ಗುಜರಾತ್ ನ ರಾಜ್ ಕೋಟ್ ನಲ್ಲಿ ಹಲವು ಅಭಿವೃದ್ಧಿ ಕಾರ್ಯಗಳ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣ

July 27th, 04:00 pm

ಗುಜರಾತ್ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಭಾಯಿ ಪಟೇಲ್ ಜೀ, ನನ್ನ ಸಂಪುಟ ಸಹೋದ್ಯೋಗಿ ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ ಜೀ, ಮಾಜಿ ಮುಖ್ಯಮಂತ್ರಿ ಶ್ರೀ ವಿಜಯ್ ರೂಪಾನಿ ಜೀ, ಸಿ ಆರ್ ಪಾಟೀಲ್ ಜೀ.

​​​​​​​ಗುಜರಾತ್ ನ ರಾಜ್ ಕೋಟ್ ನಲ್ಲಿ ರಾಜ್ ಕೋಟ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಮಂತ್ರಿ

July 27th, 03:43 pm

ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಇಂದು ರಾಜ್ ಕೋಟ್ ಗೆ ಮಾತ್ರವಲ್ಲ, ಇಡೀ ಸೌರಾಷ್ಟ್ರ ಪ್ರದೇಶಕ್ಕೆ ಉತ್ತಮವಾದ ದಿನವಾಗಿದೆ ಎಂದರು. ಈ ಪ್ರದೇಶದಲ್ಲಿ ಚಂಡಮಾರುತ ಮತ್ತು ಪ್ರವಾಹದಂತಹ ಇತ್ತೀಚಿನ ನೈಸರ್ಗಿಕ ವಿಪತ್ತುಗಳಿಂದ ನಷ್ಟ ಅನುಭವಿಸಿದವರಿಗೆ ಅವರು ಗೌರವ ಸಲ್ಲಿಸಿದರು. ಸರ್ಕಾರ ಮತ್ತು ಜನತೆ ಒಟ್ಟಾಗಿ ಬಿಕ್ಕಟ್ಟನ್ನು ಎದುರಿಸಿದ್ದೇವೆ. ರಾಜ್ಯ ಸರ್ಕಾರದ ಸಹಾಯದಿಂದ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಲಾಗುತ್ತಿದೆ ಎಂದು ಪ್ರಧಾನಿ ಭರವಸೆ ನೀಡಿದರು. ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಕ್ಕೆ ಸಾಧ್ಯವಿರುವ ಎಲ್ಲ ಬೆಂಬಲವನ್ನು ನೀಡುತ್ತದೆ ಎಂದು ಅವರು ಭರವಸೆ ನೀಡಿದರು.

‘ಮನದ ಮಾತು’ ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ದಿನಾಂಕ 18.06.2023 ರಂದು ಮಾಡಿದ ‘ಮನ್ ಕಿ ಬಾತ್’ – 102 ನೇ ಸಂಚಿಕೆಯ ಕನ್ನಡ ಅವತರಣಿಕೆ

June 18th, 11:30 am

ನನ್ನ ಪ್ರಿಯ ದೇಶವಾಸಿಗಳೇ, ನಮಸ್ಕಾರ, 'ಮನದ ಮಾತಿ’ಗೆ ಮತ್ತೊಮ್ಮೆ ನಿಮ್ಮೆಲ್ಲರಿಗೂ ಸ್ವಾಗತ. ಸಾಮಾನ್ಯವಾಗಿ, 'ಮನದ ಮಾತು' ಪ್ರತಿ ತಿಂಗಳ ಕೊನೆಯ ಭಾನುವಾರದಂದು ಪ್ರಸಾರವಾಗುತ್ತದೆ, ಆದರೆ, ಈ ಬಾರಿ ಅದು ಒಂದು ವಾರ ಮುಂಚಿತವಾಗಿ ಪ್ರಸಾರವಾಗುತ್ತಿದೆ. ನಾನು ಮುಂದಿನ ವಾರ ಅಮೆರಿಕಾದಲ್ಲಿ ಇರುತ್ತೇನೆ ಮತ್ತು ಅಲ್ಲಿ ಬಹಳ ವ್ಯಸ್ತವಾಗಿರುತ್ತೇನೆ ಎಂಬುದು ನಿಮಗೆಲ್ಲ ಗೊತ್ತು, ಹಾಗಾಗಿ ನಾನು ತೆರಳುವ ಮೊದಲು ನಿಮ್ಮೊಂದಿಗೆ ಮಾತನಾಡಬೇಕೆಂದು ಯೋಚಿಸಿದೆ. ಇದಕ್ಕಿಂತ ಉತ್ತಮವಾದದ್ದು ಇನ್ನೇನಿದೆ? ನಿಮ್ಮೆಲ್ಲರ ಆಶೀರ್ವಾದ, ನಿಮ್ಮ ಸ್ಫೂರ್ತಿ, ನನ್ನ ಶಕ್ತಿಯನ್ನು ಹೆಚ್ಚಿಸುತ್ತದೆ.

'ಬಿಪೊರ್ ಜೋಯ್' ಚಂಡಮಾರುತದ ಬಗ್ಗೆ ಮಾಡಿರುವ ಪೂರ್ವ ಸನ್ನದ್ಧತೆಯನ್ನು ಪರಿಶೀಲಿಸಲು ನಡೆದ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ ಪ್ರಧಾನಮಂತ್ರಿ

June 12th, 04:23 pm

ದುರ್ಬಲ ಸ್ಥಳಗಳಲ್ಲಿ ವಾಸಿಸುವ ಜನರನ್ನು ರಾಜ್ಯ ಸರ್ಕಾರವು ಸುರಕ್ಷಿತವಾಗಿ ಸ್ಥಳಾಂತರಿಸುವುದನ್ನು ಖಚಿತಪಡಿಸಿಕೊಳ್ಳಲು ಹಾಗೂ ವಿದ್ಯುತ್, ದೂರಸಂಪರ್ಕ, ಆರೋಗ್ಯ, ಆಹಾರ, ಕುಡಿಯುವ ನೀರು ಮುಂತಾದ ಎಲ್ಲಾ ಅಗತ್ಯ ಸೇವೆಗಳ ನಿರ್ವಹಣೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಅವರುಗಳ ವಸ್ತುಗಳಿಗೆ ಉಂಟಾದ ಹಾನಿಯ ಸಂದರ್ಭದಲ್ಲಿ ತಕ್ಷಣವೇ ವ್ಯವಸ್ಥೆಗಳನ್ನು ಪುನಃಸ್ಥಾಪಿಸಲು ಸಾಧ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುವಂತೆ ಹಿರಿಯ ಅಧಿಕಾರಿಗಳಿಗೆ ಪ್ರಧಾನಮಂತ್ರಿ ಅವರು ಸೂಚಿಸಿದರು. ಪ್ರಾಣಿಗಳ ಸುರಕ್ಷತೆಯನ್ನೂ ಖಾತ್ರಿಪಡಿಸಬೇಕು ಮತ್ತು ನಿಯಂತ್ರಣ ಕೊಠಡಿಗಳು 24*7 ಕಾರ್ಯನಿರ್ವಹಣೆ ಮಾಡಬೇಕು ಎಂದು ಅವರು ನಿರ್ದೇಶನ ನೀಡಿದರು.