ಜಮೈಕಾದ ಪ್ರಧಾನಮಂತ್ರಿ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಪತ್ರಿಕಾ ಹೇಳಿಕೆ

October 01st, 12:00 pm

ಪ್ರಧಾನ ಮಂತ್ರಿ ಹೋಲ್ನೆಸ್ ಮತ್ತು ಅವರ ನಿಯೋಗವನ್ನು ಭಾರತಕ್ಕೆ ಸ್ವಾಗತಿಸಲು ನನಗೆ ಸಂತೋಷವಾಗಿದೆ. ಇದು ಪ್ರಧಾನಮಂತ್ರಿ ಹೋಲ್ನೆಸ್ ಅವರ ಮೊದಲ ದ್ವಿಪಕ್ಷೀಯ ಭಾರತ ಭೇಟಿಯಾಗಿದೆ. ಅದಕ್ಕಾಗಿಯೇ ನಾವು ಈ ಭೇಟಿಗೆ ವಿಶೇಷ ಪ್ರಾಮುಖ್ಯತೆ ನೀಡುತ್ತೇವೆ.ಪ್ರಧಾನ ಮಂತ್ರಿ ಹೋಲ್ನೆಸ್ ಅವರು ಬಹಳ ಹಿಂದಿನಿಂದಲೂ ಭಾರತದ ಸ್ನೇಹಿತರಾಗಿದ್ದಾರೆ. ಹಲವಾರು ಬಾರಿ ಅವರನ್ನು ಭೇಟಿಯಾಗುವ ಅವಕಾಶ ನನಗೆ ದೊರೆತಿದೆ. ಮತ್ತು ಪ್ರತಿ ಬಾರಿಯೂ, ಭಾರತದೊಂದಿಗಿನ ಸಂಬಂಧವನ್ನು ಬಲಪಡಿಸುವ ಅವರ ಆಲೋಚನೆಗಳಲ್ಲಿ ಅವರ ಬದ್ಧತೆಯನ್ನು ನಾನು ಅರಿತುಕೊಂಡಿದ್ದೇನೆ. ಅವರ ಭೇಟಿಯು ನಮ್ಮ ದ್ವಿಪಕ್ಷೀಯ ಸಂಬಂಧಗಳಿಗೆ ಉತ್ತೇಜನ ನೀಡುವುದರ ಜೊತೆಗೆ ಇಡೀ ಕೆರಿಬಿಯನ್ ಪ್ರದೇಶದೊಂದಿಗಿನ ನಮ್ಮ ಬಾಂಧವ್ಯವನ್ನು ವರ್ಧಿಸುತ್ತದೆ ಎಂದು ನನಗೆ ವಿಶ್ವಾಸವಿದೆ.

PM Modi addresses the Nari Shakti Vandan Abhinandan Karyakram in Ahmedabad

September 26th, 07:53 pm

Addressing the Nari Shakti Vandan Abhinandan Karyakram in Ahmedabad, Prime Minister Narendra Modi hailed the passage of the Nari Shakti Vandan Adhiniyam, seeking to reserve 33% of seats in Lok Sabha and state Assemblies for women. Speaking to the women in the event, PM Modi said, “Your brother has done one more thing in Delhi to increase the trust with which you had sent me to Delhi. Nari Shakti Vandan Adhiniyam, i.e. guarantee of increasing representation of women from Assembly to Lok Sabha.”

ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ನಡೆದ ಸಮುದಾಯ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅನುವಾದ

May 23rd, 08:54 pm

ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಮತ್ತು ನನ್ನ ಆತ್ಮೀಯ ಸ್ನೇಹಿತರಾದ ಗೌರವಾನ್ವಿತ ಆಂಥೋನಿ ಅಲ್ಬನೀಸ್ ಅವರೇ, ಆಸ್ಟ್ರೇಲಿಯಾದ ಮಾಜಿ ಪ್ರಧಾನಿ ಘನತೆವೆತ್ತ ಸ್ಕಾಟ್ ಮಾರಿಸನ್ ಅವರೇ, ನ್ಯೂ ಸೌತ್ ವೇಲ್ಸ್ ಪ್ರಧಾನಿ ಕ್ರಿಸ್ ಮಿನ್ಸ್ ಅವರೇ, ವಿದೇಶಾಂಗ ಸಚಿವೆ ಪೆನ್ನಿ ವಾಂಗ್ ಅವರೇ, ಸಂವಹನ ಸಚಿವ ಮಿಚೆಲ್ ರೋಲ್ಯಾಂಡ್ ಅವರೇ, ಇಂಧನ ಸಚಿವರಾದ ಕ್ರಿಸ್ ಬೋವೆನ್ ಅವರೇ, ವಿರೋಧ ಪಕ್ಷದ ನಾಯಕ ಪೀಟರ್ ಡಟ್ಟನ್ ಅವರೇ, ಸಹಾಯಕ ವಿದೇಶಾಂಗ ಸಚಿವ ಟಿಮ್ ವ್ಯಾಟ್ಸ್ ಅವರೇ, ಇಲ್ಲಿ ಹಾಜರಿರುವ ನ್ಯೂ ಸೌತ್ ವೇಲ್ಸ್ ಸಂಪುಟದ ಗೌರವಾನ್ವಿತ ಸದಸ್ಯರೇ, ಪಾರ್ರಮಟ್ಟದ ಸಂಸತ್ ಸದಸ್ಯ ಡಾ. ಆಂಡ್ರ್ಯೂ ಚಾರ್ಲ್ಟನ್ ಅವರೇ, ಇಲ್ಲಿ ಉಪಸ್ಥಿತರಿರುವ ಆಸ್ಟ್ರೇಲಿಯಾದ ಸಂಸತ್ ಸದಸ್ಯರು, ಮೇಯರ್‌ಗಳು, ಉಪ ಮೇಯರ್‌ಗಳು, ಕೌನ್ಸಿಲರ್‌ಗಳೇ ಮತ್ತು ಇಂದು ಇಷ್ಟು ದೊಡ್ಡ ಸಂಖ್ಯೆಯಲ್ಲಿ ಇಲ್ಲಿ ಸೇರಿರುವ ಆಸ್ಟ್ರೇಲಿಯಾ ನಿವಾಸಿ ಭಾರತೀಯ ವಲಸಿಗರೇ! ನಿಮ್ಮೆಲ್ಲರಿಗೂ ನನ್ನ ಶುಭಾಶಯಗಳು!

ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ಭಾರತೀಯ ಸಮುದಾಯದೊಂದಿಗೆ ಪ್ರಧಾನಮಂತ್ರಿಯವರ ಸಂವಾದ

May 23rd, 01:30 pm

ಸಿಡ್ನಿಯ ಕುಡೋಸ್ ಬ್ಯಾಂಕ್ ಅರೆನಾದಲ್ಲಿ 2023ರ ಮೇ 23ರಂದು ಆಸ್ಟ್ರೇಲಿಯಾದ ಪ್ರಧಾನ ಮಂತ್ರಿ ಘನತೆವೆತ್ತ ಶ್ರೀ ಆಂಥೋನಿ ಅಲ್ಬನೀಸ್ ಅವರೊಟ್ಟಿಗೆ ಪ್ರಧಾನಿ ಮೋದಿಯವರು ಭಾರತೀಯ ಸಮುದಾಯದ ಬೃಹತ್ ಸಭಿಕರನ್ನುದ್ದೇಶಿಸಿ ಮಾತನಾಡಿದರು ಹಾಗೂ ಮತ್ತು ಸಂವಾದ ನಡೆಸಿದರು.

ಜೈಪುರದ ಖೇಲ್ ಮಹಾಕುಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣ

February 05th, 05:13 pm

ಮೊದಲನೆಯದಾಗಿ, ಜೈಪುರ ಮಹಾಖೇಲ್ ಕ್ರೀಟಾಕೂಟದಲ್ಲಿ ಭಾಗವಹಿಸಿದ, ಪದಕಗಳನ್ನು ಗೆದ್ದ ಆಟಗಾರರು ಮತ್ತು ಪ್ರತಿಯೊಬ್ಬ ಆಟಗಾರರು, ತರಬೇತುದಾರರು ಮತ್ತು ಅವರ ಕುಟುಂಬ ಸದಸ್ಯರಿಗೆ ಹೃತ್ಪೂರ್ವಕ ಅಭಿನಂದನೆಗಳು. ನೀವೆಲ್ಲರೂ ಜೈಪುರದ ಆಟದ ಮೈದಾನಕ್ಕೆ ಬಂದಿರುವುದು ಕೇವಲ ಆಟವಾಡಲು ಅಲ್ಲ ಗೆಲ್ಲಲು ಮತ್ತು ಕಲಿಯಲು. ಮತ್ತು, ಕಲಿಕೆ ಇರುವಲ್ಲಿ, ಗೆಲುವು ತಾನೇತಾನಾಗಿ ಖಚಿತವಾಗುತ್ತದೆ. ಯಾವುದೇ ಆಟಗಾರನು ಸ್ಪರ್ಧೆಯಿಂದ ಬರಿಗೈಯಲ್ಲಿ ಹಿಂತಿರುಗುವುದಿಲ್ಲ.

ಜೈಪುರ ಮಹಾಖೇಲ್ ಕ್ರೀಡೋತ್ಸವವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರು ಭಾಷಣ ಮಾಡಿದರು

February 05th, 12:38 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜೈಪುರ ಮಹಾಖೇಲ್ ಕ್ರೀಡೋತ್ಸವವನ್ನು ಉದ್ದೇಶಿಸಿ ಇಂದು ವಿಡಿಯೊ ಸಮಾವೇಶ ಮೂಲಕ ಭಾಷಣ ಮಾಡಿದರು. ಇದೇ ಸಂದರ್ಭದಲ್ಲಿ ಕಬ್ಬಡಿ ಪಂದ್ಯವನ್ನು ವೀಕ್ಷಿಸಿದರು. ಜೈಪುರ ಗ್ರಾಮಾಂತರದ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ರಾಜ್ಯವರ್ಧನ್ ಸಿಂಗ್ ರಾಥೋಡ್ ಅವರು 2017 ರಿಂದ ಜೈಪುರ ಮಹಾಖೇಲ್ ಕ್ರೀಡೋತ್ಸವವನ್ನು ಆಯೋಜಿಸುತ್ತಿದ್ದಾರೆ.

2022 ತುಂಬಾ ಸ್ಪೂರ್ತಿದಾಯಕ, ಅದ್ಭುತವಾಗಿದೆ: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ

December 25th, 11:00 am

ಸ್ನೇಹಿತರೇ, ಇದೆಲ್ಲದರ ಜೊತೆಗೆ, 2022 ರ ವರ್ಷವು ಇನ್ನೂ ಒಂದು ಕಾರಣಕ್ಕಾಗಿ ಎಂದಿಗೂ ಸ್ಮರಣೆಯಲ್ಲಿ ಉಳಿಯುತ್ತದೆ. ಇದು ‘ಏಕ್ ಭಾರತ್-ಶ್ರೇಷ್ಠ ಭಾರತ’ ದ ಚೈತನ್ಯದ ವಿಸ್ತರಣೆಯಾಗಿದೆ. ದೇಶದ ಜನರು ಏಕತೆ ಮತ್ತು ಒಗ್ಗಟ್ಟನ್ನು ಆಚರಿಸಲು ಕೂಡ ಹಲವಾರು ಅದ್ಭುತ ಕಾರ್ಯಕ್ರಮಗಳನ್ನು ಆಯೋಜಿಸಿದರು. ರುಕ್ಮಿಣಿಯ ವಿವಾಹ ಮತ್ತು ಶ್ರೀಕೃಷ್ಣನ ಪೂರ್ವ ಸಂಬಂಧವನ್ನು ಆಚರಿಸುವ ಗುಜರಾತ್ ನ ಮಾಧವಪುರ ಮೇಳವಾಗಲಿ ಇಲ್ಲವೆ ಕಾಶಿ-ತಮಿಳು ಸಂಗಮವಾಗಲಿ, ಈ ಹಬ್ಬಗಳಲ್ಲಿ ಏಕತೆಯ ಹಲವು ಬಣ್ಣಗಳು ಗೋಚರಿಸಿದವು. 2022ರಲ್ಲಿ ದೇಶವಾಸಿಗಳು ಮತ್ತೊಂದು ಅಮರ ಇತಿಹಾಸ ಬರೆದಿದ್ದಾರೆ. ಆಗಸ್ಟ್ ತಿಂಗಳಿನಲ್ಲಿ ಆರಂಭಿಸಿದ 'ಹರ್ ಘರ್ ತಿರಂಗಾ' ಅಭಿಯಾನವನ್ನು ಯಾರು ಮರೆಯಲು ಸಾಧ್ಯ. ದೇಶದ ಪ್ರತಿ ಪ್ರಜೆಯ ಮೈನವಿರೇಳುವಂತಹ ಕ್ಷಣಗಳವು. ಸ್ವಾತಂತ್ರ್ಯದ 75 ವರ್ಷಗಳ ಈ ಅಭಿಯಾನದಲ್ಲಿ ಇಡೀ ದೇಶವೇ ತ್ರಿವರ್ಣ ಧ್ವಜಮಯವಾಯಿತು. 6 ಕೋಟಿಗೂ ಹೆಚ್ಚು ಜನರು ತ್ರಿವರ್ಣ ಧ್ವಜದೊಂದಿಗೆ ಸೆಲ್ಫಿ ಕೂಡ ಕಳುಹಿಸಿದ್ದಾರೆ. ಈ ಸ್ವಾತಂತ್ರ್ಯದ ಅಮೃತ ಮಹೋತ್ಸವವು ಮುಂದಿನ ವರ್ಷವೂ ಇದೇ ರೀತಿ ಮುಂದುವರಿಯುತ್ತದೆ - ಇದು ಅಮೃತ ಕಾಲದ ಅಡಿಪಾಯವನ್ನು ಮತ್ತಷ್ಟು ಸಬಲಗೊಳಿಸಲಿದೆ.

ಟೇಬಲ್ ಟೆನಿಸ್ ನ ಮಿಶ್ರ ಡಬಲ್ಸ್ ನಲ್ಲಿ ಚಿನ್ನದ ಪದಕ ಗೆದ್ದ ಶರತ್ ಕಮಲ್ ಮತ್ತು ಶ್ರೀಜಾ ಅಕುಲ ಅವರ ಮಾನಸಿಕ ದೃಢನಿಶ್ಚಯ ಮತ್ತು ಸದೃಢತೆಯನ್ನು ಶ್ಲಾಘಿಸಿದ ಪ್ರಧಾನಮಂತ್ರಿ

August 08th, 08:30 am

ಬರ್ಮಿಂಗ್ ಹ್ಯಾಮ್ ನಲ್ಲಿ ನಡೆಯುತ್ತಿರುವ ಕಾಮನ್ ವೆಲ್ತ್ ಕ್ರೀಡಾಕೂಟ 2022 ರ ಟೂರ್ನಿಯ ಟೇಬಲ್ ಟೆನಿಸ್ ನ ಮಿಶ್ರ ಡಬಲ್ಸ್ ನಲ್ಲಿ ಶರತ್ ಕಮಾಲ್ ಮತ್ತು ಶ್ರೀಜಾ ಅಕುಲ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ.

ಸಿ.ಡಬ್ಲ್ಯೂ.ಜಿ -2022 ರಲ್ಲಿ ಕಂಚಿನ ಪದಕ ಗೆದ್ದಿರುವ ಶ್ರೀಕಾಂತ್ ಕಿಡಂಬಿ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ

August 08th, 08:25 am

ಬರ್ಮಿಂಗ್ ಹ್ಯಾಮ್ ನಲ್ಲಿ ನಡೆಯುತ್ತಿರುವ ಸಿ.ಡಬ್ಲ್ಯೂ.ಜಿ 2022 ಕ್ರೀಡಾಕೂಟದ ಬ್ಯಾಡ್ಮಿಂಟನ್ ನಲ್ಲಿ ಕಂಚಿನ ಪದಕ ಗೆದ್ದಿರುವ ಶ್ರೀಕಾಂತ್ ಕಿಡಂಬಿ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. ಸಿ.ಡಬ್ಲ್ಯೂ.ಜಿ ಯಲ್ಲಿ ಶ್ರೀಕಾಂತ್ ಕಿಡಂಬಿ ನಾಲ್ಕನೇ ಪದಕ ಗೆದ್ದಿರುವ ಬಗ್ಗೆ ಪ್ರಧಾನಮಂತ್ರಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ.

ಸಿ.ಡಬ್ಲ್ಯೂ.ಜಿ 2022 ರಲ್ಲಿ ಬೆಳ್ಳಿ ಪದಕ ಗೆದ್ದ ಮಹಿಳಾ ಕ್ರಿಕೆಟ್ ತಂಡದ ಸದಸ್ಯರಿಗೆ ಶುಭ ಹಾರೈಸಿದ ಪ್ರಧಾನಮಂತ್ರಿ

August 08th, 08:20 am

ಬರ್ಮಿಂಗ್ಹ್ಯಾಮ್ ನಲ್ಲಿ ನಡೆಯುತ್ತಿರುವ ಸಿ.ಡಬ್ಲ್ಯೂ.ಜಿ. ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಗೆದ್ದ ಭಾರತ ಮಹಿಳಾ ಕ್ರಿಕೆಟ್ ತಂಡದ ಸದಸ್ಯರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.

ಬ್ಯಾಡ್ಮಿಂಟನ್ ಡಬಲ್ಸ್ ನಲ್ಲಿ ಕಂಚಿನ ಪದಕ ಗೆದ್ದ ಟ್ರೀಸಾ ಜಾಲಿ ಹಾಗೂ ಗಾಯತ್ರಿ ಗೋಪಿಚಂದ್ ಬಗ್ಗೆ ಹೆಮ್ಮೆಯಾಗುತ್ತಿದೆ: ಪ್ರಧಾನಮಂತ್ರಿ

August 08th, 08:10 am

ಬರ್ಮಿಂಗ್ ಹ್ಯಾಮ್ ನಲ್ಲಿ ನಡೆಯುತ್ತಿರುವ ಸಿ.ಡಬ್ಲ್ಯೂ.ಜಿ 2022 ನ ಬ್ಯಾಡ್ಮಿಂಟನ್ ಡಬಲ್ಸ್ ನಲ್ಲಿ ಕಂಚಿನ ಪದಕ ಗೆದ್ದ ಟ್ರೀಸಾ ಜಾಲಿ ಮತ್ತು ಗಾಯತ್ರಿ ಗೋಪಿಚಂದ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.

ಸಿಡಬ್ಲ್ಯೂಜಿ ಬಾಕ್ಸಿಂಗ್ ನಲ್ಲಿ ಬೆಳ್ಳಿ ಪದಕ ಗೆದ್ದ ಸಾಗರ್ ಅಹ್ಲಾವತ್ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ

August 08th, 08:00 am

ಬರ್ಮಿಂಗ್ ಹ್ಯಾಮ್ ನಲ್ಲಿ ನಡೆಯುತ್ತಿರುವ ಸಿಡಬ್ಲ್ಯೂಜಿ ಕ್ರೀಡಾಕೂಟದ ಪುರುಷರ 92+ ಕೆ.ಜಿ. ಬಾಕ್ಸಿಂಗ್ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದ ಸಾಗರ್ ಅಹ್ಲಾವತ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.

ಸ್ಕ್ವಾಷ್ ನ ಮಿಶ್ರ ಡಬಲ್ಸ್ ನಲ್ಲಿ ಕಂಚಿನ ಪದಕ ಗೆದ್ದ ಸೌರವ್ ಘೋಸಲ್ ಮತ್ತು ದೀಪಿಕಾ ಪಳ್ಳಿಕಲ್ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ

August 07th, 11:27 pm

ಬರ್ಮಿಂಗ್ ಹ್ಯಾಮ್ ನಲ್ಲಿ ನಡೆಯುತ್ತಿರುವ 2022 ರ ಕಾಮನ್ ವೆಲ್ತ್ ಕ್ರೀಡಾಕೂಟದ ಸ್ಕ್ವಾಷ್ ನ ಮಿಶ್ರ ಡಬಲ್ಸ್ ನಲ್ಲಿ ಕಂಚಿನ ಪದಕ ಗೆದ್ದ ಸೌರವ್ ಘೋಸಲ್ ಮತ್ತು ದೀಪಿಕಾ ಪಳ್ಳಿಕಲ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ಟೇಬಲ್ ಟೆನಿಸ್ ಡಬಲ್ಸ್ ನಲ್ಲಿ ಬೆಳ್ಳಿ ಪದಕ ಗೆದ್ದ ಶರತ್ ಕಮಲ್ ಮತ್ತು ಸಥಿಯನ್ ಜ್ಞಾನಶೇಖರ್ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ

August 07th, 10:00 pm

ಬರ್ಮಿಂಗ್ ಹ್ಯಾಮ್ ನಲ್ಲಿ ನಡೆಯುತ್ತಿರುವ ಸಿಡಬ್ಲ್ಯೂಜಿ – 2022 ನ ಟೇಬಲ್ ಟೆನಿಸ್ ಡಬಲ್ಸ್ ನಲ್ಲಿ ಬೆಳ್ಳಿ ಪದಕ ಗೆದ್ದ ಶರತ್ ಕಮಲ್ ಮತ್ತು ಸಥಿಯನ್ ಜ್ಞಾನಶೇಖರ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.

ಸಿಡಬ್ಲ್ಯೂಜಿ 2022 ಮಹಿಳೆಯರ 50 ಕೆ.ಜಿ. ಬಾಕ್ಸಿಂಗ್ ನಲ್ಲಿ ಸ್ವರ್ಣಪದಕ ಗೆದ್ದ ನಿಖತ್ ಝರೀನ್ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ

August 07th, 08:11 pm

ಕಾಮನ್ ವೆಲ್ತ್ ಕ್ರೀಡಾಕೂಟ 2022 ರ ಮಹಿಳೆಯರ 50 ಕೆ.ಜಿ. ಬಾಕ್ಸಿಂಗ್ ವಿಭಾಗದಲ್ಲಿ ಸ್ವರ್ಣಪದಕ ಗೆದ್ದ ನಿಖತ್ ಝರೀನ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.

2022 ರ ಸಿಡಬ್ಲ್ಯೂಜಿ ಮಹಿಳೆಯರ ಜಾವೆಲಿನ್ ಎಸೆತದಲ್ಲಿ ಕಂಚಿನ ಪದಕ ಗೆದ್ದ ಅನ್ನು ರಾಣಿ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ

August 07th, 06:39 pm

2022 ರ ಕಾಮನ್ ವೆಲ್ತ್ ಕ್ರೀಡಾಕೂಟದ ಮಹಿಳೆಯರ ವಿಭಾಗದ ಜಾವೆಲಿನ್ ಎಸೆತದಲ್ಲಿ ಕಂಚಿನ ಪದಕ ಗೆದ್ದ ಅನ್ನು ರಾಣಿ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ಸಿಡಬ್ಲ್ಯುಜಿ 2022 ರಲ್ಲಿ ಪುರುಷರ 10,000 ಮೀ ಓಟದ ನಡಿಗೆಯಲ್ಲಿ ಕಂಚಿನ ಪದಕ ಗೆದ್ದ ಸಂದೀಪ್ ಕುಮಾರ್ ಅವರನ್ನು ಪ್ರಧಾನಿ ಅಭಿನಂದಿಸಿದರು

August 07th, 06:37 pm

2022 ರ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಪುರುಷರ 10,000 ಮೀಟರ್ ಓಟದ ನಡಿಗೆಯಲ್ಲಿ ಕಂಚಿನ ಪದಕ ಗೆದ್ದ ಸಂದೀಪ್ ಕುಮಾರ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ಟ್ರಿಪಲ್ ಜಂಪ್ ಸ್ಪರ್ಧೆಯಲ್ಲಿ ಬೆಳ್ಳಿ ಗೆದ್ದ ಅಬ್ದುಲ್ಲಾ ಅಬೂಬಕರ್ ಅವರಿಗೆ ಪ್ರಧಾನಮಂತ್ರಿಯವರು ಶುಭ ಹಾರೈಸಿದರು

August 07th, 06:36 pm

ಬರ್ಮಿಂಗ್ಹ್ಯಾಮ್ ಕಾಮನ್ವೆಲ್ತ್ ಗೇಮ್ಸ್ 2022 ರಲ್ಲಿ ಅಥ್ಲೆಟಿಕ್ಸ್ ಪುರುಷರ ಟ್ರಿಪಲ್ ಜಂಪ್ ಸ್ಪರ್ಧೆಯಲ್ಲಿ ಬೆಳ್ಳಿ ಗೆದ್ದ ಅಬ್ದುಲ್ಲಾ ಅಬೂಬಕರ್ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶುಭ ಹಾರೈಸಿದ್ದಾರೆ.

ಅಥ್ಲೆಟಿಕ್ಸ್ ಪುರುಷರ ಟ್ರಿಪಲ್ ಜಂಪ್‌ನಲ್ಲಿ ಚಿನ್ನದ ಪದಕ ಗೆದ್ದ ಎಲ್ದೋಸ್ ಪಾಲ್ ಅವರನ್ನು ಪ್ರಧಾನಿ ಅಭಿನಂದಿಸಿದರು

August 07th, 06:34 pm

ಬರ್ಮಿಂಗ್ಹ್ಯಾಮ್ ಸಿಡಬ್ಲ್ಯುಜಿ 2022 ರಲ್ಲಿ ಅಥ್ಲೆಟಿಕ್ಸ್ ಪುರುಷರ ಟ್ರಿಪಲ್ ಜಂಪ್‌ನಲ್ಲಿ ಚಿನ್ನದ ಪದಕವನ್ನು ಗೆದ್ದ ಎಲ್ದೋಸ್ ಪಾಲ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ಸಿಡಬ್ಲ್ಯುಜಿ 2022 ರಲ್ಲಿ 51 ಕೆಜಿ ಪುರುಷರ ಬಾಕ್ಸಿಂಗ್‌ನಲ್ಲಿ ಚಿನ್ನದ ಪದಕ ಗೆದ್ದ ಅಮಿತ್ ಪಂಗಲ್ ಅವರನ್ನು ಪ್ರಧಾನಿ ಅಭಿನಂದಿಸಿದರು

August 07th, 06:04 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2022 ರ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ 51 ಕೆಜಿ ಪುರುಷರ ಬಾಕ್ಸಿಂಗ್‌ನಲ್ಲಿ ಚಿನ್ನದ ಪದಕ ಗೆದ್ದ ಅಮಿತ್ ಪಂಗಲ್ ಅವರನ್ನು ಅಭಿನಂದಿಸಿದ್ದಾರೆ.