ಮಹಾರಾಷ್ಟ್ರದ ವಿವಿಧ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಭಾಷಣ

October 09th, 01:09 pm

ಮಹಾರಾಷ್ಟ್ರದ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಅವರೇ, ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರೇ, ಕೇಂದ್ರ ಸಚಿವ ಸಂಪುಟದಲ್ಲಿರುವ ನನ್ನ ಸಹೋದ್ಯೋಗಿಗಳೇ, ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಗಳಾದ ಶ್ರೀ ದೇವೇಂದ್ರ ಫಡ್ನವಿಸ್ ಅವರೇ, ಶ್ರೀ ಅಜಿತ್ ಪವಾರ್ ಅವರೇ, ಇತರ ಎಲ್ಲ ಗಣ್ಯರೇ ಮತ್ತು ಮಹಾರಾಷ್ಟ್ರದ ನನ್ನ ಪ್ರಿಯ ಸಹೋದರ ಸಹೋದರಿಯರೇ...

ಮಹಾರಾಷ್ಟ್ರದಲ್ಲಿ 7600 ಕೋಟಿ ರೂ.ಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

October 09th, 01:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಮಹಾರಾಷ್ಟ್ರದಲ್ಲಿ 7600 ಕೋಟಿ ರೂ.ಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಇಂದಿನ ಯೋಜನೆಗಳಲ್ಲಿ ನಾಗ್ಪುರದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಮೇಲ್ದರ್ಜೆಗೇರಿಸುವ ಯೋಜನೆ ಮತ್ತು ಶಿರಡಿ ವಿಮಾನ ನಿಲ್ದಾಣದಲ್ಲಿ ಹೊಸ ಸಮಗ್ರ ಟರ್ಮಿನಲ್ ಕಟ್ಟಡಕ್ಕೆ ಶಂಕುಸ್ಥಾಪನೆ ಸೇರಿವೆ. ಶ್ರೀ ಮೋದಿ ಅವರು ಮಹಾರಾಷ್ಟ್ರದ 10 ಸರ್ಕಾರಿ ವೈದ್ಯಕೀಯ ಕಾಲೇಜುಗಳ ಕಾರ್ಯಾಚರಣೆಗೆ ಚಾಲನೆ ನೀಡಿದರು ಮತ್ತು ಮುಂಬೈನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್) ಮತ್ತು ಮಹಾರಾಷ್ಟ್ರದ ವಿದ್ಯಾ ಸಮೀಕ್ಷಾ ಕೇಂದ್ರ (ವಿಎಸ್ಕೆ) ಗಳನ್ನು ಉದ್ಘಾಟಿಸಿದರು.

ಮಹಾರಾಷ್ಟ್ರದ ವಾರ್ಧಾದಲ್ಲಿ ರಾಷ್ಟ್ರೀಯ 'ಪಿಎಂ ವಿಶ್ವಕರ್ಮ' ವಾರ್ಷಿಕೋತ್ಸವ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ

September 20th, 11:45 am

2 ದಿನಗಳ ಹಿಂದೆಯಷ್ಟೇ ವಿಶ್ವಕರ್ಮ ಜಯಂತಿ ಆಚರಿಸಿದ್ದೆವು. ಇಂದು ನಾವು ವಾರ್ಧಾದ ಪವಿತ್ರ ಭೂಮಿಯಲ್ಲಿ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ಯಶಸ್ಸನ್ನು ಆಚರಿಸುತ್ತಿದ್ದೇವೆ. 1932ರ ಇದೇ ದಿನದಂದು ಮಹಾತ್ಮ ಗಾಂಧೀಜಿ ಅವರು ಅಸ್ಪೃಶ್ಯತೆಯ ವಿರುದ್ಧ ತಮ್ಮ ಅಭಿಯಾನ ಆರಂಭಿಸಿದ್ದರು ಎಂಬುದು ಇಂದಿನ ವಿಶೇಷ. ಈ ಹಿನ್ನೆಲೆಯಲ್ಲಿ ವಿನೋಬಾ ಭಾವೆ ಅವರ ಪುಣ್ಯಭೂಮಿ, ಮಹಾತ್ಮ ಗಾಂಧಿ ಅವರ ‘ಕರ್ಮಭೂಮಿ’ ಮತ್ತು ವಾರ್ಧಾ ಭೂಮಿಯಲ್ಲಿ ವಿಶ್ವಕರ್ಮ ಯೋಜನೆಯ 1 ವರ್ಷದ ಸಂಭ್ರಮಾಚರಣೆಯು ನಮ್ಮ ‘ವಿಕಸಿತ ಭಾರತ’(ಅಭಿವೃದ್ಧಿ ಹೊಂದಿದ ಭಾರತ)ದ ಸಂಕಲ್ಪಕ್ಕೆ ಹೊಸ ಚೈತನ್ಯ ನೀಡುವ ಸಾಧನೆ ಮತ್ತು ಸ್ಫೂರ್ತಿಯ ಸಂಗಮವಾಗಿದೆ. ವಿಶ್ವಕರ್ಮ ಯೋಜನೆ ಮೂಲಕ ನಾವು ಶ್ರಮದ ಮೂಲಕ ಸಮೃದ್ಧಿ ಮತ್ತು ಕೌಶಲ್ಯದ ಮೂಲಕ ಉತ್ತಮ ಭವಿಷ್ಯದ ಬದ್ಧತೆ ಹೊಂದಿದ್ದೇವೆ. ವಾರ್ಧಾದಲ್ಲಿ ಬಾಪು ಅವರ ಸ್ಫೂರ್ತಿಗಳು ಈ ಬದ್ಧತೆಗಳನ್ನು ಪೂರೈಸಲು ನಮಗೆ ಸಹಾಯ ಮಾಡುತ್ತದೆ. ಈ ಉಪಕ್ರಮಕ್ಕೆ ಸಂಬಂಧಿಸಿದ ಎಲ್ಲರಿಗೂ ಮತ್ತು ದೇಶಾದ್ಯಂತದ ಎಲ್ಲಾ ಫಲಾನುಭವಿಗಳಿಗೆ ನನ್ನ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ವಾರ್ಧಾದಲ್ಲಿ ರಾಷ್ಟ್ರೀಯ ಪ್ರಧಾನಮಂತ್ರಿ ವಿಶ್ವಕರ್ಮ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು

September 20th, 11:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಹಾರಾಷ್ಟ್ರದ ವಾರ್ಧಾದಲ್ಲಿ ರಾಷ್ಟ್ರೀಯ ಪ್ರಧಾನಮಂತ್ರಿ ವಿಶ್ವಕರ್ಮ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಪ್ರಧಾನಮಂತ್ರಿಯವರು ‘ಆಚಾರ್ಯ ಚಾಣಕ್ಯ ಕೌಶಲ್ಯ ಅಭಿವೃದ್ಧಿ’ಯೋಜನೆ ಮತ್ತು ‘ಪುಣ್ಯಶ್ಲೋಕ ಅಹಲ್ಯಾದೇವಿ ಹೋಳ್ಕರ್ ಮಹಿಳಾ ಸ್ಟಾರ್ಟಪ್ ಯೋಜನೆʼಗೆ ಚಾಲನೆ ನೀಡಿದರು. ಪ್ರಧಾನಮಂತ್ರಿ ವಿಶ್ವಕರ್ಮ ಫಲಾನುಭವಿಗಳಿಗೆ ಪ್ರಮಾಣಪತ್ರಗಳು ಮತ್ತು ಸಾಲಗಳನ್ನು ಬಿಡುಗಡೆ ಮಾಡಿದರು ಮತ್ತು ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಒಂದು ವರ್ಷದ ಪ್ರಗತಿಯನ್ನು ಗುರುತಿಸುವ ಸ್ಮರಣಾರ್ಥ ಅಂಚೆಚೀಟಿಯನ್ನು ಬಿಡುಗಡೆ ಮಾಡಿದರು. ಮಹಾರಾಷ್ಟ್ರದ ಅಮರಾವತಿಯಲ್ಲಿ ಪ್ರಧಾನಮಂತ್ರಿ ಮೆಗಾ ಇಂಟಿಗ್ರೇಟೆಡ್ ಟೆಕ್ಸ್‌ಟೈಲ್ ರೀಜನ್‌ ಅಂಡ್‌ ಅಪಾರಲ್ (ಪಿಎಂ ಮಿತ್ರಾ) ಪಾರ್ಕ್‌ ಗೆ ಶ್ರೀ ಮೋದಿಯವರು ಶಂಕುಸ್ಥಾಪನೆ ಮಾಡಿದರು. ಈ ಸಂದರ್ಭದಲ್ಲಿ ಆಯೋಜಿಸಲಾದ ವಸ್ತುಪ್ರದರ್ಶನವನ್ನು ಪ್ರಧಾನಿಯವರು ವೀಕ್ಷಿಸಿದರು.

ಮೊದಲ ಹಂತದ ಚುನಾವಣೆಯಲ್ಲಿ INDI ಮೈತ್ರಿಯನ್ನು ಸೋಲಿಸಲಾಯಿತು ಮತ್ತು ಎರಡನೇ ಹಂತದಲ್ಲಿ ಧ್ವಂಸವಾಯಿತು: ಬೀಡಿನಲ್ಲಿ ಪ್ರಧಾನಿ ಮೋದಿ

May 07th, 03:45 pm

ಪ್ರಧಾನಿ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ಬೀಡ್‌ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ, ಮುಂಬರುವ ಚುನಾವಣೆಗೆ ಮುನ್ನ ಬಿಜೆಪಿ ಮತ್ತು ಎನ್‌ಡಿಎಗೆ ಬೆಂಬಲವನ್ನು ಸಂಗ್ರಹಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಅಭಿವೃದ್ಧಿ, ಸಹಕಾರ ಚಳುವಳಿಗಳು ಮತ್ತು ಬಾಳಾಸಾಹೇಬ್ ವಿಖೆ ಪಾಟೀಲ್ ಅವರ ಪರಂಪರೆಯಲ್ಲಿ ಮಹಾರಾಷ್ಟ್ರದ ಮಹತ್ವದ ಕೊಡುಗೆಗಳನ್ನು ಒತ್ತಿ ಹೇಳಿದರು. ಬಾಳಾಸಾಹೇಬ ವಿಖೆ ಪಾಟೀಲರನ್ನು ಸ್ಮರಿಸಿದ ಅವರು, ರಾಜ್ಯದ ಪ್ರಗತಿಯಲ್ಲಿ ಅವರ ಪಾತ್ರವನ್ನು ಗುರುತಿಸಿದರು.

ಮಹಾರಾಷ್ಟ್ರದ ಅಹ್ಮದ್‌ನಗರ ಮತ್ತು ಬೀಡ್‌ನಲ್ಲಿ ಪ್ರಧಾನಿ ಮೋದಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದರು

May 07th, 03:30 pm

ಪ್ರಧಾನಿ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ಅಹ್ಮದ್‌ನಗರ ಮತ್ತು ಬೀಡ್‌ನಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ, ಮುಂಬರುವ ಚುನಾವಣೆಗೆ ಮುನ್ನ ಬಿಜೆಪಿ ಮತ್ತು ಎನ್‌ಡಿಎಗೆ ಬೆಂಬಲವನ್ನು ಸಂಗ್ರಹಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಅಭಿವೃದ್ಧಿಯಲ್ಲಿ ಮಹಾರಾಷ್ಟ್ರದ ಮಹತ್ವದ ಕೊಡುಗೆಗಳು, ಸಹಕಾರ ಚಳುವಳಿಗಳು ಮತ್ತು ಬಾಳಾಸಾಹೇಬ್ ವಿಖೆ ಪಾಟೀಲ್ ಅವರ ಪರಂಪರೆಯನ್ನು ಒತ್ತಿ ಹೇಳಿದರು. ಬಾಳಾಸಾಹೇಬ ವಿಖೆ ಪಾಟೀಲರನ್ನು ಪ್ರೀತಿಯಿಂದ ಸ್ಮರಿಸಿದ ಅವರು, ರಾಜ್ಯದ ಪ್ರಗತಿಯಲ್ಲಿ ಅವರ ಪಾತ್ರವನ್ನು ಗುರುತಿಸಿದರು.

ಇಂಡಿ ಅಲಯನ್ಸ್ ಗಣನೀಯ ಸಮಸ್ಯೆಗಳ ಕೊರತೆಯೊಂದಿಗೆ ಹೋರಾಡುತ್ತಿದೆ: ವಾರ್ಧಾದಲ್ಲಿ ಪ್ರಧಾನಿ ಮೋದಿ

April 19th, 06:00 pm

ಪ್ರಧಾನಿ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ವಾರ್ಧಾದಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಪ್ರಧಾನಮಂತ್ರಿಯವರು ಸಭಿಕರ ಮನಸೂರೆಗೊಂಡರು. ಪ್ರಧಾನಮಂತ್ರಿಯವರು ಕೂಡ ನೆರೆದವರ ಮೇಲೆ ತಮ್ಮ ಪ್ರೀತಿ ಮತ್ತು ಅಭಿಮಾನವನ್ನು ಸುರಿಸಿದರು.

ಮಹಾರಾಷ್ಟ್ರದ ವಾರ್ಧಾದ ಉತ್ಸಾಹಿಗಳು ಸಾರ್ವಜನಿಕ ಸಭೆಯಲ್ಲಿ ಪ್ರಧಾನಿ ಮೋದಿಯನ್ನು ಸ್ವಾಗತಿಸಿದರು

April 19th, 05:15 pm

ಪ್ರಧಾನಿ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ವಾರ್ಧಾದಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಪ್ರಧಾನಮಂತ್ರಿಯವರು ಸಭಿಕರ ಮನಸೂರೆಗೊಂಡರು. ಪ್ರಧಾನಮಂತ್ರಿಯವರು ಕೂಡ ನೆರೆದವರ ಮೇಲೆ ತಮ್ಮ ಪ್ರೀತಿ ಮತ್ತು ಅಭಿಮಾನವನ್ನು ಸುರಿಸಿದರು.

ಅಖಿಲ ಭಾರತ ಶಾಸಕಾಂಗ ಅಧ್ಯಕ್ಷೀಯ ಅಧಿಕಾರಿಗಳ ಸಮಾವೇಶದಲ್ಲಿ (ಆಲ್ ಇಂಡಿಯಾ ಪ್ರಿಸೈಡಿಂಗ್ ಆಫೀಸರ್ಸ್ ಕಾನ್ಫರೆನ್ಸ್ ) ಪ್ರಧಾನಮಂತ್ರಿಯವರು ವಿಡಿಯೊ ಸಂದೇಶ ಮೂಲಕ ಮಾಡಿದ ಭಾಷಣದ ಕನ್ನಡ ಅವತರಣಿಕೆ

January 27th, 04:00 pm

ಅಖಿಲ ಭಾರತ ವಿಧಾನಸಭಾ ಅಧ್ಯಕ್ಷರ ಸಮ್ಮೇಳನಕ್ಕೆ ನಿಮ್ಮೆಲ್ಲರಿಗೂ ಆತ್ಮೀಯ ಸ್ವಾಗತ! ಈ ಬಾರಿಯ ಸಮ್ಮೇಳನಕ್ಕೆ ವಿಶೇಷ ಮಹತ್ವವಿದೆ. 75ನೇ ಗಣರಾಜ್ಯೋತ್ಸವದ ನಂತರ ಕೂಡಲೇ ಇದನ್ನು ನಡೆಸಲಾಗಿದೆ. ನಮ್ಮ ಸಂವಿಧಾನವು ಜನವರಿ 26 ರಂದು ಜಾರಿಗೆ ಬಂದಿತು, ಅದರ ಅಸ್ತಿತ್ವಕ್ಕೆ 75 ವರ್ಷಗಳು. ನಮ್ಮ ದೇಶದ ಪ್ರಜೆಗಳ ಪರವಾಗಿ ಸಂವಿಧಾನ ರಚನಾ ಸಭೆಯ ಎಲ್ಲ ಸದಸ್ಯರಿಗೆ ನನ್ನ ಗೌರವಪೂರ್ವಕ ನಮನಗಳನ್ನು ಸಲ್ಲಿಸುತ್ತೇನೆ.

ಅಖಿಲ ಭಾರತ ವಿಧಾನಸಭೆ ಸಭಾಧ್ಯಕ್ಷರು, ವಿಧಾನಪರಿಷತ್ ಸಭಾಪತಿಗಳ(ಪ್ರಿಸೈಡಿಂಗ್ ಆಫೀಸರ್ಸ್) ಸಮಾವೇಶ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ

January 27th, 03:30 pm

75ನೇ ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಸಮ್ಮೇಳನದ ಮಹತ್ವವನ್ನು ಒತ್ತಿ ಹೇಳಿದ ಪ್ರಧಾನ ಮಂತ್ರಿ, “ನಮ್ಮ ಸಂವಿಧಾನದ 75ನೇ ವರ್ಷವನ್ನು ಗುರುತಿಸುವ ಮೂಲಕ 75ನೇ ಗಣರಾಜ್ಯೋತ್ಸವದ ನಂತರ ಈ ಸಮ್ಮೇಳನವು ಹೆಚ್ಚಿನ ಮಹತ್ವ ಹೊಂದಿದೆ” ಎಂದ ಮೋದಿ ಅವರು, ಸಾಂವಿಧಾನಿಕ ಅಸೆಂಬ್ಲಿಯ ಸದಸ್ಯರಿಗೆ ಗೌರವ ಸಲ್ಲಿಸಿದರು.

ಕುಟುಂಬ ಸಮೇತರಾಗಿ ಪ್ರಧಾನಿ ಅವರನ್ನು ಭೇಟಿ ಮಾಡಿದ ಮಹಾರಾಷ್ಟ್ರ ಮುಖ್ಯಮಂತ್ರಿ

July 22nd, 10:13 pm

ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ತಮ್ಮ ಕುಟುಂಬದೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಹೊಸದಿಲ್ಲಿಯ ಅವರ ನಿವಾಸದಲ್ಲಿ ಭೇಟಿಯಾದರು.

ಮಹಾರಾಷ್ಟ್ರ ಉದ್ಯೋಗ ಮೇಳವನ್ನು ಉದ್ದೇಶಿಸಿ ಪ್ರಧಾನಮಂತ್ರಿಯವರ ವೀಡಿಯೊ ಸಂದೇಶದ ಇಂಗ್ಲಿಷ್ ಭಾಷಾಂತರ

November 03rd, 11:37 am

ಸರಕಾರಿ ಇಲಾಖೆಗಳಲ್ಲಿ ವಿವಿಧ ಹುದ್ದೆಗಳಿಗೆ ದೇಶದ ಯುವಕರಿಗೆ ಸಾಮೂಹಿಕವಾಗಿ ನೇಮಕಾತಿ ಪತ್ರಗಳನ್ನು ಒದಗಿಸುವ ಅಭಿಯಾನಕ್ಕೆ ಇಂದು ಮಹಾರಾಷ್ಟ್ರ ಸಹ ಸೇರ್ಪಡೆಯಾಗುತ್ತಿದೆ. ಧನ್ತೇರಸ್ ದಿನದಂದು, ಕೇಂದ್ರ ಸರಕಾರವು 10 ಲಕ್ಷ ಉದ್ಯೋಗಗಳನ್ನು ಒದಗಿಸುವ ಅಭಿಯಾನವನ್ನು ಪ್ರಾರಂಭಿಸಿತ್ತು. ಮುಂಬರುವ ದಿನಗಳಲ್ಲಿ ವಿವಿಧ ರಾಜ್ಯ ಸರಕಾರಗಳು ಸಹ ಇದೇ ರೀತಿಯ ಉದ್ಯೋಗ ಮೇಳಗಳನ್ನು ಆಯೋಜಿಸುತ್ತವೆ ಎಂದು ನಾನು ಆಗಲೇ ಹೇಳಿದ್ದೆ. ಇದಕ್ಕೆ ಅನುಗುಣವಾಗಿ, ಇಂದು, ಮಹಾರಾಷ್ಟ್ರದ ನೂರಾರು ಯುವಕರಿಗೆ ನೇಮಕಾತಿ ಪತ್ರಗಳನ್ನು ನೀಡಲಾಗುತ್ತಿದೆ. ಇಂದು ನೇಮಕಾತಿ ಆದೇಶ ಪತ್ರಗಳನ್ನು ಪಡೆಯುತ್ತಿರುವ ಯುವಕ-ಯುವತಿಯರನ್ನು ನಾನು ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ!

ಮಹಾರಾಷ್ಟ್ರ ರೋಜ್‌ಗಾರ್ ಮೇಳ ಉದ್ದೇಶಿಸಿ ಮಾತನಾಡಿದ ಪ್ರಧಾನಿ

November 03rd, 11:30 am

ದಲಿತ-ಹಿಂದುಳಿದ, ಬುಡಕಟ್ಟು, ಸಾಮಾನ್ಯ ವರ್ಗ ಮತ್ತು ಮಹಿಳೆಯರು ಸೇರಿ ಎಲ್ಲರಿಗೂ ಉದ್ಯೋಗ ಮತ್ತು ಸ್ವಯಂ ಉದ್ಯೋಗದ ಸಮಾನ ಅವಕಾಶಗಳನ್ನು ದೊರಕಿಸಲು ಸರ್ಕಾರದ ಪ್ರಯತ್ನಗಳ ಪರಿಣಾಮ ಎಲ್ಲರಿಗೂ ಅವಕಾಶಗಳು ಲಭ್ಯವಾಗುತ್ತಿರುವುದು ಪ್ರಮುಖ ಸಂಗತಿಯಾಗಿದೆ ಎಂದು ಪ್ರಧಾನಮಂತ್ರಿ ಬಲವಾಗಿ ಪ್ರತಿಪಾದಿಸಿದರು. ಸ್ವಸಹಾಯ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ 8 ಕೋಟಿ ಮಹಿಳೆಯರಿಗೆ 5 ಲಕ್ಷ ಕೋಟಿ ರೂಪಾಯಿ ನೆರವು ನೀಡಿರುವನ್ನು ಪ್ರಧಾನಮಂತ್ರಿ ಪ್ರಸ್ತಾಪಿಸಿದರು.

ಪ್ರಧಾನಿಯವರನ್ನು ಭೇಟಿ ಮಾಡಿದ ಮಹಾರಾಷ್ಟ್ರದ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ

July 09th, 06:54 pm

ಮಹಾರಾಷ್ಟ್ರದ ಮುಖ್ಯಮಂತ್ರಿ ಶ್ರೀ ಏಕನಾಥ್ ಶಿಂಧೆ ಮತ್ತು ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಶ್ರೀ ದೇವೇಂದ್ರ ಫಡ್ನವೀಸ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

PM Modi congratulates Shri Eknath Shinde and Shri Devendra Fadnavis

June 30th, 08:40 pm

The Prime Minister, Shri Narendra Modi has congratulated Shri Eknath Shinde on taking oath as Chief Minister of Maharashtra.