ಯಶಸ್ಸಿಗೆ ಒಂದೇ ಒಂದು ಮಂತ್ರವಿದೆ - 'ದೀರ್ಘಾವಧಿಯ ಯೋಜನೆ ಮತ್ತು ನಿರಂತರ ಬದ್ಧತೆ', ಹೇಳಿದ್ದಾರೆ ಪ್ರಧಾನಿ

March 12th, 06:40 pm

ಪ್ರಧಾನಿ ನರೇಂದ್ರ ಮೋದಿ ಅವರು ಅಹಮದಾಬಾದ್‌ನಲ್ಲಿ 11 ನೇ ಖೇಲ್ ಮಹಾಕುಂಭವನ್ನು ಉದ್ಘಾಟಿಸಿದರು. ಕ್ರೀಡೆಯಲ್ಲಿ ಯಶಸ್ಸಿಗೆ 360 ಡಿಗ್ರಿ ವಿಧಾನದ ಅಗತ್ಯವಿದೆ. ಅದೇ ರೀತಿ, ದೇಶದಲ್ಲಿ ಕ್ರೀಡೆಯನ್ನು ಉತ್ತೇಜಿಸಲು ಭಾರತವು ಸಮಗ್ರ ವಿಧಾನದೊಂದಿಗೆ ಕೆಲಸ ಮಾಡುತ್ತಿದೆ. ಖೇಲೋ ಇಂಡಿಯಾ ಕಾರ್ಯಕ್ರಮವು ಅಂತಹ ಚಿಂತನೆಗೆ ಉತ್ತಮ ಉದಾಹರಣೆಯಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು.

ಅಹಮದಾಬಾದ್‌ನಲ್ಲಿ ʻಗುಜರಾತ್ ಪಂಚಾಯತ್ ಮಹಾಸಮ್ಮೇಳನʼ ಉದ್ದೇಶಿಸಿ ಮಾತನಾಡಿದ ಪ್ರಧಾನಿ

March 12th, 06:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಹ್ಮದಾಬಾದ್‌ನಲ್ಲಿ ʻಗುಜರಾತ್ ಪಂಚಾಯತ್ ಮಹಾಸಮ್ಮೇಳನʼ ಉದ್ದೇಶಿಸಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ರಾಜ್ಯದ ಎಲ್ಲಾ ಭಾಗಗಳಿಂದ ಪಂಚಾಯತ್ ರಾಜ್ ಪ್ರತಿನಿಧಿಗಳು ಭಾಗವಹಿಸಿದ್ದರು.

100 ಕೋಟಿ ಲಸಿಕೆ ಡೋಸ್ ಗಳ ನಂತರ, ಭಾರತವು ಹೊಸ ಉತ್ಸಾಹ ಮತ್ತು ಶಕ್ತಿಯೊಂದಿಗೆ ಮುಂದುವರಿಯುತ್ತಿದೆ: ಮನ್ ಕಿ ಬಾತ್ ಸಮಯದಲ್ಲಿ ಪ್ರಧಾನಿ ಮೋದಿ

October 24th, 11:30 am

ಮನ್ ಕಿ ಬಾತ್ ಸಮಯದಲ್ಲಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, 100 ಕೋಟಿಗೂ ಹೆಚ್ಚು ಲಸಿಕೆ ಪ್ರಮಾಣಗಳೊಂದಿಗೆ ದೇಶವು ಹೊಸ ಉತ್ಸಾಹ ಮತ್ತು ಶಕ್ತಿಯೊಂದಿಗೆ ಮುಂದುವರಿಯುತ್ತಿದೆ ಎಂದು ಹೇಳಿದರು. ಪ್ರತಿಯೊಬ್ಬ ಮುಂಚೂಣಿ ಕಾರ್ಯಕರ್ತರ ಉತ್ಸಾಹಭರಿತ ಪ್ರಯತ್ನಗಳನ್ನು ಅವರು ಶ್ಲಾಘಿಸಿದರು. ಪ್ರಧಾನಿ ಮೋದಿ ಅವರು ಭಾರತವನ್ನು ಒಗ್ಗೂಡಿಸುವಲ್ಲಿ ಸರ್ದಾರ್ ಪಟೇಲ್ ಅವರ ಕೊಡುಗೆಯ ಬಗ್ಗೆ ವಿವರವಾಗಿ ಮಾತನಾಡಿದರು, ಬಿರ್ಸಾ ಮುಂಡಾ ಅವರ ಶೌರ್ಯವನ್ನು ನೆನಪಿಸಿಕೊಂಡರು ಮತ್ತು ಇನ್ನಷ್ಟು ...

ಆತ್ಮನಿರ್ಭರ್ ಭಾರತ ಸ್ವಯಂಪೂರ್ಣ ಗೋವಾ ಕಾರ್ಯಕ್ರಮದ ಫಲಾನುಭವಿಗಳು ಮತ್ತು ಪಾಲುದಾರರ ಜತೆ ಸಂವಾದ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿಗಳ ಭಾಷಣ

October 23rd, 11:01 am

ಸ್ವಯಂಪೂರ್ಣ ಗೋವಾದ ಮೂಲಕ ಆತ್ಮನಿರ್ಭರ್ ಭಾರತದ ಕನಸು ಸಾಕಾರಗೊಳಿಸಿದ ಗೋವಾದ ಮಹಾಜನತೆಯನ್ನು ಸ್ವಾಗತಿಸುತ್ತೇನೆ. ನಿಮ್ಮೆಲ್ಲರ ದಣಿವರಿಯದ ಪ್ರಯತ್ನದ ಫಲವಾಗಿ, ಗೋವಾದಲ್ಲಿ ಗೋವಾ ಜನತೆಯ ನೈಜ ಅಗತ್ಯಗಳನ್ನು ಪೂರೈಸುತ್ತಿರುವುದು ನಿಜಕ್ಕೂ ಸಂತೋಷದ ಸಂಗತಿಯಾಗಿದೆ.

ʻಆತ್ಮನಿರ್ಭರ ಭಾರತ್ ಸ್ವಯಂಪೂರ್ಣ ಗೋವಾʼ ಅಭಿಯಾನದ ಫಲಾನುಭವಿಗಳು ಮತ್ತು ಪಾಲುದಾರರೊಂದಿಗೆ ಪ್ರಧಾನಮಂತ್ರಿ ಸಂವಾದ

October 23rd, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ʻಆತ್ಮನಿರ್ಭರ ಭಾರತ್ ಸ್ವಯಂಪೂರ್ಣ ಗೋವಾʼ ಅಭಿಯಾನದ ಫಲಾನುಭವಿಗಳು ಮತ್ತು ಪಾಲುದಾರರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು.

ರಾಷ್ಟ್ರವನ್ನುದ್ದೇಶಿಸಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಕನ್ನಡ ಭಾಷಾಂತರ

October 22nd, 10:02 am

ನಿನ್ನೆ, ಅಕ್ಟೋಬರ್ 21 ರಂದು, ಭಾರತವು ಒಂದು ಶತಕೋಟಿ, ಅಂದರೆ, 100 ಕೋಟಿ ಲಸಿಕೆ ಪ್ರಮಾಣಗಳ ಕಷ್ಟಕರವಾದ ಆದರೆ ಅಸಾಧಾರಣ ಗುರಿಯನ್ನು ಸಾಧಿಸಿತು. ಈ ಸಾಧನೆಯ ಹಿಂದೆ 130 ಕೋಟಿ ದೇಶವಾಸಿಗಳ ಕರ್ತವ್ಯವಿದೆ, ಆದ್ದರಿಂದ ಈ ಯಶಸ್ಸು ಭಾರತದ ಯಶಸ್ಸು, ಪ್ರತಿಯೊಬ್ಬ ದೇಶವಾಸಿಗಳ ಯಶಸ್ಸು. ಇದಕ್ಕಾಗಿ ಎಲ್ಲ ದೇಶವಾಸಿಗಳನ್ನು ನಾನು ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ.

ದೇಶ 100 ಕೋಟಿ ಲಸಿಕೆ ಮೈಲಿಗಲ್ಲು ಸಾಧಿಸಿದ್ದಕ್ಕಾಗಿ ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡಿದ ಪ್ರಧಾನಮಂತ್ರಿ

October 22nd, 10:00 am

ಭಾರತ 100 ಕೋಟಿ ಡೋಸ್‌ ಲಸಿಕೆ ಮೈಲಿಗಲ್ಲು ಸಾಧಿಸಿದ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಷ್ಟ್ರದ ಜನತೆಯನ್ನು ಉದ್ದೇಶಿಸಿ ಮಾತನಾಡಿದರು.

100 ಕೋಟಿ ಲಸಿಕೆ ಮೈಲುಗಲ್ಲು ಸಾಧನೆ ಹಿನ್ನೆಲೆಯಲ್ಲಿ ವೈದ್ಯರು ಮತ್ತು ದಾದಿಯರಿಗೆ ಕೃತಜ್ಞತೆ ಸಲ್ಲಿಸಿದ ಪ್ರಧಾನಿ

October 21st, 11:59 am

ಭಾರತವು 100 ಕೋಟಿ ಲಸಿಕೆ ಮೈಲುಗಲ್ಲು ಸಾಧಿಸಲು ಶ್ರಮಿಸಿದ ವೈದ್ಯರು, ದಾದಿಯರು ಮತ್ತು ಈ ಸಾಧನೆಯ ಹಿಂದಿರುವ ಎಲ್ಲರಿಗೂ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.

"ಮಾನವ ಹಕ್ಕುಗಳ ಅತಿದೊಡ್ಡ ಉಲ್ಲಂಘನೆಯು ರಾಜಕೀಯ ದೃಷ್ಟಿಕೋನದಿಂದ ನೋಡಿದಾಗ ನಡೆಯುತ್ತದೆ: ಪ್ರಧಾನಿ "

October 12th, 11:09 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 28 ನೇ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಸಂಸ್ಥಾಪನಾ ದಿನ (ಎನ್.ಎಚ್.ಆರ್.ಸಿ)ದ ಕಾರ್ಯಕ್ರಮದಲ್ಲಿ ವಿಡಿಯೋ ಕಾನ್ಪರೆನ್ಸ್ ಮೂಲಕ ಪಾಲ್ಗೊಂಡರು. ಸಮಾರಂಭ ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಅವರು, ಭಾರತದ ಸ್ವಾತಂತ್ರ್ಯ ಆಂದೋಲನ ಮತ್ತು ಅದರ ಇತಿಹಾಸ ಮಾನವ ಹಕ್ಕುಗಳಿಗೆ ಪ್ರಮುಖ ಸ್ಫೂರ್ತಿಯಾಗಿದೆ. ಅನ್ಯಾಯ, ದೌರ್ಜನ್ಯದ ವಿರುದ್ಧ ಒಂದು ರಾಷ್ಟ್ರ ಸಂಪೂರ್ಣ ಸಮಾಜವಾಗಿ ಎದುರಿಸಿದ್ದು, ಇದು ಭಾರತದಲ್ಲಿ ಮಾನವ ಹಕ್ಕುಗಳ ಮೌಲ್ಯವಾಗಿದೆ.

28ನೇ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್.ಎಚ್.ಆರ್.ಸಿ)ದ ಸಂಸ್ಥಾಪನಾ ದಿನ: ಕಾರ್ಯಕ್ರಮದಲ್ಲಿ ಭಾಗಿಯಾದ ಪ್ರಧಾನಮಂತ್ರಿ

October 12th, 11:08 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 28 ನೇ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಸಂಸ್ಥಾಪನಾ ದಿನ (ಎನ್.ಎಚ್.ಆರ್.ಸಿ)ದ ಕಾರ್ಯಕ್ರಮದಲ್ಲಿ ವಿಡಿಯೋ ಕಾನ್ಪರೆನ್ಸ್ ಮೂಲಕ ಪಾಲ್ಗೊಂಡರು. ಸಮಾರಂಭ ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಅವರು, ಭಾರತದ ಸ್ವಾತಂತ್ರ್ಯ ಆಂದೋಲನ ಮತ್ತು ಅದರ ಇತಿಹಾಸ ಮಾನವ ಹಕ್ಕುಗಳಿಗೆ ಪ್ರಮುಖ ಸ್ಫೂರ್ತಿಯಾಗಿದೆ. ಅನ್ಯಾಯ, ದೌರ್ಜನ್ಯದ ವಿರುದ್ಧ ಒಂದು ರಾಷ್ಟ್ರ ಸಂಪೂರ್ಣ ಸಮಾಜವಾಗಿ ಎದುರಿಸಿದ್ದು, ಇದು ಭಾರತದಲ್ಲಿ ಮಾನವ ಹಕ್ಕುಗಳ ಮೌಲ್ಯವಾಗಿದೆ. ಶತಮಾನಗಳಿಂದಲೂ ನಾವು ನಮ್ಮ ಹಕ್ಕುಗಳಿಗಾಗಿ ಹೋರಾಟ ಮಾಡುತ್ತಲೇ ಬಂದಿದ್ದೇವೆ. ಮೊದಲ ವಿಶ್ವಯುದ್ಧದ ಸಂದರ್ಭದಲ್ಲಿ ಇಡೀ ಜಗತ್ತಿನಲ್ಲಿ ಹಿಂಸಾಚಾರ ಆವರಿಸಿರುವಾಗ ಭಾರತ ಇಡೀ ಜಗತ್ತಿಗೆ ಹಕ್ಕುಗಳು ಮತ್ತು ಅಹಿಂಸೆ ಪಥವನ್ನು ಅನುಸರಿಸುವಂತೆ ಸಲಹೆ ಮಾಡಿತು ಎಂದರು.

ಎಚ್ಸಿಡಬ್ಲ್ಯೂಎಸ್ ಮತ್ತು ಗೋವಾದಲ್ಲಿ ಕೋವಿಡ್ ಲಸಿಕೆ ಕಾರ್ಯಕ್ರಮದ ಫಲಾನುಭವಿಗಳ ಜೊತೆಗಿನ ಸಂವಾದದ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಭಾಷಣ

September 18th, 10:31 am

ಗೋವಾದ ಶಕ್ತಿಯುತ ಮತ್ತು ಜನಪ್ರಿಯ ಮುಖ್ಯಮಂತ್ರಿಯವರಾಧ ಶ್ರೀ ಪ್ರಮೋದ್ ಸಾವಂತ್ ಜೀ, ಕೇಂದ್ರ ಸಚಿವ ಸಂಪುಟದಲ್ಲಿ ನನ್ನ ಸಹೋದ್ಯೋಗಿ ಮತ್ತು ಗೋವಾದ ಪುತ್ರ ಶ್ರೀಪಾದ್ ನಾಯಕ್ ಜೀ, ಕೇಂದ್ರ ಸರ್ಕಾರದ ಮಂತ್ರಿಗಳ ಮಂಡಳಿಯಲ್ಲಿ ನನ್ನ ಸಹೋದ್ಯೋಗಿಯಾದ ಡಾ. ಭಾರತಿ ಪ್ರವೀಣ್ ಪವಾರ್ ಜೀ, ಗೋವಾದ ಎಲ್ಲಾ ಮಂತ್ರಿಗಳು, ಸಂಸದರು ಮತ್ತು ಶಾಸಕರು, ಇತರ ಸಾರ್ವಜನಿಕ ಪ್ರತಿನಿಧಿಗಳು, ಎಲ್ಲಾ ಕೊರೊನಾ ಯೋಧರು ಮತ್ತು ಸಹೋದರ ಸಹೋದರಿಯರೆ !

ಗೋವಾದಲ್ಲಿ ಆರೋಗ್ಯ ಕಾರ್ಯಕರ್ತರು ಮತ್ತು ಕೋವಿಡ್ ಲಸಿಕೆ ಕಾರ್ಯಕ್ರಮದ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದ ಪ್ರಧಾನಿ

September 18th, 10:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೋವಾದ ಆರೋಗ್ಯ ಕಾರ್ಯಕರ್ತರು ಮತ್ತು ಕೋವಿಡ್ ಲಸಿಕೆ ಕಾರ್ಯಕ್ರಮದ ಫಲಾನುಭವಿಗಳೊಂದಿಗೆ ವಿಡಿಯೊ ಕಾನ್ಫರೆನ್ಸ್‌ ಮೂಲಕ ಸಂವಾದ ನಡೆಸಿದರು. ರಾಜ್ಯದ ಎಲ್ಲಾ ಅರ್ಹ ವಯಸ್ಕ ಜನತೆಗೆ ಮೊದಲ ಡೋಸ್ ಲಸಿಕೆ ನೀಡಿಕೆಯನ್ನು ಶೇ.100ರಷ್ಟು ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಈ ಸಂವಾದ ಏರ್ಪಡಿಸಲಾಗಿತ್ತು.

ಗೋವಾದಲ್ಲಿ ಕೋವಿಡ್ ಲಸಿಕಾ ಕಾರ್ಯಕ್ರಮದ ಆರೋಗ್ಯ ಕಾರ್ಯಕರ್ತರು ಮತ್ತು ಫಲಾನುಭವಿಗಳೊಂದಿಗೆ ಸೆಪ್ಟೆಂಬರ್ 18 ರಂದು ಪ್ರಧಾನಮಂತ್ರಿ ಸಂವಾದ

September 17th, 04:42 pm

ಗೋವಾದಲ್ಲಿ ವಯಸ್ಕ ಜನರಿಗೆ 100% ರಷ್ಟು ಮೊದಲ ಡೋಸ್ ಕೋವಿಡ್ ಲಸಿಕೆ ಹಾಕಿರುವ ಹಿನ್ನೆಲೆಯಲ್ಲಿ 2021, ಸೆಪ್ಟೆಂಬರ್ 18 ರಂದು ಬೆಳಿಗ್ಗೆ 10.30 ಕ್ಕೆ ಕೋವಿಡ್ ಲಸಿಕಾ ಕಾರ್ಯಕ್ರಮದ ಕಾರ್ಯಕರ್ತರು ಮತ್ತು ಫಲಾನುಭವಿಗಳೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಪರೆನ್ಸ್ ಮೂಲಕ ಸಂವಾದ ನಡೆಸಲಿದ್ದಾರೆ.

ಹಿಮಾಚಲ ಪ್ರದೇಶದ ಆರೋಗ್ಯ ಕಾರ್ಯಕರ್ತರು ಮತ್ತು ಕೋವಿಡ್ ಲಸಿಕಾ ಫಲಾನುಭವಿಗಳ ಜೊತೆ ಪ್ರಧಾನ ಮಂತ್ರಿಗಳ ಸಂವಾದ

September 06th, 11:01 am

ಹಿಮಾಚಲ ಪ್ರದೇಶವು ಇಂದು ಪ್ರಧಾನ ಸೇವಕನಾಗಿ ಮಾತ್ರವಲ್ಲ ಕುಟುಂಬದ ಸದಸ್ಯನಾಗಿ ನನಗೆ ಹೆಮ್ಮೆಯ ಅವಕಾಶವನ್ನು ಒದಗಿಸಿಕೊಟ್ಟಿದೆ. ಹಿಮಾಚಲವು ಸಣ್ಣ ಸೌಲಭ್ಯಗಳಿಗಾಗಿ, ಅವಕಾಶಗಳಿಗಾಗಿ ಹೋರಾಟ ಮಾಡುತ್ತಿದ್ದುದನ್ನು ನಾನು ನೋಡಿದ್ದೆ, ಮತ್ತು ಇಂದು ಹಿಮಾಚಲ ಪ್ರದೇಶವು ಅಭಿವೃದ್ಧಿಯ ಕಥೆ ಬರೆಯುತ್ತಿರುವುದನ್ನೂ ನೋಡುತ್ತಿದ್ದೇನೆ. ಇದೆಲ್ಲ ಸಾಧ್ಯವಾಗಿರುವುದು ದೇವತೆಗಳ ಆಶೀರ್ವಾದದಿಂದ, ಹಿಮಾಚಲ ಪ್ರದೇಶ ಸರಕಾರದ ಪರಿಶ್ರಮದಿಂದ ಮತ್ತು ಹಿಮಾಚಲದ ಜನತೆಯ ಜಾಗೃತಿಯಿಂದ. ನನಗೆ ಸಂವಹನ ನಡೆಸಲು ಅವಕಾಶ ಮಾಡಿಕೊಟ್ಟಂತಹ ಎಲ್ಲರಿಗೂ ನಾನು ನನ್ನ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಮತ್ತು ಇಡೀ ತಂಡಕ್ಕೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ನಿಮ್ಮೆಲ್ಲರಿಗೂ ಶುಭವಾಗಲಿ!!

ಹಿಮಾಚಲ ಪ್ರದೇಶದ ಕೋವಿಡ್ ಲಸಿಕೆ ಕಾರ್ಯಕ್ರಮದ ಫಲಾನುಭವಿಗಳು ಮತ್ತು ಆರೋಗ್ಯ ಕಾರ್ಯಕರ್ತರೊಂದಿಗೆ ಸಂವಾದ ನಡೆಸಿದ ಪ್ರಧಾನಿ

September 06th, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹಿಮಾಚಲ ಪ್ರದೇಶದ ಕೋವಿಡ್ ಲಸಿಕೆ ಕಾರ್ಯಕ್ರಮದ ಆರೋಗ್ಯ ಕಾರ್ಯಕರ್ತರು ಮತ್ತು ಫಲಾನುಭವಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು. ರಾಜ್ಯಪಾಲರು, ಮುಖ್ಯಮಂತ್ರಿಗಳು, ಕೇಂದ್ರ ಸಚಿವರಾದ ಶ್ರೀ ಜೆ.ಪಿ. ನಡ್ಡಾ, ಶ್ರೀ ಅನುರಾಗ್ ಸಿಂಗ್ ಠಾಕೂರ್; ಸಂಸದರು, ಶಾಸಕರು, ಪಂಚಾಯತ್ ನಾಯಕರು ಸೇರಿದಂತೆ ಇತರರು ಈ ಸಂದರ್ಭದಲ್ಲಿ ಹಾಜರಿದ್ದರು.

IPS Probationers interact with PM Modi

July 31st, 11:02 am

PM Narendra Modi had a lively interaction with the Probationers of Indian Police Service. The interaction with the Officer Trainees had a spontaneous air and the Prime Minister went beyond the official aspects of the Service to discuss the aspirations and dreams of the new generation of police officers.

ಸರ್ದಾರ್ ವಲ್ಲಭಭಾಯಿ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯಲ್ಲಿ ಐ.ಪಿ.ಎಸ್. ಪ್ರೊಬೆಶನರಿಗಳನ್ನು ಉದ್ದೇಶಿಸಿ ಪ್ರಧಾನ ಮಂತ್ರಿ ಅವರ ಭಾಷಣ

July 31st, 11:01 am

ನಿಮ್ಮೆಲ್ಲರೊಂದಿಗೆ ಮಾತನಾಡುವುದು ನನಗೆ ಆನಂದದ ಸಂಗತಿ. ಪ್ರತೀ ವರ್ಷ ನಿಮ್ಮಂತಹ ಯುವ ಮಿತ್ರರ ಜೊತೆ ಸಂವಾದ ನಡೆಸಬೇಕು ಎನ್ನುವುದು ನನ್ನ ಆಶಯ. ಇದರಿಂದ ನಿಮ್ಮ ಚಿಂತನೆಗಳನ್ನು ತಿಳಿದುಕೊಳ್ಳಲು ಸಹಾಯವಾಗುತ್ತದೆ. ನಿಮ್ಮ ಮಾತುಗಳು, ಪ್ರಶ್ನೆಗಳು, ಮತ್ತು ವಿಚಾರ ಮಾಡುವ ಗುಣ ಭವಿಷ್ಯದ ಸವಾಲುಗಳನ್ನು ನಿಭಾಯಿಸಲು ನನಗೂ ಸಹಾಯ ಮಾಡುತ್ತದೆ.

ಸರ್ದಾರ್ ವಲ್ಲಭಭಾಯ್ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯ ಐಪಿಎಸ್ ಪ್ರೊಬೇಷನರಿ ಅಧಿಕಾರಿಗಳೊಂದಿಗೆ ಪ್ರಧಾನಮಂತ್ರಿ ಸಂವಾದ

July 31st, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಸರ್ದಾರ್ ವಲ್ಲಭಭಾಯ್ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯ ಐಪಿಎಸ್ ಪ್ರಶಿಕ್ಷಣಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು. ಅವರು ತರಬೇತಿಯಲ್ಲಿರುವ ಅಧಿಕಾರಿಗಳೊಂದಿಗೆ ಸಂವಾದ ನಡೆಸಿದರು. ಕೇಂದ್ರ ಗೃಹ ಸಚಿವ ಶ್ರೀ ಅಮಿತ್ ಷಾ ಮತ್ತು ಗೃಹ ಖಾತೆ ರಾಜ್ಯ ಸಚಿವ ಶ್ರೀ ನಿತ್ಯಾನಂದ ರೈ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಕೊರೋನ ಅವಧಿಯು ಕೌಶಲ್ಯ, ಮರು ಕೌಶಲ್ಯ ಮತ್ತು ಕೌಶಲ್ಯದ ಮಹತ್ವವನ್ನು ಸಾಬೀತುಪಡಿಸಿದೆ: ಪ್ರಧಾನಿ

June 18th, 09:45 am

ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ‘ಕೋವಿಡ್ 19 ಮುಂಚೂಣಿ ಕಾರ್ಯಕರ್ತರ ಸಮಗ್ರ ತರಬೇತಿ ಕಾರ್ಯಕ್ರಮವನ್ನು’ ಇಂದು ಪ್ರಾರಂಭಿಸಿದರು. ಈ ಸಂದರ್ಭದಲ್ಲಿ ಪ್ರಧಾನಿ ಮೋದಿ, ನಾವು ದೇಶದಲ್ಲಿ 1 ಲಕ್ಷ ಮುಂಚೂಣಿ ಕಾರ್ಮಿಕರನ್ನು ಸಿದ್ಧಪಡಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದರು. ಪ್ರಾರಂಭದೊಂದಿಗೆ, ಇದು 26 ರಾಜ್ಯಗಳಲ್ಲಿ ವ್ಯಾಪಿಸಿರುವ 111 ತರಬೇತಿ ಕೇಂದ್ರಗಳಲ್ಲಿ ಕಾರ್ಯಕ್ರಮವನ್ನು ಪ್ರಾರಂಭಿಸಲಿದೆ.

ಕೋವಿಡ್‌-19 ಮುಂಚೂಣಿ ಕಾರ್ಯಕರ್ತರಿಗಾಗಿ “ವೈಯಕ್ತೀಕರಿಸಿದ ಕ್ರಾಶ್‌ ಕೋರ್ಸ್‌ʼʼ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಪ್ರಧಾನಿ

June 18th, 09:43 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 'ಕೋವಿಡ್-19 ಮುಂಚೂಣಿ ಕಾರ್ಮಿಕರಿಗಾಗಿ `ವೈಯಕ್ತೀಕರಿಸಿದ ಕ್ರ್ಯಾಶ್ ಕೋರ್ಸ್’ ಕಾರ್ಯಕ್ರಮಕ್ಕೆ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದರು. ಈ ತರಬೇತಿ ಕಾರ್ಯಕ್ರಮವನ್ನು 26 ರಾಜ್ಯಗಳಲ್ಲಿರುವ 111 ತರಬೇತಿ ಕೇಂದ್ರಗಳಲ್ಲಿ ನಡೆಸಲಾಗುವುದು. ಈ ಉಪಕ್ರಮದಲ್ಲಿ ಸುಮಾರು ಒಂದು ಲಕ್ಷ ಮುಂಚೂಣಿ ಕಾರ್ಯಕರ್ತರಿಗೆ ತರಬೇತಿ ನೀಡಲಾಗುವುದು. ಕೇಂದ್ರ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವ ಡಾ. ಮಹೇಂದ್ರ ನಾಥ್ ಪಾಂಡೆ ಸೇರಿದಂತೆ ಅನೇಕ ಕೇಂದ್ರ ಸಚಿವರು, ರಾಜ್ಯಗಳ ಸಚಿವರು, ತಜ್ಞರು ಮತ್ತು ಇತರ ಗಣ್ಯರು ಈ ಸಂದರ್ಭದಲ್ಲಿ ಹಾಜರಿದ್ದರು.