ಸಿ -295 ವಿಮಾನ ಕಾರ್ಖಾನೆಯ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣದ ಕನ್ನಡ ಅನುವಾದ
October 28th, 10:45 am
ಗೌರವಾನ್ವಿತ ಪೆಡ್ರೊ ಸ್ಯಾಂಚೆಜ್, ಗುಜರಾತ್ ರಾಜ್ಯಪಾಲ ಆಚಾರ್ಯ ದೇವವ್ರತ್ ಜೀ, ಭಾರತದ ರಕ್ಷಣಾ ಸಚಿವರಾದ ಶ್ರೀ ರಾಜನಾಥ್ ಸಿಂಗ್ ಜೀ, ವಿದೇಶಾಂಗ ಸಚಿವರಾದ ಶ್ರೀ ಎಸ್. ಜೈಶಂಕರ್ ಜೀ, ಗುಜರಾತ್‌ನ ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರಭಾಯಿ ಪಟೇಲ್, ಸ್ಪೇನ್ ಮತ್ತು ರಾಜ್ಯ ಸರ್ಕಾರದ ಸಚಿವರು, ಏರ್ ಬಸ್ ಮತ್ತು ಟಾಟಾ ತಂಡಗಳ ಎಲ್ಲಾ ಸದಸ್ಯರು, ಮಹಿಳೆಯರೇ ಮತ್ತು ಮಹನೀಯರೇ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಸ್ಪೇನ್ ದೇಶದ ಪ್ರಧಾನಿ ಶ್ರೀ ಪೆಡ್ರೊ ಸ್ಯಾಂಚೆಜ್ ಅವರು ಗುಜರಾತ್ ನ ವಡೋದರಾದಲ್ಲಿ ಸಿ-295 ವಿಮಾನಗಳನ್ನು ತಯಾರಿಸಲು ಟಾಟಾ ವಿಮಾನ ತಯಾರಿಕಾ ಸಂಕೀರ್ಣವನ್ನು ಜಂಟಿಯಾಗಿ ಉದ್ಘಾಟಿಸಿದರು
October 28th, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಸ್ಪೇನ್ ಪ್ರಧಾನಮಂತ್ರಿ ಶ್ರೀ ಪೆಡ್ರೊ ಸ್ಯಾಂಚೆಜ್ ಅವರು ಇಂದು ಗುಜರಾತ್ ನ ವಡೋದರದಲ್ಲಿರುವ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ (ಟಿಎಎಸ್ಎಲ್) ಕ್ಯಾಂಪಸ್ ನಲ್ಲಿ ಸಿ-295 ವಿಮಾನಗಳನ್ನು ತಯಾರಿಸುವ ಟಾಟಾ ವಿಮಾನ ತಯಾರಿಕಾ ಸಂಕೀರ್ಣ (ಟಾಟಾ ಏರ್ ಕ್ರಾಫ್ಟ್ ಕಾಂಪ್ಲೆಕ್ಸ್) ವನ್ನು ಜಂಟಿಯಾಗಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪ್ರದರ್ಶಿಸಲಾದ ವಸ್ತುಪ್ರದರ್ಶನವನ್ನು ಇಬ್ಬರು ಪ್ರಧಾನಿಗಳೂ ವೀಕ್ಷಿಸಿದರು.ಮಲ್ಟಿಪಲ್ ಇಂಡಿಪೆಂಡೆಂಟ್ಲಿ ಟಾರ್ಗೆಟೆಬಲ್ ರೀ-ಎಂಟ್ರಿ ವೆಹಿಕಲ್ (ಎಂಐಆರ್‌ವಿ) ಯೊಂದಿಗೆ ಸ್ವದೇಶಿಯಾಗಿ ಅಭಿವೃದ್ಧಿಪಡಿಸಲಾದ ಅಗ್ನಿ-5 ಕ್ಷಿಪಣಿಯ ಮೊದಲ ಪರೀಕ್ಷಾರ್ಥ ಹಾರಾಟಕ್ಕೆ ಮಿಷನ್ ದಿವ್ಯಾಸ್ತ್ರಕ್ಕೆ ಪ್ರಧಾನಮಂತ್ರಿ ಶ್ಲಾಘನೆ.
March 11th, 06:56 pm
ಸ್ವತಂತ್ರವಾಗಿ ಟಾರ್ಗೆಟಬಲ್ ರೀ-ಎಂಟ್ರಿ ವೆಹಿಕಲ್ (ಎಂಐಆರ್‌ವಿ) ತಂತ್ರಜ್ಞಾನದೊಂದಿಗೆ ಸ್ವದೇಶಿಯಾಗಿ ಅಭಿವೃದ್ಧಿಪಡಿಸಿದ ಅಗ್ನಿ-5 ಕ್ಷಿಪಣಿಯ ಮೊದಲ ಹಾರಾಟ ಪರೀಕ್ಷೆಯಾದ ಮಿಷನ್ ದಿವ್ಯಾಸ್ತ್ರಕ್ಕಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಡಿಆರ್‌ಡಿಒ ವಿಜ್ಞಾನಿಗಳನ್ನು ಶ್ಲಾಘಿಸಿದರು.ರಾಮ ಪ್ರತಿಯೊಬ್ಬರ ಹೃದಯದಲ್ಲಿದ್ದಾನೆ: ಮನ್ ಕಿ ಬಾತ್ ವೇಳೆ ಪ್ರಧಾನಿ ಮೋದಿ
January 28th, 11:30 am
ನನ್ನ ಪ್ರಿಯ ದೇಶವಾಸಿಗಳೇ, ಈ ಬಾರಿ ಜನವರಿ 26 ರ ಪರೇಡ್ ತುಂಬಾ ಅದ್ಭುತವಾಗಿತ್ತು, ಆದರೆ ಕವಾಯತಿನಲ್ಲಿ ಮಹಿಳಾ ಶಕ್ತಿಯನ್ನು ನೋಡುವುದು ಹೆಚ್ಚು ಚರ್ಚೆಯ ವಿಷಯವಾಗಿತ್ತು, ಕರ್ತವ್ಯ ಪಥದಲ್ಲಿ ಕೇಂದ್ರ ಭದ್ರತಾ ಪಡೆ ಮತ್ತು ದೆಹಲಿ ಪೊಲೀಸ್ ಮಹಿಳಾ ತುಕಡಿಗಳು ಕವಾಯತು ಆರಂಭಿಸಿದಾಗ, ಎಲ್ಲರೂ ಹೆಮ್ಮೆಯಿಂದ ಬೀಗಿದರು. ಮಹಿಳಾ ವಾದ್ಯಮೇಳದ ಕವಾಯತು ನೋಡಿ, ಅವರ ಅಮೋಘ ಸಮನ್ವಯತೆ ಕಂಡು ದೇಶ-ವಿದೇಶದ ಜನರು ಪುಳಕಿತರಾದರು. ಈ ಬಾರಿ ಪರೇಡ್‌ನಲ್ಲಿ ಸಾಗಿದ 20 ಸ್ಕ್ವಾಡ್‌ಗಳಲ್ಲಿ 11 ಸ್ಕ್ವಾಡ್‌ಗಳು ಮಹಿಳೆಯರದ್ದೇ ಆಗಿದ್ದವು. ಸಾಗಿಬಂದ ಸ್ಥಬ್ಧ ಚಿತ್ರಗಳಲ್ಲಿಯೂ, ಎಲ್ಲಾ ವೇಷಧಾರಿಗಳು ಮಹಿಳೆಯರೇ ಆಗಿದ್ದರು. ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸುಮಾರು ಒಂದೂವರೆ ಸಾವಿರ ಹೆಣ್ಣು ಮಕ್ಕಳು ಪಾಲ್ಗೊಂಡಿದ್ದರು. ಅನೇಕ ಮಹಿಳಾ ಕಲಾವಿದರು ಶಂಖ, ನಾದಸ್ವರ ಮತ್ತು ನಾಗದಾ ದಂತಹ ಭಾರತೀಯ ಸಂಗೀತ ವಾದ್ಯಗಳನ್ನು ನುಡಿಸುತ್ತಿದ್ದರು. ಡಿಆರ್‌ಡಿಒ ಬಿಡುಗಡೆ ಮಾಡಿದ ಟ್ಯಾಬ್ಲೋ ಕೂಡ ಎಲ್ಲರ ಗಮನ ಸೆಳೆಯಿತು. ನೀರು, ಭೂಮಿ, ಆಕಾಶ, ಸೈಬರ್ ಮತ್ತು ಬಾಹ್ಯಾಕಾಶ - ಪ್ರತಿಯೊಂದು ಕ್ಷೇತ್ರದಲ್ಲೂ ಮಹಿಳಾ ಶಕ್ತಿಯು ದೇಶವನ್ನು ಹೇಗೆ ರಕ್ಷಿಸುತ್ತಿದೆ ಎಂಬುದನ್ನು ಇದು ತೋರಿಸಿತ್ತು. 21ನೇ ಶತಮಾನದ ಭಾರತವು ಮಹಿಳಾ ನೇತೃತ್ವದ ಅಭಿವೃದ್ಧಿಯ ಮಂತ್ರದೊಂದಿಗೆ ಮುನ್ನಡೆಯುತ್ತಿದೆ.Aatmanirbharta in Defence: India First Soars as PM Modi Takes Flight in LCA Tejas
November 28th, 03:40 pm
Prime Minister Narendra Modi visited Hindustan Aeronautics Limited (HAL) in Bengaluru today, as the state-run plane maker experiences exponential growth in manufacturing prowess and export capacities. PM Modi completed a sortie on the Indian Air Force's multirole fighter jet Tejas.ತೇಜಸ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ ಪ್ರಧಾನಿ ಮೋದಿ
November 25th, 01:07 pm
ನಂತರ ತಮ್ಮ ಅನುಭವವನ್ನು ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿರುವ ಪ್ರಧಾನ ಮಂತ್ರಿಗಳು, “ತೇಜಸ್‌ನಲ್ಲಿ ಹಾರಾಟವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಅನುಭವವು ಬಹಳ ವಿಶೇಷವಾಗಿತ್ತು. ನಮ್ಮ ದೇಶದ ಸ್ಥಳೀಯ ಸಾಮರ್ಥ್ಯಗಳಲ್ಲಿ ನನ್ನ ವಿಶ್ವಾಸ ಇನ್ನಷ್ಟು ಹೆಚ್ಚಿಸಿತು. ನಮ್ಮ ರಾಷ್ಟ್ರದ ಸಾಮರ್ಥ್ಯದ ಬಗ್ಗೆ ನನಗೆ ಒಂದು ರೀತಿಯ ಹೆಮ್ಮೆ ಮತ್ತು ಹೊಸ ಆಶಾವಾದ ನೀಡಿತು.'' ಎಂದು ಬರೆದುಕೊಂಡಿದ್ದಾರೆ.ಐಎನ್ಎಸ್ ವಿಕ್ರಾಂತ್ 21 ನೇ ಶತಮಾನದ ಭಾರತದ ಕಠಿಣ ಪರಿಶ್ರಮ, ಪ್ರತಿಭೆ, ಪ್ರಭಾವ ಮತ್ತು ಬದ್ಧತೆಗೆ ಸಾಕ್ಷಿಯಾಗಿದೆ: ಪ್ರಧಾನಿ ಮೋದಿ
September 02nd, 01:37 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೇಶದ ಮೊದಲ ಸ್ವದೇಶಿ ವಿಮಾನವಾಹಕ ನೌಕೆ ಐಎನ್‌ಎಸ್ ವಿಕ್ರಾಂತ್ ಕಾರ್ಯಾರಂಭಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ, ಗತಕಾಲದ ವಸಾಹತುಶಾಹಿ ಕುರುಹನ್ನು ತೊಡೆದುಹಾಕುವ ಮತ್ತು ಶ್ರೀಮಂತ ಭಾರತೀಯ ಕಡಲ ಪರಂಪರೆಗೆ ಸರಿಹೊಂದುವ ನೂತನ ನೌಕಾ ಧ್ವಜವನ್ನು (ನಿಶಾನ್) ಪ್ರಧಾನ ಮಂತ್ರಿಯವರು ಅನಾವರಣಗೊಳಿಸಿದರು.ದೇಶದ ಮೊದಲ ಸ್ವದೇಶಿ ವಿಮಾನವಾಹಕ ನೌಕೆ ಐಎನ್‌ಎಸ್ ವಿಕ್ರಾಂತ್ ಕಾರ್ಯಾರಂಭಕ್ಕೆ ಚಾಲನೆ ನೀಡಿದ ಪ್ರಧಾನಮಂತ್ರಿ
September 02nd, 09:46 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೇಶದ ಮೊದಲ ಸ್ವದೇಶಿ ವಿಮಾನವಾಹಕ ನೌಕೆ ಐಎನ್‌ಎಸ್ ವಿಕ್ರಾಂತ್ ಕಾರ್ಯಾರಂಭಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ, ಗತಕಾಲದ ವಸಾಹತುಶಾಹಿ ಕುರುಹನ್ನು ತೊಡೆದುಹಾಕುವ ಮತ್ತು ಶ್ರೀಮಂತ ಭಾರತೀಯ ಕಡಲ ಪರಂಪರೆಗೆ ಸರಿಹೊಂದುವ ನೂತನ ನೌಕಾ ಧ್ವಜವನ್ನು (ನಿಶಾನ್) ಪ್ರಧಾನ ಮಂತ್ರಿಯವರು ಅನಾವರಣಗೊಳಿಸಿದರು.ಹರ್ ಘರ್ ತಿರಂಗಾ ಆಂದೋಲನ ಕುರಿತಂತೆ ಉತ್ಸಾಹದ ದೃಷ್ಟಾಂತಗಳನ್ನು ಹಂಚಿಕೊಂಡ ಪ್ರಧಾನಮಂತ್ರಿ
August 14th, 02:34 pm
ದೇಶಾದ್ಯಂತ ಹರ್ ಘರ್ ತಿರಂಗಾ ಆಂದೋಲನವನ್ನು ಆಚರಿಸಿದ ವಿವಿಧ ಉದಾಹರಣೆಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಂಚಿಕೊಂಡಿದ್ದಾರೆ.ಹೊಸದಿಲ್ಲಿಯಲ್ಲಿ ನಡೆದ ಎನ್ಐಐಒ ವಿಚಾರ ಸಂಕಿರಣ 'ಸ್ವಾವಲಂಬನ್'ನಲ್ಲಿ ಪ್ರಧಾನ ಮಂತ್ರಿಯವರ ಭಾಷಣದ ಇಂಗ್ಲಿಷ್ ಅವತರಣಿಕೆ
July 18th, 04:31 pm
ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಶ್ರೀ ರಾಜನಾಥ್ ಸಿಂಗ್ ಜೀ, ಶ್ರೀ ಅಜಯ್ ಭಟ್ ಜೀ, ನೌಕಾ ಸಿಬ್ಬಂದಿ ಮುಖ್ಯಸ್ಥರು, ನೌಕಾಪಡೆಯ ಉಪ ಮುಖ್ಯಸ್ಥರು, ರಕ್ಷಣಾ ಕಾರ್ಯದರ್ಶಿಗಳು, ಎಸ್.ಐ.ಡಿ.ಎಂ.ನ ಅಧ್ಯಕ್ಷರು, ಕೈಗಾರಿಕೆ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಎಲ್ಲಾ ಸಹೋದ್ಯೋಗಿಗಳೇ, ಇತರ ಗಣ್ಯರೇ, ಮಹಿಳೆಯರೇ ಮತ್ತು ಮಹನೀಯರೇ!ಎನ್ಐಐಒ ವಿಚಾರಸಂಕಿರಣ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
July 18th, 04:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನೌಕಾಪಡೆಯ ಆವಿಷ್ಕಾರ(ಅನುಶೋಧನೆ) ಮತ್ತು ಸ್ವದೇಶೀಕರಣ ಸಂಸ್ಥೆ (ಎನ್ಐಐಒ) ಆಯೋಜಿಸಿದ್ದ 'ಸ್ವಾವಲಂಬನ್' ವಿಚಾರಸಂಕಿರಣದಲ್ಲಿ ಮಾತನಾಡಿದರು.“ರಕ್ಷಣಾ ವಲಯದಲ್ಲಿ ಆತ್ಮ ನಿರ್ಭರ ಭಾರತ-ಕಾರ್ಯಾನುಷ್ಟಾನಕ್ಕೆ ಕರೆ” ಕುರಿತಂತೆ ಬಜೆಟ್ ಬಳಿಕದ ವೆಬಿನಾರಿನಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ
February 25th, 02:46 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಜೆಟ್‌ನಲ್ಲಿ ಮಾಡಿದ ಘೋಷಣೆ ಮಾಡಿದ ಅಂಶಗಳ ಕುರಿತಾದ ‘ರಕ್ಷಣೆಯಲ್ಲಿ ಆತ್ಮನಿರ್ಭರ ಭಾರತ – ಕ್ರಮ ಕೈಗೊಳ್ಳಲು ಕರೆ’ ಎಂಬ ಶೀರ್ಷಿಕೆಯ ಬಜೆಟ್ ನಂತರದ ವೆಬಿನಾರ್ ಉದ್ದೇಶಿಸಿ ಭಾಷಣ ಮಾಡಿದರು. ರಕ್ಷಣಾ ಸಚಿವಾಲಯವು ಈ ವೆಬಿನಾರ್ ಅನ್ನು ಆಯೋಜಿಸಿತ್ತು. ಪ್ರಧಾನಮಂತ್ರಿಯವರು ಮಾತನಾಡಿದ ಬಜೆಟ್ ನಂತರದ ವೆಬಿನಾರ್‌ಗಳ ಸರಣಿಯ ನಾಲ್ಕನೇ ವೆಬಿನಾರ್ ಇದಾಗಿದೆ.ರಕ್ಷಣಾ ವಲಯದ ಬಜೆಟ್ ನಂತರದ ವೆಬಿನಾರ್ ಕುರಿತು ಪ್ರಧಾನಿ ಭಾಷಣ
February 25th, 10:32 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಜೆಟ್‌ನಲ್ಲಿ ಮಾಡಿದ ಘೋಷಣೆ ಮಾಡಿದ ಅಂಶಗಳ ಕುರಿತಾದ ‘ರಕ್ಷಣೆಯಲ್ಲಿ ಆತ್ಮನಿರ್ಭರ ಭಾರತ – ಕ್ರಮ ಕೈಗೊಳ್ಳಲು ಕರೆ’ ಎಂಬ ಶೀರ್ಷಿಕೆಯ ಬಜೆಟ್ ನಂತರದ ವೆಬಿನಾರ್ ಉದ್ದೇಶಿಸಿ ಭಾಷಣ ಮಾಡಿದರು. ರಕ್ಷಣಾ ಸಚಿವಾಲಯವು ಈ ವೆಬಿನಾರ್ ಅನ್ನು ಆಯೋಜಿಸಿತ್ತು. ಪ್ರಧಾನಮಂತ್ರಿಯವರು ಮಾತನಾಡಿದ ಬಜೆಟ್ ನಂತರದ ವೆಬಿನಾರ್‌ಗಳ ಸರಣಿಯ ನಾಲ್ಕನೇ ವೆಬಿನಾರ್ ಇದಾಗಿದೆ.ಮಣಿಪುರ ಮತ್ತು ತ್ರಿಪುರಾಕ್ಕೆ ಪ್ರಧಾನಿ ಭೇಟಿ ನೀಡಲಿದ್ದಾರೆ
January 02nd, 03:34 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, 2022 ರ ಜನವರಿ 4 ರಂದು ಮಣಿಪುರ ಮತ್ತು ತ್ರಿಪುರಾ ರಾಜ್ಯಗಳಿಗೆ ಭೇಟಿ ನೀಡಲಿದ್ದಾರೆ. ಸುಮಾರು 11 ಗಂಟೆಗೆ, ಪ್ರಧಾನಮಂತ್ರಿ ಅವರು ಇಂಫಾಲದಲ್ಲಿ 4800 ರೂ.ಗಿಂತ ಹೆಚ್ಚಿನ ಮೌಲ್ಯದ 22 ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಲಿದ್ದಾರೆ. ನಂತರ, ಮಧ್ಯಾಹ್ನ 2 ಗಂಟೆಗೆ, ಅಗರ್ತಲಾದಲ್ಲಿ ಅವರು, ಮಹಾರಾಜ ಬೀರ್ ಬಿಕ್ರಮ್ ವಿಮಾನ ನಿಲ್ದಾಣದಲ್ಲಿ ಹೊಸ ಇಂಟಿಗ್ರೇಟೆಡ್ ಟರ್ಮಿನಲ್ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ ಮತ್ತು ಎರಡು ಪ್ರಮುಖ ಅಭಿವೃದ್ಧಿ ಉಪಕ್ರಮಗಳನ್ನು ಪ್ರಾರಂಭಿಸುತ್ತಾರೆ.ಉತ್ತರ ಪ್ರದೇಶದ ಝಾನ್ಸಿಯಲ್ಲಿ “ರಾಷ್ಟ್ರ ರಕ್ಷಾ ಸಮರ್ಪಣ ಪರ್ವ”ದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ
November 19th, 05:39 pm
ಸ್ವಾತಂತ್ರ್ಯಕ್ಕಾಗಿ ಎಲ್ಲವನ್ನೂ ತ್ಯಾಗ ಮಾಡಿದ ರಾಣಿ ಲಕ್ಷ್ಮೀಬಾಯಿ ಅವರ ನೆಲದ ಜನರಿಗೆ ನಾನು ಕೈಮುಗಿದು ನಮಸ್ಕರಿಸುತ್ತೇನೆ. ಝಾನ್ಸಿಯು ಸ್ವಾತಂತ್ರ್ಯದ ಜ್ವಾಲೆಯನ್ನು, ಕಿಡಿಯನ್ನು ಹಚ್ಚಿತು. ಈ ನೆಲದ ಪ್ರತಿಯೊಂದು ಕಣವೂ ವೀರತ್ವ ಮತ್ತು ದೇಶಪ್ರೇಮದಲ್ಲಿ ಮಿಂದೆದ್ದಿದೆ. ಝಾನ್ಸಿಯ ವೀರ ರಾಣಿ, ರಾಣಿ ಲಕ್ಷ್ಮೀಬಾಯಿ ಅವರಿಗೆ ನಾನು ವಂದಿಸುತ್ತೇನೆ.ಉತ್ತರ ಪ್ರದೇಶದ ಝಾನ್ಸಿಯಲ್ಲಿ ಆಯೋಜಿಸಿದ ರಾಷ್ಟ್ರ ರಕ್ಷಾ ಸಮರ್ಪಣ್ ಪರ್ವ್‌ದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿ
November 19th, 05:38 pm
ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರ ರಕ್ಷಾ ಸಂಪರ್ಪಣ ಪರ್ವ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಈ ಕಾರ್ಯಕ್ರಮವನ್ನು ಉತ್ತರ ಪ್ರದೇಶದ ಝಾನ್ಸಿಯಲ್ಲಿ ಆಯೋಜಿಸಲಾಗಿತ್ತು. ದೇಶದ ಭದ್ರತಾಪಡೆಗಳಿಗೆ ಹೊಸ ಯೋಜನೆಗಳನ್ನು ಘೋಷಿಸುತ್ತ, ಝಾನ್ಸಿಯ ಕೋಟೆ ಆವರಣದಲ್ಲಿ ಅದ್ಧೂರಿ ಸಮಾರಂಭದಲ್ಲಿ ಪ್ರಧಾನಿ ಮೋದಿ ಅವರು ಹೊಸ ಹೆಜ್ಜೆಗಳ ಕುರಿತು ಮಾತನಾಡಿದರು. ಎನ್‌ಸಿಸಿಯ ಹಳೆಯ ವಿದ್ಯಾರ್ಥಿಗಳ ಸಂಘವನ್ನು ಆರಂಭಿಸುವುದೂ ಇವುಗಳಲ್ಲಿ ಒಂದಾಗಿತ್ತು. ಪ್ರಧಾನಿ ನರೇಂದ್ರಮೋದಿ ಅವರು ಈ ಸಂಘಕ್ಕೆ ತಾವೇ ಮೊದಲ ಸದಸ್ಯರಾಗಿ ಹೆಸರು ನೊಂದಾಯಿಸಿದರು. ಎನ್‌ಸಿಸಿ ಅಭ್ಯರ್ಥಿಗಳಿಗೆ ರಾಷ್ಟ್ರೀಯ ಸಿಮ್ಯುಲೆಷನ್ ತರಬೇತಿ ಕಾರ್ಯಕ್ರಮದ ಆರಂಭವನ್ನು ಘೋಷಿಸಲಾಯಿತು. ಸಮರ ವೀರರಿಗೆ ಹುತಾತ್ಮರಾದವರಿಗೆ ರಾಷ್ಟ್ರೀಯ ಸಮರ ಸ್ಮಾರಕದಲ್ಲಿ ನಮನ ಸಲ್ಲಿಸಲು ಕಿಯಾಸ್ಕ್ ಅನ್ನು ಸಮರ್ಪಿಸಲಾಯಿತು. ರಾಷ್ಟ್ರೀಯ ಸಮರ ಸ್ಮರಣೆಯ ಮೊಬೈಲ್ ಆ್ಯಪ್ ಅನ್ನು ಆರಂಭಿಸಲಾಯಿತು. ಡಿಆರ್‌ಡಿಒ ವಿನ್ಯಾಸಗೊಳಿಸಿರುವ, ಅಭಿವೃದ್ಧಿ ಪಡಿಸಿರುವ ವಿದ್ಯುನ್ಮಾನ ಸಮರ ಸ್ಯೂಟ್ ಶಕ್ತಿ ಅನ್ನು ಭಾರತೀಯ ನೌಕೆಗಳಿಗೆ ನೀಡಲಾಯಿತು. ಹಗುರ ಸಮರ ಹೆಲಿಕಾಪ್ಟರ್, ಡ್ರೋನ್‌ಗಳನ್ನು ಸಮರ್ಪಿಸಲಾಯಿತು. ಉತ್ತರ ಪ್ರದೇಶದ ಕೈಗಾರಿಕಾ ಕಾರಿಡಾರ್‌ನಲ್ಲಿರುವ ಭಾರತ್ ಡೈನಾಮಿಕ್ಸ್ ಲಿಮಿಟೆಡ್‌ಗೆ 400 ಕೋಟಿ ಮೌಲ್ಯದ ನೂತನ ಕಾರ್ಯಗಳಿಗೆ ಶಿಲಾನ್ಯಾಸ ನೆರವೇರಿಸಿದರು.75 ನೇ ಸ್ವಾತಂತ್ರ್ಯ ದಿನಾಚರಣೆಯಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೆಂಪು ಕೋಟೆಯ ಪ್ರಾಂಗಣದಿಂದ ದೇಶವನ್ನುದ್ದೇಶಿಸಿ ಮಾತನಾಡಿದರು.
August 15th, 03:02 pm
ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪವಿತ್ರ ದಿನವಾದ ಇಂದು, ದೇಶವು ತನ್ನ ಎಲ್ಲಾ ಸ್ವಾತಂತ್ರ್ಯ ಹೋರಾಟಗಾರರಿಗೆ ಮತ್ತು ರಾಷ್ಟ್ರ ರಕ್ಷಣೆಯಲ್ಲಿ ಹಗಲಿರುಳು ತಮ್ಮನ್ನು ಸಮರ್ಪಿಸಿಕೊಂಡಿರುವ ವೀರರಿಗೆ ತಲೆಬಾಗಿ ನಮಿಸುತ್ತಿದೆ. ಸ್ವಾತಂತ್ರ್ಯ ಹೋರಾಟವನ್ನು ಒಂದು ಸಾಮೂಹಿಕ ಆಂದೋಲನವನ್ನಾಗಿ ಮಾಡಿದ ಪೂಜ್ಯ ಬಾಪು, ಸ್ವಾತಂತ್ರ್ಯಕ್ಕಾಗಿ ಎಲ್ಲವನ್ನೂ ತ್ಯಾಗ ಮಾಡಿದ ನೇತಾಜಿ ಸುಭಾಷ್ ಚಂದ್ರ ಬೋಸ್ ಅಥವಾ ಭಗತ್ ಸಿಂಗ್, ಚಂದ್ರಶೇಖರ್ ಆಜಾದ್, ಬಿಸ್ಮಿಲ್ ಮತ್ತು ಅಶ್ಫಖುಲ್ಲಾ ಖಾನ್ ರಂತಹ ಮಹಾನ್ ಕ್ರಾಂತಿಕಾರಿಗಳನ್ನು ಒಳಗೊಂಡಂತೆ ಪ್ರತಿಯೊಬ್ಬರನ್ನೂ ದೇಶವು ಸ್ಮರಿಸಿಕೊಳ್ಳುತ್ತಿದೆ; ಝಾನ್ಸಿ ರಾಣಿ ಲಕ್ಷ್ಮಿಬಾಯಿ, ಕಿತ್ತೂರಿನ ರಾಣಿ ಚೆನ್ನಮ್ಮ ಅಥವಾ ರಾಣಿ ಗಾಯಿಡಿನ್ಲಿಯು ಅಥವಾ ಮಾತಂಗಿನಿಹಜ್ರಾ ಅವರ ಶೌರ್ಯ; ದೇಶದ ಮೊದಲ ಪ್ರಧಾನಿ ಪಂಡಿತ್ ನೆಹರೂ, ದೇಶವನ್ನು ಒಂದು ರಾಷ್ಟ್ರವಾಗಿ ಒಗ್ಗೂಡಿಸಿದ ಸರ್ದಾರ್ ವಲ್ಲಭಭಾಯಿ ಪಟೇಲ್ ಮತ್ತು ಭಾರತದ ಭವಿಷ್ಯಕ್ಕೆ ದಿಕ್ಕು ತೋರಿದ ಬಾಬಾ ಸಾಹೇಬ್ ಅಂಬೇಡ್ಕರ್. ಈ ಎಲ್ಲ ಮಹಾನ್ ವ್ಯಕ್ತಿಗಳಿಗೆ ದೇಶ ಚಿರಋಣಿಯಾಗಿದೆ.ಕೆಂಪುಕೋಟೆಯಲ್ಲಿ 75ನೇ ಸ್ವಾತಂತ್ರ್ಯೋತ್ಸವ ಉದ್ದೇಶಿಸಿ ಪ್ರಧಾನ ಮಂತ್ರಿ ಅವರ ಭಾಷಣ
August 15th, 07:38 am
ನಿಮ್ಮೆಲ್ಲರಿಗೂ ಶುಭಾಶಯಗಳು. ಭಾರತವು ಸ್ವಾತಂತ್ರ್ಯ ಗಳಿಸಿದ ಅಮೃತ ಮಹೋತ್ಸವ ಆಚರಿಸುತ್ತಿರುವ ಸುಸಂದರ್ಭದಲ್ಲಿ ಭಾರತವನ್ನು ಮತ್ತು ಭಾರತದ ಪ್ರಜಾಪ್ರಭುತ್ವವನ್ನು ಪ್ರೀತಿಸುವ ವಿಶ್ವದೆಲ್ಲೆಡೆ ಇರುವ ಜನರಿಗೆ 75ನೇ ಸ್ವಾತಂತ್ರ್ಯೋತ್ಸವದ ಶುಭ ಕಾಮನೆಗಳನ್ನು ಅರ್ಪಿಸುತ್ತೇನೆ.ಭಾರತ 75 ನೇ ಸ್ವಾತಂತ್ರ್ಯ ದಿನವನ್ನು ಆಚರಿಸುತ್ತಿದೆ
August 15th, 07:37 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕೆಂಪು ಕೋಟೆಯಿಂದ ದೇಶವನ್ನುದ್ದೇಶಿಸಿ ಮಾತನಾಡುತ್ತಾ ದೇಶವು ತನ್ನ 75 ನೇ ಸ್ವಾತಂತ್ರ್ಯ ದಿನವನ್ನು ಆಚರಿಸಿತು. ಭಾಷಣದ ಸಮಯದಲ್ಲಿ, ಪ್ರಧಾನಿ ಮೋದಿ ತಮ್ಮ ಸರ್ಕಾರದ ಸಾಧನೆಗಳನ್ನು ಪಟ್ಟಿ ಮಾಡಿದರು ಮತ್ತು ಭವಿಷ್ಯದ ಯೋಜನೆಗಳನ್ನು ಹಾಕಿದರು. ಅವರು ತಮ್ಮ ಜನಪ್ರಿಯ ಘೋಷಣೆಯಾದ ಸಬ್ಕಾ ಸಾಥ್, ಸಬ್ಕಾ ವಿಕಾಸ್ ಮತ್ತು ಸಬ್ಕಾ ವಿಶ್ವಾಸ್ ಅನ್ನು ಸೇರಿಸಿದರು. ಈ ಗುಂಪಿಗೆ ಇತ್ತೀಚಿನ ಪ್ರವೇಶವು ಸಬ್ಕಾ ಪ್ರಯಾಸ್ ಆಗಿದೆ.ಮೇ.21ರಂದು ವಾರಾಣಸಿಯ ವೈದ್ಯರು, ಅರೆ ವೈದ್ಯಕೀಯ ಸಿಬ್ಬಂದಿ ಮತ್ತು ಇತರೆ ಮುಂಚೂಣಿ ಆರೋಗ್ಯ ಕಾರ್ಯಕರ್ತರೊಂದಿಗೆ ಸಂವಾದ ನಡೆಸಲಿರುವ ಪ್ರಧಾನಮಂತ್ರಿ
May 20th, 09:03 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮೇ.21ರಂದು ಬೆಳಿಗ್ಗೆ 11 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ವಾರಾಣಸಿಯ ವೈದ್ಯರು, ಅರೆ ವೈದ್ಯಕೀಯ ಸಿಬ್ಬಂದಿ ಮತ್ತು ಇತರೆ ಮುಂಚೂಣಿ ಆರೋಗ್ಯ ಕಾರ್ಯಕರ್ತರೊಂದಿಗೆ ಸಂವಾದ ನಡೆಸಲಿದ್ದಾರೆ.