"ಸಾಮಾಜಿಕ ಒಳಗೊಳ್ಳುವಿಕೆ ಮತ್ತು ಹಸಿವು ಹಾಗು ಬಡತನದ ವಿರುದ್ಧದ ಹೋರಾಟ" ಕುರಿತ ಜಿ 20 ಅಧಿವೇಶನದಲ್ಲಿ ಪ್ರಧಾನಮಂತ್ರಿಯವರ ಹೇಳಿಕೆಗಳು

November 18th, 08:00 pm

ಮೊದಲಿಗೆ, ಜಿ 20 ಶೃಂಗಸಭೆಯ ಆಯೋಜನೆಗಾಗಿ ಮಾಡಿದ ಭವ್ಯ ವ್ಯವಸ್ಥೆಗಳಿಗಾಗಿ ಮತ್ತು ಯಶಸ್ವಿ ಜಿ 20 ಅಧ್ಯಕ್ಷತೆಗಾಗಿ ನಾನು ಅಧ್ಯಕ್ಷ ಲುಲಾ ಅವರನ್ನು ಅಭಿನಂದಿಸಲು ಬಯಸುತ್ತೇನೆ.

ಸಾಮಾಜಿಕ ಒಳಗೊಳ್ಳುವಿಕೆ ಮತ್ತು ಹಸಿವು ಮತ್ತು ಬಡತನದ ವಿರುದ್ಧದ ಹೋರಾಟ ಕುರಿತ ಜಿ 20 ಅಧಿವೇಶನವನ್ನುದ್ದೇಶಿಸಿ ಪ್ರಧಾನಮಂತ್ರಿ ಭಾಷಣ

November 18th, 07:55 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು 'ಸಾಮಾಜಿಕ ಒಳಗೊಳ್ಳುವಿಕೆ ಮತ್ತು ಹಸಿವು ಮತ್ತು ಬಡತನದ ವಿರುದ್ಧದ ಹೋರಾಟ' ಕುರಿತ ಜಿ 20 ಶೃಂಗಸಭೆಯ ಉದ್ಘಾಟನಾ ಅಧಿವೇಶನವನ್ನುದ್ದೇಶಿಸಿ ಭಾಷಣ ಮಾಡಿದರು. ಶೃಂಗಸಭೆಯ ಆತಿಥ್ಯ ವಹಿಸಿದ್ದಕ್ಕಾಗಿ ಮತ್ತು ಅವರ ಆತ್ಮೀಯ ಆತಿಥ್ಯಕ್ಕಾಗಿ ಬ್ರೆಜಿಲ್ ಅಧ್ಯಕ್ಷ ಘನತೆವೆತ್ತ ಶ್ರೀ ಲೂಯಿಸ್ ಇನಾಸಿಯೊ ಲುಲಾ ಡಾ ಸಿಲ್ವಾ ಅವರಿಗೆ ಪ್ರಧಾನಮಂತ್ರಿಯವರು ಧನ್ಯವಾದ ಅರ್ಪಿಸಿದರು. ಸುಸ್ಥಿರ ಅಭಿವೃದ್ಧಿ ಗುರಿಗಳ ಮೇಲೆ ಕೇಂದ್ರೀಕರಿಸಿದ ಬ್ರೆಜಿಲ್ ಜಿ 20 ಕಾರ್ಯಸೂಚಿಯನ್ನು ಅವರು ಶ್ಲಾಘಿಸಿದರು, ಈ ವಿಧಾನವು ಜಾಗತಿಕ ದಕ್ಷಿಣದ ಕಾಳಜಿಗಳನ್ನು ಎತ್ತಿ ತೋರಿಸಿದೆ ಮತ್ತು ಹೊಸದಿಲ್ಲಿ ಜಿ 20 ಶೃಂಗಸಭೆಯ ಜನ ಕೇಂದ್ರಿತ ನಿರ್ಧಾರಗಳನ್ನು ಮುಂದಕ್ಕೆ ಕೊಂಡೊಯ್ದಿದೆ ಎಂದು ಹೇಳಿದರು. ಒಂದು ಭೂಮಿ, ಒಂದು ಕುಟುಂಬ, ಒಂದು ಭವಿಷ್ಯ ಕ್ಕಾಗಿ ಭಾರತದ ಜಿ 20 ಅಧ್ಯಕ್ಷತೆಯ ಕರೆ ರಿಯೋ ಸಂಭಾಷಣೆಗಳಲ್ಲಿ ಪ್ರತಿಧ್ವನಿಸುತ್ತಲೇ ಇದೆ ಎಂದು ಅವರು ಒತ್ತಿ ಹೇಳಿದರು.

1940 ಕೋಟಿ ರೂ.ಗಳ ಕೇಂದ್ರ ಪಾಲು ಸೇರಿದಂತೆ 2817 ಕೋಟಿ ರೂ. ವೆಚ್ಚದ ಡಿಜಿಟಲ್ ಕೃಷಿ ಮಿಷನ್‌ ಗೆ ಸಂಪುಟ ಅನುಮೋದನೆ ನೀಡಿದೆ

September 02nd, 06:30 pm

ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯವನ್ನು ರಚಿಸುವುದು, ಡಿಜಿಟಲ್ ಸಾಮಾನ್ಯ ಬೆಳೆ ಅಂದಾಜು ಸಮೀಕ್ಷೆ (DGCES) ಅನುಷ್ಠಾನಗೊಳಿಸುವುದು ಮತ್ತು ಕೇಂದ್ರ ಸರ್ಕಾರ, ರಾಜ್ಯ ಸರ್ಕಾರಗಳು ಮತ್ತು ಶೈಕ್ಷಣಿಕ ಮತ್ತು ಸಂಶೋಧನಾ ಸಂಸ್ಥೆಗಳಿಂದ ಇತರ ಮಾಹಿತಿ ತಂತ್ರಜ್ಞಾನದ (ಐಟಿ) ಡಿಜಿಟಲ್ ಕೃಷಿ ಉಪಕ್ರಮಗಳನ್ನು ಬೆಂಬಲಿಸಲು ಮಿಷನ್ ಅನ್ನು ಒಂದು ಸಮೂಹ ಯೋಜನೆಯಾಗಿ ರೂಪಿಸಲಾಗಿದೆ.

ರೈತರ ಜೀವನ ಮತ್ತು ಜೀವನೋಪಾಯವನ್ನು ಸುಧಾರಿಸಲು ಒಟ್ಟು ರೂ 13,966 ಕೋಟಿ ವೆಚ್ಚದಲ್ಲಿ ಏಳು ಪ್ರಮುಖ ಯೋಜನೆಗಳಿಗೆ ಕೇಂದ್ರ ಸಂಪುಟ ಅನುಮೋದನೆ

September 02nd, 04:22 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ರೈತರ ಜೀವನವನ್ನು ಸುಧಾರಿಸಲು ಮತ್ತು ಅವರ ಆದಾಯವನ್ನು ಹೆಚ್ಚಿಸಲು ಒಟ್ಟು 13,966 ಕೋಟಿ ರೂಪಾಯಿಗಳ ಏಳು ಯೋಜನೆಗಳಿಗೆ ಇಂದು ಅನುಮೋದನೆ ನೀಡಿದೆ