ಸಂವಿಧಾನದ ಅಂಗೀಕಾರದ 75ನೇ ವಾರ್ಷಿಕೋತ್ಸವದ ವಿಶೇಷ ಚರ್ಚೆಯಲ್ಲಿ ಲೋಕಸಭೆಯಲ್ಲಿ ಪ್ರಧಾನಮಂತ್ರಿಯವರ ಭಾಷಣದ ಅನುವಾದ
December 14th, 05:50 pm
ಇದು ನಮಗೆಲ್ಲರಿಗೂ ಅಪಾರವಾದ ಹೆಮ್ಮೆಯ ಕ್ಷಣವಾಗಿದೆ - ನಮ್ಮ ದೇಶವಾಸಿಗಳಿಗೆ ಮಾತ್ರವಲ್ಲದೆ ಪ್ರಪಂಚದಾದ್ಯಂತದ ಪ್ರಜಾಪ್ರಭುತ್ವವನ್ನು ಪ್ರೀತಿಸುವ ನಾಗರಿಕರಿಗೆ, ಪ್ರಜಾಪ್ರಭುತ್ವದ ಹಬ್ಬವನ್ನು ಅತ್ಯಂತ ಹೆಮ್ಮೆಯಿಂದ ಆಚರಿಸುವ ಸಂದರ್ಭವಿದು. ಸಂವಿಧಾನದ ಅಡಿಯಲ್ಲಿ 75 ವರ್ಷಗಳ ಪ್ರಯಾಣವು ಗಮನಾರ್ಹವಾಗಿದೆ ಮತ್ತು ಈ ಪ್ರಯಾಣದ ಹಾದಿಯಲ್ಲಿ ನಮ್ಮ ಸಂವಿಧಾನ-ರಚನಾಕಾರರ ದೈವಿಕ ದೃಷ್ಟಿ ಇದೆ, ಅವರ ಕೊಡುಗೆಗಳು ನಾವು ಮುಂದೆ ಸಾಗುತ್ತಿರುವಾಗ ನಮಗೆ ಮಾರ್ಗದರ್ಶನ ನೀಡುತ್ತಲೇ ಇರುತ್ತವೆ. ಸಂವಿಧಾನದ 75 ವರ್ಷಗಳನ್ನು ಪೂರ್ಣಗೊಳಿಸಿದ ಸಂಭ್ರಮಾಚರಣೆ ನಿಜಕ್ಕೂ ಮಹತ್ವದ ಸಂದರ್ಭವಾಗಿದೆ. ಈ ಸಂಭ್ರಮಾಚರಣೆಯಲ್ಲಿ ಸಂಸತ್ತು ಕೂಡ ತನ್ನ ಭಾವನೆಗಳನ್ನು ವ್ಯಕ್ತಪಡಿಸಲು ಭಾಗವಹಿಸುವುದು ನನಗೆ ಅತೀವ ಸಂತಸ ತಂದಿದೆ. ನಾನು ಎಲ್ಲಾ ಗೌರವಾನ್ವಿತ ಸದಸ್ಯರಿಗೆ ನನ್ನ ಕೃತಜ್ಞತೆಯನ್ನು ಸಲ್ಲಿಸುತ್ತೇನೆ ಮತ್ತು ಈ ಆಚರಣೆಗಳಲ್ಲಿ ಭಾಗವಹಿಸಿದ ಎಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂವಿಧಾನವನ್ನು ಅಂಗೀಕರಿಸಿದ 75ನೇ ವಾರ್ಷಿಕೋತ್ಸವದ ಕುರಿತು ವಿಶೇಷ ಚರ್ಚೆಯ ಸಂದರ್ಭದಲ್ಲಿ ಲೋಕಸಭೆಯನ್ನುದ್ದೇಶಿಸಿ ಭಾಷಣ ಮಾಡಿದರು
December 14th, 05:47 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಲೋಕಸಭೆಯಲ್ಲಿ ಸಂವಿಧಾನವನ್ನು ಅಂಗೀಕರಿಸಿದ 75ನೇ ವಾರ್ಷಿಕೋತ್ಸವದ ವಿಶೇಷ ಚರ್ಚೆಯನ್ನು ಉದ್ದೇಶಿಸಿ ಮಾತನಾಡಿದರು. ಸದನವನ್ನು ಉದ್ದೇಶಿಸಿ ಮಾತನಾಡಿದ ಶ್ರೀ ಮೋದಿ ಅವರು, ನಾವು ಈ ಪ್ರಜಾಪ್ರಭುತ್ವದ ಹಬ್ಬವನ್ನು ಆಚರಿಸುತ್ತಿರುವುದು ಭಾರತದ ಎಲ್ಲಾ ನಾಗರಿಕರಿಗೆ ಮತ್ತು ಪ್ರಜಾಪ್ರಭುತ್ವವನ್ನು ಗೌರವಿಸುವ ಜಗತ್ತಿನಾದ್ಯಂತ ಇರುವ ಎಲ್ಲಾ ಜನರಿಗೆ ಹೆಮ್ಮೆ ಮತ್ತು ಗೌರವದ ವಿಷಯವಾಗಿದೆ ಎಂದು ಹೇಳಿದರು. ನಮ್ಮ ಸಂವಿಧಾನದ 75 ವರ್ಷಗಳ ಈ ಗಮನಾರ್ಹ ಮತ್ತು ಮಹತ್ವದ ಪ್ರಯಾಣದಲ್ಲಿ ನಮ್ಮ ಸಂವಿಧಾನದ ರಚನೆಕಾರರ ದೂರದೃಷ್ಟಿ, ಚಿಂತನೆ ಮತ್ತು ಪ್ರಯತ್ನಗಳಿಗೆ ಧನ್ಯವಾದ ಹೇಳಿದ ಅವರು, 75 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದ ನಂತರ ಪ್ರಜಾಪ್ರಭುತ್ವದ ಹಬ್ಬವನ್ನು ಆಚರಿಸುವ ಸಮಯ ಬಂದಿದೆ ಎಂದು ಹೇಳಿದರು. ಸಂಸತ್ತಿನ ಸದಸ್ಯರು ಕೂಡ ಈ ಆಚರಣೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದ ಶ್ರೀ ಮೋದಿಯವರು, ಅದಕ್ಕಾಗಿ ಅವರಿಗೆ ಧನ್ಯವಾದ ಸಲ್ಲಿಸಿದರು ಮತ್ತು ಅಭಿನಂದಿಸಿದರು.The bond between India & Guyana is of soil, of sweat, of hard work: PM Modi
November 21st, 08:00 pm
Prime Minister Shri Narendra Modi addressed the National Assembly of the Parliament of Guyana today. He is the first Indian Prime Minister to do so. A special session of the Parliament was convened by Hon’ble Speaker Mr. Manzoor Nadir for the address.ಗಯಾನಾ ಸಂಸತ್ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
November 21st, 07:50 pm
ಗಯಾನಾ ಸಂಸತ್ತಿನ ರಾಷ್ಟ್ರೀಯ ಸಭೆಯನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಭಾಷಣ ಮಾಡಿದರು. ಅಲ್ಲಿನ ಸಂಸತ್ ಉದ್ದೇಶಿಸಿ ಮಾತನಾಡಿದ ಭಾರತದ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಪ್ರಧಾನಮಂತ್ರಿಗಳ ಭಾಷಣಕ್ಕಾಗಿ ಮಾನ್ಯ ಸ್ಪೀಕರ್ ಶ್ರೀ ಮಂಜೂರ್ ನಾದಿರ್ ಅವರು ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆದಿದ್ದರು.