ದೀಪಾವಳಿ ಶುಭಾಶಯಗಳನ್ನು ತಿಳಿಸಲು ರಾಷ್ಟ್ರಪತಿಗಳನ್ನು ಭೇಟಿ ಮಾಡಿದ ಪ್ರಧಾನಿ
October 31st, 10:46 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ ದೀಪಾವಳಿಯ ಶುಭಾಶಯಗಳನ್ನು ತಿಳಿಸಿದ್ದಾರೆ.ದೀಪಾವಳಿ ಶುಭಾಶಯಗಳನ್ನು ತಿಳಿಸಲು ಉಪರಾಷ್ಟ್ರಪತಿಯನ್ನು ಭೇಟಿ ಮಾಡಿದ ಪ್ರಧಾನಮಂತ್ರಿ
October 31st, 10:46 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉಪರಾಷ್ಟ್ರಪತಿ ಶ್ರೀ ಜಗದೀಪ್ ಧನಕರ್ ಅವರನ್ನು ಭೇಟಿ ಮಾಡಿ ದೀಪಾವಳಿ ಶುಭಾಶಯಗಳನ್ನು ತಿಳಿಸಿದ್ದಾರೆ.ಗುಜರಾತಿನ ಕಚ್‌ನಲ್ಲಿ ದೀಪಾವಳಿಯ ಸಂದರ್ಭದಲ್ಲಿ ಭದ್ರತಾ ಸಿಬ್ಬಂದಿಗೆ ಪ್ರಧಾನಮಂತ್ರಿಯವರ ಭಾಷಣದ ಪಠ್ಯ
October 31st, 07:05 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತ್‌ನ ಕಚ್‌ನ ಕ್ರೀಕ್ ಏರಿಯಾದಲ್ಲಿರುವ ಲಕ್ಕಿ ನಾಲಾದಲ್ಲಿ ಬಿಎಸ್‌ಎಫ್, ಸೇನೆ, ನೌಕಾಪಡೆ ಮತ್ತು ವಾಯುಪಡೆಯ ವೀರ ಸಿಬ್ಬಂದಿಗಳೊಂದಿಗೆ ದೀಪಾವಳಿಯನ್ನು ಆಚರಿಸಿದರು."ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್ ನ ಕಚ್ ನಲ್ಲಿ ಭಾರತೀಯ ಸಶಸ್ತ್ರ ಪಡೆಗಳೊಂದಿಗೆ ದೀಪಾವಳಿಯನ್ನು ಆಚರಿಸಿದರು "
October 31st, 07:00 pm
ಗುಜರಾತ್ ನ ಕಚ್ ನ ಕ್ರೀಕ್ ಏರಿಯಾದಲ್ಲಿರುವ ಲಕ್ಕಿ ನಾಲಾದಲ್ಲಿ ಬಿ.ಎಸ್.ಎಫ್, ಸೇನೆ, ನೌಕಾಪಡೆ ಮತ್ತು ವಾಯುಪಡೆಯ ವೀರ ಸಿಬ್ಬಂದಿಗಳೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೀಪಾವಳಿಯನ್ನು ಆಚರಿಸಿದರು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೀಪಾವಳಿಯಂದು ದೇಶಕ್ಕೆ ಶುಭಾಶಯ ಕೋರಿದ್ದಾರೆ
October 31st, 07:32 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೀಪಾವಳಿ ಹಬ್ಬದ ಶುಭ ಸಂದರ್ಭದಲ್ಲಿ ದೇಶದ ಜನತೆಗೆ ಶುಭಾಶಯ ತಿಳಿಸಿದ್ದಾರೆ.ಗುಜರಾತ್ ನ ಕೆವಾಡಿಯಾದಲ್ಲಿ ನಡೆದ ರಾಷ್ಟ್ರೀಯ ಏಕತಾ ದಿವಸ್ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
October 31st, 07:31 am
ಸರ್ದಾರ್ ಸಾಹೇಬರ ಸ್ಫೂರ್ತಿದಾಯಕ ಮಾತುಗಳು... ಏಕತಾ ಪ್ರತಿಮೆಯ ಬಳಿ ಈ ಭವ್ಯ ಕಾರ್ಯಕ್ರಮ... ಏಕ್ತಾ ನಗರದ ಬೆರಗುಗೊಳಿಸುವ ನೋಟ, ಮತ್ತು ಇಲ್ಲಿನ ಭವ್ಯವಾದ ಪ್ರದರ್ಶನಗಳು ... ಮಿನಿ ಇಂಡಿಯಾದ ಒಂದು ನೋಟ... ಎಲ್ಲವೂ ತುಂಬಾ ನಂಬಲಾಗದು, ತುಂಬಾ ಸ್ಫೂರ್ತಿದಾಯಕವಾಗಿದೆ. ಆಗಸ್ಟ್ 15 ಮತ್ತು ಜನವರಿ 26 ರಂತೆ... ಅಕ್ಟೋಬರ್ 31 ರಂದು ನಡೆಯುವ ಈ ಕಾರ್ಯಕ್ರಮವು ಇಡೀ ರಾಷ್ಟ್ರವನ್ನು ಹೊಸ ಶಕ್ತಿಯಿಂದ ತುಂಬುತ್ತದೆ. ರಾಷ್ಟ್ರೀಯ ಏಕತಾ ದಿವಸ್ (ರಾಷ್ಟ್ರೀಯ ಏಕತಾ ದಿನ) ದಂದು ನಾನು ದೇಶದ ಎಲ್ಲ ನಾಗರಿಕರಿಗೆ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸುತ್ತೇನೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್ ನ ಕೆವಾಡಿಯಾದಲ್ಲಿರುವ ಏಕತಾ ಪ್ರತಿಮೆಯಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರಿಗೆ ಗೌರವ ನಮನ ಸಲ್ಲಿಸಿದರು, ರಾಷ್ಟ್ರೀಯ ಏಕತಾ ದಿವಸ್ ಆಚರಣೆಯಲ್ಲಿ ಪಾಲ್ಗೊಂಡರು
October 31st, 07:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತ್ ನ ಕೆವಾಡಿಯಾದಲ್ಲಿರುವ ಏಕತಾ ಪ್ರತಿಮೆಯಲ್ಲಿ ನಡೆದ ರಾಷ್ಟ್ರೀಯ ಏಕತಾ ದಿವಸ್ ಆಚರಣೆಯಲ್ಲಿ ಪಾಲ್ಗೊಂಡರು. ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮ ಜಯಂತಿಯಂದು ಪ್ರಧಾನಮಂತ್ರಿ ಅವರು ಅವರಿಗೆ ಪುಷ್ಪ ನಮನ ಸಲ್ಲಿಸಿದರು. ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮ ದಿನಾಚರಣೆಯ ನೆನಪಿಗಾಗಿ ಪ್ರತಿವರ್ಷ ಅಕ್ಟೋಬರ್ 31 ರಂದು ಆಚರಿಸಲಾಗುವ ರಾಷ್ಟ್ರೀಯ ಏಕತಾ ದಿವಸ್ ಸಂದರ್ಭದಲ್ಲಿ ಶ್ರೀ ನರೇಂದ್ರ ಮೋದಿ ಅವರು ಏಕತಾ ದಿವಸ್ ಪ್ರತಿಜ್ಞೆಯನ್ನು ಬೋಧಿಸಿದರು ಮತ್ತು ಏಕತಾ ದಿವಸ್ ಮೆರವಣಿಗೆಗೆ ಸಾಕ್ಷಿಯಾದರು.ಥಾಯ್ಲೆಂಡ್ ಪ್ರಧಾನಮಂತ್ರಿ ಪೀಟೊಂಗ್ಟಾರ್ನ್ ಶಿನವತ್ರಾ ಅವರ ಅಭಿವ್ಯಕ್ತಿಗೆ ಪ್ರಧಾನಮಂತ್ರಿ ಸಂತಸ
October 30th, 09:39 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಥಾಯ್ಲೆಂಡ್ ಪ್ರಧಾನಿ ಪೀಟೊಂಗ್ಟಾರ್ನ್ ಶಿನಾವತ್ರಾ ಅವರ ಅಭಿವ್ಯಕ್ತಿಗೆ ಸಂತಸ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ಪೇಟೊಂಗ್ಟಾರ್ನ್ ಶಿನವತ್ರಾ ಅವರು ಇಂದು ಬ್ಯಾಂಕಾಕ್ನ ಲಿಟಲ್ ಇಂಡಿಯಾದ ಪಹರತ್ನಲ್ಲಿ ಅತ್ಯದ್ಭುತ ಥಾಯ್ಲೆಂಡ್ ದೀಪಾವಳಿ ಉತ್ಸವ 2024 ಅನ್ನು ಉದ್ಘಾಟಿಸಿದರು. ಈ ಅದ್ಭುತ ಥಾಯ್ಲೆಂಡ್ ದೀಪಾವಳಿ ಉತ್ಸವಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮ್ಮ ಶುಭಾಶಯಗಳನ್ನು ಕೋರಿದ್ದಾರೆ. ಇದು ಭಾರತ ಮತ್ತು ಥಾಯ್ಲೆಂಡ್ ನಡುವಿನ ಸಾಂಸ್ಕೃತಿಕ ಬಾಂಧವ್ಯವನ್ನು ಇನ್ನಷ್ಟು ಆಳವಾಗಿಸುತ್ತದೆ ಎಂದು ಪ್ರಧಾನಿ ಅಭಿಪ್ರಾಯಪಟ್ಟಿದ್ದಾರೆ.ಅಖಿಲ ಭಾರತ ಆಯುರ್ವೇದ ಸಂಸ್ಥೆ(ಎಐಐಎ)ಯಲ್ಲಿ ಬಹುಯೋಜನೆಗಳ ಶಂಕುಸ್ಥಾಪನೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
October 29th, 01:28 pm
ಈ ಅರ್ಥಪೂರ್ಣ ಸಮಾರಂಭದಲ್ಲಿ ಉಪಸ್ಥಿತರಿರುವ ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಶ್ರೀ ಜಗತ್ ಪ್ರಕಾಶ್ ನಡ್ಡಾ ಜಿ, ಮನ್ಸುಖ್ ಮಾಂಡವಿಯಾ ಜಿ, ಪ್ರತಾಪ್ ರಾವ್ ಜಾಧವ್ ಜಿ, ಶ್ರೀಮತಿ. ಅನುಪ್ರಿಯಾ ಪಟೇಲ್ ಜಿ, ಮತ್ತು ಶೋಭಾ ಕರಂದ್ಲಾಜೆ ಜಿ, ಈ ಭಾಗದ ನನ್ನ ಸಂಸದ, ಶ್ರೀ ರಾಮ್‌ವೀರ್ ಸಿಂಗ್ ಬಿಧುರಿ ಜಿ, ವಿವಿಧ ರಾಜ್ಯಗಳಿಂದ ವಾಸ್ತವಿಕ(ವರ್ಚುವಲ್) ಸಂಪರ್ಕ ಹೊಂದಿರುವ ಗೌರವಾನ್ವಿತ ರಾಜ್ಯಪಾಲರು, ಮಾನ್ಯ ಮುಖ್ಯಮಂತ್ರಿಗಳು, ಸಂಸದರು, ಶಾಸಕರು, ಇತರೆ ಎಲ್ಲ ಗೌರವಾನ್ವಿತ ಪ್ರತಿನಿಧಿಗಳು, ವೈದ್ಯರು, ಆಯುರ್ವೇದ ವೈದ್ಯರು ಮತ್ತು ದೇಶದ ವಿವಿಧ ಭಾಗಗಳಿಂದ ಆರೋಗ್ಯ ಸಂಸ್ಥೆಗಳಿಗೆ ಸಂಬಂಧಿಸಿದ ಆಯುಷ್ ಮತ್ತು ಆರೋಗ್ಯ ವೃತ್ತಿಪರರು, ಆರೋಗ್ಯ ವ್ಯವಸ್ಥೆಯಲ್ಲಿ ತೊಡಗಿರುವ ಸಹೋದರ ಸಹೋದರಿಯರೆ, ಅಖಿಲ ಭಾರತ ಆಯುರ್ವೇದ ಸಂಸ್ಥೆಯ ಎಲ್ಲಾ ವೈದ್ಯರು ಮತ್ತು ಸಿಬ್ಬಂದಿ, ಮಹಿಳೆಯರು ಮತ್ತು ಮಹನೀಯರೆ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 12,850 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಹಲವಾರು ಯೋಜನೆಗಳಿಗೆ ಚಾಲನೆ, ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು
October 29th, 01:00 pm
ಧನ್ವಂತರಿ ಜಯಂತಿ ಮತ್ತು 9ನೇ ಆಯುರ್ವೇದ ದಿನದ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ (ಎಐಐಎ) ಸುಮಾರು 12,850 ಕೋಟಿ ರೂಪಾಯಿ ಮೌಲ್ಯದ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಬಹು ಯೋಜನೆಗಳಿಗೆ ಚಾಲನೆ, ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು.ಗುಜರಾತ್‌ನ ಅಮ್ರೇಲಿಯಲ್ಲಿ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
October 28th, 04:00 pm
ವೇದಿಕೆಯಲ್ಲಿರುವ ಗುಜರಾತಿನ ಗೌರವಾನ್ವಿತ ರಾಜ್ಯಪಾಲರಾದ ಆಚಾರ್ಯ ದೇವವ್ರತ್ ಜಿ, ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರಭಾಯಿ ಪಟೇಲ್ ಜಿ, ಕೇಂದ್ರ ಸಂಪುಟದ ನನ್ನ ಸಹೋದ್ಯೋಗಿ ಸಿ.ಆರ್. ಪಾಟೀಲ್ ಜಿ, ಗುಜರಾತ್‌ನ ನನ್ನ ಸಹೋದರ ಸಹೋದರಿಯರೆ ಮತ್ತು ವಿಶೇಷವಾಗಿ ಅಮ್ರೇಲಿಯ ನನ್ನ ಸಹೋದರ ಸಹೋದರಿಯರೆ,ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್‌ನ ಅಮ್ರೇಲಿಯಲ್ಲಿ 4,900 ಕೋಟಿ ರೂ. ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು
October 28th, 03:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್‌ನ ಅಮ್ರೇಲಿಯಲ್ಲಿಂದು 4,900 ಕೋಟಿ ರೂಪಾಯಿ ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು. ಇಂದಿನ ಅಭಿವೃದ್ಧಿ ಯೋಜನೆಗಳು ರೈಲು, ರಸ್ತೆ, ಜಲ ಅಭಿವೃದ್ಧಿ ಮತ್ತು ಪ್ರವಾಸೋದ್ಯಮ ಕ್ಷೇತ್ರಗಳನ್ನು ಒಳಗೊಂಡಿವೆ. ರಾಜ್ಯದ ಅಮ್ರೇಲಿ, ಜಾಮ್‌ನಗರ, ಮೊರ್ಬಿ, ದೈವಭೂಮಿ ದ್ವಾರಕಾ, ಜುನಾಗಢ್, ಪೋರಬಂದರ್, ಕಚ್ ಮತ್ತು ಬೊಟಾಡ್ ಜಿಲ್ಲೆಗಳ ನಾಗರಿಕರಿಗೆ ಪ್ರಯೋಜನ ನೀಡುತ್ತವೆ.ಉತ್ತರ ಪ್ರದೇಶದ ವಾರಣಾಸಿಯಲ್ಲಿ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದ ಪ್ರಧಾನ ಮಂತ್ರಿಗಳ ಭಾಷಣದ ಇಂಗ್ಲಿಷ್ ಅವತರಿಣಿಕೆ
October 20th, 04:54 pm
ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಈ ಕಾರ್ಯಕ್ರಮಕ್ಕೆ ತಂತ್ರಜ್ಞಾನದ ನೆರವಿನಿಂದ ವರ್ಚುವಲ್ ಆಗಿ ಪಾಲ್ಗೊಂಡಿರುವ ಗೌರವಾನ್ವಿತ ರಾಜ್ಯಪಾಲರುಗಳೇ ಮತ್ತು ನಾನಾ ರಾಜ್ಯಗಳ ಮುಖ್ಯಮಂತ್ರಿಗಳೇ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಶ್ರೀ ನಾಯ್ಡು ಅವರೇ, ವರ್ಚ್ಯುವಲ್ ಆಗಿ ಪಾಲ್ಗೊಂಡಿರುವ ಇತರೆ ಸಂಪುಟ ಸಹೋದ್ಯೋಗಿಗಳೇ, ಉತ್ತರ ಪ್ರದೇಶದ ಉಪ ಮುಖ್ಯಮಂತ್ರಿಗಳಾದ ಕೇಶವ್ ಪ್ರಸಾದ್ ಮೌರ್ಯ ಮತ್ತು ಬ್ರಜೇಶ್ ಪಾಠಕ್, ಉತ್ತರ ಪ್ರದೇಶ ಸರ್ಕಾರದ ನಾನಾ ಸಚಿವರೇ, ಸಂಸದರೇ, ಶಾಸಕರೇ ಮತ್ತು ಬನಾರಸ್‌ನ ನನ್ನ ಪ್ರೀತಿಯ ಸಹೋದರ ಸಹೋದರಿಯರೇ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ವಾರಣಾಸಿಯಲ್ಲಿ ಅನೇಕ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು
October 20th, 04:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ವಾರಾಣಸಿಯಲ್ಲಿ ಅನೇಕ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು. ಇಂದಿನ ಯೋಜನೆಗಳಲ್ಲಿ 6,100 ಕೋಟಿ ರೂ. ಮೊತ್ತದ ಬಹುವಿಧದ ವಿಮಾನ ನಿಲ್ದಾಣ ಯೋಜನೆಗಳು ಮತ್ತು ವಾರಾಣಸಿಯ ಬಹು ಅಭಿವೃದ್ಧಿ ಉಪಕ್ರಮಗಳು ಸೇರಿವೆ.ರಾಮ ಪ್ರತಿಯೊಬ್ಬರ ಹೃದಯದಲ್ಲಿದ್ದಾನೆ: ಮನ್ ಕಿ ಬಾತ್ ವೇಳೆ ಪ್ರಧಾನಿ ಮೋದಿ
January 28th, 11:30 am
ನನ್ನ ಪ್ರಿಯ ದೇಶವಾಸಿಗಳೇ, ಈ ಬಾರಿ ಜನವರಿ 26 ರ ಪರೇಡ್ ತುಂಬಾ ಅದ್ಭುತವಾಗಿತ್ತು, ಆದರೆ ಕವಾಯತಿನಲ್ಲಿ ಮಹಿಳಾ ಶಕ್ತಿಯನ್ನು ನೋಡುವುದು ಹೆಚ್ಚು ಚರ್ಚೆಯ ವಿಷಯವಾಗಿತ್ತು, ಕರ್ತವ್ಯ ಪಥದಲ್ಲಿ ಕೇಂದ್ರ ಭದ್ರತಾ ಪಡೆ ಮತ್ತು ದೆಹಲಿ ಪೊಲೀಸ್ ಮಹಿಳಾ ತುಕಡಿಗಳು ಕವಾಯತು ಆರಂಭಿಸಿದಾಗ, ಎಲ್ಲರೂ ಹೆಮ್ಮೆಯಿಂದ ಬೀಗಿದರು. ಮಹಿಳಾ ವಾದ್ಯಮೇಳದ ಕವಾಯತು ನೋಡಿ, ಅವರ ಅಮೋಘ ಸಮನ್ವಯತೆ ಕಂಡು ದೇಶ-ವಿದೇಶದ ಜನರು ಪುಳಕಿತರಾದರು. ಈ ಬಾರಿ ಪರೇಡ್‌ನಲ್ಲಿ ಸಾಗಿದ 20 ಸ್ಕ್ವಾಡ್‌ಗಳಲ್ಲಿ 11 ಸ್ಕ್ವಾಡ್‌ಗಳು ಮಹಿಳೆಯರದ್ದೇ ಆಗಿದ್ದವು. ಸಾಗಿಬಂದ ಸ್ಥಬ್ಧ ಚಿತ್ರಗಳಲ್ಲಿಯೂ, ಎಲ್ಲಾ ವೇಷಧಾರಿಗಳು ಮಹಿಳೆಯರೇ ಆಗಿದ್ದರು. ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸುಮಾರು ಒಂದೂವರೆ ಸಾವಿರ ಹೆಣ್ಣು ಮಕ್ಕಳು ಪಾಲ್ಗೊಂಡಿದ್ದರು. ಅನೇಕ ಮಹಿಳಾ ಕಲಾವಿದರು ಶಂಖ, ನಾದಸ್ವರ ಮತ್ತು ನಾಗದಾ ದಂತಹ ಭಾರತೀಯ ಸಂಗೀತ ವಾದ್ಯಗಳನ್ನು ನುಡಿಸುತ್ತಿದ್ದರು. ಡಿಆರ್‌ಡಿಒ ಬಿಡುಗಡೆ ಮಾಡಿದ ಟ್ಯಾಬ್ಲೋ ಕೂಡ ಎಲ್ಲರ ಗಮನ ಸೆಳೆಯಿತು. ನೀರು, ಭೂಮಿ, ಆಕಾಶ, ಸೈಬರ್ ಮತ್ತು ಬಾಹ್ಯಾಕಾಶ - ಪ್ರತಿಯೊಂದು ಕ್ಷೇತ್ರದಲ್ಲೂ ಮಹಿಳಾ ಶಕ್ತಿಯು ದೇಶವನ್ನು ಹೇಗೆ ರಕ್ಷಿಸುತ್ತಿದೆ ಎಂಬುದನ್ನು ಇದು ತೋರಿಸಿತ್ತು. 21ನೇ ಶತಮಾನದ ಭಾರತವು ಮಹಿಳಾ ನೇತೃತ್ವದ ಅಭಿವೃದ್ಧಿಯ ಮಂತ್ರದೊಂದಿಗೆ ಮುನ್ನಡೆಯುತ್ತಿದೆ.ಅಯೋಧ್ಯೆಯಲ್ಲಿ ಶ್ರೀ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಯಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅನುವಾದ
January 22nd, 05:12 pm
ವೇದಿಕೆಯಲ್ಲಿ ಉಪಸ್ಥಿತರಿರುವ ಗೌರವಾನ್ವಿತ ಸಂತರು ಮತ್ತು ಸಾಧುಗಳಿಗೆ, ಇಲ್ಲಿ ಉಪಸ್ಥಿತರಿರುವ ಮತ್ತು ವಿಶ್ವದ ಮೂಲೆ ಮೂಲೆಗಳಿಂದ ಸಂಪರ್ಕ ಹೊಂದಿರುವ ಎಲ್ಲಾ ರಾಮ ಭಕ್ತರಿಗೆ ನನ್ನ ಶುಭಾಶಯಗಳು. ಎಲ್ಲರಿಗೂ ರಾಮ್ ರಾಮ್!ಅಯೋಧ್ಯೆಯಲ್ಲಿ ಹೊಸದಾಗಿ ನಿರ್ಮಿಸಲಾದ ಶ್ರೀ ರಾಮ ಜನ್ಮಭೂಮಿ ಮಂದಿರದಲ್ಲಿ ಶ್ರೀ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಸಮಾರಂಭದಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ
January 22nd, 01:34 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಹೊಸದಾಗಿ ನಿರ್ಮಿಸಲಾದ ಶ್ರೀ ರಾಮ ಜನ್ಮಭೂಮಿ ಮಂದಿರದಲ್ಲಿ ಶ್ರೀ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಸಮಾರಂಭದಲ್ಲಿ ಭಾಗವಹಿಸಿದರು. ಶ್ರೀ ರಾಮ ಜನ್ಮಭೂಮಿ ಮಂದಿರ ನಿರ್ಮಾಣಕ್ಕೆ ಕೊಡುಗೆ ನೀಡಿದ ಶ್ರಮಜೀವಿಗಳೊಂದಿಗೆ ಶ್ರೀ ಮೋದಿ ಸಂವಾದ ನಡೆಸಿದರು.ಪಿಎಂ-ಜನ್ ಮನ್ ಯೋಜನೆಯಡಿ ಪಿಎಂಎವೈ(ಜಿ)ಯ 1 ಲಕ್ಷ ಫಲಾನುಭವಿಗಳಿಗೆ ಮೊದಲ ಕಂತಿನ ಬಿಡುಗಡೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
January 15th, 12:15 pm
ಎಲ್ಲರಿಗೂ ಶುಭಾಶಯಗಳು! ಪ್ರಸ್ತುತ ಉತ್ತರಾಯಣ, ಮಕರ ಸಂಕ್ರಾಂತಿ, ಪೊಂಗಲ್ ಮತ್ತು ಬಿಹು ಹಬ್ಬದ ಆಚರಣೆಯ ವಾತಾವರಣವು ಇಡೀ ದೇಶವನ್ನು ವ್ಯಾಪಿಸಿದೆ. ಹಲವಾರು ಹಬ್ಬಗಳ ಸಂಭ್ರಮ ನಮ್ಮನ್ನು ಆವರಿಸಿದೆ. ಇಂದಿನ ಈ ಕಾರ್ಯಕ್ರಮದ ಉತ್ಸಾಹಕ್ಕೆ ಹೆಚ್ಚಿನ ಭವ್ಯತೆ ಮತ್ತು ಲವಲವಿಕೆಯನ್ನು ಸೇರಿಸಿದೆ. ಈ ಸಂದರ್ಭದಲ್ಲಿ ನಿಮ್ಮೊಂದಿಗೆ ಸಂವಹನ ನಡೆಸುವುದು ನನಗೆ ಸಂಭ್ರಮಾಚರಣೆಯಂತೆ ಭಾಸವಾಗುತ್ತಿದೆ. ಪ್ರಸ್ತುತ, ಅಯೋಧ್ಯೆಯಲ್ಲಿ ಹಬ್ಬಗಳು ತೆರೆದುಕೊಳ್ಳುತ್ತಿವೆ, ಅದೇ ಸಮಯದಲ್ಲಿ, ನನ್ನ ಕುಟುಂಬದ ಭಾಗವೆಂದು ಪರಿಗಣಿಸಲ್ಪಟ್ಟ ಒಂದು ಲಕ್ಷ ಅತ್ಯಂತ ಹಿಂದುಳಿದ ಬುಡಕಟ್ಟು ಸಹೋದರರು ಮತ್ತು ಸಹೋದರಿಯರು ತಮ್ಮ ಮನೆಗಳಲ್ಲಿ ಸಂತೋಷದಿಂದ ಹಬ್ಬ ಆಚರಿಸುತ್ತಿದ್ದಾರೆ. ಇದು ನನಗೆ ಅಪಾರ ಸಂತೋಷ ತರುತ್ತಿದೆ. ಇಂದು ಅವರ ಪಕ್ಕಾ ಮನೆಗಳ ನಿರ್ಮಾಣಕ್ಕಾಗಿ ಅವರ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆಯಾಗಿದೆ. ನಾನು ಈ ಎಲ್ಲಾ ಕುಟುಂಬಗಳಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ, ಅವರಿಗೆ ಸಂತೋಷದ ಮಕರ ಸಂಕ್ರಾಂತಿಯ ಶುಭಾಶಯಗಳನ್ನು ಕೋರುತ್ತೇನೆ! ಈ ಉದಾತ್ತ ಪ್ರಯತ್ನದಲ್ಲಿ ಪ್ರಮುಖ ಪಾತ್ರ ವಹಿಸಲು ನನಗೆ ಸಿಕ್ಕಿರುವ ಅವಕಾಶವು ನನ್ನ ಜೀವನದಲ್ಲಿ ಬಹಳ ಸಂತೋಷ ತಂದಿದೆ.ʻಪಿಎಂ-ಜನಮನʼ ಯೋಜನೆಯಡಿ 1 ಲಕ್ಷ ʻಪಿಎಂಎವೈ(ಜಿ)ʼ ಫಲಾನುಭವಿಗಳಿಗೆ ಮೊದಲ ಕಂತನ್ನು ಬಿಡುಗಡೆ ಮಾಡಿದ ಪ್ರಧಾನಿ
January 15th, 12:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ʻಪ್ರಧಾನಮಂತ್ರಿ ಜನಜಾತಿ ಆದಿವಾಸಿ ನ್ಯಾಯ ಮಹಾ ಅಭಿಯಾನ’ದ (ಪಿಎಂ-ಜನಮನ) ಅಡಿಯಲ್ಲಿ ʻಪ್ರಧಾನ ಮಂತ್ರಿ ಗ್ರಾಮೀಣ ಆವಾಸ್ ಯೋಜನೆʼಯ(ಪಿಎಂಎವೈ-ಜಿ)ʼ 1 ಲಕ್ಷ ಫಲಾನುಭವಿಗಳಿಗೆ ಮೊದಲ ಕಂತನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ʻಪಿಎಂ-ಜನಮನʼ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು.Today every corner of India is brimming with self-confidence: PM Modi during Mann Ki Baat
December 31st, 11:30 am
In the 108th ‘Mann Ki Baat’ episode, PM Modi highlighted India's achievements, including the Nari Shakti Vandan Act and economic growth. Messages on fitness from Sadhguru, Harmanpreet Kaur, Viswanathan Anand, Akshay Kumar and Rishabh Malhotra were featured. The PM emphasized mental health, showcased health startups, and discussed about Bhashini, the AI for real-time translation. He also paid tribute to Savitribai Phule and Rani Velu Nachiyar.