'ಮನ್ ಕಿ ಬಾತ್' ಕೇಳುಗರು ಈ ಕಾರ್ಯಕ್ರಮದ ನಿಜವಾದ ನಿರೂಪಕರು: ಪ್ರಧಾನಿ ಮೋದಿ
September 29th, 11:30 am
ನನ್ನ ಪ್ರೀತಿಯ ದೇಶವಾಸಿಗಳೆ ನಮಸ್ಕಾರ. ಮತ್ತೊಮ್ಮೆ ನಾವೆಲ್ಲರೂ 'ಮನದ ಮಾತಿನ' ಮೂಲಕ ಒಗ್ಗೂಡುವ ಅವಕಾಶ ಲಭಿಸಿದೆ. ಇಂದಿನ ಈ ಕಂತು ನನ್ನನ್ನು ಬಹಳ ಭಾವುಕನನ್ನಾಗಿಸಲಿದೆ, ಅನೇಕ ಹಳೆಯ ನೆನಪುಗಳು ನನ್ನನ್ನು ಮುತ್ತಿವೆ - ಕಾರಣ ಏನೆಂದರೆ 'ಮನದ ಮಾತಿನ' ನಮ್ಮ ಈ ಪಯಣಕ್ಕೆ 10 ವರ್ಷಗಳು ತುಂಬುತ್ತಿದೆ. 10 ವರ್ಷಗಳ ಹಿಂದೆ ಅಕ್ಟೋಬರ್ 3 ರಂದು ವಿಜಯದಶಮಿಯ ದಿನದಂದು 'ಮನದ ಮಾತು’ ಪ್ರಾರಂಭವಾಗಿತ್ತು ಮತ್ತು ಈ ವರ್ಷ ಅಕ್ಟೋಬರ್ 3 ರಂದು 'ಮನದ ಮಾತಿಗೆ ' 10 ವರ್ಷತುಂಬುವ ಸಂದರ್ಭ ನವರಾತ್ರಿಯ ಮೊದಲ ದಿನವಾಗಿದೆ. 'ಮನದ ಮಾತಿನ’ ಈ ಸುದೀರ್ಘ ಪಯಣದಲ್ಲಿ ನಾನು ಎಂದೂ ಮರೆಯಲಾಗದ ಇಂತಹ ಹಲವಾರು ಮೈಲಿಗಲ್ಲುಗಳಿವೆ, ನಮ್ಮ ಈ ಪಯಣದಲ್ಲಿ ನಿರಂತರ ಸಹಯೋಗವನ್ನು ನೀಡಿದಂತಹ ' ಮನದ ಮಾತಿನ' ಕೋಟ್ಯಂತರ ಶ್ರೋತೃ ಬಾಂಧವರಿದ್ದಾರೆ. ದೇಶದ ಮೂಲೆ ಮೂಲೆಗಳಿಂದ ಅವರು ಮಾಹಿತಿಯನ್ನು ಒದಗಿಸಿದರು. ಮನದ ಮಾತಿನ ಶ್ರೋತೃಗಳೇ ಈ ಕಾರ್ಯಕ್ರಮದ ನಿಜವಾದ ರೂವಾರಿಗಳು. ಸಾಮಾನ್ಯವಾಗಿ ಎಲ್ಲಿಯವರೆಗೆ ರೋಚಕ ವಿಷಯಗಳನ್ನು ಮಾತನಾಡುವುದಿಲ್ಲವೋ, ನಕಾರಾತ್ಮಕ ವಿಷಯಗಳನ್ನು ಮಾತನಾಡುವುದಿಲ್ಲವೋ ಅಲ್ಲಿವರೆಗೆ ಅದು ಹೆಚ್ಚಿನ ಗಮನ ಸೆಳೆಯುವುದಿಲ್ಲ ಎನ್ನಲಾಗುತ್ತದೆ. ಆದರೆ ಮನದ ಮಾತು ದೇಶದ ಜನರು ಸಕಾರಾತ್ಮಕ ಮಾಹಿತಿಗಾಗಿ , ಎಷ್ಟು ಉತ್ಸುಕರಾಗಿದ್ದಾರೆ ಎಂಬುದನ್ನು ಸಾಬೀತುಪಡಿಸಿದೆ. ಸಕಾರಾತ್ಮಕ ಮಾತು, ಪ್ರೇರಣಾತ್ಮಕ ಉದಾಹರಣೆಗಳು, ಸ್ಫೂರ್ತಿದಾಯಕ ಕಥೆಗಳು ಜನರಿಗೆ ಬಹಳ ಇಷ್ಟವಾಗುತ್ತವೆ. ಕೇವಲ ಮಳೆಹನಿಗಳನ್ನು ಮಾತ್ರ ಕುಡಿಯುವಂತಹ ಚಾತಕ ಪಕ್ಷಿಯಂತೆ ಜನರು ದೇಶದ ಸೌಲಭ್ಯಗಳ ಬಗ್ಗೆ, ಜನರ ಸಾಮೂಹಿಕ ಸಾಧನೆಗಳ ಬಗ್ಗೆ ಮನದ ಮಾತಿನ ಮೂಲಕ ಎಷ್ಟು ಹೆಮ್ಮೆಯಿಂದ ಕೇಳುತ್ತಾರೆ. ಮನದ ಮಾತಿನ 10 ವರ್ಷಗಳ ಪಯಣ ಎಷ್ಟು ಅದ್ಭುತವಾದ ಹಾರವನ್ನು ಸಿದ್ಧಗೊಳಿಸಿದೆ ಎಂದರೆ ಪ್ರತಿ ಸಂಚಿಕೆಯೊಂದಿಗೆ ಹೊಸ ಯಶೋಗಾಥೆಗಳು, ಹೊಸ ಕೀರ್ತಿವಂತರು ಮತ್ತು ಹೊಸ ವ್ಯಕ್ತಿತ್ವಗಳನ್ನು ಸೇರಿಸುತ್ತಾ ಸಾಗಿದೆ. ನಮ್ಮ ಸಮಾಜದಲ್ಲಿ ಸಾಮಾಜಿಕ ಹಿತದೃಷ್ಟಿಯ ಭಾವನೆಯಿಂದ ಯಾವುದೇ ಕೆಲಸ ಮಾಡಿದರೂ ಅವರಿಗೆ 'ಮನದ ಮಾತಿನ' ಮೂಲಕ ಗೌರವ ಲಭಿಸುತ್ತದೆ. 'ಮನದ ಮಾತಿ'ಗೆ ಬಂದ ಪತ್ರಗಳನ್ನು ನಾನು ಓದಿದಾಗ ನನ್ನ ಮನವೂ ಹೆಮ್ಮೆಯಿಂದ ಬೀಗುತ್ತದೆ. ನಮ್ಮ ದೇಶದಲ್ಲಿ ಅದೆಷ್ಟೋ ಪ್ರತಿಭಾವಂತರಿದ್ದಾರೆ, ಅವರು ತಮ್ಮ ಇಡೀ ಜೀವನವನ್ನು ಜನರ ನಿಸ್ವಾರ್ಥ ಸೇವೆಗಾಗಿ ಮುಡಿಪಾಗಿಟ್ಟಿದ್ದಾರೆ. ಅವರ ಬಗ್ಗೆ ತಿಳಿಯುವುದು ನನ್ನಲ್ಲಿ ಹೊಸ ಶಕ್ತಿಯನ್ನು ತುಂಬುತ್ತದೆ. 'ಮನದ ಮಾತಿನ' ಈ ಸಂಪೂರ್ಣ ಪ್ರಕ್ರಿಯೆಯು ನನಗೆ ದೇವಾಲಯಕ್ಕೆ ತೆರಳಿ ದೇವರ ದರ್ಶನ ಪಡೆಯುವಂತಿದೆ. ಮನದ ಮಾತಿನ ಪ್ರತಿ ವಿಷಯ, ಪ್ರತಿ ಘಟನೆ, ಪ್ರತಿ ಪತ್ರವನ್ನು ನೆನಪಿಸಿಕೊಂಡಾಗ, ನನಗೆ ಭಗವಂತನ ರೂಪದಲ್ಲಿರುವ ಜನತಾ ಜನಾರ್ದನನ ದರ್ಶನ ಪಡೆದಂತೆ ಭಾಸವಾಗುತ್ತದೆ.ಭಾರತಕ್ಕೆ 297 ಪ್ರಾಚೀನ ವಸ್ತುಗಳನ್ನು ಮರಳಿಸಿದ ಅಮೆರಿಕಾ
September 22nd, 12:11 pm
ನಿಕಟ ದ್ವಿಪಕ್ಷೀಯ ಸಂಬಂಧಗಳಿಗೆ ಅನುಗುಣವಾಗಿ ಮತ್ತು ಹೆಚ್ಚಿನ ಸಾಂಸ್ಕೃತಿಕ ತಿಳಿವಳಿಕೆಯನ್ನು ಬೆಳೆಸಲು, ಅಮೆರಿಕಾದ ವಿದೇಶಾಂಗ ಇಲಾಖೆಯ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ವ್ಯವಹಾರಗಳ ಬ್ಯೂರೋ ಮತ್ತು ಭಾರತ ಸರ್ಕಾರದ ಸಂಸ್ಕೃತಿ ಸಚಿವಾಲಯದಡಿಯಲ್ಲಿ ಬರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ 2024ರ ಜುಲೈನಲ್ಲಿ ಸಾಂಸ್ಕೃತಿಕ ಆಸ್ತಿ ಒಪ್ಪಂದಕ್ಕೆ ಸಹಿ ಹಾಕಿವೆ. 2023ರ ಜೂನ್ ನಲ್ಲಿ ಅಧ್ಯಕ್ಷ ಜೈ ಬೈಡೆನ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಸಭೆಯ ನಂತರ ನೀಡಿದ ಜಂಟಿ ಹೇಳಿಕೆಯಲ್ಲಿ ಸಾಂಸ್ಕೃತಿಕ ಪರಂಪರೆಯನ್ನು ರಕ್ಷಿಸಲು ಸಹಕಾರ ವೃದ್ಧಿಸುವ ಬದ್ಧತೆಗಳನ್ನು ಘೋಷಿಸಲಾಗಿತ್ತು.ಫ್ಯಾಕ್ಟ್ ಶೀಟ್: 2024 ಕ್ವಾಡ್ ಲೀಡರ್ಸ್ ಶೃಂಗಸಭೆ
September 22nd, 12:06 pm
ಸೆಪ್ಟೆಂಬರ್ 21, 2024 ರಂದು, ಅಧ್ಯಕ್ಷ ಶ್ರೀ ಜೋಸೆಫ್ ಆರ್. ಬೈಡನ್, ಜೂನಿಯರ್ ಅವರು ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಶ್ರೀ ಆಂಥೋನಿ ಅಲ್ಬನೀಸ್, ಜಪಾನ್ ನ ಪ್ರಧಾನಮಂತ್ರಿ ಶ್ರೀ ಕಿಶಿದಾ ಫ್ಯೂಮಿಯೊ ಮತ್ತು ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡೆಲವೇರ್ನ ವಿಲ್ಮಿಂಗ್ಟನ್ನಲ್ಲಿ ನಾಲ್ಕನೇ ಕ್ವಾಡ್ ನಾಯಕರುಗಳ ಶೃಂಗಸಭೆಗಾಗಿ ಸಭೆಸೇರಿದರು.ಆಸ್ಟ್ರೇಲಿಯಾ, ಭಾರತ, ಜಪಾನ್ ಮತ್ತು ಅಮೆರಿಕ ನಾಯಕರಿಂದ ವಿಲ್ಮಿಂಗ್ಟನ್ ಘೋಷಣೆ ಜಂಟಿ ಹೇಳಿಕೆ
September 22nd, 11:51 am
ಇಂದು, ನಾವು-ಆಸ್ಟ್ರೇಲಿಯದ ಪ್ರಧಾನಿ ಆಂಥೋನಿ ಅಲ್ಬನೀಸ್, ಭಾರತದ ಪ್ರಧಾನಿ ನರೇಂದ್ರ ಮೋದಿ, ಜಪಾನ್‌ನ ಪ್ರಧಾನಿ ಕಿಶಿದಾ ಫ್ಯೂಮಿಯೊ ಮತ್ತು ಅಮೆರಿಕ ಅಧ್ಯಕ್ಷ ಜೋಸೆಫ್ ಆರ್. ಬಿಡೆನ್, ಅವರು ನಾಲ್ಕನೇ ಕ್ವಾಡ್ ನಾಯಕರ ಶೃಂಗಸಭೆ ಸಂದರ್ಭದಲ್ಲಿ ಭೇಟಿಯಾದರು. ವಿಲ್ಮಿಂಗ್ಟನ್‌ನ ಡೆಲವೇರ್‌ನಲ್ಲಿ ಅಧ್ಯಕ್ಷ ಬಿಡೆನ್ ಈ ಸಭೆಯನ್ನು ಆಯೋಜಿಸಿದ್ದರು.ನ್ಯೂಯಾರ್ಕ್‌ಗೆ ಆಗಮಿಸಿದ ಪ್ರಧಾನಿ ಮೋದಿ
September 22nd, 11:19 am
ಡೆಲವೇರ್‌ನಲ್ಲಿ ಫಲಪ್ರದ ಕ್ವಾಡ್ ಲೀಡರ್ಸ್ ಶೃಂಗಸಭೆಯನ್ನು ಮುಕ್ತಾಯಗೊಳಿಸಿದ ನಂತರ, ಪ್ರಧಾನಿ ನರೇಂದ್ರ ಮೋದಿ ಅವರು ಸ್ವಲ್ಪ ಸಮಯದ ಹಿಂದೆ ನ್ಯೂಯಾರ್ಕ್‌ಗೆ ಆಗಮಿಸಿದರು. ಅವರು ನಗರದಲ್ಲಿ ಸಮುದಾಯ ಕಾರ್ಯಕ್ರಮ ಮತ್ತು 'ಭವಿಷ್ಯದ ಶೃಂಗಸಭೆ' ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.ಆಸ್ಟ್ರೇಲಿಯಾ ಪ್ರಧಾನಮಂತ್ರಿಯೊಂದಿಗೆ ಪ್ರಧಾನಮಂತ್ರಿ ಸಭೆ
September 22nd, 07:16 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಆಸ್ಟ್ರೇಲಿಯಾದ ಗೌರವಾನ್ವಿತ ಪ್ರಧಾನಿ ಶ್ರೀ ಆಂಥೋನಿ ಅಲ್ಬನೀಸ್ ಅವರು ಅಮೆರಿಕದ ವಿಲ್ಮಿಂಗ್ಟನ್‌ನಲ್ಲಿ 6 ನೇ ಕ್ವಾಡ್ ನಾಯಕರ ಶೃಂಗಸಭೆಯ ಹಿನ್ನೆಲೆಯಲ್ಲಿ ಭೇಟಿಯಾದರು. 2022 ರ ಮೇ ನಂತರ ಇವರು ಒಂಬತ್ತನೇ ಬಾರಿಗೆ ವೈಯಕ್ತಿಕವಾಗಿ ಸಂವಹನ ನಡೆಸಿದ್ದಾರೆ.ಜಪಾನ್ ಪ್ರಧಾನಮಂತ್ರಿಯೊಂದಿಗೆ ಸಭೆ ನಡೆಸಿದ ಪ್ರಧಾನಮಂತ್ರಿ
September 22nd, 06:01 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024ರ ಸೆಪ್ಟೆಂಬರ್ 21 ರಂದು ಅಮೆರಿಕದ ಡೆಲವೇರ್‌ನ ವಿಲ್ಮಿಂಗ್‌ಟನ್‌ನಲ್ಲಿ ಕ್ವಾಡ್ ನಾಯಕರ ಶೃಂಗಸಭೆಯ ಹಿನ್ನೆಲೆಯಲ್ಲಿ ಜಪಾನ್‌ನ ಪ್ರಧಾನ ಮಂತ್ರಿ ಶ್ರೀ ಫ್ಯುಮಿಯೊ ಕಿಶಿಡಾ ಅವರೊಂದಿಗೆ ಸಮಾಲೋಚನೆ ನಡೆಸಿದರು.ಡೆಲಾವೇರ್ ನ ವಿಲ್ಮಿಂಗ್ಟನ್ ನಲ್ಲಿ ನಡೆದ ಆರನೇ ಕ್ವಾಡ್ ನಾಯಕರ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಭಾಗವಹಿಸಿದರು
September 22nd, 05:21 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024ರ ಸೆಪ್ಟೆಂಬರ್ 21ರಂದು ಡೆಲಾವೇರ್ ನ ವಿಲ್ಮಿಂಗ್ಟನ್ ನಲ್ಲಿ ನಡೆದ ಆರನೇ ಕ್ವಾಡ್ ನಾಯಕರ ಶೃಂಗಸಭೆಯಲ್ಲಿ ಭಾಗವಹಿಸಿದ್ದರು. ಅಮೆರಿಕದ ಅಧ್ಯಕ್ಷ ಘನತೆವೆತ್ತ ಶ್ರೀ ಜೋಸೆಫ್ ಆರ್. ಬೈಡನ್, ಆಸ್ಟ್ರೇಲಿಯಾದ ಕಿರಿಯ ಪ್ರಧಾನಿ ಗೌರವಾನ್ವಿತ ಶ್ರೀ ಆಂಥೋನಿ ಅಲ್ಬನೀಸ್ ಮತ್ತು ಜಪಾನ್ ಪ್ರಧಾನಿ ಗೌರವಾನ್ವಿತ ಶ್ರೀ ಫ್ಯೂಮಿಯೊ ಕಿಶಿಡಾ ಅವರೂ ಭಾಗವಹಿಸಿದ್ದರು.ಪ್ರಧಾನಮಂತ್ರಿ ಅವರು ಡೆಲಾವೇರ್ ನ ವಿಲ್ಮಿಂಗ್ಟನ್ ನಲ್ಲಿ ಅಮೆರಿಕ ಅಧ್ಯಕ್ಷರನ್ನು ಭೇಟಿ ಮಾಡಿದರು
September 22nd, 02:02 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಡೆಲಾವೇರ್ ನಲ್ಲಿ ನಡೆದ ಕ್ವಾಡ್ ಶೃಂಗಸಭೆಯ ಸಂದರ್ಭದಲ್ಲಿ ಅಮೆರಿಕದ ಅಧ್ಯಕ್ಷ ಘನತೆವೆತ್ತ ಶ್ರೀ ಜೋಸೆಫ್ ಬೈಡನ್ ಅವರನ್ನು ಭೇಟಿ ಮಾಡಿದರು. ವಿಶೇಷವಾಗಿ, ಅಧ್ಯಕ್ಷ ಬೈಡನ್ ವಿಲ್ಮಿಂಗ್ಟನ್ನಲ್ಲಿರುವ ತಮ್ಮ ಮನೆಯಲ್ಲಿ ಸಭೆಯನ್ನು ಆಯೋಜಿಸಿದ್ದರು.