ಅಂತಾರಾಷ್ಟ್ರೀಯ ದೂರಸಂಪರ್ಕ ಒಕ್ಕೂಟ – ವಿಶ್ವ ದೂರಸಂಪರ್ಕ ಪ್ರಮಾಣೀಕರಣ ಸಭೆ 2024 ರಲ್ಲಿ ಉದ್ಯಮ ದಿಗ್ಗಜರಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನಾಯಕತ್ವದ ಶ್ಲಾಘನೆ
October 15th, 02:23 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ ಮಂಟಪಂನಲ್ಲಿ ನಡೆದ ಅಂತಾರಾಷ್ಟ್ರೀಯ ದೂರಸಂಪರ್ಕ ಒಕ್ಕೂಟ – ವಿಶ್ವ ದೂರಸಂಪರ್ಕ ಪ್ರಮಾಣೀಕರಣ ಸಭೆ (ITU-WTSA) 2024 ರ ಸಂದರ್ಭದಲ್ಲಿ ಇಂಡಿಯಾ ಮೊಬೈಲ್ ಕಾಂಗ್ರೆಸ್ನ 8 ನೇ ಆವೃತ್ತಿಯನ್ನು ಉದ್ಘಾಟಿಸಿದರು. ಡಬ್ಲ್ಯು ಟಿ ಎಸ್ ಎ ಎಂಬುದು ಡಿಜಿಟಲ್ ತಂತ್ರಜ್ಞಾನಗಳಿಗಾಗಿನ ವಿಶ್ವ ಸಂಸ್ಥೆಯ ಏಜೆನ್ಸಿಯಾದ ಅಂತಾರಾಷ್ಟ್ರೀಯ ದೂರಸಂಪರ್ಕ ಒಕ್ಕೂಟದ ಪ್ರಮಾಣೀಕರಣ ಕಾರ್ಯಕ್ಕಾಗಿ ಪ್ರತಿ ನಾಲ್ಕು ವರ್ಷಗಳಿಗೊಮ್ಮೆ ಆಯೋಜಿಸಲಾಗುವ ಆಡಳಿತ ಸಮ್ಮೇಳನವಾಗಿದೆ. ಇದೇ ಮೊದಲ ಬಾರಿಗೆ ಐಟಿಯು – ಡಬ್ಲ್ಯುಟಿಎಸ್ಎ ಅನ್ನು ಭಾರತ ಮತ್ತು ಏಷ್ಯಾ-ಪೆಸಿಫಿಕ್ನಲ್ಲಿ ಆಯೋಜಿಸಲಾಗಿದೆ. ಇದು ದೂರಸಂಪರ್ಕ, ಡಿಜಿಟಲ್ ಮತ್ತು ಐಸಿಟಿ ವಲಯಗಳನ್ನು ಪ್ರತಿನಿಧಿಸುತ್ತಿರುವ 190 ಕ್ಕೂ ಹೆಚ್ಚು ದೇಶಗಳ 3,000 ಕ್ಕೂ ಹೆಚ್ಚು ಉದ್ಯಮ ನಾಯಕರು, ನೀತಿ-ನಿರೂಪಕರು ಮತ್ತು ತಂತ್ರಜ್ಞಾನ ತಜ್ಞರನ್ನು ಒಟ್ಟುಗೂಡಿಸಿರುವ ಪ್ರಮುಖ ಜಾಗತಿಕ ಕಾರ್ಯಕ್ರಮವಾಗಿದೆ.ಅಂತಾರಾಷ್ಟ್ರೀಯ ದೂರಸಂಪರ್ಕ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಡೊರೀನ್ ಬೋಗ್ಡಾನ್- ಮಾರ್ಟಿನ್ ಅವರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ
March 24th, 08:28 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಂತಾರಾಷ್ಟ್ರೀಯ ದೂರಸಂಪರ್ಕ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಡೊರೀನ್ ಬೋಗ್ಡಾನ್- ಮಾರ್ಟಿನ್ ಅವರನ್ನು ಭೇಟಿ ಮಾಡಿದರು. ಉತ್ತಮ ಮತ್ತು ಸುಸ್ಥಿರ ಭೂ ಗ್ರಹಕ್ಕಾಗಿ ಡಿಜಿಟಲ್ ತಂತ್ರಜ್ಞಾನವನ್ನು ಬಳಸಿಕೊಳ್ಳುವ ಕುರಿತು ಇಬ್ಬರೂ ಗಣ್ಯರು ವಿಸ್ತೃತ ಚರ್ಚೆ ನಡೆಸಿದರು.