
Mann Ki Baat: PM Modi recalls the Emergency, salutes defenders of the Constitution
June 29th, 11:30 am
In Mann Ki Baat, PM Modi spoke about the success of International Day of Yoga and enthusiastic participation of the people in the yoga events all over the world. He shared insights on a range of engaging topics, including the holy Yatras undertaken by pilgrims, imposition of Emergency, success of Women from Self Help Groups and importance of nature protection. The PM highlighted the holy relics of Bhagwan Buddha venerated in Vietnam that were taken from India.
ಆಂಧ್ರ ಪ್ರದೇಶದ ವಿಶಾಖಪಟ್ಟಣದಲ್ಲಿ ನಡೆದ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
June 21st, 07:06 am
ಆಂಧ್ರ ಪ್ರದೇಶ ರಾಜ್ಯಪಾಲರಾದ ಸೈಯದ್ ಅಬ್ದುಲ್ ನಜೀರ್ ಜಿ, ಈ ರಾಜ್ಯದ ಜನಪ್ರಿಯ ಮುಖ್ಯಮಂತ್ರಿ, ನನ್ನ ಆತ್ಮೀಯ ಗೆಳೆಯ ಚಂದ್ರಬಾಬು ನಾಯ್ಡು ಗಾರು, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳೆ, ಕೆ. ರಾಮಮೋಹನ್ ನಾಯ್ಡು ಜಿ, ಪ್ರತಾಪರಾವ್ ಜಾಧವ್ ಜಿ, ಚಂದ್ರಶೇಖರ್ ಜಿ, ಭೂಪತಿ ರಾಜು ಶ್ರೀನಿವಾಸ್ ವರ್ಮಾ ಗಾರು, ರಾಜ್ಯದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಗಾರು, ಇಲ್ಲಿರುವ ಇತರೆ ಗಣ್ಯರೆ ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೆ! ನಿಮ್ಮೆಲ್ಲರಿಗೂ ನಮಸ್ಕಾರ!
ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ನಡೆದ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
June 21st, 06:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ನಡೆದ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು. ಪ್ರಧಾನಮಂತ್ರಿಯವರು ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ನೇತೃತ್ವ ವಹಿಸಿ ಯೋಗ ಕಾರ್ಯಕ್ರಮದಲ್ಲಿ ಭಾಗವಹಿಸಿದರು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ದಿನಾಂಕ 30.03.2025 ರಂದು ಮಾಡಿದ ‘ಮನ್ ಕಿ ಬಾತ್’ – 120ನೇ ಸಂಚಿಕೆಯ ಕನ್ನಡ ಅವತರಣಿಕೆ
March 30th, 11:30 am
ನನ್ನ ಪ್ರಿಯ ದೇಶವಾಸಿಗಳೇ, ನಮಸ್ಕಾರ. ಈ ಶುಭ ದಿನದಂದು, ನಿಮ್ಮೊಂದಿಗೆ 'ಮನದ ಮಾತು' ಹಂಚಿಕೊಳ್ಳುವ ಅವಕಾಶ ನನಗೆ ಲಭಿಸಿದೆ. ಇಂದು ಚೈತ್ರ ಮಾಸದ ಶುಕ್ಲ ಪಕ್ಷದ ಪಾಡ್ಯಮಿ. ಇಂದಿನಿಂದ ಚೈತ್ರ ನವರಾತ್ರಿ ಪ್ರಾರಂಭವಾಗಲಿದೆ. ಇಂದಿನಿಂದ ಭಾರತೀಯ ನವ ವರ್ಷವೂ ಆರಂಭವಾಗುತ್ತದೆ. ಈ ಬಾರಿ ವಿಕ್ರಮ ಸಂವತ್ಸರ ಅಂದರೆ ೨೦೮೨ (ಎರಡು ಸಾವಿರದ ಎಂಬತ್ತೆರಡು) ಶುರುವಾಗಲಿದೆ. ನನ್ನ ಮುಂದೆ ನೀವು ಬರೆದ ಬಹಳಷ್ಟು ಪತ್ರಗಳಿವೆ. ಬಿಹಾರದವರು, ಬಂಗಾಳದವರು, ಕೆಲವರು ತಮಿಳುನಾಡಿನವರು, ಕೆಲವರು ಗುಜರಾತ್‌ನವರು ಪತ್ರ ಬರೆದಿದ್ದಾರೆ. ಬಹಳ ಆಸಕ್ತಿಕರವಾಗಿ ಜನರು ತಮ್ಮ ಮನದ ಮಾತುಗಳನ್ನು ವ್ಯಕ್ತಪಡಿಸಿದ್ದಾರೆ. ಅನೇಕ ಪತ್ರಗಳು ಶುಭ ಹಾರೈಕೆಗಳು ಮತ್ತು ಅಭಿನಂದನಾ ಸಂದೇಶಗಳನ್ನು ಹೊತ್ತು ತಂದಿವೆ. ಆದರೆ ಇಂದು ನಿಮ್ಮೊಂದಿಗೆ ಕೆಲವು ಸಂದೇಶಗಳನ್ನು ಹಂಚಿಕೊಳ್ಳಬಯಸುತ್ತೇನೆ -ಗುಜರಾತ್ ನ ಸೂರತ್ ನಲ್ಲಿ ಸೂರತ್ ಆಹಾರ ಭದ್ರತಾ ಸ್ಯಾಚುರೇಶನ್ ಅಭಿಯಾನದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಭಾಷಣ
March 07th, 05:34 pm
ನೀವೆಲ್ಲರೂ ಹೇಗಿದ್ದೀರಿ? ಕ್ಷೇಮವಾಗಿದ್ದೀರಾ? ದೇಶದ ಮತ್ತು ಗುಜರಾತಿನ ಜನರು ನನಗೆ ಮೂರನೇ ಬಾರಿಗೆ ಪ್ರಧಾನಮಂತ್ರಿಯಾಗಿ ಸೇವೆ ಸಲ್ಲಿಸುವ ಅವಕಾಶವನ್ನು ನೀಡಿರುವುದು ನನ್ನ ಸೌಭಾಗ್ಯ. ಅದಾದ ನಂತರ ಇದು ಸೂರತ್ ಗೆ ನನ್ನ ಮೊದಲ ಭೇಟಿ. ಗುಜರಾತ್ ಪೋಷಿಸಿದ ವ್ಯಕ್ತಿಯನ್ನು ರಾಷ್ಟ್ರವು ಪ್ರೀತಿಯಿಂದ ಸ್ವೀಕರಿಸಿದೆ. ನಾನು ನಿಮಗೆ ಸದಾ ಋಣಿಯಾಗಿರುತ್ತೇನೆ; ನನ್ನ ಜೀವನವನ್ನು ರೂಪಿಸುವಲ್ಲಿ ನೀವು ಮಹತ್ವದ ಪಾತ್ರವನ್ನು ವಹಿಸಿದ್ದೀರಿ. ಇಂದು ನಾನು ಸೂರತ್ ಗೆ ಬಂದಿರುವಾಗ, ಸೂರತ್ ನ ಉತ್ಸಾಹವನ್ನು ನೆನಪಿಸದೆ ಮತ್ತು ನೋಡದೆ ಇರಲು ಹೇಗೆ ಸಾಧ್ಯ? ಕೆಲಸ ಮತ್ತು ದಾನ - ಈ ಎರಡು ವಿಷಯಗಳು ಸೂರತ್ ಅನ್ನು ನಿಜವಾಗಿಯೂ ವಿಶೇಷವಾಗಿಸುತ್ತವೆ. ಪರಸ್ಪರ ಬೆಂಬಲಿಸುವುದು ಮತ್ತು ಎಲ್ಲರ ಪ್ರಗತಿಯನ್ನು ಆಚರಿಸುವುದು ಸೂರತ್ ನ ಪ್ರತಿಯೊಂದು ಮೂಲೆಯಲ್ಲೂ ಗೋಚರಿಸುತ್ತದೆ. ಇಂದಿನ ಕಾರ್ಯಕ್ರಮವು ಸೂರತ್ ನ ಈ ಉತ್ಸಾಹ ಮತ್ತು ಭಾವನೆಯನ್ನು ಉತ್ತೇಜಿಸುವಲ್ಲಿ ಒಂದು ಹೆಜ್ಜೆಯಾಗಿದೆ.ಸೂರತ್ ಆಹಾರ ಭದ್ರತೆ ಸಂತೃಪ್ತ (ಸ್ಯಾಚುರೇಶನ್) ಅಭಿಯಾನ ಕಾರ್ಯಕ್ರಮಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಚಾಲನೆ
March 07th, 05:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸೂರತ್ ನ ಲಿಂಬಾಯತ್ ನಲ್ಲಿ ಸೂರತ್ ಆಹಾರ ಭದ್ರತೆ ಸ್ಯಾಚುರೇಶನ್ (ಸಂತೃಪ್ತ) ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪ್ರಧಾನಮಂತ್ರಿಯವರು ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ 2.3 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ ಪ್ರಯೋಜನಗಳನ್ನು ವಿತರಿಸಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಸೂರತ್ ನಗರದ ವಿಶಿಷ್ಟ ಮನೋಭಾವವನ್ನು ಒತ್ತಿ ಹೇಳಿದರು, ಕೆಲಸ ಮತ್ತು ದಾನದ ಬಲವಾದ ಅಡಿಪಾಯವನ್ನು ಪ್ರಮುಖವಾಗಿ ಪ್ರಸ್ತಾಪಿಸಿದರು. ಸಾಮೂಹಿಕ ಬೆಂಬಲ ಮತ್ತು ಎಲ್ಲರ ಬೆಳವಣಿಗೆಯನ್ನು ಸಂಭ್ರಮಿಸುವ ಮೂಲಕ ನಗರದ ಸಾರವನ್ನು ಹೇಗೆ ಮರೆಯಲು ಸಾಧ್ಯವಾಗುವುದಿಲ್ಲ ಎಂಬುದನ್ನು ಅವರು ವ್ಯಕ್ತಪಡಿಸಿದರು.ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಮಂತ್ರಿ ಉತ್ತರ
February 06th, 04:21 pm
ಸನ್ಮಾನ್ಯ ರಾಷ್ಟ್ರಪತಿ ಅವರು ಭಾರತದ ಸಾಧನೆಗಳು, ಭಾರತದಿಂದ ಇಡೀ ವಿಶ್ವದ ನಿರೀಕ್ಷೆಗಳು ಮತ್ತು 'ವಿಕಸಿತ ಭಾರತ'(ಅಭಿವೃದ್ಧಿ ಹೊಂದಿದ ಭಾರತ) ನಿರ್ಮಿಸಲು ಭಾರತದಲ್ಲಿ ಶ್ರೀಸಾಮಾನ್ಯನ ಆತ್ಮವಿಶ್ವಾಸ ಬೆಳೆಸುವ ಸಂಕಲ್ಪವನ್ನು ವಿವರಿಸಿದ್ದಾರೆ. ಅವರು ದೇಶದ ಭವಿಷ್ಯಕ್ಕೆ ಸ್ಪಷ್ಟ ನಿರ್ದೇಶನವನ್ನು ಸಹ ಒದಗಿಸಿದ್ದಾರೆ. ಸನ್ಮಾನ್ಯ ರಾಷ್ಟ್ರಪತಿ ಅವರ ಭಾಷಣವು ಸ್ಫೂರ್ತಿದಾಯಕ ಮತ್ತು ಪ್ರಭಾವಶಾಲಿಯಾಗಿತ್ತು, ಭವಿಷ್ಯದ ಕೆಲಸಗಳಿಗಾಗಿ ನಮಗೆಲ್ಲರಿಗೂ ಮಾರ್ಗದರ್ಶನವಾಗಿ ಕಾರ್ಯ ನಿರ್ವಹಿಸಿತು. ಸನ್ಮಾನ್ಯ ರಾಷ್ಟ್ರಪತಿಗಳ ಭಾಷಣಕ್ಕಾಗಿ ಅವರಿಗೆ ಧನ್ಯವಾದ ಅರ್ಪಿಸಲು ನಾನು ಇಲ್ಲಿದ್ದೇನೆ!ರಾಷ್ಟ್ರಪತಿಯವರ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ರಾಜ್ಯಸಭೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಉತ್ತರ
February 06th, 04:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಾಜ್ಯಸಭೆಯಲ್ಲಿ ರಾಷ್ಟ್ರಪತಿಯವರ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಉತ್ತರಿಸಿದರು. ಸದನವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ರಾಷ್ಟ್ರಪತಿಯವರ ಭಾಷಣವು ಭಾರತದ ಸಾಧನೆಗಳು, ಭಾರತದಿಂದ ಜಾಗತಿಕ ನಿರೀಕ್ಷೆಗಳು ಮತ್ತು ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸುವಲ್ಲಿ ಶ್ರೀಸಾಮಾನ್ಯನ ನಂಬಿಕೆ ಒಳಗೊಂಡಿದೆ ಎಂದು ಹೇಳಿದರು. ರಾಷ್ಟ್ರಪತಿಯವರ ಭಾಷಣ ಸ್ಪೂರ್ತಿದಾಯಕವಾಗಿದೆ, ಪ್ರಭಾವಶಾಲಿಯಾಗಿದೆ ಮತ್ತು ಭವಿಷ್ಯದ ಕೆಲಸಗಳಿಗೆ ಮಾರ್ಗದರ್ಶನ ನೀಡಿದೆ ಎಂದು ಅವರು ಹೇಳಿದರು. ಅವರು ರಾಷ್ಟ್ರಪತಿಯವರ ಭಾಷಣಕ್ಕೆ ಕೃತಜ್ಞತೆ ಸಲ್ಲಿಸಿದರು.ಕ್ಯಾಥೊಲಿಕ್ ಬಿಷಪ್ಸ್ ಕಾನ್ಫರೆನ್ಸ್ ಆಫ್ ಇಂಡಿಯಾ ಆಯೋಜಿಸಿದ್ದ ಕ್ರಿಸ್ ಮಸ್ ಆಚರಣೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
December 23rd, 09:24 pm
ಕ್ರಿಸ್ ಮಸ್ ಸಂದರ್ಭದಲ್ಲಿ ನಿಮ್ಮೆಲ್ಲರಿಗೂ, ನನ್ನ ಎಲ್ಲ ದೇಶವಾಸಿಗಳಿಗೆ ಮತ್ತು ವಿಶೇಷವಾಗಿ ವಿಶ್ವದಾದ್ಯಂತ ಇರುವ ಕ್ರಿಶ್ಚಿಯನ್ ಸಮುದಾಯಕ್ಕೆ ಹಾರ್ದಿಕ ಶುಭಾಶಯಗಳು. ಮೆರ್ರಿ ಕ್ರಿಸ್ ಮಸ್!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕ್ಯಾಥೊಲಿಕ್ ಬಿಷಫ್ಸ್ ಕಾನ್ಫರೆನ್ಸ್ ಆಫ್ ಇಂಡಿಯಾ ಆಯೋಜಿಸಿದ್ದ ಕ್ರಿಸ್‌ಮಸ್ ಆಚರಣೆಯಲ್ಲಿ ಭಾಗವಹಿಸಿದರು
December 23rd, 09:11 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಸಿ.ಬಿ.ಸಿ.ಐ ಕೇಂದ್ರದ ಆವರಣದಲ್ಲಿ ಕ್ಯಾಥೊಲಿಕ್ ಬಿಷಫ್ಸ್ ಕಾನ್ಫರೆನ್ಸ್ ಆಫ್ ಇಂಡಿಯಾ (ಸಿ.ಬಿ.ಸಿ.ಐ.) ಆಯೋಜಿಸಿದ್ದ ಕ್ರಿಸ್‌ಮಸ್ ಆಚರಣೆಯಲ್ಲಿ ಭಾಗವಹಿಸಿದ್ದರು. ಭಾರತದ ಕ್ಯಾಥೊಲಿಕ್ ಚರ್ಚ್‌ನ ಪ್ರಧಾನ ಕಚೇರಿಯಲ್ಲಿ ಪ್ರಧಾನಿಯೊಬ್ಬರು ಇಂತಹ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದು ಇದೇ ಮೊದಲು. ಕಾರ್ಡಿನಲ್‌ಗಳು, ಬಿಷಪ್‌ಗಳು ಮತ್ತು ಚರ್ಚ್‌ನ ಪ್ರಮುಖ ನಾಯಕರು ಸೇರಿದಂತೆ ಕ್ರಿಶ್ಚಿಯನ್ ಸಮುದಾಯದ ಪ್ರಮುಖ ನಾಯಕರೊಂದಿಗೆ ಪ್ರಧಾನಿ ಸಂವಾದ ನಡೆಸಿದರು.ಸಂವಿಧಾನದ ಅಂಗೀಕಾರದ 75ನೇ ವಾರ್ಷಿಕೋತ್ಸವದ ವಿಶೇಷ ಚರ್ಚೆಯಲ್ಲಿ ಲೋಕಸಭೆಯಲ್ಲಿ ಪ್ರಧಾನಮಂತ್ರಿಯವರ ಭಾಷಣದ ಅನುವಾದ
December 14th, 05:50 pm
ಇದು ನಮಗೆಲ್ಲರಿಗೂ ಅಪಾರವಾದ ಹೆಮ್ಮೆಯ ಕ್ಷಣವಾಗಿದೆ - ನಮ್ಮ ದೇಶವಾಸಿಗಳಿಗೆ ಮಾತ್ರವಲ್ಲದೆ ಪ್ರಪಂಚದಾದ್ಯಂತದ ಪ್ರಜಾಪ್ರಭುತ್ವವನ್ನು ಪ್ರೀತಿಸುವ ನಾಗರಿಕರಿಗೆ, ಪ್ರಜಾಪ್ರಭುತ್ವದ ಹಬ್ಬವನ್ನು ಅತ್ಯಂತ ಹೆಮ್ಮೆಯಿಂದ ಆಚರಿಸುವ ಸಂದರ್ಭವಿದು. ಸಂವಿಧಾನದ ಅಡಿಯಲ್ಲಿ 75 ವರ್ಷಗಳ ಪ್ರಯಾಣವು ಗಮನಾರ್ಹವಾಗಿದೆ ಮತ್ತು ಈ ಪ್ರಯಾಣದ ಹಾದಿಯಲ್ಲಿ ನಮ್ಮ ಸಂವಿಧಾನ-ರಚನಾಕಾರರ ದೈವಿಕ ದೃಷ್ಟಿ ಇದೆ, ಅವರ ಕೊಡುಗೆಗಳು ನಾವು ಮುಂದೆ ಸಾಗುತ್ತಿರುವಾಗ ನಮಗೆ ಮಾರ್ಗದರ್ಶನ ನೀಡುತ್ತಲೇ ಇರುತ್ತವೆ. ಸಂವಿಧಾನದ 75 ವರ್ಷಗಳನ್ನು ಪೂರ್ಣಗೊಳಿಸಿದ ಸಂಭ್ರಮಾಚರಣೆ ನಿಜಕ್ಕೂ ಮಹತ್ವದ ಸಂದರ್ಭವಾಗಿದೆ. ಈ ಸಂಭ್ರಮಾಚರಣೆಯಲ್ಲಿ ಸಂಸತ್ತು ಕೂಡ ತನ್ನ ಭಾವನೆಗಳನ್ನು ವ್ಯಕ್ತಪಡಿಸಲು ಭಾಗವಹಿಸುವುದು ನನಗೆ ಅತೀವ ಸಂತಸ ತಂದಿದೆ. ನಾನು ಎಲ್ಲಾ ಗೌರವಾನ್ವಿತ ಸದಸ್ಯರಿಗೆ ನನ್ನ ಕೃತಜ್ಞತೆಯನ್ನು ಸಲ್ಲಿಸುತ್ತೇನೆ ಮತ್ತು ಈ ಆಚರಣೆಗಳಲ್ಲಿ ಭಾಗವಹಿಸಿದ ಎಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂವಿಧಾನವನ್ನು ಅಂಗೀಕರಿಸಿದ 75ನೇ ವಾರ್ಷಿಕೋತ್ಸವದ ಕುರಿತು ವಿಶೇಷ ಚರ್ಚೆಯ ಸಂದರ್ಭದಲ್ಲಿ ಲೋಕಸಭೆಯನ್ನುದ್ದೇಶಿಸಿ ಭಾಷಣ ಮಾಡಿದರು
December 14th, 05:47 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಲೋಕಸಭೆಯಲ್ಲಿ ಸಂವಿಧಾನವನ್ನು ಅಂಗೀಕರಿಸಿದ 75ನೇ ವಾರ್ಷಿಕೋತ್ಸವದ ವಿಶೇಷ ಚರ್ಚೆಯನ್ನು ಉದ್ದೇಶಿಸಿ ಮಾತನಾಡಿದರು. ಸದನವನ್ನು ಉದ್ದೇಶಿಸಿ ಮಾತನಾಡಿದ ಶ್ರೀ ಮೋದಿ ಅವರು, ನಾವು ಈ ಪ್ರಜಾಪ್ರಭುತ್ವದ ಹಬ್ಬವನ್ನು ಆಚರಿಸುತ್ತಿರುವುದು ಭಾರತದ ಎಲ್ಲಾ ನಾಗರಿಕರಿಗೆ ಮತ್ತು ಪ್ರಜಾಪ್ರಭುತ್ವವನ್ನು ಗೌರವಿಸುವ ಜಗತ್ತಿನಾದ್ಯಂತ ಇರುವ ಎಲ್ಲಾ ಜನರಿಗೆ ಹೆಮ್ಮೆ ಮತ್ತು ಗೌರವದ ವಿಷಯವಾಗಿದೆ ಎಂದು ಹೇಳಿದರು. ನಮ್ಮ ಸಂವಿಧಾನದ 75 ವರ್ಷಗಳ ಈ ಗಮನಾರ್ಹ ಮತ್ತು ಮಹತ್ವದ ಪ್ರಯಾಣದಲ್ಲಿ ನಮ್ಮ ಸಂವಿಧಾನದ ರಚನೆಕಾರರ ದೂರದೃಷ್ಟಿ, ಚಿಂತನೆ ಮತ್ತು ಪ್ರಯತ್ನಗಳಿಗೆ ಧನ್ಯವಾದ ಹೇಳಿದ ಅವರು, 75 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದ ನಂತರ ಪ್ರಜಾಪ್ರಭುತ್ವದ ಹಬ್ಬವನ್ನು ಆಚರಿಸುವ ಸಮಯ ಬಂದಿದೆ ಎಂದು ಹೇಳಿದರು. ಸಂಸತ್ತಿನ ಸದಸ್ಯರು ಕೂಡ ಈ ಆಚರಣೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದ ಶ್ರೀ ಮೋದಿಯವರು, ಅದಕ್ಕಾಗಿ ಅವರಿಗೆ ಧನ್ಯವಾದ ಸಲ್ಲಿಸಿದರು ಮತ್ತು ಅಭಿನಂದಿಸಿದರು.ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ 2024 ರಲ್ಲಿ ಪ್ರಧಾನ ಮಂತ್ರಿ ಅವರ ಭಾಷಣದ ಕನ್ನಡ ಅನುವಾದ
December 11th, 05:00 pm
ನಾನು ಯಾವಾಗಲೂ ಕೆಂಪು ಕೋಟೆಯಿಂದ ಒಂದು ವಿಷಯವನ್ನು ಉಲ್ಲೇಖಿಸಿದ್ದೇನೆ ಎಂದು ನೀವೆಲ್ಲರೂ ನೆನಪಿನಲ್ಲಿಡಬೇಕು. 'ಸಬ್ ಕಾ ಪ್ರಯಾಸ್ ' (ಎಲ್ಲರ ಪ್ರಯತ್ನ) ಮುಖ್ಯ ಎಂದು ನಾನು ಹೇಳಿದ್ದೇನೆ - ಇಂದಿನ ಭಾರತವು ಎಲ್ಲರ ಸಾಮೂಹಿಕ ಪ್ರಯತ್ನಗಳಿಂದ ಮಾತ್ರ ತ್ವರಿತ ಗತಿಯಲ್ಲಿ ಮುಂದುವರಿಯಬಹುದು. ಇಂದು ಇದೇ ತತ್ವಕ್ಕೆ ಒಂದು ಉದಾಹರಣೆಯಾಗಿದೆ. ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ ನ ಈ ಗ್ರ್ಯಾಂಡ್ ಫಿನಾಲೆಗಾಗಿ ನಾನು ಕುತೂಹಲದಿಂದ ಕಾಯುತ್ತಿದ್ದೇನೆ. ನಿಮ್ಮಂತಹ ಯುವ ನಾವೀನ್ಯಕಾರರ ನಡುವೆ ಇರಲು ನನಗೆ ಅವಕಾಶ ಸಿಕ್ಕಾಗಲೆಲ್ಲಾ, ಕಲಿಯಲು, ಅರ್ಥಮಾಡಿಕೊಳ್ಳಲು ಮತ್ತು ಹೊಸ ಒಳನೋಟಗಳನ್ನು ಪಡೆಯಲು ನನಗೆ ಅವಕಾಶ ಸಿಗುತ್ತದೆ. ನಿಮ್ಮೆಲ್ಲರಿಂದ ನನಗೆ ಹೆಚ್ಚಿನ ನಿರೀಕ್ಷೆಗಳಿವೆ. ನಿಮ್ಮಂತಹ ಯುವ ನಾವೀನ್ಯಕಾರರು 21ನೇ ಶತಮಾನದ ಭಾರತವನ್ನು ನೋಡುವ ವಿಶಿಷ್ಟ ದೃಷ್ಟಿಕೋನವನ್ನು ಹೊಂದಿದ್ದಾರೆ ಮತ್ತು ಅದಕ್ಕಾಗಿಯೇ ನಿಮ್ಮ ಪರಿಹಾರಗಳು ಸಹ ಅನನ್ಯವಾಗಿವೆ. ನೀವು ಹೊಸ ಸವಾಲುಗಳನ್ನು ಎದುರಿಸಿದಾಗ, ನೀವು ಹೊಸ ಮತ್ತು ಸೃಜನಶೀಲ ಪರಿಹಾರಗಳನ್ನು ಕಂಡುಕೊಳ್ಳುವ ಮೂಲಕ ಪ್ರತಿಕ್ರಿಯಿಸುತ್ತೀರಿ. ನಾನು ಈ ಹಿಂದೆ ಹಲವಾರು ಹ್ಯಾಕಥಾನ್ ಗಳ ಭಾಗವಾಗಿದ್ದೇನೆ ಮತ್ತು ನೀವು ನನ್ನನ್ನು ಎಂದಿಗೂ ನಿರಾಸೆಗೊಳಿಸಿಲ್ಲ. ನೀವು ಯಾವಾಗಲೂ ನಿಮ್ಮ ಮೇಲಿನ ನನ್ನ ನಂಬಿಕೆಯನ್ನು ಬಲಪಡಿಸಿದ್ದೀರಿ. ಈ ಹಿಂದೆ ಭಾಗವಹಿಸಿದ ತಂಡಗಳು ಪರಿಹಾರಗಳನ್ನು ಒದಗಿಸಿವೆ, ಅವುಗಳನ್ನು ಈಗ ವಿವಿಧ ಸಚಿವಾಲಯಗಳಲ್ಲಿ ಪರಿಣಾಮಕಾರಿಯಾಗಿ ಬಳಸಲಾಗುತ್ತಿದೆ. ಈಗ, ಈ ಹ್ಯಾಕಥಾನ್ ನಲ್ಲಿ, ದೇಶದ ವಿವಿಧ ಭಾಗಗಳ ತಂಡಗಳು ಏನು ಕೆಲಸ ಮಾಡುತ್ತಿವೆ ಎಂದು ತಿಳಿಯಲು ನನಗೆ ಕುತೂಹಲವಿದೆ. ನಿಮ್ಮ ಆವಿಷ್ಕಾರಗಳ ಬಗ್ಗೆ ತಿಳಿದುಕೊಳ್ಳಲು ನಾನು ತುಂಬಾ ಉತ್ಸುಕನಾಗಿದ್ದೇನೆ. ಆದ್ದರಿಂದ, ಪ್ರಾರಂಭಿಸೋಣ! ಯಾರು ಮೊದಲು ನಮ್ಮೊಂದಿಗೆ ಮಾತನಾಡಲು ಬಯಸುತ್ತಾರೆ?ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್-2024ರ ಪ್ರತಿನಿಧಿಗಳೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸಂವಾದ
December 11th, 04:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ 2024ರ ಗ್ರ್ಯಾಂಡ್ ಫಿನಾಲೆಯ ಯುವ ನವೋದ್ಯಮಿಗಳೊಂದಿಗೆ ವಿಡಿಯೊ ಕಾನ್ಫರೆನ್ಸಿಂಗ್ ಮೂಲಕ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಕೆಂಪುಕೋಟೆಯಿಂದ ಮಾಡಿದ ಭಾಷಣದಲ್ಲಿ ‘ಸಬ್ಕಾ ಪ್ರಯಾಸ್’ ಪುನರುಚ್ಚಾರವನ್ನು ನೆನಪಿಸಿದರು. ಇಂದಿನ ಭಾರತವು ‘ಸಬ್ಕಾ ಪ್ರಾರ್ಥನೆ’ ಅಥವಾ ಪ್ರತಿಯೊಬ್ಬರ ಪ್ರಯತ್ನದಿಂದ ತ್ವರಿತ ಗತಿಯಲ್ಲಿ ಪ್ರಗತಿ ಹೊಂದಬಹುದು ಎಂಬುದಕ್ಕೆ ಇಂದಿನ ಸಂದರ್ಭವು ಒಂದು ಉದಾಹರಣೆಯಾಗಿದೆ. ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್‌ನ ಗ್ರ್ಯಾಂಡ್ ಫಿನಾಲೆಗಾಗಿ ನಾನು ಕುತೂಹಲದಿಂದ ಕಾಯುತ್ತಿದ್ದೇನೆ, ಯುವ ನವೋದ್ಯಮಿಗಳ ನಡುವೆ ಇರುವಾಗ ಹೊಸದನ್ನು ಕಲಿಯಲು ಮತ್ತು ಅರ್ಥ ಮಾಡಿಕೊಳ್ಳಲು ನನಗೆ ಅವಕಾಶ ಸಿಗುತ್ತದೆ. ಯುವ ನವೋದ್ಯಮಿಗಳ ಮೇಲೆ ತಮ್ಮ ನಿರೀಕ್ಷೆಗಳು ಹೆಚ್ಚಾಗಿವೆ ಎಂದ ಪ್ರಧಾನ ಮಂತ್ರಿ, ಅವರು 21ನೇ ಶತಮಾನದ ಭಾರತವನ್ನು ವಿಭಿನ್ನವಾಗಿ ನೋಡುವ ದೃಷ್ಟಿಕೋನ ಹೊಂದಿದ್ದಾರೆ. ಆದ್ದರಿಂದ, ನಿಮ್ಮ ಪರಿಹಾರಗಳು ಸಹ ವಿಭಿನ್ನವಾಗಿವೆ ಮತ್ತು ಹೊಸ ಸವಾಲು ಬಂದಾಗ, ನೀವು ಹೊಸ ಮತ್ತು ಅನನ್ಯ ಪರಿಹಾರಗಳೊಂದಿಗೆ ಬರುತ್ತೀರಿ. ಈ ಹಿಂದೆ ಹ್ಯಾಕಥಾನ್‌ಗಳ ಭಾಗವಾಗಿದ್ದುದನ್ನು ಸ್ಮರಿಸಿದ ಪ್ರಧಾನ ಮಂತ್ರಿ, ಅದರ ಫಲಿತಾಂಶಗಳಿಂದ ಎಂದಿಗೂ ನಿರಾಶೆಗೊಂಡಿಲ್ಲ. ನೀವು ನನ್ನ ನಂಬಿಕೆಯನ್ನು ಮಾತ್ರ ಬಲಪಡಿಸಿದ್ದೀರಿ, ಹಿಂದೆ ಒದಗಿಸಿದ ಪರಿಹಾರಗಳನ್ನು ವಿವಿಧ ಸಚಿವಾಲಯಗಳಲ್ಲಿ ಬಳಸಲಾಗುತ್ತಿದೆ. ಹ್ಯಾಕಥಾನ್ ಪ್ರತಿನಿಧಿಗಳ ಬಗ್ಗೆ ಇನ್ನಷ್ಟು ತಿಳಿದುಕೊಳ್ಳಲು ಉತ್ಸುಕತೆ ಹೊಂದಿರುವುದಾಗಿ ತಿಳಿಸಿದ ಅವರು, ಸಂವಾದ ಪ್ರಾರಂಭಿಸಿದರು.ಒಂಬತ್ತು ವರ್ಷ ತುಂಬಿದ ಸುಗಮ್ಯ ಭಾರತ ಅಭಿಯಾನವನ್ನು ಆಚರಿಸಿದ ಪ್ರಧಾನಮಂತ್ರಿ
December 03rd, 04:22 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಸುಗಮ್ಯ ಭಾರತ ಅಭಿಯಾನದ 9ನೇ ವರ್ಷವನ್ನು ಆಚರಿಸಿದರು. ದಿವ್ಯಾಂಗ ಸಹೋದರಿಯರು ಮತ್ತು ಸಹೋದರರಿಗೆ ಪ್ರವೇಶಾವಕಾಶ, ಸಮಾನತೆ ಮತ್ತು ಅವಕಾಶವನ್ನು ಮತ್ತಷ್ಟು ಹೆಚ್ಚಿಸುವ ಸರ್ಕಾರದ ಬದ್ಧತೆಯನ್ನು ಅವರು ಪುನರುಚ್ಚರಿಸಿದರು. ದಿವ್ಯಾಂಗ ಸಹೋದರಿಯರು ಮತ್ತು ಸಹೋದರರ ಧೈರ್ಯ ಮತ್ತು ಸಾಧನೆಗಳನ್ನು ಶ್ಲಾಘಿಸಿದ ಶ್ರೀ ಮೋದಿಯವರು, ಇದು ನಮ್ಮೆಲ್ಲರಿಗೂ ಹೆಮ್ಮೆ ತಂದಿದೆ ಎಂದರು.“ಸುಗಮ್ಯ ಭಾರತ ಅಭಿಯಾನ ಒಂದು ಗೇಮ್ ಚೇಂಜರ್; ಕರ್ನಾಟಕ ಕಾಂಗ್ರೆಸ್ ಘನತೆ ಮತ್ತು ಹಕ್ಕುಗಳನ್ನು ಹಿಂದಕ್ಕೆ ಪಡೆಯುತ್ತಿದೆ, ”ವಿಕಲಚೇತನರ ಬಜೆಟ್ ಕಡಿತದ ಕುರಿತು ಬಿಜೆಪಿ ಸಚಿವರು
December 03rd, 03:47 pm
ಸುಗಮ್ಯ ಭಾರತ ಅಭಿಯಾನದ ವಾರ್ಷಿಕೋತ್ಸವದ ಸಂದರ್ಭದಲ್ಲಿ, ಡಾ. ವೀರೇಂದ್ರ ಕುಮಾರ್; ಭಾರತದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣದ ಕೇಂದ್ರ ಸಚಿವರು, ಎಲ್ಲರನ್ನೂ ಒಳಗೊಳ್ಳುವ ಮತ್ತು ಪ್ರವೇಶಿಸಬಹುದಾದ ಸಮಾಜವನ್ನು ನಿರ್ಮಿಸಲು ಕೇಂದ್ರ ಸರ್ಕಾರದ ಅಚಲವಾದ ಸಮರ್ಪಣೆಯನ್ನು ಗುರುತಿಸಿದರು. ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿಯ ನಾಯಕತ್ವದಲ್ಲಿ ಸಾಧಿಸಿದ ಪ್ರಗತಿಯನ್ನು ಪ್ರತಿಬಿಂಬಿಸುತ್ತಾ,ಡಾ. ಕುಮಾರ್ ಅವರು ಉಪಕ್ರಮದ ಪರಿವರ್ತಕ ಪರಿಣಾಮವನ್ನು ಒತ್ತಿಹೇಳಿದರು, ನಿಜವಾದ ಒಳಗೊಳ್ಳುವಿಕೆಯ ಕಡೆಗೆ ಭಾರತದ ಪ್ರಯಾಣದಲ್ಲಿ ಮತ್ತೊಂದು ಮಹತ್ವದ ಮೈಲಿಗಲ್ಲನ್ನು ಗುರುತಿಸಿದರು.The mantra of the Bharatiya Nyaya Sanhita is - Citizen First: PM Modi
December 03rd, 12:15 pm
The Prime Minister, Shri Narendra Modi dedicated to the nation the successful implementation of three transformative new criminal laws—Bharatiya Nyaya Sanhita, Bharatiya Nagarik Suraksha Sanhita and Bharatiya Sakshya Adhiniyam today at Chandigarh.ಯಶಸ್ವಿಯಾಗಿ ಅನುಷ್ಠಾನಗೊಂಡ 3 ಹೊಸ ಕ್ರಿಮಿನಲ್ ಕಾನೂನುಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
December 03rd, 11:47 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಚಂಡೀಗಢದಲ್ಲಿಂದು 3 ಪರಿವರ್ತನೀಯ ಹೊಸ ಕ್ರಿಮಿನಲ್ ಕಾನೂನುಗಳಾದ ಭಾರತೀಯ ನ್ಯಾಯ ಸಂಹಿತೆ, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಮತ್ತು ಭಾರತೀಯ ಸಾಕ್ಷಿ ಅಧಿನಿಯಮಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಈ 3 ಕಾನೂನುಗಳು ಯಶಸ್ವಿಯಾಗಿ ಅನುಷ್ಠಾನಗೊಂಡಿವೆ. ನಂತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಶ್ರೀ ಮೋದಿ, ಸತ್ಯ ಮತ್ತು ನ್ಯಾಯ ಸ್ಥಾಪಿಸುವ ಶಕ್ತಿಯ ರೂಪವಾದ ಮಾತೆ ಚಂಡಿ ದೇವಿಗೆ ಚಂಡೀಗಢದ ಗುರುತು ಸಂಬಂಧಿಸಿದೆ, ಅದೇ ತತ್ವಶಾಸ್ತ್ರವು ಭಾರತೀಯ ನ್ಯಾಯ ಸಂಹಿತೆ ಮತ್ತು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ ಸಂಪೂರ್ಣ ಸ್ವರೂಪದ ಆಧಾರವಾಗಿದೆ. ಭಾರತ ಸಂವಿಧಾನದ ಸ್ಫೂರ್ತಿಯಿಂದ ಪ್ರೇರಿತವಾದ ಭಾರತೀಯ ನ್ಯಾಯ ಸಂಹಿತೆ ಜಾರಿಗೆ ಬರುತ್ತಿರುವುದು ಒಂದು ಐತಿಹಾಸಿಕ ಕ್ಷಣವಾಗಿದ್ದು, ರಾಷ್ಟ್ರವು ವಿಕಸಿತ ಭಾರತ್ ಕಟ್ಟುವ ಸಂಕಲ್ಪದೊಂದಿಗೆ ಮುನ್ನಡೆಯುವ ಪ್ರಮುಖ ಘಟ್ಟದಲ್ಲಿದೆ. ಭಾರತೀಯ ಸಂವಿಧಾನ ಅಳವಡಿಸಿಕೊಂ 75 ವರ್ಷಗಳಲ್ಲಿ ನಮ್ಮ ಸಂವಿಧಾನವು ದೇಶದ ನಾಗರಿಕರಿಗೆ ಕಲ್ಪಿಸಿದ ಆದರ್ಶಗಳನ್ನು ಈಡೇರಿಸುವ ನಿಟ್ಟಿನಲ್ಲಿ ಇದು ಸಂಕೀರ್ಣ ಪ್ರಯತ್ನವಾಗಿದೆ. ಅದರ ಲೈವ್ ಡೆಮೊ ಮೂಲಕ ಕಾನೂನುಗಳನ್ನು ಹೇಗೆ ಜಾರಿಗೊಳಿಸಬಹುದು ಎಂಬುದರ ಕುರಿತು ತನಗೆ ಒಂದು ನೋಟ ಸಿಕ್ಕಿದೆ. ಹಾಗಾಗಿ, ಕಾನೂನುಗಳ ಲೈವ್ ಡೆಮೊಗೆ ಭೇಟಿ ನೀಡುವಂತೆ ಪ್ರಧಾನಿ ಜನರನ್ನು ಒತ್ತಾಯಿಸಿದರು. 3 ಹೊಸ ಕ್ರಿಮಿನಲ್ ಕಾನೂನುಗಳ ಯಶಸ್ವಿ ಅನುಷ್ಠಾನದ ಸಂದರ್ಭದಲ್ಲಿ ಅವರು ಎಲ್ಲಾ ನಾಗರಿಕರಿಗೆ ತಮ್ಮ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದರು. ಚಂಡೀಗಢದ ಆಡಳಿತದ ಎಲ್ಲಾ ಪಾಲುದಾರರನ್ನು ಅವರು ಅಭಿನಂದಿಸಿದರು.Be it COVID, disasters, or development, India has stood by you as a reliable partner: PM in Guyana
November 21st, 02:15 am
PM Modi and Grenada PM Dickon Mitchell co-chaired the 2nd India-CARICOM Summit in Georgetown. PM Modi expressed solidarity with CARICOM nations for Hurricane Beryl's impact and reaffirmed India's commitment as a reliable partner, focusing on development cooperation aligned with CARICOM's priorities.ಎರಡನೇ ಭಾರತ-ಕಾರಿಕಾಮ್ ಶೃಂಗಸಭೆ
November 21st, 02:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಪ್ರಸ್ತುತ ಕಾರಿಕಾಮ್ ಒಕ್ಕೂಟದ ಅಧ್ಯಕ್ಷರಾದ ಗ್ರೆನಡಾದ ಪ್ರಧಾನಮಂತ್ರಿ ಘನತೆವೆತ್ತ ಶ್ರೀ ಡಿಕಾನ್ ಮಿಚೆಲ್ ಅವರು 20 ನವೆಂಬರ್ 2024 ರಂದು ಜಾರ್ಜ್‌ಟೌನ್ ನಲ್ಲಿ ನಡೆದ 2ನೇ ಭಾರತ-ಕಾರಿಕಾಮ್ ಶೃಂಗಸಭೆಯ ಅಧ್ಯಕ್ಷತೆ ವಹಿಸಿದ್ದರು. ಶೃಂಗಸಭೆಯನ್ನು ಸೌಜನ್ಯದಿಂದ ಆಯೋಜಿಸಿದ್ದಕ್ಕಾಗಿ ಗಯಾನಾ ಅಧ್ಯಕ್ಷರಾದ ಘನತೆವೆತ್ತ ಶ್ರೀ ಇರ್ಫಾನ್ ಅಲಿ ಅವರನ್ನು ಪ್ರಧಾನಮಂತ್ರಿಯವರು ಅಭಿನಂದಿಸಿದರು.