ವಾರಣಾಸಿಯಲ್ಲಿ ಆರ್‌ ಜೆ ಶಂಕರ ಕಣ್ಣಿನ ಆಸ್ಪತ್ರೆ ಉದ್ಘಾಟಿಸಿದ ಪ್ರಧಾನ ಮಂತ್ರಿಗಳ ಭಾಷಣದ ಇಂಗ್ಲಿಷ್‌ ಅವತರಿಣಿಕೆ

October 20th, 02:21 pm

ಶ್ರೀ ಕಂಚಿ ಕಾಮಕೋಟಿ ಪೀಠದ ಶಂಕರಾಚಾರ್ಯ, ಪೂಜ್ಯ ಜಗದ್ಗುರುಗಳಾದ ಶ್ರೀ ಶಂಕರ ವಿಜಯೇಂದ್ರ ಸರಸ್ವತಿ; ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್; ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್; ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್; ಶಂಕರ ನೇತ್ರ ಪ್ರತಿಷ್ಠಾನದ ಆರ್.ವಿ.ರಮಣಿ; ಡಾ.ಎಸ್.ವಿ. ಬಾಲಸುಬ್ರಮಣ್ಯಂ; ಶ್ರೀ ಮುರಳಿ ಕೃಷ್ಣಮೂರ್ತಿ; ರೇಖಾ ಜುಂಜುನ್‌ವಾಲಾ; ಮತ್ತು ಸಂಸ್ಥೆಯ ಎಲ್ಲಾ ಇತರ ಗೌರವಾನ್ವಿತ ಸದಸ್ಯರೇ, ಮಹಿಳೆಯರೇ ಮತ್ತು ಮಹನೀಯರೇ!

ಉತ್ತರ ಪ್ರದೇಶದ ವಾರಣಾಸಿಯಲ್ಲಿ ಆರ್ ಜೆ ಶಂಕರ ಕಣ್ಣಿನ ಆಸ್ಪತ್ರೆಯನ್ನು ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

October 20th, 02:15 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ವಾರಣಾಸಿಯಲ್ಲಿ ಆರ್.ಜೆ.ಶಂಕರ ಕಣ್ಣಿನ ಆಸ್ಪತ್ರೆಯನ್ನು ಉದ್ಘಾಟಿಸಿದರು. ಆಸ್ಪತ್ರೆಯು ವಿವಿಧ ಕಣ್ಣಿನ ಪರಿಸ್ಥಿತಿಗಳಿಗೆ ಸಮಗ್ರ ಸಮಾಲೋಚನೆಗಳು ಮತ್ತು ಚಿಕಿತ್ಸೆಗಳನ್ನು ನೀಡುತ್ತದೆ. ಈ ಸಂದರ್ಭದಲ್ಲಿ ಪ್ರದರ್ಶಿಸಲಾದ ವಸ್ತುಪ್ರದರ್ಶನವನ್ನೂ ಶ್ರೀ ಮೋದಿ ಅವರು ವೀಕ್ಷಿಸಿದರು.

ಜಿ 20 ಆರೋಗ್ಯ ಸಚಿವರ ಸಭೆಯಲ್ಲಿ ಪ್ರಧಾನಮಂತ್ರಿಯವರ ವಿಡಿಯೋ ಸಂದೇಶದ ಪಠ್ಯ

August 18th, 02:15 pm

ಭಾರತದ 1.4 ಶತಕೋಟಿ ಜನರ ಪರವಾಗಿ, ನಾನು ನಿಮಗೆ ಭಾರತಕ್ಕೆ ಮತ್ತು ನನ್ನ ತವರು ರಾಜ್ಯ ಗುಜರಾತ್ ಗೆ ಬಹಳ ಆತ್ಮೀಯ ಸ್ವಾಗತವನ್ನು ಕೋರುತ್ತೇನೆ. ನಿಮ್ಮನ್ನು ಸ್ವಾಗತಿಸಲು ನನ್ನೊಂದಿಗೆ 2.4 ಮಿಲಿಯನ್ ವೈದ್ಯರು, 3.5 ಮಿಲಿಯನ್ ದಾದಿಯರು, 1.3 ಮಿಲಿಯನ್ ಅರೆವೈದ್ಯಕೀಯ ಕ್ಷೇತ್ರದ ತಜ್ಞರು, 1.6 ಮಿಲಿಯನ್ ಫಾರ್ಮಾಸಿಸ್ಟ್ ಗಳು ಮತ್ತು ಭಾರತದ ಆರೋಗ್ಯ ಕ್ಷೇತ್ರದಲ್ಲಿ ತೊಡಗಿರುವ ಲಕ್ಷಾಂತರ ಇತರರು ಸೇರಿದ್ದಾರೆ.

PM addresses G20 Health Ministers’ Meeting

August 18th, 01:52 pm

PM Modi addressed the G20 Health Ministers’ Meet held in Gandhinagar, Gujarat via video message. He underlined that the Covid-19 pandemic has reminded us that health should be at the center of our decisions. He said that time also showed us the value of international cooperation, whether in medicine and vaccine deliveries or in bringing our people back home

The India of today is moving forward in every direction that is necessary to become a tech leader: PM Modi

May 11th, 11:00 am

PM Modi inaugurated the programme marking National Technology Day 2023. PM Modi stated “The Tinker-preneurs of India will soon become leading entrepreneurs of the world” and that the India of today is moving forward in every direction that is necessary to become a tech leader.

ನವದೆಹಲಿಯಲ್ಲಿ ಮೇ 11ರಂದು ರಾಷ್ಟ್ರೀಯ ತಂತ್ರಜ್ಞಾನ ದಿನ 2023ರ ಕಾರ್ಯಕ್ರಮ ವನ್ನು ಉದ್ಘಾಟಿಸಿದ ಪ್ರಧಾನಮಂತ್ರಿ

May 11th, 10:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಪ್ರಗತಿ ಮೈದಾನದಲ್ಲಿ ರಾಷ್ಟ್ರೀಯ ತಂತ್ರಜ್ಞಾನ ದಿನ 2023 ರ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಕಾರ್ಯಕ್ರಮವು ಮೇ 11 ರಿಂದ 14 ರವರೆಗೆ ನಡೆಯಲಿರುವ ರಾಷ್ಟ್ರೀಯ ತಂತ್ರಜ್ಞಾನ ದಿನದ 25 ನೇ ವರ್ಷದ ಆಚರಣೆಯ ಪ್ರಾರಂಭವನ್ನು ಗುರುತಿಸಿತು. ಈ ಮಹತ್ವದ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ದೇಶದಲ್ಲಿ 5800 ಕೋಟಿ ರೂ.ಗೂ ಅಧಿಕ ಮೌಲ್ಯದ ವೈಜ್ಞಾನಿಕ ಮತ್ತು ತಾಂತ್ರಿಕ ಪ್ರಗತಿಗೆ ಸಂಬಂಧಿಸಿದ ಹಲವು ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು. ಇದು ದೇಶದಲ್ಲಿ ವೈಜ್ಞಾನಿಕ ಸಂಸ್ಥೆಗಳನ್ನು ಬಲಪಡಿಸುವ ಮೂಲಕ ಆತ್ಮನಿರ್ಭರ ಭಾರತದ ಪ್ರಧಾನಮಂತ್ರಿಯವರ ದೃಷ್ಟಿಕೋನಕ್ಕೆ ಅನುಗುಣವಾಗಿದೆ.

Our government is modernizing India's health sector according to the needs of the 21st century: PM Modi

April 14th, 12:45 pm

The Prime Minister, Shri Narendra Modi laid the foundation stone and dedicated to the nation various projects worth more than Rs. 3,400 crores in Guwahati, Assam today. The Prime Minister dedicated AIIMS Guwahati and three other medical colleges to the nation. He also laid the foundation stone of Assam Advanced Health Care Innovation Institute (AAHII) and launched ‘Aapke Dwar Ayushman’ campaign by distributing Ayushman Bharat Pradhan Mantri Jan Arogya Yojana (AB-PMJAY) cards to eligible beneficiaries.

​​​​​​​ಅಸ್ಸಾಂನ ಗುವಾಹಟಿಯಲ್ಲಿ 3,400 ಕೋಟಿ ರೂ.ಗೂ ಅಧಿಕ ಮೌಲ್ಯದ ಯೋಜನೆಗಳ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಲೋಕಾರ್ಪಣೆ ನೆರವೇರಿಸಿದ ಪ್ರಧಾನಿ

April 14th, 12:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಸ್ಸಾಂನ ಗುವಾಹಟಿಯಲ್ಲಿ 3,400 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ವಿವಿಧ ಯೋಜನೆಗಳ ಶಂಕುಸ್ಥಾಪನೆ/ಲೋಕಾರ್ಪಣೆ ನೆರವೇರಿಸಿದರು. ʻಏಮ್ಸ್ʼ ಗುವಾಹಟಿ ಮತ್ತು ಇತರ ಮೂರು ವೈದ್ಯಕೀಯ ಕಾಲೇಜುಗಳನ್ನು ಪ್ರಧಾನಮಂತ್ರಿಯವರು ದೇಶಕ್ಕೆ ಸಮರ್ಪಿಸಿದರು. ಅವರು ʻಅಸ್ಸಾಂ ಅತ್ಯಾಧುನಿಕ ಆರೋಗ್ಯ ಸೇವೆ ಸಂಶೋಧನಾ ಸಂಸ್ಥೆʼಗೆ(ಎಎಎಚ್ಐಐ) ಶಂಕುಸ್ಥಾಪನೆ ನೆರವೇರಿಸಿದರು. ಜೊತೆಗೆ ʻಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆʼ(ಎಬಿ-ಪಿಎಂಜೆಎವೈ) ಕಾರ್ಡ್‌ಗಳನ್ನು ಅರ್ಹ ಫಲಾನುಭವಿಗಳಿಗೆ ವಿತರಿಸುವ ಮೂಲಕ 'ಆಪ್‌ ಕೆ ದ್ವಾರ್ ಆಯುಷ್ಮಾನ್' ಅಭಿಯಾನಕ್ಕೆ ಚಾಲನೆ ನೀಡಿದರು.

ʻಇಂಡಿಯಾ ಟುಡೇ ಕಾನ್‌ಕ್ಲೇವ್ʼನಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅನುವಾದ

March 18th, 11:17 pm

`ಇಂಡಿಯಾ ಟುಡೇ ಕಾನ್‌ಕ್ಲೇವ್‌ʼನಲ್ಲಿ ನಮ್ಮೊಂದಿಗಿರುವ ಎಲ್ಲ ಗಣ್ಯರಿಗೆ ಶುಭಾಶಯಗಳು! ಡಿಜಿಟಲ್ ಮಾಧ್ಯಮದ ಮೂಲಕ ನಮ್ಮೊಂದಿಗೆ ಸೇರಿದ ಭಾರತ ಮತ್ತು ವಿದೇಶಗಳ ವೀಕ್ಷಕರು ಮತ್ತು ಓದುಗರಿಗೆ ಶುಭಾಶಯಗಳು. ಈ ಸಮಾವೇಶದ ವಿಷಯ - ʻಭಾರತದ ಘಳಿಗೆʼ (ದಿ ಇಂಡಿಯಾ ಮೂಮೆಂಟ್) ಎಂಬುದನ್ನು ತಿಳಿದು ನನಗೆ ಸಂತೋಷವಾಗಿದೆ. ಇಂದು, ವಿಶ್ವದ ಪ್ರಮುಖ ಅರ್ಥಶಾಸ್ತ್ರಜ್ಞರು, ವಿಶ್ಲೇಷಕರು, ಚಿಂತಕರು ಇದು ʻಭಾರತದ ಘಳಿಗೆʼ ಎಂದು ಒಗ್ಗಟ್ಟಿನಿಂದ ಹೇಳುತ್ತಿದ್ದಾರೆ. ಆದರೆ ʻಇಂಡಿಯಾ ಟುಡೇ ಸಮೂಹʼವು ಈ ಆಶಾವಾದವನ್ನು ವ್ಯಕ್ತಪಡಿಸಿರುವುದು 'ಮತ್ತಷ್ಟು ವಿಶೇಷ'ವಾಗಿದೆ. ಅಂದಹಾಗೆ, 20 ತಿಂಗಳ ಹಿಂದೆ ನಾನು ಕೆಂಪು ಕೋಟೆಯಿಂದ ಮಾಡಿದ ಭಾಷಣದ ವೇಳೆ – ಭಾರತಕ್ಕೆ ʻಇದು ಸರಿಯಾದ ಸಮಯ, ಇದೇ ಸಮಯʼ ಎಂದು ಹೇಳಿದ್ದೆ. ಆದರೆ ಈ ಸ್ಥಾನವನ್ನು ತಲುಪಲು 20 ತಿಂಗಳುಗಳು ಬೇಕಾಯಿತು. ಆಗಲೂ - ʻಇದು ಭಾರತದ ಘಳಿಗೆʼ ಎಂಬುದೇ ಸ್ಫೂರ್ತಿಯಾಗಿತ್ತು.

ʻಇಂಡಿಯಾ ಟುಡೇ ಕಾನ್‌ಕ್ಲೇವ್‌ʼ ಉದ್ದೇಶಿಸಿ ಪ್ರಧಾನಿ ಭಾಷಣ

March 18th, 08:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ `ಹೋಟೆಲ್ ತಾಜ್ ಪ್ಯಾಲೇಸ್’ನಲ್ಲಿ ನಡೆದ `ಇಂಡಿಯಾ ಟುಡೇ ಕಾನ್‌ಕ್ಲೇವ್‌ʼ ಉದ್ದೇಶಿಸಿ ಮಾತನಾಡಿದರು.

ತಂತ್ರಜ್ಞಾನವು ಜನರ ಜೀವನದ ಮೇಲೆ ಧನಾತ್ಮಕ ಪರಿಣಾಮ ಬೀರುತ್ತಿದ್ದು, ನಾಗರಿಕರನ್ನು ಸಬಲೀಕರಣಗೊಳಿಸುತ್ತಿದೆ: ಪ್ರಧಾನಿ ನರೇಂದ್ರ ಮೋದಿ

March 06th, 09:07 pm

ತಂತ್ರಜ್ಞಾನವು ಜನರ ಜೀವನದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತಿದ್ದು, ನಾಗರಿಕರನ್ನು ಸಬಲೀಕರಣಗೊಳಿಸುತ್ತಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ರಾಜ್ಯಸಭಾ ಸದಸ್ಯ ಶ್ರೀ ನಬಮ್ ರೆಬಿಯಾ ಅವರ ಟ್ವೀಟ್ ಗೆ ಪ್ರಧಾನಿ ಮೋದಿಯವರು ಪ್ರತಿಕ್ರಿಯಿಸಿ ಈ ರೀತಿ ಬರೆದಿದ್ದಾರೆ. ಶ್ರೀ ನಬಮ್ ರೆಬಿಯಾ ಅವರು ಟ್ವೀಟ್ ಮಾಡಿ, ಸರ್ಕಾರದ 'ಡಿಜಿಟಲ್ ಇಂಡಿಯಾ'ಯೋಜನೆ ಪ್ರಾರಂಭವಾಗುವ ಮುನ್ನ ಅರುಣಾಚಲ ಪ್ರದೇಶದ ಶೇರ್ಗಾಂವ್ ಗ್ರಾಮ ಕೇವಲ ಒಂದು ಮೊಬೈಲ್ ಸೇವಾ ಪೂರೈಕೆದಾರರನ್ನು ಹೊಂದಿತ್ತು. ಈಗ ಇಲ್ಲಿ 3 ಮೊಬೈಲ್ ಸೇವಾ ಪೂರೈಕೆದಾರರು ಇದ್ದು ನಾಗರಿಕರಿಗೆ ತಂತ್ರಜ್ಞಾನದಿಂದ ಬಹಳ ಸಹಕಾರಿಯಾಗಿದೆ ಎಂದು ಅಲ್ಲಿನ ಬೆಳವಣಿಗೆ ಬಗ್ಗೆ ಬೆಳಕು ಚೆಲ್ಲಿದ್ದಾರೆ.

'ಆರೋಗ್ಯ ಮತ್ತು ವೈದ್ಯಕೀಯ ಸಂಶೋಧನೆ' ಕುರಿತ ಬಜೆಟ್ ನಂತರದ ವೆಬಿನಾರ್‌ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ

March 06th, 10:30 am

ಕೋವಿಡ್ ಪೂರ್ವ ಮತ್ತು ಸಾಂಕ್ರಾಮಿಕ ನಂತರದ ಕಾಲಘಟ್ಟದಲ್ಲಿ ಆರೋಗ್ಯ ಸಂರಕ್ಷಣಾ ವಲಯವನ್ನು ಗಮನಿಸಿದರೆ ಸಾಂಕ್ರಾಮಿಕ ಸೋಂಕು ಕಾಣಿಸಿಕೊಂಡ ಸಂದರ್ಭದಲ್ಲಿ ಸಮೃದ್ಧ ದೇಶಗಳ ಅಭಿವೃದ್ಧಿ ಹೊಂದಿದ ಆರೋಗ್ಯ ವ್ಯವಸ್ಥೆಗಳು ಸಹ ಕುಸಿಯುತ್ತವೆ ಎಂಬುದನ್ನು ಕೊರೊನ ಜಗತ್ತಿಗೆ ತೋರಿಸಿದೆ ಮತ್ತು ಪಾಠ ಕಲಿಸಿದೆ ಎಂಬುದನ್ನು ಕಾಣಬಹುದು. ಹಾಗಾಗಿ, ಆರೋಗ್ಯ ಸಂರಕ್ಷಣೆಯ ಮೇಲೆ ಇಡೀ ವಿಶ್ವದ ಗಮನವು ಹಿಂದೆಂದಿಗಿಂತಲೂ ಹೆಚ್ಚಾಗಿದೆ, ಆದರೆ ಭಾರತದ ವಿಧಾನವು ಆರೋಗ್ಯ ರಕ್ಷಣೆಗೆ ಮಾತ್ರ ಸೀಮಿತವಾಗಿಲ್ಲ. ಬದಲಾಗಿ, ನಾವು ಒಂದು ಹೆಜ್ಜೆ ಮುಂದೆ ಹೋಗುತ್ತಿದ್ದೇವೆ. ಒಟ್ಟಾರೆ ಸ್ವಾಸ್ಥ್ಯಕ್ಕಾಗಿ ಕೆಲಸ ಮಾಡುತ್ತಿದ್ದೇವೆ. ಆದ್ದರಿಂದ, ನಾವು ಇಡೀ ವಿಶ್ವದ ಮುಂದೆ ಒಂದು ದೃಷ್ಟಿಯನ್ನು ಮುಂದಿಟ್ಟಿದ್ದೇವೆ. ಅದೇ 'ಒಂದು ಭೂಮಿ-ಒಂದು ಆರೋಗ್ಯ'. ಮಾನವರು, ಪ್ರಾಣಿಗಳು ಅಥವಾ ಸಸ್ಯಗಳಾಗಿದ್ದರೂ ಸಕಲ ಜೀವರಾಶಿಗಳ ಸಮಗ್ರ ಆರೋಗ್ಯ ರಕ್ಷಣೆಗೆ ನಾವು ಒತ್ತು ನೀಡುತ್ತಿದ್ದೇವೆ ಎಂದರ್ಥ. ಕೊರೊನಾ ಜಾಗತಿಕ ಸಾಂಕ್ರಾಮಿಕವು ಪೂರೈಕೆ ಸರಪಳಿಯ ಪ್ರಾಮುಖ್ಯವನ್ನು ಸಹ ಒತ್ತಿಹೇಳಿದೆ. ಸಾಂಕ್ರಾಮಿಕ ರೋಗವು ಉತ್ತುಂಗದಲ್ಲಿದ್ದಾಗ, ಔಷಧಿಗಳು, ಲಸಿಕೆಗಳು ಮತ್ತು ವೈದ್ಯಕೀಯ ಸಾಧನಗಳಂತಹ ಜೀವ ಉಳಿಸುವ ವಸ್ತುಗಳು ದುರದೃಷ್ಟವಶಾತ್ ಕೆಲವು ದೇಶಗಳಿಗೆ ಆಯುಧಗಳಾಗಿವೆ. ಕಳೆದ ಕೆಲವು ವರ್ಷಗಳ ಬಜೆಟ್‌ನಲ್ಲಿ ಭಾರತವು ಈ ಎಲ್ಲ ವಿಷಯಗಳ ಬಗ್ಗೆ ಹೆಚ್ಚಿನ ಗಮನ ನೀಡಿದೆ. ವಿದೇಶಗಳ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ನಾವು ನಿರಂತರವಾಗಿ ಪ್ರಯತ್ನಿಸುತ್ತಿದ್ದೇವೆ. ಆದ್ದರಿಂದ, ಈ ನಿಟ್ಟಿನಲ್ಲಿ ಎಲ್ಲ ಪಾಲುದಾರರು ಪ್ರಮುಖ ಪಾತ್ರವನ್ನು ವಹಿಸಬೇಕು.

ಆರೋಗ್ಯ ಮತ್ತು ವೈದ್ಯಕೀಯ ಸಂಶೋಧನೆ ಕುರಿತ ಬಜೆಟೋತ್ತರ ವೆಬಿನಾರ್ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

March 06th, 10:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 'ಆರೋಗ್ಯ ಮತ್ತು ವೈದ್ಯಕೀಯ ಸಂಶೋಧನೆ' ವಿಷಯದ ಕುರಿತ ಬಜೆಟ್ ನಂತರದ ವೆಬಿನಾರ್ ಉದ್ದೇಶಿಸಿ ಭಾಷಣ ಮಾಡಿದರು. ಕೇಂದ್ರ ಬಜೆಟ್ 2023ರಲ್ಲಿ ಘೋಷಿಸಲಾದ ಉಪಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಆಲೋಚನೆಗಳು ಮತ್ತು ಸಲಹೆಗಳನ್ನು ಪಡೆಯಲು ಸರ್ಕಾರ ಆಯೋಜಿಸುತ್ತಿರುವದ 12 ಬಜೆಟ್ ನಂತರದ ವೆಬಿನಾರ್ ಗಳ ಸರಣಿಯಲ್ಲಿ ಇದು ಒಂಬತ್ತನೆಯದು.

‘ಮನ್ ಕಿ ಬಾತ್’ ಸಾರ್ವಜನಿಕ ಸಹಭಾಗಿತ್ವದ ಅಭಿವ್ಯಕ್ತಿಗೆ ಅದ್ಭುತ ಮಾಧ್ಯಮವಾಗಿದೆ: ಪ್ರಧಾನಿ ಮೋದಿ

February 26th, 11:00 am

ಸ್ನೇಹಿತರೇ, ಇಂದು ಈ ಸಂದರ್ಭದಲ್ಲಿ ನನಗೆ ಲತಾ ಮಂಗೇಶ್ಕರ್, ಲತಾ ದೀದಿಯ ನೆನಪು ಬರುವುದು ಬಹಳ ಸಹಜವಾಗಿದೆ. ಏಕೆಂದರೆ ಈ ಸ್ಪರ್ಧೆ ಪ್ರಾರಂಭವಾದಾಗ, ಲತಾ ಅವರು ದೇಶದ ಜನತೆ ಈ ಸ್ಪರ್ಧೆಯಲ್ಲಿ ಖಂಡಿತವಾಗಿಯೂ ಪಾಲ್ಗೊಳ್ಳಬೇಕೆಂದು ಟ್ವೀಟ್ ಮೂಲಕ ಮನವಿ ಮಾಡಿದ್ದರು.