ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ ಅವರ ಭಾರತ ಭೇಟಿ ಸಂದರ್ಭದಲ್ಲಿ ಎರಡೂ ರಾಷ್ಟ್ರಗಳ ನಾಯಕರ ಮಾತುಕತೆಯ ಜಂಟಿ ಪತ್ರಿಕಾ ಹೇಳಿಕೆ

September 07th, 03:04 pm

ಗೌರವಾನ್ವಿತ ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ ಬಾಂಗ್ಲಾದೇಶದ ಪ್ರಧಾನ ಮಂತ್ರಿ ಶೇಖ್ ಹಸೀನಾ ಅವರು 2022 ಸೆಪ್ಟೆಂಬರ್ 05-08ರ ವರೆಗೆ ಭಾರತಕ್ಕೆ ಭೇಟಿ ನೀಡಿದ್ದಾರೆ. ಭಾರತ ಭೇಟಿ ಸಂದರ್ಭದಲ್ಲಿ ಬಾಂಗ್ಲಾ ಪ್ರಧಾನ ಮಂತ್ರಿ ಶೇಖ್ ಹಸೀನಾ ಅವರು ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಶ್ರೀ ಜಗದೀಪ್ ಧನಕರ್, ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್ ಮತ್ತು ಈಶಾನ್ಯ ರಾಜ್ಯಗಳ ಅಭಿವೃದ್ಧಿ ಸಚಿವ ಶ್ರೀ ಜಿ. ಕಿಶನ್ ರೆಡ್ಡಿ ಅವರನ್ನು ಭೇಟಿ ಮಾಡಿದರು. 1971ರ ಬಾಂಗ್ಲಾದೇಶ ವಿಮೋಚನಾ ಯುದ್ಧದಲ್ಲಿ ಹುತಾತ್ಮರಾದ ಮತ್ತು ಗಂಭೀರ ಗಾಯಗೊಂಡ ಭಾರತೀಯ ಸಶಸ್ತ್ರ ಪಡೆಗಳ 200 ಯೋಧರ ಕುಟುಂಬಗಳ ವಿದ್ಯಾರ್ಥಿಗಳಿಗೆ ಬಂಗಬಂಧು ಶೇಖ್ ಮುಜಿಬುರ್ ರೆಹಮಾನ್ ವಿದ್ಯಾರ್ಥಿವೇತನ ಅನಾವರಣ ಕಾರ್ಯಕ್ರಮದಲ್ಲಿ ಹಸೀನಾ ಅವರು ಪಾಲ್ಗೊಂಡಿದ್ದರು. ಅಲ್ಲದೆ, ಭಾರತ ಮತ್ತು ಬಾಂಗ್ಲಾದೇಶದ ಉದ್ಯಮ ಸಮುದಾಯ 2022 ಸೆಪ್ಟೆಂಬರ್ 7ರಂದು ಆಯೋಜಿಸಿದ್ದ ಉದ್ಯಮ ಮತ್ತು ವ್ಯವಹಾರ ಕಾರ್ಯಕ್ರಮ ಉದ್ದೇಶಿಸಿ ಅವರು ಭಾಷಣ ಮಾಡಿದರು.

ಭಾರತ ಸರ್ಕಾರದ ಉನ್ನತ ವೈಜ್ಞಾನಿಕ ಅಧಿಕಾರಿಗಳನ್ನು ಭೇಟಿ ಮಾಡಿದ ಪ್ರಧಾನಿ

July 19th, 11:41 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಂಗಳವಾರ ಭಾರತ ಸರ್ಕಾರದ ಉನ್ನತ ವೈಜ್ಞಾನಿಕ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಇವರಲ್ಲಿ ನೀತಿ ಆಯೋಗದ ಸದಸ್ಯ ಡಾ. ವಿ.ಕೆ. ಸಾರಸ್ವತ್; ಭಾರತ ಸರ್ಕಾರದ ಪ್ರಧಾನ ವೈಜ್ಞಾನಿಕ ಸಲಹೆಗಾರರಾದ ಡಾ. ಆರ್. ಚಿದಂಬರಂ; ಮತ್ತು ಕೇಂದ್ರ ಸರ್ಕಾರದ ವೈಜ್ಞಾನಿಕ ಇಲಾಖೆಗೆ ಸಂಬಂಧಿಸಿದ ಕಾರ್ಯದರ್ಶಿಗಳು ಸೇರಿದ್ದರು. ಅಧಿಕಾರಿಗಳು ಪ್ರಧಾನಮಂತ್ರಿಯವರಿಗೆ ವೈಜ್ಞಾನಿಕ ಸಂಶೋಧನೆಯ ವಿವಿಧ ಕ್ಷೇತ್ರಗಳ ಪ್ರಗತಿಯ ಬಗ್ಗೆ ವಿವರಿಸಿದರು.

Now it is time to work for economic freedom: PM at India-SA Business Meet

July 08th, 07:52 pm



PM chairs meeting of CSIR Society

April 06th, 10:04 pm