ಪ್ರಧಾನ ಮಂತ್ರಿ ಅಧ್ಯಕ್ಷತೆಯಲ್ಲಿ 42ನೇ ಪ್ರಗತಿ ಸಂವಾದ ಸಭೆ
June 28th, 07:49 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜೂನ್ 28ರಂದು ಬೆಳಗ್ಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಒಳಗೊಂಡಿರುವ ಸಕ್ರಿಯ ಆಡಳಿತ ಮತ್ತು ಸಮಯೋಚಿತ ಅನುಷ್ಠಾನಕ್ಕಾಗಿ ಐಸಿಟಿ ಆಧರಿತ ಬಹುಮಾದರಿ ವೇದಿಕೆಯಾದ 42ನೇ ಪ್ರಗತಿ ಸಭೆಯ ಅಧ್ಯಕ್ಷತೆ ವಹಿಸಿದ್ದರು.ದಮನ್ ನಲ್ಲಿ ನಮೋ ಪಥ, ದೇವ್ಕಾ ಕಡಲತೀರವನ್ನು ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಮಂತ್ರಿ
April 25th, 11:23 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ದಮನ್ ನಲ್ಲಿ ನಮೋ ಪಥ, ದೇವ್ಕಾ ಕಡಲತೀರವನ್ನು ದೇಶಕ್ಕೆ ಸಮರ್ಪಿಸಿದರು. ಸ್ಥಳಕ್ಕೆ ಆಗಮಿಸಿದ ಪ್ರಧಾನಮಂತ್ರಿಯವರು ಕಟ್ಟಡ ಕಾರ್ಮಿಕರೊಂದಿಗೆ ಸಂವಾದ ನಡೆಸಿ, ಅವರೊಂದಿಗೆ ಛಾಯಾಚಿತ್ರಕ್ಕೆ ಪೋಸ್ ನೀಡಿದರು. ಅವರು ನಯಾ ಭಾರತ್ ಸೆಲ್ಫಿ ಪಾಯಿಂಟ್ ಗೂ ಭೇಟಿ ನೀಡಿದರು.Balanced development of every region is a huge priority: PM Modi
April 25th, 04:50 pm
PM Modi laid the foundation stone and dedicated to the nation various development projects worth more than Rs 4850 crores at Silvassa, Dadra, and Nagar Haveli today. The projects included the dedication of NAMO Medical Education & Research Institute in Silvassa, and the laying of the foundation stone of 96 projectsಸಿಲ್ವಾಸ್ಸಾ, ದಾದ್ರಾ ಮತ್ತು ನಗರ್ ಹವೇಲಿಯಲ್ಲಿ 4850 ಕೋಟಿ ರೂ.ಗೂ ಹೆಚ್ಚು ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದ ಪ್ರಧಾನ ಮಂತ್ರಿ
April 25th, 04:49 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಿಲ್ವಾಸ್ಸಾ, ದಾದ್ರಾ ಮತ್ತು ನಗರ ಹವೇಲಿಯಲ್ಲಿ 4850 ಕೋಟಿ ರೂ.ಗೂ ಹೆಚ್ಚು ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು. ಇವುಗಳಲ್ಲಿ ಸಿಲ್ವಾಸ್ಸಾದಲ್ಲಿ ನಮೋ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಯ ಲೋಕಾರ್ಪಣೆ ಮತ್ತು ಸರ್ಕಾರಿ ಶಾಲೆಗಳು, ದಮನ್‌ನ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು, ವಿವಿಧ ರಸ್ತೆಗಳ ಸುಂದರೀಕರಣ, ಬಲಪಡಿಸುವಿಕೆ ಮತ್ತು ಅಗಲೀಕರಣ, ಮೀನು ಮಾರುಕಟ್ಟೆ, ಶಾಪಿಂಗ್ ಕಾಂಪ್ಲೆಕ್ಸ್ ಮತ್ತು ಈ ಪ್ರದೇಶದಲ್ಲಿ ನೀರಿನ ಸರಬರಾಜು ಯೋಜನೆಯ ವರ್ಧನಯಂತಹ 96 ಯೋಜನೆಗಳ ಸಮರ್ಪಣೆ ಮತ್ತು ಶಂಕುಸ್ಥಾಪನೆಗಳು ಸೇರಿವೆ. ಪ್ರಧಾನಮಂತ್ರಿಯವರು ದಿಯು ಮತ್ತು ಸಿಲ್ವಾಸ್ಸಾದ ಪಿಎಂಎವೈ ನಗರ ಫಲಾನುಭವಿಗಳಿಗೆ ಮನೆಯ ಕೀಲಿಗಳನ್ನು ಹಸ್ತಾಂತರಿಸಿದರು.ಮಧ್ಯಪ್ರದೇಶ, ಕೇರಳ, ದಾದ್ರಾ ಮತ್ತು ನಗರ್ ಹವೇಲಿ ಹಾಗೂ ಡಮನ್ ಮತ್ತು ಡಿಯುಗೆ ಏಪ್ರಿಲ್ 24 ಮತ್ತು 15ರಂದು ಭೇಟಿ ನೀಡಲಿರುವ ಪ್ರಧಾನಮಂತ್ರಿ
April 21st, 03:02 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2023ರ ಏಪ್ರಿಲ್ 24 ಮತ್ತು 25ರಂದು ಮಧ್ಯಪ್ರದೇಶ, ಕೇರಳ, ದಾದ್ರಾ ಮತ್ತು ನಗರ್ ಹವೇಲಿ ಹಾಗೂ ಡಮನ್ ಮತ್ತು ಡಿಯುಗೆ ಭೇಟಿ ನೀಡಲಿದ್ದಾರೆ.ರೋಜ್ಗಾರ್ ಮೇಳದಡಿ ಹೊಸದಾಗಿ ಸೇರ್ಪಡೆಗೊಂಡ ಸುಮಾರು 71,000 ಮಂದಿಗೆ ನೇಮಕಾತಿ ಪತ್ರಗಳ ವಿತರಣೆಯ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಇಂಗ್ಲಿಷ್ ಭಾಷಾಂತರ
November 22nd, 10:31 am
ನಿಮ್ಮೆಲ್ಲರಿಗೂ ಅಭಿನಂದನೆಗಳು. ಇಂದು, ದೇಶದ 45 ನಗರಗಳಲ್ಲಿ 71,000 ಕ್ಕೂ ಹೆಚ್ಚು ಯುವಕ / ಯುವತಿಯರಿಗೆ ನೇಮಕಾತಿ ಪತ್ರಗಳನ್ನು ನೀಡಲಾಗುತ್ತಿದೆ. ಇಂದು ಸಾವಿರಾರು ಮನೆಗಳಲ್ಲಿ ಸಮೃದ್ಧಿಯ ಹೊಸ ಯುಗವು ಪ್ರಾರಂಭವಾಗಿದೆ. ಕಳೆದ ತಿಂಗಳು, ಧಂತೇರಸ್ ದಿನದಂದು, ಕೇಂದ್ರ ಸರ್ಕಾರವು 75,000 ಯುವಕ / ಯುವತಿಯರಿಗೆ ನೇಮಕಾತಿ ಪತ್ರಗಳನ್ನು ವಿತರಿಸಿತ್ತು. ಇಂದಿನ 'ರೋಜ್ಗಾರ್ ಮೇಳ'ವು ಸರ್ಕಾರಿ ಉದ್ಯೋಗಗಳನ್ನು ಒದಗಿಸಲು ಮಿಷನ್ ಮೋಡ್ ನಲ್ಲಿ ಸರ್ಕಾರ ಹೇಗೆ ಕಾರ್ಯನಿರ್ವಹಿಸುತ್ತಿದೆ ಎಂಬುದಕ್ಕೆ ಸಾಕ್ಷಿಯಾಗಿದೆ.ರೋಜ್ಗಾರ್ ಮೇಳದಡಿ ಹೊಸದಾಗಿ ಸೇರ್ಪಡೆಯಾದವರಿಗೆ ಸುಮಾರು 71,000 ನೇಮಕಾತಿ ಪತ್ರಗಳನ್ನು ವಿತರಿಸಿದ ಪ್ರಧಾನಮಂತ್ರಿ
November 22nd, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೊ ಕಾನ್ಫರೆನ್ಸ್ ಮೂಲಕ ರೋಜ್ಗಾರ್ ಮೇಳದಡಿ ಹೊಸದಾಗಿ ಸೇರ್ಪಡೆಯಾದವರಿಗೆ ಸುಮಾರು 71,000 ನೇಮಕಾತಿ ಪತ್ರಗಳನ್ನು ವಿತರಿಸಿದರು. ಉದ್ಯೋಗ ಸೃಷ್ಟಿಯನ್ನು ಹೆಚ್ಚಿಸಲು ಮತ್ತು ಯುವಕರಿಗೆ ಅವರ ಸಬಲೀಕರಣ ಮತ್ತು ರಾಷ್ಟ್ರೀಯ ಅಭಿವೃದ್ಧಿಯಲ್ಲಿ ನೇರ ಪಾಲ್ಗೊಳ್ಳುವಿಕೆಗೆ ಅರ್ಥಪೂರ್ಣ ಅವಕಾಶಗಳನ್ನು ಒದಗಿಸುವಲ್ಲಿ ರೋಜ್ಗಾರ್ ಮೇಳವು ವೇಗವರ್ಧಕವಾಗಿ ಕಾರ್ಯನಿರ್ವಹಿಸುವ ನಿರೀಕ್ಷೆ ಇದೆ. ಈ ಹಿಂದೆ ಅಕ್ಟೋಬರ್ ನಲ್ಲಿ, ರೋಜ್ಗಾರ್ ಮೇಳದ ಅಡಿಯಲ್ಲಿ ಹೊಸದಾಗಿ ನೇಮಕಗೊಂಡವರಿಗೆ 75,000 ನೇಮಕಾತಿ ಪತ್ರಗಳನ್ನು ಹಸ್ತಾಂತರಿಸಲಾಗಿತ್ತು.ಗೋವಾದ ಪಣಜಿಯಲ್ಲಿ ಜರುಗಿದ ಹರ್ ಘರ್ ಜಲ ಉತ್ಸವದಲ್ಲಿ ಪ್ರಧಾನಮಂತ್ರಿಯವರ ವಿಡಿಯೊ ಸಂದೇಶದ ಕನ್ನಡ ಅವತರಣಿಕೆ
August 19th, 04:51 pm
ನಮಸ್ಕಾರ್, ಗೋವಾದ ಮುಖ್ಯಮಂತ್ರಿ ಶ್ರೀ ಪ್ರಮೋದ್ ಸಾವಂತ್ ಜೀ, ಕೇಂದ್ರ ಜಲ ಶಕ್ತಿ ಸಚಿವ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಜೀ, ಗೋವಾ ಸರ್ಕಾರದ ಇತರ ಸಚಿವರು, ಗಣ್ಯರು, ಘನತೆವೆತ್ತವರು, ಮಹಿಳೆಯರು ಮತ್ತು ಸಜ್ಜನ ಬಾಂಧವರೇ, ಇಂದು ಅತ್ಯಂತ ಮಹತ್ವದ ಮತ್ತು ಪವಿತ್ರ ದಿನವಾಗಿದೆ. ದೇಶಾದ್ಯಂತ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸಲಾಗುತ್ತಿದೆ. ಎಲ್ಲಾ ದೇಶವಾಸಿಗಳಿಗೆ ಮತ್ತು ಪ್ರಪಂಚದಾದ್ಯಂತ ಹರಡಿರುವ ಶ್ರೀ ಕೃಷ್ಣನ ಭಕ್ತರಿಗೆ ಅನೇಕ ಅಭಿನಂದನೆಗಳು. ಜೈ ಶ್ರೀ ಕೃಷ್ಣ!ಜಲ ಜೀವನ್ ಮಿಷನ್ ಅಡಿಯಲ್ಲಿ ಹರ್ ಘರ್ ಜಲ ಉತ್ಸವವನ್ನು ಉದ್ದೇಶಿಸಿ ವಿಡಿಯೊ ಸಮಾವೇಶ ಮೂಲಕ ಪ್ರಧಾನಮಂತ್ರಿ ಅವರು ಭಾಷಣ ಮಾಡಿದರು
August 19th, 12:12 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಲ ಜೀವನ್ ಮಿಷನ್ ಅಡಿಯಲ್ಲಿ ಹರ್ ಘರ್ ಜಲ ಉತ್ಸವವನ್ನು ಉದ್ದೇಶಿಸಿ ವಿಡಿಯೊ ಸಮಾವೇಶ ಮೂಲಕ ಮಾತನಾಡಿದರು. ಪಣಜಿ ಗೋವಾದಲ್ಲಿ ಹರ್ ಘರ್ ಜಲ ಉತ್ಸವ ನಡೆದಿದೆ. ಈ ಸಂದರ್ಭದಲ್ಲಿ ಗೋವಾ ಮುಖ್ಯಮಂತ್ರಿ ಶ್ರೀ ಪ್ರಮೋದ್ ಸಾವಂತ್, ಕೇಂದ್ರ ಸಚಿವ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಪ್ರಧಾನಮಂತ್ರಿಯವರು ಶ್ರೀ ಕೃಷ್ಣ ಭಕ್ತರಿಗೆ ಜನ್ಮಾಷ್ಟಮಿಯ ಶುಭ ಸಂದರ್ಭದಲ್ಲಿ ಶುಭಾಶಯ ಕೋರಿದರು.ಹಿಮಾಚಲ ಪ್ರದೇಶದ ಆರೋಗ್ಯ ಕಾರ್ಯಕರ್ತರು ಮತ್ತು ಕೋವಿಡ್ ಲಸಿಕಾ ಫಲಾನುಭವಿಗಳ ಜೊತೆ ಪ್ರಧಾನ ಮಂತ್ರಿಗಳ ಸಂವಾದ
September 06th, 11:01 am
ಹಿಮಾಚಲ ಪ್ರದೇಶವು ಇಂದು ಪ್ರಧಾನ ಸೇವಕನಾಗಿ ಮಾತ್ರವಲ್ಲ ಕುಟುಂಬದ ಸದಸ್ಯನಾಗಿ ನನಗೆ ಹೆಮ್ಮೆಯ ಅವಕಾಶವನ್ನು ಒದಗಿಸಿಕೊಟ್ಟಿದೆ. ಹಿಮಾಚಲವು ಸಣ್ಣ ಸೌಲಭ್ಯಗಳಿಗಾಗಿ, ಅವಕಾಶಗಳಿಗಾಗಿ ಹೋರಾಟ ಮಾಡುತ್ತಿದ್ದುದನ್ನು ನಾನು ನೋಡಿದ್ದೆ, ಮತ್ತು ಇಂದು ಹಿಮಾಚಲ ಪ್ರದೇಶವು ಅಭಿವೃದ್ಧಿಯ ಕಥೆ ಬರೆಯುತ್ತಿರುವುದನ್ನೂ ನೋಡುತ್ತಿದ್ದೇನೆ. ಇದೆಲ್ಲ ಸಾಧ್ಯವಾಗಿರುವುದು ದೇವತೆಗಳ ಆಶೀರ್ವಾದದಿಂದ, ಹಿಮಾಚಲ ಪ್ರದೇಶ ಸರಕಾರದ ಪರಿಶ್ರಮದಿಂದ ಮತ್ತು ಹಿಮಾಚಲದ ಜನತೆಯ ಜಾಗೃತಿಯಿಂದ. ನನಗೆ ಸಂವಹನ ನಡೆಸಲು ಅವಕಾಶ ಮಾಡಿಕೊಟ್ಟಂತಹ ಎಲ್ಲರಿಗೂ ನಾನು ನನ್ನ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಮತ್ತು ಇಡೀ ತಂಡಕ್ಕೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ನಿಮ್ಮೆಲ್ಲರಿಗೂ ಶುಭವಾಗಲಿ!!ಹಿಮಾಚಲ ಪ್ರದೇಶದ ಕೋವಿಡ್ ಲಸಿಕೆ ಕಾರ್ಯಕ್ರಮದ ಫಲಾನುಭವಿಗಳು ಮತ್ತು ಆರೋಗ್ಯ ಕಾರ್ಯಕರ್ತರೊಂದಿಗೆ ಸಂವಾದ ನಡೆಸಿದ ಪ್ರಧಾನಿ
September 06th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹಿಮಾಚಲ ಪ್ರದೇಶದ ಕೋವಿಡ್ ಲಸಿಕೆ ಕಾರ್ಯಕ್ರಮದ ಆರೋಗ್ಯ ಕಾರ್ಯಕರ್ತರು ಮತ್ತು ಫಲಾನುಭವಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು. ರಾಜ್ಯಪಾಲರು, ಮುಖ್ಯಮಂತ್ರಿಗಳು, ಕೇಂದ್ರ ಸಚಿವರಾದ ಶ್ರೀ ಜೆ.ಪಿ. ನಡ್ಡಾ, ಶ್ರೀ ಅನುರಾಗ್ ಸಿಂಗ್ ಠಾಕೂರ್; ಸಂಸದರು, ಶಾಸಕರು, ಪಂಚಾಯತ್ ನಾಯಕರು ಸೇರಿದಂತೆ ಇತರರು ಈ ಸಂದರ್ಭದಲ್ಲಿ ಹಾಜರಿದ್ದರು.ಪ್ರಧಾನ ಮಂತ್ರಿ ನಾಳೆ ದಾದ್ರಾ ಮತ್ತು ನಗರ ಹವೇಲಿಗೆ ಭೇಟಿ ;ದೊರೆಯಲಿದೆ ಹಲವು ಅಭಿವೃದ್ದಿಕಾಮಗಾರಿಗಳಿಗೆ ಚಾಲನೆ.
January 18th, 06:45 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಾಳೆ 2019 ರ ಜನವರಿ 19 ರಂದು ದಾದ್ರಾ ಮತ್ತು ನಗರ ಹವೇಲಿಗಳ ರಾಜಧಾನಿ ಸಿಲ್ವಾಸಾಕ್ಕೆ ಭೇಟಿ ನೀಡುವರು.ರೋಮಾಂಚಕ ಗುಜರಾತ್ ಶೃಂಗ 2019ರಲ್ಲಿ ಭಾಗಿಯಾಗಲು ನಾಳೆ ಗುಜರಾತ್ ಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿಗಳು
January 16th, 08:03 pm
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 2019ರ ಜನವರಿ 17 ಅಂದರೆ ನಾಳೆಯಿಂದ ಮೂರು ದಿನಗಳ ಗುಜರಾತ್ ಭೇಟಿ ಕೈಗೊಳ್ಳಲಿದ್ದಾರೆ. ಈ ವೇಳೆ, ಅವರು ಗಾಂಧಿನಗರ, ಅಹ್ಮದಾಬಾದ್ ಮತ್ತು ಹಜೀರಾಕ್ಕೆ ಭೇಟಿ ನೀಡಲಿದ್ದಾರೆ.This nation belongs to each and every Indian: PM Modi
April 17th, 02:37 pm
At Dadra and Nagar Haveli, PM Modi inaugurated several government projects, distributed sanction letters to beneficiaries of PMAY Gramin and Urban, and gas connections to beneficiaries of Ujjwala Yojana. PM Modi also laid out his vision of a developed India by 2022 where everyone has own houses. PM Modi also emphasized people to undertake digital transactions and make mobile phones their banks.ದಾದ್ರಾ ಮತ್ತು ನಗರ್ ಹವೇಲಿಯಲ್ಲಿ ಸರ್ಕಾರಿ ಯೋಜನೆಗಳಿಗೆ ಚಾಲನೆ ನೀಡಿದ ಪ್ರಧಾನಿ
April 17th, 02:36 pm
ಪ್ರಧಾನಮಂತ್ರಿಶ್ರೀ. ನರೇಂದ್ರ ಮೋದಿ ಅವರು ಇಂದು ಸಿಲ್ವಾಸಾ, ದಾದ್ರಾ ಮತ್ತು ನಗರ್ ಹವೇಲಿಯಲ್ಲಿ ವಿವಿಧ ಸರ್ಕಾರಿ ಯೋಜನೆಗಳನ್ನು ಉದ್ಘಾಟಿಸಿದರು. ಇದರಲ್ಲಿ ಸರ್ಕಾರಿ ಕಟ್ಟಡಗಳು, ಸೌರ ಪಿ.ವಿ. ವ್ಯವಸ್ಥೆ, ಜನೌಷಧಿ ಕೇಂದ್ರಗಳು ಮತ್ತು ಪಾಸ್ ಪೋರ್ಟ್ ಸೇವಾ ಕೇಂದ್ರವೂ ಸೇರಿದೆ.