ಭಾರತವು ಅನುಯಾಯಿಯಲ್ಲ, ಆದರೆ ಮೊದಲು ಚಲಿಸುವ ದೇಶ: ಬೆಂಗಳೂರಿನಲ್ಲಿ ಪ್ರಧಾನಿ ಮೋದಿ

April 20th, 04:00 pm

ಭಾರತದ ಡಿಜಿಟಲ್ ಕ್ರಾಂತಿಯಲ್ಲಿ ಬೆಂಗಳೂರಿನ ಪಾತ್ರ ಮಹತ್ವದ್ದು: ಬೆಂಗಳೂರಿನಲ್ಲಿ ಪ್ರಧಾನಿ ಮೋದಿ

ಪ್ರಧಾನಿ ಮೋದಿ ಅವರು ಕರ್ನಾಟಕದ ಚಿಕ್ಕಬಳ್ಳಾಪುರ ಮತ್ತು ಬೆಂಗಳೂರಿನಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದರು

April 20th, 03:45 pm

ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದ ಚಿಕ್ಕಬಳ್ಳಾಪುರ ಮತ್ತು ಬೆಂಗಳೂರಿನಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದರು. ರೋಮಾಂಚಕ ಗುಂಪನ್ನುದ್ದೇಶಿಸಿ ಮಾತನಾಡಿದ ಅವರು, ಎನ್‌ಡಿಎ ಸರ್ಕಾರದ ಸಾಧನೆಗಳನ್ನು ಎತ್ತಿ ತೋರಿಸಿದರು ಮತ್ತು ಭವಿಷ್ಯದ ಯೋಜನೆಗಳನ್ನು ವಿವರಿಸಿದರು.

​​​​​​​ಶ್ರೀಲಂಕಾ ಮತ್ತು ಮಾರಿಷಸ್ ನಲ್ಲಿ ಯುಪಿಐ ಸೇವೆಗಳಿಗೆ ಚಾಲನೆ ನೀಡಿದ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಹೇಳಿಕೆಗಳ ಕನ್ನಡ ಅನುವಾದ

February 12th, 01:30 pm

ಗೌರವಾನ್ವಿತ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಜೀ, ಗೌರವಾನ್ವಿತ ಪ್ರಧಾನಿ ಪ್ರವಿಂದ್ ಜುಗ್ನೌತ್ ಜೀ, ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಜೈಶಂಕರ್ ಜೀ, ಶ್ರೀಲಂಕಾ, ಮಾರಿಷಸ್ ಮತ್ತು ಭಾರತ ಕೇಂದ್ರೀಯ ಬ್ಯಾಂಕುಗಳ ಗೌರವಾನ್ವಿತ ಗವರ್ನರ್ ಗಳು ಮತ್ತು ಈ ಮಹತ್ವದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲರೂ ಗೌರವಾನ್ವಿತರೇ!

​​​​​​​ಮಾರಿಷನ್‌ ಪ್ರಧಾನಿ ಮತ್ತು ಶ್ರೀಲಂಕಾ ಅಧ್ಯಕ್ಷರ ಜೊತೆ ಜಂಟಿಯಾಗಿ ಯುಪಿಐ ಸೇವೆಗಳನ್ನು ಉದ್ಘಾಟಿಸಿದ ಪ್ರಧಾನಮಂತ್ರಿ

February 12th, 01:00 pm

‍ಶ್ರೀಲಂಕಾ ಅಧ್ಯಕ್ಷ ಶ್ರೀ ರನಿಲ್‌ ವಿಕ್ರಮಸಿಂಘೆ ಮತ್ತು ಮಾರಿಷಸ್‌ ಪ್ರಧಾನಿ ಶ್ರೀ ಪ್ರವೀಂದ್‌ ಜುಗ್ನಾಥ್‌ ಅವರೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರೀಲಂಕಾ ಮತ್ತು ಮಾರಿಷಸ್‌ ನಲ್ಲಿ ಯುನೈಫೈಡ್‌ ಪೇಮೆಂಟ್‌ ಇಂಟರ್ಪೇಸ್‌ [ಯುಪಿಐ] ಸೇವೆಗಳನ್ನು ಜಂಟಿಯಾಗಿ ಉದ್ಘಾಟಿಸಿದರು ಮತ್ತು ವಿಡಿಯೋ ಕಾನ್ಪರೆನ್ಸ್‌ ಮೂಲಕ ಮಾರಿಷಸ್‌ ನಲ್ಲಿ ರುಪೇ ಕಾರ್ಡ್‌ ಸೇವೆಗಳಿಗೆ ಚಾಲನೆ ನೀಡಿದರು.

ಜಿ20 ಡಿಜಿಟಲ್ ಆರ್ಥಿಕತೆ ಸಚಿವರ ಸಭೆಯಲ್ಲಿ ಪ್ರಧಾನಮಂತ್ರಿ ಅವರ ವಿಡಿಯೋ ಸಂದೇಶದ ಪಠ್ಯ

August 19th, 11:05 am

ಕಳೆದ ಒಂಬತ್ತು ವರ್ಷಗಳಲ್ಲಿ ಭಾರತದ ಡಿಜಿಟಲ್ ರೂಪಾಂತರವು ಅಭೂತಪೂರ್ವವಾಗಿದೆ. ಇದು 2015ರಲ್ಲಿ ನಮ್ಮ ಡಿಜಿಟಲ್ ಇಂಡಿಯಾ ಉಪಕ್ರಮವನ್ನು ಪ್ರಾರಂಭಿಸುವುದರೊಂದಿಗೆ ಆರಂಭವಾಯಿತು. ನಾವೀನ್ಯತೆಯಲ್ಲಿ ನಮ್ಮ ಅಚಲ ನಂಬಿಕೆಯಿಂದ ಇದು ಶಕ್ತಿಯುತವಾಗಿದೆ. ತ್ವರಿತ ಅನುಷ್ಠಾನಕ್ಕೆ ನಮ್ಮ ಬದ್ಧತೆಯಿಂದ ಇದು ಚಾಲಿತವಾಗಿದೆ. ಮತ್ತು, ಇದು ಯಾರನ್ನೂ ಹಿಂದೆ ಬಿಡದೆ ನಮ್ಮ ಒಳಗೊಳ್ಳುವಿಕೆಯ ಮನೋಭಾವದಿಂದ ಪ್ರೇರೇಪಿಸಲ್ಪಟ್ಟಿದೆ. ಈ ರೂಪಾಂತರದ ಪ್ರಮಾಣ, ವೇಗ ಮತ್ತು ವ್ಯಾಪ್ತಿ ಕಲ್ಪನೆಗೂ ಮೀರಿದ್ದಾಗಿದೆ. ಇಂದು, ಭಾರತವು 850 ದಶಲಕ್ಷಕ್ಕೂ ಹೆಚ್ಚು ಇಂಟರ್ನೆಟ್ ಬಳಕೆದಾರರನ್ನು ಹೊಂದಿದೆ, ಇದು ವಿಶ್ವದ ಅಗ್ಗದ ಡೇಟಾ ವೆಚ್ಚಗಳನ್ನು ಆನಂದಿಸುತ್ತಿದೆ. ಆಡಳಿತವನ್ನು ಹೆಚ್ಚು ದಕ್ಷ, ಅಂತರ್ಗತ, ವೇಗ ಮತ್ತು ಪಾರದರ್ಶಕವಾಗಿಸಲು ನಾವು ತಂತ್ರಜ್ಞಾನವನ್ನು ಬಳಸಿಕೊಂಡಿದ್ದೇವೆ. ನಮ್ಮ ವಿಶಿಷ್ಟ ಡಿಜಿಟಲ್ ಗುರುತಿನ ವೇದಿಕೆಯಾದ ಆಧಾರ್ ನಮ್ಮ ಒಂದು ಬಿಲಿಯನ್ ಗಿಂತಲೂ ಹೆಚ್ಚು ಜನರನ್ನು ಒಳಗೊಂಡಿದೆ. ಭಾರತದಲ್ಲಿ ಆರ್ಥಿಕ ಸೇರ್ಪಡೆಯಲ್ಲಿ ಕ್ರಾಂತಿಕಾರಕ ಬದಲಾವಣೆ ತರಲು ನಾವು ಜನ್ ಧನ್ ಬ್ಯಾಂಕ್ ಖಾತೆಗಳು, ಆಧಾರ್ ಮತ್ತು ಮೊಬೈಲ್ ಎಂಬ JAM ತ್ರಿಮೂರ್ತಿಗಳ ಶಕ್ತಿಯನ್ನು ಬಳಸಿದ್ದೇವೆ. ಪ್ರತಿ ತಿಂಗಳು, ನಮ್ಮ ತ್ವರಿತ ಪಾವತಿ ವ್ಯವಸ್ಥೆಯಾದ ಯುಪಿಐನಲ್ಲಿ ಸುಮಾರು 10 ಶತಕೋಟಿ ರೂ. ವಹಿವಾಟುಗಳು ನಡೆಯುತ್ತವೆ. ಜಾಗತಿಕ ನೈಜ ಸಮಯದ ಪಾವತಿಗಳಲ್ಲಿ ಶೇ.45 ಕ್ಕಿಂತ ಹೆಚ್ಚು ಭಾರತದಲ್ಲಿ ನಡೆಯುತ್ತದೆ. ನೇರ ಪ್ರಯೋಜನಗಳು ಸರ್ಕಾರದ ಬೆಂಬಲದ ವರ್ಗಾವಣೆಯು ಸೋರಿಕೆಯನ್ನು ತಡೆಯುತ್ತಿದೆ ಮತ್ತು 33 ಶತಕೋಟಿ ಡಾಲರ್ ಗಳನ್ನು ಉಳಿಸಿದೆ. ಕೋವಿನ್ ಪೋರ್ಟಲ್

ಜಿ-20 ಡಿಜಿಟಲ್ ಆರ್ಥಿಕ ಸಚಿವರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ

August 19th, 09:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬೆಂಗಳೂರಿನಲ್ಲಿ ನಡೆಯುತ್ತಿರುವ ಜಿ-20 ಡಿಜಿಟಲ್ ಆರ್ಥಿಕತೆ ಕುರಿತ ಸಚಿವರ ಸಭೆಯನ್ನು ಉದ್ದೇಶಿಸಿ ವಿಡಿಯೋ ಸಂದೇಶ ನೀಡಿದರು.

ಜಿ 20 ಆರೋಗ್ಯ ಸಚಿವರ ಸಭೆಯಲ್ಲಿ ಪ್ರಧಾನಮಂತ್ರಿಯವರ ವಿಡಿಯೋ ಸಂದೇಶದ ಪಠ್ಯ

August 18th, 02:15 pm

ಭಾರತದ 1.4 ಶತಕೋಟಿ ಜನರ ಪರವಾಗಿ, ನಾನು ನಿಮಗೆ ಭಾರತಕ್ಕೆ ಮತ್ತು ನನ್ನ ತವರು ರಾಜ್ಯ ಗುಜರಾತ್ ಗೆ ಬಹಳ ಆತ್ಮೀಯ ಸ್ವಾಗತವನ್ನು ಕೋರುತ್ತೇನೆ. ನಿಮ್ಮನ್ನು ಸ್ವಾಗತಿಸಲು ನನ್ನೊಂದಿಗೆ 2.4 ಮಿಲಿಯನ್ ವೈದ್ಯರು, 3.5 ಮಿಲಿಯನ್ ದಾದಿಯರು, 1.3 ಮಿಲಿಯನ್ ಅರೆವೈದ್ಯಕೀಯ ಕ್ಷೇತ್ರದ ತಜ್ಞರು, 1.6 ಮಿಲಿಯನ್ ಫಾರ್ಮಾಸಿಸ್ಟ್ ಗಳು ಮತ್ತು ಭಾರತದ ಆರೋಗ್ಯ ಕ್ಷೇತ್ರದಲ್ಲಿ ತೊಡಗಿರುವ ಲಕ್ಷಾಂತರ ಇತರರು ಸೇರಿದ್ದಾರೆ.

PM addresses G20 Health Ministers’ Meeting

August 18th, 01:52 pm

PM Modi addressed the G20 Health Ministers’ Meet held in Gandhinagar, Gujarat via video message. He underlined that the Covid-19 pandemic has reminded us that health should be at the center of our decisions. He said that time also showed us the value of international cooperation, whether in medicine and vaccine deliveries or in bringing our people back home

ಪ್ರಧಾನಮಂತ್ರಿಯವರನ್ನು ಭೇಟಿಯಾದ ಶ್ರೀ ಬಿಲ್ ಗೇಟ್ಸ್

March 04th, 12:10 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶುಕ್ರವಾರ ನವದೆಹಲಿಯಲ್ಲಿ ಶ್ರೀ ಬಿಲ್ ಗೇಟ್ಸ್ ಅವರನ್ನು ಭೇಟಿ ಮಾಡಿದರು.

ಬಜೆಟ್ ನಂತರದ ವೆಬಿನಾರ್ ನಲ್ಲಿ ಯುವ ಶಕ್ತಿಯನ್ನು ಬಳಸಿಕೊಳ್ಳುವುದು - ಕೌಶಲ್ಯ ಮತ್ತು ಶಿಕ್ಷಣ ಕುರಿತ ಪ್ರಧಾನ ಮಂತ್ರಿ ಅವರ ಭಾಷಣದ ಕನ್ನಡ ಅನುವಾದ

February 28th, 10:05 am

'ಅಮೃತಕಾಲ ' ದ ಈ ಯುಗದಲ್ಲಿ ಕೌಶಲ್ಯ ಮತ್ತು ಶಿಕ್ಷಣವು ದೇಶಕ್ಕೆ ಎರಡು ಪ್ರಮುಖ ಸಾಧನಗಳಾಗಿವೆ. ಅಭಿವೃದ್ಧಿ ಹೊಂದಿದ ಭಾರತದ ದೂರದೃಷ್ಟಿಯೊಂದಿಗೆ ನಮ್ಮ ಯುವಕರು ದೇಶದ ಅಮೃತ ಯಾತ್ರೆಯನ್ನು ಮುನ್ನಡೆಸುತ್ತಿದ್ದಾರೆ. ಆದ್ದರಿಂದ, ' ಅಮೃತಕಾಲ್ ' ನ ಮೊದಲ ಆಯವ್ಯಯದಲ್ಲಿ ಯುವಕರು ಮತ್ತು ಅವರ ಭವಿಷ್ಯಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ. ಈ ಬಜೆಟ್ ನಮ್ಮ ಶಿಕ್ಷಣ ವ್ಯವಸ್ಥೆಯು ಪ್ರಾಯೋಗಿಕ ಮತ್ತು ಉದ್ಯಮ ಆಧಾರಿತವಾಗಿದೆ ಎಂದು ಖಚಿತಪಡಿಸಿಕೊಳ್ಳಲು ಅಡಿಪಾಯವನ್ನು ಬಲಪಡಿಸುತ್ತಿದೆ. ಹಲವಾರು ವರ್ಷಗಳಿಂದ, ನಮ್ಮ ಶಿಕ್ಷಣ ಕ್ಷೇತ್ರವು ಕಠಿಣತೆಗೆ ಬಲಿಪಶುವಾಗಿದೆ. ನಾವು ಈ ಸನ್ನಿವೇಶವನ್ನು ಬದಲಾಯಿಸಲು ಪ್ರಯತ್ನಿಸಿದ್ದೇವೆ. ನಾವು ಯುವಕರ ಯೋಗ್ಯತೆ ಮತ್ತು ಭವಿಷ್ಯದ ಬೇಡಿಕೆಗಳಿಗೆ ಅನುಗುಣವಾಗಿ ಶಿಕ್ಷಣ ಮತ್ತು ಕೌಶಲ್ಯವನ್ನು ಪುನರ್ ರಚಿಸಿದೆವು. ರಾಷ್ಟ್ರೀಯ ಶಿಕ್ಷಣ ನೀತಿಯು ಕಲಿಕೆ ಮತ್ತು ಕೌಶಲ್ಯ ಎರಡಕ್ಕೂ ಸಮಾನ ಒತ್ತು ನೀಡಿದೆ. ಈ ಪ್ರಯತ್ನದಲ್ಲಿ ಶಿಕ್ಷಕರಿಂದ ನಮಗೆ ಸಾಕಷ್ಟು ಬೆಂಬಲ ಸಿಕ್ಕಿದೆ ಎಂದು ನನಗೆ ಸಂತೋಷವಾಗಿದೆ. ಇದು ನಮ್ಮ ಮಕ್ಕಳನ್ನು ಗತಕಾಲದ ಹೊರೆಯಿಂದ ಮುಕ್ತಗೊಳಿಸಲು ನಮಗೆ ಹೆಚ್ಚಿನ ಧೈರ್ಯವನ್ನು ನೀಡಿತು. ಇದು ಶಿಕ್ಷಣ ಮತ್ತು ಕೌಶಲ್ಯ ಕ್ಷೇತ್ರಗಳಲ್ಲಿ ಮತ್ತಷ್ಟು ಸುಧಾರಣೆಗಳನ್ನು ಕೈಗೊಳ್ಳಲು ಸರ್ಕಾರವನ್ನು ಉತ್ತೇಜಿಸಿದೆ.

'ತಂತ್ರಜ್ಞಾನವನ್ನು ಬಳಸಿಕೊಂಡು ಸುಗಮ ಜೀವನ' ಕುರಿತು ಬಜೆಟ್ ನಂತರದ ವೆಬಿನಾರ್ನಲ್ಲಿ ಪ್ರಧಾನಿ ಭಾಷಣ

February 28th, 10:00 am

ಬಜೆಟ್ ನಂತರದ ವೆಬಿನಾರ್ನಲ್ಲಿ 'ತಂತ್ರಜ್ಞಾನವನ್ನು ಬಳಸಿಕೊಂಡು ಸುಗಮ ಜೀವನ' ಎಂಬ ವಿಷಯದ ಕುರಿತು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು. ʻಕೇಂದ್ರ ಬಜೆಟ್-2023ʼರಲ್ಲಿ ಘೋಷಿಸಲಾದ ಉಪಕ್ರಮಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಆಲೋಚನೆಗಳು ಮತ್ತು ಸಲಹೆಗಳನ್ನು ಪಡೆಯಲು ಸರಕಾರ ಆಯೋಜಿಸಿದ್ದ 12 ಬಜೆಟ್ ನಂತರದ ವೆಬಿನಾರ್‌ಗಳ ಸರಣಿಯಲ್ಲಿ ಇದು ಐದನೇಯದು.

ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಲೋಕಸಭೆಯಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಉತ್ತರ

February 08th, 04:00 pm

ಮೊದಲನೆಯದಾಗಿ, ರಾಷ್ಟ್ರಪತಿ ಅವರ ಭಾಷಣಕ್ಕಾಗಿ ನಾನು ಅವರಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ರಾಷ್ಟ್ರಪತಿಗಳ ಭಾಷಣಕ್ಕೆ ಈ ಹಿಂದೆ ಅನೇಕ ಬಾರಿ ಧನ್ಯವಾದಗಳನ್ನು ಸಲ್ಲಿಸುವ ಅವಕಾಶ ಪಡೆದಿರುವುದು ನನ್ನ ಪಾಲಿನ ಅದೃಷ್ಟ. ಆದರೆ ಈ ಬಾರಿ ರಾಷ್ಟ್ರಪತಿ ಅವರಿಗೆ ಧನ್ಯವಾದ ಹೇಳುವ ಜತೆಗೆ ಅವರನ್ನು ಅಭಿನಂದಿಸಲು ಬಯಸುತ್ತೇನೆ. ರಾಷ್ಟ್ರಪತಿಯವರು ತಮ್ಮ ದೂರದೃಷ್ಟಿಯ ಭಾಷಣದಲ್ಲಿ ನಮಗೆಲ್ಲರಿಗೂ ಮತ್ತು ಕೋಟ್ಯಂತರ ದೇಶವಾಸಿಗಳಿಗೆ ಮಾರ್ಗದರ್ಶನ ನೀಡಿದ್ದಾರೆ. ಪ್ರಜಾತಂತ್ರ ಗಣರಾಜ್ಯದ ಮುಖ್ಯಸ್ಥೆಯಾಗಿ ಅವರ ಉಪಸ್ಥಿತಿಯು ಐತಿಹಾಸಿಕವಾಗಿದೆ ಮತ್ತು ದೇಶದ ಕೋಟ್ಯಂತರ ಸಹೋದರಿಯರು ಮತ್ತು ಹೆಣ್ಣುಮಕ್ಕಳಿಗೆ ಸ್ಫೂರ್ತಿಯ ಸುಸಂದರ್ಭವಾಗಿದೆ.

ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯಕ್ಕೆ ಲೋಕಸಭೆಯಲ್ಲಿ ಪ್ರಧಾನ ಮಂತ್ರಿ ಉತ್ತರ

February 08th, 03:50 pm

ಸಂಸತ್ತಿನ ಉಭಯ ಸದನ ಉದ್ದೇಶಿಸಿ ರಾಷ್ಟ್ರಪತಿ ಮಾಡಿದ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಲೋಕಸಭೆಯಲ್ಲಿಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರಿಸಿದರು.

ಕೇರಳದ ಜನರು ಈಗ ಬಿಜೆಪಿಯನ್ನು ಹೊಸ ಭರವಸೆಯಾಗಿ ನೋಡುತ್ತಿದ್ದಾರೆ: ಪ್ರಧಾನಿ ಮೋದಿ

September 01st, 04:31 pm

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕೇರಳದ ಕೊಚ್ಚಿಯಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಓಣಂ ಸಂದರ್ಭದಲ್ಲಿ ಕೇರಳದ ಜನರಿಗೆ ಶುಭ ಹಾರೈಸುವ ಮೂಲಕ ಪ್ರಧಾನಿ ಮೋದಿ ತಮ್ಮ ಭಾಷಣವನ್ನು ಪ್ರಾರಂಭಿಸಿದರು, ಓಣಂ ವಿಶೇಷ ಸಂದರ್ಭದಲ್ಲಿ ನಾನು ಕೇರಳಕ್ಕೆ ಬಂದಿರುವುದು ನನ್ನ ಅದೃಷ್ಟದ ವಿಷಯವಾಗಿದೆ. ನಿಮ್ಮೆಲ್ಲರಿಗೂ ಓಣಂ ಹಬ್ಬದ ಶುಭಾಶಯಗಳು. ”

ಕೇರಳದ ಕೊಚ್ಚಿಯಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ

September 01st, 04:30 pm

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕೇರಳದ ಕೊಚ್ಚಿಯಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಓಣಂ ಸಂದರ್ಭದಲ್ಲಿ ಕೇರಳದ ಜನರಿಗೆ ಶುಭ ಹಾರೈಸುವ ಮೂಲಕ ಪ್ರಧಾನಿ ಮೋದಿ ತಮ್ಮ ಭಾಷಣವನ್ನು ಪ್ರಾರಂಭಿಸಿದರು, ಓಣಂ ವಿಶೇಷ ಸಂದರ್ಭದಲ್ಲಿ ನಾನು ಕೇರಳಕ್ಕೆ ಬಂದಿರುವುದು ನನ್ನ ಅದೃಷ್ಟದ ವಿಷಯವಾಗಿದೆ. ನಿಮ್ಮೆಲ್ಲರಿಗೂ ಓಣಂ ಹಬ್ಬದ ಶುಭಾಶಯಗಳು. ”

ಗುಜರಾತ್‌ನ ಗಾಂಧಿನಗರದಲ್ಲಿ ನಡೆದ ʻಡಿಜಿಟಲ್ ಇಂಡಿಯಾ ಸಪ್ತಾಹ-2022ʼರಲ್ಲಿ ಪ್ರಧಾನ ಮಂತ್ರಿಯವರ ಭಾಷಣದ ಇಂಗ್ಲಿಷ್ ಭಾಷಾಂತರ

July 04th, 10:57 pm

ಇಂದಿನ ಕಾರ್ಯಕ್ರಮವು ಈ 21ನೇ ಶತಮಾನದಲ್ಲಿ ಹೆಚ್ಚೆಚ್ಚು ಆಧುನಿಕವಾಗುತ್ತಿರುವ ಭಾರತದ ಒಂದು ಇಣುಕುನೋಟವಾಗಿದೆ. ʻಡಿಜಿಟಲ್ ಇಂಡಿಯಾʼ ಅಭಿಯಾನದ ರೂಪದಲ್ಲಿ ತಂತ್ರಜ್ಞಾನದ ಬಳಕೆಯು ಇಡೀ ಮನುಕುಲಕ್ಕೆ ಎಷ್ಟು ಕ್ರಾಂತಿಕಾರಕವಾಗಬಲ್ಲದು ಎಂಬುದನ್ನು ಭಾರತವು ವಿಶ್ವದ ಮುಂದೆ ಪ್ರದರ್ಶಿಸಿದೆ.

ಗಾಂಧಿನಗರದಲ್ಲಿ ಡಿಜಿಟಲ್ ಇಂಡಿಯಾ ಸಪ್ತಾಹ 2022 ಉದ್ಘಾಟಿಸಿದ ಪ್ರಧಾನಿ

July 04th, 04:40 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗಾಂಧಿನಗರದಲ್ಲಿ ಡಿಜಿಟಲ್ ಇಂಡಿಯಾ ಸಪ್ತಾಹ 2022 ಅನ್ನು ಉದ್ಘಾಟಿಸಿದರು, ಇದರ ಧ್ಯೇಯವಾಕ್ಯ ʼನವ ಭಾರತದ ತಂತ್ರಜ್ಞಾನ ದಶಕಕ್ಕೆ ವೇಗವರ್ಧನೆʼ (ಕ್ಯಾಟಲೈಸಿಂಗ್ ನ್ಯೂ ಇಂಡಿಯಾಸ್ ಟೆಕ್ಡೇಡ್). ಕಾರ್ಯಕ್ರಮದಲ್ಲಿ ಪ್ರಧಾನಿಯವರು ತಂತ್ರಜ್ಞಾನದ ಲಭ್ಯತೆಯನ್ನು ಹೆಚ್ಚಿಸುವ, ಜೀವನವನ್ನು ಸುಲಭಗೊಳಿಸುವ ಮತ್ತು ಸ್ಟಾರ್ಟ್‌ಅಪ್‌ಗಳಿಗೆ ಉತ್ತೇಜನವನ್ನು ನೀಡಲು ಸೇವಾ ವಿತರಣೆಯನ್ನು ಸುಗಮಗೊಳಿಸುವ ಉದ್ದೇಶದ ಬಹು ಡಿಜಿಟಲ್ ಉಪಕ್ರಮಗಳಿಗೆ ಚಾಲನೆ ನೀಡಿದರು. ಅವರು ಚಿಪ್ಸ್ ಟು ಸ್ಟಾರ್ಟ್ಅಪ್ (ಸಿ2ಎಸ್) ಕಾರ್ಯಕ್ರಮದ ಅಡಿಯಲ್ಲಿ ಬೆಂಬಲಿಸುವ 30 ಸಂಸ್ಥೆಗಳ ಮೊದಲ ಸಮೂಹವನ್ನು ಘೋಷಿಸಿದರು. ಈ ಸಂದರ್ಭದಲ್ಲಿ ಗುಜರಾತ್ ಮುಖ್ಯಮಂತ್ರಿ ಶ್ರೀ ಭೂಪೇಂದ್ರಭಾಯಿ ಪಟೇಲ್, ಕೇಂದ್ರ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಮತ್ತು ಶ್ರೀ ರಾಜೀವ್ ಚಂದ್ರಶೇಖರ್, ರಾಜ್ಯದ ಸಚಿವರು, ಜನಪ್ರತಿನಿಧಿಗಳು, ಸ್ಟಾರ್ಟಪ್‌ ಮತ್ತು ಇತರ ಕ್ಷೇತ್ರಗಳ ಭಾಗೀದಾರರು ಉಪಸ್ಥಿತರಿದ್ದರು.

ಜುಲೈ 4 ರಂದು ಗಾಂಧಿನಗರ್ ಮತ್ತು ಭೀಮಾವರಂಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

July 01st, 12:16 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2022 ರ ಜುಲೈ 4 ರಂದು ಬೆಳಿಗ್ಗೆ 11 ಗಂಟೆಗೆ ಆಂಧ್ರಪ್ರದೇಶದ ಭೀಮಾವರಂ ಗೆ ಭೇಟಿ ನೀಡಲಿದ್ದು, ಸ್ವಾತಂತ್ರ್ಯ ಹೋರಾಟಗಾರ, ದಂತಕಥೆ ಅಲ್ಲೂರಿ ಸೀತಾರಾಮ ರಾಜು ಅವರ 125 ನೇ ಜನ ದಿನೋತ್ಸವದ ವರ್ಷಾಚರಣೆಗೆ ಚಾಲನೆ ನೀಡಲಿದ್ದಾರೆ. ಬಳಿಕ ಸಂಜೆ 4.30 ಕ್ಕೆ ಪ್ರಧಾನಮಂತ್ರಿ ಅವರು ಗಾಂಧೀನಗರದಲ್ಲಿ ಡಿಟಿಜಲ್ ಇಂಡಿಯಾ 2022 ಸಪ್ತಾಹ ಉದ್ಘಾಟಿಸಲಿದ್ದಾರೆ.

ವಿಶ್ವ ಆರ್ಥಿಕ ವೇದಿಕೆಯ ದಾವೋಸ್ ಶೃಂಗಸಭೆಯಲ್ಲಿ “ಜಗತ್ತಿನ ಸ್ಥಿತಿಗತಿ” ಕುರಿತು ಪ್ರಧಾನ ಮಂತ್ರಿ ಅವರ ಭಾಷಣ

January 17th, 08:31 pm

ವಿಶ್ವ ಆರ್ಥಿಕ ವೇದಿಕೆಯಲ್ಲಿ ಸೇರಿರುವ ಜಗತ್ತಿನಾದ್ಯಂತದ ಗಣ್ಯರಿಗೆ 130 ಕೋಟಿ ಭಾರತೀಯರ ಪರವಾಗಿ ನಾನು ನನ್ನ ನಮಸ್ಕಾರಗಳನ್ನು ತಿಳಿಸುತ್ತೇನೆ. ಇಂದು ನಾನು ನಿಮ್ಮೊಂದಿಗೆ ಮಾತನಾಡುವಾಗ, ಭಾರತವು ಇನ್ನೊಂದು ಕೊರೊನಾ ಅಲೆಯನ್ನು ಅತ್ಯಂತ ಎಚ್ಚರಿಕೆಯಿಂದ ಮತ್ತು ಜಾಗ್ರತೆಯಿಂದ ನಿಭಾಯಿಸುತ್ತಿದೆ. ಸಮಾನಾಂತರವಾಗಿ ಭಾರತವು ಹಲವು ಭರವಸೆದಾಯಕ ಫಲಿತಾಂಶಗಳೊಂದಿಗೆ ಆರ್ಥಿಕ ಕ್ಷೇತ್ರದಲ್ಲಿ ಮುನ್ನಡೆಯುತ್ತಿದೆ. ಇಂದು ಭಾರತವು ಸ್ವಾತಂತ್ರ್ಯದ 75 ನೇ ವರ್ಷಾಚರಣೆಯ ಸಂಭ್ರಮದಲ್ಲಿದೆ ಮತ್ತು ಬರೇ ಒಂದು ವರ್ಷದಲ್ಲಿ 160 ಕೋಟಿ ಕೊರೊನಾ ಲಸಿಕಾ ಡೋಸುಗಳನ್ನು ವಿತರಿಸಿದ ವಿಶ್ವಾಸದಲ್ಲಿದೆ.

PM Modi's remarks at World Economic Forum, Davos 2022

January 17th, 08:30 pm

PM Modi addressed the World Economic Forum's Davos Agenda via video conferencing. PM Modi said, The entrepreneurship spirit that Indians have, the ability to adopt new technology, can give new energy to each of our global partners. That's why this is the best time to invest in India.