ರಾಮ ಪ್ರತಿಯೊಬ್ಬರ ಹೃದಯದಲ್ಲಿದ್ದಾನೆ: ಮನ್ ಕಿ ಬಾತ್ ವೇಳೆ ಪ್ರಧಾನಿ ಮೋದಿ
January 28th, 11:30 am
ನನ್ನ ಪ್ರಿಯ ದೇಶವಾಸಿಗಳೇ, ಈ ಬಾರಿ ಜನವರಿ 26 ರ ಪರೇಡ್ ತುಂಬಾ ಅದ್ಭುತವಾಗಿತ್ತು, ಆದರೆ ಕವಾಯತಿನಲ್ಲಿ ಮಹಿಳಾ ಶಕ್ತಿಯನ್ನು ನೋಡುವುದು ಹೆಚ್ಚು ಚರ್ಚೆಯ ವಿಷಯವಾಗಿತ್ತು, ಕರ್ತವ್ಯ ಪಥದಲ್ಲಿ ಕೇಂದ್ರ ಭದ್ರತಾ ಪಡೆ ಮತ್ತು ದೆಹಲಿ ಪೊಲೀಸ್ ಮಹಿಳಾ ತುಕಡಿಗಳು ಕವಾಯತು ಆರಂಭಿಸಿದಾಗ, ಎಲ್ಲರೂ ಹೆಮ್ಮೆಯಿಂದ ಬೀಗಿದರು. ಮಹಿಳಾ ವಾದ್ಯಮೇಳದ ಕವಾಯತು ನೋಡಿ, ಅವರ ಅಮೋಘ ಸಮನ್ವಯತೆ ಕಂಡು ದೇಶ-ವಿದೇಶದ ಜನರು ಪುಳಕಿತರಾದರು. ಈ ಬಾರಿ ಪರೇಡ್‌ನಲ್ಲಿ ಸಾಗಿದ 20 ಸ್ಕ್ವಾಡ್‌ಗಳಲ್ಲಿ 11 ಸ್ಕ್ವಾಡ್‌ಗಳು ಮಹಿಳೆಯರದ್ದೇ ಆಗಿದ್ದವು. ಸಾಗಿಬಂದ ಸ್ಥಬ್ಧ ಚಿತ್ರಗಳಲ್ಲಿಯೂ, ಎಲ್ಲಾ ವೇಷಧಾರಿಗಳು ಮಹಿಳೆಯರೇ ಆಗಿದ್ದರು. ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸುಮಾರು ಒಂದೂವರೆ ಸಾವಿರ ಹೆಣ್ಣು ಮಕ್ಕಳು ಪಾಲ್ಗೊಂಡಿದ್ದರು. ಅನೇಕ ಮಹಿಳಾ ಕಲಾವಿದರು ಶಂಖ, ನಾದಸ್ವರ ಮತ್ತು ನಾಗದಾ ದಂತಹ ಭಾರತೀಯ ಸಂಗೀತ ವಾದ್ಯಗಳನ್ನು ನುಡಿಸುತ್ತಿದ್ದರು. ಡಿಆರ್‌ಡಿಒ ಬಿಡುಗಡೆ ಮಾಡಿದ ಟ್ಯಾಬ್ಲೋ ಕೂಡ ಎಲ್ಲರ ಗಮನ ಸೆಳೆಯಿತು. ನೀರು, ಭೂಮಿ, ಆಕಾಶ, ಸೈಬರ್ ಮತ್ತು ಬಾಹ್ಯಾಕಾಶ - ಪ್ರತಿಯೊಂದು ಕ್ಷೇತ್ರದಲ್ಲೂ ಮಹಿಳಾ ಶಕ್ತಿಯು ದೇಶವನ್ನು ಹೇಗೆ ರಕ್ಷಿಸುತ್ತಿದೆ ಎಂಬುದನ್ನು ಇದು ತೋರಿಸಿತ್ತು. 21ನೇ ಶತಮಾನದ ಭಾರತವು ಮಹಿಳಾ ನೇತೃತ್ವದ ಅಭಿವೃದ್ಧಿಯ ಮಂತ್ರದೊಂದಿಗೆ ಮುನ್ನಡೆಯುತ್ತಿದೆ.ಗುಜರಾತ್‌ನಲ್ಲಿ ತೌಕ್ತೇ ಚಂಡಮಾರುತ ಸಂತ್ರಸ್ತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದ ಪ್ರಧಾನಿ ಮೋದಿ
May 19th, 04:38 pm
ತೌಕ್ತೇ ಚಂಡಮಾರುತದಿಂದ ಉದ್ಭವಿಸಿರುವ ಪರಿಸ್ಥಿತಿಯನ್ನು ಪರಿಶೀಲಿಸಲು ಪ್ರಧಾನಿ ಶ್ರೀ ನರೇಂದ್ರ ಮೋದಿ ಇಂದು ಗುಜರಾತ್ ಗೆ ಭೇಟಿ ನೀಡಿದರು. ಗುಜರಾತ್ ಮತ್ತು ದಿಯುನಲ್ಲಿ ಉನಾ (ಗಿರ್ - ಸೋಮನಾಥ್), ಜಾಫ್ರಾಬಾದ್ (ಅಮ್ರೇಲಿ), ಮಾಹುವಾ (ಭಾವನಗರ) ದಲ್ಲಿ ಚಂಡಮಾರುತ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆಯನ್ನು ಪ್ರಧಾನಿ ನಡೆಸಿದರು.