​​​​​​​17ನೇ ಲೋಕಸಭೆಯ ಕೊನೆಯ ಅಧಿವೇಶನವನ್ನು ಉದ್ದೇಶಿಸಿ ಪ್ರಧಾನಿಮಂತ್ರಿಗಳ ಭಾಷಣದ ಕನ್ನಡ ಪಠ್ಯಾಂತರ

February 10th, 04:59 pm

ಪ್ರಜಾಪ್ರಭುತ್ವದ ಶ್ರೇಷ್ಠ ಸಂಪ್ರದಾಯದಲ್ಲಿ ಇಂದು ಒಂದು ಮಹತ್ವದ ದಿನ. ಕಳೆದ ಐದು ವರ್ಷಗಳಲ್ಲಿ, 17ನೇ ಲೋಕಸಭೆಯು ರಾಷ್ಟ್ರದ ಸೇವೆಯಲ್ಲಿ ಹಲವಾರು ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿದೆ. ಅನೇಕ ಸವಾಲುಗಳ ಎದುರಾದಾಗ, ದೇಶವನ್ನು ಸರಿಯಾದ ದಿಕ್ಕಿನಲ್ಲಿ ಮುನ್ನಡೆಸಲು ಪ್ರತಿಯೊಬ್ಬರೂ ತಮ್ಮ ಸಂಪೂರ್ಣ ಸಾಮರ್ಥ್ಯಗಳೊಂದಿಗೆ ಪ್ರಯತ್ನಿಸಿದ್ದಾರೆ. ಒಂದು ರೀತಿಯಲ್ಲಿ, ರಾಷ್ಟ್ರಕ್ಕೆ ಸಮರ್ಪಿತವಾದ ನಮ್ಮ ಐದು ವರ್ಷಗಳ ಸೈದ್ಧಾಂತಿಕ ಪ್ರಯಾಣವನ್ನು ಪ್ರತಿಬಿಂಬಿಸಲು ಮತ್ತು ಮತ್ತೊಮ್ಮೆ ನಮ್ಮ ಸಂಕಲ್ಪಗಳನ್ನು ರಾಷ್ಟ್ರಕ್ಕೆ ಸಮರ್ಪಿಸಲು ಇಂದು ನಮಗೆಲ್ಲರಿಗೂ ಒಂದು ಅವಕಾಶವಾಗಿದೆ. ʻಸುಧಾರಣೆ, ಕಾರ್ಯಕ್ಷಮತೆ ಮತ್ತು ಪರಿವರ್ತನೆʼಯ ಈ ಐದು ವರ್ಷಗಳು ಬಹಳ ಅಪರೂಪ. ಸುಧಾರಣೆಗಳು ನಡೆಯುವುದು, ಕಾರ್ಯಕ್ಷಮತೆಯನ್ನು ಸಾಧಿಸುವುದು ಮತ್ತು ನಮ್ಮ ಕಣ್ಣುಗಳ ಮುಂದೆ ಪರಿವರ್ತನೆಯನ್ನು ನಾವು ನೋಡುವುದು ಅಪರೂಪ, ಇದು ಹೊಸ ವಿಶ್ವಾಸವನ್ನು ತುಂಬುತ್ತದೆ. ಇಂದು, ರಾಷ್ಟ್ರವು 17ನೇ ಲೋಕಸಭೆಯಿಂದ ಈ ಖಚಿತತೆಯ ಅನುಭವವನ್ನು ಪಡೆಯುತ್ತಿದೆ. ಮತ್ತು ರಾಷ್ಟ್ರವು 17ನೇ ಲೋಕಸಭೆಗೆ ತನ್ನ ಆಶೀರ್ವಾದವನ್ನು ಮುಂದುವರಿಸುತ್ತದೆ ಎಂದು ನನಗೆ ವಿಶ್ವಾಸವಿದೆ. ಸದನದ ಎಲ್ಲಾ ಸನ್ಮಾನ್ಯ ಸದಸ್ಯರು ಈ ಎಲ್ಲಾ ಪ್ರಕ್ರಿಯೆಗಳಲ್ಲಿ ಬಹಳ ಮುಖ್ಯವಾದ ಪಾತ್ರವನ್ನು ವಹಿಸಿದ್ದಾರೆ. ಒಬ್ಬ ನಾಯಕನಾಗಿ ಮತ್ತು ನಿಮ್ಮೆಲ್ಲರ ಒಡನಾಡಿಯಾಗಿ ನಾನು ನಿಮ್ಮೆಲ್ಲರನ್ನೂ ಅಭಿನಂದಿಸುವ ಸಮಯ ಇದಾಗಿದೆ.

​​​​​​​17 ನೇ ಲೋಕಸಭೆಯ ಕೊನೆಯ ದಿನದ ಕಲಾಪ ಉದ್ದೇಶಿಸಿ ಭಾಷಣ ಮಾಡಿದ ಪ್ರಧಾನಮಂತ್ರಿ

February 10th, 04:54 pm

ಸದನ ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಇದು ಭಾರತದ ಪ್ರಜಾತಂತ್ರ ವ್ಯವಸ್ಥೆಗೆ ಅತ್ಯಂತ ಮಹತ್ವದ್ದಾಗಿದೆ ಎಂದ ಅವರು, 17 ನೇ ಲೋಕಸಭೆಯ ಸದಸ್ಯರ ಪ್ರಯತ್ನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ದೇಶವನ್ನು ಮುನ್ನಡೆಸುವ ದಿಸೆಯಲ್ಲಿ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಸೈದ್ಧಾಂತಿಕ ಪಯಣ ಮತ್ತು ಅದರ ಸುಧಾರಣೆಗಾಗಿ ಸಮಯವನ್ನು ದೇಶಕ್ಕೆ ಅರ್ಪಿಸಲು ಇದು ವಿಶೇಷ ಸಂದರ್ಭವಾಗಿದೆ. ಈ ಐದು ವರ್ಷಗಳು 'ಸುಧಾರಣೆ, ನಿರ್ವಹಣೆ ಮತ್ತು ಪರಿವರ್ತನೆಗೆ ಕಾರಣ'ವಾಗಿದೆ. ಇದರ ಅನುಭವವನ್ನು ಇಡೀ ದೇಶ ಇಂದು ನೋಡುತ್ತಿದೆ. ವಿಶ್ವಾಸದ ಪ್ರಯತ್ನಗಳಿಗೆ 17ನೇ ಲೋಕಸಭೆಗೆ ದೇಶದ ಜನರು ಆಶೀರ್ವಾದ ಮಾಡಲಿದ್ದಾರೆ. ಸದಸ್ಯರ ಸಾಧನೆಗಳನ್ನು ಒತ್ತಿ ಹೇಳಿದ ಪ್ರಧಾನಮಂತ್ರಿಯವರು, ಎಲ್ಲರಿಗೂ, ವಿಶೇಷವಾಗಿ ಸಭಾಧ್ಯಕ್ಷರಿಗೆ ಕೃತಜ್ಞತೆ ಸಲ್ಲಿಸಿದರು. ಸದಾ ನಗುತ್ತಿರುವ, ಸಮಲೋನನದಿಂದ ಮತ್ತು ನಿಷ್ಪಕ್ಷಪಾತವಾಗಿ ಸದನವನ್ನು ಮುನ್ನಡೆಸಿದಕ್ಕಾಗಿ ಸಭಾಧ್ಯಕ್ಷರನ್ನು ಅಭಿನಂದಿಸಿದರು.

​​​​​​​‘ವಿಕಸಿತ ಭಾರತ - ವಿಕಸಿತ ಗುಜರಾತ್’ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

February 10th, 01:40 pm

ಗುಜರಾತ್ ನ ನನ್ನ ಆತ್ಮೀಯ ಸಹೋದರ ಮತ್ತು ಸಹೋದರಿಯರೇ..! ನೀವೆಲ್ಲಾ ಹೇಗಿದ್ದೀರಿ? ಎಲ್ಲರೂ ಚೆನ್ನಾಗಿದ್ದೀರೆಂದು ಭಾವಿಸಿದ್ದೇನೆ. ಇಂದು ದೊಡ್ಡ ಅಭಿಯಾನ ‘ವಿಕಸಿತ ಭಾರತ-ವಿಕಸಿತ ಗುಜರಾತ್ (ಅಭಿವೃದ್ಧಿ ಹೊಂದಿದ ಭಾರತ- ಅಭಿವೃದ್ಧಿ ಹೊಂದಿದ ಗುಜರಾತ್ ) ಆರಂಭವಾಗುತ್ತಿದೆ. ನನಗೆ ತಿಳಿದಿರುವಂತೆ ಗುಜರಾತ್ ರಾಜ್ತದ ಮೂಲೆ ಮೂಲೆಗಳಿಂದ ಎಲ್ಲಾ 182 ವಿಧಾನಸಭಾ ಕ್ಷೇತ್ರಗಳ ಲಕ್ಷಾಂತರ ಜನರು ತಂತ್ರಜ್ಞಾನದ ಸಹಾಯದಿಂದ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. “ವಿಕಸಿತ ಗುಜರಾತ್‘ ಪಯಣದಲ್ಲಿ ಸೇರ್ಪಡೆಯಾಗಿರುವ ಪ್ರತಿಯೊಬ್ಬರ ಉತ್ಸಾಹ ನಿಜಕ್ಕೂ ಶ್ಲಾಘನೀಯ. ಹಾಗಾಗಿ ನಾನು ನಿಮ್ಮೆಲ್ಲರಿಗೂ ಹೃದಯ ಪೂರ್ವಕ ಅಭಿನಂದನೆಗಳನ್ನು ತಿಳಿಸಲು ಬಯಸುತ್ತೇನೆ.

​​​​​​​'ವಿಕಸಿತ ಭಾರತ, ವಿಕಸಿತ ಗುಜರಾತ್' ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿಗಳ ಭಾಷಣ

February 10th, 01:10 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು 'ವಿಕಸಿತ ಭಾರತ, ವಿಕಸಿತ ಗುಜರಾತ್‌' ಕಾರ್ಯಕ್ರಮವನ್ನು ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದರು. ಈ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ʻಪ್ರಧಾನ ಮಂತ್ರಿ ಆವಾಸ್ ಯೋಜನೆʼ(ಪಿಎಂಎವೈ) ಮತ್ತು ಇತರ ವಸತಿ ಯೋಜನೆಗಳ ಅಡಿಯಲ್ಲಿ ಗುಜರಾತ್‌ನಾದ್ಯಂತ ನಿರ್ಮಿಸಲಾದ 1.3 ಲಕ್ಷಕ್ಕೂ ಹೆಚ್ಚು ಮನೆಗಳನ್ನು ಉದ್ಘಾಟಿಸಿದರು ಮತ್ತು ಭೂಮಿ ಪೂಜೆ ನೆರವೇರಿಸಿದರು. ʻಆವಾಸ್ ಯೋಜನೆʼಯ ಫಲಾನುಭವಿಗಳೊಂದಿಗೆ ಅವರು ಸಂವಾದ ನಡೆಸಿದರು.

The soil of India creates an affinity for the soul towards spirituality: PM Modi

October 31st, 09:23 pm

PM Modi participated in the programme marking the culmination of Meri Maati Mera Desh campaign’s Amrit Kalash Yatra at Kartavya Path in New Delhi. Addressing the gathering, PM Modi said, Dandi March reignited the flame of independence while Amrit Kaal is turning out to be the resolution of the 75-year-old journey of India’s development journey.” He underlined that the 2 year long celebrations of Azadi Ka Amrit Mahotsav are coming to a conclusion with the ‘Meri Maati Mera Desh’ Abhiyan.

PM participates in program marking culmination of Meri Maati Mera Desh campaign’s Amrit Kalash Yatra

October 31st, 05:27 pm

PM Modi participated in the programme marking the culmination of Meri Maati Mera Desh campaign’s Amrit Kalash Yatra at Kartavya Path in New Delhi. Addressing the gathering, PM Modi said, Dandi March reignited the flame of independence while Amrit Kaal is turning out to be the resolution of the 75-year-old journey of India’s development journey.” He underlined that the 2 year long celebrations of Azadi Ka Amrit Mahotsav are coming to a conclusion with the ‘Meri Maati Mera Desh’ Abhiyan.

ಮನ್ ಕಿ ಬಾತ್‌ಗಾಗಿ ಜನರು ತೋರಿದ ಪ್ರೀತಿ ಅಭೂತಪೂರ್ವ: ಪ್ರಧಾನಿ ಮೋದಿ

May 28th, 11:30 am

ನನ್ನ ಪ್ರೀತಿಯ ದೇಶಬಾಂಧವರೆ ನಮಸ್ಕಾರ. ಮತ್ತೊಮ್ಮೆ, 'ಮನದ ಮಾತಿಗೆ' ನಿಮ್ಮೆಲ್ಲರಿಗೂ ಆತ್ಮೀಯ ಸ್ವಾಗತ. ಈ ಬಾರಿಯ 'ಮನದ ಮಾತಿನ' ಸಂಚಿಕೆ 2ನೇ ಶತಕದ ಆರಂಭವಾಗಿದೆ. ಕಳೆದ ತಿಂಗಳು ನಾವೆಲ್ಲರೂ ಶತಕದ ಸಂಭ್ರಮವನ್ನು ವಿಶೇಷವಾಗಿ ಆಚರಿಸಿದ್ದೇವೆ. ನಿಮ್ಮ ಭಾಗವಹಿಸುವಿಕೆ ಈ ಕಾರ್ಯಕ್ರಮದ ಬಹು ದೊಡ್ಡ ಶಕ್ತಿಯಾಗಿದೆ. 100ನೇ ಸಂಚಿಕೆ ಪ್ರಸಾರವಾಗುವ ಸಮಯದಲ್ಲಿ ಸಂಪೂರ್ಣ ದೇಶ ಒಂದು ಸೂತ್ರದಲ್ಲಿ ಬಂಧಿಸಿದಂತಾಗಿತ್ತು. ನಮ್ಮ ಸ್ವಚ್ಛತಾ ಕರ್ಮಚಾರಿ ಸಹೋದರ ಮತ್ತು ಸಹೋದರಿಯರು ಅಥವಾ ವಿವಿಧ ಕ್ಷೇತ್ರಗಳ ಅನುಭವಿಗಳಾಗಿರಲಿ, 'ಮನದ ಮಾತು' ಎಲ್ಲರನ್ನೂ ಒಟ್ಟಿಗೆ ಸೇರಿಸುವ ಕೆಲಸ ಮಾಡಿದೆ. 'ಮನದ ಮಾತಿಗೆ' ನೀವೆಲ್ಲರೂ ತೋರಿದ ಆತ್ಮೀಯತೆ ಮತ್ತು ಪ್ರೀತಿ ಅಭೂತಪೂರ್ವವಾಗಿದೆ, ಅದು ಭಾವುಕರನ್ನಾಗಿಸುವಂತಿದೆ. 'ಮನದ ಮಾತು' ಪ್ರಸಾರವಾದಾಗ, ಪ್ರಪಂಚದ ವಿವಿಧ ದೇಶಗಳಲ್ಲಿ, ಬೇರೆ ಬೇರೆ ಸಮಯಕ್ಕೆ ಅಂದರೆ, ಎಲ್ಲೋ ಸಂಜೆ ಮತ್ತು ಎಲ್ಲೋ ತಡರಾತ್ರಿಯಾಗಿತ್ತು, ಇದನ್ನು ಲೆಕ್ಕಿಸದೆ, 100 ನೇ ಸಂಚಿಕೆಯನ್ನು ಹೆಚ್ಚಿನ ಸಂಖ್ಯೆಯ ಜನರು ಆಲಿಸಲು ಸಮಯ ಮೀಸಲಿಟ್ಟರು. ನಾನು ಸಾವಿರಾರು ಮೈಲುಗಳಷ್ಟು ದೂರದಲ್ಲಿರುವ ನ್ಯೂಜಿಲೆಂಡ್‌ನ ಆ ವೀಡಿಯೊವನ್ನು ಕೂಡ ನೋಡಿದೆ, ಅದರಲ್ಲಿ 100 ವರ್ಷದ ತಾಯಿಯೊಬ್ಬರು ಆಶೀರ್ವಾದ ನೀಡುತ್ತಿದ್ದರು. ದೇಶ ವಿದೇಶದ ಜನರು 'ಮನದ ಮಾತಿನ' ಕುರಿತು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ಅನೇಕ ಜನರು ರಚನಾತ್ಮಕ ವಿಶ್ಲೇಷಣೆಯನ್ನು ಸಹ ಮಾಡಿದ್ದಾರೆ. ‘ಮನದ ಮಾತಿನಲ್ಲಿ’ ದೇಶ ಮತ್ತು ದೇಶವಾಸಿಗಳ ಸಾಧನೆಗಳ ಬಗ್ಗೆ ಮಾತ್ರ ಚರ್ಚೆಯಾಗಿರುವುದನ್ನು ಜನ ಮೆಚ್ಚಿಕೊಂಡಿದ್ದಾರೆ. ಈ ಆಶೀರ್ವಾದಕ್ಕಾಗಿ ನಾನು ಮತ್ತೊಮ್ಮೆ ನಿಮ್ಮೆಲ್ಲರಿಗೂ ಗೌರವಪೂರ್ವಕವಾಗಿ ಧನ್ಯವಾದ ಸಲ್ಲಿಸುತ್ತೇನೆ.

IPS Probationers interact with PM Modi

July 31st, 11:02 am

PM Narendra Modi had a lively interaction with the Probationers of Indian Police Service. The interaction with the Officer Trainees had a spontaneous air and the Prime Minister went beyond the official aspects of the Service to discuss the aspirations and dreams of the new generation of police officers.

ಸರ್ದಾರ್ ವಲ್ಲಭಭಾಯಿ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯಲ್ಲಿ ಐ.ಪಿ.ಎಸ್. ಪ್ರೊಬೆಶನರಿಗಳನ್ನು ಉದ್ದೇಶಿಸಿ ಪ್ರಧಾನ ಮಂತ್ರಿ ಅವರ ಭಾಷಣ

July 31st, 11:01 am

ನಿಮ್ಮೆಲ್ಲರೊಂದಿಗೆ ಮಾತನಾಡುವುದು ನನಗೆ ಆನಂದದ ಸಂಗತಿ. ಪ್ರತೀ ವರ್ಷ ನಿಮ್ಮಂತಹ ಯುವ ಮಿತ್ರರ ಜೊತೆ ಸಂವಾದ ನಡೆಸಬೇಕು ಎನ್ನುವುದು ನನ್ನ ಆಶಯ. ಇದರಿಂದ ನಿಮ್ಮ ಚಿಂತನೆಗಳನ್ನು ತಿಳಿದುಕೊಳ್ಳಲು ಸಹಾಯವಾಗುತ್ತದೆ. ನಿಮ್ಮ ಮಾತುಗಳು, ಪ್ರಶ್ನೆಗಳು, ಮತ್ತು ವಿಚಾರ ಮಾಡುವ ಗುಣ ಭವಿಷ್ಯದ ಸವಾಲುಗಳನ್ನು ನಿಭಾಯಿಸಲು ನನಗೂ ಸಹಾಯ ಮಾಡುತ್ತದೆ.

ಸರ್ದಾರ್ ವಲ್ಲಭಭಾಯ್ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯ ಐಪಿಎಸ್ ಪ್ರೊಬೇಷನರಿ ಅಧಿಕಾರಿಗಳೊಂದಿಗೆ ಪ್ರಧಾನಮಂತ್ರಿ ಸಂವಾದ

July 31st, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಸರ್ದಾರ್ ವಲ್ಲಭಭಾಯ್ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯ ಐಪಿಎಸ್ ಪ್ರಶಿಕ್ಷಣಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು. ಅವರು ತರಬೇತಿಯಲ್ಲಿರುವ ಅಧಿಕಾರಿಗಳೊಂದಿಗೆ ಸಂವಾದ ನಡೆಸಿದರು. ಕೇಂದ್ರ ಗೃಹ ಸಚಿವ ಶ್ರೀ ಅಮಿತ್ ಷಾ ಮತ್ತು ಗೃಹ ಖಾತೆ ರಾಜ್ಯ ಸಚಿವ ಶ್ರೀ ನಿತ್ಯಾನಂದ ರೈ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಮನ್ ಕಿ ಬಾತ್' ಸಕಾರಾತ್ಮಕತೆ ಮತ್ತು ಸೂಕ್ಷ್ಮತೆಯನ್ನು ಹೊಂದಿದೆ. ಇದು ಸಾಮೂಹಿಕ ಪಾತ್ರವನ್ನು ಹೊಂದಿದೆ:ಪ್ರಧಾನಿ ಮೋದಿ

July 25th, 09:44 am

ಮನ್ ಕಿ ಬಾತ್ ಸಂದರ್ಭದಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ಟೋಕಿಯೊ ಒಲಿಂಪಿಕ್ಸ್‌ಗಾಗಿ ಭಾರತದ ತುಕಡಿಯೊಂದಿಗೆ ನಡೆಸಿದ ಸಂವಾದವನ್ನು ನೆನಪಿಸಿಕೊಂಡರು ಮತ್ತು ದೇಶವಾಸಿಗಳು ಅವರನ್ನು ಬೆಂಬಲಿಸುವಂತೆ ಕರೆ ನೀಡಿದರು . ಅಮೃತ್ ಮಹೋತ್ಸವ ಕುರಿತು ಮಾತನಾಡಿದ ಪ್ರಧಾನಿ ಮೋದಿ ಅವರು ವಿಶೇಷ ವೆಬ್‌ಸೈಟ್ ಬಗ್ಗೆ ಪ್ರಸ್ತಾಪಿಸಿದರು, ಅಲ್ಲಿ ದೇಶಾದ್ಯಂತದ ನಾಗರಿಕರು ತಮ್ಮದೇ ಗೀತೆಯಲ್ಲಿ ರಾಷ್ಟ್ರಗೀತೆ ದಾಖಲಿಸಬಹುದು. ಅವರು ದೇಶದಾದ್ಯಂತ ಹಲವಾರು ಸ್ಪೂರ್ತಿದಾಯಕ ಕಥೆಗಳನ್ನು ಹಂಚಿಕೊಂಡರು, ನೀರಿನ ಸಂರಕ್ಷಣೆಯ ಮಹತ್ವವನ್ನು ಮತ್ತು ಹೆಚ್ಚಿನದನ್ನು ಎತ್ತಿ ತೋರಿಸಿದರು!

ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾಗವಹಿಸಿದ ಮಹಾನ್ ವ್ಯಕ್ತಿಗಳಿಗೆ ಶ್ರದ್ಧಾಂಜಲಿ ಸಲ್ಲಿಸಿದ ಪ್ರಧಾನಮಂತ್ರಿ

March 12th, 03:21 pm

ಸ್ವಾತಂತ್ರ್ಯ ಆಂದೋಲನದ ಎಲ್ಲಾ ಚಳವಳಿಗಳು, ದಂಗೆ, ಹೋರಾಟ ಮತ್ತು ಹೋರಾಟಗಾರರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಭಾರತದ ಸ್ವಾತಂತ್ರ್ಯ ಹೋರಾಟದ ಯಶೋಗಾಥೆಯಲ್ಲಿ ಸರಿಯಾಗಿ ಗುರುತಿಸಲಾಗದ ಚಳವಳಿ, ಹೋರಾಟಗಳು ಮತ್ತು ವ್ಯಕ್ತಿತ್ವಗಳಿಗೆ ಅವರು ವಿಶೇಷ ಗೌರವ ಸಲ್ಲಿಸಿದರು. ಅಹಮದಾಬಾದ್ ನ ಸಾಬರಮತಿ ಆಶ್ರಮದಲ್ಲಿಂದು “ ಸ್ವಾತಂತ್ರ್ಯದ ಅಮೃತ ಮಹೋತ್ಸವ “ಭಾರತ@75” ಉದ್ಘಾಟಿಸಿ ಅವರು ಮಾತನಾಡಿದರು.

“ಅಜಾದಿ ಕಾ ಅಮೃತ್ ಮಹೋತ್ಸವ್” ಪೂರ್ವಭಾವೀ ಕಾರ್ಯಕ್ರಮಗಳ ಉದ್ಘಾಟನಾ ಸಂದರ್ಭದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ

March 12th, 10:31 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಹಮದಾಬಾದ್ ನ ಸಾಬರಮತಿ ಆಶ್ರಮದಿಂದ ಪಾದಯಾತ್ರೆಗೆ ಹಸಿರು ನಿಶಾನೆ ತೋರಿ, (ಭಾರತ@75), ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಮಾರಂಭದ ಪೂರ್ವಭಾವಿ ಚಟುವಟಿಕೆಗಳಿಗೆ ಚಾಲನೆ ನೀಡಿದರು. ಅವರು ಭಾರತ@75 ಆಚರಣೆ ಕುರಿತ ವಿವಿಧ ಇತರ ಸಾಂಸ್ಕೃತಿಕ ಮತ್ತು ಡಿಜಿಟಲ್ ಉಪಕ್ರಮಗಳನ್ನೂ ಉದ್ಘಾಟಿಸಿದರು. ಗುಜರಾತ್ ರಾಜ್ಯಪಾಲ ಶ್ರೀ ಆಚಾರ್ಯ ದೇವವ್ರತ್, ಕೇಂದ್ರ ಸಂಸ್ಕೃತಿ ಖಾತೆ ರಾಜ್ಯ ಸಚಿವ (ಸ್ವತಂತ್ರ ನಿರ್ವಹಣೆ) ಶ್ರೀ ಪ್ರಹ್ಲಾದ ಸಿಂಗ್ ಪಟೇಲ್, ಗುಜರಾತ್ ಮುಖ್ಯಮಂತ್ರಿ ಶ್ರೀ ವಿಜಯ್ ರೂಪಾನಿ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಭಾರತ@75 “ಸ್ವಾತಂತ್ರ್ಯದ ಅಮೃತ ಮಹೋತ್ಸವ’ ಪೂರ್ವಭಾವಿ ಚಟುವಟಿಕೆಗಳನ್ನು ಉದ್ಘಾಟಿಸಿದ ಪ್ರಧಾನಮಂತ್ರಿ

March 12th, 10:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಹಮದಾಬಾದ್ ನ ಸಾಬರಮತಿ ಆಶ್ರಮದಿಂದ ಪಾದಯಾತ್ರೆಗೆ ಹಸಿರು ನಿಶಾನೆ ತೋರಿ, (ಭಾರತ@75), ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಮಾರಂಭದ ಪೂರ್ವಭಾವಿ ಚಟುವಟಿಕೆಗಳಿಗೆ ಚಾಲನೆ ನೀಡಿದರು. ಅವರು ಭಾರತ@75 ಆಚರಣೆ ಕುರಿತ ವಿವಿಧ ಇತರ ಸಾಂಸ್ಕೃತಿಕ ಮತ್ತು ಡಿಜಿಟಲ್ ಉಪಕ್ರಮಗಳನ್ನೂ ಉದ್ಘಾಟಿಸಿದರು. ಗುಜರಾತ್ ರಾಜ್ಯಪಾಲ ಶ್ರೀ ಆಚಾರ್ಯ ದೇವವ್ರತ್, ಕೇಂದ್ರ ಸಂಸ್ಕೃತಿ ಖಾತೆ ರಾಜ್ಯ ಸಚಿವ (ಸ್ವತಂತ್ರ ನಿರ್ವಹಣೆ) ಶ್ರೀ ಪ್ರಹ್ಲಾದ ಸಿಂಗ್ ಪಟೇಲ್, ಗುಜರಾತ್ ಮುಖ್ಯಮಂತ್ರಿ ಶ್ರೀ ವಿಜಯ್ ರೂಪಾನಿ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಮಾರ್ಚ್ 12 ರಂದು ʻಸ್ವಾತಂತ್ರ್ಯದ ಅಮೃತ ಮಹೋತ್ಸವʼಕ್ಕೆ (ಆಜಾದಿ ಕಾ ಅಮೃತ್ ಮಹೋತ್ಸವ್) ಸಂಬಂಧಿಸಿದ ಕಾರ್ಯಕ್ರಮಗಳನ್ನು ಉದ್ಘಾಟಿಸಲಿರುವ ಪ್ರಧಾನಿ ಮೋದಿ

March 11th, 03:30 pm

ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು 2021ರ ಮಾರ್ಚ್ 12 ರಂದು ಅಹಮದಾಬಾದ್‌ನ ಸಾಬರಮತಿ ಆಶ್ರಮದಿಂದ 'ಪಾದಯಾತ್ರೆʼಗೆ (ಸ್ವಾತಂತ್ರ್ಯ ಜಾಥಾ) ಚಾಲನೆ ನೀಡಲಿದ್ದಾರ. ಜೊತೆಗೆ, 'ಸ್ವಾತಂತ್ರ್ಯದ ಅಮೃತ ಮಹೋತ್ಸವ'ದ (ಭಾರತ @ 75) ಪ್ರಾರಂಭೋತ್ಸವ ಕಾರ್ಯಕ್ರಮಗಳನ್ನು ಅವರು ಉದ್ಘಾಟನೆ ಮಾಡಲಿದ್ದಾರೆ. ʻಭಾರತ@75ʼ ಅಂಗವಾಗಿ ಇತರ ಸಾಂಸ್ಕೃತಿಕ ಮತ್ತು ಡಿಜಿಟಲ್ ಉಪಕ್ರಮಗಳಿಗೂ ಚಾಲನೆ ನೀಡಲಿರುವ ಪ್ರಧಾನಿ ಸಾಬರಮತಿ ಆಶ್ರಮದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಬೆಳಗ್ಗೆ 10: 30 ಕ್ಕೆ ಪ್ರಾರಂಭವಾಗಲಿರುವ ಕಾರ್ಯಕ್ರಮದಲ್ಲಿ ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಹಾಯಕ ಸಚಿವ (ಸ್ವತಂತ್ರ್ಯ ನಿರ್ವಹಣೆ) ಶ್ರೀ ಪ್ರಹಲಾದ್‌ ಸಿಂಗ್ ಪಟೇಲ್ ಮತ್ತು ಗುಜರಾತ್ ಮುಖ್ಯಮಂತ್ರಿ ಶ್ರೀ ವಿಜಯ್ ರೂಪಾನಿ ಉಪಸ್ಥಿತರಿರಲಿದ್ದಾರೆ.