ರಾಜಸ್ಥಾನದ ಜೈಪುರದಲ್ಲಿ 'ಏಕ್ ವರ್ಷ್-ಪರಿಣಾಮ್ ಉತ್ಕರ್ಷ್' ಕಾರ್ಯಕ್ರಮ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ ಮತ್ತು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

December 17th, 12:05 pm

ಗೋವಿಂದ ನಗರದಲ್ಲಿ ನಾನು ಗೋವಿಂದ್ ದೇವ್ ಜೀ ಅವರಿಗೆ ಅನಂತ ನಮಸ್ಕಾರಗಳನ್ನು ಸಲ್ಲಿಸುತ್ತೇನೆ. ಎಲ್ಲರಿಗೂ ನನ್ನ ನಮಸ್ಕಾರಗಳು!

ರಾಜಸ್ಥಾನ ಸರ್ಕಾರ ಒಂದು ವರ್ಷ ಅಧಿಕಾರಾವಧಿ ಪೂರೈಸಿದ ಹಿನೆಲೆಯಲ್ಲಿ ಜೈಪುರದಲ್ಲಿ ನಡೆದ ʻಏಕ್ ವರ್ಷ್-ಪರಿನಾಮ್ ಉತ್ಕರ್ಷ್ʼ (ಒಂದು ವರ್ಷ-ಪರಿಣಾಮ ಶ್ರೇಷ್ಠ) ಕಾರ್ಯಕ್ರಮದಲ್ಲಿ ಪಾಲ್ಗೊಂಡ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

December 17th, 12:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಜಸ್ಥಾನ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಇಂದು ಜೈಪುರದಲ್ಲಿ ನಡೆದ ʻಒಂದು ವರ್ಷ-ಪರಿಣಾಮ ಶ್ರೇಷ್ಠʼ(ಏಕ್ ವರ್ಷ್-ಪರಿನಾಮ್ ಉತ್ಕರ್ಷ್) ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಸಭಿಕರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿಯವರು, ರಾಜ್ಯ ಸರ್ಕಾರದ ಒಂದು ವರ್ಷವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಕ್ಕಾಗಿ ರಾಜಸ್ಥಾನ ಸರ್ಕಾರ ಮತ್ತು ರಾಜಸ್ಥಾನದ ಜನರನ್ನು ಅಭಿನಂದಿಸಿದರು. ಈ ಕಾರ್ಯಕ್ರಮದಲ್ಲಿ ನೆರೆದಿದ್ದ ಲಕ್ಷಾಂತರ ಜನರ ಆಶೀರ್ವಾದ ಪಡೆಯುವ ಅದೃಷ್ಟ ತಮ್ಮದಾಗಿದೆ ಎಂದು ಅವರು ಹೇಳಿದರು. ರಾಜಸ್ಥಾನದ ಅಭಿವೃದ್ಧಿ ಕಾರ್ಯಗಳಿಗೆ ಹೊಸ ದಿಕ್ಕು ಮತ್ತು ವೇಗವನ್ನು ನೀಡಲು ಕೈಗೊಂಡ ಪ್ರಯತ್ನಗಳಿಗಾಗಿ ಶ್ರೀ ಮೋದಿ ಅವರು ರಾಜಸ್ಥಾನದ ಮುಖ್ಯಮಂತ್ರಿ ಮತ್ತು ಅವರ ತಂಡವನ್ನು ಶ್ಲಾಘಿಸಿದರು. ಮೊದಲ ವರ್ಷವು ಮುಂಬರುವ ಹಲವು ವರ್ಷಗಳ ಅಭಿವೃದ್ಧಿಗೆ ಬಲವಾದ ಅಡಿಪಾಯವಾಗಿ ಮಾರ್ಪಟ್ಟಿದೆ ಎಂದು ಅವರು ಹೇಳಿದರು. ಇಂದಿನ ಕಾರ್ಯಕ್ರಮವು ಸರ್ಕಾರ ಒಂದು ವರ್ಷ ಪೂರ್ಣಗೊಳಿಸಿದ್ದನ್ನು ಮಾತ್ರವಲ್ಲ, ರಾಜಸ್ಥಾನದ ಉಜ್ವಲತೆ ಮತ್ತು ರಾಜಸ್ಥಾನದ ಅಭಿವೃದ್ಧಿಯ ಹಬ್ಬವನ್ನು ಸಂಕೇತಿಸುತ್ತದೆ ಎಂದು ಅವರು ಹೇಳಿದರು. ಇತ್ತೀಚೆಗೆ ನಡೆದ ʻರೈಸಿಂಗ್ ರಾಜಸ್ಥಾನ ಶೃಂಗಸಭೆ-2024ʼ ಕಾರ್ಯಕ್ರಮದಲ್ಲಿ ತಾವು ಭಾಗಿಯಾಗಿದ್ದನ್ನು ಸ್ಮರಿಸಿದ ಶ್ರೀ ಮೋದಿ, ವಿಶ್ವದ ವಿವಿಧ ಭಾಗಗಳ ಅನೇಕ ಹೂಡಿಕೆದಾರರು ಅಂದಿನ ಕಾರ್ಯಕ್ರಮದಲ್ಲಿ ಹಾಜರಿದ್ದರು ಮತ್ತು ಇಂದು 45,000 ಕೋಟಿ ರೂ.ಗೂ ಅಧಿಕ ಮೌಲ್ಯದ ಯೋಜನೆಗಳನ್ನು ರಾಜ್ಯದಲ್ಲಿ ಉದ್ಘಾಟಿಸಲಾಗಿದೆ ಎಂದರು. ಈ ಯೋಜನೆಗಳು ರಾಜಸ್ಥಾನದಲ್ಲಿ ನೀರಿಗೆ ಸಂಬಂಧಿಸಿದಂತೆ ಅಡೆತಡೆಗಳಿಗೆ ಸೂಕ್ತ ಪರಿಹಾರವನ್ನು ಒದಗಿಸುತ್ತವೆ ಮತ್ತು ರಾಜಸ್ಥಾನವನ್ನು ಭಾರತದ ಉತ್ತಮ ಸಂಪರ್ಕ ಹೊಂದಿರುವ ರಾಜ್ಯಗಳಲ್ಲಿ ಒಂದಾಗಿ ಮಾಡುತ್ತವೆ ಎಂದು ಅವರು ಹೇಳಿದರು. ಈ ಅಭಿವೃದ್ಧಿ ಕಾರ್ಯಗಳು ಹೆಚ್ಚಿನ ಹೂಡಿಕೆದಾರರನ್ನು ಆಹ್ವಾನಿಸುತ್ತವೆ, ಅಪಾರ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತವೆ, ಪ್ರವಾಸೋದ್ಯಮ ಕ್ಷೇತ್ರವನ್ನು ಬಲಪಡಿಸುತ್ತವೆ ಮತ್ತು ರಾಜಸ್ಥಾನದ ರೈತರು, ಮಹಿಳೆಯರು ಮತ್ತು ಯುವಕರಿಗೆ ಹೆಚ್ಚಿನ ಪ್ರಯೋಜನವನ್ನು ನೀಡುತ್ತವೆ ಎಂದು ಪ್ರಧಾನಿ ಹೇಳಿದರು.

ಜಮ್ಮು ಮತ್ತು ಕಾಶ್ಮೀರದ ಶ್ರೀನಗರ ಮತ್ತು ಕತ್ರಾದಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಪ್ರಧಾನಿ ಮೋದಿ

September 19th, 12:00 pm

ಜಮ್ಮು ಮತ್ತು ಕಾಶ್ಮೀರದ ತ್ವರಿತ ಅಭಿವೃದ್ಧಿ, ಹೆಚ್ಚಿದ ಮತದಾರರ ಮತದಾನ ಮತ್ತು ಸುಧಾರಿತ ಭದ್ರತೆಗೆ ಒತ್ತು ನೀಡಿದ ಪ್ರಧಾನಿ ಮೋದಿ ಶ್ರೀನಗರ ಮತ್ತು ಕತ್ರಾದಲ್ಲಿ ದೊಡ್ಡ ಸಭೆಗಳನ್ನು ಉದ್ದೇಶಿಸಿ ಮಾತನಾಡಿದರು. ಅವರು ಈ ಪ್ರದೇಶವನ್ನು ನಿರ್ಲಕ್ಷಿಸಿದ್ದಕ್ಕಾಗಿ ಹಿಂದಿನ ನಾಯಕತ್ವವನ್ನು ಟೀಕಿಸಿದರು, ರಾಜವಂಶದ ರಾಜಕೀಯದ ವಿರುದ್ಧ ಯುವಕರು ಏಳುತ್ತಿದ್ದಾರೆ ಎಂದು ಶ್ಲಾಘಿಸಿದರು ಮತ್ತು ಮೂಲಸೌಕರ್ಯ ಯೋಜನೆಗಳು, ಶಿಕ್ಷಣ ಮತ್ತು ಪ್ರವಾಸೋದ್ಯಮ ಬೆಳವಣಿಗೆಯನ್ನು ಎತ್ತಿ ತೋರಿಸಿದರು. ಜಮ್ಮು ಮತ್ತು ಕಾಶ್ಮೀರದ ಪ್ರಗತಿ ಮತ್ತು ರಾಜ್ಯತ್ವ ಮರುಸ್ಥಾಪನೆಗೆ ಬಿಜೆಪಿಯ ಬದ್ಧತೆಯನ್ನು ಪ್ರಧಾನಿ ಮೋದಿ ಪುನರುಚ್ಚರಿಸಿದರು.

Haryana is leading in the implementation of centrally sponsored schemes related to poor welfare: PM Modi

February 16th, 01:50 pm

Prime Minister Narendra Modi inaugurated, dedicated to the nation and laid the foundation stone of multiple development projects worth more than Rs 9750 crores in Rewari, Haryana today. The projects cater to several important sectors concerning urban transport, health, rail and tourism. Addressing the gathering, the Prime Minister paid tributes to the land of the bravehearts Rewari and underlined the affection of the people of the region for him.

ಹರಿಯಾಣದ ರೇವಾರಿಯಲ್ಲಿ 9,750 ಕೋಟಿ ರೂ.ಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ

February 16th, 01:10 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹರಿಯಾಣದ ರೇವಾರಿಯಲ್ಲಿ 9750 ಕೋಟಿ ರೂ.ಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು, ರಾಷ್ಟ್ರಕ್ಕೆ ಸಮರ್ಪಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಈ ಯೋಜನೆಗಳು ನಗರ ಸಾರಿಗೆ, ಆರೋಗ್ಯ, ರೈಲು ಮತ್ತು ಪ್ರವಾಸೋದ್ಯಮಕ್ಕೆ ಸಂಬಂಧಿಸಿದ ಹಲವಾರು ಪ್ರಮುಖ ಕ್ಷೇತ್ರಗಳನ್ನು ಪೂರೈಸುತ್ತವೆ. ಈ ಸಂದರ್ಭದಲ್ಲಿ ಪ್ರದರ್ಶಿಸಲಾದ ವಸ್ತುಪ್ರದರ್ಶನಗಳ ಬಗ್ಗೆಯೂ ಶ್ರೀ ನರೇಂದ್ರ ಮೋದಿ ಅವರು ಸಂವಾದ ನಡೆಸಿದರು.

ಲಖನೌದಲ್ಲಿ ನಡೆದ ಯುಪಿ ಹೂಡಿಕೆದಾರರ ಶೃಂಗಸಭೆಯ @3.0 ಭೂಮಿಪೂಜೆ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

June 03rd, 10:35 am

ಉತ್ತರ ಪ್ರದೇಶದ ಜನಪ್ರಿಯ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಜೀ, ಲಖನೌ ಸಂಸದ ಮತ್ತು ಭಾರತ ಸರ್ಕಾರದ ನಮ್ಮ ಹಿರಿಯ ಸಹೋದ್ಯೋಗಿ ಶ್ರೀ ರಾಜನಾಥ್ ಸಿಂಗ್ ಜೀ, ಕೇಂದ್ರ ಸಚಿವ ಸಂಪುಟದ ನನ್ನ ಇತರ ಸಹೋದ್ಯೋಗಿಗಳು, ಉತ್ತರಪ್ರದೇಶದ ಉಪ ಮುಖ್ಯಮಂತ್ರಿ, ರಾಜ್ಯ ಸರ್ಕಾರದ ಸಚಿವರು, ವಿಧಾನಸಭೆ ಮತ್ತು ವಿಧಾನ ಪರಿಷತ್ತಿನ ಸ್ಪೀಕರ್ ಗಳು, ಉದ್ಯಮದ ಎಲ್ಲಾ ಸಹೋದ್ಯೋಗಿಗಳು, ಇತರ ಗಣ್ಯರು, ಮಹಿಳೆಯರು ಮತ್ತು ಮಹನೀಯರೇ!

PM attends the Ground Breaking Ceremony @3.0 of the UP Investors Summit at Lucknow

June 03rd, 10:33 am

PM Modi attended Ground Breaking Ceremony @3.0 of UP Investors Summit at Lucknow. “Only our democratic India has the power to meet the parameters of a trustworthy partner that the world is looking for today. Today the world is looking at India's potential as well as appreciating India's performance”, he said.

ಪಂಚಾಯತ್ ರಾಜ್ ದಿನದಂದು ಗ್ರಾಮಸಭೆಗಳನ್ನು ಉದ್ದೇಶಿಸಿ ಪ್ರಧಾನ ಮಂತ್ರಿಗಳ ಭಾಷಣ

April 24th, 11:31 am

ಜಮ್ಮು-ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಶ್ರೀ ಮನೋಜ್ ಸಿನ್ಹಾ ಜಿ, ನನ್ನ ಸಂಪುಟ ಸಹೋದ್ಯೋಗಿ ಗಿರಿರಾಜ್ ಸಿಂಗ್ ಜಿ, ಈ ಮಣ್ಣಿನ ಮಗ ಮತ್ತು ನನ್ನ ಸಹೋದ್ಯೋಗಿ ಡಾ. ಜಿತೇಂದ್ರ ಸಿಂಗ್ ಜಿ, ಶ್ರೀ ಕಪಿಲ್ ಮೊರೇಶ್ವರ್ ಪಾಟೀಲ್ ಜಿ, ನನ್ನ ಸಂಸದೀಯ ಸಹೋದ್ಯೋಗಿ ಶ್ರೀ ಜುಗಲ್ ಕಿಶೋರ್ ಜಿ, ಜಮ್ಮು-ಕಾಶ್ಮೀರ ಸೇರಿದಂತೆ ಇಡೀ ದೇಶದಿಂದ ಸಂಪರ್ಕ ಹೊಂದಿರುವ ಪಂಚಾಯತ್ ರಾಜ್ ಸಂಸ್ಥೆಗಳ ಎಲ್ಲಾ ಸಾರ್ವಜನಿಕ ಪ್ರತಿನಿಧಿಗಳೆ, ಸಹೋದರ ಸಹೋದರಿಯರೆ!

ರಾಷ್ಟ್ರೀಯ ಪಂಚಾಯತ್ ರಾಜ್ ದಿನದ ಆಚರಣೆಯಲ್ಲಿ ಭಾಗವಹಿಸಲು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿದ ಪ್ರಧಾನಮಂತ್ರಿ

April 24th, 11:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು `ರಾಷ್ಟ್ರೀಯ ಪಂಚಾಯತ್ ರಾಜ್ ದಿನ’ದ ಆಚರಣೆಯಲ್ಲಿ ಭಾಗವಹಿಸಲು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿದರು. ಈ ವೇಳೆ ಅವರು ದೇಶಾದ್ಯಂತದ ಎಲ್ಲಾ ಗ್ರಾಮ ಸಭೆಗಳನ್ನುದ್ದೇಶಿಸಿ ಮಾತನಾಡಿದರು. ಸಾಂಬಾ ಜಿಲ್ಲೆಯ ಪಲ್ಲಿ ಪಂಚಾಯಿತಿಗೆ ಭೇಟಿ ಅವರು ನೀಡಿದರು. ಸುಮಾರು 20,000 ಕೋಟಿ ರೂ.ಗಳ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ಪ್ರಧಾನಮಂತ್ರಿಯವರು ನೆರವೇರಿಸಿದರು. ʻಅಮೃತ ಸರೋವರʼ ಯೋಜನೆಗೂ ಅವರು ಚಾಲನೆ ನೀಡಿದರು. ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಶ್ರೀ ಮನೋಜ್ ಸಿನ್ಹಾ, ಕೇಂದ್ರ ಸಚಿವರಾದ ಶ್ರೀ ಗಿರಿರಾಜ್ ಸಿಂಗ್, ಡಾ. ಜಿತೇಂದ್ರ ಸಿಂಗ್ ಮತ್ತು ಶ್ರೀ ಕಪಿಲ್ ಮೊರೇಶ್ವರ್ ಪಾಟೀಲ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಏಪ್ರಿಲ್ 24 ರಂದು ರಾಷ್ಟ್ರೀಯ ಪಂಚಾಯತ್ ರಾಜ್ ದಿನದ ಆಚರಣೆಯಲ್ಲಿ ಪಾಲ್ಗೊಳ್ಳಲು ಪ್ರಧಾನಮಂತ್ರಿಯವರು ಜಮ್ಮುಮತ್ತು ಕಾಶ್ಮೀರಕ್ಕೆ ಭೇಟಿ ನೀಡಲಿದ್ದಾರೆ

April 23rd, 11:23 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 24 ಏಪ್ರಿಲ್ 2022 ರಂದು ರಾಷ್ಟ್ರೀಯ ಪಂಚಾಯತ್ ರಾಜ್ ದಿನದ ಆಚರಣೆಯಲ್ಲಿ ಭಾಗವಹಿಸಲು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಲಿದ್ದಾರೆ. ಅಂದು ಬೆಳಿಗ್ಗೆ 11.30 ಕ್ಕೆ ದೇಶಾದ್ಯಂತದ ಎಲ್ಲಾ ಗ್ರಾಮ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಸಾಂಬಾ ಜಿಲ್ಲೆಯ ಪಲ್ಲಿ ಪಂಚಾಯತ್ ಗೆ ಭೇಟಿ ನೀಡಲಿದ್ದು, ಈ ಸಂದರ್ಭದಲ್ಲಿ ಸುಮಾರು 20,000 ಕೋಟಿ ರೂಪಾಯಿಗಳ ಹಲವು ಅಭಿವೃದ್ಧಿ ಉಪಕ್ರಮಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ಪ್ರಧಾನಿಯವರು ನೆರವೇರಿಸಲಿದ್ದಾರೆ. ಅವರು ಅಮೃತ ಸರೋವರ ಉಪಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ನಂತರ ಪ್ರಧಾನಿಯವರು, ಸಂಜೆ 5 ಗಂಟೆಗೆ ಪ್ರಧಾನಮಂತ್ರಿಯವರು ಮುಂಬೈನಲ್ಲಿ ಮಾಸ್ಟರ್ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಳ್ಳುತ್ತಾರೆ, ಅಲ್ಲಿ ಅವರು ಮೊದಲನೇ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿಯನ್ನು ಸ್ವೀಕರಿಸುತ್ತಾರೆ.

‘ಪಂಜಾಬಿಯಾತ್’ ನಮಗೆ ಅಪಾರ ಪ್ರಾಮುಖ್ಯತೆ: ಪ್ರಧಾನಿ ಮೋದಿ

February 16th, 12:02 pm

ಪಂಜಾಬ್ ವಿಧಾನಸಭಾ ಚುನಾವಣೆಯ ಪೂರ್ವಭಾವಿಯಾಗಿ ಇಂದು ಪಠಾಣ್‌ಕೋಟ್‌ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದರು. ಸಂತ ರವಿದಾಸ್ ಜಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಪ್ರಧಾನಿ ಮೋದಿ, “ಇಂದು ಸಂತ ರವಿದಾಸ್ ಜಿ ಅವರ ಜನ್ಮದಿನವೂ ಆಗಿದೆ. ಇಲ್ಲಿಗೆ ಬರುವ ಮೊದಲು ದೆಹಲಿಯ ಗುರು ರವಿದಾಸ್ ವಿಶ್ರಮ್ ಧಾಮ್ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥಿಸುವ ಗೌರವ ನನಗೆ ಸಿಕ್ಕಿತ್ತು. ಸಂತ ರವಿದಾಸ್ ಹೇಳಿದ ಮಾತಿನಂತೆ ನಮ್ಮ ಸರ್ಕಾರ ಕೆಲಸ ಮಾಡುತ್ತಿದೆ.

ಪಂಜಾಬ್‌ನ ಪಠಾಣ್‌ಕೋಟ್‌ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಪ್ರಧಾನಿ ಮೋದಿ

February 16th, 12:01 pm

ಪಂಜಾಬ್ ವಿಧಾನಸಭಾ ಚುನಾವಣೆಯ ಪೂರ್ವಭಾವಿಯಾಗಿ ಇಂದು ಪಠಾಣ್‌ಕೋಟ್‌ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದರು. ಸಂತ ರವಿದಾಸ್ ಜಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಪ್ರಧಾನಿ ಮೋದಿ, “ಇಂದು ಸಂತ ರವಿದಾಸ್ ಜಿ ಅವರ ಜನ್ಮದಿನವೂ ಆಗಿದೆ. ಇಲ್ಲಿಗೆ ಬರುವ ಮೊದಲು ದೆಹಲಿಯ ಗುರು ರವಿದಾಸ್ ವಿಶ್ರಮ್ ಧಾಮ್ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥಿಸುವ ಗೌರವ ನನಗೆ ಸಿಕ್ಕಿತ್ತು. ಸಂತ ರವಿದಾಸ್ ಹೇಳಿದ ಮಾತಿನಂತೆ ನಮ್ಮ ಸರ್ಕಾರ ಕೆಲಸ ಮಾಡುತ್ತಿದೆ.

ಜನವರಿ 5ರಂದು ಪಂಜಾಬ್‌ಗೆ ಭೇಟಿ ನೀಡಿ, 42,750 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿರುವ ಪ್ರಧಾನಮಂತ್ರಿಗಳು

January 03rd, 03:48 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 5 ಜನವರಿ 2022ರಂದು ಪಂಜಾಬ್‌ನ ಫಿರೋಜ್‌ಪುರಕ್ಕೆ ಭೇಟಿ ನೀಡಲಿದ್ದು, ಅಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ 42,750 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಯೋಜನೆಗಳಲ್ಲಿ ದೆಹಲಿ-ಅಮೃತಸರ-ಕತ್ರಾ ಎಕ್ಸ್‌ಪ್ರೆಸ್ ವೇ; ಅಮೃತಸರ- ಉನಾ ವಿಭಾಗದ ರಸ್ತೆಯನ್ನು ಚತುಷ್ಪಥವನ್ನಾಗಿ ಉನ್ನತೀಕರಿಸಲಾಗುವುದು; ಮುಖೆರಿಯನ್‌- ತಲ್ವಾರಾ ನಡುವೆ ಹೊಸ ಬ್ರಾಡ್ ಗೇಜ್ ರೈಲು ಮಾರ್ಗ; ಫಿರೋಜ್‌ಪುರದ ಪಿಜಿಐ ಉಪಗ್ರಹ ಕೇಂದ್ರ ಹಾಗೂ ಕಪುರ್‌ತಲಾ ಮತ್ತು ಹೋಶಿಯಾರ್‌ಪುರದಲ್ಲಿ ಎರಡು ಹೊಸ ವೈದ್ಯಕೀಯ ಕಾಲೇಜುಗಳಿಗೆ ಶಂಕುಸ್ಥಾಪನೆ ಸೇರಿವೆ.