Developing Indian Railways is key to achieving the resolve of Viksit Bharat: PM
January 06th, 01:00 pm
PM Modi inaugurated key railway projects in Jammu, including the new Jammu Railway Division, and launched the Charlapalli Terminal Station in Telangana. He also laid the foundation for the Rayagada Railway Division Building in Odisha. These initiatives aim to modernize railway infrastructure, improve connectivity, create jobs, and promote regional development, with special emphasis on enhancing passenger facilities and boosting economic growth.PM Modi inaugurates and lays foundation stone of various railway projects
January 06th, 12:30 pm
PM Modi inaugurated key railway projects in Jammu, including the new Jammu Railway Division, and launched the Charlapalli Terminal Station in Telangana. He also laid the foundation for the Rayagada Railway Division Building in Odisha. These initiatives aim to modernize railway infrastructure, improve connectivity, create jobs, and promote regional development, with special emphasis on enhancing passenger facilities and boosting economic growth.ಕೃತಕ ಬುದ್ಧಿಮತ್ತೆಯಲ್ಲಿ ನಾಯಕತ್ವ ವಹಿಸಲು ಭಾರತ ಬದ್ಧವಾಗಿದೆ: ಪ್ರಧಾನಮಂತ್ರಿ
January 04th, 02:42 pm
ಭಾರತೀಯ ಉದ್ಯಮಿ ಶ್ರೀ ವಿಶಾಲ್ ಸಿಕ್ಕಾ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು. ಶ್ರೀ ಮೋದಿಯವರು ಈ ಭೇಟಿಯನ್ನು ಉಪಯುಕ್ತ ಸಂವಾದ ಎಂದು ಬಣ್ಣಿಸಿದರು. ನಾವೀನ್ಯತೆ ಮತ್ತು ಯುವಕರಿಗೆ ಅವಕಾಶಗಳನ್ನು ಸೃಷ್ಟಿಸುವತ್ತ ಗಮನ ಹರಿಸಿ ಎಐನಲ್ಲಿ ಮುನ್ನಡೆ ಸಾಧಿಸಲು ಭಾರತ ಬದ್ಧವಾಗಿದೆ ಎಂದು ಹೇಳಿದರು. ಅವರಿಬ್ಬರೂ ಕೃತಕ ಬುದ್ಧಿಮತ್ತೆ ಹಾಗೂ ಭಾರತದ ಮೇಲೆ ಅದರ ಪರಿಣಾಮ ಮತ್ತು ಮುಂಬರುವ ದಿನಗಳಲ್ಲಿನ ಹಲವಾರು ವಿಧಿರೂಪ ಬಗ್ಗೆ ವಿವರವಾದ ವ್ಯಾಪಕ ಚರ್ಚೆ ನಡೆಸಿದರು.Our government's intentions, policies and decisions are empowering rural India with new energy: PM
January 04th, 11:15 am
PM Modi inaugurated Grameen Bharat Mahotsav in Delhi. He highlighted the launch of campaigns like the Swamitva Yojana, through which people in villages are receiving property papers. He remarked that over the past 10 years, several policies have been implemented to promote MSMEs and also mentioned the significant contribution of cooperatives in transforming the rural landscape.PM Modi inaugurates the Grameen Bharat Mahotsav 2025
January 04th, 10:59 am
PM Modi inaugurated Grameen Bharat Mahotsav in Delhi. He highlighted the launch of campaigns like the Swamitva Yojana, through which people in villages are receiving property papers. He remarked that over the past 10 years, several policies have been implemented to promote MSMEs and also mentioned the significant contribution of cooperatives in transforming the rural landscape.ಮಧ್ಯಪ್ರದೇಶದ ಖಜುರಾಹೊದಲ್ಲಿ ಕೆನ್- ಬೆಟ್ವಾ ನದಿ ಜೋಡಣೆ ರಾಷ್ಟ್ರೀಯ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಇಂಗ್ಲೀಷ್ ಅವತರಣಿಕೆ
December 25th, 01:00 pm
ವೀರರ ನಾಡಾದ ಬುಂದೇಲ್ ಖಂಡದ ಎಲ್ಲ ಜನರಿಗೆ ನಾನು ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ. ಮಧ್ಯಪ್ರದೇಶದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಮಂಗುಭಾಯಿ ಪಟೇಲ್ ಅವರಿಗೂ ನಾನು ಶುಭ ಕೋರುತ್ತೇನೆ. ಈ ಪ್ರದೇಶದ ಶ್ರದ್ಧಾಳು ಮುಖ್ಯಮಂತ್ರಿ ಭಾಯಿ ಮೋಹನ್ ಯಾದವ್ ಜೀ; ಕೇಂದ್ರ ಸಚಿವರಾದ ಭಾಯಿ ಶಿವರಾಜ್ ಸಿಂಗ್ ಜೀ, ವೀರೇಂದ್ರ ಕುಮಾರ್ ಜೀ ಮತ್ತು ಸಿಆರ್ ಪಾಟಿಲ್ ಜೀ; ಉಪ ಮುಖ್ಯಮಂತ್ರಿ ಜಗದೀಶ್ ದೇವ್ಡಾ ಜೀ; ರಾಜೇಂದ್ರ ಶುಕ್ಲಾ ಜೀ; ಇತರ ಸಚಿವರು, ಸಂಸದರು, ಶಾಸಕರು, ಹಾಗು ಇತರ ಗಣ್ಯರೇ, ಪೂಜ್ಯ ಸಾಧುಗಳು ಮತ್ತು ಮಧ್ಯಪ್ರದೇಶದ ನನ್ನ ಪ್ರೀತಿಯ ಸಹೋದರ ಸಹೋದರಿಯರೇ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಧ್ಯಪ್ರದೇಶದ ಖಜುರಾಹೊದಲ್ಲಿಕೆನ್-ಬೆಟ್ವಾ ನದಿ ಜೋಡಣೆ ರಾಷ್ಟ್ರೀಯ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದರು
December 25th, 12:30 pm
ಮಾಜಿ ಪ್ರಧಾನಮಂತ್ರಿ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ 100ನೇ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಧ್ಯಪ್ರದೇಶದ ಖಜುರಾಹೊದಲ್ಲಿ ಹಲವು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ಶ್ರೀ ನರೇಂದ್ರ ಮೋದಿ ಅವರು, ಭಾರತ ಮತ್ತು ವಿಶ್ವದ ಕ್ರಿಶ್ಚಿಯನ್ ಸಮುದಾಯದ ಜನತೆಗೆ ಕ್ರಿಸ್‌ಮಸ್ ಹಬ್ಬದ ಶುಭಾಶಯ ಕೋರಿದರು. ಮುಖ್ಯಮಂತ್ರಿ ಡಾ. ಮೋಹನ್ ಯಾದವ್ ಅವರ ನೇತೃತ್ವದಲ್ಲಿ ಸರ್ಕಾರ ರಚನೆಯಾಗಿ ಒಂದು ವರ್ಷ ಪೂರೈಸಿದ್ದನ್ನು ಸ್ಮರಿಸಿದ ಶ್ರೀ ನರೇಂದ್ರ ಮೋದಿ ಅವರು, ಇದಕ್ಕಾಗಿ ಮಧ್ಯಪ್ರದೇಶದ ಜನತೆಗೆ ಅಭಿನಂದನೆ ಸಲ್ಲಿಸಿದರು. ಕಳೆದ ಒಂದು ವರ್ಷದಲ್ಲಿಸಾವಿರಾರು ಕೋಟಿ ರೂಪಾಯಿಗಳ ಹೊಸ ಮೂಲಸೌಕರ್ಯ ಯೋಜನೆಗಳ ಅನುಷ್ಠಾನದೊಂದಿಗೆ ಅಭಿವೃದ್ಧಿ ಕಾರ್ಯಗಳು ವೇಗವನ್ನು ಪಡೆದುಕೊಂಡಿವೆ ಎಂದು ಅವರು ಹೇಳಿದರು. ಇಂದು ಐತಿಹಾಸಿಕ ಕೆನ್-ಬೆಟ್ವಾ ನದಿ ಜೋಡಣೆ ಯೋಜನೆ, ದೌಧನ್ ಅಣೆಕಟ್ಟು ಮತ್ತು ಮಧ್ಯಪ್ರದೇಶದ ಮೊದಲ ಸೌರ ವಿದ್ಯುತ್ ಸ್ಥಾವರವಾದ ಓಂಕಾರೇಶ್ವರ ತೇಲುವ ಸೌರ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಾಗಿದೆ ಎಂದು ಪ್ರಧಾನಿ ಹೇಳಿದರು. ಇದಕ್ಕಾಗಿ ಅವರು ಮಧ್ಯಪ್ರದೇಶದ ಜನರನ್ನು ಅಭಿನಂದಿಸಿದರು.ನೀತಿ ಆಯೋಗದ ಖ್ಯಾತ ಅರ್ಥಶಾಸ್ತ್ರಜ್ಞರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ
December 24th, 06:57 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ನೀತಿ ಆಯೋಗದಲ್ಲಿ 2025-26ನೇ ಸಾಲಿನ ಕೇಂದ್ರ ಬಜೆಟ್ ಸಿದ್ಧತೆಗಾಗಿ ಪ್ರಖ್ಯಾತ ಅರ್ಥಶಾಸ್ತ್ರಜ್ಞರು ಮತ್ತು ಚಿಂತಕರ ಗುಂಪಿನೊಂದಿಗೆ ಸಂವಾದ ನಡೆಸಿದರು.ಮಾಜಿ ಪ್ರಧಾನಮಂತ್ರಿ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ 100ನೇ ಜನ್ಮದಿನದ ಸಂದರ್ಭದಲ್ಲಿ, ಮಧ್ಯಪ್ರದೇಶದ ಕೆನ್-ಬೆಟ್ವಾ ನದಿಯನ್ನು ಜೋಡಿಸುವ ರಾಷ್ಟ್ರೀಯ ಯೋಜನೆಗೆ ಡಿಸೆಂಬರ್ 25 , 2024 ರಂದು ಶಂಕುಸ್ಥಾಪನೆ ನೆರವೇರಿಸಲಿರುವ ಪ್ರಧಾನಮಂತ್ರಿ
December 24th, 11:46 am
ಮಾಜಿ ಪ್ರಧಾನಮಂತ್ರಿ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ 100ನೇ ಜನ್ಮದಿನದ ಸಂದರ್ಭದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡಿಸೆಂಬರ್ 25 ರಂದು ಮಧ್ಯಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಅದೇ ದಿನ ಮಧ್ಯಾಹ್ನ 12:30 ರ ಸುಮಾರಿಗೆ ಅವರು ಖಜುರಾಹೊದಲ್ಲಿ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಲಿದ್ದಾರೆ.ವಿಡಿಯೊ ಕಾನ್ಫರೆನ್ಸ್ ಮೂಲಕ ರೋಜ್ ಗಾರ್ ಮೇಳದ ಅಡಿಯಲ್ಲಿ 71,000ಕ್ಕೂ ನೇಮಕಾತಿ ಪತ್ರಗಳ ವಿತರಣೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
December 23rd, 11:00 am
ನನ್ನ ಸಂಪುಟ ಸಹೋದ್ಯೋಗಿಗಳು, ದೇಶದಾದ್ಯಂತದ ಇತರ ಗಣ್ಯರು ಮತ್ತು ನನ್ನ ಯುವ ಸ್ನೇಹಿತರೇ!ರೋಜ್ ಗಾರ್ ಮೇಳದಡಿ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳು ಮತ್ತು ಸಂಸ್ಥೆಗಳಿಗೆ ಹೊಸದಾಗಿ ನೇಮಕಗೊಂಡಿರುವ 71 ಸಾವಿರಕ್ಕೂ ಅಧಿಕ ಉದ್ಯೋಗಿಗಳಿಗೆ ನೇಮಕಾತಿ ಪತ್ರಗಳನ್ನು ವಿತರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
December 23rd, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಪರೆನ್ಸ್ ಮೂಲಕ ರೋಜ್ ಗಾರ್ ಮೇಳವನ್ನು ಉದ್ದೇಶಿಸಿ ಮಾತನಾಡಿದರು ಮತ್ತು ಹೊಸದಾಗಿ ಸರ್ಕಾರದ ಇಲಾಖೆಗಳು ಮತ್ತು ಸಂಸ್ಥೆಗಳಿಗೆ ನೇಮಕಗೊಂಡಿರುವ ಸುಮಾರು 71 ಸಾವಿರಕ್ಕೂ ಅಧಿಕ ಯುವಜನತೆಗೆ ನೇಮಕಾತಿ ಪತ್ರಗಳನ್ನು ವಿತರಿಸಿದರು. ರೋಜ್‌ಗಾರ್ ಮೇಳ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡುವ ಪ್ರಧಾನಮಂತ್ರಿಯವರ ಬದ್ಧತೆಯನ್ನು ಎತ್ತಿ ತೋರಿಸುತ್ತದೆ. ಇದು ರಾಷ್ಟ್ರ ನಿರ್ಮಾಣ ಮತ್ತು ಸ್ವಯಂ ಸಬಲೀಕರಣಕ್ಕೆ ಕೊಡುಗೆ ನೀಡಲು ಅರ್ಥಪೂರ್ಣ ಅವಕಾಶಗಳನ್ನು ಒದಗಿಸುವ ಮೂಲಕ ಯುವಕರನ್ನು ಸಶಕ್ತಗೊಳಿಸುತ್ತದೆ.ಡಿಸೆಂಬರ್ 23 ರಂದು ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳು ಮತ್ತು ಸಂಸ್ಥೆಗಳಿಗೆ ಹೊಸದಾಗಿ ನೇಮಕಗೊಂಡಿರುವ 71 ಸಾವಿರಕ್ಕೂ ಅಧಿಕ ಉದ್ಯೋಗಿಗಳಿಗೆ ರೋಜ್ ಗಾರ್ ಮೇಳದಲ್ಲಿ ನೇಮಕಾತಿ ಪತ್ರ ವಿತರಿಸಲಿರುವ ಪ್ರಧಾನಮಂತ್ರಿ
December 22nd, 09:48 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024ರ ಡಿಸೆಂಬರ್ 23 ರಂದು ಬೆಳಿಗ್ಗೆ 10.30ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಹೊಸದಾಗಿ ನೇಮಕವಾಗಿರುವ ಸುಮಾರು 71 ಸಾವಿರಕ್ಕೂ ಅಧಿಕ ಮಂದಿಗೆ ನೇಮಕಾತಿ ಪತ್ರಗಳನ್ನು ವಿಡಿಯೋ ಕಾನ್ಸರೆನ್ಸ್ ಮೂಲಕ ವಿತರಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದವರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆಕುವೈತ್ನಲ್ಲಿ ಭಾರತೀಯ ಸಮುದಾಯ ಆಯೋಜಿಸಿದ್ದ ‘ಹಲಾ ಮೋದಿ’ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
December 21st, 06:34 pm
ಎರಡೂವರೆ ಗಂಟೆಗಳ ಹಿಂದೆಯಷ್ಟೇ ನಾನು ಕುವೈತ್‌ಗೆ ಬಂದೆ. ನಾನು ಇಲ್ಲಿಗೆ ಕಾಲಿಟ್ಟಾಗಿನಿಂದ, ಹೃದಯಾಂತರಾಳದ ಅನನ್ಯ ಭಾವನೆಯನ್ನು ಅನುಭವಿಸಿದೆ. ನೀವೆಲ್ಲರೂ ಭಾರತದ ವಿವಿಧ ರಾಜ್ಯಗಳಿಂದ ಬಂದಿದ್ದೀರಿ, ಆದರೆ ನಿಮ್ಮೆಲ್ಲರನ್ನು ನೋಡುವಾಗ ನನ್ನ ಮುಂದೆ ಒಂದು ಮಿನಿ ಹಿಂದೂಸ್ಥಾನವೇ ಜೀವಂತವಾಗಿದೆ ಎಂದು ಭಾಸವಾಗುತ್ತಿದೆ. ಇಲ್ಲಿ, ಉತ್ತರ, ದಕ್ಷಿಣ, ಪೂರ್ವ ಮತ್ತು ಪಶ್ಚಿಮದ ಜನರು ವಿಭಿನ್ನ ಭಾಷೆ ಮತ್ತು ಉಪಭಾಷೆಗಳನ್ನು ಮಾತನಾಡುವುದನ್ನು ನಾನು ನೋಡುತ್ತೇನೆ. ಆದರೂ, ಪ್ರತಿಯೊಬ್ಬರ ಹೃದಯದಲ್ಲಿ ಒಂದು ಸಾಮಾನ್ಯ ಪ್ರತಿಧ್ವನಿ ಇದೆ, ಪ್ರತಿಯೊಬ್ಬರ ಹೃದಯದಲ್ಲಿ ಒಂದು ಪ್ರತಿಧ್ವನಿಸುವ ಘೋಷಣೆ - ಭಾರತ್ ಮಾತಾ ಕಿ ಜೈ, ಭಾರತ್ ಮಾತಾ ಕಿ - ಜೈ.ಕುವೈತ್‌ನಲ್ಲಿ ನಡೆದ ‘ಹಾಲಾ ಮೋದಿ’ ಕಾರ್ಯಕ್ರಮದಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು
December 21st, 06:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕುವೈತ್‌ನಲ್ಲಿರುವ ಶೇಖ್ ಸಾದ್ ಅಲ್-ಅಬ್ದುಲ್ಲಾ ಒಳಾಂಗಣ ಕ್ರೀಡಾ ಸಂಕೀರ್ಣದಲ್ಲಿ ಆಯೋಜಿಸಲಾಗಿದ್ದ ‘ಹಾಲಾ ಮೋದಿ’ ವಿಶೇಷ ಕಾರ್ಯಕ್ರಮದಲ್ಲಿ ಅಲ್ಲಿನ ಭಾರತೀಯ ಸಮುದಾಯದ ಬೃಹತ್ ಸಭೆಯನ್ನುದ್ದೇಶಿಸಿ ಮಾತನಾಡಿದರು. ಕುವೈತ್‌ನ ಸಮುದಾಯದ ಹೆಚ್ಚಿನ ಭಾಗವನ್ನು ಪ್ರತಿನಿಧಿಸುವ ಭಾರತೀಯ ಪ್ರಜೆಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.ರಾಜಸ್ಥಾನದ ಜೈಪುರದಲ್ಲಿ 'ಏಕ್ ವರ್ಷ್-ಪರಿಣಾಮ್ ಉತ್ಕರ್ಷ್' ಕಾರ್ಯಕ್ರಮ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ ಮತ್ತು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ
December 17th, 12:05 pm
ಗೋವಿಂದ ನಗರದಲ್ಲಿ ನಾನು ಗೋವಿಂದ್ ದೇವ್ ಜೀ ಅವರಿಗೆ ಅನಂತ ನಮಸ್ಕಾರಗಳನ್ನು ಸಲ್ಲಿಸುತ್ತೇನೆ. ಎಲ್ಲರಿಗೂ ನನ್ನ ನಮಸ್ಕಾರಗಳು!ರಾಜಸ್ಥಾನ ಸರ್ಕಾರ ಒಂದು ವರ್ಷ ಅಧಿಕಾರಾವಧಿ ಪೂರೈಸಿದ ಹಿನೆಲೆಯಲ್ಲಿ ಜೈಪುರದಲ್ಲಿ ನಡೆದ ʻಏಕ್ ವರ್ಷ್-ಪರಿನಾಮ್ ಉತ್ಕರ್ಷ್ʼ (ಒಂದು ವರ್ಷ-ಪರಿಣಾಮ ಶ್ರೇಷ್ಠ) ಕಾರ್ಯಕ್ರಮದಲ್ಲಿ ಪಾಲ್ಗೊಂಡ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
December 17th, 12:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಜಸ್ಥಾನ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಇಂದು ಜೈಪುರದಲ್ಲಿ ನಡೆದ ʻಒಂದು ವರ್ಷ-ಪರಿಣಾಮ ಶ್ರೇಷ್ಠʼ(ಏಕ್ ವರ್ಷ್-ಪರಿನಾಮ್ ಉತ್ಕರ್ಷ್) ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಸಭಿಕರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿಯವರು, ರಾಜ್ಯ ಸರ್ಕಾರದ ಒಂದು ವರ್ಷವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಕ್ಕಾಗಿ ರಾಜಸ್ಥಾನ ಸರ್ಕಾರ ಮತ್ತು ರಾಜಸ್ಥಾನದ ಜನರನ್ನು ಅಭಿನಂದಿಸಿದರು. ಈ ಕಾರ್ಯಕ್ರಮದಲ್ಲಿ ನೆರೆದಿದ್ದ ಲಕ್ಷಾಂತರ ಜನರ ಆಶೀರ್ವಾದ ಪಡೆಯುವ ಅದೃಷ್ಟ ತಮ್ಮದಾಗಿದೆ ಎಂದು ಅವರು ಹೇಳಿದರು. ರಾಜಸ್ಥಾನದ ಅಭಿವೃದ್ಧಿ ಕಾರ್ಯಗಳಿಗೆ ಹೊಸ ದಿಕ್ಕು ಮತ್ತು ವೇಗವನ್ನು ನೀಡಲು ಕೈಗೊಂಡ ಪ್ರಯತ್ನಗಳಿಗಾಗಿ ಶ್ರೀ ಮೋದಿ ಅವರು ರಾಜಸ್ಥಾನದ ಮುಖ್ಯಮಂತ್ರಿ ಮತ್ತು ಅವರ ತಂಡವನ್ನು ಶ್ಲಾಘಿಸಿದರು. ಮೊದಲ ವರ್ಷವು ಮುಂಬರುವ ಹಲವು ವರ್ಷಗಳ ಅಭಿವೃದ್ಧಿಗೆ ಬಲವಾದ ಅಡಿಪಾಯವಾಗಿ ಮಾರ್ಪಟ್ಟಿದೆ ಎಂದು ಅವರು ಹೇಳಿದರು. ಇಂದಿನ ಕಾರ್ಯಕ್ರಮವು ಸರ್ಕಾರ ಒಂದು ವರ್ಷ ಪೂರ್ಣಗೊಳಿಸಿದ್ದನ್ನು ಮಾತ್ರವಲ್ಲ, ರಾಜಸ್ಥಾನದ ಉಜ್ವಲತೆ ಮತ್ತು ರಾಜಸ್ಥಾನದ ಅಭಿವೃದ್ಧಿಯ ಹಬ್ಬವನ್ನು ಸಂಕೇತಿಸುತ್ತದೆ ಎಂದು ಅವರು ಹೇಳಿದರು. ಇತ್ತೀಚೆಗೆ ನಡೆದ ʻರೈಸಿಂಗ್ ರಾಜಸ್ಥಾನ ಶೃಂಗಸಭೆ-2024ʼ ಕಾರ್ಯಕ್ರಮದಲ್ಲಿ ತಾವು ಭಾಗಿಯಾಗಿದ್ದನ್ನು ಸ್ಮರಿಸಿದ ಶ್ರೀ ಮೋದಿ, ವಿಶ್ವದ ವಿವಿಧ ಭಾಗಗಳ ಅನೇಕ ಹೂಡಿಕೆದಾರರು ಅಂದಿನ ಕಾರ್ಯಕ್ರಮದಲ್ಲಿ ಹಾಜರಿದ್ದರು ಮತ್ತು ಇಂದು 45,000 ಕೋಟಿ ರೂ.ಗೂ ಅಧಿಕ ಮೌಲ್ಯದ ಯೋಜನೆಗಳನ್ನು ರಾಜ್ಯದಲ್ಲಿ ಉದ್ಘಾಟಿಸಲಾಗಿದೆ ಎಂದರು. ಈ ಯೋಜನೆಗಳು ರಾಜಸ್ಥಾನದಲ್ಲಿ ನೀರಿಗೆ ಸಂಬಂಧಿಸಿದಂತೆ ಅಡೆತಡೆಗಳಿಗೆ ಸೂಕ್ತ ಪರಿಹಾರವನ್ನು ಒದಗಿಸುತ್ತವೆ ಮತ್ತು ರಾಜಸ್ಥಾನವನ್ನು ಭಾರತದ ಉತ್ತಮ ಸಂಪರ್ಕ ಹೊಂದಿರುವ ರಾಜ್ಯಗಳಲ್ಲಿ ಒಂದಾಗಿ ಮಾಡುತ್ತವೆ ಎಂದು ಅವರು ಹೇಳಿದರು. ಈ ಅಭಿವೃದ್ಧಿ ಕಾರ್ಯಗಳು ಹೆಚ್ಚಿನ ಹೂಡಿಕೆದಾರರನ್ನು ಆಹ್ವಾನಿಸುತ್ತವೆ, ಅಪಾರ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತವೆ, ಪ್ರವಾಸೋದ್ಯಮ ಕ್ಷೇತ್ರವನ್ನು ಬಲಪಡಿಸುತ್ತವೆ ಮತ್ತು ರಾಜಸ್ಥಾನದ ರೈತರು, ಮಹಿಳೆಯರು ಮತ್ತು ಯುವಕರಿಗೆ ಹೆಚ್ಚಿನ ಪ್ರಯೋಜನವನ್ನು ನೀಡುತ್ತವೆ ಎಂದು ಪ್ರಧಾನಿ ಹೇಳಿದರು.ದೆಹಲಿಯಲ್ಲಿ ʻಮುಖ್ಯ ಕಾರ್ಯದರ್ಶಿಗಳ ನಾಲ್ಕನೇ ರಾಷ್ಟ್ರೀಯ ಸಮ್ಮೇಳನʼದ ಅಧ್ಯಕ್ಷತೆ ವಹಿಸಿದ ಪ್ರಧಾನಮಂತ್ರಿ
December 15th, 10:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೆಹಲಿಯಲ್ಲಿ ಮುಖ್ಯ ಕಾರ್ಯದರ್ಶಿಗಳ 4ನೇ ರಾಷ್ಟ್ರೀಯ ಸಮ್ಮೇಳನ ಉದ್ದೇಶಿಸಿ ಭಾಷಣ ಮಾಡಿದರು. ಮೂರು ದಿನಗಳ ಸಮ್ಮೇಳನವು 2024ರ ಡಿಸೆಂಬರ್ 13 ರಿಂದ 15 ರವರೆಗೆ ದೆಹಲಿಯಲ್ಲಿ ನಡೆಯಿತು.ಪ್ರಯಾಗ್ ರಾಜ್ ನಲ್ಲಿ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಕಾರ್ಯಾರಂಭ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಇಂಗ್ಲಿಷ್ ಅವತರಣಿಕೆ
December 13th, 02:10 pm
ಉತ್ತರ ಪ್ರದೇಶದ ಗೌರವಾನ್ವಿತ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಜೀ, ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಜೀ, ಗೌರವಾನ್ವಿತ ಉಪಮುಖ್ಯಮಂತ್ರಿಗಳಾದ ಕೇಶವ್ ಪ್ರಸಾದ್ ಮೌರ್ಯ ಜೀ ಮತ್ತು ಬ್ರಜೇಶ್ ಪಾಠಕ್ ಜೀ, ಉತ್ತರ ಪ್ರದೇಶದ ಗೌರವಾನ್ವಿತ ಮಂತ್ರಿಗಳು, ಸಂಸತ್ತು ಮತ್ತು ವಿಧಾನಸಭೆಯ ಗೌರವಾನ್ವಿತ ಸದಸ್ಯರು, ಪ್ರಯಾಗ್ ರಾಜ್ ನ ಮೇಯರ್ ಮತ್ತು ಜಿಲ್ಲಾ ಪಂಚಾಯತ್ ಅಧ್ಯಕ್ಷರು, ಹಾಗುಇತರ ಗೌರವಾನ್ವಿತ ಅತಿಥಿಗಳೇ ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೇ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಸುಮಾರು 5,500 ಕೋಟಿ ರೂಪಾಯಿ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಚಾಲನೆಯನ್ನು ಪ್ರಧಾನಿ ನೆರವೇರಿಸಿದರು
December 13th, 02:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಸುಮಾರು 5,500 ಕೋಟಿ ರೂಪಾಯಿ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಚಾಲನೆ ನೆರವೇರಿಸಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಸಂಗಮದ ಪವಿತ್ರ ಭೂಮಿಯಾದ ಪ್ರಯಾಗ್‌ರಾಜ್‌ಗೆ ಭಕ್ತಿಪೂರ್ವಕವಾಗಿ ನಮಸ್ಕರಿಸಿದರು ಮತ್ತು ಮಹಾಕುಂಭದಲ್ಲಿ ಪಾಲ್ಗೊಂಡ ಸಂತರು ಮತ್ತು ಸಾಧುಗಳಿಗೆ ಗೌರವ ನಮನ ಸಲ್ಲಿಸಿದರು. ತಮ್ಮ ಕಠಿಣ ಪರಿಶ್ರಮ ಮತ್ತು ಸಮರ್ಪಣೆಯಿಂದ ಮಹಾಕುಂಭವನ್ನು ಯಶಸ್ವಿಗೊಳಿಸಿದ ನೌಕರರು, ಶ್ರಮಿಕರು ಮತ್ತು ಸಫಾಯಿ ಕರ್ಮಚಾರಿಗಳಿಗೆ ಶ್ರೀ ಮೋದಿ ಕೃತಜ್ಞತೆ ಸಲ್ಲಿಸಿದರು. ಮಹಾಕುಂಭದ ಅಗಾಧತೆ ಮತ್ತು ಗಾತ್ರದ ಬಗ್ಗೆ ಮಾತನಾಡಿದ ಪ್ರಧಾನಮಂತ್ರಿಯವರು, ಇದು ವಿಶ್ವದ ಅತಿದೊಡ್ಡ ಜನಸಂಗಮಗಳಲ್ಲಿ ಒಂದಾಗಿದೆ. 45 ದಿನಗಳ ಕಾಲ ನಡೆಯುವ ʻಮಹಾಯಜ್ಞಕ್ಕಾಗಿʼ ಪ್ರತಿದಿನ ಲಕ್ಷಾಂತರ ಭಕ್ತರನ್ನು ಸ್ವಾಗತಿಸುತ್ತದೆ ಮತ್ತು ಈ ಸಂದರ್ಭಕ್ಕಾಗಿ ಸಂಪೂರ್ಣ ಹೊಸ ನಗರವನ್ನೇ ಸ್ಥಾಪಿಸಲಾಗಿದೆ ಎಂದರು. ಪ್ರಯಾಗ್‌ರಾಜ್ ಭೂಮಿಯಲ್ಲಿ ಹೊಸ ಇತಿಹಾಸ ಬರೆಯಲಾಗುತ್ತಿದೆ, ಎಂದು ಪ್ರಧಾನಿ ಉದ್ಗರಿಸಿದರು. ಮುಂದಿನ ವರ್ಷ ನಡೆಯಲಿರುವ ಮಹಾಕುಂಭ ಮೇಳದ ಕಾರ್ಯಕ್ರಮವು ರಾಷ್ಟ್ರದ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಗುರುತನ್ನು ಹೊಸ ಉತ್ತುಂಗಕ್ಕೆ ಕೊಂಡೊಯ್ಯುತ್ತದೆ ಎಂದು ಪ್ರಧಾನಿ ಒತ್ತಿ ಹೇಳಿದರು. ಇಂತಹ ಏಕತೆಯ 'ಮಹಾಯಜ್ಞ'ದ ಬಗ್ಗೆ ವಿಶ್ವದಾದ್ಯಂತ ಚರ್ಚಿಸಲಾಗುವುದು ಎಂದು ಹೇಳಿದರು. ಮಹಾಕುಂಭ ಮೇಳದ ಯಶಸ್ವಿ ಸಂಘಟನೆಗಾಗಿ ಅವರು ಜನತೆಗೆ ಶುಭ ಕೋರಿದರು.2024ರ ಡಿಸೆಂಬರ್ 14 ಮತ್ತು 15ರಂದು ದೆಹಲಿಯಲ್ಲಿ ನಡೆಯಲಿರುವ ಮುಖ್ಯ ಕಾರ್ಯದರ್ಶಿಗಳ ನಾಲ್ಕನೇ ರಾಷ್ಟ್ರೀಯ ಸಮ್ಮೇಳನದ ಅಧ್ಯಕ್ಷತೆ ವಹಿಸಲಿರುವ ಪ್ರಧಾನಮಂತ್ರಿ
December 13th, 12:53 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024ರ ಡಿಸೆಂಬರ್ 14 ಮತ್ತು 15ರಂದು ದೆಹಲಿಯಲ್ಲಿ ಮುಖ್ಯ ಕಾರ್ಯದರ್ಶಿಗಳ ನಾಲ್ಕನೇ ರಾಷ್ಟ್ರೀಯ ಸಮ್ಮೇಳನದ ಅಧ್ಯಕ್ಷತೆ ವಹಿಸಲಿದ್ದಾರೆ. ಇದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವಿನ ಪಾಲುದಾರಿಕೆಯನ್ನು ಮತ್ತಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಮತ್ತೊಂದು ಪ್ರಮುಖ ಹೆಜ್ಜೆಯಾಗಿದೆ.