ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಗೆ ಚಾಲನೆ ನೀಡಿ ಪ್ರಧಾನಿಯವರ ಭಾಷಣದ ಕನ್ನಡ ಅವತರಣಿಕೆ
September 10th, 12:01 pm
ಮೀನುಗಾರಿಕೆ, ಡೈರಿ, ಪಶುಸಂಗೋಪನೆ ಮತ್ತು ಕೃಷಿಯಲ್ಲಿನ ಅಧ್ಯಯನಗಳು ಮತ್ತು ಸಂಶೋಧನೆಗಳಿಗೆ ಸಂಬಂಧಿಸಿದ ನೂರಾರು ಕೋಟಿ ರೂಪಾಯಿ ಮೌಲ್ಯದ ಯೋಜನೆಗಳಿಗೆ ದೇಶಕ್ಕಾಗಿ, ಬಿಹಾರಕ್ಕಾಗಿ, ಹಳ್ಳಿಗಳ ಜೀವನವನ್ನು ಸುಧಾರಿಸಲು ಮತ್ತು ವ್ಯವಸ್ಥೆಯನ್ನು ಬಲಪಡಿಸಲು ಚಾಲನೆ ನೀಡಲಾಗಿದೆ. ಈ ಸಂದರ್ಭದಲ್ಲಿ ನಾನು ಬಿಹಾರದ ಎಲ್ಲ ಸಹೋದರ ಸಹೋದರಿಯರನ್ನು ಅಭಿನಂದಿಸುತ್ತೇನೆ.ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆ, ಇ-ಗೋಪಾಲ ಆ್ಯಪ್ ಮತ್ತು ಬಿಹಾರದಲ್ಲಿ ಹಲವು ಉಪಕ್ರಮಗಳಿಗೆ ಚಾಲನೆ ನೀಡಿದ ಪ್ರಧಾನಿ ನರೇಂದ್ರ ಮೋದಿ
September 10th, 12:00 pm
ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಇಂದು ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆ, ಇ-ಗೋಪಾಲ ಆ್ಯಪ್ ಮತ್ತು ಬಿಹಾರದಲ್ಲಿ ಮೀನುಗಾರಿಕೆ ಉತ್ಪಾದನೆ, ಡೈರಿ, ಪಶುಸಂಗೋಪನೆ ಮತ್ತು ಕೃಷಿಯಲ್ಲಿನ ಅಧ್ಯಯನಗಳು ಮತ್ತು ಸಂಶೋಧನೆಗಳಿಗೆ ಸಂಬಂಧಿಸಿದ ಹಲವಾರು ಉಪಕ್ರಮಗಳಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಚಾಲನೆ ನೀಡಿದರು.ಸೆಪ್ಟೆಂಬರ್ 10ರಂದು ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆ ಉದ್ಘಾಟಿಸಲಿರುವ ಪ್ರಧಾನಿ
September 09th, 01:58 pm
ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 10 ರಂದು ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆ (ಪಿಎಂಎಂಎಸ್.ವೈ) ಗೆ ಡಿಜಿಟಲ್ ಮೂಲಕ ಚಾಲನೆ ನೀಡಲಿದ್ದಾರೆ. ರೈತರ ನೇರ ಬಳಕೆಗಾಗಿ ಸಮಗ್ರ ತಳಿ ಸುಧಾರಣಾ ಮಾರುಕಟ್ಟೆ ಮತ್ತು ಮಾಹಿತಿ ಪೋರ್ಟಲ್ ಇ-ಗೋಪಾಲ ಆಪ್ ಅನ್ನೂ ಪ್ರಧಾನಮಂತ್ರಿ ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಬಿಹಾರದಲ್ಲಿ ಮೀನುಗಾರಿಕೆ ಮತ್ತು ಪಶುಸಂಗೋಪನಾ ಕ್ಷೇತ್ರಗಳಲ್ಲಿ ಹಲವಾರು ಇತರ ಉಪಕ್ರಮಗಳಿಗೂ ಪ್ರಧಾನಮಂತ್ರಿ ಚಾಲನೆ ನೀಡಲಿದ್ದಾರೆ.