ಮಹಾರಾಷ್ಟ್ರದ ಪುಣೆಯಲ್ಲಿರುವ ದಗ್ದುಶೇತ್ ಮಂದಿರದಲ್ಲಿ ದೇವರ ದರ್ಶನ ಮಾಡಿ ಪೂಜೆ ಸಲ್ಲಿಸಿದ ಪ್ರಧಾನ ಮಂತ್ರಿಗಳು

August 01st, 03:10 pm

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಮಹಾರಾಷ್ಟ್ರದ ಪುಣೆಯಲ್ಲಿರುವ ದಗ್ದುಶೇತ್ ಮಂದಿರದಲ್ಲಿ ದೇವರ ದರ್ಶನ ಮಾಡಿ ಪೂಜೆ ನೆರವೇರಿಸಿದರು.

ಪ್ರಧಾನಿ ಆಗಸ್ಟ್ 1ರಂದು ಪುಣೆಗೆ ಭೇಟಿ

July 30th, 01:51 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಗಸ್ಟ್ 1 ರಂದು ಮಹಾರಾಷ್ಟ್ರದ ಪುಣೆಗೆ ಭೇಟಿ ನೀಡಲಿದ್ದಾರೆ. ಪ್ರಧಾನಿ ಅವರು ಬೆಳಗ್ಗೆ 11 ಗಂಟೆ ಸುಮಾರಿಗೆ ದಗ್ದುಶೇತ್ ಮಂದಿರಕ್ಕೆ ಭೇಟಿ ನೀಡಿ ದರ್ಶನ ಮತ್ತು ಪೂಜೆ ನೆರವೇರಿಸಲಿದ್ದಾರೆ. ಬೆಳಗ್ಗೆ 11:45ಕ್ಕೆ ಪ್ರಧಾನಿ ಅವರಿಗೆ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಲಾಗುವುದು. ನಂತರ ಮಧ್ಯಾಹ್ನ 12:45 ಕ್ಕೆ ಪ್ರಧಾನ ಮಂತ್ರಿ ಅವರು ಮೆಟ್ರೋ ರೈಲುಗಳಿಗೆ ಹಸಿರು ನಿಶಾನೆ ತೋರಲಿದ್ದಾರೆ ಮತ್ತು ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.