ಹಿರಿಯ ಪರಮಾಣು ವಿಜ್ಞಾನಿ ಡಾ. ರಾಜಗೋಪಾಲ ಚಿದಂಬರಂ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
January 04th, 12:46 pm
ಹಿರಿಯ ಪರಮಾಣು ವಿಜ್ಞಾನಿ ಡಾ. ರಾಜಗೋಪಾಲ ಚಿದಂಬರಂ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಡಾ. ರಾಜಗೋಪಾಲ ಚಿದಂಬರಂ ಅವರು ಭಾರತದ ಪರಮಾಣು ಕಾರ್ಯಕ್ರಮದ ಪ್ರಮುಖ ವಾಸ್ತುಶಿಲ್ಪಿಗಳಲ್ಲಿ ಒಬ್ಬರು ಮತ್ತು ಭಾರತದ ವೈಜ್ಞಾನಿಕ ಮತ್ತು ಕಾರ್ಯತಂತ್ರದ ಸಾಮರ್ಥ್ಯಗಳನ್ನು ಬಲಪಡಿಸುವಲ್ಲಿ ಮಹತ್ವದ ಕೊಡುಗೆಗಳನ್ನು ನೀಡಿದ್ದಾರೆ ಎಂದು ಶ್ರೀ ಮೋದಿ ಹೇಳಿದರು.ಪದ್ಮ ಪ್ರಶಸ್ತಿ ಪುರಸ್ಕೃತರಾದ, ಖ್ಯಾತ ಸಸ್ಯಶಾಸ್ತ್ರಜ್ಞ ಡಾ. ಕೆ. ಎಸ್. ಮಣಿಲಾಲ್ ಅವರ ನಿಧನಕ್ಕೆ ಪ್ರಧಾನಮಂತ್ರಿಯವರಿಂದ ಸಂತಾಪ ಸೂಚನೆ
January 01st, 10:29 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಪದ್ಮ ಪ್ರಶಸ್ತಿ ಪುರಸ್ಕೃತ ಮತ್ತು ಖ್ಯಾತ ಸಸ್ಯಶಾಸ್ತ್ರಜ್ಞ ಡಾ. ಕೆ. ಎಸ್. ಮಣಿಲಾಲ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.Prime Minister condoles the demise of Dr. Pierre-Sylvain Filliozat
December 31st, 02:38 pm
The Prime Minister, Shri Narendra Modi today condoled the demise of Dr. Pierre-Sylvain Filliozat and remarked that he will be remembered for his exemplary efforts to popularise Sanskrit studies, especially in the field of literature and grammar.ಅಮೆರಿಕದ ಮಾಜಿ ಅಧ್ಯಕ್ಷರಾದ ಶ್ರೀ ಜಿಮ್ಮಿ ಕಾರ್ಟರ್ ಅವರ ನಿಧನಕ್ಕೆ ಪ್ರಧಾನಮಂತ್ರಿಯವರಿಂದ ಸಂತಾಪ
December 30th, 02:13 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಅಮೆರಿಕದ ಮಾಜಿ ಅಧ್ಯಕ್ಷರಾದ ಶ್ರೀ ಜಿಮ್ಮಿ ಕಾರ್ಟರ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.ಪಂಜಾಬ್ ನ ಬಟಿಂಡಾದಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ
December 27th, 07:31 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪಂಜಾಬ್ ನ ಬಟಿಂಡಾದಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಗೆ ಸಂತಾಪ ಸೂಚಿಸಿದ್ದಾರೆ. ಪಿಎಂಎನ್ಆರ್ ಎಫ್ ನಿಂದ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ 50,000 ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ.ಶ್ರೀ ಒಸಾಮು ಸುಜುಕಿ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
December 27th, 05:58 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಜಾಗತಿಕ ವಾಹನ ಉದ್ಯಮದ ದಂತಕಥೆ ಶ್ರೀ ಒಸಾಮು ಸುಜುಕಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಶ್ರೀ ಒಸಾಮು ಸುಜುಕಿ ಅವರ ದೂರದೃಷ್ಟಿಯ ಕಾರ್ಯವು ಚಲನಶೀಲತೆಯ ಜಾಗತಿಕ ಗ್ರಹಿಕೆಗಳನ್ನು ಮರುರೂಪಿಸಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದರು. ಅವರ ನಾಯಕತ್ವದಲ್ಲಿ, ಸುಜುಕಿ ಮೋಟಾರ್ ಕಾರ್ಪೊರೇಷನ್ ಜಾಗತಿಕ ಶಕ್ತಿಕೇಂದ್ರವಾಯಿತು, ಸವಾಲುಗಳನ್ನು ಯಶಸ್ವಿಯಾಗಿ ಮಾರ್ಗದರ್ಶನ ಮಾಡಿತು, ಜತೆಗೆ ನಾವೀನ್ಯತೆ ಮತ್ತು ವಿಸ್ತರಣೆಗೆ ಚಾಲನೆ ಮಾಡಿತು ಎಂದಿದ್ದಾರೆ.ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ಅವರ ನಿಧನದ ಕುರಿತು ಪ್ರಧಾನಮಂತ್ರಿಯವರ ಸಂತಾಪ ಸಂದೇಶದ ಇಂಗ್ಲಿಷ್ ಅನುವಾದ
December 27th, 11:41 am
ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ಅವರ ನಿಧನವು ನಮ್ಮ ಹೃದಯವನ್ನು ಆಳವಾದ ಗಾಯ ಮಾಡಿದೆ. ಅವರ ಅಗಲಿಕೆಯಿಂದ ನಮಗೆ ಅಪಾರ ನಷ್ಟವಾಗಿದೆ. ವಿಭಜನೆಯ ಸಮಯದಲ್ಲಿ ಭಾರತಕ್ಕೆ ಬಂದ ನಂತರ ತುಂಬಾ ಕಳೆದುಕೊಂಡಿದ್ದ ಅವರು ನಂತರ ಜೀವನದ ಪ್ರತಿಯೊಂದು ಕ್ಷೇತ್ರದಲ್ಲೂ ಗಮನಾರ್ಹ ಯಶಸ್ಸನ್ನು ಸಾಧಿಸಿದ್ದು ಸಾಮಾನ್ಯ ಸಾಧನೆಯಲ್ಲ. ಅವರ ಜೀವನವು ಭವಿಷ್ಯದ ಪೀಳಿಗೆಗೆ ಕಷ್ಟಗಳು ಮತ್ತು ಸವಾಲುಗಳನ್ನು ಮೀರಿ ಎತ್ತರಕ್ಕೆ ಏರುವುದು ಹೇಗೆ ಎಂಬ ಪಾಠವಾಗಿದೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ
December 27th, 11:37 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಿಂದ ವಿಡಿಯೊ ಸಂದೇಶದ ಮೂಲಕ ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ಅವರ ನಿಧನಕ್ಕೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಡಾ. ಮನಮೋಹನ್ ಸಿಂಗ್ ಅವರ ನಿಧನವು ರಾಷ್ಟ್ರಕ್ಕೆ ಮಹತ್ವದ ನಷ್ಟವಾಗಿದೆ ಎಂದು ಅವರು ಹೇಳಿದರು. ಜೀವನದ ಪ್ರತಿಯೊಂದು ಕ್ಷೇತ್ರದಲ್ಲೂ ಯಶಸ್ಸನ್ನು ಸಾಧಿಸುವುದು ಸಾಮಾನ್ಯ ಸಾಧನೆಯಲ್ಲ ಮತ್ತು ಡಾ. ಮನಮೋಹನ್ ಸಿಂಗ್ ಅವರು ವಿಭಜನೆಯ ಸಮಯದಲ್ಲಿ ಭಾರತಕ್ಕೆ ಬಂದ ನಂತರ ಬಹಳಷ್ಟು ಕಳೆದುಕೊಂಡಿದ್ದರೂ ಅವರು ಸಾಧಕರಾಗಿದ್ದರು ಎಂದು ಪ್ರಧಾನಿ ಹೇಳಿದರು. ಡಾ. ಮನಮೋಹನ್ ಸಿಂಗ್ ಅವರ ಜೀವನವು ಭವಿಷ್ಯದ ಪೀಳಿಗೆಗೆ ಪ್ರತಿಕೂಲತೆಯಿಂದ ಹೇಗೆ ಮೇಲೇರಬೇಕು ಮತ್ತು ದೊಡ್ಡ ಎತ್ತರವನ್ನು ಹೇಗೆ ಸಾಧಿಸಬೇಕು ಎಂಬುದನ್ನು ಕಲಿಸುತ್ತದೆ ಎಂದು ಅವರು ಹೇಳಿದರು.ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
December 26th, 11:11 pm
ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ಭಾರತವು ತನ್ನ ಗಣ್ಯ ನಾಯಕರಲ್ಲಿ ಒಬ್ಬರಾದ ಡಾ. ಮನಮೋಹನ್ ಸಿಂಗ್ ಅವರನ್ನು ಕಳೆದುಕೊಂಡು ದುಃಖಿಸುತ್ತಿದೆ ಎಂದು ಶ್ರೀ ಮೋದಿ ಹೇಳಿದ್ದಾರೆ. ಡಾ. ಮನಮೋಹನ್ ಸಿಂಗ್ ಅವರು ಅಷ್ಟೇನೂ ಸಿರಿವಂತ ಕುಟುಂಬದಲ್ಲಿ ಜನಿಸಲಿಲ್ಲವಾದರೂ ಗೌರವಾನ್ವಿತ ಅರ್ಥಶಾಸ್ತ್ರಜ್ಞರ ಹಂತಕ್ಕೆ ತಲುಪಿದರು ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಣ್ಣಿಸಿದ್ದಾರೆ. ನಮ್ಮ ಪ್ರಧಾನಮಂತ್ರಿಯಾಗಿ ಡಾ. ಮನಮೋಹನ್ ಸಿಂಗ್ ಅವರು ಜನರ ಜೀವನವನ್ನು ಸುಧಾರಿಸಲು ಅಪಾರವಾಗಿ ಶ್ರಮಿಸಿದ್ದರು.ಶ್ರೀ ಎಂ.ಟಿ.ವಾಸುದೇವನ್ ನಾಯರ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
December 26th, 10:16 am
ಮಲಯಾಳಂ ಚಿತ್ರರಂಗ ಮತ್ತು ಸಾಹಿತ್ಯದಲ್ಲಿ ಅತ್ಯಂತ ಗೌರವಾನ್ವಿತ ವ್ಯಕ್ತಿಗಳಲ್ಲಿ ಒಬ್ಬರಾದ ಶ್ರೀ ಎಂ.ಟಿ.ವಾಸುದೇವನ್ ನಾಯರ್ ಜಿ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ಮಾನವ ಭಾವನೆಗಳ ಆಳವಾದ ಅನ್ವೇಷಣೆಯೊಂದಿಗೆ ಶ್ರೀ ಎಂ.ಟಿ.ವಾಸುದೇವನ್ ನಾಯರ್ ಜಿ ಅವರ ಕೃತಿಗಳು ಹಲವು ಪೀಳಿಗೆಗಳನ್ನು ರೂಪಿಸಿವೆ ಮತ್ತು ಇನ್ನೂ ಅನೇಕರಿಗೆ ಸ್ಫೂರ್ತಿ ನೀಡುವುದನ್ನು ಮುಂದುವರಿಸುತ್ತಿವೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದರು.ಹಿರಿಯ ಚಲನಚಿತ್ರ ನಿರ್ಮಾಪಕ ಶ್ರೀ ಶ್ಯಾಮ್ ಬೆನೆಗಲ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
December 23rd, 11:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಿರಿಯ ಚಲನಚಿತ್ರ ನಿರ್ಮಾಪಕ ಶ್ರೀ ಶ್ಯಾಮ್ ಬೆನೆಗಲ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.Prime Minister condoles the passing of Shri Om Prakash Chautala
December 20th, 01:52 pm
The Prime Minister Shri Narendra Modi condoled the passing of former Chief Minister of Haryana Shri Om Prakash Chautala today.ರಾಜಸ್ಥಾನದ ಜೈಪುರ-ಅಜ್ಮೀರ್ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದ ಬಗ್ಗೆ ಪ್ರಧಾನಮಂತ್ರಿ ಶೋಕ, ಪರಿಹಾರ ಘೋಷಣೆ
December 20th, 12:49 pm
ರಾಜಸ್ಥಾನದ ಜೈಪುರ-ಅಜ್ಮೀರ್ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂತಾಪ ವ್ಯಕ್ತಪಡಿಸಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರ ವಾರಸುದಾರರಿಗೆ ಪಿ ಎಂ ಎನ್ ಆರ್ ಎಫ್ ನಿಂದ ತಲಾ ಎರಡು ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ ತಲಾ ರೂ. 50,000 ಪರಿಹಾರವನ್ನು ಶ್ರೀ ಮೋದಿ ಅವರು ಪ್ರಕಟಿಸಿದ್ದಾರೆ.ಮುಂಬೈನಲ್ಲಿ ದೋಣಿ ದುರಂತದಲ್ಲಿ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ
December 18th, 10:32 pm
ಮಹಾರಾಷ್ಟ್ರದ ಮುಂಬೈನಲ್ಲಿ ಸಂಭವಿಸಿದ ದೋಣಿ ದುರಂತದಲ್ಲಿ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂತಾಪ ಸೂಚಿಸಿದ್ದಾರೆ. ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ (ಪಿ ಎಂ ಎನ್ ಆರ್ ಎಫ್) ನಿಂದ ಮೃತರ ಕುಟುಂಬಗಳಿಗೆ ತಲಾ ಎರಡು ಲಕ್ಷ ರೂಪಾಯಿ ಹಾಗೂ ಗಾಯಾಳುಗಳಿಗೆ ತಲಾ ಐವತ್ತು ಸಾವಿರ ರೂಪಾಯಿ ಪರಿಹಾರ ಪ್ರಕಟಿಸಿದ್ದಾರೆ.ಶ್ರೀಮತಿ ತುಳಸಿ ಗೌಡ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
December 17th, 10:42 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕರ್ನಾಟಕದ ಗೌರವಾನ್ವಿತ ಪರಿಸರವಾದಿ ಮತ್ತು ಪದ್ಮ ಪ್ರಶಸ್ತಿ ಪುರಸ್ಕೃತ ಶ್ರೀಮತಿ ತುಳಸಿ ಗೌಡ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.ಖ್ಯಾತ ತಬಲಾ ವಾದಕ ಉಸ್ತಾದ್ ಜಾಕೀರ್ ಹುಸೇನ್ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
December 16th, 12:08 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಖ್ಯಾತ ತಬಲಾ ವಾದಕ ಉಸ್ತಾದ್ ಜಾಕೀರ್ ಹುಸೇನ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.ಗುಜರಾತ್ ನ ಖ್ಯಾತ ಗಾಯಕ ಪುರುಷೋತ್ತಮ್ ಉಪಾಧ್ಯಾಯ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
December 11th, 09:20 pm
ಗುಜರಾತಿನ ದಿಗ್ಗಜ ಗಾಯಕ ಪುರುಷೋತ್ತಮ ಉಪಾಧ್ಯಾಯ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂತಾಪ ಸೂಚಿಸಿದ್ದಾರೆ.ಶ್ರೀ ಎಸ್ ಎಂ ಕೃಷ್ಣ ಅವರ ನಿಧನಕ್ಕೆ ಪ್ರಧಾನಮಂತ್ರಿ ಅವರಿಂದ ಸಂತಾಪ
December 10th, 09:01 am
ಕರ್ನಾಟಕದ ಮಾಜಿ ಮುಖ್ಯಮಂತ್ರಿ ಶ್ರೀ ಎಸ್.ಎಂ.ಕೃಷ್ಣ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂತಾಪ ಸೂಚಿಸಿದ್ದಾರೆ. ಕರ್ನಾಟಕದಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಅವರು ಹೆಚ್ಚಿನ ಆದ್ಯತೆ ನೀಡಿದ್ದ ನೇತಾರ ಎಂದು ಶ್ರೀ ಮೋದಿ ಅವರು ಎಂದು ಶ್ಲಾಘಿಸಿದ್ದಾರೆ.ಉತ್ತರ ಪ್ರದೇಶದ ಕನೌಜ್ ನಲ್ಲಿ ಬಸ್ ಅಪಘಾತ – ಮೃತರ ಕುಟುಂಬಗಳಿಗೆ ಪ್ರಧಾನಮಂತ್ರಿ ಸಂತಾಪ; ಪಿ ಎಂ ಎನ್ ಆರ್ ಎಫ್ ನಿಂದ ಪರಿಹಾರ ಘೋಷಣೆ
December 06th, 08:05 pm
ಉತ್ತರಪ್ರದೇಶದ ಕನೌಜ್ ನಲ್ಲಿ ಇಂದು ಬಸ್ ಅಪಘಾತದಲ್ಲಿ ಸಂಭವಿಸಿದ ಪ್ರಾಣ ಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ (ಪಿ ಎಂ ಎನ್ ಆರ್ ಎಫ್) ನಿಂದ ಮೃತರ ವಾರಸುದಾರಿಗೆ ತಲಾ ಎರಡು ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿ ಪರಿಹಾರವನ್ನು ಶ್ರೀ ಮೋದಿ ಅವರು ಪ್ರಕಟಿಸಿದ್ದಾರೆ.ಸ್ಕ್ವಾಷ್ ನ ಪ್ರಸಿದ್ಧ ಆಟಗಾರರಾದ ಶ್ರೀ ರಾಜ್ ಮಂಚಂದಾ ಅವರ ನಿಧನಕ್ಕೆ ಪ್ರಧಾನಮಂತ್ರಿಯವರಿಂದ ಸಂತಾಪ ಸೂಚನೆ
December 04th, 03:42 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಶ್ರೀ ರಾಜ್ ಮಂಚಂದಾ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಶ್ರೀ ಮಂಚಂದಾ ಅವರು ತಮ್ಮ ಸಮರ್ಪಣೆ ಮತ್ತು ಉತ್ಕೃಷ್ಟತೆಗೆ ಹೆಸರುವಾಸಿಯಾದ ಭಾರತೀಯ ಸ್ಕ್ವಾಷ್ ಆಟದ ನಿಜವಾದ ದಂತಕಥೆ ಎಂದು ಶ್ರೀ ಮೋದಿಯವರು ಶ್ಲಾಘಿಸಿದ್ದಾರೆ. ಶ್ರೀ ಮಂಚಂದಾ ಅವರು ಮಿಲಿಟರಿಯಲ್ಲಿ ರಾಷ್ಟ್ರಕ್ಕೆ ಸಲ್ಲಿಸಿದ ಸೇವೆಯನ್ನು ಪ್ರಧಾನಿಯವರು ಶ್ಲಾಘಿಸಿದ್ದಾರೆ.