The bond between India & Guyana is of soil, of sweat, of hard work: PM Modi
November 21st, 08:00 pm
Prime Minister Shri Narendra Modi addressed the National Assembly of the Parliament of Guyana today. He is the first Indian Prime Minister to do so. A special session of the Parliament was convened by Hon’ble Speaker Mr. Manzoor Nadir for the address.ಗಯಾನಾ ಸಂಸತ್ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
November 21st, 07:50 pm
ಗಯಾನಾ ಸಂಸತ್ತಿನ ರಾಷ್ಟ್ರೀಯ ಸಭೆಯನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಭಾಷಣ ಮಾಡಿದರು. ಅಲ್ಲಿನ ಸಂಸತ್ ಉದ್ದೇಶಿಸಿ ಮಾತನಾಡಿದ ಭಾರತದ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಪ್ರಧಾನಮಂತ್ರಿಗಳ ಭಾಷಣಕ್ಕಾಗಿ ಮಾನ್ಯ ಸ್ಪೀಕರ್ ಶ್ರೀ ಮಂಜೂರ್ ನಾದಿರ್ ಅವರು ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆದಿದ್ದರು.ಎನ್ ಡಿ ಟಿ ವಿ ವಿಶ್ವ ಶೃಂಗಸಭೆಯಲ್ಲಿ ಪ್ರಧಾನಮಂತ್ರಿಯವರ ಭಾಷಣ
October 21st, 10:25 am
ನಾವು ಹಿಂದಿನ 4-5 ವರ್ಷಗಳ ಚರ್ಚೆಗಳನ್ನು ನೋಡಿದರೆ ಬಹುತೇಕ ಚರ್ಚೆಗಳಲ್ಲಿ ಒಂದು ಸಾಮಾನ್ಯ ವಿಷಯವಿದೆ ಎಂಬುದನ್ನು ಗಮನಿಸಬಹುದು. ಅದುವೇ ಭವಿಷ್ಯದ ಬಗ್ಗೆ ಕಾಳಜಿ/ಕಳವಳ. ಕೊರೊನಾ ಸಾಂಕ್ರಾಮಿಕದ ಅವಧಿಯಲ್ಲಿ ಜಾಗತಿಕ ಸಾಂಕ್ರಾಮಿಕ ರೋಗವನ್ನು ಹೇಗೆ ನಿಭಾಯಿಸುವುದು ಎಂಬ ಚಿಂತೆ ಇತ್ತು. ಕೋವಿಡ್ ಹರಡುತ್ತಿದ್ದಂತೆ, ಜಾಗತಿಕ ಆರ್ಥಿಕತೆಯ ಬಗ್ಗೆ ಕಳವಳಗಳು ಹೆಚ್ಚಾದವು. ಸಾಂಕ್ರಾಮಿಕ ರೋಗವು ಹಣದುಬ್ಬರ, ನಿರುದ್ಯೋಗ ಮತ್ತು ಹವಾಮಾನ ಬದಲಾವಣೆಯ ಬಗ್ಗೆ ಚಿಂತೆಗಳನ್ನು ಹೆಚ್ಚಿಸಿತು. ನಂತರ, ಭುಗಿಲೆದ್ದ ಯುದ್ಧಗಳು ಈ ಕುರಿತಾದ ಚರ್ಚೆಗಳು ಮತ್ತು ಆತಂಕಗಳನ್ನು ತೀವ್ರಗೊಳಿಸಿತು. ಜಾಗತಿಕ ಪೂರೈಕೆ ಸರಪಳಿಗೆ ಅಡೆತಡೆಗಳು ಮತ್ತು ಅನೇಕ ಅಮಾಯಕ ಜೀವಿಗಳು ಪ್ರಾಣ ಕಳೆದುಕೊಳ್ಳಬೇಕಾದ ಬಗ್ಗೆ ಆತಂಕ ಉಂಟಾಗಿತ್ತು. ಜಾಗತಿಕ ಶೃಂಗಸಭೆಗಳು ಮತ್ತು ಉಪನ್ಯಾಸಗಳಲ್ಲಿ ಉದ್ವಿಗ್ನತೆಗಳು, ಸಂಘರ್ಷಗಳು ಮತ್ತು ಒತ್ತಡಗಳು ಚರ್ಚಾ ವಿಷಯಗಳಾದವು. ಜಾಗತಿಕವಾಗಿ ಪ್ರಸ್ತುತದ ಚರ್ಚೆಗಳು ಈ ಕಳವಳದ ಬಗ್ಗೆ ಕೇಂದ್ರೀಕೃತವಾಗಿರುವಾಗ, ಭಾರತದಲ್ಲಿ ಯಾವ ರೀತಿಯ ಚಿಂತನೆ ನಡೆಯುತ್ತಿದೆ? ಇದು ಜಾಗತಿಕ ಚಿಂತೆಗೆ ವ್ಯತಿರಿಕ್ತವಾಗಿದೆ. ಭಾರತದಲ್ಲಿ ನಾವು ಈ ಜಾಗತಿಕ ಪ್ರಕ್ಷುಬ್ಧತೆಯ ನಡುವೆಯೂ “ಭಾರತೀಯ ಶತಮಾನ”ದ ಬಗ್ಗೆ ಮಾತನಾಡುತ್ತಿದ್ದೇವೆ. ಭಾರತ ಆಶಾಕಿರಣವಾಗಿದೆ. ಜಗತ್ತು ಚಿಂತೆಯಲ್ಲಿ ಮುಳುಗಿರುವಾಗ, ಭಾರತವು ಭರವಸೆಯನ್ನು ಹರಡುತ್ತಿದೆ. ಹಾಗೆಂದ ಮಾತ್ರಕ್ಕೆ ಜಾಗತಿಕ ಸನ್ನಿವೇಶಗಳು ನಮ್ಮ ಮೇಲೆ ಪರಿಣಾಮ ಬೀರುವುದಿಲ್ಲ ಎಂದಲ್ಲ – ಅದು ಪ್ರಭಾವವನ್ನು ಖಂಡಿತವಾಗಿಯೂ ಬೀರಲಿದೆ. ಭಾರತವು ಸವಾಲುಗಳನ್ನು ಎದುರಿಸುತ್ತಿದೆ, ಆದರೆ ಇಲ್ಲಿ ಸಕಾರಾತ್ಮಕತೆಯ ಭಾವವಿದೆ, ನಾವೆಲ್ಲರೂ ಅದರ ಅನುಭೂತಿ ಪಡೆಯಬಹುದು. ಹೀಗಾಗಿ 'ದಿ ಇಂಡಿಯನ್ ಸೆಂಚುರಿ – (ಭಾರತದ ಶತಮಾನದ)' ದ ಬಗ್ಗೆ ಮಾತು ಕೇಳಿಬರುತ್ತಿದೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ಎನ್ ಡಿ ಟಿ ವಿ ವಿಶ್ವ ಶೃಂಗಸಭೆ 2024 ಅನ್ನು ಉದ್ದೇಶಿಸಿ ಮಾತನಾಡಿದರು
October 21st, 10:16 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ಎನ್ ಡಿ ಟಿ ವಿ ವಿಶ್ವ ಶೃಂಗಸಭೆ 2024 ಅನ್ನು ಉದ್ದೇಶಿಸಿ ಮಾತನಾಡಿದರು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು ಎಲ್ಲಾ ಗಣ್ಯರನ್ನು ಸ್ವಾಗತಿಸಿದರು ಮತ್ತು ಶೃಂಗಸಭೆಯಲ್ಲಿ ಹಲವು ವಿಷಯಗಳನ್ನು ಕುರಿತು ಚರ್ಚೆಗಳು ನಡೆಯಲಿವೆ ಎಂದು ಹೇಳಿದರು. ತಮ್ಮ ಅಭಿಪ್ರಾಯಗಳನ್ನು ಮಂಡಿಸುವ ವಿವಿಧ ವಲಯಗಳ ಜಾಗತಿಕ ನಾಯಕರ ಉಪಸ್ಥಿತಿಯನ್ನು ಅವರು ಶ್ಲಾಘಿಸಿದರು.ಅಂತಾರಾಷ್ಟ್ರೀಯ ಅಭಿಧಮ್ಮ ದಿನ ಉದ್ಘಾಟಿಸಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಕನ್ನಡ ಅನುವಾದ
October 17th, 10:05 am
ಸಂಸ್ಕೃತಿ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಜೀ, ಅಲ್ಪ ಸಂಖ್ಯಾತ ವ್ಯವಹಾರಗಳ ಸಚಿವರಾದ ಶ್ರೀ ಕಿರೆನ್ ರಿಜಿಜು ಜೀ, ಬಂದಂತ್ ರಾಹುಲ್ ಬೊಧಿ ಮಹಥೆರೋ ಜೀ, ವೆನವರಬಲ್ ಜುಂಗ್ ಚುಪ್ ಚೋಡೆನ್ ಜೀ, ಮಹಾಸಂಘದ ಎಲ್ಲಾ ಗಣ್ಯ ಸದಸ್ಯರೇ, ರಾಯಭಾರಿ ಸಮುದಾಯದ ಸದಸ್ಯರೇ,. ಬೌದ್ಧ ಚಿಂತಕರೇ, ಬೌದ್ಧ ಧರ್ಮದ ಅನುಯಾಯಿಗಳೇ, ಮಹಿಳೆಯರೇ ಮತ್ತು ಮಹನೀಯರೇ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಂತಾರಾಷ್ಟ್ರೀಯ ಅಭಿಧಮ್ಮ ದಿವಸ್ ಆಚರಣೆ ಮತ್ತು ಪಾಲಿಯನ್ನು ಶಾಸ್ತ್ರೀಯ ಭಾಷೆ ಎಂದು ಗುರುತಿಸುವ ಸಮಾರಂಭದಲ್ಲಿ ಭಾಷಣ ಮಾಡಿದರು
October 17th, 10:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ವಿಜ್ಞಾನ ಭವನದಲ್ಲಿ ಅಂತಾರಾಷ್ಟ್ರೀಯ ಅಭಿಧಮ್ಮ ದಿವಸ್ ಆಚರಣೆ ಮತ್ತು ಪಾಲಿಯನ್ನು ಶಾಸ್ತ್ರೀಯ ಭಾಷೆಯಾಗಿ ಗುರುತಿಸುವ ಸಮಾರಂಭದಲ್ಲಿ ಭಾಷಣ ಮಾಡಿದರು. ಅಭಿಧಮ್ಮ ದಿನವನ್ನು ಅಭಿಧಮ್ಮನಿಗೆ ಕಲಿಸಿದ ನಂತರ ಭಗವಾನ್ ಬುದ್ಧನು ಆಕಾಶಲೋಕದಿಂದ ಇಳಿದದ್ದನ್ನು ಸ್ಮರಿಸಲಾಗುತ್ತದೆ. ಪಾಲಿಯನ್ನು ಶಾಸ್ತ್ರೀಯ ಭಾಷೆಯಾಗಿ ಇತ್ತೀಚೆಗೆ ಗುರುತಿಸಿರುವುದು ಈ ವರ್ಷದ ಅಭಿಧಮ್ಮ ದಿವಸ್ ಆಚರಣೆಯ ಮಹತ್ವವನ್ನು ಹೆಚ್ಚಿಸುತ್ತದೆ, ಏಕೆಂದರೆ ಭಗವಾನ್ ಬುದ್ಧನ ಅಭಿಧಮ್ಮದ ಬೋಧನೆಗಳು ಮೂಲತಃ ಪಾಲಿ ಭಾಷೆಯಲ್ಲಿ ಲಭ್ಯವಿದೆ.ಮಾಲ್ಡೀವ್ಸ್ ಅಧ್ಯಕ್ಷರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಪತ್ರಿಕಾ ಹೇಳಿಕೆಯ ಇಂಗ್ಲಿಷ್ ಅವತರಣಿಕೆ (ಅಕ್ಟೋಬರ್ 7, 2024)
October 07th, 12:25 pm
ಮೊದಲನೆಯದಾಗಿ, ನಾನು ಅಧ್ಯಕ್ಷ ಮುಯಿಝು ಮತ್ತು ಅವರ ನಿಯೋಗಕ್ಕೆ ಆತ್ಮೀಯ ಸ್ವಾಗತವನ್ನು ನೀಡಲು ಬಯಸುತ್ತೇನೆಆಸ್ಟ್ರೇಲಿಯಾ, ಭಾರತ, ಜಪಾನ್ ಮತ್ತು ಅಮೆರಿಕ ನಾಯಕರಿಂದ ವಿಲ್ಮಿಂಗ್ಟನ್ ಘೋಷಣೆ ಜಂಟಿ ಹೇಳಿಕೆ
September 22nd, 11:51 am
ಇಂದು, ನಾವು-ಆಸ್ಟ್ರೇಲಿಯದ ಪ್ರಧಾನಿ ಆಂಥೋನಿ ಅಲ್ಬನೀಸ್, ಭಾರತದ ಪ್ರಧಾನಿ ನರೇಂದ್ರ ಮೋದಿ, ಜಪಾನ್‌ನ ಪ್ರಧಾನಿ ಕಿಶಿದಾ ಫ್ಯೂಮಿಯೊ ಮತ್ತು ಅಮೆರಿಕ ಅಧ್ಯಕ್ಷ ಜೋಸೆಫ್ ಆರ್. ಬಿಡೆನ್, ಅವರು ನಾಲ್ಕನೇ ಕ್ವಾಡ್ ನಾಯಕರ ಶೃಂಗಸಭೆ ಸಂದರ್ಭದಲ್ಲಿ ಭೇಟಿಯಾದರು. ವಿಲ್ಮಿಂಗ್ಟನ್‌ನ ಡೆಲವೇರ್‌ನಲ್ಲಿ ಅಧ್ಯಕ್ಷ ಬಿಡೆನ್ ಈ ಸಭೆಯನ್ನು ಆಯೋಜಿಸಿದ್ದರು.ʼಜಾಗತಿಕ ದಕ್ಷಿಣ ಶೃಂಗಸಭೆಯ ಮೂರನೇ ಧ್ವನಿʼಯ ನಾಯಕರ ಸಭೆಯ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಮಂತ್ರಿಗಳ ಉದ್ಘಾಟನಾ ಭಾಷಣದ ಇಂಗ್ಲಿಷ್ ಅವತರಿಣಿಕೆ
August 17th, 10:00 am
ಭಾರತದ 140 ಕೋಟಿ ಭಾರತೀಯರ ಪರವಾಗಿ ತಮ್ಮೆಲ್ಲರಿಗೂ ʼಜಾಗತಿಕ ದಕ್ಷಿಣ ಶೃಂಗಸಭೆಯ ಮೂರನೇ ಧ್ವನಿʼ ಸಮ್ಮೇಳನಕ್ಕೆ (3ನೇ ವಾಯ್ಸ್ ಆಫ್ ಗ್ಲೋಬಲ್ ಸೌತ್ ಶೃಂಗಸಭೆ) ಆತ್ಮೀಯ ಸ್ವಾಗತ. ಕಳೆದ ಎರಡು ಶೃಂಗಸಭೆಗಳಲ್ಲಿ, ನಿಮ್ಮಲ್ಲಿ ಹಲವರೊಂದಿಗೆ ನಿಕಟವಾಗಿ ಕಾರ್ಯನಿವಹಿಸುವ ಅವಕಾಶ ನನಗೆ ಒದಗಿ ಬಂದಿತ್ತು. ಈ ವರ್ಷ ಭಾರತದಲ್ಲಿ ಸಾರ್ವತ್ರಿಕ ಚುನಾವಣೆ ನಡೆದ ತರುವಾಯ ಮತ್ತೊಮ್ಮೆ ಈ ವೇದಿಕೆಯಲ್ಲಿ ನಿಮ್ಮೆಲ್ಲರೊಂದಿಗೆ ಪಾಲ್ಗೊಳ್ಳಲು ಅವಕಾಶ ಸಿಕ್ಕಿರುವುದಕ್ಕೆ ಬಹಳ ಸಂತೋಷವಾಗುತ್ತಿದೆ.ವಂಚಿತರಿಗೆ ಆದ್ಯತೆ ನೀಡುವುದೇ ಎನ್‌ಡಿಎ ಸರ್ಕಾರದ ಅಭಿವೃದ್ಧಿ ಮಾದರಿ: ಪ್ರಧಾನಿ ಮೋದಿ
July 13th, 06:00 pm
ಪ್ರಧಾನಿ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ಮುಂಬೈನಲ್ಲಿ 29,400 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ರಸ್ತೆ, ರೈಲ್ವೆ ಮತ್ತು ಬಂದರು ವಲಯಕ್ಕೆ ಸಂಬಂಧಿಸಿದ ಬಹು ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಮುಂಬೈ ಮತ್ತು ಹತ್ತಿರದ ಪ್ರದೇಶಗಳ ನಡುವೆ ರಸ್ತೆ ಮತ್ತು ರೈಲು ಸಂಪರ್ಕವನ್ನು ಸುಧಾರಿಸಲು 29,400 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಬಹುವಿಧದ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಸಮರ್ಪಿಸುವ ಅವಕಾಶ ಸಿಕ್ಕಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು.ಮಹಾರಾಷ್ಟ್ರದ ಮುಂಬೈಯಲ್ಲಿ 29,400 ಕೋಟಿ ರೂ.ಗಳಿಗೂ ಅಧಿಕ ಮೌಲ್ಯದ ಹಲವು ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಮಂತ್ರಿ
July 13th, 05:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಹಾರಾಷ್ಟ್ರದ ಮುಂಬೈಯಲ್ಲಿ 29,400 ಕೋಟಿ ರೂ.ಗಳಿಗೂ ಅಧಿಕ ಮೌಲ್ಯದ ರಸ್ತೆ, ರೈಲ್ವೆ ಮತ್ತು ಬಂದರು ವಲಯಕ್ಕೆ ಸಂಬಂಧಿಸಿದ ಹಲವು ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು.60 ವರ್ಷ ಆಡಳಿತ ನಡೆಸಿದ ಕಾಂಗ್ರೆಸ್‌ನ ಸ್ಥಿತಿ ಚಿಂತಾಜನಕವಾಗಿದೆ: ಸಬರಕಾಂತದಲ್ಲಿ ಪ್ರಧಾನಿ ಮೋದಿ
May 01st, 04:15 pm
ಗುಜರಾತ್ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಗುಜರಾತ್‌ನ ಸಬರಕಾಂತದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದರು. ಪ್ರಧಾನಿ ಮೋದಿಯವರು ತಮ್ಮ ಭಾಷಣವನ್ನು ಆರಂಭಿಸಿದ್ದು, ಕೇಂದ್ರ ಸರ್ಕಾರದಲ್ಲಿ ಮೂರನೇ ಅವಧಿಗೆ ಆಶೀರ್ವಾದ ಪಡೆಯುವ ಅವಕಾಶಕ್ಕಾಗಿ ಕೃತಜ್ಞತೆ ವ್ಯಕ್ತಪಡಿಸುವ ಮೂಲಕ ತಮ್ಮ ರಾಜಕೀಯ ಪ್ರಯಾಣದಲ್ಲಿ ಗುಜರಾತ್‌ನ ಮಹತ್ವವನ್ನು ಒತ್ತಿ ಹೇಳಿದರು.ಪ್ರಧಾನಿ ಮೋದಿ ಅವರು ಗುಜರಾತ್‌ನ ಬನಸ್ಕಾಂತ ಮತ್ತು ಸಬರಕಾಂತದಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದರು
May 01st, 04:00 pm
ಗುಜರಾತ್‌ನ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಗುಜರಾತ್‌ನ ಬನಸ್ಕಾಂತ ಮತ್ತು ಸಬರಕಾಂತದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದರು. ಪ್ರಧಾನಿ ಮೋದಿಯವರು ತಮ್ಮ ಭಾಷಣವನ್ನು ಆರಂಭಿಸಿದ್ದು, ಕೇಂದ್ರ ಸರ್ಕಾರದಲ್ಲಿ ಮೂರನೇ ಅವಧಿಗೆ ಆಶೀರ್ವಾದ ಪಡೆಯುವ ಅವಕಾಶಕ್ಕಾಗಿ ಕೃತಜ್ಞತೆ ವ್ಯಕ್ತಪಡಿಸುವ ಮೂಲಕ ತಮ್ಮ ರಾಜಕೀಯ ಪ್ರಯಾಣದಲ್ಲಿ ಗುಜರಾತ್‌ನ ಮಹತ್ವವನ್ನು ಒತ್ತಿ ಹೇಳಿದರು.India and Mauritius are natural partners in the field of maritime security: PM Modi
February 29th, 01:15 pm
Prime Minister Narendra Modi and Prime Minister of Mauritius, H.E. Mr Pravind Jugnauth jointly inaugurated the new Airstrip and St. James Jetty along with six community development projects at the Agalega Island in Mauritius via video conferencing today. The inauguration of these projects is a testimony to the robust and decades-old development partnership between India and Mauritius and will fulfil the demand for better connectivity between mainland Mauritius and Agalega, strengthen maritime security and foster socio-economic development.ಮಾರಿಷಸ್‌ನ ಅಗಲೇಗಾ ದ್ವೀಪದಲ್ಲಿ ಹೊಸ ʻಏರ್ ಸ್ಟ್ರಿಪ್ʼ ಮತ್ತು ʻಜೆಟ್ಟಿʼಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಮಾರಿಷಸ್ ಪ್ರಧಾನಿ ಜಂಟಿಯಾಗಿ ಉದ್ಘಾಟಿಸಿದರು
February 29th, 01:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಮಾರಿಷಸ್ ಪ್ರಧಾನಿ ಗೌರವಾನ್ವಿತ ಶ್ರೀ ಪ್ರವಿಂದ್ ಜುಗ್ನೌತ್ ಅವರು ಇಂದು ಮಾರಿಷಸ್‌ನ ಅಗಲೇಗಾ ದ್ವೀಪದಲ್ಲಿ ಹೊಸ ʻಏರ್ ಸ್ಟ್ರಿಪ್ʼ ಮತ್ತು ʻಸೇಂಟ್ ಜೇಮ್ಸ್ ಜೆಟ್ಟಿʼ ಹಾಗೂ ಆರು ಸಮುದಾಯ ಅಭಿವೃದ್ಧಿ ಯೋಜನೆಗಳನ್ನು ಜಂಟಿಯಾಗಿ ಉದ್ಘಾಟಿಸಿದರು. ಈ ಯೋಜನೆಗಳ ಉದ್ಘಾಟನೆಯು ಭಾರತ ಮತ್ತು ಮಾರಿಷಸ್ ನಡುವಿನ ದೃಢವಾದ ಹಾಗೂ ದಶಕಗಳಷ್ಟು ಹಳೆಯ ಅಭಿವೃದ್ಧಿ ಪಾಲುದಾರಿಕೆಗೆ ಸಾಕ್ಷಿಯಾಗಿದೆ. ಜೊತೆಗೆ ಮಾರಿಷಸ್ ಮತ್ತು ಅಗಲೇಗಾ ನಡುವಿನ ಉತ್ತಮ ಸಂಪರ್ಕದ ಬೇಡಿಕೆಯನ್ನು ಪೂರೈಸುತ್ತದೆ, ಕಡಲ ಭದ್ರತೆಯನ್ನು ಬಲಪಡಿಸುತ್ತದೆ ಮತ್ತು ಸಾಮಾಜಿಕ-ಆರ್ಥಿಕ ಅಭಿವೃದ್ಧಿಯನ್ನು ಉತ್ತೇಜಿಸುತ್ತದೆ. 2024ರ ಫೆಬ್ರವರಿ 12ರಂದು ಮಾರಿಷಸ್‌ನಲ್ಲಿ ಉಭಯ ನಾಯಕರು ʻಯುಪಿಐʼ ಮತ್ತು ʻರುಪೇ ಕಾರ್ಡ್ʼ ಸೇವೆಗಳಿಗೆ ಚಾಲನೆ ನೀಡಿದ ಬೆನ್ನಲ್ಲೇ ಈ ಯೋಜನೆಗಳ ಉದ್ಘಾಟನೆ ಮಹತ್ವ ಪಡೆದಿದೆ.ಕೋವಿಡ್ -19 ಸೋಂಕಿನಿಂದ ಬಳಲುತ್ತಿರುವ ಜರ್ಮನಿಯ ಚಾನ್ಸೆಲರ್ ಬುಂಡೆಸ್ಕಾಂಜ್ಲರ್ ಓಲಾಫ್ ಸ್ಕೋಲ್ಜ್: ಪ್ರಧಾನಿ ಮೋದಿ ಹಾರೈಕೆ
December 18th, 10:39 pm
ಜರ್ಮನಿಯ ಚಾನ್ಸೆಲರ್ ಬುಂಡೆಸ್ಕಾಂಜ್ಲರ್ ಓಲಾಫ್ ಸ್ಕೋಲ್ಜ್ ಅವರು ಕೋವಿಡ್ -19 ನಿಂದ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹಾರೈಸಿದ್ದಾರೆ.