ಪ್ರಧಾನಮಂತ್ರಿ ಮತ್ತು ಸೈಪ್ರಸ್ ನ ಅಧ್ಯಕ್ಷರು, ಭಾರತ ಮತ್ತು ಸೈಪ್ರಸ್ ವಾಣಿಜ್ಯ ನಾಯಕರೊಂದಿಗೆ ಸಂವಾದ ನಡೆಸಿದರು

ಪ್ರಧಾನಮಂತ್ರಿ ಮತ್ತು ಸೈಪ್ರಸ್ ನ ಅಧ್ಯಕ್ಷರು, ಭಾರತ ಮತ್ತು ಸೈಪ್ರಸ್ ವಾಣಿಜ್ಯ ನಾಯಕರೊಂದಿಗೆ ಸಂವಾದ ನಡೆಸಿದರು

June 16th, 02:17 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೈಪ್ರಸ್ ಅಧ್ಯಕ್ಷ ಘನತೆವೆತ್ತ ನಿಕೋಸ್ ಕ್ರಿಸ್ಟೋಡೌಲಿಡೆಸ್ ಅವರೊಂದಿಗೆ ಇಂದು ಲಿಮಾಸೋಲ್ ನಲ್ಲಿ ಸೈಪ್ರಸ್ ಮತ್ತು ಭಾರತದ ವಾಣಿಜ್ಯ ನಾಯಕರೊಂದಿಗೆ ದುಂಡುಮೇಜಿನ ಸಂವಾದ ನಡೆಸಿದರು. ಬ್ಯಾಂಕಿಂಗ್, ಹಣಕಾಸು ಸಂಸ್ಥೆಗಳು, ಉತ್ಪಾದನೆ, ರಕ್ಷಣೆ, ಲಾಜಿಸ್ಟಿಕ್ಸ್, ಕಡಲ, ಹಡಗು, ತಂತ್ರಜ್ಞಾನ, ನಾವೀನ್ಯತೆ, ಡಿಜಿಟಲ್ ತಂತ್ರಜ್ಞಾನಗಳು, ಎಐ, ಐಟಿ ಸೇವೆಗಳು, ಪ್ರವಾಸೋದ್ಯಮ ಮತ್ತು ಚಲನಶೀಲತೆಯಂತಹ ವೈವಿಧ್ಯಮಯ ಕ್ಷೇತ್ರಗಳನ್ನು ಪ್ರತಿನಿಧಿಸುವವರು ಭಾಗವಹಿಸಿದರು.

ಸೈಪ್ರಸ್‌ನಲ್ಲಿ ನಡೆದ ಭಾರತ-ಸೈಪ್ರಸ್ ಉದ್ಯಮ ವ್ಯವಹಾರದ ದುಂಡು ಮೇಜಿನ ಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

ಸೈಪ್ರಸ್‌ನಲ್ಲಿ ನಡೆದ ಭಾರತ-ಸೈಪ್ರಸ್ ಉದ್ಯಮ ವ್ಯವಹಾರದ ದುಂಡು ಮೇಜಿನ ಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

June 15th, 11:10 pm

ಮೊದಲನೆಯದಾಗಿ, ಇಂದು ನನ್ನನ್ನು ಸ್ವಾಗತಿಸಲು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಸೈಪ್ರಸ್ ಅಧ್ಯಕ್ಷರಿಗೆ ನನ್ನ ಕೃತಜ್ಞತೆ ಸಲ್ಲಿಸಲು ಬಯಸುತ್ತೇನೆ. ಉದ್ಯಮ ವ್ಯವಹಾರ ನಾಯಕರೊಂದಿಗೆ ಇಷ್ಟು ದೊಡ್ಡ ದುಂಡುಮೇಜಿನ ಸಭೆ ಆಯೋಜಿಸಿದ್ದಕ್ಕಾಗಿ ನಾನು ಅವರಿಗೆ ತುಂಬಾ ಕೃತಜ್ಞನಾಗಿದ್ದೇನೆ. ನನ್ನ ಬಗ್ಗೆ ಮತ್ತು ನಮ್ಮ ಪಾಲುದಾರಿಕೆಯ ಬಗ್ಗೆ ಅವರು ಹಂಚಿಕೊಂಡ ಸಕಾರಾತ್ಮಕ ಆಲೋಚನೆಗಳಿಗಾಗಿ ನಾನು ಅವರಿಗೆ ಪ್ರಾಮಾಣಿಕವಾಗಿ ಧನ್ಯವಾದ ಹೇಳುತ್ತೇನೆ.

ಲೋಕಸಭೆಯಲ್ಲಿ ರಾಷ್ಟ್ರಪತಿಯವರ ಭಾಷಣಕ್ಕೆ ವಂದನಾ ನಿರ್ಣಯದ ಕುರಿತು ಪ್ರಧಾನಮಂತ್ರಿಯವರ ಉತ್ತರ

ಲೋಕಸಭೆಯಲ್ಲಿ ರಾಷ್ಟ್ರಪತಿಯವರ ಭಾಷಣಕ್ಕೆ ವಂದನಾ ನಿರ್ಣಯದ ಕುರಿತು ಪ್ರಧಾನಮಂತ್ರಿಯವರ ಉತ್ತರ

February 04th, 07:00 pm

ಗೌರವಾನ್ವಿತ ರಾಷ್ಟ್ರಪತಿಯವರ ಭಾಷಣಕ್ಕೆ ನನ್ನ ಕೃತಜ್ಞತೆಯನ್ನು ವ್ಯಕ್ತಪಡಿಸಲು ನಾನು ಇಲ್ಲಿ ಹಾಜರಿದ್ದೇನೆ. ನಿನ್ನೆ ಮತ್ತು ಇಂದು ತಡರಾತ್ರಿಯವರೆಗೆ, ಎಲ್ಲಾ ಗೌರವಾನ್ವಿತ ಸಂಸದರು ಈ ಕೃತಜ್ಞತಾ ನಿರ್ಣಯವನ್ನು ತಮ್ಮ ಅಭಿಪ್ರಾಯಗಳಿಂದ ಶ್ರೀಮಂತಗೊಳಿಸಿದರು. ಅನೇಕ ಗೌರವಾನ್ವಿತ ಅನುಭವಿ ಸಂಸದರು ಸಹ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು. ಪ್ರಜಾಪ್ರಭುತ್ವದ ಸಂಪ್ರದಾಯದಂತೆ, ಅಗತ್ಯವಿದ್ದಲ್ಲಿ ಪ್ರಶಂಸೆ ವ್ಯಕ್ತವಾಯಿತು, ಸಮಸ್ಯೆಗಳಿದ್ದಲ್ಲಿ ಕೆಲವು ಟೀಕೆಗಳೂ ಕೇಳಿಬಂದವು. ಇದು ಸಹಜ. ಸಭಾಧ್ಯಕ್ಷರೇ, ದೇಶದ ಜನತೆ ನನಗೆ ಹದಿನಾಲ್ಕು ಬಾರಿ ಈ ಸ್ಥಾನದಲ್ಲಿ ಕುಳಿತು ರಾಷ್ಟ್ರಪತಿಗಳ ಭಾಷಣಕ್ಕೆ ಕೃತಜ್ಞತೆ ಸಲ್ಲಿಸುವ ಅವಕಾಶವನ್ನು ಕರುಣಿಸಿರುವುದು ನನ್ನ ಸೌಭಾಗ್ಯ. ಆದ್ದರಿಂದ, ಇಂದು ನಾನು ಜನತೆಗೆ ಅತ್ಯಂತ ಗೌರವದಿಂದ ಕೃತಜ್ಞತೆ ಸಲ್ಲಿಸುತ್ತೇನೆ. ಹಾಗೆಯೇ, ಈ ಚರ್ಚೆಯಲ್ಲಿ ಪಾಲ್ಗೊಂಡು ಅದನ್ನು ಶ್ರೀಮಂತಗೊಳಿಸಿದ ಎಲ್ಲರಿಗೂ ನನ್ನ ಕೃತಜ್ಞತೆಗಳು.

ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಉತ್ತರ

February 04th, 06:55 pm

ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ನಿನ್ನೆ ಮತ್ತು ಇಂದು ಚರ್ಚೆಗಳಲ್ಲಿ ಭಾಗವಹಿಸಿದ ಎಲ್ಲಾ ಗೌರವಾನ್ವಿತ ಸಂಸದರ ಕೊಡುಗೆಯನ್ನು ಶ್ಲಾಘಿಸಿದರು ಮತ್ತು ಪ್ರಜಾಪ್ರಭುತ್ವದ ಸಂಪ್ರದಾಯವು ಅಗತ್ಯವಿರುವಲ್ಲಿ ಹೊಗಳಿಕೆ ಮತ್ತು ಅಗತ್ಯವಿರುವಲ್ಲಿ ಕೆಲವು ನಕಾರಾತ್ಮಕ ಟೀಕೆಗಳನ್ನು ಒಳಗೊಂಡಿರುತ್ತದೆ, ಇದು ಸಹಜ ಎಂದು ಹೇಳಿದರು. ರಾಷ್ಟ್ರಪತಿಯವರ ಭಾಷಣಕ್ಕೆ 14 ನೇ ಬಾರಿಗೆ ಕೃತಜ್ಞತೆ ಸಲ್ಲಿಸುವ ಅವಕಾಶವನ್ನು ಜನರಿಂದ ಪಡೆಯುವ ಮಹಾನ್ ಸವಲತ್ತು ದೊರೆತಿದೆ ಎಂದು ಹೇಳಿದ ಅವರು, ನಾಗರಿಕರಿಗೆ ತಮ್ಮ ಗೌರವಪೂರ್ವಕ ವಂದನೆಗಳನ್ನು ಸಲ್ಲಿಸಿದರು ಮತ್ತು ಪ್ರಸ್ತಾಪವನ್ನು ತಮ್ಮ ಆಲೋಚನೆಗಳೊಂದಿಗೆ ಶ್ರೀಮಂತಗೊಳಿಸಿದ್ದಕ್ಕಾಗಿ ಚರ್ಚೆಯಲ್ಲಿ ಭಾಗವಹಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.

ದೆಹಲಿಯಲ್ಲಿ ʻಮುಖ್ಯ ಕಾರ್ಯದರ್ಶಿಗಳ ನಾಲ್ಕನೇ ರಾಷ್ಟ್ರೀಯ ಸಮ್ಮೇಳನʼದ ಅಧ್ಯಕ್ಷತೆ ವಹಿಸಿದ ಪ್ರಧಾನಮಂತ್ರಿ

December 15th, 10:15 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೆಹಲಿಯಲ್ಲಿ ಮುಖ್ಯ ಕಾರ್ಯದರ್ಶಿಗಳ 4ನೇ ರಾಷ್ಟ್ರೀಯ ಸಮ್ಮೇಳನ ಉದ್ದೇಶಿಸಿ ಭಾಷಣ ಮಾಡಿದರು. ಮೂರು ದಿನಗಳ ಸಮ್ಮೇಳನವು 2024ರ ಡಿಸೆಂಬರ್ 13 ರಿಂದ 15 ರವರೆಗೆ ದೆಹಲಿಯಲ್ಲಿ ನಡೆಯಿತು.

2024ರ ಡಿಸೆಂಬರ್ 14 ಮತ್ತು 15ರಂದು ದೆಹಲಿಯಲ್ಲಿ ನಡೆಯಲಿರುವ ಮುಖ್ಯ ಕಾರ್ಯದರ್ಶಿಗಳ ನಾಲ್ಕನೇ ರಾಷ್ಟ್ರೀಯ ಸಮ್ಮೇಳನದ ಅಧ್ಯಕ್ಷತೆ ವಹಿಸಲಿರುವ ಪ್ರಧಾನಮಂತ್ರಿ

December 13th, 12:53 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024ರ ಡಿಸೆಂಬರ್ 14 ಮತ್ತು 15ರಂದು ದೆಹಲಿಯಲ್ಲಿ ಮುಖ್ಯ ಕಾರ್ಯದರ್ಶಿಗಳ ನಾಲ್ಕನೇ ರಾಷ್ಟ್ರೀಯ ಸಮ್ಮೇಳನದ ಅಧ್ಯಕ್ಷತೆ ವಹಿಸಲಿದ್ದಾರೆ. ಇದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವಿನ ಪಾಲುದಾರಿಕೆಯನ್ನು ಮತ್ತಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಮತ್ತೊಂದು ಪ್ರಮುಖ ಹೆಜ್ಜೆಯಾಗಿದೆ.

ರಾಜಸ್ಥಾನದ ಜೈಪುರದಲ್ಲಿ “ರೈಸಿಂಗ್ ರಾಜಸ್ಥಾನ್ ಗ್ಲೋಬಲ್ ಇನ್ವೆಸ್ಟ್ ಮೆಂಟ್ ಸಮ್ಮಿಟ್ 2024”ರ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

December 09th, 11:00 am

ರಾಜಸ್ಥಾನದ ರಾಜ್ಯಪಾಲರಾದ ಶ್ರೀ ಹರಿಭಾವು ಬಗಡೆ ಜಿ, ರಾಜ್ಯದ ಜನಪ್ರಿಯ ಮುಖ್ಯಮಂತ್ರಿ ಶ್ರೀ ಭಜನ್ ಲಾಲ್ ಜಿ ಶರ್ಮಾ, ರಾಜಸ್ಥಾನ ಸರ್ಕಾರದ ಸಚಿವರೆ, ಸಂಸದರೆ, ವಿಧಾನಸಭೆ ಸದಸ್ಯರೆ, ಉದ್ಯಮ ಸಹೋದ್ಯೋಗಿಗಳೆ, ವಿವಿಧ ರಾಯಭಾರಿಗಳೆ, ರಾಯಭಾರಿ ಪ್ರತಿನಿಧಿಗಳೆ, ಇತರೆ ಗಣ್ಯರೆ, ಮಹಿಳೆಯರು ಮತ್ತು ಮಹನೀಯರೆ,

ರೈಸಿಂಗ್ ರಾಜಸ್ಥಾನ ಜಾಗತಿಕ ಹೂಡಿಕೆ ಶೃಂಗಸಭೆ ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

December 09th, 10:34 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಾಜಸ್ಥಾನದ ಜೈಪುರದ ಜೈಪುರ ವಸ್ತುಪ್ರದರ್ಶನ ಮತ್ತು ಸಮಾವೇಶ ಕೇಂದ್ರದಲ್ಲಿ (ಜೆಇಸಿಸಿ) ರೈಸಿಂಗ್ ರಾಜಸ್ಥಾನ ಜಾಗತಿಕ ಹೂಡಿಕೆ ಶೃಂಗಸಭೆ 2024 ಮತ್ತು ರಾಜಸ್ಥಾನ ಗ್ಲೋಬಲ್ ಬಿಸಿನೆಸ್ ಎಕ್ಸ್ ಪೋವನ್ನು ಉದ್ಘಾಟಿಸಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ರಾಜಸ್ಥಾನದ ಯಶಸ್ಸಿನ ಪಯಣದಲ್ಲಿ ಇಂದು ಮತ್ತೊಂದು ವಿಶೇಷ ದಿನವಾಗಿದೆ ಎಂದರು. ಪಿಂಕ್ ಸಿಟಿ ಜೈಪುರದಲ್ಲಿ ನಡೆಯುತ್ತಿರುವ ರೈಸಿಂಗ್ ರಾಜಸ್ಥಾನ್ ಗ್ಲೋಬಲ್ ಇನ್ವೆಸ್ಟ್ಮೆಂಟ್ ಶೃಂಗಸಭೆ 2024ಕ್ಕೆ ಆಗಮಿಸಿರುವ ಎಲ್ಲ ಉದ್ಯಮ ಮತ್ತು ವಾಣಿಜ್ಯ ಮುಖಂಡರು, ಹೂಡಿಕೆದಾರರು, ಪ್ರತಿನಿಧಿಗಳನ್ನು ಅವರು ಅಭಿನಂದಿಸಿದರು. ಈ ಭವ್ಯ ಕಾರ್ಯಕ್ರಮವನ್ನು ಆಯೋಜಿಸಿದ್ದಕ್ಕಾಗಿ ಅವರು ರಾಜಸ್ಥಾನ ಸರ್ಕಾರವನ್ನೂ ಅಭಿನಂದಿಸಿದರು.

ಅಮೇರಿಕಾದಲ್ಲಿರುವ ಭಾರತೀಯ ಸಮುದಾಯದ ಸದಸ್ಯರೊಂದಿಗೆ ಪ್ರಧಾನಮಂತ್ರಿಯವರು ಸಂವಾದ ನಡೆಸಿದರು

June 24th, 07:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜೂನ್ 23, 2023 ರಂದು ವಾಷಿಂಗ್ಟನ್ ಡಿಸಿಯ ರೊನಾಲ್ಡ್ ರೇಗನ್ ಸೆಂಟರ್ ನಲ್ಲಿ ಭಾರತೀಯ ಸಮುದಾಯದ ಸದಸ್ಯರೊಂದಿಗೆ ಸಂವಾದ ನಡೆಸಿದರು.

ಮಧ್ಯಪ್ರದೇಶದ ಇಂದೋರ್ ನಲ್ಲಿ ನಡೆದ ಮಧ್ಯಪ್ರದೇಶ ಜಾಗತಿಕ ಹೂಡಿಕೆದಾರರ ಶೃಂಗಸಭೆ 2023 ರಲ್ಲಿ ಪ್ರಧಾನಮಂತ್ರಿಯವರ ವೀಡಿಯೊ ಸಂದೇಶದ ಕನ್ನಡ ಭಾಷಾಂತರ

January 11th, 05:00 pm

ಮಧ್ಯಪ್ರದೇಶ ಹೂಡಿಕೆದಾರರ ಶೃಂಗಸಭೆಗೆ ಎಲ್ಲಾ ಹೂಡಿಕೆದಾರರು ಮತ್ತು ಉದ್ಯಮಿಗಳಿಗೆ ಆತ್ಮೀಯ ಸ್ವಾಗತ! ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸುವಲ್ಲಿ ಮಧ್ಯಪ್ರದೇಶದ ಪಾತ್ರ ಬಹಳ ನಿರ್ಣಾಯಕವಾಗಿದೆ. ಭಕ್ತಿ ಮತ್ತು ಆಧ್ಯಾತ್ಮಿಕತೆಯಿಂದ ಪ್ರವಾಸೋದ್ಯಮದವರೆಗೆ; ಕೃಷಿಯಿಂದ ಹಿಡಿದು ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿಯವರೆಗೆ, ಮಧ್ಯಪ್ರದೇಶ ಅನನ್ಯತೆ, ಭವ್ಯತೆ ಮತ್ತು ಜಾಗೃತಿಯ ಸ್ಥಾನ ಪಡೆದಿದೆ.

ಮಧ್ಯಪ್ರದೇಶದ ಇಂದೋರ್‌ನಲ್ಲಿ ಜಾಗತಿಕ ಹೂಡಿಕೆದಾರರ ಶೃಂಗಸಭೆ 2023 ಉದ್ದೇಶಿಸಿ ಪ್ರಧಾನಮಂತ್ರಿ ವೀಡಿಯೊ ಕಾನ್ಫರೆನ್ಸ್ ಭಾಷಣ

January 11th, 11:10 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಧ್ಯಪ್ರದೇಶದ ಇಂದೋರ್‌ನಲ್ಲಿ ಜಾಗತಿಕ ಹೂಡಿಕೆದಾರರ ಶೃಂಗಸಭೆ ಉದ್ದೇಶಿಸಿ ವೀಡಿಯೊ ಕಾನ್ಫರೆನ್ಸ್ ಮೂಲಕ ಮಾತನಾಡಿದರು. ಈ ಶೃಂಗಸಭೆಯು ಮಧ್ಯಪ್ರದೇಶದ ವೈವಿಧ್ಯಮಯ ಹೂಡಿಕೆ ಅವಕಾಶಗಳನ್ನು ಪ್ರದರ್ಶಿಸಲಿದೆ.

Our youth should be skilled, confident and practical, NEP is preparing the ground for this: PM Modi

July 07th, 02:46 pm

PM Modi inaugurated Akhil Bhartiya Shiksha Samagam on implementation of the National Education Policy in Varanasi. The Prime Minister said that the basic premise of the National Education Policy was to take education out of narrow thinking and connect it with the modern ideas of the 21st century.

PM inaugurates Akhil Bhartiya Shiksha Samagam on implementation of NEP

July 07th, 02:45 pm

PM Modi inaugurated Akhil Bhartiya Shiksha Samagam on implementation of the National Education Policy in Varanasi. The Prime Minister said that the basic premise of the National Education Policy was to take education out of narrow thinking and connect it with the modern ideas of the 21st century.

ಅಟಲ್ ನಾವೀನ್ಯತೆ ಅಭಿಯಾನದ ವಿಸ್ತರಣೆಗೆ ಸಂಪುಟದ ಅನುಮೋದನೆ

April 08th, 09:16 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆ, ಅಟಲ್ ನಾವೀನ್ಯತೆ ಅಭಿಯಾನ (ಎಐಎಂ) ಅನ್ನು ಮಾರ್ಚ್ 2023ರವರೆಗೆ ಮುಂದುವರಿಸಲು ತನ್ನ ಅನುಮೋದನೆ ನೀಡಿದೆ. ದೇಶದಲ್ಲಿ ನಾವೀನ್ಯತೆ ಸಂಸ್ಕೃತಿ ಮತ್ತು ಉದ್ಯಮಶೀಲತೆ ಪರಿಸರ ವ್ಯವಸ್ಥೆಯನ್ನು ಸೃಷ್ಟಿಸುವ ಉದ್ದೇಶಿತ ಗುರಿಯ ಮೇಲೆ ಎಐಎಂ ಕೆಲಸ ಮಾಡುತ್ತದೆ. ಇದನ್ನು ಎಐಎಂ ತನ್ನ ವಿವಿಧ ಕಾರ್ಯಕ್ರಮಗಳ ಮೂಲಕ ಮಾಡಲಿದೆ.

“ವಿಶ್ವಕ್ಕೆ ಭಾರತ ನಿರ್ಮಿತ ಉತ್ಪನ್ನ” ಕುರಿತಂತೆ ಬಜೆಟ್ ಬಳಿಕದ ವೆಬಿನಾರಿನಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ

March 03rd, 10:08 am

ಈ ವರ್ಷದ ಬಜೆಟಿನಲ್ಲಿ “ಆತ್ಮ ನಿರ್ಭರ ಭಾರತ” ಮತ್ತು ಮೇಕ್ ಇನ್ ಇಂಡಿಯಾ (ಭಾರತ ನಿರ್ಮಿತ) ಕುರಿತಂತೆ ಕೈಗೊಂಡ ನಿರ್ಧಾರಗಳು ನಮ್ಮ ಉದ್ಯಮ ಮತ್ತು ಆರ್ಥಿಕತೆಗೆ ಸಂಬಂಧಿಸಿದಂತೆ ಬಹಳ ಪ್ರಮುಖವಾದಂತಹವು. ಮೇಕ್ ಇನ್ ಇಂಡಿಯಾ ಆಂದೋಲನ 21 ನೇ ಶತಮಾನದ ಭಾರತದ ಇಂದಿನ ಆವಶ್ಯಕತೆಯಾಗಿದೆ ಮತ್ತು ಇದು ಜಗತ್ತಿಗೆ ನಮ್ಮ ಸಾಮರ್ಥ್ಯವನ್ನು ತೋರಿಸಲು ನಮಗೆ ಒಂದು ಅವಕಾಶವೂ ಆಗಿದೆ. ಯಾವುದೇ ದೇಶ ಕಚ್ಚಾ ವಸ್ತುಗಳನ್ನು ರಫ್ತು ಮಾಡಿ ಬಳಿಕ ಅವೇ ಕಚ್ಚಾ ವಸ್ತುಗಳಿಂದ ತಯಾರಾದ ಸರಕುಗಳನ್ನು ಖರೀದಿಸುವ ಸ್ಥಿತಿಯಲ್ಲಿದ್ದರೆ ಅದು ಸೋಲು-ಸೋಲಿನ ಪರಿಸ್ಥಿತಿ.

ಮೇಕ್ ಇನ್ ಇಂಡಿಯಾ ಫಾರ್ ದಿ ವರ್ಲ್ಡ್' ಕುರಿತು ಡಿಪಿಐಐಟಿ ವೆಬ್‌ನಾರ್ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

March 03rd, 10:07 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕೈಗಾರಿಕೆ ಮತ್ತು ಆಂತರಿಕ ವ್ಯಾಪಾರದ ಉತ್ತೇಜನ ಇಲಾಖೆ (ಡಿಪಿಐಐಟಿ) ಆಯೋಜಿಸಿದ್ದ ಬಜೆಟ್ ನಂತರದ ವೆಬಿ‌ನಾರ್ ಉದ್ದೇಶಿಸಿ ಮಾತನಾಡಿದರು. ಇದು ಪ್ರಧಾನಮಂತ್ರಿ ಅವರು ಬಜೆಟ್ ನಂತರದ ಎಂಟನೇ ವೆಬಿ‌ನಾರ್ ಅನ್ನು ಉದ್ದೇಶಿಸಿ ಭಾಷಣವಾಗಿದೆ. ಈ ವೆಬ್‌ನಾರ್‌ನ ಥೀಮ್ (ಘೋಷ ವಾಕ್ಯ) 'ಮೇಕ್ ಇನ್ ಇಂಡಿಯಾ ಫಾರ್ ದಿ ವರ್ಲ್ಡ್' ಆಗಿತ್ತು.

“ಅಜಾದಿ ಕ ಅಮೃತ ಮಹೋತ್ಸವ್ ಸೇ ಸ್ವರ್ಣಿಮ್ ಭಾರತ್ ಕೆ ಓರ್” ಕಾರ್ಯಕ್ರಮಕ್ಕೆ ಚಾಲನೆ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ

January 20th, 10:31 am

ಕಾರ್ಯಕ್ರಮದಲ್ಲಿ ಹಾಜರಿರುವ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಜೀ, ರಾಜಸ್ಥಾನ ರಾಜ್ಯಪಾಲ ಶ್ರೀ ಕಲ್ರಾಜ್ ಮಿಶ್ರಾ ಜೀ, ರಾಜಸ್ಥಾನ ಮುಖ್ಯಮಂತ್ರಿ ಶ್ರೀ ಅಶೋಕ್ ಗೆಹ್ಲೋಟ್ ಜೀ, ಗುಜರಾತ್ ಮುಖ್ಯಮಂತ್ರಿ ಶ್ರೀ ಭುಪೇಂದ್ರ ಭಾಯಿ ಪಟೇಲ್ ಜೀ, ಕೇಂದ್ರ ಸಂಪುಟದಲ್ಲಿ ನನ್ನ ಸಹೋದ್ಯೋಗಿಯಾಗಿರುವ ಶ್ರೀ ಕಿಶನ್ ರೆಡ್ಡಿ ಜೀ, ಭುಪೇಂದರ್ ಯಾದವ್ ಜೀ, ಅರ್ಜುನ್ ರಾಂ ಮೇಘವಾಲ್ ಜೀ, ಪರಶೋತ್ತಮ ರೂಪಾಲ ಜೀ, ಶ್ರೀ ಕೈಲಾಶ್ ಚೌಧುರಿ ಜೀ, ರಾಜಸ್ಥಾನ ವಿಧಾನ ಸಭೆ ವಿಪಕ್ಷ ನಾಯಕರಾದ ಶ್ರೀ ಗುಲಾಬ್ ಚಂದ್ ಕಟಾರಿಯಾ ಜೀ, ಬ್ರಹ್ಮ ಕುಮಾರಿಸ್ ಕಾರ್ಯನಿರ್ವಹಣಾ ಕಾರ್ಯದರ್ಶಿ ರಾಜಯೋಗಿ ಮೃತ್ಯುಂಜಯ ಜೀ, ರಾಜಯೋಗಿನಿ ಸಹೋದರಿ ಮೋಹಿನಿ ಜೀ, ಸಹೋದರಿ ಚಂದ್ರಿಕಾ ಜೀ, ಬ್ರಹ್ಮ ಕುಮಾರೀಸ್ ನ ಇತರ ಎಲ್ಲಾ ಸಹೋದರಿಯರೇ, ಮಹಿಳೆಯರೇ ಮತ್ತು ಮಹನೀಯರೇ ಮತ್ತು ಎಲ್ಲಾ ಯೋಗಿಗಳೇ!.

'ಆಜಾದಿ ಕಾ ಅಮೃತ್‌ ಮಹೋತ್ಸವ್‌ ಸೆ ಸ್ವರ್ಣಿಮ್ ಭಾರತ್ ಕಿ ಔರ್‌' ರಾಷ್ಟ್ರೀಯ ಉದ್ಘಾಟನಾ ಸಮಾರಂಭದಲ್ಲಿ ಆಶಯ ಭಾಷಣ ಮಾಡಿದ ಪ್ರಧಾನಮಂತ್ರಿಗಳು

January 20th, 10:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 'ಆಜಾದಿ ಕಾ ಅಮೃತಮಹೋತ್ಸವ ಸೆ ಸ್ವರ್ಣಿಮ್ ಭಾರತ್ ಕಿ ಔರ್‌' ರಾಷ್ಟ್ರೀಯ ಉದ್ಘಾಟನಾ ಸಮಾರಂಭದಲ್ಲಿ ಆಶಯಭಾಷಣ ಮಾಡಿದರು. ʻಬ್ರಹ್ಮ ಕುಮಾರಿಸ್‌ʼ ಸಂಸ್ಥೆಯ ಏಳು ಉಪಕ್ರಮಗಳಿಗೆ ಅವರು ಹಸಿರು ನಿಶಾನೆ ತೋರಿದರು. ಲೋಕಸಭೆ ಸ್ಪೀಕರ್ ಶ್ರೀ ಓಂ ಬಿರ್ಲಾ, ರಾಜಸ್ಥಾನದ ರಾಜ್ಯಪಾಲ ಶ್ರೀ ಕಲ್ರಾಜ್ ಮಿಶ್ರಾ, ರಾಜಸ್ಥಾನದ ಮುಖ್ಯಮಂತ್ರಿ ಶ್ರೀ ಅಶೋಕ್ ಗೆಹ್ಲೋಟ್, ಗುಜರಾತ್ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಪಟೇಲ್, ಕೇಂದ್ರ ಸಚಿವರಾದ ಶ್ರೀ ಜಿ. ಕಿಶನ್ ರೆಡ್ಡಿ, ಭೂಪೇಂದರ್ ಯಾದವ್, ಶ್ರೀ ಅರ್ಜುನ್ ರಾಮ್ ಮೇಘ್ವಾಲ್, ಶ್ರೀ ಪುರುಶೋತ್ತಮ್‌ ರುಪಾಲ ಮತ್ತು ಶ್ರೀ ಕೈಲಾಶ್ ಚೌಧರಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಪುದುಚೇರಿಯಲ್ಲಿ 25 ನೇ ರಾಷ್ಟ್ರೀಯ ಯುವ ಮಹೋತ್ಸವದ ಉದ್ಘಾಟನೆಯಲ್ಲಿ ಪ್ರಧಾನಮಂತ್ರಿಯವರ ಭಾಷಣ

January 12th, 03:02 pm

ಪುದುಚೇರಿ ಲೆಫ್ಟಿನೆಂಟ್ ಗವರ್ನರ್ ತಮಿಳಿಸೈ ಜಿ, ಮುಖ್ಯಮಂತ್ರಿ ಎನ್ ರಂಗಸಾಮಿ ಜಿ, ನನ್ನ ಸಂಪುಟದ ಸಹೋದ್ಯೋಗಿಗಳಾದ ಶ್ರೀ ನಾರಾಯಣ ರಾಣೆ ಜಿ, ಶ್ರೀ ಅನುರಾಗ್ ಠಾಕೂರ್ ಜಿ, ಶ್ರೀ ನಿಸಿತ್ ಪ್ರಮಾಣಿಕ್ ಜಿ, ಶ್ರೀ ಭಾನು ಪ್ರತಾಪ್ ಸಿಂಗ್ ವರ್ಮಾ ಜಿ, ಪುದುಚೇರಿ ಸರ್ಕಾರದ ಹಿರಿಯ ಸಚಿವರು, ಸಂಸದರು, ಸಚಿವರು, ದೇಶದ ಇತರ ರಾಜ್ಯಗಳ ಶಾಸಕರು ಮತ್ತು ನನ್ನ ಯುವ ಸ್ನೇಹಿತರೇ! ವಣಕ್ಕಂ! ನಿಮಗೆಲ್ಲರಿಗೂ ರಾಷ್ಟ್ರೀಯ ಯುವ ದಿನದ ಅನೇಕ ಶುಭಾಶಯಗಳು!

ಪುದುಚೇರಿಯಲ್ಲಿ 25ನೇ ರಾಷ್ಟ್ರೀಯ ಯುವ ಉತ್ಸವ ಉದ್ಘಾಟಿಸಿದ ಪ್ರಧಾನಮಂತ್ರಿ

January 12th, 11:01 am

ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ರಾಷ್ಟ್ರೀಯ ಯುವ ದಿನದಂದು ರಾಷ್ಟ್ರಕ್ಕೆ ಶುಭ ಕೋರಿದರು. ಸ್ವಾಮಿ ವಿವೇಕಾನಂದರಿಗೆ ನಮಿಸಿದ ಪ್ರಧಾನಮಂತ್ರಿ, ಈ ವರ್ಷದ ಆಜಾದಿ ಕಾ ಅಮೃತ ಮಹೋತ್ಸವದಲ್ಲಿ ಅವರ ಜನ್ಮ ದಿನವು ಹೆಚ್ಚು ಸ್ಫೂರ್ತಿದಾಯಕವಾಗಿದೆ ಎಂದು ಹೇಳಿದರು.