ವಂದೇ ಭಾರತ್ 5 ರೈಲುಗಳಿಗೆ ಪ್ರಧಾನ ಮಂತ್ರಿ ಹಸಿರು ನಿಶಾನೆ
June 27th, 10:17 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಧ್ಯಪ್ರದೇಶದ ಭೋಪಾಲ್ನ ರಾಣಿ ಕಮಲಾಪತಿ ರೈಲು ನಿಲ್ದಾಣದಲ್ಲಿ ವಂದೇ ಭಾರತ್ ಐದು ಎಕ್ಸ್ಪ್ರೆಸ್ ರೈಲುಗಳಿಗೆ ಚಾಲನೆ ನೀಡಿದರು. ವಂದೇ ಭಾರತ್ ಐದು ರೈಲುಗಳೆಂದರೆ, ಭೋಪಾಲ್(ರಾಣಿ ಕಮಲಾಪತಿ) - ಇಂದೋರ್ ವಂದೇ ಭಾರತ್ ಎಕ್ಸ್ಪ್ರೆಸ್; ಭೋಪಾಲ್(ರಾಣಿ ಕಮಲಾಪತಿ) - ಜಬಲ್ಪುರ್ ವಂದೇ ಭಾರತ್ ಎಕ್ಸ್ಪ್ರೆಸ್; ರಾಂಚಿ - ಪಾಟ್ನಾ ವಂದೇ ಭಾರತ್ ಎಕ್ಸ್ಪ್ರೆಸ್; ಧಾರವಾಡ - ಬೆಂಗಳೂರು ವಂದೇ ಭಾರತ್ ಎಕ್ಸ್ಪ್ರೆಸ್ ಮತ್ತು ಗೋವಾ (ಮಡ್ಗಾಂವ್) - ಮುಂಬೈ ವಂದೇ ಭಾರತ್ ಎಕ್ಸ್ಪ್ರೆಸ್.ಧಾರವಾಡದಲ್ಲಿರುವ ಎಲೆಕ್ಟ್ರಾನಿಕ್ ಉತ್ಪಾದನಾ ಕ್ಲಸ್ಟರ್ ಧಾರವಾಡ ಮತ್ತು ಸುತ್ತಮುತ್ತಲಿನ ಜನರಿಗೆ ಹೆಚ್ಚಿನ ಪ್ರಯೋಜನವನ್ನು ನೀಡುತ್ತದೆ: ಪ್ರಧಾನಿ
March 25th, 11:17 am
ಧಾರವಾಡದಲ್ಲಿರುವ ಎಲೆಕ್ಟ್ರಾನಿಕ್ ಉತ್ಪಾದನಾ ಕ್ಲಸ್ಟರ್ ಧಾರವಾಡ ಮತ್ತು ಸುತ್ತಮುತ್ತಲಿನ ಜನರಿಗೆ ಹೆಚ್ಚಿನ ಪ್ರಯೋಜನವನ್ನು ನೀಡುತ್ತದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ. ಇದು ಉತ್ಪಾದನೆ ಮತ್ತು ನಾವೀನ್ಯತೆಯ ಜಗತ್ತಿನಲ್ಲಿ ಕರ್ನಾಟಕದ ಪ್ರಗತಿಯನ್ನು ಹೆಚ್ಚಿಸುತ್ತದೆ ಎಂದು ಶ್ರೀ ನರೇಂದ್ರ ಮೋದಿ ತಿಳಿಸಿದ್ದಾರೆ.