ಮಾರಿಷಸ್ ಪ್ರಧಾನಮಂತ್ರಿಯವರೊಂದಿಗೆ ಪ್ರಧಾನಮಂತ್ರಿ ದೂರವಾಣಿ ಸಂಭಾಷಣೆ ನಡೆಸಿದರು

ಮಾರಿಷಸ್ ಪ್ರಧಾನಮಂತ್ರಿಯವರೊಂದಿಗೆ ಪ್ರಧಾನಮಂತ್ರಿ ದೂರವಾಣಿ ಸಂಭಾಷಣೆ ನಡೆಸಿದರು

June 24th, 09:54 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಾರಿಷಸ್ ಗಣರಾಜ್ಯದ ಪ್ರಧಾನಮಂತ್ರಿ ಗೌರವಾನ್ವಿತ ಡಾ. ನವೀನ್ ಚಂದ್ರ ರಾಮಗೂಲಂ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು.

ಶ್ರೀ ನಾರಾಯಣ ಗುರು ಮತ್ತು ಗಾಂಧೀಜಿ ನಡುವಿನ ಸಂವಾದದ ಶತಮಾನೋತ್ಸವ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

ಶ್ರೀ ನಾರಾಯಣ ಗುರು ಮತ್ತು ಗಾಂಧೀಜಿ ನಡುವಿನ ಸಂವಾದದ ಶತಮಾನೋತ್ಸವ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

June 24th, 11:30 am

ಬ್ರಹ್ಮಋಷಿ ಸ್ವಾಮಿ ಸಚ್ಚಿದಾನಂದ ಜೀ, ಶ್ರೀಮಠ ಸ್ವಾಮಿ ಶುಭಾಂಗ-ನಂದಾ ಜೀ, ಸ್ವಾಮಿ ಶಾರದಾನಂದ ಜೀ, ಎಲ್ಲಾ ಪೂಜ್ಯ ಸಾಧು ಸಂತರೆ, ಸರ್ಕಾರದ ನನ್ನ ಸಹೋದ್ಯೋಗಿ ಶ್ರೀ ಜಾರ್ಜ್ ಕುರಿಯನ್ ಜೀ, ಸಂಸತ್ತಿನ ನನ್ನ ಸಹೋದ್ಯೋಗಿ ಶ್ರೀ ಅಡೂರ್ ಪ್ರಕಾಶ್ ಜೀ, ಇಲ್ಲಿರುವ ಇತರೆ ಎಲ್ಲ ಹಿರಿಯ ಗಣ್ಯರೆ, ಮಹಿಳೆಯರು ಮತ್ತು ಮಹನೀಯರೆ.

ಶ್ರೀ ನಾರಾಯಣ ಗುರು ಮತ್ತು ಮಹಾತ್ಮ ಗಾಂಧಿ ಅವರ ನಡುವಿನ ಐತಿಹಾಸಿಕ ಸಂವಾದದ ಶತಮಾನೋತ್ಸವ ಸಮಾರಂಭ ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

ಶ್ರೀ ನಾರಾಯಣ ಗುರು ಮತ್ತು ಮಹಾತ್ಮ ಗಾಂಧಿ ಅವರ ನಡುವಿನ ಐತಿಹಾಸಿಕ ಸಂವಾದದ ಶತಮಾನೋತ್ಸವ ಸಮಾರಂಭ ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

June 24th, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಭಾರತದ ಇಬ್ಬರು ಶ್ರೇಷ್ಠ ಆಧ್ಯಾತ್ಮಿಕ ಮತ್ತು ನೈತಿಕ ನಾಯಕರಾದ ಶ್ರೀ ನಾರಾಯಣ ಗುರು ಮತ್ತು ಮಹಾತ್ಮ ಗಾಂಧಿಯವರ ಐತಿಹಾಸಿಕ ಸಂವಾದದ ಶತಮಾನೋತ್ಸವ ಸಮಾರಂಭದಲ್ಲಿ ಮಾತನಾಡಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ಇಂದು ಈ ಸ್ಥಳವು ರಾಷ್ಟ್ರದ ಇತಿಹಾಸದಲ್ಲಿ ಅಭೂತಪೂರ್ವ ಕ್ಷಣಕ್ಕೆ ಸಾಕ್ಷಿಯಾಗುತ್ತಿದೆ ಎಂದು ಹೇಳಿದರು. ಇದು ನಮ್ಮ ಸ್ವಾತಂತ್ರ್ಯ ಚಳವಳಿಗೆ ಹೊಸ ದಿಕ್ಕನ್ನು ನೀಡಿದ, ಸ್ವಾತಂತ್ರ್ಯದ ಉದ್ದೇಶಗಳು ಮತ್ತು ಸ್ವತಂತ್ರ ಭಾರತದ ಕನಸಿಗೆ ನಿರ್ದಿಷ್ಟ ಅರ್ಥವನ್ನು ನೀಡಿದ ಐತಿಹಾಸಿಕ ಘಟನೆಯಾಗಿದೆ ಎಂದು ಅವರು ಒತ್ತಿ ಹೇಳಿದರು. 100 ವರ್ಷಗಳ ಹಿಂದೆ ನಡೆದ ಶ್ರೀ ನಾರಾಯಣ ಗುರು ಮತ್ತು ಮಹಾತ್ಮ ಗಾಂಧಿಯವರ ಭೇಟಿಯು ಇಂದಿಗೂ ಸ್ಪೂರ್ತಿದಾಯಕ ಮತ್ತು ಪ್ರಸ್ತುತವಾಗಿದೆ ಮತ್ತು ಅಭಿವೃದ್ಧಿ ಹೊಂದಿದ ಭಾರತದ ಸಾಮಾಜಿಕ ಸಾಮರಸ್ಯ ಮತ್ತು ಸಾಮೂಹಿಕ ಗುರಿಗಳಿಗೆ ಶಕ್ತಿಶಾಲಿ ಮೂಲವಾಗಿ ಕಾರ್ಯನಿರ್ವಹಿಸುತ್ತದೆ ಎಂದು ಪ್ರಧಾನಿ ಹೇಳಿದರು. ಈ ಐತಿಹಾಸಿಕ ಸಂದರ್ಭದಲ್ಲಿ, ಅವರು ಶ್ರೀ ನಾರಾಯಣ ಗುರುಗಳ ಪಾದಗಳಿಗೆ ನಮನ ಸಲ್ಲಿಸಿದರು ಮತ್ತು ಮಹಾತ್ಮ ಗಾಂಧಿ ಅವರಿಗೆ ಗೌರವನಮನ ಸಲ್ಲಿಸಿದರು.

2025ರ ಜೂನ್‌ 24ರಂದು ಶ್ರೀ ನಾರಾಯಣ ಗುರು ಮತ್ತು ಮಹಾತ್ಮಾ ಗಾಂಧಿ ನಡುವಿನ ಸಂಭಾಷಣೆಯ ಶತಮಾನೋತ್ಸವ ಸಮಾರಂಭವನ್ನು ಉದ್ಘಾಟಿಸಲಿರುವ ಪ್ರಧಾನಮಂತ್ರಿ

June 23rd, 05:24 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2025ರ ಜೂನ್‌ 24ರಂದು ಬೆಳಗ್ಗೆ 11 ಗಂಟೆಗೆ ನವದೆಹಲಿಯ ವಿಜ್ಞಾನ ಭವನದಲ್ಲಿ ಭಾರತದ ಇಬ್ಬರು ಶ್ರೇಷ್ಠ ಆಧ್ಯಾತ್ಮಿಕ ಮತ್ತು ಸನ್ನಡತೆಯ ನಾಯಕರಾದ ಶ್ರೀ ನಾರಾಯಣ ಗುರು ಮತ್ತು ಮಹಾತ್ಮ ಗಾಂಧಿ ನಡುವಿನ ಐತಿಹಾಸಿಕ ಸಂಭಾಷಣೆಯ ಶತಮಾನೋತ್ಸವ ಆಚರಣೆಯನ್ನು ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿಅವರು ಸಭಿಕರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಐತಿಹಾಸಿಕ ಎರಡನೇ ಅವಧಿಗೆ ಆಯ್ಕೆಯಾದ ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಆಂಥೋನಿ ಅಲ್ಬನೀಸ್ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ

May 06th, 02:41 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗೌರವಾನ್ವಿತ ಆಂಥೋನಿ ಅಲ್ಬನೀಸ್ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು ಮತ್ತು ಆಸ್ಟ್ರೇಲಿಯಾದ 32ನೇ ಪ್ರಧಾನಮಂತ್ರಿಯಾಗಿ ಐತಿಹಾಸಿಕ ರೀತಿಯಲ್ಲಿ ಪುನರಾಯ್ಕೆಗೊಂಡುದಕ್ಕಾಗಿ ಅವರನ್ನು ಅಭಿನಂದಿಸಿದರು.

ಪಾಡ್‌ಕ್ಯಾಸ್ಟ್‌ ನಲ್ಲಿ ಲೆಕ್ಸ್ ಫ್ರಿಡ್ಮನ್ ಅವರೊಂದಿಗಿನ ಪ್ರಧಾನಮಂತ್ರಿಯವರ ಮಾತುಕತೆಯ ಕನ್ನಡ ಅನುವಾದ

March 16th, 11:47 pm

ಪ್ರಧಾನಮಂತ್ರಿ ನರೇಂದ್ರ ಮೋದಿ: ನನ್ನ ಶಕ್ತಿ ಇರುವುದು ಮೋದಿಯಾಗಿರುವುದರಲ್ಲಿ ಅಲ್ಲ; ಅದು 140 ಕೋಟಿ ಭಾರತೀಯರಿಂದ ಬಂದಿದೆ, ಸಾವಿರಾರು ವರ್ಷಗಳ ನಮ್ಮ ದೇಶದ ಶ್ರೀಮಂತ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯಿಂದ ಬಂದಿದೆ. ಅದೇ ನನ್ನ ನಿಜವಾದ ಶಕ್ತಿ. ನಾನು ಎಲ್ಲಿಗೆ ಹೋದರೂ, ಮೋದಿಯಾಗಿ ಹೋಗುವುದಿಲ್ಲ - ವೇದಗಳಿಂದ ವಿವೇಕಾನಂದರವರೆಗೆ ನಮ್ಮ ನಾಗರಿಕತೆಯ ಸಾವಿರಾರು ವರ್ಷಗಳ ಹಳೆಯ ಶ್ರೇಷ್ಠ ಸಂಪ್ರದಾಯಗಳನ್ನು ನನ್ನೊಂದಿಗೆ ಕೊಂಡೊಯ್ಯತೇನೆ. ನಾನು 140 ಕೋಟಿ ಜನರನ್ನು, ಅವರ ಕನಸುಗಳನ್ನು ಮತ್ತು ಅವರ ಆಕಾಂಕ್ಷೆಗಳನ್ನು ಪ್ರತಿನಿಧಿಸುತ್ತೇನೆ. ಅದಕ್ಕಾಗಿಯೇ, ನಾನು ಯಾವುದೇ ವಿಶ್ವ ನಾಯಕರೊಂದಿಗೆ ಕೈಕುಲುಕಿದಾಗ, ಅದು ಕೇವಲ ಮೋದಿಯವರ ಕೈ ಆಗಿರುವುದಿಲ್ಲ - ಅದು 140 ಕೋಟಿ ಭಾರತೀಯರ ಸಾಮೂಹಿಕ ಕೈ ಆಗಿರುತ್ತದೆ. ನನ್ನ ಶಕ್ತಿ ಮೋದಿಯದ್ದಲ್ಲ; ಅದು ಭಾರತದ ಶಕ್ತಿ. ನಾವು ಶಾಂತಿಯ ಬಗ್ಗೆ ಮಾತನಾಡುವಾಗಲೆಲ್ಲಾ, ಜಗತ್ತು ಕೇಳುತ್ತದೆ, ಏಕೆಂದರೆ ಇದು ಬುದ್ಧನ ನಾಡು, ಮಹಾತ್ಮ ಗಾಂಧಿಯವರ ನಾಡು. ನಾವು ಸಂಘರ್ಷದ ಪ್ರತಿಪಾದಕರಲ್ಲ; ನಾವು ಸಾಮರಸ್ಯವನ್ನು ಪ್ರತಿಪಾದಿಸುತ್ತೇವೆ. ನಾವು ಪ್ರಕೃತಿಯೊಂದಿಗೆ ಸಂಘರ್ಷ ಅಥವಾ ರಾಷ್ಟ್ರಗಳ ನಡುವಿನ ಕಲಹವನ್ನು ಬಯಸುವುದಿಲ್ಲ - ನಾವು ಸಹಕಾರದಲ್ಲಿ ನಂಬಿಕೆ ಇಡುವ ಜನರು ಮತ್ತು ನಾವು ಶಾಂತಿಯನ್ನು ಉತ್ತೇಜಿಸಲು ಯಾವುದೇ ರೀತಿಯಲ್ಲಿ ಕೊಡುಗೆ ನೀಡಲು ಸಾಧ್ಯವಾದರೆ, ನಾವು ಯಾವಾಗಲೂ ಅದನ್ನು ಮಾಡಲು ಪ್ರಯತ್ನಿಸುತ್ತೇವೆ. ನನ್ನ ಜೀವನವು ಅತ್ಯಂತ ಬಡತನದಿಂದ ಬಂದಿದೆ, ಆದರೂ ನಾವು ಅದರ ಹೊರೆಯನ್ನು ಎಂದಿಗೂ ಅನುಭವಿಸಲಿಲ್ಲ. ಜೀವನದುದ್ದಕ್ಕೂ ಬೂಟುಗಳನ್ನು ಧರಿಸಿದ ವ್ಯಕ್ತಿಗೆ ಇದ್ದಕ್ಕಿದ್ದಂತೆ ಅವುಗಳಿಲ್ಲದೆ ಹೋದರೆ ಅವನು ಕಷ್ಟಪಡಬೇಕಾಗಬಹುದು. ಆದರೆ ಎಂದಿಗೂ ಬೂಟುಗಳನ್ನು ಧರಿಸದವರಿಗೆ, ಅಭಾವದ ಭಾವನೆಯೇ ಇರುವುದಿಲ್ಲ - ನಾವು ನಮ್ಮ ಜೀವನವನ್ನು ಅದು ಇದ್ದಂತೆಯೇ ಸರಳವಾಗಿ ಬದುಕಿದ್ದೇವೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲೆಕ್ಸ್ ಫ್ರಿಡ್ಮನ್ ಅವರೊಂದಿಗೆ ʻಪಾಡ್‌ಕಾಸ್ಟ್‌ʼನಲ್ಲಿ ಸಂವಾದ ನಡೆಸಿದರು

March 16th, 05:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲೆಕ್ಸ್ ಫ್ರಿಡ್ಮನ್ ಅವರೊಂದಿಗೆ ಇಂದು ವಿವಿಧ ವಿಷಯಗಳ ಬಗ್ಗೆ ʻಪಾಡ್‌ಕಾಸ್ಟ್ʼನಲ್ಲಿ ಸಂವಾದ ನಡೆಸಿದರು. ಪ್ರಾಮಾಣಿಕವಾದ, ಮನದಾಳದ ಮಾತುಕತೆಯ ವೇಳೆ ಪ್ರಧಾನಿ ಅವರನ್ನು ನೀವು ಏಕೆ ಉಪವಾಸ ಮಾಡುತ್ತೀರಿ ಮತ್ತು ಹೇಗೆ ನಿರ್ವಹಿಸುತ್ತೀರಿ ಎಂದು ಕೇಳಿದಾಗ, ಪ್ರಧಾನಿಯವರು ತಮ್ಮ ಮೇಲಿನ ಗೌರವದ ಸಂಕೇತವಾಗಿ ಉಪವಾಸ ಮಾಡಿದ ಪಾಡ್‌ಕಾಸ್ಟರ್‌ ಲೆಕ್ಸ್ ಫ್ರಿಡ್ಮನ್ ಅವರಿಗೆ ಕೃತಜ್ಞತೆ ಸಲ್ಲಿಸಿದರು. ಭಾರತದಲ್ಲಿ, ಧಾರ್ಮಿಕ ಸಂಪ್ರದಾಯಗಳು ದೈನಂದಿನ ಜೀವನದೊಂದಿಗೆ ಆಳವಾಗಿ ಹೆಣೆದುಕೊಂಡಿವೆ ಎಂದು ಶ್ರೀ ಮೋದಿ ಹೇಳಿದರು. ಹಿಂದೂ ಧರ್ಮವು ಕೇವಲ ಆಚರಣೆಗಳ ಕುರಿತಾದದ್ದಲ್ಲ. ಅದು ಜೀವನಕ್ಕೆ ಮಾರ್ಗದರ್ಶನ ನೀಡುವ ತತ್ವಶಾಸ್ತ್ರವಾಗಿದೆ ಎಂದು ಹೇಳಿದ ಶ್ರೀ ಮೋದಿ ಅವರು ಈ ಕುರಿತು ಭಾರತದ ಗೌರವಾನ್ವಿತ ಸರ್ವೋಚ್ಚ ನ್ಯಾಯಾಲಯದ ವ್ಯಾಖ್ಯಾನವನ್ನು ಉಲ್ಲೇಖಿಸಿದರು. ಉಪವಾಸವು ಶಿಸ್ತನ್ನು ಬೆಳೆಸಲು ಹಾಗೂ ಮನಸ್ಸು ಹಾಗೂ ದೇಹವನ್ನು ಸಮತೋಲನಗೊಳಿಸಲು ಒಂದು ಸಾಧನವಾಗಿದೆ ಎಂದು ಅವರು ಒತ್ತಿ ಹೇಳಿದರು. ಉಪವಾಸವು ಇಂದ್ರಿಯಗಳ ಪ್ರಜ್ಞೆಯನ್ನು ಹೆಚ್ಚಿಸುತ್ತದೆ, ಅವುಗಳನ್ನು ಹೆಚ್ಚು ಸೂಕ್ಷ್ಮ ಮತ್ತು ಜಾಗೃತಗೊಳಿಸುತ್ತದೆ ಎಂದು ಪ್ರಧಾನಿ ಹೇಳಿದರು. ಉಪವಾಸದ ಸಮಯದಲ್ಲಿ, ಅತ್ಯಂತ ಸೂಕ್ಷ್ಮವಾದ ಸುವಾಸನೆ ಮತ್ತು ವಿವರಗಳನ್ನು ಸಹ ಹೆಚ್ಚು ಸ್ಪಷ್ಟವಾಗಿ ಗ್ರಹಿಸಬಹುದು ಎಂದು ಅವರು ಹೇಳಿದರು. ಉಪವಾಸವು ಆಲೋಚನಾ ಪ್ರಕ್ರಿಯೆಯನ್ನು ವೇಗಗೊಳಿಸುತ್ತದೆ, ಹೊಸ ದೃಷ್ಟಿಕೋನಗಳನ್ನು ಒದಗಿಸುತ್ತದೆ ಮತ್ತು ರೂಢಿಗತವಲ್ಲದ ರೀತಿಯಲ್ಲಿ (ಔಟ್‌ ಆಫ್‌ ದಿ ಬಾಕ್ಸ್‌) ಆಲೋಚನೆಯನ್ನು ಉತ್ತೇಜಿಸುತ್ತದೆ ಎಂದು ಅವರು ಒತ್ತಿ ಹೇಳಿದರು. ಉಪವಾಸವೆಂದರೆ ಕೇವಲ ಆಹಾರವನ್ನು ತ್ಯಜಿಸುವುದಷ್ಟೇ ಅಲ್ಲ ಎಂದು ಶ್ರೀ ಮೋದಿ ಸ್ಪಷ್ಟಪಡಿಸಿದರು. ಇದು ಪೂರ್ವ ಸಿದ್ಧತೆ ಮತ್ತು ನಿರ್ವಿಷೀಕರಣದ (ಡಿಟಾಕ್ಸಿಕೇಷನ್‌) ವೈಜ್ಞಾನಿಕ ಪ್ರಕ್ರಿಯೆಯನ್ನು ಒಳಗೊಂಡಿದೆ. ಹಲವಾರು ದಿನಗಳ ಮುಂಚಿತವಾಗಿ ಆಯುರ್ವೇದ ಮತ್ತು ಯೋಗ ಅಭ್ಯಾಸಗಳನ್ನು ಅನುಸರಿಸುವ ಮೂಲಕ ತಮ್ಮ ದೇಹವನ್ನು ಉಪವಾಸಕ್ಕಾಗಿ ಸಜ್ಜುಗೊಳಿಸುವುದಾಗಿ ಅವರು ಒತ್ತಿ ಹೇಳಿದರು ಮತ್ತು ಈ ಅವಧಿಯಲ್ಲಿ ದೇಹದಲ್ಲಿ ನೀರಿನ ಅಂಶವನ್ನು ಕಾಯ್ದುಕೊಳ್ಳುವುದರ ಮಹತ್ವವನ್ನು ಒತ್ತಿ ಹೇಳಿದರು. ಉಪವಾಸ ಪ್ರಾರಂಭವಾದ ನಂತರ, ಅವರು ಅದನ್ನು ಭಕ್ತಿ ಮತ್ತು ಸ್ವಯಂ ಶಿಸ್ತಿನ ಕ್ರಿಯೆಯಾಗಿ ನೋಡುವುದಾಗಿ, ಮತ್ತು ಇದು ಆಳವಾದ ಆತ್ಮಾವಲೋಕನ ಮತ್ತು ಏಕಾಗ್ರತೆಗೆ ಅನುವು ಮಾಡಿಕೊಡುತ್ತದೆ ಎಂದು ಹೇಳಿದರು. ತಮ್ಮ ಶಾಲಾ ದಿನಗಳಲ್ಲಿ ಉಪವಾಸದ ಅಭ್ಯಾಸವು ವೈಯಕ್ತಿಕ ಅನುಭವದಿಂದ ಪ್ರಾರಂಭವಾಯಿತು. ಮಹಾತ್ಮಾ ಗಾಂಧಿಯವರಿಂದ ಸ್ಫೂರ್ತಿಪಡೆದ ಆಂದೋಲನದಿಂದ ಅದು ಶುರುವಾಯಿತು ಎಂದು ಪ್ರಧಾನಿ ಹಂಚಿಕೊಂಡರು. ಅವರು ತಮ್ಮ ಮೊದಲ ಉಪವಾಸದ ಸಮಯದಲ್ಲಿ ಶಕ್ತಿ ಮತ್ತು ಜಾಗೃತಿಯಲ್ಲಿ ಉಂಟಾದ ತೀವ್ರತೆಯ ಅನುಭವನ್ನು ವಿವರಿಸಿದರು. ಅದು ಉಪವಾಸದ ಪರಿವರ್ತಕ ಶಕ್ತಿಯನ್ನು ತಮಗೆ ಮನವರಿಕೆ ಮಾಡಿಕೊಟ್ಟಿತು ಎಂದರು. ಉಪವಾಸವು ತಮ್ಮನ್ನು ತಾಮಸ ಅಥವಾ ನಿಧಾನಗೊಳಿಸುವುದಿಲ್ಲ. ಬದಲಾಗಿ, ಇದು ಆಗಾಗ್ಗೆ ತಮ್ಮ ಉತ್ಪಾದಕತೆಯನ್ನು ಹೆಚ್ಚಿಸುತ್ತದೆ ಎಂದು ಅವರು ಒತ್ತಿ ಹೇಳಿದರು. ಉಪವಾಸದ ಸಮಯದಲ್ಲಿ, ಅವರ ಆಲೋಚನೆಗಳು ಹೆಚ್ಚು ಮುಕ್ತವಾಗಿ ಮತ್ತು ಸೃಜನಶೀಲವಾಗಿ ಹರಿಯುತ್ತವೆ, ಇದು ತಮ್ಮನ್ನು ವ್ಯಕ್ತಪಡಿಸಲು ಅದ್ಭುತ ಅನುಭವವನ್ನು ನೀಡುತ್ತದೆ ಎಂದು ಅವರು ವಿವರಿಸಿದರು.

ಲೆಕ್ಸ್ ಫ್ರಿಡ್ಮನ್ ಅವರೊಂದಿಗೆ ಪ್ರಧಾನಮಂತ್ರಿಯವರ ಒಳನೋಟದ ಸಂಭಾಷಣೆ

March 15th, 07:01 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇತ್ತೀಚೆಗೆ ಖ್ಯಾತ ಪಾಡ್ ಕಾಸ್ಟರ್ ಮತ್ತು ಕೃತಕ ಬುದ್ಧಿಮತ್ತೆ ಸಂಶೋಧಕರಾದ ಲೆಕ್ಸ್ ಫ್ರಿಡ್ಮನ್ ಅವರೊಂದಿಗೆ ಆಕರ್ಷಕ ಚಿಂತನಶೀಲ ಸಂಭಾಷಣೆ ನಡೆಸಿದರು. ಮೂರು ಗಂಟೆಗಳ ಕಾಲ ನಡೆದ ಈ ಸಂಭಾಷಣೆಯಲ್ಲಿ ಪ್ರಧಾನಿ ಮೋದಿಯವರ ಬಾಲ್ಯ, ಹಿಮಾಲಯದಲ್ಲಿ ಅವರು ಕಳೆದ ರಚನಾತ್ಮಕ ವರ್ಷಗಳು ಮತ್ತು ಸಾರ್ವಜನಿಕ ಜೀವನದಲ್ಲಿ ಅವರ ಪ್ರಯಾಣ ಎಲ್ಲವೂ ಸೇರಿದಂತೆ ವಿವಿಧ ವಿಷಯಗಳನ್ನು ಚರ್ಚಿಸಲಾಯಿತು. ಪ್ರಸಿದ್ಧ ಕೃತಕ ಬುದ್ಧಿಮತ್ತೆ ಸಂಶೋಧಕ ಮತ್ತು ಪಾಡ್ಕಾಸ್ಟರ್ ಲೆಕ್ಸ್ ಫ್ರಿಡ್ಮನ್ ಅವರೊಂದಿಗಿನ ಈ ಬಹುನಿರೀಕ್ಷಿತ ಮೂರು ಗಂಟೆಗಳ ಪಾಡ್ಕಾಸ್ಟ್ ನಾಳೆ, ಮಾರ್ಚ್ 16, 2025 ರಂದು ಬಿಡುಗಡೆಯಾಗಲಿದೆ. ಲೆಕ್ಸ್ ಫ್ರಿಡ್ಮನ್ ಈ ಸಂಭಾಷಣೆಯನ್ನು ತನ್ನ ಜೀವನದ ಅತ್ಯಂತ ಶಕ್ತಿಯುತ ಸಂಭಾಷಣೆಗಳಲ್ಲಿ ಒಂದು ಎಂದು ಬಣ್ಣಿಸಿದ್ದಾರೆ.

Politics is about winning people's hearts, says PM Modi in podcast with Nikhil Kamath

January 10th, 02:15 pm

Prime Minister Narendra Modi engages in a deep and insightful conversation with entrepreneur and investor Nikhil Kamath. In this discussion, they explore India's remarkable growth journey, PM Modi's personal life story, the challenges he has faced, his successes and the crucial role of youth in shaping the future of politics.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮ್ಮ ಮೊದಲ ಪಾಡ್ ಕಾಸ್ಟ್ ನಲ್ಲಿ ಉದ್ಯಮಿ ನಿಖಿಲ್ ಕಾಮತ್ ಅವರೊಂದಿಗೆ ಸಂವಾದ ನಡೆಸಿದರು

January 10th, 02:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಮ್ಮ ಮೊದಲ ಪಾಡ್ಕ್ಯಾಸ್ಟ್ನಲ್ಲಿ ಉದ್ಯಮಿ ಮತ್ತು ಹೂಡಿಕೆದಾರ ನಿಖಿಲ್ ಕಾಮತ್ ಅವರೊಂದಿಗೆ ವಿವಿಧ ವಿಷಯಗಳ ಕುರಿತು ಮಾತುಕತೆ ನಡೆಸಿದರು. ಅವರ ಬಾಲ್ಯದ ಬಗ್ಗೆ ಕೇಳಿದಾಗ, ಪ್ರಧಾನಿಯವರು ತಮ್ಮ ಆರಂಭಿಕ ಜೀವನದ ಅನುಭವಗಳನ್ನು ಹಂಚಿಕೊಂಡರು ಮತ್ತು ಉತ್ತರ ಗುಜರಾತ್ ನ ಮೆಹ್ಸಾನಾ ಜಿಲ್ಲೆಯ ಸಣ್ಣ ಪಟ್ಟಣವಾದ ವಡ್ನಗರದಲ್ಲಿನ ತಮ್ಮ ಮೂಲದ ಬಗ್ಗೆ ಮಾತನಾಡಿದರು. ಗಾಯಕ್ವಾಡ್ ಸಾಮ್ರಾಜ್ಯದ ವಡ್ನಗರ ಪಟ್ಟಣವು ಶಿಕ್ಷಣದ ಬಗೆಗಿನ ತನ್ನ ಬದ್ಧತೆಗೆ ಹೆಸರುವಾಸಿಯಾಗಿದ್ದು, ಕೊಳ, ಅಂಚೆ ಕಚೇರಿ ಮತ್ತು ಗ್ರಂಥಾಲಯದಂತಹ ಅಗತ್ಯ ಸೌಲಭ್ಯಗಳನ್ನು ಹೊಂದಿದೆ ಎಂದು ಅವರು ಹೇಳಿದರು. ಗಾಯಕ್ವಾಡ್ ರಾಜ್ಯ ಪ್ರಾಥಮಿಕ ಶಾಲೆ ಮತ್ತು ಭಾಗವತಾಚಾರ್ಯ ನಾರಾಯಣಾಚಾರ್ಯ ಪ್ರೌಢಶಾಲೆಯಲ್ಲಿ ಕಳೆದ ತಮ್ಮ ಶಾಲಾ ದಿನಗಳನ್ನು ಪ್ರಧಾನಮಂತ್ರಿಯವರು ನೆನೆದರು. ವಡ್ನಗರದಲ್ಲಿ ಸಾಕಷ್ಟು ಸಮಯ ಕಳೆದಿದ್ದ ಚೀನೀ ತತ್ವಜ್ಞಾನಿ ಕ್ಸುವಾನ್ ಜಾಂಗ್ ಅವರ ಕುರಿತು ನಿರ್ಮಿಸಲಾಗುತ್ತಿರುವ ಚಲನಚಿತ್ರದ ಬಗ್ಗೆ ಅವರು ಒಮ್ಮೆ ಚೀನೀ ರಾಯಭಾರ ಕಚೇರಿಗೆ ಬರೆದಿದ್ದರ ಬಗ್ಗೆ ಆಸಕ್ತಿದಾಯಕ ಮಾಹಿತಿಯನ್ನು ಹಂಚಿಕೊಂಡರು. 2014 ರಲ್ಲಿ ತಾವು ಭಾರತದ ಪ್ರಧಾನಿಯಾದಾಗ ಚೀನಾದ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಕ್ಸುವಾನ್ಜಾಂಗ್ ಮತ್ತು ತಮ್ಮ ಊರುಗಳ ನಡುವಿನ ಐತಿಹಾಸಿಕ ಸಂಬಂಧವನ್ನು ಉಲ್ಲೇಖಿಸಿ ಗುಜರಾತ್ ಮತ್ತು ವಡ್ನಗರಕ್ಕೆ ಭೇಟಿ ನೀಡುವ ಬಯಕೆಯನ್ನು ವ್ಯಕ್ತಪಡಿಸಿದ್ದನ್ನು ಪ್ರಧಾನಮಂತ್ರಿಯವರು ನೆನಪಿಸಿಕೊಂಡರು. ಈ ಸಂಪರ್ಕವು ಎರಡೂ ದೇಶಗಳ ನಡುವಿನ ಹಂಚಿಕೆಯ ಪರಂಪರೆ ಮತ್ತು ಬಲವಾದ ಸಂಬಂಧಗಳನ್ನು ಎತ್ತಿ ತೋರಿಸಿದೆ ಎಂದು ಅವರು ಹೇಳಿದರು.