The bond between India & Guyana is of soil, of sweat, of hard work: PM Modi

November 21st, 08:00 pm

Prime Minister Shri Narendra Modi addressed the National Assembly of the Parliament of Guyana today. He is the first Indian Prime Minister to do so. A special session of the Parliament was convened by Hon’ble Speaker Mr. Manzoor Nadir for the address.

ಗಯಾನಾ ಸಂಸತ್ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

November 21st, 07:50 pm

ಗಯಾನಾ ಸಂಸತ್ತಿನ ರಾಷ್ಟ್ರೀಯ ಸಭೆಯನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಭಾಷಣ ಮಾಡಿದರು. ಅಲ್ಲಿನ ಸಂಸತ್‌ ಉದ್ದೇಶಿಸಿ ಮಾತನಾಡಿದ ಭಾರತದ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಪ್ರಧಾನಮಂತ್ರಿಗಳ ಭಾಷಣಕ್ಕಾಗಿ ಮಾನ್ಯ ಸ್ಪೀಕರ್ ಶ್ರೀ ಮಂಜೂರ್ ನಾದಿರ್ ಅವರು ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆದಿದ್ದರು.

ಇಂದು, ಪ್ರಪಂಚದಾದ್ಯಂತದ ಜನರು ಭಾರತದ ಬಗ್ಗೆ ಇನ್ನಷ್ಟು ತಿಳಿದುಕೊಳ್ಳಲು ಬಯಸುತ್ತಾರೆ: ಮನ್ ಕಿ ಬಾತ್ ಸಮಯದಲ್ಲಿ ಪ್ರಧಾನಿ ಮೋದಿ

October 27th, 11:30 am

ನನ್ನ ಪ್ರಿಯ ದೇಶವಾಸಿಗಳೇ ನಮಸ್ಕಾರ. ' ಮನದ ಮಾತಿಗೆ' ಎಲ್ಲರಿಗೂ ಸ್ವಾಗತ. ನನ್ನ ಜೀವನದ ಅವಿಸ್ಮರಣೀಯ ಕ್ಷಣಗಳು ಯಾವುವು ಎಂದು ನನ್ನನ್ನು ನೀವು ಕೇಳಿದರೆ, ಬಹಳಷ್ಟು ಘಟನೆಗಳು ನೆನಪಿಗೆ ಬರುತ್ತವೆ, ಅದರಲ್ಲೂ ಒಂದು ವಿಶೇಷವಾದ ಕ್ಷಣವಿದೆ, ಅದೇ ಕಳೆದ ವರ್ಷ ನವೆಂಬರ್ 15 ರಂದು ನಾನು ಭಗವಾನ್ ಬಿರ್ಸಾ ಮುಂಡಾ ಅವರ ಜನ್ಮ ಜಯಂತಿಯಂದು ಜಾರ್ಖಂಡ್‌ನ ಅವರ ಜನ್ಮಸ್ಥಳ ಉಲಿಹಾತು ಗ್ರಾಮಕ್ಕೆ ಹೋಗಿದ್ದು. ನನ್ನ ಮೇಲೆ ಈ ಪ್ರವಾಸದ ಪ್ರಭಾವ ಆಗಾಧವಾಗಿತ್ತು. ಈ ಪುಣ್ಯಭೂಮಿಯ ಮಣ್ಣಿನ ಆಶೀರ್ವಾದ ಪಡೆಯುವ ಭಾಗ್ಯವನ್ನು ಪಡೆದ ದೇಶದ ಮೊದಲ ಪ್ರಧಾನಿ ನಾನಾಗಿದ್ದೇನೆ. ಆ ಕ್ಷಣದಲ್ಲಿ ನನಗೆ ಸ್ವಾತಂತ್ರ್ಯ ಹೋರಾಟದ ಶಕ್ತಿಯ ಅನುಭವವಾದುದಲ್ಲದೆ, ಈ ಭೂಮಿಯ ಶಕ್ತಿಯೊಂದಿಗೆ ಬೆರೆಯುವ ಅವಕಾಶವೂ ಲಭಿಸಿತು. ಒಂದು ನಿರ್ಧಾರವನ್ನು ಪೂರೈಸುವ ಧೈರ್ಯ ಹೇಗೆ ದೇಶದ ಕೋಟ್ಯಾಂತರ ಜನರ ಭವಿಷ್ಯವನ್ನು ಬದಲಾಯಿಸುತ್ತದೆ ಎಂಬುದರ ಅನುಭವವೂ ನನಗಾಯಿತು.

​​​​​​​90ನೇ ಇಂಟರ್ ಪೋಲ್ ಮಹಾಧಿವೇಶನ ಉದ್ದೇಶಿಸಿ ಪ್ರಧಾನಮಂತ್ರಿ ಮಾಡಿದ ಭಾಷಣ

October 18th, 01:40 pm

90ನೇ ಇಂಟರ್‌ಪೋಲ್ ಮಹಾಸಭೆಗೆ ನಾನು ಎಲ್ಲರಿಗೂ ಆತ್ಮೀಯ ಸ್ವಾಗತ ಕೋರುತ್ತೇನೆ. ಭಾರತ ಮತ್ತು ಇಂಟರ್ ಪೋಲ್ ಎರಡಕ್ಕೂ ಮಹತ್ವದ ಸಮಯದಲ್ಲಿ ನೀವು ಇಲ್ಲಿಗೆ ಬಂದಿರುವುದು ಉತ್ತಮವಾಗಿದೆ. ಭಾರತವು 2022 ರಲ್ಲಿ 76ನೇ ಸ್ವಾತಂತ್ರ್ಯವನ್ನು ಆಚರಿಸಿಕೊಳ್ಳುತ್ತಿದೆ. ಇದು ನಮ್ಮ ಜನರು, ಸಂಸ್ಕೃತಿ ಮತ್ತು ಸಾಧನೆಗಳ ಆಚರಣೆಯಾಗಿದೆ. ನಾವು ಎಲ್ಲಿಂದ ಬಂದಿದ್ದೇವೆಂದು ಹಿಂತಿರುಗಿ ನೋಡುವ ಮತ್ತು ನಾವು ಎಲ್ಲಿಗೆ ಹೋಗಬೇಕೆಂದು ಮುಂದೆ ನೋಡುವ ಸಮಯ ಇದಾಗಿದೆ. ಇಂಟರ್ ಪೋಲ್ ಕೂಡ ಐತಿಹಾಸಿಕ ಮೈಲಿಗಲ್ಲಿನ ಸನಿಹದಲ್ಲಿದೆ. 2023 ರಲ್ಲಿ ಇಂಟರ್ ಪೋಲ್ ತನ್ನ ಸ್ಥಾಪನೆಯ 100 ವರ್ಷಗಳನ್ನು ಆಚರಿಸಲಿದೆ. ಇದು ಆನಂದಿಸುವ ಮತ್ತು ಪ್ರತಿಬಿಂಬಿಸಲು ಉತ್ತಮ ಮ ಸಮಯವಾಗಿದೆ. ಹಿನ್ನಡೆಗಳಿಂದ ಕಲಿತು, ವಿಜಯಗಳನ್ನು ಆಚರಿಸುವ ಜೊತೆಗೆ ಭವಿಷ್ಯವನ್ನು ಭರವಸೆಯಿಂದ ನೋಡಬೇಕಾಗಿದೆ.

ನವದೆಹಲಿಯ ಪ್ರಗತಿ ಮೈದಾನದಲ್ಲಿ 90ನೇ ಇಂಟರ್ ಪೋಲ್ ಮಹಾಸಭೆಯನ್ನುದ್ದೇಶಿಸಿ ಭಾಷಣ ಮಾಡಿದ ಪ್ರಧಾನಮಂತ್ರಿ

October 18th, 01:35 pm

ನವದೆಹಲಿಯಲ್ಲಿ ನಡೆದ 90ನೇ ಇಂಟರ್ ಪೋಲ್ ಮಹಾಧಿವೇಶನ ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು ಎಲ್ಲ ಗಣ್ಯರಿಗೆ ಆತ್ಮೀಯ ಸ್ವಾಗತ ಕೋರಿದರು. ಭಾರತವು ತನ್ನ ಸ್ವಾತಂತ್ರ್ಯದ 75ನೇ ವರ್ಷವನ್ನು ಆಚರಿಸುತ್ತಿದೆ, ಇದು ಜನರು ಮತ್ತು ಸಂಸ್ಕೃತಿಗಳ ಆಚರಣೆಯಾಗಿದೆ ಎಂದು ಪ್ರಧಾನಮಂತ್ರಿ ಒತ್ತಿ ಹೇಳಿದರು. ಇಂಟರ್ ಪೋಲ್ ಬರುವ 2023ರಲ್ಲಿ ತನ್ನ ಶತಮಾನೋತ್ಸವ ಆಚರಿಸಲಿದೆ ಎಂದು ಪ್ರಧಾನಮಂತ್ರಿ ಮಾಹಿತಿ ನೀಡಿದರು. ಇದು ಆತ್ಮಾವಲೋಕನದ ಸಮಯವಾಗಿದ್ದು, ಭವಿಷ್ಯವನ್ನು ನಿರ್ಧರಿಸುವ ಸಮಯವೂ ಆಗಿದೆ ಎಂದು ಅವರು ಹೇಳಿದರು. ಸೋಲಿನಿಂದ ಕಲಿಯಲು ಮತ್ತು ಭವಿಷ್ಯದ ಬಗ್ಗೆ ಭರವಸೆಯಿಂದ ನೋಡಲು ಸಂತೋಷಪಡಲು ಮತ್ತು ಪ್ರತಿಬಿಂಬಿಸಲು ಇದು ಉತ್ತಮ ಸಮಯ ಎಂದು ಶ್ರೀ ಮೋದಿ ಹೇಳಿದರು.

ವಾಸ್ತವಾಂಶ: ಕ್ವಾಡ್ ನಾಯಕರ ಶೃಂಗಸಭೆ

September 25th, 11:53 am

ಸೆಪ್ಟೆಂಬರ್ 24ರಂದು ಅಧ್ಯಕ್ಷ ಬಿಡೆನ್ ಅವರು ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಸ್ಕಾಟ್ ಮಾರಿಸನ್, ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಜಪಾನ್ ಪ್ರಧಾನಮಂತ್ರಿ ಯೋಶಿಹಿಡೆ ಸುಗಾ ಅವರಿಗೆ ಶ್ವೇತಭವನದಲ್ಲಿ ಕ್ವಾಡ್ ನ ನಾಯಕರು ಸ್ವಯಂ ಪಾಲ್ಗೊಂಡಿದ್ದ ಪ್ರಪ್ರಥಮ ಶೃಂಗಸಭೆಗೆ ಆತಿಥ್ಯ ನೀಡಿದ್ದರು. ನಾಯಕರು 21ನೇ ಶತಮಾನದ ಸವಾಲುಗಳ ಮೇಲೆ ಪ್ರಾಯೋಗಿಕ ಸಹಕಾರ ಮುಂದುವರಿಸುವ; ಸುರಕ್ಷಿತ ಮತ್ತು ಪರಿಣಾಮಕಾರಿ ಲಸಿಕೆಗಳ ಉತ್ಪಾದನೆಯನ್ನು ಹೆಚ್ಚಿಸುವ ಮತ್ತು ಅವುಗಳು ಲಭ್ಯವಾಗುವಂತೆ ಮಾಡುವುದೂ ಸೇರಿದಂತೆ ಕೋವಿಡ್-19 ಸಾಂಕ್ರಾಮಿಕವನ್ನು ಕೊನೆಗಾಣಿಸುವ; ಅತ್ಯುನ್ನತ ಗುಣಮಟ್ಟದ ಮೂಲಸೌಕರ್ಯವನ್ನು ಉತ್ತೇಜಿಸುವ; ಹವಾಮಾನ ಬಿಕ್ಕಟ್ಟನ್ನು ನಿಗ್ರಹಿಸುವ; ಹೊರಹೊಮ್ಮುವ ತಂತ್ರಜ್ಞಾನಗಳು, ಬಾಹ್ಯಾಕಾಶ ಮತ್ತು ಸೈಬರ್ ಭದ್ರತೆಯಲ್ಲಿ ಸಹಯೋಗ; ಮತ್ತು ನಮ್ಮ ಎಲ್ಲಾ ದೇಶಗಳಲ್ಲಿ ಮುಂದಿನ ಪೀಳಿಗೆಯ ಪ್ರತಿಭೆಗಳನ್ನು ಬೆಳೆಸಲು ನಮ್ಮ ಬಾಂಧವ್ಯಗಳನ್ನು ಬಲಗೊಳಿಸುವ ಮಹತ್ವಾಕಾಂಕ್ಷೆಯ ಉಪಕ್ರಮಗಳನ್ನು ಮುಂದಿಟ್ಟರು.

IPS Probationers interact with PM Modi

July 31st, 11:02 am

PM Narendra Modi had a lively interaction with the Probationers of Indian Police Service. The interaction with the Officer Trainees had a spontaneous air and the Prime Minister went beyond the official aspects of the Service to discuss the aspirations and dreams of the new generation of police officers.

ಸರ್ದಾರ್ ವಲ್ಲಭಭಾಯಿ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯಲ್ಲಿ ಐ.ಪಿ.ಎಸ್. ಪ್ರೊಬೆಶನರಿಗಳನ್ನು ಉದ್ದೇಶಿಸಿ ಪ್ರಧಾನ ಮಂತ್ರಿ ಅವರ ಭಾಷಣ

July 31st, 11:01 am

ನಿಮ್ಮೆಲ್ಲರೊಂದಿಗೆ ಮಾತನಾಡುವುದು ನನಗೆ ಆನಂದದ ಸಂಗತಿ. ಪ್ರತೀ ವರ್ಷ ನಿಮ್ಮಂತಹ ಯುವ ಮಿತ್ರರ ಜೊತೆ ಸಂವಾದ ನಡೆಸಬೇಕು ಎನ್ನುವುದು ನನ್ನ ಆಶಯ. ಇದರಿಂದ ನಿಮ್ಮ ಚಿಂತನೆಗಳನ್ನು ತಿಳಿದುಕೊಳ್ಳಲು ಸಹಾಯವಾಗುತ್ತದೆ. ನಿಮ್ಮ ಮಾತುಗಳು, ಪ್ರಶ್ನೆಗಳು, ಮತ್ತು ವಿಚಾರ ಮಾಡುವ ಗುಣ ಭವಿಷ್ಯದ ಸವಾಲುಗಳನ್ನು ನಿಭಾಯಿಸಲು ನನಗೂ ಸಹಾಯ ಮಾಡುತ್ತದೆ.

ಸರ್ದಾರ್ ವಲ್ಲಭಭಾಯ್ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯ ಐಪಿಎಸ್ ಪ್ರೊಬೇಷನರಿ ಅಧಿಕಾರಿಗಳೊಂದಿಗೆ ಪ್ರಧಾನಮಂತ್ರಿ ಸಂವಾದ

July 31st, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಸರ್ದಾರ್ ವಲ್ಲಭಭಾಯ್ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯ ಐಪಿಎಸ್ ಪ್ರಶಿಕ್ಷಣಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು. ಅವರು ತರಬೇತಿಯಲ್ಲಿರುವ ಅಧಿಕಾರಿಗಳೊಂದಿಗೆ ಸಂವಾದ ನಡೆಸಿದರು. ಕೇಂದ್ರ ಗೃಹ ಸಚಿವ ಶ್ರೀ ಅಮಿತ್ ಷಾ ಮತ್ತು ಗೃಹ ಖಾತೆ ರಾಜ್ಯ ಸಚಿವ ಶ್ರೀ ನಿತ್ಯಾನಂದ ರೈ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಜಿ7 ಶೃಂಗಸಭೆಯ 2ನೇ ದಿನದ ಅಧಿವೇಶನದಲ್ಲಿ 2 ಕಲಾಪ ಉದ್ದೇಶಿಸಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ

June 13th, 08:06 pm

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2ನೇ ದಿನದ ಜಿ7 ಶೃಂಗಸಭೆಯ ಅಧಿವೇಶನದಲ್ಲಿಂದು 2 ವರ್ಚುವಲ್ ಕಲಾಪಗಳಲ್ಲಿ ಪಾಲ್ಗೊಂಡಿದ್ದರು. ‘ಒಟ್ಟಾಗಿ ಸೇರಿ ಮರುನಿರ್ಮಾಣ – ಮುಕ್ತ ಸಮಾಜ ಮತ್ತು ಆರ್ಥಿಕತೆಗಳು’ ಹಾಗೂ ‘ಹಸಿರು ಮರುನಿರ್ಮಾಣ: ಹವಾಮಾನ ಮತ್ತು ಪ್ರಕೃತಿ’ ಈ ಎರಡು ವಿಷಯಗಳ ಕುರಿತು 2 ಕಲಾಪಗಳು ಜರುಗಿದವು.

List of the documents announced/signed during India - Australia Virtual Summit

June 04th, 03:54 pm

List of the documents announced/signed during India - Australia Virtual Summit, June 04, 2020

The Rule of Law has been a core civilizational value of Indian society since ages: PM Modi

February 22nd, 10:35 am

Addressing the International Judicial Conference, PM Modi said The Rule of Law has been a core civilizational value of Indian society since ages. Emphasizing on gender justice, PM Modi said, “No country or society of the world can claim to achieve holistic development or claim to be a just society without Gender Justice.”

ಅಂತರರಾಷ್ಟ್ರೀಯ ನ್ಯಾಯಾಂಗ ಸಮ್ಮೇಳನ ಉದ್ದೇಶಿಸಿ ಪ್ರಧಾನಿಯವರ ಭಾಷಣ

February 22nd, 10:34 am

ನವದೆಹಲಿಯಲ್ಲಿ ನಡೆದ ಅಂತರರಾಷ್ಟ್ರೀಯ ನ್ಯಾಯಾಂಗ ಸಮ್ಮೇಳನವನ್ನು ಉದ್ದೇಶಿಸಿ ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ಮಾತನಾಡಿದರು. ಸುಪ್ರೀಂ ಕೋರ್ಟ್‌ ಹಾಗೂ ವಿವಿಧ ಹೈಕೋರ್ಟ್‌ಗಳ ನ್ಯಾಯಾಧೀಶರು, ಖ್ಯಾತ ವಕೀಲರು ಮತ್ತು ವಿದೇಶಿ ಪ್ರತಿನಿಧಿಗಳು ಸಮಾವೇಶದಲ್ಲಿ ಭಾಗವಹಿಸಿದ್ದರು.

ಪ್ರಧಾನಮಂತ್ರಿ ಅವರಿಂದ ಲಕ್ನೋದಲ್ಲಿ ಡಿಫೆನ್ಸ್ ಎಕ್ಸ್ ಪೊ ಉದ್ಘಾಟನೆ

February 05th, 01:48 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಉತ್ತರ ಪ್ರದೇಶದ ಲಕ್ನೋದಲ್ಲಿಂದು 11ನೇ ಆವೃತ್ತಿಯ ರಕ್ಷಣಾ ಉತ್ಪನ್ನಗಳ ಪ್ರದರ್ಶನ ಡಿಫೆನ್ಸ್ ಎಕ್ಸ್ ಪೊ ಉದ್ಘಾಟಿಸಿದರು. ಭಾರತದ ದ್ವೈವಾರ್ಷಿಕ ಈ ಮಿಲಿಟರಿ ಉತ್ಪನ್ನಗಳ ಪ್ರದರ್ಶನ ದೇಶದ ರಕ್ಷಣಾ ಸಾಮರ್ಥ್ಯವನ್ನು ಜಾಗತಿಕ ರಕ್ಷಣಾ ಉತ್ಪಾದನಾ ತಾಣವನ್ನಾಗಿ ಬಿಂಬಿಸುವ ಉದ್ದೇಶದ್ದು, ಡಿಫೆನ್ಸ್ ಎಕ್ಸ್ ಪೊ 2020 ಕೇವಲ ಭಾರತದ ಅತಿದೊಡ್ಡ ರಕ್ಷಣಾ ಉತ್ಪನ್ನಗಳ ಪ್ರದರ್ಶನ ವೇದಿಕೆಯಲ್ಲ, ಇದು ವಿಶ್ವದ ಅತಿದೊಡ್ಡ ಡಿಫೆನ್ಸ್ ಎಕ್ಸ್ ಪೊಗಳಲ್ಲಿ ಒಂದಾಗಿದೆ. ಈ ಬಾರಿ ಒಂದು ಸಾವಿರಕ್ಕೂ ಅಧಿಕ ರಕ್ಷಣಾ ಉತ್ಪನ್ನಗಳ ಉತ್ಪಾದಕರು ಮತ್ತು ಜಗತ್ತಿನ 150 ಕಂಪನಿಗಳು ಈ ಪ್ರದರ್ಶನದ ಭಾಗವಾಗಿವೆ.