The relationship between India and Kuwait is one of civilizations, seas and commerce: PM Modi

December 21st, 06:34 pm

PM Modi addressed a large gathering of the Indian community in Kuwait. Indian nationals representing a cross-section of the community in Kuwait attended the event. The PM appreciated the hard work, achievement and contribution of the community to the development of Kuwait, which he said was widely recognised by the local government and society.

Prime Minister Shri Narendra Modi addresses Indian Community at ‘Hala Modi’ event in Kuwait

December 21st, 06:30 pm

PM Modi addressed a large gathering of the Indian community in Kuwait. Indian nationals representing a cross-section of the community in Kuwait attended the event. The PM appreciated the hard work, achievement and contribution of the community to the development of Kuwait, which he said was widely recognised by the local government and society.

ಭಾರತ-ಶ್ರೀಲಂಕಾ ಜಂಟಿ ಹೇಳಿಕೆ: ಪರಸ್ಪರ ಸಾಮಾನ್ಯ ಭವಿಷ್ಯಕ್ಕಾಗಿ ಪಾಲುದಾರಿಕೆಯ ಉತ್ತೇಜನ

December 16th, 03:26 pm

ಭಾರತದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ನರೇಂದ್ರ ಮೋದಿ ಮತ್ತು ಭಾರತಕ್ಕೆ ಅಧಿಕೃತ ಭೇಟಿಯ ಕೈಗೊಂಡಿರುವ ಶ್ರೀಲಂಕಾದ ಅಧ್ಯಕ್ಷರಾದ ಗೌರವಾನ್ವಿತ ಅನುರಾ ಕುಮಾರ ದಿಸ್ಸನಾಯಕೆ ಅವರು 2024ರ ಡಿಸೆಂಬರ್ 16 ರಂದು ನವದೆಹಲಿಯಲ್ಲಿ ನಡೆದ ಸಭೆಯಲ್ಲಿ ಸಮಗ್ರ ಮತ್ತು ಫಲಪ್ರದ ಚರ್ಚೆ ನಡೆಸಿದರು.

Be it COVID, disasters, or development, India has stood by you as a reliable partner: PM in Guyana

November 21st, 02:15 am

PM Modi and Grenada PM Dickon Mitchell co-chaired the 2nd India-CARICOM Summit in Georgetown. PM Modi expressed solidarity with CARICOM nations for Hurricane Beryl's impact and reaffirmed India's commitment as a reliable partner, focusing on development cooperation aligned with CARICOM's priorities.

ಎರಡನೇ ಭಾರತ-ಕಾರಿಕಾಮ್ ಶೃಂಗಸಭೆ

November 21st, 02:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಪ್ರಸ್ತುತ ಕಾರಿಕಾಮ್ ಒಕ್ಕೂಟದ ಅಧ್ಯಕ್ಷರಾದ ಗ್ರೆನಡಾದ ಪ್ರಧಾನಮಂತ್ರಿ ಘನತೆವೆತ್ತ ಶ್ರೀ ಡಿಕಾನ್ ಮಿಚೆಲ್ ಅವರು 20 ನವೆಂಬರ್ 2024 ರಂದು ಜಾರ್ಜ್‌ಟೌನ್‌ ನಲ್ಲಿ ನಡೆದ 2ನೇ ಭಾರತ-ಕಾರಿಕಾಮ್ ಶೃಂಗಸಭೆಯ ಅಧ್ಯಕ್ಷತೆ ವಹಿಸಿದ್ದರು. ಶೃಂಗಸಭೆಯನ್ನು ಸೌಜನ್ಯದಿಂದ ಆಯೋಜಿಸಿದ್ದಕ್ಕಾಗಿ ಗಯಾನಾ ಅಧ್ಯಕ್ಷರಾದ ಘನತೆವೆತ್ತ ಶ್ರೀ ಇರ್ಫಾನ್ ಅಲಿ ಅವರನ್ನು ಪ್ರಧಾನಮಂತ್ರಿಯವರು ಅಭಿನಂದಿಸಿದರು.

ಅಮೆರಿಕದ ನ್ಯೂಯಾರ್ಕ್‌ನಲ್ಲಿ ಭಾರತೀಯ ಸಮುದಾಯದವರನ್ನು ಉದ್ದೇಶಿಸಿ ಪ್ರಧಾನ ಮಂತ್ರಿಗಳ ಭಾಷಣದ ಇಂಗ್ಲಿಷ್‌ ಅವತರಿಣಿಕೆ

September 22nd, 10:00 pm

ನಮಸ್ತೆ ಯು.ಎಸ್.! ಈಗ ನಮ್ಮ ನಮಸ್ತೆ” ಕೂಡ ಬಹುರಾಷ್ಟ್ರೀಯವಾಗಿ ಮಾರ್ಪಟ್ಟಿದ್ದು, ಸ್ಥಳೀಯತೆಯಿಂದ ಜಾಗತಿಕವಾಗಿ ಪರಿವರ್ತನೆಯಾಗಿದೆ ಹಾಗೂ ಇದಕ್ಕೆಲ್ಲ ನೀವೇ ಕಾರಣೀಭೂತರು. ಭಾರತವನ್ನು ತಮ್ಮ ಹೃದಯಕ್ಕೆ ಸಮೀಪವಾಗಿಟ್ಟುಕೊಂಡಿರುವ ಪ್ರತಿಯೊಬ್ಬ ಭಾರತೀಯರೂ ಇದನ್ನು ಸಾಧ್ಯವಾಗಿಸಿದ್ದಾರೆ.

ನ್ಯೂಯಾರ್ಕ್‌ನಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ

September 22nd, 09:30 pm

ಪ್ರಧಾನಮಂತ್ರಿ ಅವರನ್ನು ಭಾರತೀಯ ಸಮುದಾಯವು ಅತ್ಯಂತ ಪ್ರೀತಿ, ಗೌರವ, ಆದರ, ಉತ್ಸಾಹದಿಂದ ಬರಮಾಡಿಕೊಂಡಿತು. ಬೃಹತ್‌ ಜನಸಮೂಹವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಗಳು, ಜಗತ್ತಿನ ಎರಡು ಮಹಾನ್ ಪ್ರಜಾಪ್ರಭುತ್ವಗಳ ರಾಷ್ಟ್ರಗಳ ನಡುವೆ ಬಾಂಧವ್ಯವನ್ನು ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸುವ ಭಾರತೀಯ ಅಮೆರಿಕನ್ ಸಮುದಾಯದಿಂದ ಭಾರತ-ಯುಎಸ್ ಸಂಬಂಧವು ಇನ್ನಷ್ಟು ಸದೃಢವಾಗಿರುವುದು ಕಾಣುತ್ತಿದೆ. ಹಿಂದಿನ ದಿನ ಡೆಲವೇರ್‌ನಲ್ಲಿರುವ ನಿವಾಸದಲ್ಲಿ ಅಮೆರಿಕ ಅಧ್ಯಕ್ಷ ಬಿಡೆನ್ ಅವರೊಂದಿಗಿನ ಭೇಟಿ ಬಗ್ಗೆಯೂ ಪ್ರಧಾನ ಮಂತ್ರಿಗಳು ಪ್ರಸ್ತಾಪಿಸಿದರು. ಈ ವಿಶೇಷ ಸಂದರ್ಭವು ಭಾರತೀಯ ಸಮುದಾಯವು ಸಂಯುಕ್ತ ರಾಷ್ಟ್ರಗಳೊಂದಿಗಿನ ನಂಬಿಕೆ- ವಿಶ್ವಾಸಾರ್ಹತೆಯನ್ನು ಪ್ರತಿಬಿಂಬಿಸುತ್ತಿದೆ ಎಂದು ಶ್ಲಾಘಿಸಿದರು.

ವಿಡಿಯೋ ಕಾನ್ಫರೆನ್ಸ್ ಮೂಲಕ ರೋಜ್ಗಾರ್ ಮೇಳದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

September 26th, 11:04 am

ಇಂದಿನ ರೋಜ್ಗಾರ್ ಮೇಳದಲ್ಲಿ ಸರ್ಕಾರಿ ಸೇವೆಗಳಿಗೆ ನೇಮಕಾತಿ ಪತ್ರಗಳನ್ನು ಪಡೆದ ಎಲ್ಲಾ ಅಭ್ಯರ್ಥಿಗಳಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು. ನೀವೆಲ್ಲರೂ ಅಪಾರ ಪರಿಶ್ರಮದ ನಂತರ ಈ ಯಶಸ್ಸನ್ನು ಸಾಧಿಸಿದ್ದೀರಿ. ಲಕ್ಷಾಂತರ ಅಭ್ಯರ್ಥಿಗಳಿಂದ ನಿಮ್ಮನ್ನು ಆಯ್ಕೆ ಮಾಡಲಾಗಿದೆ; ಆದ್ದರಿಂದ, ಈ ಯಶಸ್ಸು ನಿಮ್ಮ ಜೀವನದಲ್ಲಿ ಹೆಚ್ಚಿನ ಪ್ರಾಮುಖ್ಯತೆಯನ್ನು ಹೊಂದಿದೆ.

ರೋಜ್ ಗಾರ್ ಮೇಳ ಉದ್ದೇಶಿಸಿ ಪ್ರಧಾನಿ ಭಾಷಣ

September 26th, 10:38 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ರೋಜ್ ಗಾರ್ ಮೇಳ ಉದ್ದೇಶಿಸಿ ಭಾಷಣ ಮಾಡಿದರು ಮತ್ತು ಹೊಸದಾಗಿ ನೇಮಕಗೊಂಡ 51,000 ಮಂದಿಗೆ ನೇಮಕಾತಿ ಪತ್ರಗಳನ್ನು ವಿತರಿಸಿದರು. ಹೊಸದಾಗಿ ನೇಮಕಗೊಂಡರು ದೇಶಾದ್ಯಂತ ಅಂಚೆ ಇಲಾಖೆ, ಭಾರತೀಯ ಆಡಿಟ್ ಮತ್ತು ಅಕೌಂಟ್ಸ್ ಇಲಾಖೆ, ಅಣು ಇಂಧನ ಇಲಾಖೆ, ಕಂದಾಯ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ರಕ್ಷಣಾ ಸಚಿವಾಲಯ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೇರಿ ಸರ್ಕಾರದ ಹಲವು ಇಲಾಖೆಗಳು/ಸಚಿವಾಲಯಗಳಿಗೆ ಸೇರ್ಪಡೆಯಾಗಲಿದ್ದಾರೆ. ಈ ರೋಜ್ ಗಾರ್ ಮೇಳ ದೇಶಾದ್ಯಂತ 46 ಸ್ಥಳಗಳಲ್ಲಿ ಏಕಕಾಲದಲ್ಲಿ ನಡೆಯಿತು.

ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ನಡೆದ ಸಮುದಾಯ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅನುವಾದ

May 23rd, 08:54 pm

ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಮತ್ತು ನನ್ನ ಆತ್ಮೀಯ ಸ್ನೇಹಿತರಾದ ಗೌರವಾನ್ವಿತ ಆಂಥೋನಿ ಅಲ್ಬನೀಸ್ ಅವರೇ, ಆಸ್ಟ್ರೇಲಿಯಾದ ಮಾಜಿ ಪ್ರಧಾನಿ ಘನತೆವೆತ್ತ ಸ್ಕಾಟ್ ಮಾರಿಸನ್ ಅವರೇ, ನ್ಯೂ ಸೌತ್ ವೇಲ್ಸ್ ಪ್ರಧಾನಿ ಕ್ರಿಸ್ ಮಿನ್ಸ್ ಅವರೇ, ವಿದೇಶಾಂಗ ಸಚಿವೆ ಪೆನ್ನಿ ವಾಂಗ್ ಅವರೇ, ಸಂವಹನ ಸಚಿವ ಮಿಚೆಲ್ ರೋಲ್ಯಾಂಡ್ ಅವರೇ, ಇಂಧನ ಸಚಿವರಾದ ಕ್ರಿಸ್ ಬೋವೆನ್ ಅವರೇ, ವಿರೋಧ ಪಕ್ಷದ ನಾಯಕ ಪೀಟರ್ ಡಟ್ಟನ್ ಅವರೇ, ಸಹಾಯಕ ವಿದೇಶಾಂಗ ಸಚಿವ ಟಿಮ್ ವ್ಯಾಟ್ಸ್ ಅವರೇ, ಇಲ್ಲಿ ಹಾಜರಿರುವ ನ್ಯೂ ಸೌತ್ ವೇಲ್ಸ್ ಸಂಪುಟದ ಗೌರವಾನ್ವಿತ ಸದಸ್ಯರೇ, ಪಾರ್ರಮಟ್ಟದ ಸಂಸತ್ ಸದಸ್ಯ ಡಾ. ಆಂಡ್ರ್ಯೂ ಚಾರ್ಲ್ಟನ್ ಅವರೇ, ಇಲ್ಲಿ ಉಪಸ್ಥಿತರಿರುವ ಆಸ್ಟ್ರೇಲಿಯಾದ ಸಂಸತ್ ಸದಸ್ಯರು, ಮೇಯರ್‌ಗಳು, ಉಪ ಮೇಯರ್‌ಗಳು, ಕೌನ್ಸಿಲರ್‌ಗಳೇ ಮತ್ತು ಇಂದು ಇಷ್ಟು ದೊಡ್ಡ ಸಂಖ್ಯೆಯಲ್ಲಿ ಇಲ್ಲಿ ಸೇರಿರುವ ಆಸ್ಟ್ರೇಲಿಯಾ ನಿವಾಸಿ ಭಾರತೀಯ ವಲಸಿಗರೇ! ನಿಮ್ಮೆಲ್ಲರಿಗೂ ನನ್ನ ಶುಭಾಶಯಗಳು!

ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ಭಾರತೀಯ ಸಮುದಾಯದೊಂದಿಗೆ ಪ್ರಧಾನಮಂತ್ರಿಯವರ ಸಂವಾದ

May 23rd, 01:30 pm

ಸಿಡ್ನಿಯ ಕುಡೋಸ್ ಬ್ಯಾಂಕ್ ಅರೆನಾದಲ್ಲಿ 2023ರ ಮೇ 23ರಂದು ಆಸ್ಟ್ರೇಲಿಯಾದ ಪ್ರಧಾನ ಮಂತ್ರಿ ಘನತೆವೆತ್ತ ಶ್ರೀ ಆಂಥೋನಿ ಅಲ್ಬನೀಸ್ ಅವರೊಟ್ಟಿಗೆ ಪ್ರಧಾನಿ ಮೋದಿಯವರು ಭಾರತೀಯ ಸಮುದಾಯದ ಬೃಹತ್ ಸಭಿಕರನ್ನುದ್ದೇಶಿಸಿ ಮಾತನಾಡಿದರು ಹಾಗೂ ಮತ್ತು ಸಂವಾದ ನಡೆಸಿದರು.

The India of today is moving forward in every direction that is necessary to become a tech leader: PM Modi

May 11th, 11:00 am

PM Modi inaugurated the programme marking National Technology Day 2023. PM Modi stated “The Tinker-preneurs of India will soon become leading entrepreneurs of the world” and that the India of today is moving forward in every direction that is necessary to become a tech leader.

ನವದೆಹಲಿಯಲ್ಲಿ ಮೇ 11ರಂದು ರಾಷ್ಟ್ರೀಯ ತಂತ್ರಜ್ಞಾನ ದಿನ 2023ರ ಕಾರ್ಯಕ್ರಮ ವನ್ನು ಉದ್ಘಾಟಿಸಿದ ಪ್ರಧಾನಮಂತ್ರಿ

May 11th, 10:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಪ್ರಗತಿ ಮೈದಾನದಲ್ಲಿ ರಾಷ್ಟ್ರೀಯ ತಂತ್ರಜ್ಞಾನ ದಿನ 2023 ರ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಕಾರ್ಯಕ್ರಮವು ಮೇ 11 ರಿಂದ 14 ರವರೆಗೆ ನಡೆಯಲಿರುವ ರಾಷ್ಟ್ರೀಯ ತಂತ್ರಜ್ಞಾನ ದಿನದ 25 ನೇ ವರ್ಷದ ಆಚರಣೆಯ ಪ್ರಾರಂಭವನ್ನು ಗುರುತಿಸಿತು. ಈ ಮಹತ್ವದ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ದೇಶದಲ್ಲಿ 5800 ಕೋಟಿ ರೂ.ಗೂ ಅಧಿಕ ಮೌಲ್ಯದ ವೈಜ್ಞಾನಿಕ ಮತ್ತು ತಾಂತ್ರಿಕ ಪ್ರಗತಿಗೆ ಸಂಬಂಧಿಸಿದ ಹಲವು ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು. ಇದು ದೇಶದಲ್ಲಿ ವೈಜ್ಞಾನಿಕ ಸಂಸ್ಥೆಗಳನ್ನು ಬಲಪಡಿಸುವ ಮೂಲಕ ಆತ್ಮನಿರ್ಭರ ಭಾರತದ ಪ್ರಧಾನಮಂತ್ರಿಯವರ ದೃಷ್ಟಿಕೋನಕ್ಕೆ ಅನುಗುಣವಾಗಿದೆ.

PM acknowledges the integration of Khelo India Certificates with DigiLocker

April 08th, 11:30 am

The Prime Minister, Shri Narendra Modi acknowledged the integration of Khelo India Certificates with DigiLocker.

ಬಜೆಟ್ ನಂತರದ ವೆಬಿನಾರ್ ನಲ್ಲಿ ಯುವ ಶಕ್ತಿಯನ್ನು ಬಳಸಿಕೊಳ್ಳುವುದು - ಕೌಶಲ್ಯ ಮತ್ತು ಶಿಕ್ಷಣ ಕುರಿತ ಪ್ರಧಾನ ಮಂತ್ರಿ ಅವರ ಭಾಷಣದ ಕನ್ನಡ ಅನುವಾದ

February 28th, 10:05 am

'ಅಮೃತಕಾಲ ' ದ ಈ ಯುಗದಲ್ಲಿ ಕೌಶಲ್ಯ ಮತ್ತು ಶಿಕ್ಷಣವು ದೇಶಕ್ಕೆ ಎರಡು ಪ್ರಮುಖ ಸಾಧನಗಳಾಗಿವೆ. ಅಭಿವೃದ್ಧಿ ಹೊಂದಿದ ಭಾರತದ ದೂರದೃಷ್ಟಿಯೊಂದಿಗೆ ನಮ್ಮ ಯುವಕರು ದೇಶದ ಅಮೃತ ಯಾತ್ರೆಯನ್ನು ಮುನ್ನಡೆಸುತ್ತಿದ್ದಾರೆ. ಆದ್ದರಿಂದ, ' ಅಮೃತಕಾಲ್ ' ನ ಮೊದಲ ಆಯವ್ಯಯದಲ್ಲಿ ಯುವಕರು ಮತ್ತು ಅವರ ಭವಿಷ್ಯಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ. ಈ ಬಜೆಟ್ ನಮ್ಮ ಶಿಕ್ಷಣ ವ್ಯವಸ್ಥೆಯು ಪ್ರಾಯೋಗಿಕ ಮತ್ತು ಉದ್ಯಮ ಆಧಾರಿತವಾಗಿದೆ ಎಂದು ಖಚಿತಪಡಿಸಿಕೊಳ್ಳಲು ಅಡಿಪಾಯವನ್ನು ಬಲಪಡಿಸುತ್ತಿದೆ. ಹಲವಾರು ವರ್ಷಗಳಿಂದ, ನಮ್ಮ ಶಿಕ್ಷಣ ಕ್ಷೇತ್ರವು ಕಠಿಣತೆಗೆ ಬಲಿಪಶುವಾಗಿದೆ. ನಾವು ಈ ಸನ್ನಿವೇಶವನ್ನು ಬದಲಾಯಿಸಲು ಪ್ರಯತ್ನಿಸಿದ್ದೇವೆ. ನಾವು ಯುವಕರ ಯೋಗ್ಯತೆ ಮತ್ತು ಭವಿಷ್ಯದ ಬೇಡಿಕೆಗಳಿಗೆ ಅನುಗುಣವಾಗಿ ಶಿಕ್ಷಣ ಮತ್ತು ಕೌಶಲ್ಯವನ್ನು ಪುನರ್ ರಚಿಸಿದೆವು. ರಾಷ್ಟ್ರೀಯ ಶಿಕ್ಷಣ ನೀತಿಯು ಕಲಿಕೆ ಮತ್ತು ಕೌಶಲ್ಯ ಎರಡಕ್ಕೂ ಸಮಾನ ಒತ್ತು ನೀಡಿದೆ. ಈ ಪ್ರಯತ್ನದಲ್ಲಿ ಶಿಕ್ಷಕರಿಂದ ನಮಗೆ ಸಾಕಷ್ಟು ಬೆಂಬಲ ಸಿಕ್ಕಿದೆ ಎಂದು ನನಗೆ ಸಂತೋಷವಾಗಿದೆ. ಇದು ನಮ್ಮ ಮಕ್ಕಳನ್ನು ಗತಕಾಲದ ಹೊರೆಯಿಂದ ಮುಕ್ತಗೊಳಿಸಲು ನಮಗೆ ಹೆಚ್ಚಿನ ಧೈರ್ಯವನ್ನು ನೀಡಿತು. ಇದು ಶಿಕ್ಷಣ ಮತ್ತು ಕೌಶಲ್ಯ ಕ್ಷೇತ್ರಗಳಲ್ಲಿ ಮತ್ತಷ್ಟು ಸುಧಾರಣೆಗಳನ್ನು ಕೈಗೊಳ್ಳಲು ಸರ್ಕಾರವನ್ನು ಉತ್ತೇಜಿಸಿದೆ.

'ತಂತ್ರಜ್ಞಾನವನ್ನು ಬಳಸಿಕೊಂಡು ಸುಗಮ ಜೀವನ' ಕುರಿತು ಬಜೆಟ್ ನಂತರದ ವೆಬಿನಾರ್ನಲ್ಲಿ ಪ್ರಧಾನಿ ಭಾಷಣ

February 28th, 10:00 am

ಬಜೆಟ್ ನಂತರದ ವೆಬಿನಾರ್ನಲ್ಲಿ 'ತಂತ್ರಜ್ಞಾನವನ್ನು ಬಳಸಿಕೊಂಡು ಸುಗಮ ಜೀವನ' ಎಂಬ ವಿಷಯದ ಕುರಿತು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು. ʻಕೇಂದ್ರ ಬಜೆಟ್-2023ʼರಲ್ಲಿ ಘೋಷಿಸಲಾದ ಉಪಕ್ರಮಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಆಲೋಚನೆಗಳು ಮತ್ತು ಸಲಹೆಗಳನ್ನು ಪಡೆಯಲು ಸರಕಾರ ಆಯೋಜಿಸಿದ್ದ 12 ಬಜೆಟ್ ನಂತರದ ವೆಬಿನಾರ್‌ಗಳ ಸರಣಿಯಲ್ಲಿ ಇದು ಐದನೇಯದು.

ಜುಲೈ 4 ರಂದು ಗಾಂಧಿನಗರ್ ಮತ್ತು ಭೀಮಾವರಂಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

July 01st, 12:16 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2022 ರ ಜುಲೈ 4 ರಂದು ಬೆಳಿಗ್ಗೆ 11 ಗಂಟೆಗೆ ಆಂಧ್ರಪ್ರದೇಶದ ಭೀಮಾವರಂ ಗೆ ಭೇಟಿ ನೀಡಲಿದ್ದು, ಸ್ವಾತಂತ್ರ್ಯ ಹೋರಾಟಗಾರ, ದಂತಕಥೆ ಅಲ್ಲೂರಿ ಸೀತಾರಾಮ ರಾಜು ಅವರ 125 ನೇ ಜನ ದಿನೋತ್ಸವದ ವರ್ಷಾಚರಣೆಗೆ ಚಾಲನೆ ನೀಡಲಿದ್ದಾರೆ. ಬಳಿಕ ಸಂಜೆ 4.30 ಕ್ಕೆ ಪ್ರಧಾನಮಂತ್ರಿ ಅವರು ಗಾಂಧೀನಗರದಲ್ಲಿ ಡಿಟಿಜಲ್ ಇಂಡಿಯಾ 2022 ಸಪ್ತಾಹ ಉದ್ಘಾಟಿಸಲಿದ್ದಾರೆ.

ಮಧ್ಯಪ್ರದೇಶದಲ್ಲಿ ಸ್ವಾಮಿತ್ವ ಯೋಜನೆಯ ಫಲಾನುಭವಿಗಳ ಜೊತೆ ಸಂವಾದದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ

October 06th, 12:31 pm

ಸ್ವಾಮಿತ್ವ ಯೋಜನೆಯು ಗ್ರಾಮಗಳಲ್ಲಿ ಉಂಟು ಮಾಡಿರುವ ನಂಬಿಕೆ ಮತ್ತು ವಿಶ್ವಾಸ ಫಲಾನುಭವಿಗಳ ಜೊತೆಗಿನ ಸಂವಾದದಲ್ಲಿ ಸ್ಪಷ್ಟವಾಗಿ ಗೋಚರಿಸಿದೆ ಮತ್ತು ಅದನ್ನು ನಾನು ಇಲ್ಲಿ ಕೂಡಾ ಕಾಣುತ್ತಿದ್ದೇನೆ. ನೀವು ನಿಮ್ಮ ಬಿದಿರಿನ ಕುರ್ಚಿಗಳನ್ನು ತೋರಿಸಿದಿರಿ ಆದರೆ ನನ್ನ ಕಣ್ಣುಗಳು ಜನರ ಉತ್ಸಾಹದ ಮೇಲೆ ನೆಟ್ಟಿವೆ. ಜನತೆಯ ಇಷ್ಟೊಂದು ಪ್ರೀತಿ ಮತ್ತು ಆಶೀರ್ವಾದಗಳಿಂದಾಗಿ, ನನಗೆ ಈ ಯೋಜನೆಯು ಜನರಿಗೆ ನೀಡುತ್ತಿರುವ ಕಲ್ಯಾಣ ಪ್ರಯೋಜನಗಳನ್ನು ಕಲ್ಪಿಸಿಕೊಳ್ಳುವುದಕ್ಕೆ ಸಾಧ್ಯವಾಗಿದೆ. ನನ್ನೊಂದಿಗೆ ಸಂವಾದಿಸಿದ ಸಹೋದ್ಯೋಗಿಗಳು ಬಹಳ ವಿವರವಾಗಿ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಮತ್ತು ಈ ಯೋಜನೆ ಬಹಳ ಬಲಶಾಲಿ ಶಕ್ತಿಯಾಗಿ ಮೂಡಿ ಬರುತ್ತಿರುವುದನ್ನು ತೋರಿಸಿದೆ. ಸ್ವಾಮಿತ್ವ ಯೋಜನೆ ಕಾರ್ಯಾರಂಭದ ಬಳಿಕ ಜನರಿಗೆ ಬ್ಯಾಂಕುಗಳಿಂದ ಸಾಲ ಪಡೆಯುವುದು ಸುಲಭವಾಗಿದೆ.

ಮಧ್ಯ ಪ್ರದೇಶದ ʻಸ್ವಾಮಿತ್ವʼ ಯೋಜನೆಯ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದ ಪ್ರಧಾನಿ

October 06th, 12:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಧ್ಯಪ್ರದೇಶದಲ್ಲಿ ʻಸ್ವಾಮಿತ್ವʼ ಯೋಜನೆಯ ಫಲಾನುಭವಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಈ ಯೋಜನೆಯಡಿ ಪ್ರಯೋಜನ ಪಡೆದ 1,71,000 ಫಲಾನುಭವಿಗಳಿಗೆ ಇ-ಆಸ್ತಿ ಕಾರ್ಡ್‌ಗಳನ್ನು ವಿತರಿಸಿದರು. ಕೇಂದ್ರ ಸಚಿವರು, ಮಧ್ಯಪ್ರದೇಶ ಮುಖ್ಯಮಂತ್ರಿ, ಸಂಸತ್ ಸದಸ್ಯರು ಮತ್ತು ಶಾಸಕರು, ಫಲಾನುಭವಿಗಳು; ಗ್ರಾಮ, ಜಿಲ್ಲೆ ಮತ್ತು ರಾಜ್ಯ ಸರಕಾರದ ವಿವಿಧ ಅಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಇ-ರುಪಿ ಡಿಜಿಟಲ್ ಪಾವತಿ ಪರಿಹಾರ ಕಾರ್ಯಾರಂಭದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ

August 02nd, 04:52 pm

ಈ ಪ್ರಮುಖ ಮಹತ್ವದ ಕಾರ್ಯಕ್ರಮದಲ್ಲಿ ದೇಶದ ಎಲ್ಲೆಡೆಯಿಂದ ಉಪಸ್ಥಿತರಿರುವ ರಾಜ್ಯಪಾಲರು, ಉಪ ರಾಜ್ಯಪಾಲರು, ಕೇಂದ್ರ ಸಂಪುಟದಲ್ಲಿ ನನ್ನ ಸಹೋದ್ಯೋಗಿಗಳು, ರಿಸರ್ವ ಬ್ಯಾಂಕಿನ ಗವರ್ನರ್, ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳು, ವಿವಿಧ ಕೈಗಾರಿಕೋದ್ಯಮ ಸಂಘಟನೆಗಳಿಗೆ ಸೇರಿದ ಸಹೋದ್ಯೋಗಿಗಳು, ನವೋದ್ಯಮ ಮತ್ತು ಫಿನ್ ಟೆಕ್ ವಲಯದ ನನ್ನ ಯುವ ಸಹೋದ್ಯೋಗಿಗಳು, ಬ್ಯಾಂಕುಗಳ ಹಿರಿಯ ಅಧಿಕಾರಿಗಳು ಮತ್ತು ನನ್ನ ಪ್ರೀತಿಯ ಸಹೋದರರೇ ಹಾಗು ಸಹೋದರಿಯರೇ,