Joint Statement: Official visit of Shri Narendra Modi, Prime Minister of India to Kuwait (December 21-22, 2024)
December 22nd, 07:46 pm
PM Modi paid an official visit to Kuwait, at the invitation of His Highness the Amir of the State of Kuwait, Sheikh Meshal Al-Ahmad Al-Jaber Al-Sabah. During his first visit to the country, PM Modi attended the opening ceremony of the 26th Arabian Gulf Cup as the 'Guest of Honour' and held comprehensive talks to deepen bilateral ties.List of Outcomes: Visit of Prime Minister to Kuwait (December 21-22, 2024)
December 22nd, 06:03 pm
During his visit to Kuwait, PM Modi oversaw significant outcomes to strengthen bilateral ties. A Defence Cooperation MoU was signed, a Cultural Exchange Programme (2025-2029) was established and additionally, a Sports Cooperation Programme (2025-2028) was launched. Notably, Kuwait joined the International Solar Alliance, paving the way for collaborative solar energy deployment and low-carbon growth initiatives.PM Modi invites everyone to Rann Utsav
December 21st, 10:08 am
Prime Minister Shri Narendra Modi has invited everyone to Rann Utsav, which will go on till March 2025. Prime Minister Shri Modi underscored that the festival promises to be an unforgettable experience.ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಕರೆ ಮಾಡಿದ ನೆದರ್ಲ್ಯಾಂಡ್ಸ್ ಪ್ರಧಾನಮಂತ್ರಿ ಡಿಕ್ ಸ್ಕೋಫ್
December 18th, 06:51 pm
ಉಭಯ ನಾಯಕರು ಹಂಚಿಕೆಯ ಮೌಲ್ಯಗಳು ಹಾಗೂ ಪ್ರಜಾಪ್ರಭುತ್ವ ಮತ್ತು ಕಾನೂನಿನ ನಂಬಿಕೆಯನ್ನು ಆಧರಿಸಿದ ಭಾರತ ಮತ್ತು ನೆದರ್ಲ್ಯಾಂಡ್ಸ್ ನಡುವಿನ ವಿಶ್ವಾಸಾರ್ಹ ಮತ್ತು ಮೌಲ್ಯಯುತ ಪಾಲುದಾರಿಕೆಯ ಬಗ್ಗೆ ಚರ್ಚಿಸಿದರು.The World This Week on India
December 17th, 04:23 pm
In a week filled with notable achievements and international recognition, India has once again captured the world’s attention for its advancements in various sectors ranging from health innovations and space exploration to climate action and cultural influence on the global stage.ಶ್ರೀಲಂಕಾ ಅಧ್ಯಕ್ಷರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನಮಂತ್ರಿಯವರ ಪತ್ರಿಕಾ ಹೇಳಿಕೆಯ ಇಂಗ್ಲಿಷ್ ಅನುವಾದ
December 16th, 01:00 pm
ನಾನು ಅಧ್ಯಕ್ಷ ದಿಸನಾಯಕ ಅವರನ್ನು ಭಾರತಕ್ಕೆ ಹಾರ್ದಿಕವಾಗಿ ಸ್ವಾಗತಿಸುತ್ತೇನೆ. ಅಧ್ಯಕ್ಷರಾದ ನಂತರ ನೀವು ನಿಮ್ಮ ಮೊದಲ ವಿದೇಶ ಪ್ರವಾಸಕ್ಕೆ ಭಾರತವನ್ನು ಆಯ್ಕೆ ಮಾಡಿರುವುದಕ್ಕೆ ನನಗೆ ಸಂತೋಷವಾಗಿದೆ. ಅಧ್ಯಕ್ಷ ದಿಸನಾಯಕ ಅವರ ಭೇಟಿ ನಮ್ಮ ಸಂಬಂಧದಲ್ಲಿ ಹೊಸ ಚೈತನ್ಯ ಮತ್ತು ಶಕ್ತಿಯನ್ನು ತುಂಬಿದೆ. ನಮ್ಮ ಪಾಲುದಾರಿಕೆಗಾಗಿ ನಾವು ಭವಿಷ್ಯದ ದೃಷ್ಟಿಕೋನವನ್ನು ಅಳವಡಿಸಿಕೊಂಡಿದ್ದೇವೆ. ನಾವು ನಮ್ಮ ಆರ್ಥಿಕ ಪಾಲುದಾರಿಕೆಯಲ್ಲಿ ಹೂಡಿಕೆ ಆಧಾರಿತ ಬೆಳವಣಿಗೆ ಮತ್ತು ಸಂಪರ್ಕಕ್ಕೆ ಒತ್ತು ನೀಡಿದ್ದೇವೆ. ಮತ್ತು ಭೌತಿಕ, ಡಿಜಿಟಲ್ ಹಾಗು ಇಂಧನ ಸಂಪರ್ಕವು ನಮ್ಮ ಪಾಲುದಾರಿಕೆಯ ಪ್ರಮುಖ ಆಧಾರಸ್ತಂಭಗಳಾಗಿರಬೇಕು ಎಂದು ನಿರ್ಧರಿಸಿದ್ದೇವೆ. ಎರಡೂ ರಾಷ್ಟ್ರಗಳ ನಡುವೆ ವಿದ್ಯುತ್-ಗ್ರಿಡ್ ಸಂಪರ್ಕ ಮತ್ತು ಬಹು ಉತ್ಪನ್ನ ಪೆಟ್ರೋಲಿಯಂ ಪೈಪ್ ಲೈನ್ ಗಳನ್ನು ಸ್ಥಾಪಿಸುವ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತೇವೆ. ಸಂಪೂರ್ ಸೌರ ವಿದ್ಯುತ್ ಯೋಜನೆಯನ್ನು ತ್ವರಿತಗೊಳಿಸಲಾಗುವುದು. ಹೆಚ್ಚುವರಿಯಾಗಿ, ಶ್ರೀಲಂಕಾದ ವಿದ್ಯುತ್ ಸ್ಥಾವರಗಳಿಗೆ ಎಲ್ ಎನ್ ಜಿ ಪೂರೈಸಲಾಗುವುದು. ದ್ವಿಪಕ್ಷೀಯ ವ್ಯಾಪಾರವನ್ನು ಉತ್ತೇಜಿಸಲು ಇಟಿಸಿಎ ಅನ್ನು ಶೀಘ್ರದಲ್ಲೇ ಸಾಧಿಸಲು ಎರಡೂ ಕಡೆಯವರು ಪ್ರಯತ್ನಿಸುತ್ತಾರೆ.ಖ್ಯಾತ ತಬಲಾ ವಾದಕ ಉಸ್ತಾದ್ ಜಾಕೀರ್ ಹುಸೇನ್ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
December 16th, 12:08 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಖ್ಯಾತ ತಬಲಾ ವಾದಕ ಉಸ್ತಾದ್ ಜಾಕೀರ್ ಹುಸೇನ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.ಪ್ರಯಾಗ್ ರಾಜ್ ನಲ್ಲಿ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಕಾರ್ಯಾರಂಭ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಇಂಗ್ಲಿಷ್ ಅವತರಣಿಕೆ
December 13th, 02:10 pm
ಉತ್ತರ ಪ್ರದೇಶದ ಗೌರವಾನ್ವಿತ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಜೀ, ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಜೀ, ಗೌರವಾನ್ವಿತ ಉಪಮುಖ್ಯಮಂತ್ರಿಗಳಾದ ಕೇಶವ್ ಪ್ರಸಾದ್ ಮೌರ್ಯ ಜೀ ಮತ್ತು ಬ್ರಜೇಶ್ ಪಾಠಕ್ ಜೀ, ಉತ್ತರ ಪ್ರದೇಶದ ಗೌರವಾನ್ವಿತ ಮಂತ್ರಿಗಳು, ಸಂಸತ್ತು ಮತ್ತು ವಿಧಾನಸಭೆಯ ಗೌರವಾನ್ವಿತ ಸದಸ್ಯರು, ಪ್ರಯಾಗ್ ರಾಜ್ ನ ಮೇಯರ್ ಮತ್ತು ಜಿಲ್ಲಾ ಪಂಚಾಯತ್ ಅಧ್ಯಕ್ಷರು, ಹಾಗುಇತರ ಗೌರವಾನ್ವಿತ ಅತಿಥಿಗಳೇ ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೇ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ಸುಮಾರು 5,500 ಕೋಟಿ ರೂಪಾಯಿ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಚಾಲನೆಯನ್ನು ಪ್ರಧಾನಿ ನೆರವೇರಿಸಿದರು
December 13th, 02:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ಸುಮಾರು 5,500 ಕೋಟಿ ರೂಪಾಯಿ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಚಾಲನೆ ನೆರವೇರಿಸಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಸಂಗಮದ ಪವಿತ್ರ ಭೂಮಿಯಾದ ಪ್ರಯಾಗ್ರಾಜ್ಗೆ ಭಕ್ತಿಪೂರ್ವಕವಾಗಿ ನಮಸ್ಕರಿಸಿದರು ಮತ್ತು ಮಹಾಕುಂಭದಲ್ಲಿ ಪಾಲ್ಗೊಂಡ ಸಂತರು ಮತ್ತು ಸಾಧುಗಳಿಗೆ ಗೌರವ ನಮನ ಸಲ್ಲಿಸಿದರು. ತಮ್ಮ ಕಠಿಣ ಪರಿಶ್ರಮ ಮತ್ತು ಸಮರ್ಪಣೆಯಿಂದ ಮಹಾಕುಂಭವನ್ನು ಯಶಸ್ವಿಗೊಳಿಸಿದ ನೌಕರರು, ಶ್ರಮಿಕರು ಮತ್ತು ಸಫಾಯಿ ಕರ್ಮಚಾರಿಗಳಿಗೆ ಶ್ರೀ ಮೋದಿ ಕೃತಜ್ಞತೆ ಸಲ್ಲಿಸಿದರು. ಮಹಾಕುಂಭದ ಅಗಾಧತೆ ಮತ್ತು ಗಾತ್ರದ ಬಗ್ಗೆ ಮಾತನಾಡಿದ ಪ್ರಧಾನಮಂತ್ರಿಯವರು, ಇದು ವಿಶ್ವದ ಅತಿದೊಡ್ಡ ಜನಸಂಗಮಗಳಲ್ಲಿ ಒಂದಾಗಿದೆ. 45 ದಿನಗಳ ಕಾಲ ನಡೆಯುವ ʻಮಹಾಯಜ್ಞಕ್ಕಾಗಿʼ ಪ್ರತಿದಿನ ಲಕ್ಷಾಂತರ ಭಕ್ತರನ್ನು ಸ್ವಾಗತಿಸುತ್ತದೆ ಮತ್ತು ಈ ಸಂದರ್ಭಕ್ಕಾಗಿ ಸಂಪೂರ್ಣ ಹೊಸ ನಗರವನ್ನೇ ಸ್ಥಾಪಿಸಲಾಗಿದೆ ಎಂದರು. ಪ್ರಯಾಗ್ರಾಜ್ ಭೂಮಿಯಲ್ಲಿ ಹೊಸ ಇತಿಹಾಸ ಬರೆಯಲಾಗುತ್ತಿದೆ, ಎಂದು ಪ್ರಧಾನಿ ಉದ್ಗರಿಸಿದರು. ಮುಂದಿನ ವರ್ಷ ನಡೆಯಲಿರುವ ಮಹಾಕುಂಭ ಮೇಳದ ಕಾರ್ಯಕ್ರಮವು ರಾಷ್ಟ್ರದ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಗುರುತನ್ನು ಹೊಸ ಉತ್ತುಂಗಕ್ಕೆ ಕೊಂಡೊಯ್ಯುತ್ತದೆ ಎಂದು ಪ್ರಧಾನಿ ಒತ್ತಿ ಹೇಳಿದರು. ಇಂತಹ ಏಕತೆಯ 'ಮಹಾಯಜ್ಞ'ದ ಬಗ್ಗೆ ವಿಶ್ವದಾದ್ಯಂತ ಚರ್ಚಿಸಲಾಗುವುದು ಎಂದು ಹೇಳಿದರು. ಮಹಾಕುಂಭ ಮೇಳದ ಯಶಸ್ವಿ ಸಂಘಟನೆಗಾಗಿ ಅವರು ಜನತೆಗೆ ಶುಭ ಕೋರಿದರು.ಗುಜರಾತ್ ನ ಖ್ಯಾತ ಗಾಯಕ ಪುರುಷೋತ್ತಮ್ ಉಪಾಧ್ಯಾಯ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
December 11th, 09:20 pm
ಗುಜರಾತಿನ ದಿಗ್ಗಜ ಗಾಯಕ ಪುರುಷೋತ್ತಮ ಉಪಾಧ್ಯಾಯ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂತಾಪ ಸೂಚಿಸಿದ್ದಾರೆ.ತಮಿಳು ಕವಿ ಸುಬ್ರಮಣ್ಯ ಭಾರತಿ ಅವರ ಸಂಪೂರ್ಣ ಕೃತಿಗಳ ಸಂಕಲನ ಬಿಡುಗಡೆಯಲ್ಲಿ ಪ್ರಧಾನಮಂತ್ರಿಯವರ ಭಾಷಣದ ಇಂಗ್ಲಿಷ್ ಅವತರಣಿಕೆ
December 11th, 02:00 pm
ಕೇಂದ್ರ ಸಚಿವರಾದ, ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಜಿ, ರಾವ್ ಇಂದರ್ಜಿತ್ ಸಿಂಗ್ ಮತ್ತು ಎಲ್. ಮುರುಗನ್ ಜಿ, ಈ ಕಾರ್ಯಕ್ರಮದ ಕೇಂದ್ರ ವ್ಯಕ್ತಿ, ಸಾಹಿತ್ಯ ವಿದ್ವಾಂಸ ಶ್ರೀ ಸೀನಿ ವಿಶ್ವನಾಥನ್ ಜಿ, ಪ್ರಕಾಶಕ ವಿ. ಶ್ರೀನಿವಾಸನ್ ಜಿ, ಮತ್ತು ಉಪಸ್ಥಿತರಿರುವ ಎಲ್ಲ ಗೌರವಾನ್ವಿತ ಗಣ್ಯರೇ... ಮಹಿಳೆಯರೇ ಮತ್ತು ಮಹನೀಯರೇ,ತಮಿಳು ಶ್ರೇಷ್ಠ ಕವಿ ಸುಬ್ರಮಣ್ಯ ಭಾರತಿ ಅವರ ಸಂಪೂರ್ಣ ಕೃತಿಗಳ ಸಂಕಲನ ಬಿಡುಗಡೆ ಮಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
December 11th, 01:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ಲೋಕ ಕಲ್ಯಾಣ್ ಮಾರ್ಗದ ನಂಬರ್ 7 ನಿವಾಸದಲ್ಲಿ ತಮಿಳು ಮಹಾನ್ ಕವಿ ಮತ್ತು ಸ್ವಾತಂತ್ರ್ಯ ಹೋರಾಟಗಾರ ಸುಬ್ರಮಣ್ಯ ಭಾರತಿ ಅವರ ಸಮಗ್ರ ಕೃತಿಗಳ ಸಂಕಲನ ಬಿಡುಗಡೆ ಮಾಡಿದರು. ತಮಿಳಿನ ಮಹಾನ್ ಕವಿ ಸುಬ್ರಮಣ್ಯ ಭಾರತಿ ಅವರ ಜನ್ಮದಿನದಂದು ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಮೋದಿ ಅವರು, ಭಾರತದ ಸಂಸ್ಕೃತಿ ಮತ್ತು ಸಾಹಿತ್ಯ, ಭಾರತದ ಸ್ವಾತಂತ್ರ್ಯ ಹೋರಾಟದ ನೆನಪುಗಳು ಮತ್ತು ತಮಿಳುನಾಡಿನ ಹೆಮ್ಮೆಗೆ ಇಂದು ಉತ್ತಮ ಅವಕಾಶವಾಗಿದೆ. ಮಹಾಕವಿ ಸುಬ್ರಹ್ಮಣ್ಯ ಭಾರತಿ ಅವರ ಕೃತಿಗಳ ಪ್ರಕಟಣೆಯ ಮಹಾಪೂರವೇ ಇಂದು ನೆರವೇರಿತು ಎಂದರು.ಸುಬ್ರಮಣ್ಯ ಭಾರತಿ ಅವರಿಗೆ ನಮನ ಸಲ್ಲಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
December 11th, 10:27 am
ಕವಿ ಮತ್ತು ಬರಹಗಾರ ಸುಬ್ರಮಣ್ಯ ಭಾರತಿ ಅವರ ಜನ್ಮ ವಾರ್ಷಿಕೋತ್ಸವದ ಅಂಗವಾಗಿ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದರು.ಮಹಾನ್ ತಮಿಳು ಕವಿ ಮತ್ತು ಸ್ವಾತಂತ್ರ್ಯ ಹೋರಾಟಗಾರ ಸುಬ್ರಹ್ಮಣ್ಯ ಭಾರತಿ ಅವರ ಸಂಪೂರ್ಣ ಕೃತಿಗಳ ಸಂಕಲನ 2024ರ ಡಿಸೆಂಬರ್ 11 ರಂದು ಪ್ರಧಾನಮಂತ್ರಿ ಅವರಿಂದ ಬಿಡುಗಡೆ
December 10th, 05:12 pm
ಸುಬ್ರಮಣ್ಯ ಭಾರತಿಯವರ ಬರಹಗಳು ಜನರಲ್ಲಿ ದೇಶಪ್ರೇಮವನ್ನು ತುಂಬುವ ಜೊತೆಗೆ, ಜನಸಾಮಾನ್ಯರು ಅರ್ಥೈಸಿಕೊಳ್ಳಬಹುದಾದ ಸರಳ ಭಾಷೆಯಲ್ಲಿ ಭಾರತೀಯ ಸಂಸ್ಕೃತಿ ಮತ್ತು ದೇಶದ ಆಧ್ಯಾತ್ಮಿಕ ಪರಂಪರೆಯ ಸಾರವನ್ನು ಹೇಳಿವೆ. ಸೀನಿ ವಿಶ್ವನಾಥನ್ ಅವರು ಸಂಕಲನ ಮಾಡಿ ಸಂಪಾದಿಸಿರುವ ಸುಬ್ರಹ್ಮಣ್ಯ ಭಾರತಿ ಅವರ ಸಂಪೂರ್ಣ ಕೃತಿಗಳ 23 ಸಂಪುಟಗಳನ್ನು ಅಲಯನ್ಸ್ ಪ್ರಕಾಶನ ಪ್ರಕಟಿಸಿದೆ. ಇದು ಸುಬ್ರಮಣ್ಯ ಭಾರತಿಯವರ ಬರಹಗಳ ಆವೃತ್ತಿಗಳು, ವಿವರಣೆಗಳು, ದಾಖಲೆಗಳು, ಹಿನ್ನೆಲೆ ಮಾಹಿತಿ ಮತ್ತು ತಾತ್ವಿಕ ಪ್ರಸ್ತುತಿಗಳ ವಿವರಗಳನ್ನು ಒಳಗೊಂಡಿದೆ.ಸ್ವಾಹಿದ್ ದಿವಸವು ಅಸ್ಸಾಂ ಚಳುವಳಿಗೆ ತಮ್ಮನ್ನು ತಾವು ಸಮರ್ಪಿಸಿಕೊಂಡವರ ಅಸಾಧಾರಣ ಧೈರ್ಯ ಮತ್ತು ತ್ಯಾಗಗಳನ್ನು ಸ್ಮರಿಸುವ ಸಂದರ್ಭವಾಗಿದೆ: ಪ್ರಧಾನಮಂತ್ರಿ
December 10th, 04:16 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಸ್ವಾಹಿದ್ ದಿವಸವು ಅಸ್ಸಾಂ ಚಳವಳಿಗೆ ತಮ್ಮನ್ನು ತಾವು ಸಮರ್ಪಿಸಿಕೊಂಡವರ ಅಸಾಧಾರಣ ಧೈರ್ಯ ಮತ್ತು ತ್ಯಾಗಗಳನ್ನು ಸ್ಮರಿಸುವ ಸಂದರ್ಭವಾಗಿದೆ ಎಂದು ಹೇಳಿದರು.ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ 2024ರಲ್ಲಿ ಭಾಗವಹಿಸುವವರೊಂದಿಗೆ ಡಿಸೆಂಬರ್ 11ರಂದು ಸಂವಾದ ನಡೆಸಲಿರುವ ಪ್ರಧಾನಮಂತ್ರಿ
December 09th, 07:38 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡಿಸೆಂಬರ್ 11 , 2024 ರಂದು ಸಂಜೆ 4:30 ಗಂಟೆಗೆ ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ 2024 ರ ಗ್ರಾಂಡ್ ಫಿನಾಲೆಯಲ್ಲಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಯುವ ನವೋದ್ಯಮಿಗಳೊಂದಿಗೆ ಸಂವಾದ ನಡೆಸಲಿದ್ದಾರೆ . ಗ್ರ್ಯಾಂಡ್ ಫಿನಾಲೆಯಲ್ಲಿ 1300ಕ್ಕೂ ಹೆಚ್ಚು ವಿದ್ಯಾರ್ಥಿಗಳ ತಂಡಗಳು ಭಾಗವಹಿಸುತ್ತವೆ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.ಕಾರ್ಯಕಾರ್ ಸುವರ್ಣ ಮಹೋತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
December 07th, 05:52 pm
ಕಾರ್ಯಕಾರ್(ಕಾರ್ಯಕರ್ತರು) ಸುವರ್ಣ ಮಹೋತ್ಸವದ ಶುಭ ಸಂದರ್ಭದಲ್ಲಿ ನಾನು ಭಗವಾನ್ ಸ್ವಾಮಿನಾರಾಯಣ ಅವರ ಪಾದಗಳಿಗೆ ತಲೆಬಾಗಿ ನಮಸ್ಕರಿಸುತ್ತೇನೆ. ಇಂದು ಪ್ರಮುಖ್ ಸ್ವಾಮಿ ಮಹಾರಾಜ್ ಅವರ 103ನೇ ಜನ್ಮದಿನ ಆಚರಿಸಲಾಗುತ್ತಿದೆ, ಅವರಿಗೂ ಸಹ ನಾನು ಗೌರವಪೂರ್ವಕವಾಗಿ ನಮಸ್ಕರಿಸುತ್ತೇನೆ, ಏಕೆಂದರೆ ಅವರು ದೈವಿಕ ಗುರು ಹರಿ ಪ್ರಗತ್ ಬ್ರಹ್ಮನ ಮೂರ್ತರೂಪವಾಗಿದ್ದರು. ಭಗವಾನ್ ಸ್ವಾಮಿನಾರಾಯಣ ಅವರ ಬೋಧನೆಗಳು ಮತ್ತು ಪ್ರಮುಖ್ ಸ್ವಾಮಿ ಮಹಾರಾಜ್ ಅವರ ಸಂಕಲ್ಪಗಳು ಮತ್ತು ನಿರ್ಣಯಗಳು ಪರಮ ಪೂಜ್ಯ ಗುರು ಹರಿ ಮಹಂತ್ ಸ್ವಾಮಿ ಮಹಾರಾಜ್ ಅವರ ಅವಿರತ ಪ್ರಯತ್ನ ಮತ್ತು ಸಮರ್ಪಣೆಯ ಮೂಲಕ ಇಂದು ಸಾಕಾರಗೊಳ್ಳುತ್ತಿವೆ. 1 ಲಕ್ಷ ಸ್ವಯಂಸೇವಕರು, ಯುವಕರು ಮತ್ತು ಮಕ್ಕಳನ್ನು ಒಳಗೊಂಡ ಈ ಭವ್ಯವಾದ ಸಾಂಸ್ಕೃತಿಕ ಕಾರ್ಯಕ್ರಮವು ಬೀಜ, ಮರ ಮತ್ತು ಹಣ್ಣುಗಳ ಸಾರವನ್ನು ಸುಂದರವಾಗಿ ಪ್ರತಿನಿಧಿಸುತ್ತಿದೆ. ನಾನು ನಿಮ್ಮ ನಡುವೆ ದೈಹಿಕವಾಗಿ ಇರಲು ಸಾಧ್ಯವಾಗದಿದ್ದರೂ, ಈ ಘಟನೆಯ ಚೈತನ್ಯ ಮತ್ತು ಶಕ್ತಿಯನ್ನು ನನ್ನ ಹೃದಯದಲ್ಲಿ ಆಳವಾಗಿ ಅನುಭವಿಸುತ್ತೇನೆ. ಇಂತಹ ಭವ್ಯವಾದ ಮತ್ತು ದಿವ್ಯವಾದ ಆಚರಣೆಯನ್ನು ಆಯೋಜಿಸಿದ್ದಕ್ಕಾಗಿ ಪರಮ ಪೂಜ್ಯ ಗುರು ಹರಿ ಮಹಂತ್ ಸ್ವಾಮಿ ಮಹಾರಾಜ್ ಮತ್ತು ಎಲ್ಲಾ ಪೂಜ್ಯ ಸಾಧು ಸಂತರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ, ಅವರಿಗೆ ಅಪಾರ ಗೌರವದಿಂದ ನಮಸ್ಕರಿಸುತ್ತೇನೆ.ಅಹಮದಾಬಾದ್ನಲ್ಲಿ ಕಾರ್ಯಕರ್ತರ ಸುವರ್ಣ ಮಹೋತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
December 07th, 05:40 pm
ಅಹಮದಾಬಾದ್ನಲ್ಲಿ ಆಯೋಜಿತವಾಗಿದ್ದ ಕಾರ್ಯಕರ್ತರ ಸುವರ್ಣ ಮಹೋತ್ಸವವನ್ನು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೊ ಕಾನ್ಫರೆನ್ಸ್ ಉದ್ದೇಶಿಸಿ ಭಾಷಣ ಮಾಡಿದರು. ಪರಮಪೂಜ್ಯ ಗುರು ಹರಿ ಮಹಂತ ಸ್ವಾಮಿ ಮಹಾರಾಜ್, ಪೂಜ್ಯ ಸಾಧು ಸಂತರು ಮತ್ತು ಸತ್ಸಂಗಿ ಕುಟುಂಬದ ಸದಸ್ಯರು ಮತ್ತು ಇತರೆ ಗಣ್ಯರು ಮತ್ತು ಪ್ರತಿನಿಧಿಗಳನ್ನು ಅವರು ಸ್ವಾಗತಿಸಿದರು. ಕಾರ್ಯಕರ್ತರ ಸುವರ್ಣ ಮಹೋತ್ಸವ ಸಂದರ್ಭದಲ್ಲಿ ಶ್ರೀ ಮೋದಿ ಅವರು ಭಗವಾನ್ ಸ್ವಾಮಿ ನಾರಾಯಣರ ಪಾದಗಳಿಗೆ ನಮಸ್ಕರಿಸಿ, ಇಂದು ಪ್ರಮುಖ್ ಸ್ವಾಮಿ ಮಹಾರಾಜರ 103ನೇ ಜನ್ಮದಿನವೂ ಆಗಿದೆ. ಭಗವಾನ್ ಸ್ವಾಮಿ ನಾರಾಯಣರ ಬೋಧನೆಗಳು, ಪ್ರಮುಖ ಸ್ವಾಮಿ ಮಹಾರಾಜರ ಸಂಕಲ್ಪಗಳು ಪರಮ ಪೂಜ್ಯ ಗುರು ಹರಿಮಹಂತ ಸ್ವಾಮಿ ಮಹಾರಾಜರ ಕಠಿಣ ಪರಿಶ್ರಮ ಮತ್ತು ಸಮರ್ಪಣೆಯಿಂದ ಇಂದು ಫಲ ನೀಡುತ್ತಿವೆ. ಯುವಕರು ಮತ್ತು ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳ ಜೊತೆಗೆ ಸುಮಾರು 1 ಲಕ್ಷ ಕಾರ್ಯಕರ್ತರು ಸೇರಿದಂತೆ ಇಂತಹ ಬೃಹತ್ ಕಾರ್ಯಕ್ರಮವನ್ನು ವೀಕ್ಷಿಸುತ್ತಿರುವುದು ಸಂತಸ ತಂದಿದೆ. ಸ್ಥಳದಲ್ಲಿ ದೈಹಿಕವಾಗಿ ಇಲ್ಲದಿದ್ದರೂ, ಈ ಕಾರ್ಯಕ್ರಮದ ಶಕ್ತಿಯನ್ನು ಅನುಭವಿಸಬಹುದಾಗಿದೆ. ಮಹಾರಥೋತ್ಸವದಲ್ಲಿ ಭಾಗಿಯಾಗಿರುವ ಪರಮಪೂಜ್ಯ ಗುರು ಹರಿಮಹಾಂತ ಸ್ವಾಮಿ ಮಹಾರಾಜರು, ಸಕಲ ಸಾಧು ಸಂತರಿಗೆ ಅವರು ಶುಭ ಕೋರಿದರು.ನವದೆಹಲಿಯಲ್ಲಿ ಆಯೋಜಿತವಾಗಿದ್ದ ಅಷ್ಟಲಕ್ಷ್ಮೀ ಮಹೋತ್ಸವದ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
December 06th, 02:10 pm
ಅಸ್ಸಾಂ ಮುಖ್ಯಮಂತ್ರಿ, ಶ್ರೀ ಹಿಮಂತ ಬಿಸ್ವಾ ಶರ್ಮಾ ಜಿ, ಮೇಘಾಲಯ ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ಜಿ, ತ್ರಿಪುರಾ ಮುಖ್ಯಮಂತ್ರಿ ಶ್ರೀ ಮಾಣಿಕ್ ಸಹಾ ಜಿ, ಸಿಕ್ಕಿಂ ಮುಖ್ಯಮಂತ್ರಿ, ಶ್ರೀ ಪ್ರೇಮ್ ಸಿಂಗ್ ತಮಾಂಗ್ ಜಿ, ನನ್ನ ಸಂಪುಟ ಸಹೋದ್ಯೋಗಿಗಳಾದ ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ ಜಿ ಮತ್ತು ಶ್ರೀ ಸುಕಾಂತ ಮಜುಂದಾರ್ ಜಿ, ಅರುಣಾಚಲ ಪ್ರದೇಶದ ಉಪಮುಖ್ಯಮಂತ್ರಿ, ಮಿಜೋರಾಂ ಮತ್ತು ನಾಗಾಲ್ಯಾಂಡ್ ಸರ್ಕಾರಗಳ ಸಚಿವರೆ, ಇಲ್ಲಿರುವ ಇತರೆ ಜನಪ್ರತಿನಿಧಿಗಳೆ, ಈಶಾನ್ಯ ಭಾಗದ ಸಹೋದರ, ಸಹೋದರಿಯರೆ, ಮಹಿಳೆಯರೆ ಮತ್ತು ಮಹನೀಯರೇ!ಅಷ್ಟಲಕ್ಷ್ಮಿ ಮಹೋತ್ಸವ ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
December 06th, 02:08 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ಭಾರತ ಮಂಟಪದಲ್ಲಿಂದು ಅಷ್ಟಲಕ್ಷ್ಮಿ ಮಹೋತ್ಸವ ಉದ್ಘಾಟಿಸಿದರು. ಕಾರ್ಯಕ್ರಮಕ್ಕೆ ಎಲ್ಲ ಗಣ್ಯರನ್ನು ಸ್ವಾಗತಿಸಿದ ಶ್ರೀ ಮೋದಿ, ಇದು ಬಾಬಾಸಾಹೇಬ್ ಡಾ ಬಿ ಆರ್ ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿವಸವಾಗಿದೆ. ಬಾಬಾಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವು 75 ವರ್ಷಗಳನ್ನು ಪೂರೈಸಿದ್ದು, ಎಲ್ಲಾ ನಾಗರಿಕರಿಗೂ ಸ್ಫೂರ್ತಿಯಾಗಿದೆ. ಭಾರತದ ಎಲ್ಲಾ ನಾಗರಿಕರ ಪರವಾಗಿ ಶ್ರೀ ಮೋದಿ ಅವರು ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ನಮನ ಸಲ್ಲಿಸಿದರು.