ಯುಎಇ ಉಪಾಧ್ಯಕ್ಷ ಮತ್ತು ಪ್ರಧಾನ ಮಂತ್ರಿ ಶೇಖ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಮ್ ಭೇಟಿ ಮಾಡಿ ಮಾತುಕತೆ ನಡೆಸಿದ ಪ್ರಧಾನಿ ಮೋದಿ
February 14th, 03:49 pm
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಫೆಬ್ರವರಿ 14ರಂದು ಯುಎಇ ಉಪಾಧ್ಯಕ್ಷರು, ಪ್ರಧಾನ ಮಂತ್ರಿಗಳು, ರಕ್ಷಣಾ ಸಚಿವರು ಹಾಗೂ ದುಬೈಯ ಪ್ರಮುಖ ಆಡಳಿತಗಾರ ಶೇಖ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಮ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.ದುಬೈನ ಜೆಬೆಲ್ ಅಲಿಯಲ್ಲಿ ಭಾರತ್ ಮಾರ್ಟ್‌ಗೆ ವರ್ಚ್ಯುಯಲ್ ಮೂಲಕ ಶಂಕುಸ್ಥಾಪನೆ
February 14th, 03:48 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ದುಬೈನ ಪ್ರಧಾನಮಂತ್ರಿ ಶೇಖ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಮ್ ಅವರು 14 ಫೆಬ್ರವರಿ 2024 ರಂದು ದುಬೈನ ಜೆಬೆಲ್ ಅಲಿ ಮುಕ್ತ ವ್ಯಾಪಾರ ವಲಯದಲ್ಲಿ ನಿರ್ಮಿಸಲಾಗುತ್ತಿರುವ ಭಾರತ್ ಮಾರ್ಟ್‌ಗೆ ವರ್ಚ್ಯುಯಲ್ ಆಗಿ ಶಂಕುಸ್ಥಾಪನೆ ನೆರವೇರಿಸಿದರು.ದುಬೈ 2024 ನಡೆದ ವಿಶ್ವ ಸರ್ಕಾರಗಳ ಶೃಂಗಸಭೆಯ ಸಂದರ್ಭದಲ್ಲಿ ಮಡಗಾಸ್ಕರ್ ಗಣರಾಜ್ಯದ ಅಧ್ಯಕ್ಷರನ್ನು ಭೇಟಿಯಾದ ಪ್ರಧಾನಮಂತ್ರಿ
February 14th, 02:55 pm
ದುಬೈನಲ್ಲಿ ಜರುಗಿದ ವಿಶ್ವ ಸರ್ಕಾರಗಳ ಶೃಂಗಸಭೆಯ ಸಂದರ್ಭದಲ್ಲಿ ಮಡಗಾಸ್ಕರ್ ಅಧ್ಯಕ್ಷ ಶ್ರೀ ಆಂಡ್ರಿ ರಾಜೋಲಿನಾ ಅವರನ್ನು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭೇಟಿ ಮಾಡಿದರು. ಉಭಯ ನಾಯಕರ ನಡುವಿನ ಮೊದಲ ಭೇಟಿ ಇದಾಗಿದೆ.ವಿಶ್ವ ಸರ್ಕಾರದ ಶೃಂಗಸಭೆಯಲ್ಲಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಕನ್ನಡ ಅವತರಣಿಕೆ
February 14th, 02:30 pm
ವಿಶ್ವ ಸರ್ಕಾರದ ಶೃಂಗಸಭೆಯಲ್ಲಿ ವಿಶೇಷವಾಗಿ ಎರಡನೇ ಬಾರಿಗೆ ಮುಖ್ಯ ಭಾಷಣ ಮಾಡುವ ಅವಕಾಶ ಸಿಕ್ಕಿರುವುದು ನನ್ನ ಪಾಲಿಗೆ ದೊಡ್ಡ ಗೌರವವಾಗಿದೆ. ಈ ಆಮಂತ್ರಣವನ್ನು ನೀಡಿದ್ದಕ್ಕಾಗಿ ಮತ್ತು ಅಂತಹ ಆತ್ಮೀಯ ಸ್ವಾಗತವನ್ನು ನೀಡಿದ್ದಕ್ಕಾಗಿ ಘನತೆವೆತ್ತ ಶ್ರೀ ಶೇಖ್ ಮೊಹಮ್ಮದ್ ಬಿನ್ ರಶೀದ್ ಜಿ ಅವರಿಗೆ ನಾನು ತುಂಬಾ ಕೃತಜ್ಞನಾಗಿದ್ದೇನೆ. ನನ್ನ ಗೌರವಾನ್ವಿತ ಸಹೋದರ , ಘನತೆವೆತ್ತ ಶ್ರೀ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅವರಿಗೂ ನಾನು ನನ್ನ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ. ಇತ್ತೀಚೆಗೆ ಹಲವಾರು ಸಂದರ್ಭಗಳಲ್ಲಿ ಅವರನ್ನು ಭೇಟಿಯಾಗುವ ಸೌಭಾಗ್ಯ ನನಗೆ ಸಿಕ್ಕಿದೆ. ಅವರು ದೂರ ದೃಷ್ಟಿಕೋನ ಹೊಂದಿರುವ ನಾಯಕ ಮಾತ್ರವಲ್ಲದೆ ನಿರ್ಣಯ ಮತ್ತು ಬದ್ಧತೆಯ ನಾಯಕರೂ ಕೂಡಾ ಹೌದು.ವಿಶ್ವ ಸರ್ಕಾರಗಳ ಶೃಂಗಸಭೆ 2024 ರಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ
February 14th, 02:09 pm
ಯು.ಎ.ಇ. ಉಪಾಧ್ಯಕ್ಷ, ಪ್ರಧಾನಮಂತ್ರಿ, ರಕ್ಷಣಾ ಸಚಿವರು ಮತ್ತು ದುಬೈ ಆಡಳಿತಗಾರರಾದ ಘನತೆವೆತ್ತ ಶೇಖ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಮ್ ಅವರ ಆಹ್ವಾನದ ಮೇರೆಗೆ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 14 ಫೆಬ್ರವರಿ 2024 ರಂದು ದುಬೈನಲ್ಲಿ ವಿಶ್ವ ಸರ್ಕಾರಗಳ ಶೃಂಗಸಭೆಯಲ್ಲಿ ಗೌರವಾನ್ವಿತ ಅತಿಥಿಯಾಗಿ ಭಾಗವಹಿಸಿದರು. ಶೃಂಗಸಭೆಯಲ್ಲಿ ಭವಿಷ್ಯದ ಸರ್ಕಾರಗಳನ್ನು ರೂಪಿಸುವುದು ವಿಷಯದ ಕುರಿತು ಅವರು ಪ್ರಧಾನ ಅಧಿವೇಶನದಲ್ಲಿ ವಿಶೇಷ ಭಾಷಣವನ್ನು ಮಾಡಿದರು. 2018 ರಲ್ಲಿ ವಿಶ್ವ ಸರ್ಕಾರಗಳ ಶೃಂಗಸಭೆಯಲ್ಲಿ ಗೌರವಾನ್ವಿತ ಅತಿಥಿಯಾಗಿ ಪ್ರಧಾನಮಂತ್ರಿಯವರು ಭಾಗವಹಿಸಿದ್ದರು. ಈ ಬಾರಿಯ ಶೃಂಗಸಭೆಯಲ್ಲಿ 10 ರಾಷ್ಟ್ರಾಧ್ಯಕ್ಷರು ಮತ್ತು 10 ದೇಶಗಳ ಪ್ರಧಾನಮಂತ್ರಿಗಳು ಸೇರಿದಂತೆ 20 ವಿಶ್ವ ನಾಯಕರು ಭಾಗವಹಿಸಿದ್ದಾರೆ. ಈ ಜಾಗತಿಕ ಕೂಟದಲ್ಲಿ 120 ದೇಶಗಳ ಸರ್ಕಾರಗಳು ಮತ್ತು ಪ್ರತಿನಿಧಿಗಳು ಭಾಗವಹಿಸಿ ಪ್ರತಿನಿಧಿಸಿದ್ದಾರೆ.ಉಜ್ಬೇಕಿಸ್ತಾನ್ ಗಣರಾಜ್ಯದ ಅಧ್ಯಕ್ಷರೊಂದಿಗೆ ಪ್ರಧಾನಮಂತ್ರಿ ಅವರ ಸಭೆ
December 01st, 09:36 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2023ರ ಡಿಸೆಂಬರ್ 1ರಂದು ಯುಎಇಯಲ್ಲಿ ನಡೆದ ಸಿಒಪಿ-28 ಶೃಂಗಸಭೆಯ ನೇಪಥ್ಯದಲ್ಲಿ ಉಜ್ಬೇಕಿಸ್ತಾನ್ ಗಣರಾಜ್ಯದ ಅಧ್ಯಕ್ಷ ಘನತೆವೆತ್ತ ಶ್ರೀ ಶೌಕತ್ ಮಿರ್ಜಿಯೋಯೆವ್ ಅವರನ್ನು ಭೇಟಿ ಮಾಡಿದರು.ಸ್ವೀಡನ್ ಸಾಮ್ರಾಜ್ಯದ ಪ್ರಧಾನಮಂತ್ರಿಯವರೊಂದಿಗೆ ಪ್ರಧಾನಮಂತ್ರಿ ಅವರ ಸಭೆ
December 01st, 08:32 pm
ರಕ್ಷಣೆ, ಸಂಶೋಧನೆ ಮತ್ತು ಅಭಿವೃದ್ಧಿ, ವ್ಯಾಪಾರ ಮತ್ತು ಹೂಡಿಕೆ ಮತ್ತು ಹವಾಮಾನ ಸಹಕಾರ ಸೇರಿದಂತೆ ತಮ್ಮ ದ್ವಿಪಕ್ಷೀಯ ಸಂಬಂಧಗಳ ವಿವಿಧ ಅಂಶಗಳ ಬಗ್ಗೆ ನಾಯಕರು ಫಲಪ್ರದ ಚರ್ಚೆ ನಡೆಸಿದರು. ಇಯು, ನಾರ್ಡಿಕ್ ಕೌನ್ಸಿಲ್ ಮತ್ತು ನಾರ್ಡಿಕ್ ಬಾಲ್ಟಿಕ್ 8 ಗ್ರೂಪ್ ಸೇರಿದಂತೆ ಪ್ರಾದೇಶಿಕ ಮತ್ತು ಬಹುಪಕ್ಷೀಯ ವಿಷಯಗಳ ಬಗ್ಗೆಯೂ ಅವರು ಚರ್ಚಿಸಿದರು.ಸಿಒಪಿ-28ರಲ್ಲಿ ಕೈಗಾರಿಕಾ ಪರಿವರ್ತನೆಗಾಗಿ ನಾಯಕತ್ವ ಗುಂಪಿನ ಎರಡನೇ ಹಂತಕ್ಕೆ ಭಾರತ ಮತ್ತು ಸ್ವೀಡನ್ ಜಂಟಿಯಾಗಿ ಆತಿಥ್ಯ ವಹಿಸಿವೆ
December 01st, 08:29 pm
ಭಾರತ ಮತ್ತು ಸ್ವೀಡನ್ ಉದ್ಯಮ ಪರಿವರ್ತನೆ ವೇದಿಕೆಯನ್ನು ಸಹ ಪ್ರಾರಂಭಿಸಿವೆ, ಇದು ಎರಡೂ ದೇಶಗಳ ಸರ್ಕಾರಗಳು, ಕೈಗಾರಿಕೆಗಳು, ತಂತ್ರಜ್ಞಾನ ಪೂರೈಕೆದಾರರು, ಸಂಶೋಧಕರು ಮತ್ತು ಚಿಂತಕರ ಚಾವಡಿಗಳನ್ನು ಸಂಪರ್ಕಿಸುತ್ತದೆ.ಸಿಒಪಿ-28 ಅಧ್ಯಕ್ಷೀಯ ಅಧಿವೇಶನ ಕಲಾಪದಲ್ಲಿ “ಹವಾಮಾನ ಬದಲಾವಣೆಗೆ ಹಣಕಾಸು ಪರಿವರ್ತನೆ” ವಿಷಯ ಕುರಿತು ಪ್ರಧಾನ ಮಂತ್ರಿ ಭಾಷಣ
December 01st, 08:06 pm
ಹವಾಮಾನ ಬದಲಾವಣೆಯ ವಿಷಯದಲ್ಲಿ ಭಾರತ ಸೇರಿದಂತೆ ಜಾಗತಿಕ ದಕ್ಷಿಣ ಭಾಗದ ಎಲ್ಲಾ ದೇಶಗಳ ಪಾತ್ರವು ತುಂಬಾ ಕಡಿಮೆ ಎಂಬುದು ನಮಗೆಲ್ಲರಿಗೂ ತಿಳಿದಿದೆ.ಸ್ವಿಸ್ ಒಕ್ಕೂಟದ ಅಧ್ಯಕ್ಷರೊಂದಿಗೆ ಪ್ರಧಾನ ಮಂತ್ರಿ ಸಭೆ
December 01st, 08:01 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅವರೊಂದಿಗೆ ಸ್ವಿಸ್ ಒಕ್ಕೂಟದ ಅಧ್ಯಕ್ಷರಾದ ಶ್ರೀ ಅಲೈನ್ ಬರ್ಸೆಟ್ ದ್ವಿಪಕ್ಷೀಯ ಸಭೆ ನಡೆಸಿದರು. , 1 ಡಿಸೆಂಬರ್ 2023 ರಂದು, ದುಬೈನಲ್ಲಿ COP 28ರ ನೇಪಥ್ಯದಲ್ಲಿ ಈ ಸಭೆ ನಡೆಸಿದರು.ಯುನೈಟೆಡ್ ಅರಬ್ ಎಮಿರೇಟ್ಸ್ ಅಧ್ಯಕ್ಷರೊಂದಿಗೆ ಪ್ರಧಾನಮಂತ್ರಿ ಸಭೆ
December 01st, 07:55 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 1 ಡಿಸೆಂಬರ್ 2023 ರಂದು ಯುಎಇಯಲ್ಲಿ COP-28 ಶೃಂಗಸಭೆಯ ಸಂದರ್ಭದಲ್ಲಿ ಯುನೈಟೆಡ್ ಅರಬ್ ಎಮಿರೇಟ್ಸ್ ಅಧ್ಯಕ್ಷರಾದ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.ಹವಾಮಾನ ಬದಲಾವಣೆಯ ಸಿಒಪಿ-28 ಶೃಂಗದ “ಕೈಗಾರಿಕಾ ಪರಿವರ್ತನೆಗೆ ನಾಯಕತ್ವ ಗುಂಪು” ಸಭೆ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
December 01st, 07:29 pm
ನಾವೆಲ್ಲರೂ ಸಾಮಾನ್ಯ ಬದ್ಧತೆ ಪ್ರದರ್ಶಿವು ಕಾರಣಕ್ಕಾಗಿ ಇಲ್ಲಿ ಸಂಪರ್ಕಿಸಿದ್ದೇವೆ – ಜಾಗತಿಕ ಇಂಗಾಲ ಹೊರಸೂಸುವಿಕೆಯನ್ನು ಶೂನ್ಯಕ್ಕೆ ತರುವ ಗುರಿಗಳನ್ನು ಸಾಧಿಸಲು ಸರ್ಕಾರ ಮತ್ತು ಉದ್ಯಮದ ನಡುವಿನ ಪಾಲುದಾರಿಕೆ ಬಹಳ ಮುಖ್ಯವಾಗಿದೆ.ಹವಾಮಾನ ಶೃಂಗಸಭೆಯಲ್ಲಿ (ಸಿಒಪಿ-28) 'ಗ್ರೀನ್ ಕ್ರೆಡಿಟ್ಸ್ ಕಾರ್ಯಕ್ರಮʼ ಕುರಿತ ಉನ್ನತ ಮಟ್ಟದ ಸಮಾವೇಶದಲ್ಲಿ ಪ್ರಧಾನಮಂತ್ರಿಯವರ ಹೇಳಿಕೆಗಳ ಕನ್ನಡ ಪಠ್ಯಾಂತರ
December 01st, 07:22 pm
ಈ ವಿಶೇಷ ಕಾರ್ಯಕ್ರಮಕ್ಕೆ ನಿಮ್ಮೆಲ್ಲರಿಗೂ ಹೃತ್ಪೂರ್ವಕ ಸ್ವಾಗತ.ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿಯವರೊಂದಿಗೆ ಪ್ರಧಾನ ಮಂತ್ರಿ ಸಭೆ
December 01st, 06:45 pm
ಭಾರತದ G20 ಪ್ರೆಸಿಡೆನ್ಸಿ ಅವಧಿಯಲ್ಲಿ UNSG ನೀಡಿದ ಬೆಂಬಲಕ್ಕಾಗಿ ಪ್ರಧಾನಮಂತ್ರಿ ಧನ್ಯವಾದಗಳನ್ನು ತಿಳಿಸಿದರು. ಹವಾಮಾನ ಗುರಿಗಳನ್ನು ಸಾಧಿಸುವಲ್ಲಿ ಭಾರತದ ಉಪಕ್ರಮಗಳು ಮತ್ತು ಪ್ರಗತಿಯನ್ನು ಅವರು ವಿವರಿಸಿದರು.ಇಸ್ರೇಲ್ ಅಧ್ಯಕ್ಷರೊಂದಿಗೆ ಪ್ರಧಾನ ಮಂತ್ರಿಯವರ ಸಭೆ
December 01st, 06:44 pm
ಇಸ್ರೇಲ್ ಹಮಾಸ್ ಸಂಘರ್ಷದ ಕುರಿತು ಉಭಯ ನಾಯಕರು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು. ಅಕ್ಟೋಬರ್ 7 ರ ಭಯೋತ್ಪಾದಕ ದಾಳಿಯಲ್ಲಿನ ಜೀವಹಾನಿಯ ಬಗ್ಗೆ ಪ್ರಧಾನಮಂತ್ರಿಯವರು ಸಂತಾಪ ವ್ಯಕ್ತಪಡಿಸಿದರು ಮತ್ತು ಒತ್ತೆಯಾಳುಗಳ ಬಿಡುಗಡೆಯನ್ನು ಸ್ವಾಗತಿಸಿದರು.ಹವಾಮಾನ ಬದಲಾವಣೆಯ ಶೃಂಗಸಭೆ(ಸಿಒಪಿ)-28ರ ರಾಷ್ಟ್ರಗಳ ಮುಖ್ಯಸ್ಥ(ಎಚ್ಒಎಸ್)ರು ಮತ್ತು ಸರ್ಕಾರಗಳ ಮುಖ್ಯಸ್ಥ(ಎಚ್ಒಜಿ)ರು ಪಾಲ್ಗೊಂಡಿದ್ದ ಉನ್ನತ ಮಟ್ಟದ ಸಭೆಯ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನ ಮಂತ್ರಿ ವಿಶೇಷ ಭಾಷಣ
December 01st, 03:55 pm
140 ಕೋಟಿ ಭಾರತೀಯರ ಪರವಾಗಿ ನಿಮಗೆಲ್ಲರಿಗೂ ನಮಸ್ಕಾರಗಳು! ಇಂದು, ಮೊದಲನೆಯದಾಗಿ ನಾನು ನಿಮ್ಮೆಲ್ಲರಿಗೂ ನನ್ನ ಕೃತಜ್ಞತೆಯನ್ನು ವ್ಯಕ್ತಪಡಿಸಲು ಬಯಸುತ್ತೇನೆ.PM Modi arrives in Dubai to attend the COP 28 Summit
November 30th, 11:30 pm
Prime Minister Narendra Modi arrived in Dubai to attend the COP 28 Summit. He will join special events including on climate finance, Green Credit initiative and LeadIT.ದುಬೈ 2020 ಎಕ್ಸ್ ಪೋ ದಲ್ಲಿ ಭಾರತೀಯ ಪೆವಿಲಿಯನ್ ನಲ್ಲಿದ್ದವರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
October 01st, 08:55 pm
ದುಬೈ 2020 ಎಕ್ಸ್ ಪೋ ದ ಭಾರತೀಯ ಪೆವಿಲಿಯನ್ ಗೆ ನಿಮಗೆ ಸ್ವಾಗತ. ಇದು ಐತಿಹಾಸಿಕ ಎಕ್ಸ್ ಪೋ. ಇದು ಮಧ್ಯ ಪೂರ್ವ, ಆಫ್ರಿಕಾ ಮತ್ತು ದಕ್ಷಿಣ ಏಷ್ಯಾ ಪ್ರಾಂತ್ಯದಲ್ಲಿ ನಡೆಯುತ್ತಿರುವ ಮೊದಲನೇಯದ್ದಾಗಿದೆ. ಭಾರತ ಅತಿ ದೊಡ್ಡ ಪೆವಿಲಿಯನ್ ನೊಂದಿಗೆ ಎಕ್ಸ್ ಪೋದಲ್ಲಿ ಭಾಗವಹಿಸುತ್ತಿದೆ. ಈ ಎಕ್ಸ್ ಪೋ ಸಂಯುಕ್ತ ಅರಬ್ ಎಮಿರೇಟ್ಸ್ ಮತ್ತು ದುಬೈ ನಡುವಿನ ನಮ್ಮ ಆಳವಾದ ಮತ್ತು ಐತಿಹಾಸಿಕ ಸಂಬಂಧಗಳನ್ನು ಮತ್ತಷ್ಟು ಬಲಪಡಿಸಲು ದೀರ್ಘ ಕಾಲದಲ್ಲಿ ನೆರವಾಗಲಿದೆ. ಯುಎಇ ಅಧ್ಯಕ್ಷರು ಮತ್ತು ಅಬು ಧಾಬಿಯ ದೊರೆ ಗೌರವಾನ್ವಿತ ಷೇಕ್ ಖಾಲೀಫಾ ಬಿನ್ ಜೈಯದ್ ಬಿನ್ ಅಲ್ ನಹ್ಯಾನ್ ಅವರಿಗೆ ಭಾರತದ ಜನತೆ ಮತ್ತು ಸರ್ಕಾರದ ಪರವಾಗಿ ಶುಭಾಶಯಗಳೊಂದಿಗೆ ಮಾತು ಆರಂಭಿಸೋಣ.ದುಬೈನ ಎಕ್ಸ್ ಪೋ 2020ರ ಭಾರತ ಪೆವಿಲಿಯನ್ ನಲ್ಲಿ ಪ್ರಧಾನಮಂತ್ರಿಯವರ ಸಂದೇಶ
October 01st, 08:54 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದುಬೈನ ಎಕ್ಸ್ ಪೋ -2020ಯ ಭಾರತ ಪೆವಿಲಿಯನ್ ಗೆ ನೀಡಿದ ಸಂದೇಶದಲ್ಲಿ, ಎಕ್ಸ್ ಪೋವನ್ನು ಐತಿಹಾಸಿಕ ಎಂದು ಬಣ್ಣಿಸಿದ್ದು ಇದು ಮಧ್ಯಪ್ರಾಚ್ಯ, ಆಫ್ರಿಕಾ ಮತ್ತು ದಕ್ಷಿಣ ಏಷ್ಯಾ ಪ್ರಾಂತ್ಯದಲ್ಲಿ ನಡೆಯುತ್ತಿರುವ ಮೊಟ್ಟ ಮೊದಲನೆಯದು ಎಂದು ತಿಳಿಸಿದ್ದಾರೆ. ಯುಎಇ ಮತ್ತು ದುಬೈ ಜೊತೆಗಿನ ನಮ್ಮ ಆಳವಾದ ಮತ್ತು ಐತಿಹಾಸಿಕ ಬಾಂಧವ್ಯಗಳನ್ನು ಇದು ಮತ್ತಷ್ಟು ಬಲಪಡಿಸುವಲ್ಲಿ ಬಹು ದೂರ ಹೋಗುತ್ತದೆ ಎಂಬ ವಿಶ್ವಾಸ ತಮಗಿದೆ ಎಂದು ತಿಳಿಸಿದ್ದಾರೆ. ಯುಎಇ ಅಧ್ಯಕ್ಷ ಮತ್ತು ಅಬುಧಾಬಿಯ ಆಡಳಿತಗಾರ ಘನತೆವೆತ್ತ ಶೇಖ್ ಖಲೀಫಾ ಬಿನ್ ಜಾಯೆದ್ ಬಿನ್ ಅಲ್ ನಹ್ಯಾನ್ ಮತ್ತು ಯುಎಇಯ ಪ್ರಧಾನಮಂತ್ರಿ ಮತ್ತು ಉಪಾಧ್ಯಕ್ಷ ಮತ್ತು ದುಬೈ ಆಡಳಿತಗಾರ ಘನತೆವೆತ್ತ ಶೇಖ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಮ್ ಅವರನ್ನು ಪ್ರಧಾನಮಂತ್ರಿಯವರು ಅಭಿನಂದಿಸಿದರು. ಅಬುಧಾಬಿಯ ರಾಜಕುಮಾರ ಘನತೆವೆತ್ತ ಶೇಖ್ ಮೊಹಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರಿಗೆ ಶುಭಾಶಯಗಳನ್ನು ಪ್ರಧಾನಮಂತ್ರಿಯವರು ತಿಳಿಸಿದರು, ನಮ್ಮ ವ್ಯೂಹಾತ್ಮಕ ಪಾಲುದಾರಿಕೆಯಲ್ಲಿ ನಾವು ಸಾಧಿಸಿದ ಪ್ರಗತಿಯಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ. ನಮ್ಮ ಎರಡೂ ದೇಶಗಳ ಪ್ರಗತಿ ಮತ್ತು ಏಳಿಗೆಗಾಗಿ ನಮ್ಮ ಕೆಲಸವನ್ನು ಮುಂದುವರಿಸಲು ನಾನು ಎದುರು ನೋಡುತ್ತಿದ್ದೇನೆ. ಎಂದು ತಿಳಿಸಿದ್ದಾರೆ.ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಅಬು ಧಾಬಿ ಯುವರಾಜ ಎಚ್ ಎಚ್ ಶೇಖ್ ಮೊಹಮ್ಮದ್ ಬಿನ್ ಝಾಯೆದ್ ಅಲ್ ನಹ್ಯಾನ್ ನಡುವೆ ದೂರವಾಣಿ ಸಂಭಾಷಣೆ
September 03rd, 10:27 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಬು ಧಾಬಿ ಯುವರಾಜ ಎಚ್.ಎಚ್. ಶೇಖ್ ಮೊಹಮ್ಮದ್ ಬಿನ್ ಝಾಯೆದ್ ಅಲ್ ನಹ್ಯಾನ್ ಅವರೊಂದಿಗೆ ದೂರವಾಣಿ ಮಾತುಕತೆ ನಡೆಸಿದರು. ಭಾರತ – ಸಂಯುಕ್ತ ಅರಬ್ ಎಮಿರೇಟ್ಸ್(ಯುಎಇ) ನಡುವಿನ ಸಮಗ್ರ ಕಾರ್ಯತಂತ್ರ ಪಾಲುದಾರಿಕೆ ಅಡಿ ವಿವಿಧ ವಲಯಗಳಲ್ಲಿ ಮಾಡಿಕೊಂಡಿರುವ ದ್ವಿಪಕ್ಷೀಯ ಸಹಕಾರದ ಮುಂದುವರಿದ ಪ್ರಗತಿ ಕುರಿತು ಉಭಯ ನಾಯಕರು ಸಕಾರಾತ್ಮಕ ಮೌಲ್ಯಮಾಪನ ನಡೆಸಿದರು.