ಭಾರತೀಯ ವಲಸಿಗರು ವಿವಿಧ ರಾಷ್ಟ್ರಗಳಲ್ಲಿ ತಮ್ಮ ಛಾಪು ಮೂಡಿಸಿದ್ದಾರೆ: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ

November 24th, 11:30 am

ಮನ್ ಕಿ ಬಾತ್‌ನ 116 ನೇ ಸಂಚಿಕೆಯಲ್ಲಿ, ಪ್ರಧಾನಿ ಮೋದಿ ಎನ್‌ಸಿಸಿ ದಿನದ ಮಹತ್ವವನ್ನು ಚರ್ಚಿಸಿದರು, ಎನ್‌ಸಿಸಿ ಕೆಡೆಟ್‌ಗಳ ಬೆಳವಣಿಗೆ ಮತ್ತು ವಿಪತ್ತು ಪರಿಹಾರದಲ್ಲಿ ಅವರ ಪಾತ್ರವನ್ನು ಎತ್ತಿ ತೋರಿಸಿದರು. ಅವರು ಅಭಿವೃದ್ಧಿ ಹೊಂದಿದ ಭಾರತಕ್ಕಾಗಿ ಯುವ ಸಬಲೀಕರಣಕ್ಕೆ ಒತ್ತು ನೀಡಿದರು ಮತ್ತು ವಿಕಸಿತ್ ಭಾರತ್ ಯುವ ನಾಯಕರ ಸಂವಾದದ ಕುರಿತು ಮಾತನಾಡಿದರು. ಅವರು ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ನ್ಯಾವಿಗೇಟ್ ಮಾಡಲು ಹಿರಿಯ ನಾಗರಿಕರಿಗೆ ಸಹಾಯ ಮಾಡುವ ಯುವಕರ ಸ್ಪೂರ್ತಿದಾಯಕ ಕಥೆಗಳು ಮತ್ತು ಏಕ್ ಪೆಡ್ ಮಾ ಕೆ ನಾಮ್ ಅಭಿಯಾನದ ಯಶಸ್ಸನ್ನು ಹಂಚಿಕೊಂಡರು.

ಉತ್ತರಾಖಂಡ ಸ್ಥಾಪನಾ ದಿವಸದಂದು ಪ್ರಧಾನಮಂತ್ರಿ ಅವರ ಹೇಳಿಕೆಗಳ ಕನ್ನಡ ಅನುವಾದ

November 09th, 11:00 am

ಇಂದು ಉತ್ತರಾಖಂಡದ ರಜತ ಮಹೋತ್ಸವ ವರ್ಷದ ಆರಂಭವನ್ನು ಸೂಚಿಸುತ್ತದೆ. ಅಂದರೆ, ಉತ್ತರಾಖಂಡವು ತನ್ನ 25ನೇ ವರ್ಷಕ್ಕೆ ಕಾಲಿಡುತ್ತಿದೆ. ನಾವು ಮುಂದೆ ನೋಡುತ್ತಿರುವಾಗ, ಉತ್ತರಾಖಂಡದ ಉಜ್ವಲ ಮತ್ತು ಸಮೃದ್ಧ ಭವಿಷ್ಯವನ್ನು ನಿರ್ಮಿಸಲು ಬದ್ಧರಾಗಿ ಮುಂದಿನ 25 ವರ್ಷಗಳ ಪ್ರಯಾಣವನ್ನು ನಾವು ಪ್ರಾರಂಭಿಸಬೇಕು. ಇದರಲ್ಲಿ ಒಂದು ಸಂತೋಷಕರ ಕಾಕತಾಳೀಯವಿದೆ: ನಮ್ಮ ಪ್ರಗತಿಯು ಭಾರತದ ಅಮೃತ ಕಾಲದೊಂದಿಗೆ ಹೊಂದಿಕೆಯಾಗುತ್ತದೆ, ಇದು ರಾಷ್ಟ್ರೀಯ ಬೆಳವಣಿಗೆಗೆ ಮೀಸಲಾಗಿರುವ ಗಮನಾರ್ಹ 25 ವರ್ಷಗಳ ಅವಧಿಯಾಗಿದೆ. ಈ ಸಂಗಮವು ಅಭಿವೃದ್ಧಿ ಹೊಂದಿದ ಭಾರತದ ಭಾಗವಾಗಿ ಅಭಿವೃದ್ಧಿ ಹೊಂದಿದ ಉತ್ತರಾಖಂಡದ ದೃಷ್ಟಿಕೋನವನ್ನು ಬಿಂಬಿಸುತ್ತದೆ, ಈ ಯುಗದಲ್ಲಿ ನಮ್ಮ ಹಂಚಿಕೆಯ ಆಕಾಂಕ್ಷೆಗಳು ಸಾಕಾರಗೊಳ್ಳುತ್ತಿವೆ. ಉತ್ತರಾಖಂಡದ ಜನರು ಮುಂಬರುವ 25 ವರ್ಷಗಳ ಗುರಿಗಳನ್ನು ಕೇಂದ್ರೀಕರಿಸಿ ರಾಜ್ಯದಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದು ನನಗೆ ಸಂತೋಷವಾಗಿದೆ. ಈ ಕಾರ್ಯಕ್ರಮಗಳ ಮೂಲಕ ಉತ್ತರಾಖಂಡದ ಹೆಮ್ಮೆಯನ್ನು ಆಚರಿಸಲಾಗುವುದು ಮತ್ತು ಅಭಿವೃದ್ಧಿ ಹೊಂದಿದ ಉತ್ತರಾಖಂಡದ ದೃಷ್ಟಿಕೋನವು ಪ್ರತಿಯೊಬ್ಬ ನಿವಾಸಿಯಲ್ಲೂ ಪ್ರತಿಧ್ವನಿಸುತ್ತದೆ. ಈ ಮಹತ್ವದ ಸಂದರ್ಭದಲ್ಲಿ ಮತ್ತು ಈ ನಿರ್ಣಾಯಕ ನಿರ್ಣಯಕ್ಕಾಗಿ, ನಾನು ನಿಮ್ಮೆಲ್ಲರಿಗೂ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸುತ್ತೇನೆ. ಕೇವಲ ಎರಡು ದಿನಗಳ ಹಿಂದೆ, ಪ್ರವಾಸಿ ಉತ್ತರಾಖಂಡ್ ಸಮ್ಮೇಳನವನ್ನು ಸಹ ಯಶಸ್ವಿಯಾಗಿ ನಡೆಸಲಾಯಿತು. ನಮ್ಮ ವಲಸಿಗ ಉತ್ತರಾಖಂಡಿಗಳು ರಾಜ್ಯದ ಅಭಿವೃದ್ಧಿಯ ಪಯಣದಲ್ಲಿ ಮಹತ್ವದ ಪಾತ್ರ ವಹಿಸುವುದನ್ನು ಮುಂದುವರಿಸುತ್ತಾರೆ ಎಂಬ ವಿಶ್ವಾಸ ನನಗಿದೆ.

ದೇವಭೂಮಿ ಉತ್ತರಾಖಂಡದ ರಜತ ಮಹೋತ್ಸವ ಸಂದರ್ಭದಲ್ಲಿ ಉತ್ತರಾಖಂಡದ ಜನತೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದನೆ

November 09th, 10:40 am

ಉತ್ತರಾಖಂಡದ ಸಂಸ್ಥಾಪನಾ ದಿನದಂದು ಅಲ್ಲಿನ ಎಲ್ಲ ಜನತೆಗೆ ಶುಭ ಕೋರಿರುವ ಪ್ರಧಾನಮಂತ್ರಿಯವರು, ಇಂದಿನಿಂದ ಉತ್ತರಾಖಂಡ ರಾಜ್ಯ ರಚನೆಯ ರಜತ ಮಹೋತ್ಸವ ವರ್ಷ ಆರಂಭವಾಗುತ್ತಿರುವುದನ್ನು ಉಲ್ಲೇಖಿಸಿದರು. ಉತ್ತರಾಖಂಡವು ರಾಜ್ಯ ಸ್ಥಾಪನೆಯ 25ನೇ ವರ್ಷಕ್ಕೆ ಪ್ರವೇಶಿಸಿರುವುದನ್ನು ಉಲ್ಲೇಖಿಸಿದ ಶ್ರೀ ಮೋದಿ, ರಾಜ್ಯದ ಮುಂಬರುವ 25 ವರ್ಷಗಳ ಉಜ್ವಲ ಭವಿಷ್ಯಕ್ಕಾಗಿ ಕೆಲಸ ಮಾಡುವಂತೆ ಜನರನ್ನು ಆಗ್ರಹಿಸಿದರು. ಉತ್ತರಾಖಂಡದ ಮುಂಬರುವ 25 ವರ್ಷಗಳ ಪ್ರಯಾಣವು ಭಾರತದ ಅಮೃತ್ ಕಾಲ್ ನ 25 ನೇ ವರ್ಷದ ಜೊತೆ ಸರಿಹೊಂದಿಕೆಯಾಗುವಂತಿದೆ. ಇದೊಂದು ಕಾಕತಾಳೀಯ ಎಂದ ಪ್ರಧಾನ ಮಂತ್ರಿ ಅವರು, ಇದು ವಿಕ್ಷಿತ್ ಭಾರತ್ ಗಾಗಿ ವಿಕ್ಷಿತ್ (ಅಭಿವೃದ್ಧಿ ಹೊಂದಿದ) ಉತ್ತರಾಖಂಡವನ್ನು ಸಂಕೇತಿಸುತ್ತದೆ ಎಂದರು. ಈ ಅವಧಿಯಲ್ಲಿ ವಿಕ್ಷಿತ್ ಭಾರತದ ಸಂಕಲ್ಪ ಈಡೇರುವುದಕ್ಕೆ ದೇಶ ಸಾಕ್ಷಿಯಾಗಲಿದೆ ಎಂದು ಶ್ರೀ ಮೋದಿ ಹೇಳಿದರು. ಮುಂಬರುವ 25 ವರ್ಷಗಳಲ್ಲಿ ಸಂಕಲ್ಪಗಳ ಜೊತೆಗೆ ಜನರು ಅನೇಕ ಕಾರ್ಯಕ್ರಮಗಳನ್ನು ಕೈಗೊಂಡಿದ್ದಾರೆ ಎಂದು ಪ್ರಧಾನಿ ಸಂತಸ ವ್ಯಕ್ತಪಡಿಸಿದರು. ಈ ಕಾರ್ಯಕ್ರಮಗಳ ಮೂಲಕ ಉತ್ತರಾಖಂಡದ ಹೆಮ್ಮೆಯನ್ನು ಹರಡಲಾಗುವುದು ಮತ್ತು ಅಭಿವೃದ್ಧಿ ಹೊಂದಿದ ಉತ್ತರಾಖಂಡದ ಗುರಿ ರಾಜ್ಯದ ಪ್ರತಿಯೊಬ್ಬ ನಿವಾಸಿಯನ್ನು ತಲುಪಲಿದೆ ಎಂದು ಅವರು ಹೇಳಿದರು. ಈ ಮಹತ್ವದ ಸಂದರ್ಭದಲ್ಲಿ ಮತ್ತು ಈ ಮಹತ್ವದ ನಿರ್ಣಯವನ್ನು ಅಂಗೀಕರಿಸಿದ್ದಕ್ಕಾಗಿ ಶ್ರೀ ಮೋದಿ ಅವರು ರಾಜ್ಯದ ಎಲ್ಲ ನಿವಾಸಿಗಳನ್ನು ಅಭಿನಂದಿಸಿದರು. ಇತ್ತೀಚೆಗೆ ಯಶಸ್ವಿಯಾಗಿ ಆಯೋಜಿಸಲಾದ 'ಪ್ರವಾಸಿ ಉತ್ತರಾಖಂಡ ಸಮ್ಮೇಳನ'ದ ಬಗ್ಗೆಯೂ ಅವರು ಗಮನಸೆಳೆದರು ಮತ್ತು ಉತ್ತರಾಖಂಡದ ಅಭಿವೃದ್ಧಿಯಲ್ಲಿ ಸಾಗರೋತ್ತರ ಉತ್ತರಾಖಂಡದ ಜನರು ಪ್ರಮುಖ ಪಾತ್ರ ವಹಿಸುತ್ತಾರೆ ಎಂಬ ಭರವಸೆಯನ್ನು ವ್ಯಕ್ತಪಡಿಸಿದರು.

16ನೇ ಬ್ರಿಕ್ಸ್ ಶೃಂಗಸಭೆಯ ಪ್ರಧಾನ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರ ಇಂಗ್ಲಿಷ್ ಭಾಷಣದ ಅನುವಾದ

October 23rd, 05:22 pm

ಮತ್ತೊಮ್ಮೆ, ಬ್ರಿಕ್ಸ್ ಗೆ ಸೇರ್ಪಡೆಗೊಂಡ ಎಲ್ಲಾ ಹೊಸ ಸ್ನೇಹಿತರಿಗೆ ಆತ್ಮೀಯ ಸ್ವಾಗತ. ಅದರ ಹೊಸ ಅವತಾರದಲ್ಲಿ, BRICS ವಿಶ್ವದ ಮಾನವೀಯತೆಯ 40 ಪ್ರತಿಶತ ಮತ್ತು ಜಾಗತಿಕ ಆರ್ಥಿಕತೆಯ ಸುಮಾರು 30 ಪ್ರತಿಶತವನ್ನು ಹೊಂದಿದೆ.

'ಮನ್ ಕಿ ಬಾತ್' ಕೇಳುಗರು ಈ ಕಾರ್ಯಕ್ರಮದ ನಿಜವಾದ ನಿರೂಪಕರು: ಪ್ರಧಾನಿ ಮೋದಿ

September 29th, 11:30 am

ನನ್ನ ಪ್ರೀತಿಯ ದೇಶವಾಸಿಗಳೆ ನಮಸ್ಕಾರ. ಮತ್ತೊಮ್ಮೆ ನಾವೆಲ್ಲರೂ 'ಮನದ ಮಾತಿನ' ಮೂಲಕ ಒಗ್ಗೂಡುವ ಅವಕಾಶ ಲಭಿಸಿದೆ. ಇಂದಿನ ಈ ಕಂತು ನನ್ನನ್ನು ಬಹಳ ಭಾವುಕನನ್ನಾಗಿಸಲಿದೆ, ಅನೇಕ ಹಳೆಯ ನೆನಪುಗಳು ನನ್ನನ್ನು ಮುತ್ತಿವೆ - ಕಾರಣ ಏನೆಂದರೆ 'ಮನದ ಮಾತಿನ' ನಮ್ಮ ಈ ಪಯಣಕ್ಕೆ 10 ವರ್ಷಗಳು ತುಂಬುತ್ತಿದೆ. 10 ವರ್ಷಗಳ ಹಿಂದೆ ಅಕ್ಟೋಬರ್ 3 ರಂದು ವಿಜಯದಶಮಿಯ ದಿನದಂದು 'ಮನದ ಮಾತು’ ಪ್ರಾರಂಭವಾಗಿತ್ತು ಮತ್ತು ಈ ವರ್ಷ ಅಕ್ಟೋಬರ್ 3 ರಂದು 'ಮನದ ಮಾತಿಗೆ ' 10 ವರ್ಷತುಂಬುವ ಸಂದರ್ಭ ನವರಾತ್ರಿಯ ಮೊದಲ ದಿನವಾಗಿದೆ. 'ಮನದ ಮಾತಿನ’ ಈ ಸುದೀರ್ಘ ಪಯಣದಲ್ಲಿ ನಾನು ಎಂದೂ ಮರೆಯಲಾಗದ ಇಂತಹ ಹಲವಾರು ಮೈಲಿಗಲ್ಲುಗಳಿವೆ, ನಮ್ಮ ಈ ಪಯಣದಲ್ಲಿ ನಿರಂತರ ಸಹಯೋಗವನ್ನು ನೀಡಿದಂತಹ ' ಮನದ ಮಾತಿನ' ಕೋಟ್ಯಂತರ ಶ್ರೋತೃ ಬಾಂಧವರಿದ್ದಾರೆ. ದೇಶದ ಮೂಲೆ ಮೂಲೆಗಳಿಂದ ಅವರು ಮಾಹಿತಿಯನ್ನು ಒದಗಿಸಿದರು. ಮನದ ಮಾತಿನ ಶ್ರೋತೃಗಳೇ ಈ ಕಾರ್ಯಕ್ರಮದ ನಿಜವಾದ ರೂವಾರಿಗಳು. ಸಾಮಾನ್ಯವಾಗಿ ಎಲ್ಲಿಯವರೆಗೆ ರೋಚಕ ವಿಷಯಗಳನ್ನು ಮಾತನಾಡುವುದಿಲ್ಲವೋ, ನಕಾರಾತ್ಮಕ ವಿಷಯಗಳನ್ನು ಮಾತನಾಡುವುದಿಲ್ಲವೋ ಅಲ್ಲಿವರೆಗೆ ಅದು ಹೆಚ್ಚಿನ ಗಮನ ಸೆಳೆಯುವುದಿಲ್ಲ ಎನ್ನಲಾಗುತ್ತದೆ. ಆದರೆ ಮನದ ಮಾತು ದೇಶದ ಜನರು ಸಕಾರಾತ್ಮಕ ಮಾಹಿತಿಗಾಗಿ , ಎಷ್ಟು ಉತ್ಸುಕರಾಗಿದ್ದಾರೆ ಎಂಬುದನ್ನು ಸಾಬೀತುಪಡಿಸಿದೆ. ಸಕಾರಾತ್ಮಕ ಮಾತು, ಪ್ರೇರಣಾತ್ಮಕ ಉದಾಹರಣೆಗಳು, ಸ್ಫೂರ್ತಿದಾಯಕ ಕಥೆಗಳು ಜನರಿಗೆ ಬಹಳ ಇಷ್ಟವಾಗುತ್ತವೆ. ಕೇವಲ ಮಳೆಹನಿಗಳನ್ನು ಮಾತ್ರ ಕುಡಿಯುವಂತಹ ಚಾತಕ ಪಕ್ಷಿಯಂತೆ ಜನರು ದೇಶದ ಸೌಲಭ್ಯಗಳ ಬಗ್ಗೆ, ಜನರ ಸಾಮೂಹಿಕ ಸಾಧನೆಗಳ ಬಗ್ಗೆ ಮನದ ಮಾತಿನ ಮೂಲಕ ಎಷ್ಟು ಹೆಮ್ಮೆಯಿಂದ ಕೇಳುತ್ತಾರೆ. ಮನದ ಮಾತಿನ 10 ವರ್ಷಗಳ ಪಯಣ ಎಷ್ಟು ಅದ್ಭುತವಾದ ಹಾರವನ್ನು ಸಿದ್ಧಗೊಳಿಸಿದೆ ಎಂದರೆ ಪ್ರತಿ ಸಂಚಿಕೆಯೊಂದಿಗೆ ಹೊಸ ಯಶೋಗಾಥೆಗಳು, ಹೊಸ ಕೀರ್ತಿವಂತರು ಮತ್ತು ಹೊಸ ವ್ಯಕ್ತಿತ್ವಗಳನ್ನು ಸೇರಿಸುತ್ತಾ ಸಾಗಿದೆ. ನಮ್ಮ ಸಮಾಜದಲ್ಲಿ ಸಾಮಾಜಿಕ ಹಿತದೃಷ್ಟಿಯ ಭಾವನೆಯಿಂದ ಯಾವುದೇ ಕೆಲಸ ಮಾಡಿದರೂ ಅವರಿಗೆ 'ಮನದ ಮಾತಿನ' ಮೂಲಕ ಗೌರವ ಲಭಿಸುತ್ತದೆ. 'ಮನದ ಮಾತಿ'ಗೆ ಬಂದ ಪತ್ರಗಳನ್ನು ನಾನು ಓದಿದಾಗ ನನ್ನ ಮನವೂ ಹೆಮ್ಮೆಯಿಂದ ಬೀಗುತ್ತದೆ. ನಮ್ಮ ದೇಶದಲ್ಲಿ ಅದೆಷ್ಟೋ ಪ್ರತಿಭಾವಂತರಿದ್ದಾರೆ, ಅವರು ತಮ್ಮ ಇಡೀ ಜೀವನವನ್ನು ಜನರ ನಿಸ್ವಾರ್ಥ ಸೇವೆಗಾಗಿ ಮುಡಿಪಾಗಿಟ್ಟಿದ್ದಾರೆ. ಅವರ ಬಗ್ಗೆ ತಿಳಿಯುವುದು ನನ್ನಲ್ಲಿ ಹೊಸ ಶಕ್ತಿಯನ್ನು ತುಂಬುತ್ತದೆ. 'ಮನದ ಮಾತಿನ' ಈ ಸಂಪೂರ್ಣ ಪ್ರಕ್ರಿಯೆಯು ನನಗೆ ದೇವಾಲಯಕ್ಕೆ ತೆರಳಿ ದೇವರ ದರ್ಶನ ಪಡೆಯುವಂತಿದೆ. ಮನದ ಮಾತಿನ ಪ್ರತಿ ವಿಷಯ, ಪ್ರತಿ ಘಟನೆ, ಪ್ರತಿ ಪತ್ರವನ್ನು ನೆನಪಿಸಿಕೊಂಡಾಗ, ನನಗೆ ಭಗವಂತನ ರೂಪದಲ್ಲಿರುವ ಜನತಾ ಜನಾರ್ದನನ ದರ್ಶನ ಪಡೆದಂತೆ ಭಾಸವಾಗುತ್ತದೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ‘ಜಲ ಸಂಚಯ್ ಜನ ಭಾಗೀದಾರಿʼ ಉಪಕ್ರಮಕ್ಕೆ ಚಾಲನೆ ನೀಡಿದರು

September 06th, 01:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತಿನ ಸೂರತ್‌ ನಲ್ಲಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ 'ಜಲ ಸಂಚಯ್ ಜನ ಭಾಗೀದಾರಿ' ಉಪಕ್ರಮಕ್ಕೆ ಚಾಲನೆ ನೀಡಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಈ ಕಾರ್ಯಕ್ರಮದ ಅಡಿಯಲ್ಲಿ, ಮಳೆ ನೀರು ಕೊಯ್ಲು ಹೆಚ್ಚಿಸಲು ಮತ್ತು ದೀರ್ಘಾವಧಿಯ ನೀರಿನ ಸುಸ್ಥಿರತೆಯನ್ನು ಖಚಿತಪಡಿಸಿಕೊಳ್ಳಲು ರಾಜ್ಯಾದ್ಯಂತ ಸುಮಾರು 24,800 ಮಳೆ ನೀರು ಕೊಯ್ಲು ರಚನೆಗಳನ್ನು ನಿರ್ಮಿಸಲಾಗುತ್ತಿದೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ‘ಜಲ ಸಂಚಯ್ ಜನ ಭಾಗೀದಾರಿʼ ಉಪಕ್ರಮಕ್ಕೆ ಚಾಲನೆ ನೀಡಿದರು

September 06th, 12:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತಿನ ಸೂರತ್‌ ನಲ್ಲಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ 'ಜಲ ಸಂಚಯ್ ಜನ ಭಾಗೀದಾರಿ' ಉಪಕ್ರಮಕ್ಕೆ ಚಾಲನೆ ನೀಡಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಈ ಕಾರ್ಯಕ್ರಮದ ಅಡಿಯಲ್ಲಿ, ಮಳೆ ನೀರು ಕೊಯ್ಲು ಹೆಚ್ಚಿಸಲು ಮತ್ತು ದೀರ್ಘಾವಧಿಯ ನೀರಿನ ಸುಸ್ಥಿರತೆಯನ್ನು ಖಚಿತಪಡಿಸಿಕೊಳ್ಳಲು ರಾಜ್ಯಾದ್ಯಂತ ಸುಮಾರು 24,800 ಮಳೆ ನೀರು ಕೊಯ್ಲು ರಚನೆಗಳನ್ನು ನಿರ್ಮಿಸಲಾಗುತ್ತಿದೆ.

ಬಾಹ್ಯಾಕಾಶ ಕ್ಷೇತ್ರದ ಸುಧಾರಣೆಗಳಿಂದ ದೇಶದ ಯುವಕರು ಪ್ರಯೋಜನ ಪಡೆದಿದ್ದಾರೆ: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ

August 25th, 11:30 am

ನನ್ನ ಪ್ರಿಯ ದೇಶವಾಸಿಗಳೆ ನಮಸ್ಕಾರ. ಮತ್ತೊಮ್ಮೆ, 'ಮನದ ಮಾತಿಗೆ' ನನ್ನ ಕುಟುಂಬದ ಎಲ್ಲಾ ಸದಸ್ಯರಿಗೆ ಸ್ವಾಗತ. ಇಂದು ಮತ್ತೊಮ್ಮೆ ನಾವು ದೇಶದ ಸಾಧನೆಗಳು ಮತ್ತು ದೇಶದ ಜನತೆಯ ಸಾಮೂಹಿಕ ಪ್ರಯತ್ನಗಳ ಬಗ್ಗೆ ಮಾತನಾಡಲಿದ್ದೇವೆ. 21 ನೇ ಶತಮಾನದ ಭಾರತದಲ್ಲಿ ವಿಕಸಿತ ಭಾರತದ ಅಡಿಪಾಯವನ್ನು ಬಲಪಡಿಸುವ ಸಾಕಷ್ಟು ಪ್ರಯತ್ನಗಳು ನಡೆಯುತ್ತಿವೆ. ಉದಾಹರಣೆಗೆ, ಇದೇ ಆಗಸ್ಟ್ 23 ರಂದು, ನಾವೆಲ್ಲರೂ ಪ್ರಥಮ ರಾಷ್ಟ್ರೀಯ ಬಾಹ್ಯಾಕಾಶ ದಿನವನ್ನು ಆಚರಿಸಿದೆವು. ನೀವೆಲ್ಲರೂ ಈ ದಿನವನ್ನು ಆಚರಿಸಿರಬಹುದು ಎಂದು ನಾನು ಭಾವಿಸುತ್ತೇನೆ, ಮತ್ತೊಮ್ಮೆ ಚಂದ್ರಯಾನ-3 ರ ಯಶಸ್ಸನ್ನು ಆಚರಿಸಿರಬಹುದು. ಕಳೆದ ವರ್ಷ, ಇದೇ ದಿನದಂದು, ಚಂದ್ರಯಾನ-3 ಚಂದ್ರನ ದಕ್ಷಿಣ ಭಾಗದಲ್ಲಿರುವ ಶಿವ-ಶಕ್ತಿ ಪಾಯಿಂಟ್‌ನಲ್ಲಿ ಯಶಸ್ವಿಯಾಗಿ ಲ್ಯಾಂಡಿಂಗ್ ಮಾಡಿತ್ತು. ಭಾರತ ಈ ಅಮೋಘ ಸಾಧನೆ ಮಾಡಿದ ವಿಶ್ವದ ಮೊದಲ ದೇಶವಾಯಿತು.

ಪೋಲೆಂಡ್ ನ ವಾರ್ಸಾದಲ್ಲಿ ನಡೆದ ಭಾರತೀಯ ಸಮುದಾಯ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಇಂಗ್ಲಿಷ್ ಅವತರಣಿಕೆ

August 21st, 11:45 pm

ಈ ನೋಟ ನಿಜಕ್ಕೂ ಅದ್ಭುತ. ಮತ್ತು ನಿಮ್ಮ ಉತ್ಸಾಹವೂ ಅದ್ಭುತವಾಗಿದೆ. ನಾನು ಇಲ್ಲಿಗೆ ಕಾಲಿಟ್ಟ ಕ್ಷಣದಿಂದ, ನೀವು ದಣಿದಿಲ್ಲ. ನೀವೆಲ್ಲರೂ ಪೋಲೆಂಡ್ ನ ವಿವಿಧ ಭಾಗಗಳಿಂದ, ವಿಭಿನ್ನ ಭಾಷೆಗಳು, ಉಪಭಾಷೆಗಳು ಮತ್ತು ಪಾಕಪದ್ಧತಿಗಳ ಹಿನ್ನೆಲೆಯಿಂದ ಬಂದಿದ್ದೀರಿ. ಆದರೆ ಪ್ರತಿಯೊಬ್ಬರೂ ಭಾರತೀಯತೆಯ ಪ್ರಜ್ಞೆಯಿಂದ ಪರಸ್ಪರ ಸಂಪರ್ಕ ಹೊಂದಿದ್ದೀರಿ. ನೀವು ಇಲ್ಲಿ ನನಗೆ ಅದ್ಭುತ ಸ್ವಾಗತವನ್ನು ನೀಡಿದ್ದೀರಿ, ಇದಕ್ಕಾಗಿ ನಾನು ನಿಮ್ಮೆಲ್ಲರಿಗೂ ಮತ್ತು ಪೋಲೆಂಡ್ ಜನರಿಗೆ ಈ ಸ್ವಾಗತಕ್ಕಾಗಿ ತುಂಬಾ ಕೃತಜ್ಞನಾಗಿದ್ದೇನೆ.

ಪೋಲೆಂಡ್‌ನ ವಾರ್ಸಾದಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ

August 21st, 11:30 pm

ಪ್ರಧಾನಿ ನರೇಂದ್ರ ಮೋದಿ ಅವರು ಪೋಲೆಂಡ್‌ನ ವಾರ್ಸಾದಲ್ಲಿ ಭಾರತೀಯ ವಲಸಿಗರನ್ನು ಉದ್ದೇಶಿಸಿ ಮಾತನಾಡಿದರು. ಭಾರತದ ಪ್ರಸ್ತುತ ಜಾಗತಿಕ ಕಾರ್ಯತಂತ್ರವು ಬಲವಾದ ಅಂತರಾಷ್ಟ್ರೀಯ ಸಂಬಂಧಗಳನ್ನು ನಿರ್ಮಿಸಲು ಮತ್ತು ಶಾಂತಿಯನ್ನು ಪೋಷಿಸಲು ಒತ್ತು ನೀಡುತ್ತದೆ ಎಂದು ಪ್ರಧಾನಿ ವ್ಯಕ್ತಪಡಿಸಿದರು. ಪ್ರತಿ ರಾಷ್ಟ್ರದೊಂದಿಗೆ ಸಕ್ರಿಯವಾಗಿ ತೊಡಗಿಸಿಕೊಳ್ಳಲು ಭಾರತದ ವಿಧಾನವು ಬದಲಾಗಿದೆ. ಜಾಗತಿಕ ಸಹಕಾರವನ್ನು ಹೆಚ್ಚಿಸುವ ಮತ್ತು ಭಾರತದ ಐತಿಹಾಸಿಕ ಮೌಲ್ಯಗಳಾದ ಏಕತೆ ಮತ್ತು ಸಹಾನುಭೂತಿಯ ಮೇಲೆ ಗಮನ ಕೇಂದ್ರೀಕರಿಸಿದೆ.

ತ್ರಿವರ್ಣ ಧ್ವಜದ ವೈಭವವನ್ನು ಎತ್ತಿ ಹಿಡಿಯುವಲ್ಲಿ 'ಹರ್ ಘರ್ ತಿರಂಗ ಅಭಿಯಾನ' ಒಂದು ವಿಶಿಷ್ಟ ಹಬ್ಬವಾಗಿದೆ: ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ

July 28th, 11:30 am

ನನ್ನ ಪ್ರೀತಿಯ ದೇಶವಾಸಿಗಳೆ, 'ಮನ್ ಕಿ ಬಾತ್' ಕಾರ್ಯಕ್ರಮಕ್ಕೆ ನಿಮಗೆಲ್ಲರಿಗೂ ಸ್ವಾಗತ, ಆತ್ಮೀಯ ಶುಭಾಶಯಗಳು. ಈ ಕ್ಷಣದಲ್ಲಿ ಜರುತ್ತಿರುವ ಪ್ಯಾರಿಸ್ ಒಲಿಂಪಿಕ್ಸ್ ಇಡೀ ವಿಶ್ವದ ಗಮನ ಸೆಳೆದಿದೆ, ಈ ಋತುವಿನ ಫ್ಲೇವರ್ ಆಗಿದೆ. ಒಲಿಂಪಿಕ್ಸ್ ನಮ್ಮ ಆಟಗಾರರಿಗೆ ವಿಶ್ವ ವೇದಿಕೆಯಲ್ಲಿ ತ್ರಿವರ್ಣ ಧ್ವಜ ಹಾರಿಸಲು ಅವಕಾಶ ಮಾಡಿಕೊಟ್ಟಿದೆ. ದೇಶಕ್ಕಾಗಿ ಏನನ್ನಾದರೂ ಮಾಡಲು ಅವರಿಗೆ ಅವಕಾಶ ನೀಡಿದೆ. ನಮ್ಮ ಆಟಗಾರರನ್ನು ಪ್ರೋತ್ಸಾಹಿಸೋಣ... ಭಾರತ ತಂಡಕ್ಕೆ ಚಿಯರ್!!

ವಿಕಸಿತ್ ಭಾರತ್ ಪ್ರಯಾಣದಲ್ಲಿ ಪತ್ರಿಕೆಗಳ ಪಾತ್ರ ನಿರ್ಣಾಯಕ: ಮುಂಬೈನಲ್ಲಿ ಐಎನ್‌ಎಸ್ ಟವರ್ಸ್ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಿ ಮೋದಿ

July 13th, 09:33 pm

ಮುಂಬೈನ ಇಂಡಿಯನ್ ನ್ಯೂಸ್ ಪೇಪರ್ ಸೊಸೈಟಿ ಸೆಕ್ರೆಟರಿಯೇಟ್ ನಲ್ಲಿ ಐಎನ್ ಎಸ್ ಟವರ್ಸ್ ಅನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು. ಪ್ರಜಾಪ್ರಭುತ್ವ ಮತ್ತು ಸಾಮಾಜಿಕ ಬದಲಾವಣೆಯಲ್ಲಿ ಮಾಧ್ಯಮದ ನಿರ್ಣಾಯಕ ಪಾತ್ರವನ್ನು ಅವರು ಒತ್ತಿಹೇಳಿದರು, ಪ್ರವಾಸೋದ್ಯಮವನ್ನು ಉತ್ತೇಜಿಸಲು, ಜಾಗತಿಕವಾಗಿ ವಿಸ್ತರಿಸಲು ಮತ್ತು ಡಿಜಿಟಲ್ ಆವೃತ್ತಿಗಳನ್ನು ಹತೋಟಿಗೆ ತರಲು ಪತ್ರಿಕೆಗಳನ್ನು ಒತ್ತಾಯಿಸಿದರು. ರಾಷ್ಟ್ರೀಯ ಚಳುವಳಿಗಳು ಮತ್ತು ಡಿಜಿಟಲ್ ಉಪಕ್ರಮಗಳ ಮೇಲೆ ಮಾಧ್ಯಮದ ಪ್ರಭಾವವನ್ನು ಪ್ರಧಾನಮಂತ್ರಿ ಮೋದಿ ಎತ್ತಿ ತೋರಿಸಿದರು, ಭಾರತದ ಜಾಗತಿಕ ಇಮೇಜ್ ಮತ್ತು ಪ್ರಗತಿಯನ್ನು ಹೆಚ್ಚಿಸಲು ಸಾಮೂಹಿಕ ಪ್ರಯತ್ನಗಳಿಗೆ ಕರೆ ನೀಡಿದರು.

ಮಹಾರಾಷ್ಟ್ರದ ಮುಂಬೈನಲ್ಲಿ ʻಭಾರತೀಯ ಪತ್ರಿಕಾ ಸಂಘʼದ ಗೋಪುರ (ಐಎನ್ಎಸ್ ) ಟವರ್ಸ್ ಉದ್ಘಾಟಿಸಿದ ಪ್ರಧಾನಮಂತ್ರಿಗಳು

July 13th, 07:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮುಂಬೈನ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್‌ನ ಜಿ-ಬ್ಲಾಕ್‌ನಲ್ಲಿರುವ ʻಭಾರತೀಯ ಪತ್ರಿಕಾ ಸಂಘʼದ (ಇಂಡಿಯನ್‌ ನ್ಯೂಸ್‌ ಪೇಪರ್‌ ಸೊಸೈಟಿ- ಐಎನ್‌ಎಸ್) ಕಾರ್ಯಾಲಯಕ್ಕೆ ಭೇಟಿದರು ಮತ್ತು ಈ ವೇಳೆ ʻಐಎನ್‌ಎಸ್‌ ಟವರ್ಸ್‌ʼ ಉದ್ಘಾಟನೆ ಮಾಡಿದರು. ಮುಂಬೈನಲ್ಲಿ ಅತ್ಯಾಧುನಿಕ ಮತ್ತು ಪರಿಣಾಮಕಾರಿ ಕಚೇರಿ ಸ್ಥಳಕ್ಕಾಗಿ ʻಐಎನ್ಎಸ್ʼ ಸದಸ್ಯರ ಅಗತ್ಯಗಳು ಹೆಚ್ಚಾಗುತ್ತಿದ್ದು, ಹೊಸ ಕಟ್ಟಡವು ಇದನ್ನು ಪೂರೈಸುತ್ತದೆ. ಜೊತೆಗೆ, ಮುಂಬೈನ ಪತ್ರಿಕಾ ಉದ್ಯಮಕ್ಕೆ ಕೇಂದ್ರಬಿಂದುವಾಗಿ ಕಾರ್ಯನಿರ್ವಹಿಸುತ್ತದೆ.

ಜಿ 7 ಶೃಂಗಸಭೆಯ ಔಟ್ರೀಚ್ ಅಧಿವೇಶನದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣದ ಅನುವಾದ

June 14th, 09:54 pm

ಮೊದಲನೆಯದಾಗಿ, ಈ ಶೃಂಗಸಭೆಗೆ ಆಹ್ವಾನಿಸಿದ್ದಕ್ಕಾಗಿ ಮತ್ತು ನಮಗೆ ನೀಡಿದ ಆತ್ಮೀಯ ಆತಿಥ್ಯಕ್ಕಾಗಿ ನಾನು ಪ್ರಧಾನಿ ಮೆಲೋನಿ ಅವರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸಲು ಬಯಸುತ್ತೇನೆ. ನಾನು ಚಾನ್ಸಲರ್ ಒಲಾಫ್ ಶೋಲ್ಜ್ ಅವರಿಗೆ ಜನ್ಮದಿನದ ಶುಭಾಶಯಗಳನ್ನು ಕೋರುತ್ತೇನೆ. ಜಿ -7 ಶೃಂಗಸಭೆಯ ಈ ಘಟನೆ ವಿಶೇಷ ಮತ್ತು ಐತಿಹಾಸಿಕವಾಗಿದೆ. ಈ ಗುಂಪಿನ 50ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ಜಿ -7 ಯ ಎಲ್ಲಾ ಸಹೋದ್ಯೋಗಿಗಳಿಗೆ ಹೃತ್ಪೂರ್ವಕ ಅಭಿನಂದನೆಗಳು.

ಜಿ 7 ಶೃಂಗಸಭೆಯ ಕೃತಕ ಬುದ್ಧಿಮತ್ತೆ ಮತ್ತು ಇಂಧನ, ಆಫ್ರಿಕಾ ಮತ್ತು ಮೆಡಿಟರೇನಿಯನ್ ಕುರಿತ ಔಟ್ರೀಚ್ ಅಧಿವೇಶನದಲ್ಲಿ ಪ್ರಧಾನಿ ಭಾಗವಹಿಸಿದರು

June 14th, 09:41 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಇಟಲಿಯ ಅಪುಲಿಯಾದಲ್ಲಿ ನಡೆದ ಜಿ 7 ಶೃಂಗಸಭೆಯಲ್ಲಿ ಕೃತಕ ಬುದ್ಧಿಮತ್ತೆ, ಇಂಧನ, ಆಫ್ರಿಕಾ ಮತ್ತು ಮೆಡಿಟರೇನಿಯನ್ ಕುರಿತ ಔಟ್ರೀಚ್ ಅಧಿವೇಶನವನ್ನುದ್ದೇಶಿಸಿ ಭಾಷಣ ಮಾಡಿದರು. ಸಮೂಹವು 50ನೇ ವಾರ್ಷಿಕೋತ್ಸವದ ಮೈಲಿಗಲ್ಲನ್ನು ಸಾಧಿಸಿರುವುದಕ್ಕೆ ಅವರು ಅಭಿನಂದಿಸಿದರು.