ರೋಜ್‌ಗಾರ್ ಮೇಳದ ಅಡಿ ಹೊಸದಾಗಿ ಸೇರ್ಪಡೆ ಆದ ಸುಮಾರು 70,000 ಉದ್ಯೋಗಾಕಾಂಕ್ಷಿಗಳಿಗೆ ನೇಮಕಾತಿ ಪತ್ರ ವಿತರಿಸಿದ ಪ್ರಧಾನ ಮಂತ್ರಿ ಅವರಿಂದ ವಿಡಿಯೋ ಕಾನ್ಫರೆನ್ಸಿಂಗ್ ಭಾಷಣ
June 13th, 11:00 am
ರಾಷ್ಟ್ರೀಯ ಮಟ್ಟದ 'ರೋಜ್‌ಗಾರ್ ಮೇಳಗಳು' ಅಥವಾ ಉದ್ಯೋಗ ಮೇಳಗಳು ಎನ್ ಡಿಎ ಮತ್ತು ಬಿಜೆಪಿ ಸರ್ಕಾರದ ಹೊಸ ಗುರುತಾಗಿವೆ. ಇಂದು ಮತ್ತೊಮ್ಮೆ 70 ಸಾವಿರಕ್ಕೂ ಹೆಚ್ಚು ಯುವಕರು ನೇಮಕಾತಿ ಪತ್ರ ಪಡೆದಿದ್ದಾರೆ. ಬಿಜೆಪಿ ಆಡಳಿತವಿರುವ ಎಲ್ಲಾ ರಾಜ್ಯಗಳಲ್ಲಿ ಇಂತಹ ರೋಜ್‌ಗಾರ್ ಮೇಳಗಳನ್ನು ಆಯೋಜಿಸುತ್ತಿರುವುದು ನನಗೆ ಖುಷಿ ತಂದಿದೆ. ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಉದ್ಯೋಗಗಳನ್ನು ಪಡೆಯುತ್ತಿರುವವರಿಗೆ ಇದು ಅತ್ಯಂತ ನಿರ್ಣಾಯಕ ಸಮಯ.ʻರಾಷ್ಟ್ರೀಯ ಉದ್ಯೋಗ ಮೇಳʼ ಉದ್ದೇಶಿಸಿ ಪ್ರಧಾನಿ ಭಾಷಣ
June 13th, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ `ರಾಷ್ಟ್ರೀಯ ಉದ್ಯೋಗ ಮೇಳʼ ಉದ್ದೇಶಿಸಿ ಮಾತನಾಡಿದರು. ಇದೇ ವೇಳೆ, ವಿವಿಧ ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಹೊಸದಾಗಿ ಸೇರ್ಪಡೆಗೊಂಡವರಿಗೆ ಸುಮಾರು 70,000 ನೇಮಕಾತಿ ಪತ್ರಗಳನ್ನು ವಿತರಿಸಿದರು. ಹಣಕಾಸು ಸೇವೆಗಳ ಇಲಾಖೆ, ಅಂಚೆ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ರಕ್ಷಣಾ ಸಚಿವಾಲಯ, ಕಂದಾಯ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ, ಪರಮಾಣು ಶಕ್ತಿ ಇಲಾಖೆ, ರೈಲ್ವೆ ಸಚಿವಾಲಯ, ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆ, ಗೃಹ ವ್ಯವಹಾರಗಳ ಸಚಿವಾಲಯ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ದೇಶಾದ್ಯಂತ ಆಯ್ಕೆಯಾದ ಅಭ್ಯರ್ಥಿಗಳು ಸರ್ಕಾರದ ಸೇವೆಗೆ ಸೇರ್ಪಡೆಗೊಳ್ಳಲಿದ್ದಾರೆ. ಪ್ರಧಾನಮಂತ್ರಿಯವರ ಭಾಷಣದ ವೇಳೆ ದೇಶಾದ್ಯಂತ ಉದ್ಯೋಗ ಮೇಳ ಹಮ್ಮಿಕೊಳ್ಳಲಾದ 43 ಸ್ಥಳಗಳಿಂದ ನೇರ ಸಂಪರ್ಕ ಏರ್ಪಡಿಸಲಾಗಿತ್ತು.`ಸಾಮಾಜಿಕ ಸಬಲೀಕರಣಕ್ಕಾಗಿ ಜವಾಬ್ದಾರಿಯುತ ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಬಳಕೆ’ ಸಮಾವೇಶ – 2020 ಉದ್ಘಾಟನೆ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ
October 05th, 07:01 pm
ಪ್ರತಿ ಹಂತದ ಇತಿಹಾಸದ ಪುಟಗಳನ್ನು ತಿರುವಿ ಹಾಕಿದರೆ, ಜ್ಞಾನ ಮತ್ತು ಕಲಿಕೆ ವಿಷಯದಲ್ಲಿ ಭಾರತವು ವಿಶ್ವವನ್ನು ಮುನ್ನಡೆಸಿದೆ. ಈ ಹೊತ್ತಿನ ಮಾಹಿತಿ ತಂತ್ರಜ್ಞಾನ ಯುಗದ ಕಾಲಘಟ್ಟದಲ್ಲಿ, ಭಾರತವು ಮಹೋನ್ನತ ಕೊಡುಗೆ ನೀಡುತ್ತಾ ಬಂದಿದೆ. ಅತ್ಯಂತ ಪ್ರತಿಭಾವಂತ ತಂತ್ರಜ್ಞಾನ ನಾಯಕರು ಮತ್ತು ತಜ್ಞರು ಭಾರತೀಯರಾಗಿದ್ದಾರೆ ಎಂಬುದು ಹೆಮ್ಮೆಯ ವಿಷಯ. ಜಾಗತಿಕ ಮಾಹಿತಿ ತಂತ್ರಜ್ಞಾನ ಸೇವಾ ಉದ್ಯಮದಲ್ಲಿ ಭಾರತ `ಶಕ್ತಿ ಮನೆ ಅಥವಾ ಪವರ್ ಹೌಸ್’ ಎಂಬುದನ್ನು ಸಾಧಿಸಿ ತೋರಿಸಿದೆ. ನಾವು ಡಿಜಿಟಲ್ ಕ್ಷೇತ್ರದಲ್ಲೂ ಶ್ರೇಷ್ಠತೆಯನ್ನು ಮುಂದುವರಿಸುವ ಮೂಲಕ ಇಡೀ ಜಗತ್ತಿಗೆ ಆನಂದ ಉಂಟುಮಾಡಬೇಕಿದೆ.ಕೃತಕ ಬುದ್ಧಿಮತ್ತೆಯ ಬೃಹತ್ ವರ್ಚುವಲ್ ಶೃಂಗಸಭೆ – RAISE 2020 ಉದ್ಘಾಟಿಸಿದ ಪ್ರಧಾನಿ ಶ್ರೀ ನರೇಂದ್ರ ಮೋದಿ
October 05th, 07:00 pm
ಕೃತಕ ಬುದ್ಧಿಮತ್ತೆಯ (ಎಐ) ಬೃಹತ್ ವರ್ಚುವಲ್ ಶೃಂಗಸಭೆ RAISE 2020ನ್ನು ಪ್ರಧಾನಿ ಶ್ರೀ ನರೇಂದ್ರ ಮೋದಿ ಇಂದು ಉದ್ಘಾಟಿಸಿದರು. RAISE 2020 ಆರೋಗ್ಯ, ಕೃಷಿ, ಶಿಕ್ಷಣ ಮತ್ತು ಸ್ಮಾರ್ಟ್ ಮೊಬಿಲಿಟಿ ಮುಂತಾದ ಕ್ಷೇತ್ರಗಳಲ್ಲಿ ಸಾಮಾಜಿಕ ಪರಿವರ್ತನೆ, ಸೇರ್ಪಡೆ ಮತ್ತು ಸಬಲೀಕರಣಕ್ಕಾಗಿ ಕೃತಕ ಬುದ್ಧಿಮತ್ತೆಯನ್ನು ಬಳಸಲು ವಿಚಾರ ವಿನಿಮಯ ಮಾಡಿಕೊಳ್ಳುವ ಮತ್ತು ಈ ಕುರಿತು ರೂಪುರೇಷೆ ಸಿದ್ಧಪಡಿಸುವ ಜಾಗತಿಕ ಸಭೆಯಾಗಿದೆ.There has never been a better time to invest in India: PM Modi
July 22nd, 10:33 pm
Prime Minister Narendra Modi delivered the keynote address at the India Ideas Summit hosted by the US-India Business Council. Prime Minister underlined that there are extensive opportunities to invest in a variety of sectors in India. He talked about the historic reforms recently undertaken in sectors like agriculture, healthcare, energy, defence, etc.PM Modi addresses India Ideas Summit via video conferencing
July 22nd, 09:26 pm
Prime Minister Narendra Modi delivered the keynote address at the India Ideas Summit hosted by the US-India Business Council. Prime Minister underlined that there are extensive opportunities to invest in a variety of sectors in India. He talked about the historic reforms recently undertaken in sectors like agriculture, healthcare, energy, defence, etc.107 ನೇ ಭಾರತೀಯ ವಿಜ್ಞಾನ ಕಾಂಗ್ರೆಸ್ ಉದ್ಘಾಟನೆಯಲ್ಲಿ ಪ್ರಧಾನ ಮಂತ್ರಿಯವರ ಭಾಷಣ
January 03rd, 10:51 am
ಸ್ನೇಹಿತರೇ, ಮೊದಲನೆಯದಾಗಿ ನಿಮ್ಮೆಲ್ಲರಿಗೂ 2020 ರ ಶುಭಾಶಯಗಳು. ಈ ವರ್ಷವು ನಿಮ್ಮ ಜೀವನದಲ್ಲಿ ಸಮೃದ್ಧಿ ಮತ್ತು ನಿಮ್ಮ ಪ್ರಯೋಗಾಲಯಗಳಲ್ಲಿ ಉತ್ಪಾದಕತೆಯನ್ನು ತರಲಿ. ನೂತನ ವರ್ಷ ಮತ್ತು ದಶಕದ ಆರಂಭದಲ್ಲಿ ನನ್ನ ಮೊದಲ ಕಾರ್ಯಕ್ರಮ ವಿಜ್ಞಾನ, ತಂತ್ರಜ್ಞಾನ ಮತ್ತು ಆವಿಷ್ಕಾರಕ್ಕೆ ಸಂಬಂಧಿಸಿದ್ದಾಗಿದೆ ಎಂಬುದು ನನಗೆ ವಿಶೇಷ ಸಂತೋಷ ತಂದಿದೆ. ವಿಜ್ಞಾನ ಮತ್ತು ಆವಿಷ್ಕಾರಕ್ಕೆ ಸಂಬಂಧಿಸಿರುವ ನಗರವಾದ ಬೆಂಗಳೂರಿನಲ್ಲಿ ಈ ಕಾರ್ಯಕ್ರಮ ನಡೆಯುತ್ತಿದೆ. ನಾನು ಕಳೆದ ಬಾರಿ ಬೆಂಗಳೂರಿಗೆ ಬಂದಿದ್ದು, ಇಡೀ ದೇಶದ ಕಣ್ಣು ಚಂದ್ರಯಾನ-2 ರ ಮೇಲಿದ್ದಾಗ. ಆ ಸಮಯದಲ್ಲಿ, ನಮ್ಮ ರಾಷ್ಟ್ರವು ವಿಜ್ಞಾನವನ್ನು ಸಂಭ್ರಮಿಸಿದ ರೀತಿ, ನಮ್ಮ ಬಾಹ್ಯಾಕಾಶ ಕಾರ್ಯಕ್ರಮ ಮತ್ತು ನಮ್ಮ ವಿಜ್ಞಾನಿಗಳ ಸಾಮರ್ಥ್ಯಗಳು ಯಾವಾಗಲೂ ನನ್ನ ನೆನಪಿನ ಒಂದು ಭಾಗವಾಗಿರುತ್ತವೆ.ಪ್ರಧಾನಿಯವರಿಂದ 107 ನೇ ಭಾರತೀಯ ವಿಜ್ಞಾನ ಕಾಂಗ್ರೆಸ್ ಉದ್ಘಾಟನೆ
January 03rd, 10:50 am
ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಬೆಂಗಳೂರಿನ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ 107 ನೇ ಭಾರತೀಯ ವಿಜ್ಞಾನ ಕಾಂಗ್ರೆಸ್ (ಐಎಸ್‌ಸಿ) ಉದ್ಘಾಟಿಸಿದರು.