The mantra of the Bharatiya Nyaya Sanhita is - Citizen First: PM Modi
December 03rd, 12:15 pm
The Prime Minister, Shri Narendra Modi dedicated to the nation the successful implementation of three transformative new criminal laws—Bharatiya Nyaya Sanhita, Bharatiya Nagarik Suraksha Sanhita and Bharatiya Sakshya Adhiniyam today at Chandigarh.ಯಶಸ್ವಿಯಾಗಿ ಅನುಷ್ಠಾನಗೊಂಡ 3 ಹೊಸ ಕ್ರಿಮಿನಲ್ ಕಾನೂನುಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
December 03rd, 11:47 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಚಂಡೀಗಢದಲ್ಲಿಂದು 3 ಪರಿವರ್ತನೀಯ ಹೊಸ ಕ್ರಿಮಿನಲ್ ಕಾನೂನುಗಳಾದ ಭಾರತೀಯ ನ್ಯಾಯ ಸಂಹಿತೆ, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಮತ್ತು ಭಾರತೀಯ ಸಾಕ್ಷಿ ಅಧಿನಿಯಮಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಈ 3 ಕಾನೂನುಗಳು ಯಶಸ್ವಿಯಾಗಿ ಅನುಷ್ಠಾನಗೊಂಡಿವೆ. ನಂತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಶ್ರೀ ಮೋದಿ, ಸತ್ಯ ಮತ್ತು ನ್ಯಾಯ ಸ್ಥಾಪಿಸುವ ಶಕ್ತಿಯ ರೂಪವಾದ ಮಾತೆ ಚಂಡಿ ದೇವಿಗೆ ಚಂಡೀಗಢದ ಗುರುತು ಸಂಬಂಧಿಸಿದೆ, ಅದೇ ತತ್ವಶಾಸ್ತ್ರವು ಭಾರತೀಯ ನ್ಯಾಯ ಸಂಹಿತೆ ಮತ್ತು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ ಸಂಪೂರ್ಣ ಸ್ವರೂಪದ ಆಧಾರವಾಗಿದೆ. ಭಾರತ ಸಂವಿಧಾನದ ಸ್ಫೂರ್ತಿಯಿಂದ ಪ್ರೇರಿತವಾದ ಭಾರತೀಯ ನ್ಯಾಯ ಸಂಹಿತೆ ಜಾರಿಗೆ ಬರುತ್ತಿರುವುದು ಒಂದು ಐತಿಹಾಸಿಕ ಕ್ಷಣವಾಗಿದ್ದು, ರಾಷ್ಟ್ರವು ವಿಕಸಿತ ಭಾರತ್ ಕಟ್ಟುವ ಸಂಕಲ್ಪದೊಂದಿಗೆ ಮುನ್ನಡೆಯುವ ಪ್ರಮುಖ ಘಟ್ಟದಲ್ಲಿದೆ. ಭಾರತೀಯ ಸಂವಿಧಾನ ಅಳವಡಿಸಿಕೊಂ 75 ವರ್ಷಗಳಲ್ಲಿ ನಮ್ಮ ಸಂವಿಧಾನವು ದೇಶದ ನಾಗರಿಕರಿಗೆ ಕಲ್ಪಿಸಿದ ಆದರ್ಶಗಳನ್ನು ಈಡೇರಿಸುವ ನಿಟ್ಟಿನಲ್ಲಿ ಇದು ಸಂಕೀರ್ಣ ಪ್ರಯತ್ನವಾಗಿದೆ. ಅದರ ಲೈವ್ ಡೆಮೊ ಮೂಲಕ ಕಾನೂನುಗಳನ್ನು ಹೇಗೆ ಜಾರಿಗೊಳಿಸಬಹುದು ಎಂಬುದರ ಕುರಿತು ತನಗೆ ಒಂದು ನೋಟ ಸಿಕ್ಕಿದೆ. ಹಾಗಾಗಿ, ಕಾನೂನುಗಳ ಲೈವ್ ಡೆಮೊಗೆ ಭೇಟಿ ನೀಡುವಂತೆ ಪ್ರಧಾನಿ ಜನರನ್ನು ಒತ್ತಾಯಿಸಿದರು. 3 ಹೊಸ ಕ್ರಿಮಿನಲ್ ಕಾನೂನುಗಳ ಯಶಸ್ವಿ ಅನುಷ್ಠಾನದ ಸಂದರ್ಭದಲ್ಲಿ ಅವರು ಎಲ್ಲಾ ನಾಗರಿಕರಿಗೆ ತಮ್ಮ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದರು. ಚಂಡೀಗಢದ ಆಡಳಿತದ ಎಲ್ಲಾ ಪಾಲುದಾರರನ್ನು ಅವರು ಅಭಿನಂದಿಸಿದರು.