ವೈದ್ಯಕೀಯ ಕೋರ್ಸ್ ಗಳಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ಮತ್ತು ಓಬಿಸಿಗೆ ಮೀಸಲಾತಿ ಒದಗಿಸುವ ಸರ್ಕಾರದ ನಿರ್ಧಾರವನ್ನು ಶ್ಲಾಘಿಸಿದ ಪ್ರಧಾನಮಂತ್ರಿ

July 29th, 05:17 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಅಖಿಲ ಭಾರತ ಕೋಟಾ ಯೋಜನೆಯಲ್ಲಿ ವೈದ್ಯಕೀಯ/ದಂತವೈದ್ಯಕೀಯ ಪದವಿ ಮತ್ತು ಸ್ನಾತಕೋತ್ತರ ಕೋರ್ಸ್ ಗಳಲ್ಲಿ ಒಬಿಸಿಗೆ ಶೇ.27ರಷ್ಟು ಮತ್ತು ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶೇ.10ರಷ್ಟು ಮೀಸಲಾತಿ ಒದಗಿಸುವ ಸರ್ಕಾರದ ಮಹತ್ವದ ನಿರ್ಧಾರವನ್ನು ಶ್ಲಾಘಿಸಿದ್ದಾರೆ.

ವೈದ್ಯಕೀಯ ಶಿಕ್ಷಣದಲ್ಲಿ ಮಹತ್ವದ ತೀರ್ಮಾನ ಕೈಗೊಂಡ ಭಾರತ ಸರ್ಕಾರ

July 29th, 03:38 pm

2021-22 ರ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ದೂರದೃಷ್ಟಿಯ ಮಾರ್ಗದರ್ಶನದಲ್ಲಿ ಅಖಿಲ ಭಾರತ ಕೋಟಾದಡಿ [ಎಐಕ್ಯೂ] ಪದವಿಪೂರ್ವ ಮತ್ತು ಸ್ನಾತಕೋತ್ತರ ವೈದ್ಯಕೀಯ/ ದಂತ ವೈದ್ಯಕೀಯ [ಎಂ.ಬಿ.ಬಿ.ಎಸ್/ ಎಂಡಿ/ ಡಿಪ್ಲೊಮ/ ಬಿಡಿಎಸ್/ ಎಂ.ಡಿ.ಎಸ್] ಕೋರ್ಸ್ ಗಳಿಗೆ ಒಬಿಸಿ 27% ರಷ್ಟು ಮತ್ತು ಆರ್ಥಿಕವಾಗಿ ಹಿಂದುಳಿದವರಿಗೆ 10% ರಷ್ಟು ಮೀಸಲಾತಿ ಕಲ್ಪಿಸುವ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಹೆಗ್ಗುರುತಿನ ನಿರ್ಧಾರ ಕೈಗೊಂಡಿದೆ.