ನವದೆಹಲಿಯಲ್ಲಿ ಕರ್ತವ್ಯ ಪಥ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಕನ್ನಡ ಅನುವಾದ

September 08th, 10:41 pm

ಇಡೀ ದೇಶವೇ ಇಂದಿನ ಈ ಐತಿಹಾಸಿಕ ಕಾರ್ಯಕ್ರಮವನ್ನು ನೋಡುತ್ತಿದೆ, ದೇಶವಾಸಿಗಳೆಲ್ಲ ಈ ಕಾರ್ಯಕ್ರಮದಲ್ಲಿ ಸೇರಿದ್ದಾರೆ. ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗುತ್ತಿರುವ ಎಲ್ಲಾ ದೇಶವಾಸಿಗಳನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ ಮತ್ತು ಅಭಿನಂದಿಸುತ್ತೇನೆ. ಈ ಐತಿಹಾಸಿಕ ಕ್ಷಣದಲ್ಲಿ, ನನ್ನ ಸಂಪುಟದ ಸಹೋದ್ಯೋಗಿಗಳಾದ ಶ್ರೀ ಹರ್ದೀಪ್ ಪುರಿ, ಶ್ರೀ ಜಿ ಕಿಶನ್ ರೆಡ್ಡಿ, ಶ್ರೀ ಅರ್ಜುನ್ ರಾಮ್ ಮೇಘವಾಲ್, ಶ್ರೀಮತಿ ಮೀನಾಕ್ಷಿ ಲೇಖಿ ಮತ್ತು ಶ್ರೀ ಕೌಶಲ್ ಕಿಶೋರ್ ಕೂಡ ಇಂದು ನನ್ನೊಂದಿಗೆ ವೇದಿಕೆಯಲ್ಲಿದ್ದಾರೆ. ನಾಡಿನ ಹಲವು ಗಣ್ಯರು ಕೂಡ ಇಲ್ಲಿದ್ದಾರೆ.

PM inaugurates 'Kartavya Path' and unveils the statue of Netaji Subhas Chandra Bose at India Gate

September 08th, 07:00 pm

PM Modi inaugurated Kartavya Path and unveiled the statue of Netaji Subhas Chandra Bose. Kingsway i.e. Rajpath, the symbol of colonialism, has become a matter of history from today and has been erased forever. Today a new history has been created in the form of Kartavya Path, he said.

ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಕಾರ್ಮಿಕ ಮಂತ್ರಿಗಳ ರಾಷ್ಟ್ರೀಯ ಕಾರ್ಮಿಕ ಸಮ್ಮೇಳನದಲ್ಲಿ ಪ್ರಧಾನಮಂತ್ರಿಯವರ ಭಾಷಣ

August 25th, 04:31 pm

ಚಂಡೀಗಢದ ಆಡಳಿತಾಧಿಕಾರಿ ಶ್ರೀ ಬನ್ವಾರಿ ಲಾಲ್ ಪುರೋಹಿತ್ ಜಿ, ಕೇಂದ್ರ ಸಚಿವ ಸಂಪುಟದಲ್ಲಿ ನನ್ನ ಸಹೋದ್ಯೋಗಿಗಳಾದ ಶ್ರೀ ಭೂಪೇಂದರ್ ಯಾದವ್ ಜಿ ಮತ್ತು ಶ್ರೀ ರಾಮೇಶ್ವರ ತೇಲಿ ಜಿ, ಎಲ್ಲಾ ರಾಜ್ಯಗಳ ಗೌರವಾನ್ವಿತ ಕಾರ್ಮಿಕ ಮಂತ್ರಿಗಳು, ಕಾರ್ಮಿಕ ಕಾರ್ಯದರ್ಶಿಗಳು, ಇತರ ಗಣ್ಯರು, ಮಹಿಳೆಯರೇ ಮತ್ತು ಮಹನೀಯರೆ! ಮೊದಲನೆಯದಾಗಿ, ನಾನು ಭಗವಾನ್ ತಿರುಪತಿ ಬಾಲಾಜಿಯ ಪಾದಗಳಿಗೆ ನಮಸ್ಕರಿಸಲು ಬಯಸುತ್ತೇನೆ. ನೀವೆಲ್ಲರೂ ಇರುವ ಪವಿತ್ರ ಸ್ಥಳವು ಭಾರತದ ಶ್ರಮ ಮತ್ತು ಸಾಮರ್ಥ್ಯಕ್ಕೆ ಸಾಕ್ಷಿಯಾಗಿದೆ. ಈ ಸಮ್ಮೇಳನದಿಂದ ಹೊರಹೊಮ್ಮುವ ವಿಚಾರಗಳು ದೇಶದ ಕಾರ್ಮಿಕ ಶಕ್ತಿಯನ್ನು ಬಲಪಡಿಸುತ್ತದೆ ಎಂದು ನನಗೆ ಖಾತ್ರಿಯಿದೆ. ಈ ಕಾರ್ಯಕ್ರಮವನ್ನು ಆಯೋಜಿಸಿದ್ದಕ್ಕಾಗಿ ನಾನು ನಿಮ್ಮೆಲ್ಲರನ್ನು ಮತ್ತು ವಿಶೇಷವಾಗಿ ಕಾರ್ಮಿಕ ಸಚಿವಾಲಯವನ್ನು ಅಭಿನಂದಿಸುತ್ತೇನೆ.

ರಾಷ್ಟ್ರೀಯ ಕಾರ್ಮಿಕ ಸಮ್ಮೇಳನದಲ್ಲಿ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಕಾರ್ಮಿಕ ಸಚಿವರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ

August 25th, 04:09 pm

ಪ್ರಧಾನಮಂತ್ರಿ ಅವರು ತಿರುಪತಿ ಬಾಲಾಜಿಗೆ ನಮಿಸುವ ಮೂಲಕ ತಮ್ಮ ಭಾಷಣ ಆರಂಭಿಸಿದರು. ಭಾರತದ ಕನಸುಗಳನ್ನು ನನಸು ಮಾಡಲು ಭಾರತದ ಕಾರ್ಮಿಕ ಶಕ್ತಿಯದ್ದು ಬಹುದೊಡ್ಡ ಪಾತ್ರವಿದೆ ಮತ್ತು ಅಮೃತ ಕಾಲದ ನಿರೀಕ್ಷೆಗಳಂತೆ ರಾಷ್ಟ್ರಕಟ್ಟಬೇಕಿದೆ. ಈ ಆಲೋಚನೆಯಲ್ಲಿ ಸಂಘಟಿತ ಮತ್ತು ಅಸಂಘಟಿತ ವಲಯದ ಕೋಟ್ಯಂತರ ಕಾರ್ಮಿಕರು ನಿರಂತರವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಒತ್ತಿ ಹೇಳಿದರು.