರ್ಮಿಕ ವಿಧಿಗಳಲ್ಲಿ ನಿರತರಾಗಿದ್ದರೂ, ಬುಧ್ರಾಮ್ ಮುಂಡಾ ಜಿ ಅವರು ನಮ್ಮೊಂದಿಗೆ ಸೇರಿಕೊಂಡಿದ್ದಾರೆ, ಸಿಧು ಕನ್ಹು ಅವರ ವಂಶಸ್ಥರಾದ ಮಂಡಲ್ ಮುರ್ಮು ಜಿ ಅವರು ನಮ್ಮೊಂದಿಗೆ ಇರುವುದು ನಮಗೆ ಸಮಾನ ಗೌರವವಾಗಿದೆ. ಇಂದು ಭಾರತೀಯ ಜನತಾ ಪಕ್ಷದಲ್ಲಿ ಅತ್ಯಂತ ಹಿರಿಯ ನಾಯಕರಿದ್ದರೆ, ಒಂದು ಕಾಲದಲ್ಲಿ ಲೋಕಸಭೆಯ ಉಪಸ್ಪೀಕರ್ ಆಗಿ ಸೇವೆ ಸಲ್ಲಿಸಿದ ನಮ್ಮ ಕರಿಯ ಮುಂಡಾಜಿ ಅವರು ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತರು ಎಂದು ಹೇಳಲು ನನಗೆ ಸಂತೋಷದ ವಿಷಯವಾಗಿದೆ. ಇದು ಇನ್ನೂ ನಮಗೆ ಮಾರ್ಗದರ್ಶನ ನೀಡುತ್ತಿದೆ. ಜುಯಲ್ ಓರಾಮ್ ಜಿ ಉಲ್ಲೇಖಿಸಿದಂತೆ, ಅವರು ನನಗೆ ತಂದೆಯಂತಿದ್ದಾರೆ. ಕರಿಯಾ ಮುಂಡಾ ಜಿ ಅವರು ಜಾರ್ಖಂಡ್ನಿಂದ ಇಲ್ಲಿಗೆ ವಿಶೇಷವಾಗಿ ಪ್ರಯಾಣಿಸಿದ್ದಾರೆ. ಬಿಹಾರದ ಉಪಮುಖ್ಯಮಂತ್ರಿ ಮತ್ತು ನನ್ನ ಸ್ನೇಹಿತ ವಿಜಯ್ ಕುಮಾರ್ ಸಿನ್ಹಾ ಜಿ, ಸಾಮ್ರಾಟ್ ಚೌಧರಿ ಜಿ, ಬಿಹಾರ ಸರ್ಕಾರದ ಸಚಿವರು, ಸಂಸದರು, ವಿಧಾನಸಭಾ ಸದಸ್ಯರು, ಇತರೆ ಸಾರ್ವಜನಿಕ ಪ್ರತಿನಿಧಿಗಳು, ದೇಶದ ಮೂಲೆ ಮೂಲೆಗಳಿಂದ ಬಂದಿರುವ ಗಣ್ಯ ಅತಿಥಿಗಳು ಮತ್ತು ಜಮುಯಿಯ ನನ್ನ ಪ್ರೀತಿಯ ಸಹೋದರ, ಸಹೋದರಿಯರೆ.ಜನಜಾತಿಯ ಗೌರವ್ ದಿವಸ್ ಸಂದರ್ಭದಲ್ಲಿ ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜನ್ಮ ವಾರ್ಷಿಕೋತ್ಸವಕ್ಕೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಚಾಲನೆ
November 15th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಿಹಾರದ ಜಮುಯಿಯಲ್ಲಿಂದು ಜನಜಾತಿಯ ಗೌರವ್ ದಿವಸ್ ಅಂಗವಾಗಿ ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜನ್ಮ ವಾರ್ಷಿಕೋತ್ಸವಕ್ಕೆ ಚಾಲನೆ ನೀಡಿ, ಸುಮಾರು 6,640 ಕೋಟಿ ರೂಪಾಯಿ ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು.ಉತ್ತರಾಖಂಡ ಸ್ಥಾಪನಾ ದಿವಸದಂದು ಪ್ರಧಾನಮಂತ್ರಿ ಅವರ ಹೇಳಿಕೆಗಳ ಕನ್ನಡ ಅನುವಾದ
November 09th, 11:00 am
ಇಂದು ಉತ್ತರಾಖಂಡದ ರಜತ ಮಹೋತ್ಸವ ವರ್ಷದ ಆರಂಭವನ್ನು ಸೂಚಿಸುತ್ತದೆ. ಅಂದರೆ, ಉತ್ತರಾಖಂಡವು ತನ್ನ 25ನೇ ವರ್ಷಕ್ಕೆ ಕಾಲಿಡುತ್ತಿದೆ. ನಾವು ಮುಂದೆ ನೋಡುತ್ತಿರುವಾಗ, ಉತ್ತರಾಖಂಡದ ಉಜ್ವಲ ಮತ್ತು ಸಮೃದ್ಧ ಭವಿಷ್ಯವನ್ನು ನಿರ್ಮಿಸಲು ಬದ್ಧರಾಗಿ ಮುಂದಿನ 25 ವರ್ಷಗಳ ಪ್ರಯಾಣವನ್ನು ನಾವು ಪ್ರಾರಂಭಿಸಬೇಕು. ಇದರಲ್ಲಿ ಒಂದು ಸಂತೋಷಕರ ಕಾಕತಾಳೀಯವಿದೆ: ನಮ್ಮ ಪ್ರಗತಿಯು ಭಾರತದ ಅಮೃತ ಕಾಲದೊಂದಿಗೆ ಹೊಂದಿಕೆಯಾಗುತ್ತದೆ, ಇದು ರಾಷ್ಟ್ರೀಯ ಬೆಳವಣಿಗೆಗೆ ಮೀಸಲಾಗಿರುವ ಗಮನಾರ್ಹ 25 ವರ್ಷಗಳ ಅವಧಿಯಾಗಿದೆ. ಈ ಸಂಗಮವು ಅಭಿವೃದ್ಧಿ ಹೊಂದಿದ ಭಾರತದ ಭಾಗವಾಗಿ ಅಭಿವೃದ್ಧಿ ಹೊಂದಿದ ಉತ್ತರಾಖಂಡದ ದೃಷ್ಟಿಕೋನವನ್ನು ಬಿಂಬಿಸುತ್ತದೆ, ಈ ಯುಗದಲ್ಲಿ ನಮ್ಮ ಹಂಚಿಕೆಯ ಆಕಾಂಕ್ಷೆಗಳು ಸಾಕಾರಗೊಳ್ಳುತ್ತಿವೆ. ಉತ್ತರಾಖಂಡದ ಜನರು ಮುಂಬರುವ 25 ವರ್ಷಗಳ ಗುರಿಗಳನ್ನು ಕೇಂದ್ರೀಕರಿಸಿ ರಾಜ್ಯದಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದು ನನಗೆ ಸಂತೋಷವಾಗಿದೆ. ಈ ಕಾರ್ಯಕ್ರಮಗಳ ಮೂಲಕ ಉತ್ತರಾಖಂಡದ ಹೆಮ್ಮೆಯನ್ನು ಆಚರಿಸಲಾಗುವುದು ಮತ್ತು ಅಭಿವೃದ್ಧಿ ಹೊಂದಿದ ಉತ್ತರಾಖಂಡದ ದೃಷ್ಟಿಕೋನವು ಪ್ರತಿಯೊಬ್ಬ ನಿವಾಸಿಯಲ್ಲೂ ಪ್ರತಿಧ್ವನಿಸುತ್ತದೆ. ಈ ಮಹತ್ವದ ಸಂದರ್ಭದಲ್ಲಿ ಮತ್ತು ಈ ನಿರ್ಣಾಯಕ ನಿರ್ಣಯಕ್ಕಾಗಿ, ನಾನು ನಿಮ್ಮೆಲ್ಲರಿಗೂ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸುತ್ತೇನೆ. ಕೇವಲ ಎರಡು ದಿನಗಳ ಹಿಂದೆ, ಪ್ರವಾಸಿ ಉತ್ತರಾಖಂಡ್ ಸಮ್ಮೇಳನವನ್ನು ಸಹ ಯಶಸ್ವಿಯಾಗಿ ನಡೆಸಲಾಯಿತು. ನಮ್ಮ ವಲಸಿಗ ಉತ್ತರಾಖಂಡಿಗಳು ರಾಜ್ಯದ ಅಭಿವೃದ್ಧಿಯ ಪಯಣದಲ್ಲಿ ಮಹತ್ವದ ಪಾತ್ರ ವಹಿಸುವುದನ್ನು ಮುಂದುವರಿಸುತ್ತಾರೆ ಎಂಬ ವಿಶ್ವಾಸ ನನಗಿದೆ.ದೇವಭೂಮಿ ಉತ್ತರಾಖಂಡದ ರಜತ ಮಹೋತ್ಸವ ಸಂದರ್ಭದಲ್ಲಿ ಉತ್ತರಾಖಂಡದ ಜನತೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದನೆ
November 09th, 10:40 am
ಉತ್ತರಾಖಂಡದ ಸಂಸ್ಥಾಪನಾ ದಿನದಂದು ಅಲ್ಲಿನ ಎಲ್ಲ ಜನತೆಗೆ ಶುಭ ಕೋರಿರುವ ಪ್ರಧಾನಮಂತ್ರಿಯವರು, ಇಂದಿನಿಂದ ಉತ್ತರಾಖಂಡ ರಾಜ್ಯ ರಚನೆಯ ರಜತ ಮಹೋತ್ಸವ ವರ್ಷ ಆರಂಭವಾಗುತ್ತಿರುವುದನ್ನು ಉಲ್ಲೇಖಿಸಿದರು. ಉತ್ತರಾಖಂಡವು ರಾಜ್ಯ ಸ್ಥಾಪನೆಯ 25ನೇ ವರ್ಷಕ್ಕೆ ಪ್ರವೇಶಿಸಿರುವುದನ್ನು ಉಲ್ಲೇಖಿಸಿದ ಶ್ರೀ ಮೋದಿ, ರಾಜ್ಯದ ಮುಂಬರುವ 25 ವರ್ಷಗಳ ಉಜ್ವಲ ಭವಿಷ್ಯಕ್ಕಾಗಿ ಕೆಲಸ ಮಾಡುವಂತೆ ಜನರನ್ನು ಆಗ್ರಹಿಸಿದರು. ಉತ್ತರಾಖಂಡದ ಮುಂಬರುವ 25 ವರ್ಷಗಳ ಪ್ರಯಾಣವು ಭಾರತದ ಅಮೃತ್ ಕಾಲ್ ನ 25 ನೇ ವರ್ಷದ ಜೊತೆ ಸರಿಹೊಂದಿಕೆಯಾಗುವಂತಿದೆ. ಇದೊಂದು ಕಾಕತಾಳೀಯ ಎಂದ ಪ್ರಧಾನ ಮಂತ್ರಿ ಅವರು, ಇದು ವಿಕ್ಷಿತ್ ಭಾರತ್ ಗಾಗಿ ವಿಕ್ಷಿತ್ (ಅಭಿವೃದ್ಧಿ ಹೊಂದಿದ) ಉತ್ತರಾಖಂಡವನ್ನು ಸಂಕೇತಿಸುತ್ತದೆ ಎಂದರು. ಈ ಅವಧಿಯಲ್ಲಿ ವಿಕ್ಷಿತ್ ಭಾರತದ ಸಂಕಲ್ಪ ಈಡೇರುವುದಕ್ಕೆ ದೇಶ ಸಾಕ್ಷಿಯಾಗಲಿದೆ ಎಂದು ಶ್ರೀ ಮೋದಿ ಹೇಳಿದರು. ಮುಂಬರುವ 25 ವರ್ಷಗಳಲ್ಲಿ ಸಂಕಲ್ಪಗಳ ಜೊತೆಗೆ ಜನರು ಅನೇಕ ಕಾರ್ಯಕ್ರಮಗಳನ್ನು ಕೈಗೊಂಡಿದ್ದಾರೆ ಎಂದು ಪ್ರಧಾನಿ ಸಂತಸ ವ್ಯಕ್ತಪಡಿಸಿದರು. ಈ ಕಾರ್ಯಕ್ರಮಗಳ ಮೂಲಕ ಉತ್ತರಾಖಂಡದ ಹೆಮ್ಮೆಯನ್ನು ಹರಡಲಾಗುವುದು ಮತ್ತು ಅಭಿವೃದ್ಧಿ ಹೊಂದಿದ ಉತ್ತರಾಖಂಡದ ಗುರಿ ರಾಜ್ಯದ ಪ್ರತಿಯೊಬ್ಬ ನಿವಾಸಿಯನ್ನು ತಲುಪಲಿದೆ ಎಂದು ಅವರು ಹೇಳಿದರು. ಈ ಮಹತ್ವದ ಸಂದರ್ಭದಲ್ಲಿ ಮತ್ತು ಈ ಮಹತ್ವದ ನಿರ್ಣಯವನ್ನು ಅಂಗೀಕರಿಸಿದ್ದಕ್ಕಾಗಿ ಶ್ರೀ ಮೋದಿ ಅವರು ರಾಜ್ಯದ ಎಲ್ಲ ನಿವಾಸಿಗಳನ್ನು ಅಭಿನಂದಿಸಿದರು. ಇತ್ತೀಚೆಗೆ ಯಶಸ್ವಿಯಾಗಿ ಆಯೋಜಿಸಲಾದ 'ಪ್ರವಾಸಿ ಉತ್ತರಾಖಂಡ ಸಮ್ಮೇಳನ'ದ ಬಗ್ಗೆಯೂ ಅವರು ಗಮನಸೆಳೆದರು ಮತ್ತು ಉತ್ತರಾಖಂಡದ ಅಭಿವೃದ್ಧಿಯಲ್ಲಿ ಸಾಗರೋತ್ತರ ಉತ್ತರಾಖಂಡದ ಜನರು ಪ್ರಮುಖ ಪಾತ್ರ ವಹಿಸುತ್ತಾರೆ ಎಂಬ ಭರವಸೆಯನ್ನು ವ್ಯಕ್ತಪಡಿಸಿದರು.16ನೇ ಬ್ರಿಕ್ಸ್ ಶೃಂಗಸಭೆಯ ಪ್ರಧಾನ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರ ಇಂಗ್ಲಿಷ್ ಭಾಷಣದ ಅನುವಾದ
October 23rd, 05:22 pm
ಮತ್ತೊಮ್ಮೆ, ಬ್ರಿಕ್ಸ್ ಗೆ ಸೇರ್ಪಡೆಗೊಂಡ ಎಲ್ಲಾ ಹೊಸ ಸ್ನೇಹಿತರಿಗೆ ಆತ್ಮೀಯ ಸ್ವಾಗತ. ಅದರ ಹೊಸ ಅವತಾರದಲ್ಲಿ, BRICS ವಿಶ್ವದ ಮಾನವೀಯತೆಯ 40 ಪ್ರತಿಶತ ಮತ್ತು ಜಾಗತಿಕ ಆರ್ಥಿಕತೆಯ ಸುಮಾರು 30 ಪ್ರತಿಶತವನ್ನು ಹೊಂದಿದೆ.16ನೇ ಬ್ರಿಕ್ಸ್ ಶೃಂಗಸಭೆಯ ಕ್ಲೋಸ್ಡ್ ಪ್ಲೆನರಿ ಗೋಷ್ಠಿಯನ್ನು ಉದ್ದೇಶಿಸಿ ಪ್ರಧಾನಮಂತ್ರಿ ಮಾಡಿದ ಭಾಷಣದ ಕನ್ನಡ ಅನುವಾದ
October 23rd, 03:25 pm
ವಿಸ್ತೃತ ಬ್ರಿಕ್ಸ್ ಕುಟುಂಬವಾಗಿ ನಾವು ಇಂದು ಮೊದಲ ಬಾರಿಗೆ ಭೇಟಿಯಾಗುತ್ತಿರುವುದಕ್ಕೆ ನನಗೆ ತುಂಬಾ ಸಂತೋಷವಾಗುತ್ತಿದೆ. ಬ್ರಿಕ್ಸ್ ಕುಟುಂಬಕ್ಕೆ ಸೇರ್ಪಡೆಗೊಂಡ ಎಲ್ಲಾ ಹೊಸ ಸ್ನೇಹಿತರನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ.16ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಪ್ರಧಾನಮಂತ್ರಿಯವರು ಭಾಗವಹಿಸಿದರು
October 23rd, 03:10 pm
ಬ್ರಿಕ್ಸ್ ನಾಯಕರು ಬಹುರಾಷ್ಟ್ರೀಯತೆಯನ್ನು ಬಲಪಡಿಸುವುದು, ಭಯೋತ್ಪಾದನೆಯನ್ನು ಎದುರಿಸುವುದು, ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸುವುದು, ಸುಸ್ಥಿರ ಅಭಿವೃದ್ಧಿಯನ್ನು ಮುಂದುವರಿಸುವುದು ಮತ್ತು ಗ್ಲೋಬಲ್ ಸೌತ್ (ಜಾಗತಿಕ ದಕ್ಷಿಣದ)ನ ಕಾಳಜಿಗಳ ಬಗ್ಗೆ ಗಮನ ಸೆಳೆಯುವುದು ಸೇರಿದಂತೆ ಫಲಪ್ರದ ಚರ್ಚೆಗಳನ್ನು ನಡೆಸಿದರು. 13 ಹೊಸ ಬ್ರಿಕ್ಸ್ ಪಾಲುದಾರ ರಾಷ್ಟ್ರಗಳನ್ನು ನಾಯಕರು ಸ್ವಾಗತಿಸಿದರು.