'ಮನ್ ಕಿ ಬಾತ್' ಕೇಳುಗರು ಈ ಕಾರ್ಯಕ್ರಮದ ನಿಜವಾದ ನಿರೂಪಕರು: ಪ್ರಧಾನಿ ಮೋದಿ
September 29th, 11:30 am
ನನ್ನ ಪ್ರೀತಿಯ ದೇಶವಾಸಿಗಳೆ ನಮಸ್ಕಾರ. ಮತ್ತೊಮ್ಮೆ ನಾವೆಲ್ಲರೂ 'ಮನದ ಮಾತಿನ' ಮೂಲಕ ಒಗ್ಗೂಡುವ ಅವಕಾಶ ಲಭಿಸಿದೆ. ಇಂದಿನ ಈ ಕಂತು ನನ್ನನ್ನು ಬಹಳ ಭಾವುಕನನ್ನಾಗಿಸಲಿದೆ, ಅನೇಕ ಹಳೆಯ ನೆನಪುಗಳು ನನ್ನನ್ನು ಮುತ್ತಿವೆ - ಕಾರಣ ಏನೆಂದರೆ 'ಮನದ ಮಾತಿನ' ನಮ್ಮ ಈ ಪಯಣಕ್ಕೆ 10 ವರ್ಷಗಳು ತುಂಬುತ್ತಿದೆ. 10 ವರ್ಷಗಳ ಹಿಂದೆ ಅಕ್ಟೋಬರ್ 3 ರಂದು ವಿಜಯದಶಮಿಯ ದಿನದಂದು 'ಮನದ ಮಾತು’ ಪ್ರಾರಂಭವಾಗಿತ್ತು ಮತ್ತು ಈ ವರ್ಷ ಅಕ್ಟೋಬರ್ 3 ರಂದು 'ಮನದ ಮಾತಿಗೆ ' 10 ವರ್ಷತುಂಬುವ ಸಂದರ್ಭ ನವರಾತ್ರಿಯ ಮೊದಲ ದಿನವಾಗಿದೆ. 'ಮನದ ಮಾತಿನ’ ಈ ಸುದೀರ್ಘ ಪಯಣದಲ್ಲಿ ನಾನು ಎಂದೂ ಮರೆಯಲಾಗದ ಇಂತಹ ಹಲವಾರು ಮೈಲಿಗಲ್ಲುಗಳಿವೆ, ನಮ್ಮ ಈ ಪಯಣದಲ್ಲಿ ನಿರಂತರ ಸಹಯೋಗವನ್ನು ನೀಡಿದಂತಹ ' ಮನದ ಮಾತಿನ' ಕೋಟ್ಯಂತರ ಶ್ರೋತೃ ಬಾಂಧವರಿದ್ದಾರೆ. ದೇಶದ ಮೂಲೆ ಮೂಲೆಗಳಿಂದ ಅವರು ಮಾಹಿತಿಯನ್ನು ಒದಗಿಸಿದರು. ಮನದ ಮಾತಿನ ಶ್ರೋತೃಗಳೇ ಈ ಕಾರ್ಯಕ್ರಮದ ನಿಜವಾದ ರೂವಾರಿಗಳು. ಸಾಮಾನ್ಯವಾಗಿ ಎಲ್ಲಿಯವರೆಗೆ ರೋಚಕ ವಿಷಯಗಳನ್ನು ಮಾತನಾಡುವುದಿಲ್ಲವೋ, ನಕಾರಾತ್ಮಕ ವಿಷಯಗಳನ್ನು ಮಾತನಾಡುವುದಿಲ್ಲವೋ ಅಲ್ಲಿವರೆಗೆ ಅದು ಹೆಚ್ಚಿನ ಗಮನ ಸೆಳೆಯುವುದಿಲ್ಲ ಎನ್ನಲಾಗುತ್ತದೆ. ಆದರೆ ಮನದ ಮಾತು ದೇಶದ ಜನರು ಸಕಾರಾತ್ಮಕ ಮಾಹಿತಿಗಾಗಿ , ಎಷ್ಟು ಉತ್ಸುಕರಾಗಿದ್ದಾರೆ ಎಂಬುದನ್ನು ಸಾಬೀತುಪಡಿಸಿದೆ. ಸಕಾರಾತ್ಮಕ ಮಾತು, ಪ್ರೇರಣಾತ್ಮಕ ಉದಾಹರಣೆಗಳು, ಸ್ಫೂರ್ತಿದಾಯಕ ಕಥೆಗಳು ಜನರಿಗೆ ಬಹಳ ಇಷ್ಟವಾಗುತ್ತವೆ. ಕೇವಲ ಮಳೆಹನಿಗಳನ್ನು ಮಾತ್ರ ಕುಡಿಯುವಂತಹ ಚಾತಕ ಪಕ್ಷಿಯಂತೆ ಜನರು ದೇಶದ ಸೌಲಭ್ಯಗಳ ಬಗ್ಗೆ, ಜನರ ಸಾಮೂಹಿಕ ಸಾಧನೆಗಳ ಬಗ್ಗೆ ಮನದ ಮಾತಿನ ಮೂಲಕ ಎಷ್ಟು ಹೆಮ್ಮೆಯಿಂದ ಕೇಳುತ್ತಾರೆ. ಮನದ ಮಾತಿನ 10 ವರ್ಷಗಳ ಪಯಣ ಎಷ್ಟು ಅದ್ಭುತವಾದ ಹಾರವನ್ನು ಸಿದ್ಧಗೊಳಿಸಿದೆ ಎಂದರೆ ಪ್ರತಿ ಸಂಚಿಕೆಯೊಂದಿಗೆ ಹೊಸ ಯಶೋಗಾಥೆಗಳು, ಹೊಸ ಕೀರ್ತಿವಂತರು ಮತ್ತು ಹೊಸ ವ್ಯಕ್ತಿತ್ವಗಳನ್ನು ಸೇರಿಸುತ್ತಾ ಸಾಗಿದೆ. ನಮ್ಮ ಸಮಾಜದಲ್ಲಿ ಸಾಮಾಜಿಕ ಹಿತದೃಷ್ಟಿಯ ಭಾವನೆಯಿಂದ ಯಾವುದೇ ಕೆಲಸ ಮಾಡಿದರೂ ಅವರಿಗೆ 'ಮನದ ಮಾತಿನ' ಮೂಲಕ ಗೌರವ ಲಭಿಸುತ್ತದೆ. 'ಮನದ ಮಾತಿ'ಗೆ ಬಂದ ಪತ್ರಗಳನ್ನು ನಾನು ಓದಿದಾಗ ನನ್ನ ಮನವೂ ಹೆಮ್ಮೆಯಿಂದ ಬೀಗುತ್ತದೆ. ನಮ್ಮ ದೇಶದಲ್ಲಿ ಅದೆಷ್ಟೋ ಪ್ರತಿಭಾವಂತರಿದ್ದಾರೆ, ಅವರು ತಮ್ಮ ಇಡೀ ಜೀವನವನ್ನು ಜನರ ನಿಸ್ವಾರ್ಥ ಸೇವೆಗಾಗಿ ಮುಡಿಪಾಗಿಟ್ಟಿದ್ದಾರೆ. ಅವರ ಬಗ್ಗೆ ತಿಳಿಯುವುದು ನನ್ನಲ್ಲಿ ಹೊಸ ಶಕ್ತಿಯನ್ನು ತುಂಬುತ್ತದೆ. 'ಮನದ ಮಾತಿನ' ಈ ಸಂಪೂರ್ಣ ಪ್ರಕ್ರಿಯೆಯು ನನಗೆ ದೇವಾಲಯಕ್ಕೆ ತೆರಳಿ ದೇವರ ದರ್ಶನ ಪಡೆಯುವಂತಿದೆ. ಮನದ ಮಾತಿನ ಪ್ರತಿ ವಿಷಯ, ಪ್ರತಿ ಘಟನೆ, ಪ್ರತಿ ಪತ್ರವನ್ನು ನೆನಪಿಸಿಕೊಂಡಾಗ, ನನಗೆ ಭಗವಂತನ ರೂಪದಲ್ಲಿರುವ ಜನತಾ ಜನಾರ್ದನನ ದರ್ಶನ ಪಡೆದಂತೆ ಭಾಸವಾಗುತ್ತದೆ.ತಮಿಳುನಾಡಿನ ಚೆನ್ನೈನಲ್ಲಿ ನಡೆದ ಖೇಲೋ ಇಂಡಿಯಾ ಯೂತ್ ಗೇಮ್ಸ್ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
January 19th, 06:33 pm
ತಮಿಳುನಾಡಿನ ರಾಜ್ಯಪಾಲರಾದ ಶ್ರೀ ಆರ್.ಎನ್. ರವಿ ಜೀ, ಮುಖ್ಯಮಂತ್ರಿ ಶ್ರೀ ಎಂ.ಕೆ. ಸ್ಟಾಲಿನ್ ಜೀ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಅನುರಾಗ್ ಠಾಕೂರ್, ಎಲ್. ಮುರುಗನ್ ಮತ್ತು ನಿಶಿತ್ ಪ್ರಾಮಾಣಿಕ್, ತಮಿಳುನಾಡು ಸರ್ಕಾರದ ಸಚಿವ ಉದಯನಿಧಿ ಸ್ಟಾಲಿನ್ ಮತ್ತು ಭಾರತದ ಮೂಲೆ ಮೂಲೆಗಳಿಂದ ಇಲ್ಲಿಗೆ ಬಂದಿರುವ ನನ್ನ ಯುವ ಸ್ನೇಹಿತರೇ.ತಮಿಳುನಾಡಿನ ಚೆನ್ನೈನಲ್ಲಿ ʻಖೇಲೋ ಇಂಡಿಯಾ ಯೂತ್ ಗೇಮ್ಸ್-2023ʼರ ಉದ್ಘಾಟನಾ ಸಮಾರಂಭಕ್ಕೆ ಚಾಲನೆ ನೀಡಿದ ಪ್ರಧಾನಮಂತ್ರಿಗಳು
January 19th, 06:06 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಮಿಳುನಾಡಿನ ಚೆನ್ನೈನಲ್ಲಿ ʻಖೇಲೋ ಇಂಡಿಯಾ ಯೂತ್ ಗೇಮ್ಸ್-2023ʼರ ಉದ್ಘಾಟನಾ ಸಮಾರಂಭಕ್ಕೆ ಚಾಲನೆ ನೀಡಿದರು. ಪ್ರಸಾರ ಕ್ಷೇತ್ರಕ್ಕೆ ಸಂಬಂಧಿಸಿದ ಸುಮಾರು 250 ಕೋಟಿ ರೂಪಾಯಿ ಮೌಲ್ಯದ ಯೋಜನೆಗಳಿಗೆ ಶ್ರೀ ಮೋದಿ ಅವರು ಚಾಲನೆ ನೀಡಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಸಾಂಸ್ಕೃತಿಕ ಕಾರ್ಯಕ್ರಮಕ್ಕೂ ಅವರು ಸಾಕ್ಷಿಯಾದರು. ʻಖೇಲೋ ಇಂಡಿಯಾ ಯೂತ್ ಗೇಮ್ಸ್ʼ ಉದ್ಘಾಟನೆಯ ಸಂಕೇತವಾಗಿ ಇಬ್ಬರು ಕ್ರೀಡಾಪಟುಗಳು ನೀಡಿದ ಕ್ರೀಡಾ ಜ್ಯೋತಿಯನ್ನು ಅಗ್ಗಿಷ್ಟಿಕೆಯ ಮೇಲೆ ಇರಿಸುವ ಮೂಲಕ ಕ್ರೀಡಾಕೂಟಕ್ಕೆ ಪ್ರಧಾನಿ ಅಧಿಕೃತ ಚಾಲನೆ ನೀಡಿದರು.‘ಮನದ ಮಾತು’ ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ದಿನಾಂಕ 30.04.2023 ರಂದು ಮಾಡಿದ ‘ಮನ್ ಕಿ ಬಾತ್’ – 100 ನೇ ಸಂಚಿಕೆಯ ಕನ್ನಡ ಅವತರಣಿಕೆ
April 30th, 11:31 am
ನನ್ನ ಪ್ರಿಯ ದೇಶವಾಸಿಗಳೇ, ನಮಸ್ಕಾರ. ಇಂದು 'ಮನದ ಮಾತಿನ' ನೂರನೇ ಸಂಚಿಕೆ. ನಿಮ್ಮೆಲ್ಲರಿಂದ ನನಗೆ ಸಾವಿರಾರು ಪತ್ರಗಳು, ಲಕ್ಷಗಟ್ಟಲೆ ಸಂದೇಶಗಳು ಬಂದಿವೆ ಮತ್ತು ನಾನು ಸಾಧ್ಯವಾದಷ್ಟು ಪತ್ರಗಳನ್ನು ಓದಲು, ಅವುಗಳನ್ನು ನೋಡಲು ಮತ್ತು ಸಂದೇಶಗಳನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಿದ್ದೇನೆ. ನಿಮ್ಮ ಪತ್ರಗಳನ್ನು ಓದುವಾಗ ಹಲವು ಬಾರಿ ನಾನು ಭಾವುಕನಾದೆ, ಭಾವೋದ್ವೇಗಕ್ಕೆ ಒಳಗಾದೆ, ಭಾವೋದ್ವೇಗದ ಹೊಳೆಯಲ್ಲಿ ತೇಲಿ ಹೋದೆ ಜೊತೆಗೆ ನನ್ನನ್ನೂ ನಿಯಂತ್ರಿಸಿಕೊಂಡೆ. 'ಮನದ ಮಾತಿನ' 100 ನೇ ಸಂಚಿಕೆಗಾಗಿ ನೀವು ನನ್ನನ್ನು ಅಭಿನಂದಿಸಿದ್ದೀರಿ, ಆದರೆ ನಾನು ಮನಃ ಪೂರ್ವಕವಾಗಿ ಹೇಳುತ್ತಿದ್ದೇನೆ, ವಾಸ್ತವವಾಗಿ, ನೀವೆಲ್ಲರೂ 'ಮನದ ಮಾತಿನ' ಶ್ರೋತೃಗಳು, ನಮ್ಮ ದೇಶವಾಸಿಗಳು, ಅಭಿನಂದನೆಗೆ ಅರ್ಹರಾಗಿದ್ದೀರಿ. 'ಮನದ ಮಾತು' ಕೋಟ್ಯಂತರ ಭಾರತೀಯರ 'ಮನದ ಮಾತಾಗಿದೆ', ಅದು ಅವರ ಭಾವನೆಗಳ ಅಭಿವ್ಯಕ್ತಿಯಾಗಿದೆ.ಸಾರ್ವಜನಿಕ ಸೇವಾ ಪ್ರಸಾರಕ್ಕೆ ಪ್ರಮುಖ ಉತ್ತೇಜನ: ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು ಕೇಂದ್ರ ವಲಯದ ‘ಪ್ರಸಾರ ಮೂಲಸೌಕರ್ಯ ಮತ್ತು ಜಾಲ ಅಭಿವೃದ್ದಿʼ (ಬಿ ಐ ಎನ್ ಡಿ) ಯೋಜನೆಯನ್ನು 2025-26 ರವರೆಗೆ 2,539.61 ಕೋಟಿ ರೂ. ವೆಚ್ಚದಲ್ಲಿ ಅನುಮೋದಿಸಿದೆ.
January 04th, 04:22 pm
ಪ್ರಸಾರ ಭಾರತಿಯ ಆಕಾಶವಾಣಿ (ಎಐಆರ್) ಮತ್ತು ದೂರದರ್ಶನ (ಡಿಡಿ) ಮೂಲಸೌಕರ್ಯ ಅಭಿವೃದ್ಧಿಗಾಗಿ 2,539.61 ಕೋಟಿ ರೂ. ವೆಚ್ಚದಲ್ಲಿ ಕೇಂದ್ರ ವಲಯದ ಯೋಜನೆ “ಪ್ರಸಾರ ಮೂಲಸೌಕರ್ಯ ಮತ್ತು ಜಾಲ ಅಭಿವೃದ್ಧಿ” (ಬಿ ಐ ಎನ್ ಡಿ) ಕುರಿತು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಸಲ್ಲಿಸಿದ್ದ ಪ್ರಸ್ತಾವನೆಯನ್ನು ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು ಅನುಮೋದಿಸಿದೆ. ಸಚಿವಾಲಯದ “ಪ್ರಸಾರ ಮೂಲಸೌಕರ್ಯ ಮತ್ತು ಜಾಲ ಅಭಿವೃದ್ಧಿ”ಯೋಜನೆಯು ಪ್ರಸಾರ ಭಾರತಿಗೆ ಅದರ ಪ್ರಸಾರ ಮೂಲಸೌಕರ್ಯ, ವಿಷಯ (ಕಂಟೆಂಟ್) ಅಭಿವೃದ್ಧಿ ಮತ್ತು ಸಂಸ್ಥೆಗೆ ಸಂಬಂಧಿಸಿದ ಸಿವಿಲ್ ಕಾಮಗಾರಿಗಳ ವಿಸ್ತರಣೆ ಮತ್ತು ಉನ್ನತೀಕರಣಕ್ಕೆ ಸಂಬಂಧಿಸಿದ ವೆಚ್ಚಗಳಿಗೆ ಹಣಕಾಸಿನ ನೆರವು ನೀಡಲಿದೆ.ಸೆಪ್ಟೆಂಬರ್ 29-30ರಂದು ಗುಜರಾತ್ ಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
September 27th, 12:34 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 29 ಮತ್ತು 30 ರಂದು ಗುಜರಾತ್ ಗೆ ಭೇಟಿ ನೀಡಲಿದ್ದಾರೆ. ಸೆಪ್ಟೆಂಬರ್ 29 ರಂದು ಬೆಳಗ್ಗೆ 11 ಗಂಟೆಗೆ ಪ್ರಧಾನಮಂತ್ರಿ ಅವರು ಸೂರತ್ ನಲ್ಲಿ 3400 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ವಿವಿಧ ಯೋಜನೆಗಳ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ನೆರವೇರಿಸಲಿದ್ದಾರೆ. ತದನಂತರ, ಪ್ರಧಾನ ಮಂತ್ರಿ ಅವರು ಭಾವನಗರಕ್ಕೆ ಪ್ರಯಾಣಿಸುವರು. ಅಲ್ಲಿ ಮಧ್ಯಾಹ್ನ 2 ಗಂಟೆಗೆ ಶಂಕುಸ್ಥಾಪನೆ ನೆರವೇರಿಸಿ, 5200 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅನೇಕ ಅಭಿವೃದ್ಧಿ ಉಪಕ್ರಮಗಳನ್ನು ಉದ್ಘಾಟಿಸಲಿದ್ದಾರೆ. ಸಂಜೆ 7 ಗಂಟೆಗೆ ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ 36ನೇ ರಾಷ್ಟ್ರೀಯ ಕ್ರೀಡಾಕೂಟವನ್ನು ಪ್ರಧಾನಮಂತ್ರಿ ಅವರು ಉದ್ಘಾಟಿಸಲಿದ್ದಾರೆ. ರಾತ್ರಿ 9 ಗಂಟೆಗೆ ಅಹ್ಮದಾಬಾದ್ ನ ಜಿಎಂಡಿಸಿ ಮೈದಾನದಲ್ಲಿ ನಡೆಯಲಿರುವ ನವರಾತ್ರಿ ಉತ್ಸವದಲ್ಲಿಯೂ ಪ್ರಧಾನಮಂತ್ರಿ ಅವರು ಪಾಲ್ಗೊಳ್ಳುವರು.ನಮ್ಮ ಯುವ ಸಮೂಹದ ವೇಗದ ಶಕ್ತಿಯನ್ನು ಕಾಯ್ದುಕೊಳ್ಳೋಣ; ಕ್ರೀಡಾಂಗಣದಲ್ಲಿ ಅವರು ಮಿಂಚುವಂತೆ ಪ್ರೇರೇಪಿಸೋಣ: ಪ್ರಧಾನಮಂತ್ರಿ
December 05th, 10:46 am
ನಮ್ಮ ಯುವ ಜನಾಂಗದ ವೇಗದ ಶಕ್ತಿಯನ್ನು ಕಾಯ್ದುಕೊಳ್ಳೋಣ ಮತ್ತು ಅವರು ಕ್ರೀಡಾಂಗಣದಲ್ಲಿ ಮಿಂಚುವಂತೆ ಪ್ರೇರೇಪಿಸೋಣ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ.PM congratulates people for getting their own State Doordarshan channels on DD Free Dish
March 09th, 07:01 pm
The Prime Minister, Shri Narendra Modi has congratulated people for getting their State Doordarshan channels on DD Free Dish for the first time.ನಾಳೆ ದೇಶಾದ್ಯಂತದ ರೈತರೊಂದಿಗೆ ನೇರವಾಗಿ ಸಂವಾದ ನಡೆಸಲಿರುವ ಪ್ರಧಾನಿ
June 19th, 07:17 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಾಳೆ ಬೆಳಗ್ಗೆ 9.30ಕ್ಕೆ ವಿಡಿಯೋ ಬ್ರಿಜ್ ಮೂಲಕ ದೇಶಾದ್ಯಂತದ ರೈತರೊಂದಿಗೆ ನೇರವಾಗಿ ಸಂವಾದ ನಡೆಸಲಿದ್ದಾರೆ. ಈ ಸಂವಾದವು ರೈತರಿಂದ ನೇರವಾಗಿ ಆಲಿಸುವ ಅವಕಾಶವನ್ನು ಒದಗಿಸುತ್ತದೆ. ರೈತರ ಆದಾಯವನ್ನು ದುಪ್ಪಟ್ಟು ಮಾಡುವುದಕ್ಕೆ ಸಂಬಂಧಿಸಿದ ಉಪಕ್ರಮಗಳ ಕುರಿತೂ ಚರ್ಚಿಸಲಾಗುವುದು. ದೂರದರ್ಶನ, ಡಿ.ಡಿ. ಕಿಸಾನ್ ಮತ್ತು ಆಕಾಶವಾಣಿಯ ಮೂಲಕ ದೇಶದಾದ್ಯಂತ ನೇರವಾಗಿ ಬಿತ್ತರಿಸಲಾಗುವುದು. 600ಕೃಷಿ ವಿಜ್ಞಾನ ಕೇಂದ್ರಗಳು ಮತ್ತು 2 ಲಕ್ಷ ಕಾಮನ್ ಸರ್ವೀಸ್ ಸೆಂಟರ್ (ಸಿ.ಎಸ್.ಸಿ.)ಗಳನ್ನು ವಿಡಿಯೋ ಬ್ರಿಜ್ ಮೂಲಕ ಸಂಪರ್ಕಿಸಲಾಗುವುದು. ಜನರು ಕೂಡ “ನರೇಂದ್ರ ಮೋದಿ ಆಪ್’ ಮೂಲಕ ಸಂವಾದ ನಡೆಸಬಹುದಾಗಿದೆ.26.02.2017ರ ‘ಮನ್ ಕಿ ಬಾತ್’ ಮೂಲ ಹಿಂದಿ ಭಾಷಣ ಪಠ್ಯದ ಕನ್ನಡ ಅನುವಾದ
February 26th, 11:33 am
PM Narendra Modi today addressed the nation through his Mann Ki Baat. PM spoke on a wide range of topics - achievements of ISRO, digitization, cleanliness, pyang and women empowerment. The Prime Minister also said that attraction of Science for our young generation should increase and the country needs more and more scientists.People’s messages to make this Diwali special for Armed Forces
October 23rd, 09:18 am
The great respect and admiration that the nation has for our Armed Forces, will find expression this festive season, through a unique campaign being led by Prime Minister Narendra Modi. The #Sandesh2Soldiers campaign gives every citizen an opportunity to spread happiness and cheer among the Indian Armed Forces, who are guarding our nation’s frontiers, far from their loved ones on Diwali.Text of PM’s address at launching ceremony of DD Kisan Channel
May 26th, 09:21 pm
PM launches DD Kisan – India's first television channel dedicated to farmers
May 26th, 06:22 pm