ಮಹಾರಾಷ್ಟ್ರದ ವಾರ್ಧಾದಲ್ಲಿ ರಾಷ್ಟ್ರೀಯ 'ಪಿಎಂ ವಿಶ್ವಕರ್ಮ' ವಾರ್ಷಿಕೋತ್ಸವ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
September 20th, 11:45 am
2 ದಿನಗಳ ಹಿಂದೆಯಷ್ಟೇ ವಿಶ್ವಕರ್ಮ ಜಯಂತಿ ಆಚರಿಸಿದ್ದೆವು. ಇಂದು ನಾವು ವಾರ್ಧಾದ ಪವಿತ್ರ ಭೂಮಿಯಲ್ಲಿ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ಯಶಸ್ಸನ್ನು ಆಚರಿಸುತ್ತಿದ್ದೇವೆ. 1932ರ ಇದೇ ದಿನದಂದು ಮಹಾತ್ಮ ಗಾಂಧೀಜಿ ಅವರು ಅಸ್ಪೃಶ್ಯತೆಯ ವಿರುದ್ಧ ತಮ್ಮ ಅಭಿಯಾನ ಆರಂಭಿಸಿದ್ದರು ಎಂಬುದು ಇಂದಿನ ವಿಶೇಷ. ಈ ಹಿನ್ನೆಲೆಯಲ್ಲಿ ವಿನೋಬಾ ಭಾವೆ ಅವರ ಪುಣ್ಯಭೂಮಿ, ಮಹಾತ್ಮ ಗಾಂಧಿ ಅವರ ‘ಕರ್ಮಭೂಮಿ’ ಮತ್ತು ವಾರ್ಧಾ ಭೂಮಿಯಲ್ಲಿ ವಿಶ್ವಕರ್ಮ ಯೋಜನೆಯ 1 ವರ್ಷದ ಸಂಭ್ರಮಾಚರಣೆಯು ನಮ್ಮ ‘ವಿಕಸಿತ ಭಾರತ’(ಅಭಿವೃದ್ಧಿ ಹೊಂದಿದ ಭಾರತ)ದ ಸಂಕಲ್ಪಕ್ಕೆ ಹೊಸ ಚೈತನ್ಯ ನೀಡುವ ಸಾಧನೆ ಮತ್ತು ಸ್ಫೂರ್ತಿಯ ಸಂಗಮವಾಗಿದೆ. ವಿಶ್ವಕರ್ಮ ಯೋಜನೆ ಮೂಲಕ ನಾವು ಶ್ರಮದ ಮೂಲಕ ಸಮೃದ್ಧಿ ಮತ್ತು ಕೌಶಲ್ಯದ ಮೂಲಕ ಉತ್ತಮ ಭವಿಷ್ಯದ ಬದ್ಧತೆ ಹೊಂದಿದ್ದೇವೆ. ವಾರ್ಧಾದಲ್ಲಿ ಬಾಪು ಅವರ ಸ್ಫೂರ್ತಿಗಳು ಈ ಬದ್ಧತೆಗಳನ್ನು ಪೂರೈಸಲು ನಮಗೆ ಸಹಾಯ ಮಾಡುತ್ತದೆ. ಈ ಉಪಕ್ರಮಕ್ಕೆ ಸಂಬಂಧಿಸಿದ ಎಲ್ಲರಿಗೂ ಮತ್ತು ದೇಶಾದ್ಯಂತದ ಎಲ್ಲಾ ಫಲಾನುಭವಿಗಳಿಗೆ ನನ್ನ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ವಾರ್ಧಾದಲ್ಲಿ ರಾಷ್ಟ್ರೀಯ ಪ್ರಧಾನಮಂತ್ರಿ ವಿಶ್ವಕರ್ಮ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು
September 20th, 11:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಹಾರಾಷ್ಟ್ರದ ವಾರ್ಧಾದಲ್ಲಿ ರಾಷ್ಟ್ರೀಯ ಪ್ರಧಾನಮಂತ್ರಿ ವಿಶ್ವಕರ್ಮ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಪ್ರಧಾನಮಂತ್ರಿಯವರು ‘ಆಚಾರ್ಯ ಚಾಣಕ್ಯ ಕೌಶಲ್ಯ ಅಭಿವೃದ್ಧಿ’ಯೋಜನೆ ಮತ್ತು ‘ಪುಣ್ಯಶ್ಲೋಕ ಅಹಲ್ಯಾದೇವಿ ಹೋಳ್ಕರ್ ಮಹಿಳಾ ಸ್ಟಾರ್ಟಪ್ ಯೋಜನೆʼಗೆ ಚಾಲನೆ ನೀಡಿದರು. ಪ್ರಧಾನಮಂತ್ರಿ ವಿಶ್ವಕರ್ಮ ಫಲಾನುಭವಿಗಳಿಗೆ ಪ್ರಮಾಣಪತ್ರಗಳು ಮತ್ತು ಸಾಲಗಳನ್ನು ಬಿಡುಗಡೆ ಮಾಡಿದರು ಮತ್ತು ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಒಂದು ವರ್ಷದ ಪ್ರಗತಿಯನ್ನು ಗುರುತಿಸುವ ಸ್ಮರಣಾರ್ಥ ಅಂಚೆಚೀಟಿಯನ್ನು ಬಿಡುಗಡೆ ಮಾಡಿದರು. ಮಹಾರಾಷ್ಟ್ರದ ಅಮರಾವತಿಯಲ್ಲಿ ಪ್ರಧಾನಮಂತ್ರಿ ಮೆಗಾ ಇಂಟಿಗ್ರೇಟೆಡ್ ಟೆಕ್ಸ್‌ಟೈಲ್ ರೀಜನ್ ಅಂಡ್ ಅಪಾರಲ್ (ಪಿಎಂ ಮಿತ್ರಾ) ಪಾರ್ಕ್ ಗೆ ಶ್ರೀ ಮೋದಿಯವರು ಶಂಕುಸ್ಥಾಪನೆ ಮಾಡಿದರು. ಈ ಸಂದರ್ಭದಲ್ಲಿ ಆಯೋಜಿಸಲಾದ ವಸ್ತುಪ್ರದರ್ಶನವನ್ನು ಪ್ರಧಾನಿಯವರು ವೀಕ್ಷಿಸಿದರು.ಗುಜರಾತ್ ನ ಅಹ್ಮದಾಬಾದ್ ನಲ್ಲಿ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣ
March 12th, 10:00 am
ಗುಜರಾತ್ ರಾಜ್ಯಪಾಲ ಆಚಾರ್ಯ ಶ್ರೀ ದೇವವ್ರತ್ ಜೀ, ಗುಜರಾತ್ ನ ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಭಾಯಿ ಪಟೇಲ್ ಜೀ, ಸಂಪುಟದ ನನ್ನ ಸಹೋದ್ಯೋಗಿ, ರೈಲ್ವೆ ಸಚಿವ ಶ್ರೀ ಅಶ್ವಿನಿ ವೈಷ್ಣವ್ ಜೀ, ಸಂಸತ್ತಿನಲ್ಲಿ ನನ್ನ ಸಹವರ್ತಿ ಮತ್ತು ಗುಜರಾತ್ ರಾಜ್ಯ ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಶ್ರೀ ಸಿ.ಆರ್. ಪಾಟೀಲ್ ಮತ್ತು ಎಲ್ಲಾ ಗೌರವಾನ್ವಿತ ರಾಜ್ಯಪಾಲರು, ಮುಖ್ಯಮಂತ್ರಿಗಳು, ಸಂಸತ್ ಸದಸ್ಯರು, ಶಾಸನ ಸಭೆಗಳ ಸದಸ್ಯರು ಮತ್ತು ಮಂತ್ರಿಗಳು. ಸ್ಥಳೀಯ ಸಂಸತ್ ಸದಸ್ಯರು ಮತ್ತು ಸಚಿವರ ನೇತೃತ್ವದಲ್ಲಿ ಇಂದು ದೇಶಾದ್ಯಂತ 700 ಕ್ಕೂ ಹೆಚ್ಚು ಸ್ಥಳಗಳಲ್ಲಿ ಲಕ್ಷಾಂತರ ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದನ್ನು ನಾನು ಪರದೆಯ ಮೇಲೆ ನೋಡುತ್ತಿದ್ದೇನೆ. ಬಹುಶಃ ಭಾರತದ ಮೂಲೆ ಮೂಲೆಗೂ ವ್ಯಾಪಿಸಿರುವ ಇಂತಹ ಬೃಹತ್ ಘಟನೆ ರೈಲ್ವೆಯ ಇತಿಹಾಸದಲ್ಲಿ ಹಿಂದೆಂದೂ ಸಂಭವಿಸಿಲ್ಲ. 100 ವರ್ಷಗಳಲ್ಲಿ ಇಂತಹ ಕಾರ್ಯಕ್ರಮ ನಡೆಯುತ್ತಿರುವುದು ಇದೇ ಮೊದಲು. ಈ ಭವ್ಯವಾದ ಘಟನೆಗಾಗಿ ನಾನು ರೈಲ್ವೆಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.ಗುಜರಾತ್ ನ ಅಹ್ಮದಾಬಾದ್ ನಲ್ಲಿ 1,06,000 ಕೋಟಿ ರೂ.ಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಮಂತ್ರಿ
March 12th, 09:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತ್ ನ ಅಹ್ಮದಾಬಾದ್ ನಲ್ಲಿರುವ ಡೆಡಿಕೇಟೆಡ್ ಫ್ರೈಟ್ ಕಾರಿಡಾರ್ ನ ಕಾರ್ಯಾಚರಣೆ ನಿಯಂತ್ರಣ ಕೇಂದ್ರದಲ್ಲಿ 1,06,000 ಕೋಟಿ ರೂ.ಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು. ಇಂದಿನ ಅಭಿವೃದ್ಧಿ ಯೋಜನೆಗಳು ರೈಲ್ವೆ ಮೂಲಸೌಕರ್ಯ, ಸಂಪರ್ಕ ಮತ್ತು ಪೆಟ್ರೋಕೆಮಿಕಲ್ಸ್ ಸೇರಿದಂತೆ ಅನೇಕ ಕ್ಷೇತ್ರಗಳನ್ನು ಒಳಗೊಂಡಿವೆ. ಅವರು 10 ಹೊಸ ವಂದೇ ಭಾರತ್ ರೈಲುಗಳಿಗೆ ಹಸಿರು ನಿಶಾನೆ ತೋರಿದರು.Our govt is engaged in enhancing the capabilities of every poor, tribal, dalit & deprived person of country: PM
March 02nd, 03:00 pm
Prime Minister Narendra Modi dedicated to the nation and laid the foundation stone for multiple development projects worth Rs 21,400 crores in Aurangabad, Bihar. Addressing the gathering, the Prime Minister said that a new chapter of Bihar’s development is being written today on the land of Aurangabad which has given birth to many freedom fighters and great personalities such as Bihar Vibhuti Shri Anugrah Narayan.ಬಿಹಾರದ ಔರಂಗಾಬಾದ್ ನಲ್ಲಿ ಸುಮಾರು 21,400 ಕೋಟಿ ರೂ. ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳನ್ನು ಲೋಕಾರ್ಪಣೆಗೊಳಿಸಿದ ಮತ್ತು ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ
March 02nd, 02:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಿಹಾರದ ಔರಂಗಾಬಾದ್ ನಲ್ಲಿ ಇಂದು ಸುಮಾರು 21,400 ಕೋಟಿ ರೂ. ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳನ್ನು ಲೋಕಾರ್ಪಣೆಗೊಳಿಸಿದ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಇಂದಿನ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ರಸ್ತೆ, ರೈಲ್ವೆ ಮತ್ತು ನಮಾಮಿ ಗಂಗೆ ಮತ್ತಿತರ ಯೋಜನೆಗಳು ಸೇರಿವೆ. ಪ್ರಧಾನಮಂತ್ರಿ ಅವರು ಫೋಟೋ ಗ್ಯಾಲರಿಯಲ್ಲಿ ಓಡಾಡಿ ವೀಕ್ಷಿಸಿದರು.ಪ್ರಧಾನಿ ಮೋದಿಯವರಿಂದ ಗುಜರಾತ್‌ನ ಕೆವಾಡಿಯಾದಲ್ಲಿ ಆರೋಗ್ಯ ವನ, ಆರೋಗ್ಯ ಕುಟೀರ, ಏಕ್ತಾ ಮಾಲ್ ಮತ್ತು ಮಕ್ಕಳ ಪೌಷ್ಠಿಕಾಂಶ ಉದ್ಯಾನಗಳ ಉದ್ಘಾಟನೆ
October 30th, 03:11 pm
ಗುಜರಾತ್‌ನಲ್ಲಿ ಕೆವಾಡಿಯಾದ ಸಮಗ್ರ ಅಭಿವೃದ್ಧಿ ಯೋಜನೆಯಡಿಯಲ್ಲಿ ವಿವಿಧ ಯೋಜನೆಗಳನ್ನು ಪ್ರಧಾನಿ ಶ್ರೀ ನರೇಂದ್ರ ಮೋದಿ ಉದ್ಘಾಟಿಸಿದರು.