ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ 'ಇಂಡಿಯಾಸ್ ಟೆಕ್ಕೇಡ್: ಚಿಪ್ಸ್ ಫಾರ್ ವಿಕಸಿತ ಭಾರತ' ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅನುವಾದ

March 13th, 11:30 am

ನನ್ನ ಕ್ಯಾಬಿನೆಟ್ ಸಹೋದ್ಯೋಗಿ ಶ್ರೀ ಅಶ್ವಿನಿ ವೈಷ್ಣವ್ ಜೀ, ರಾಜೀವ್ ಚಂದ್ರಶೇಖರ್ ಜೀ, ಅಸ್ಸಾಂ ಮತ್ತು ಗುಜರಾತ್ ಮುಖ್ಯಮಂತ್ರಿಗಳು, ಟಾಟಾ ಗ್ರೂಪ್ ನ ಅಧ್ಯಕ್ಷ ಶ್ರೀ ಎನ್ ಚಂದ್ರಶೇಖರನ್, ಸಿಜಿ ಪವರ್ ಅಧ್ಯಕ್ಷ ವೆಲ್ಲಯನ್ ಸುಬ್ಬಯ್ಯ ಜೀ ಮತ್ತು ಕೇಂದ್ರ, ರಾಜ್ಯ ಮತ್ತು ಕೈಗಾರಿಕಾ ಕ್ಷೇತ್ರದ ಇತರ ಎಲ್ಲ ಗಣ್ಯರು. ಮಹಿಳೆಯರೇ ಮತ್ತು ಮಹನೀಯರೇ!

'ಇಂಡಿಯಾಸ್ ಟೆಕ್ಡೆ: ಚಿಪ್ಸ್ ಫಾರ್ ವಿಕಸಿತ ಭಾರತ' ಕಾರ್ಯಕ್ರಮದಲ್ಲಿ ಪಾಲ್ಗೊಂಡ ಪ್ರಧಾನಿ

March 13th, 11:12 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ 'ಇಂಡಿಯಾಸ್ ಟೆಕ್ಕೇಡ್: ಚಿಪ್ಸ್ ಫಾರ್ ವಿಕ್ಷಿತ್ ಭಾರತ್' ಕಾರ್ಯಕ್ರಮವನ್ನುದ್ದೇಶಿಸಿ ಭಾಷಣ ಮಾಡಿದರು ಮತ್ತು ಸುಮಾರು 1.25 ಲಕ್ಷ ಕೋಟಿ ರೂಪಾಯಿ ಮೌಲ್ಯದ ಮೂರು ಅರೆವಾಹಕ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಗುಜರಾತ್ನ ಧೋಲೆರಾ ವಿಶೇಷ ಹೂಡಿಕೆ ಪ್ರದೇಶದಲ್ಲಿ (ಡಿಎಸ್ಐಆರ್) ಅರೆವಾಹಕ ಫ್ಯಾಬ್ರಿಕೇಷನ್ ಸೌಲಭ್ಯ, ಅಸ್ಸಾಂನ ಮೋರಿಗಾಂವ್ನಲ್ಲಿ ಹೊರಗುತ್ತಿಗೆ ಅರೆವಾಹಕ ಜೋಡಣೆ ಮತ್ತು ಟೆಸ್ಟ್ (ಒಎಸ್ಎಟಿ) ಸೌಲಭ್ಯ ಮತ್ತು ಗುಜರಾತ್ನ ಸನಂದ್ನಲ್ಲಿ ಹೊರಗುತ್ತಿಗೆ ಅರೆವಾಹಕ ಜೋಡಣೆ ಮತ್ತು ಪರೀಕ್ಷೆ (ಒಎಸ್ಎಟಿ) ಸೌಲಭ್ಯವನ್ನು ಇಂದು ಉದ್ಘಾಟಿಸಲಾಯಿತು.

ಧಾರವಾಡದಲ್ಲಿರುವ ಎಲೆಕ್ಟ್ರಾನಿಕ್ ಉತ್ಪಾದನಾ ಕ್ಲಸ್ಟರ್ ಧಾರವಾಡ ಮತ್ತು ಸುತ್ತಮುತ್ತಲಿನ ಜನರಿಗೆ ಹೆಚ್ಚಿನ ಪ್ರಯೋಜನವನ್ನು ನೀಡುತ್ತದೆ: ಪ್ರಧಾನಿ

March 25th, 11:17 am

ಧಾರವಾಡದಲ್ಲಿರುವ ಎಲೆಕ್ಟ್ರಾನಿಕ್ ಉತ್ಪಾದನಾ ಕ್ಲಸ್ಟರ್ ಧಾರವಾಡ ಮತ್ತು ಸುತ್ತಮುತ್ತಲಿನ ಜನರಿಗೆ ಹೆಚ್ಚಿನ ಪ್ರಯೋಜನವನ್ನು ನೀಡುತ್ತದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ. ಇದು ಉತ್ಪಾದನೆ ಮತ್ತು ನಾವೀನ್ಯತೆಯ ಜಗತ್ತಿನಲ್ಲಿ ಕರ್ನಾಟಕದ ಪ್ರಗತಿಯನ್ನು ಹೆಚ್ಚಿಸುತ್ತದೆ ಎಂದು ಶ್ರೀ ನರೇಂದ್ರ ಮೋದಿ ತಿಳಿಸಿದ್ದಾರೆ.

'ಹಸಿರು ಬೆಳವಣಿಗೆ' ಕುರಿತ ಬಜೆಟ್ ನಂತರದ ವೆಬಿನಾರ್ ನಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅನುವಾದ

February 23rd, 10:22 am

2014 ರಿಂದ ಭಾರತದ ಎಲ್ಲಾ ಬಜೆಟ್ ಗಳಲ್ಲಿ ಒಂದು ಮಾದರಿ ಇದೆ. ಅಂದಿನಿಂದ ನಮ್ಮ ಸರ್ಕಾರದ ಪ್ರತಿಯೊಂದು ಬಜೆಟ್ ಪ್ರಸ್ತುತ ಸವಾಲುಗಳನ್ನು ಏಕಕಾಲದಲ್ಲಿ ಎದುರಿಸುತ್ತಾ ನವಯುಗದ ಸುಧಾರಣೆಗಳಿಗೆ ಒತ್ತು ನೀಡುತ್ತಿದೆ. ಹಸಿರು ಬೆಳವಣಿಗೆ ಮತ್ತು ಇಂಧನ ಪರಿವರ್ತನೆಗಾಗಿ ಭಾರತದ ಕಾರ್ಯತಂತ್ರದ ಮೂರು ಪ್ರಮುಖ ಸ್ತಂಭಗಳಿವೆ. ಮೊದಲನೆಯದಾಗಿ, ನವೀಕರಿಸಬಹುದಾದ ಇಂಧನದ ಉತ್ಪಾದನೆಯನ್ನು ಹೆಚ್ಚಿಸುವುದು; ಎರಡನೆಯದಾಗಿ, ನಮ್ಮ ಆರ್ಥಿಕತೆಯಲ್ಲಿ ಪಳೆಯುಳಿಕೆ ಇಂಧನಗಳ ಬಳಕೆಯನ್ನು ತಗ್ಗಿಸುವುದು; ಮತ್ತು ಮೂರನೆಯದಾಗಿ: ದೇಶದೊಳಗೆ ಅನಿಲ ಆಧಾರಿತ ಆರ್ಥಿಕತೆಯತ್ತ ವೇಗವಾಗಿ ಮುಂದುವರಿಯುವುದು. ಈ ಕಾರ್ಯತಂತ್ರದ ಭಾಗವಾಗಿ, ಎಥೆನಾಲ್ ಮಿಶ್ರಣ, ಪಿಎಂ-ಕುಸುಮ್ ಯೋಜನೆ, ಸೌರ ವಿದ್ಯುತ್ ಉತ್ಪಾದನೆಗೆ ಪ್ರೋತ್ಸಾಹ, ಛಾವಣಿ ಮೇಲೆ ಸೌರ ಯೋಜನೆ, ಕಲ್ಲಿದ್ದಲು ಅನಿಲೀಕರಣ ಅಥವಾ ಬ್ಯಾಟರಿಯಲ್ಲಿ ವಿದ್ಯುತ್ ಸಂಗ್ರಹಣೆ ಸೇರಿದಂತೆ ಅನೇಕ ಪ್ರಮುಖ ಘೋಷಣೆಗಳನ್ನು ನಂತರದ ಬಜೆಟ್ ನಲ್ಲಿ ಮಾಡಲಾಗಿದೆ. ಈ ವರ್ಷದ ಬಜೆಟ್ ನಲ್ಲಿ, ಉದ್ಯಮಕ್ಕೆ ಹಸಿರು ಸಾಲಗಳಿವೆ ಮತ್ತು ರೈತರಿಗೆ ಪಿಎಂ ಪ್ರಣಾಮ್ ಯೋಜನೆಯೂ ಇದೆ. ಹಳ್ಳಿಗಳಿಗೆ ಗೋಬರ್ ಧನ್ ಯೋಜನೆ ಮತ್ತು ನಗರ ಪ್ರದೇಶಗಳಿಗೆ ವಾಹನ ಗುಜರಿ ನೀತಿ ಇದೆ. ಹಸಿರು ಜಲಜನಕಕ್ಕೆ ಒತ್ತು ನೀಡಲಾಗಿದೆ ಮತ್ತು ಗದ್ದೆ ಸಂರಕ್ಷಣೆಗೆ ಸಮಾನ ಗಮನವಿದೆ. ಹಸಿರು ಬೆಳವಣಿಗೆಗೆ ಸಂಬಂಧಿಸಿದಂತೆ ಈ ವರ್ಷದ ಬಜೆಟ್ ನಲ್ಲಿ ಮಾಡಲಾದ ಅವಕಾಶಗಳು ಒಂದು ರೀತಿಯಲ್ಲಿ ನಮ್ಮ ಭವಿಷ್ಯದ ಪೀಳಿಗೆಯ ಉಜ್ವಲ ಭವಿಷ್ಯಕ್ಕೆ ಅಡಿಪಾಯವಾಗಿವೆ.

'ಹಸಿರು ಪ್ರಗತಿ(ಬೆಳವಣಿಗೆ)' ಕುರಿತ ಬಜೆಟ್ ನಂತರದ ವೆಬಿನಾರ್ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ

February 23rd, 10:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು 'ಹಸಿರು ಬೆಳವಣಿಗೆ' ಕುರಿತ ಬಜೆಟ್ ನಂತರದ ವೆಬಿನಾರ್ ಉದ್ದೇಶಿಸಿ ಮಾತನಾಡಿದರು. 2023ರ ಕೇಂದ್ರ ಬಜೆಟ್ ನಲ್ಲಿ ಘೋಷಿಸಲಾದ ಉಪಕ್ರಮಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಸಲಹೆ, ಸೂಚನೆಗಳನ್ನು ಪಡೆಯಲು ಸರ್ಕಾರವು ಆಯೋಜಿಸಿರುವ ಬಜೆಟ್ ನಂತರದ 12 ವೆಬಿನಾರ್‌ಗಳ ಸರಣಿಯಲ್ಲಿ ಇದು ಮೊದಲನೆಯದಾಗಿದೆ.

The whole world is looking at India’s youth with hope: PM Modi

July 29th, 12:42 pm

PM Modi addressed the 42nd Convocation of Anna University in Chennai. The Prime Minister remarked, “The whole world is looking at India’s youth with hope. Because you are the growth engines of the country and India is the world’s growth engine.”

PM addresses 42nd Convocation of Anna University, Chennai

July 29th, 09:48 am

PM Modi addressed the 42nd Convocation of Anna University in Chennai. The Prime Minister remarked, “The whole world is looking at India’s youth with hope. Because you are the growth engines of the country and India is the world’s growth engine.”

ಗುಜರಾತ್‌ನ ಗಾಂಧಿನಗರದಲ್ಲಿ ನಡೆದ ʻಡಿಜಿಟಲ್ ಇಂಡಿಯಾ ಸಪ್ತಾಹ-2022ʼರಲ್ಲಿ ಪ್ರಧಾನ ಮಂತ್ರಿಯವರ ಭಾಷಣದ ಇಂಗ್ಲಿಷ್ ಭಾಷಾಂತರ

July 04th, 10:57 pm

ಇಂದಿನ ಕಾರ್ಯಕ್ರಮವು ಈ 21ನೇ ಶತಮಾನದಲ್ಲಿ ಹೆಚ್ಚೆಚ್ಚು ಆಧುನಿಕವಾಗುತ್ತಿರುವ ಭಾರತದ ಒಂದು ಇಣುಕುನೋಟವಾಗಿದೆ. ʻಡಿಜಿಟಲ್ ಇಂಡಿಯಾʼ ಅಭಿಯಾನದ ರೂಪದಲ್ಲಿ ತಂತ್ರಜ್ಞಾನದ ಬಳಕೆಯು ಇಡೀ ಮನುಕುಲಕ್ಕೆ ಎಷ್ಟು ಕ್ರಾಂತಿಕಾರಕವಾಗಬಲ್ಲದು ಎಂಬುದನ್ನು ಭಾರತವು ವಿಶ್ವದ ಮುಂದೆ ಪ್ರದರ್ಶಿಸಿದೆ.

ಗಾಂಧಿನಗರದಲ್ಲಿ ಡಿಜಿಟಲ್ ಇಂಡಿಯಾ ಸಪ್ತಾಹ 2022 ಉದ್ಘಾಟಿಸಿದ ಪ್ರಧಾನಿ

July 04th, 04:40 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗಾಂಧಿನಗರದಲ್ಲಿ ಡಿಜಿಟಲ್ ಇಂಡಿಯಾ ಸಪ್ತಾಹ 2022 ಅನ್ನು ಉದ್ಘಾಟಿಸಿದರು, ಇದರ ಧ್ಯೇಯವಾಕ್ಯ ʼನವ ಭಾರತದ ತಂತ್ರಜ್ಞಾನ ದಶಕಕ್ಕೆ ವೇಗವರ್ಧನೆʼ (ಕ್ಯಾಟಲೈಸಿಂಗ್ ನ್ಯೂ ಇಂಡಿಯಾಸ್ ಟೆಕ್ಡೇಡ್). ಕಾರ್ಯಕ್ರಮದಲ್ಲಿ ಪ್ರಧಾನಿಯವರು ತಂತ್ರಜ್ಞಾನದ ಲಭ್ಯತೆಯನ್ನು ಹೆಚ್ಚಿಸುವ, ಜೀವನವನ್ನು ಸುಲಭಗೊಳಿಸುವ ಮತ್ತು ಸ್ಟಾರ್ಟ್‌ಅಪ್‌ಗಳಿಗೆ ಉತ್ತೇಜನವನ್ನು ನೀಡಲು ಸೇವಾ ವಿತರಣೆಯನ್ನು ಸುಗಮಗೊಳಿಸುವ ಉದ್ದೇಶದ ಬಹು ಡಿಜಿಟಲ್ ಉಪಕ್ರಮಗಳಿಗೆ ಚಾಲನೆ ನೀಡಿದರು. ಅವರು ಚಿಪ್ಸ್ ಟು ಸ್ಟಾರ್ಟ್ಅಪ್ (ಸಿ2ಎಸ್) ಕಾರ್ಯಕ್ರಮದ ಅಡಿಯಲ್ಲಿ ಬೆಂಬಲಿಸುವ 30 ಸಂಸ್ಥೆಗಳ ಮೊದಲ ಸಮೂಹವನ್ನು ಘೋಷಿಸಿದರು. ಈ ಸಂದರ್ಭದಲ್ಲಿ ಗುಜರಾತ್ ಮುಖ್ಯಮಂತ್ರಿ ಶ್ರೀ ಭೂಪೇಂದ್ರಭಾಯಿ ಪಟೇಲ್, ಕೇಂದ್ರ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಮತ್ತು ಶ್ರೀ ರಾಜೀವ್ ಚಂದ್ರಶೇಖರ್, ರಾಜ್ಯದ ಸಚಿವರು, ಜನಪ್ರತಿನಿಧಿಗಳು, ಸ್ಟಾರ್ಟಪ್‌ ಮತ್ತು ಇತರ ಕ್ಷೇತ್ರಗಳ ಭಾಗೀದಾರರು ಉಪಸ್ಥಿತರಿದ್ದರು.

ದೇಶಾದ್ಯಂತ ವಿವಿಧ ಡಿಜಿಟಲ್ ಇಂಡಿಯಾ ಉಪಕ್ರಮಗಳ ಫಲಾನುಭವಿಗಳೊಂದಿಗೆ ವಿಡಿಯೋ ಬ್ರಿಜ್ ಮೂಲಕ ಪ್ರಧಾನಿ ಸಂವಾದ

June 15th, 10:56 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು, ದೇಶಾದ್ಯಂತದ ವಿವಿಧ ಡಿಜಿಟಲ್ ಇಂಡಿಯಾ ಅಭಿಯಾನ ಯೋಜನೆಯ ಫಲಾನುಭವಿಗಳೊಂದಿಗೆ ವಿಡಿಯೋ ಬ್ರಿಜ್ ಮೂಲಕ ಸಂವಾದ ನಡೆಸಿದರು. ಸಮಾನ ಸೇವಾ ಕೇಂದ್ರಗಳು, ಎನ್.ಐ.ಸಿ.

ಹೆಚ್ಚು ಡಿಜಿಟಲ್ ಪಾವತಿಯ ಕಡೆಗೆ ಚಳುವಳಿಯು ಮಧ್ಯವರ್ತಿಗಳನ್ನು ನಿರ್ಮೂಲನೆ ಮಾಡಲು ಸಂಬಂಧಿಸಿದೆ: ಪ್ರಧಾನಿ ಮೋದಿ

June 15th, 10:56 am

ವಿವಿಧ ಡಿಜಿಟಲ್ ಇಂಡಿಯಾ ಪ್ರಯತ್ನಗಳ ಬಗ್ಗೆ ಚರ್ಚೆ ನಡೆಸಿ, ಪ್ರಧಾನಿ ಮೋದಿ ಅವರು ತಂತ್ರಜ್ಞಾನದ ವ್ಯಾಪ್ತಿಯನ್ನು ಮತ್ತಷ್ಟು ಗ್ರಾಮೀಣ ಪ್ರದೇಶಗಳಲ್ಲಿ ಮುಂದೂಡಬೇಕೆಂಬ ಉದ್ದೇಶವನ್ನು ತಿಳಿಸಿದರು.

Pradhan Mantri Awas Yojana is a way to help the poor realise their dreams: PM Modi in Chhattisgarh

February 21st, 10:51 am



PM in Naya Raipur

February 21st, 10:50 am