ಮಹಾರಾಷ್ಟ್ರದ ವಾರ್ಧಾದಲ್ಲಿ ರಾಷ್ಟ್ರೀಯ 'ಪಿಎಂ ವಿಶ್ವಕರ್ಮ' ವಾರ್ಷಿಕೋತ್ಸವ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
September 20th, 11:45 am
2 ದಿನಗಳ ಹಿಂದೆಯಷ್ಟೇ ವಿಶ್ವಕರ್ಮ ಜಯಂತಿ ಆಚರಿಸಿದ್ದೆವು. ಇಂದು ನಾವು ವಾರ್ಧಾದ ಪವಿತ್ರ ಭೂಮಿಯಲ್ಲಿ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ಯಶಸ್ಸನ್ನು ಆಚರಿಸುತ್ತಿದ್ದೇವೆ. 1932ರ ಇದೇ ದಿನದಂದು ಮಹಾತ್ಮ ಗಾಂಧೀಜಿ ಅವರು ಅಸ್ಪೃಶ್ಯತೆಯ ವಿರುದ್ಧ ತಮ್ಮ ಅಭಿಯಾನ ಆರಂಭಿಸಿದ್ದರು ಎಂಬುದು ಇಂದಿನ ವಿಶೇಷ. ಈ ಹಿನ್ನೆಲೆಯಲ್ಲಿ ವಿನೋಬಾ ಭಾವೆ ಅವರ ಪುಣ್ಯಭೂಮಿ, ಮಹಾತ್ಮ ಗಾಂಧಿ ಅವರ ‘ಕರ್ಮಭೂಮಿ’ ಮತ್ತು ವಾರ್ಧಾ ಭೂಮಿಯಲ್ಲಿ ವಿಶ್ವಕರ್ಮ ಯೋಜನೆಯ 1 ವರ್ಷದ ಸಂಭ್ರಮಾಚರಣೆಯು ನಮ್ಮ ‘ವಿಕಸಿತ ಭಾರತ’(ಅಭಿವೃದ್ಧಿ ಹೊಂದಿದ ಭಾರತ)ದ ಸಂಕಲ್ಪಕ್ಕೆ ಹೊಸ ಚೈತನ್ಯ ನೀಡುವ ಸಾಧನೆ ಮತ್ತು ಸ್ಫೂರ್ತಿಯ ಸಂಗಮವಾಗಿದೆ. ವಿಶ್ವಕರ್ಮ ಯೋಜನೆ ಮೂಲಕ ನಾವು ಶ್ರಮದ ಮೂಲಕ ಸಮೃದ್ಧಿ ಮತ್ತು ಕೌಶಲ್ಯದ ಮೂಲಕ ಉತ್ತಮ ಭವಿಷ್ಯದ ಬದ್ಧತೆ ಹೊಂದಿದ್ದೇವೆ. ವಾರ್ಧಾದಲ್ಲಿ ಬಾಪು ಅವರ ಸ್ಫೂರ್ತಿಗಳು ಈ ಬದ್ಧತೆಗಳನ್ನು ಪೂರೈಸಲು ನಮಗೆ ಸಹಾಯ ಮಾಡುತ್ತದೆ. ಈ ಉಪಕ್ರಮಕ್ಕೆ ಸಂಬಂಧಿಸಿದ ಎಲ್ಲರಿಗೂ ಮತ್ತು ದೇಶಾದ್ಯಂತದ ಎಲ್ಲಾ ಫಲಾನುಭವಿಗಳಿಗೆ ನನ್ನ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ವಾರ್ಧಾದಲ್ಲಿ ರಾಷ್ಟ್ರೀಯ ಪ್ರಧಾನಮಂತ್ರಿ ವಿಶ್ವಕರ್ಮ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು
September 20th, 11:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಹಾರಾಷ್ಟ್ರದ ವಾರ್ಧಾದಲ್ಲಿ ರಾಷ್ಟ್ರೀಯ ಪ್ರಧಾನಮಂತ್ರಿ ವಿಶ್ವಕರ್ಮ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಪ್ರಧಾನಮಂತ್ರಿಯವರು ‘ಆಚಾರ್ಯ ಚಾಣಕ್ಯ ಕೌಶಲ್ಯ ಅಭಿವೃದ್ಧಿ’ಯೋಜನೆ ಮತ್ತು ‘ಪುಣ್ಯಶ್ಲೋಕ ಅಹಲ್ಯಾದೇವಿ ಹೋಳ್ಕರ್ ಮಹಿಳಾ ಸ್ಟಾರ್ಟಪ್ ಯೋಜನೆʼಗೆ ಚಾಲನೆ ನೀಡಿದರು. ಪ್ರಧಾನಮಂತ್ರಿ ವಿಶ್ವಕರ್ಮ ಫಲಾನುಭವಿಗಳಿಗೆ ಪ್ರಮಾಣಪತ್ರಗಳು ಮತ್ತು ಸಾಲಗಳನ್ನು ಬಿಡುಗಡೆ ಮಾಡಿದರು ಮತ್ತು ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಒಂದು ವರ್ಷದ ಪ್ರಗತಿಯನ್ನು ಗುರುತಿಸುವ ಸ್ಮರಣಾರ್ಥ ಅಂಚೆಚೀಟಿಯನ್ನು ಬಿಡುಗಡೆ ಮಾಡಿದರು. ಮಹಾರಾಷ್ಟ್ರದ ಅಮರಾವತಿಯಲ್ಲಿ ಪ್ರಧಾನಮಂತ್ರಿ ಮೆಗಾ ಇಂಟಿಗ್ರೇಟೆಡ್ ಟೆಕ್ಸ್‌ಟೈಲ್ ರೀಜನ್ ಅಂಡ್ ಅಪಾರಲ್ (ಪಿಎಂ ಮಿತ್ರಾ) ಪಾರ್ಕ್ ಗೆ ಶ್ರೀ ಮೋದಿಯವರು ಶಂಕುಸ್ಥಾಪನೆ ಮಾಡಿದರು. ಈ ಸಂದರ್ಭದಲ್ಲಿ ಆಯೋಜಿಸಲಾದ ವಸ್ತುಪ್ರದರ್ಶನವನ್ನು ಪ್ರಧಾನಿಯವರು ವೀಕ್ಷಿಸಿದರು.Our government is committed to development of the Northeast: PM Modi
March 09th, 11:09 am
PM Modi addressed Viksit Bharat Viksit North East Program in Itanagar, Arunachal Pradesh. Reiterating his vision of ‘Ashtalakshmi’ for the development of the Northeast, the Prime Minister called the region a strong link of tourism, business and cultural relations with South and Southeast Asia.ಅರುಣಾಚಲ ಪ್ರದೇಶದ ಇಟಾನಗರದಲ್ಲಿ ವಿಕಸಿತ ಭಾರತ ವಿಕಸಿತ ಈಶಾನ್ಯ ಕಾರ್ಯಕ್ರಮವನ್ನುದ್ದೇಶಿಸಿ ಪ್ರಧಾನಮಂತ್ರಿ ಭಾಷಣ
March 09th, 10:46 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅರುಣಾಚಲ ಪ್ರದೇಶದ ಇಟಾನಗರದಲ್ಲಿ ವಿಕಸಿತ ಭಾರತ ವಿಕಸಿತ ಈಶಾನ್ಯ ಕಾರ್ಯಕ್ರಮವನ್ನುದ್ದೇಶಿಸಿ ಭಾಷಣ ಮಾಡಿದರು. ಶ್ರೀ ಮೋದಿ ಅವರು ಮಣಿಪುರ, ಮೇಘಾಲಯ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರಾ ಮತ್ತು ಅರುಣಾಚಲ ಪ್ರದೇಶದಲ್ಲಿ ಸುಮಾರು 55,600 ಕೋಟಿ ರೂಪಾಯಿ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು, ರಾಷ್ಟ್ರಕ್ಕೆ ಸಮರ್ಪಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಅವರು ಸೆಲಾ ಸುರಂಗವನ್ನು ರಾಷ್ಟ್ರಕ್ಕೆ ಸಮರ್ಪಿಸಿದರು ಮತ್ತು ಸುಮಾರು 10,000 ಕೋಟಿ ರೂ.ಗಳ ಉನ್ನತಿ ಯೋಜನೆಗೆ ಚಾಲನೆ ನೀಡಿದರು. ಇಂದಿನ ಅಭಿವೃದ್ಧಿ ಯೋಜನೆಗಳು ರೈಲು, ರಸ್ತೆ, ಆರೋಗ್ಯ, ವಸತಿ, ಶಿಕ್ಷಣ, ಗಡಿ ಮೂಲಸೌಕರ್ಯ, ಐಟಿ, ವಿದ್ಯುತ್, ತೈಲ ಮತ್ತು ಅನಿಲ ಮುಂತಾದ ಕ್ಷೇತ್ರಗಳನ್ನು ಒಳಗೊಂಡಿವೆ.ಬಿಹಾರದ ಬೇಗುಸರಾಯ್‌ನಲ್ಲಿ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಪಠ್ಯಾಂತರ
March 02nd, 08:06 pm
ʻಜೈ ಮಂಗಲ ಘರ್ ಮಂದಿರʼ ಮತ್ತು ನೌಲಾಖಾ ಮಂದಿರದಲ್ಲಿ ಪ್ರತಿಷ್ಠಾಪನೆಗೊಂಡಿರುವ ದೇವತೆಗಳಿಗೆ ನಾನು ನಮಸ್ಕರಿಸುತ್ತೇನೆ. ಇಂದು, ನಾನು 'ವಿಕಸಿತ ಭಾರತ'ಕ್ಕಾಗಿ(ಅಭಿವೃದ್ಧಿ ಹೊಂದಿದ ಭಾರತಕ್ಕಾಗಿ) 'ವಿಕಸಿತ ಬಿಹಾರʼದ(ಅಭಿವೃದ್ಧಿ ಹೊಂದಿದ ಬಿಹಾರ) ಅಭಿವೃದ್ಧಿಗೆ ಕೊಡುಗೆ ನೀಡುವ ಸಂಕಲ್ಪದೊಂದಿಗೆ ಬೇಗುಸರಾಯ್‌ಗೆ ಬಂದಿದ್ದೇನೆ. ಇಷ್ಟು ದೊಡ್ಡ ಜನಸಮೂಹವನ್ನು ಭೇಟಿಯಾಗುವುದು ನನ್ನ ಸೌಭಾಗ್ಯ.ಬಿಹಾರದ ಬಿಗುಸರಾಯ್‌ನಲ್ಲಿ ಬಹು ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನ ಮಂತ್ರಿ ಶಂಕುಸ್ಥಾಪನೆ ಮತ್ತು ರಾಷ್ಟ್ರಕ್ಕೆ ಸಮರ್ಪಣೆ
March 02nd, 04:50 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಿಹಾರದ ಬಿಗುಸರಾಯ್‌ನಲ್ಲಿಂದು ಸುಮಾರು 1.48 ಲಕ್ಷ ಕೋಟಿ ರೂಪಾಯಿ ಮೌಲ್ಯದ ಬಹು ತೈಲ ಮತ್ತು ಅನಿಲ ಕ್ಷೇತ್ರದ ಯೋಜನೆಗಳು ಮತ್ತು ಬಿಹಾರದಲ್ಲಿ 13,400 ಕೋಟಿ ರೂ.ಗಿಂತ ಹೆಚ್ಚಿನ ಮೌಲ್ಯದ ಹಲವಾರು ಅಭಿವೃದ್ಧಿ ಯೋಜನೆಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು.ಪಶ್ಚಿಮ ಬಂಗಾಳದ ಅರಾಮ್ ಬಾಗ್ ನಲ್ಲಿ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಭಾಷಣ
March 01st, 03:15 pm
ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ.ಆನಂದ ಬೋಸ್ ಜೀ, ನನ್ನ ಸಂಪುಟ ಸಹೋದ್ಯೋಗಿ ಶಂತನು ಠಾಕೂರ್ ಜೀ, ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಜೀ, ಸಂಸದರಾದ ಅಪರೂಪ ಪೊದ್ದಾರ್ ಜೀ, ಸುಕಾಂತ ಮಜುಂದಾರ್ ಜೀ, ಸೌಮಿತ್ರ ಖಾನ್ ಜೀ, ಇತರ ಗಣ್ಯರು, ಮಹಿಳೆಯರೇ ಮತ್ತು ಮಹನೀಯರೇ!ಪ್ರಧಾನಿ ಅವರಿಂದ ಇಂದು ಪಶ್ಚಿಮ ಬಂಗಾಳದ ಹೂಗ್ಲಿಯ ಅರಂಬಾಗ್ ನಲ್ಲಿ 7,200 ಕೋಟಿ ರೂ. ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದ ಮತ್ತು ಶಂಕುಸ್ಥಾಪನೆ
March 01st, 03:10 pm
ನಂತರ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, 21ನೇ ಶತಮಾನದ ಭಾರತದ ಕ್ಷಿಪ್ರ ಬೆಳವಣಿಗೆ ಹೊಂದುತ್ತಿದೆ ಮತ್ತು 2047ರ ವೇಳೆಗೆ ಭಾರತವನ್ನು ವಿಕಸಿತ ಮಾಡುವ ಸಂಕಲ್ಪವನ್ನು ಕೈಗೊಳ್ಳಲಾಗಿದೆ ಎಂದರು. ಯುವಕರು, ಮಹಿಳೆಯರು, ರೈತರು ಮತ್ತು ಬಡವರ ಸಬಲೀಕರಣದ ಆದ್ಯತೆಗಳನ್ನು ಅವರು ಪುನರುಚ್ಚರಿಸಿದರು. ನಾವು ಸದಾ ಬಡವರ ಕಲ್ಯಾಣಕ್ಕಾಗಿ ಶ್ರಮಿಸಿದ್ದೇವೆ ಮತ್ತು ಅದರ ಫಲಿತಾಂಶಗಳು ಈಗ ವಿಶ್ವಕ್ಕೆ ಗೋಚರಿಸುತ್ತವೆ ಎಂದು ಅವರು ಹೇಳಿದರು. 25 ಕೋಟಿ ಜನರು ಬಡತನದಿಂದ ಹೊರಬರುತ್ತಿರುವುದು ಸರ್ಕಾರದ ನಿರ್ದೇಶನ, ನೀತಿಗಳು ಮತ್ತು ಸೂಕ್ತ ನಿರ್ಧಾರಗಳನ್ನು ಸೂಚಿಸುತ್ತದೆ ಎಂಬ ಅಂಶವನ್ನು ಅವರು ಬಲವಾಗಿ ಪ್ರತಿಪಾದಿಸಿದರು. ಇದಕ್ಕೆಲ್ಲ ಮುಖ್ಯ ಕಾರಣ ಸರಿಯಾದ ಉದ್ದೇಶಗಳು ಎಂದು ಅವರು ಹೇಳಿದರು.2024ರ ಜನವರಿ 2 - 3 ರಂದು ತಮಿಳುನಾಡು, ಲಕ್ಷದ್ವೀಪ ಮತ್ತು ಕೇರಳಕ್ಕೆ ಪ್ರಧಾನಿ ಮೋದಿ ಭೇಟಿ
December 31st, 12:56 pm
2024ರ ಜನವರಿ 2ರಂದು, ಬೆಳಗ್ಗೆ ಸುಮಾರು 10:30 ಗಂಟೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ತಮಿಳುನಾಡಿನ ತಿರುಚಿರಾಪಳ್ಳಿಗೆ ತಲುಪುತ್ತಾರೆ. ತಿರುಚಿರಾಪಳ್ಳಿಯ ಭಾರತಿದಾಸನ್ ವಿಶ್ವವಿದ್ಯಾಲಯದ 38ನೇ ಘಟಿಕೋತ್ಸವ ಸಮಾರಂಭದಲ್ಲಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ತಿರುಚಿರಾಪಳ್ಳಿಯಲ್ಲಿ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರು ಉದ್ಘಾಟನೆ, ದೇಶಕ್ಕೆ ಸಮರ್ಪಣೆ ಮತ್ತು ವಿಮಾನಯಾನ, ರೈಲು, ರಸ್ತೆ, ತೈಲ ಮತ್ತು ಅನಿಲ, ಹಡಗು ಮತ್ತು ಉನ್ನತ ಶಿಕ್ಷಣಕ್ಕೆ ಸಂಬಂಧಿಸಿದ 19,850 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.ಖಾದ್ಯ ತೈಲದ ರಾಷ್ಟ್ರೀಯ ಅಭಿಯಾನದಲ್ಲಿ – ಆಯಿಲ್ ಪಾಮ್ ಜಾರಿಗೆ ಸಂಪುಟದ ಅನುಮೋದನೆ
August 18th, 11:54 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆ ಈಶಾನ್ಯ ವಲಯ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಮೇಲೆ ವಿಶೇಷ ಗಮನ ಕೇಂದ್ರೀಕರಿಸಿ ಹೊಸ ಕೇಂದ್ರ ಪ್ರಾಯೋಜಿತ ಯೋಜನೆಯಾಗಿ ಖಾದ್ಯ ತೈಲಗಳ ರಾಷ್ಟ್ರೀಯ ಅಭಿಯಾನ – ಆಯಿಲ್ ಪಾಮ್ (ಎನ್.ಎಂ.ಇ.ಒ–ಒಪಿ) ಎಂದು ಕರೆಯಲಾಗುವ ತೈಲ ತಾಳೆ (ಆಯಿಲ್ ಪಾಮ್) ಆರಂಭಿಸಲು ತನ್ನ ಅನುಮೋದನೆ ನೀಡಿದೆ. ಖಾದ್ಯ ತೈಲಗಳ ಆಮದಿನ ಮೇಲೆ ಭಾರಿ ಅವಲಂಬನೆಯಿಂದಾಗಿ, ಖಾದ್ಯ ತೈಲಗಳ ದೇಶೀಯ ಉತ್ಪಾದನೆಯನ್ನು ಹೆಚ್ಚಿಸುವ ಪ್ರಯತ್ನ ಮಾಡುವುದು ಮುಖ್ಯವಾಗಿದ್ದು, ತೈಲ ತಾಳೆಯ ಬೆಳೆ ಪ್ರದೇಶದ ಹೆಚ್ಚಳ ಮತ್ತು ಉತ್ಪಾದಕತೆಯು ಪ್ರಮುಖ ಪಾತ್ರ ವಹಿಸುತ್ತದೆ.