
We are making Delhi a model of growth that reflects the spirit of a developing India: PM Modi
August 17th, 12:45 pm
During the inauguration of road projects worth ₹11,000 crore in Delhi, PM Modi said that the Dwarka Expressway and UER-II will enhance convenience for the people of Delhi and the entire NCR. He highlighted that a key feature of the UER is its role in freeing Delhi from garbage mounds, with millions of tonnes of waste material used in its construction. The PM also urged that “Vocal for Local” should become a life mantra for every citizen.
PM Modi inaugurates two major National Highway projects worth Rs.11,000 crore
August 17th, 12:39 pm
During the inauguration of road projects worth ₹11,000 crore in Delhi, PM Modi said that the Dwarka Expressway and UER-II will enhance convenience for the people of Delhi and the entire NCR. He highlighted that a key feature of the UER is its role in freeing Delhi from garbage mounds, with millions of tonnes of waste material used in its construction. The PM also urged that “Vocal for Local” should become a life mantra for every citizen.
79ನೇ ಸ್ವಾತಂತ್ರ್ಯ ದಿನಾಚರಣೆಯಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣದ ಮುಖ್ಯಾಂಶಗಳು
August 15th, 03:52 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೆಹಲಿಯ ಕೆಂಪು ಕೋಟೆಯ ಕೊತ್ತಲಗಳಿಂದ 79ನೇ ಸ್ವಾತಂತ್ರ್ಯ ದಿನಾಚರಣೆಯಂಗವಾಗಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದರು. ಶ್ರೀ ಮೋದಿ ಅವರ 103 ನಿಮಿಷಗಳ ಕಾಲ ಕೆಂಪು ಕೋಟೆಯಿಂದ ಮಾಡಿದ ಭಾಷಣವು ಅತ್ಯಂತ ದೀರ್ಘ ಮತ್ತು ನಿರ್ಣಾಯಕ ಭಾಷಣವಾಗಿದ್ದು, 2047ರ ವೇಳೆಗೆ ವಿಕ್ಷಿತ ಭಾರತಕ್ಕಾಗಿ ದಿಟ್ಟ ಮಾರ್ಗಸೂಚಿಯನ್ನು ರೂಪಿಸಿದೆ. ಪ್ರಧಾನಮಂತ್ರಿ ಅವರ ಭಾಷಣವು ಸ್ವಾವಲಂಬನೆ, ನಾವೀನ್ಯತೆ ಮತ್ತು ನಾಗರಿಕ ಸಬಲೀಕರಣದ ಮೇಲೆ ಗಮನ ಕೇಂದ್ರೀಕರಿಸಿತ್ತು, ಇತರರನ್ನು ಅವಲಂಬಿಸಿದ ರಾಷ್ಟ್ರದಿಂದ ಜಾಗತಿಕವಾಗಿ ಆತ್ಮವಿಶ್ವಾಸ, ತಾಂತ್ರಿಕವಾಗಿ ಮುಂದುವರಿದ ಮತ್ತು ಆರ್ಥಿಕವಾಗಿ ಸ್ಥಿತಿಸ್ಥಾಪಕತ್ವದ ಶಕ್ತಿಯುಳ್ಳ ದೇಶದವರೆಗೆ ಭಾರತದ ಪ್ರಯಾಣವನ್ನು ಎತ್ತಿ ತೋರಿಸಿತು.79ನೇ ಸ್ವಾತಂತ್ರ್ಯ ದಿನದ ಸಂದರ್ಭದಲ್ಲಿ ಕೆಂಪು ಕೋಟೆಯ ಪ್ರಾಂಗಣದಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
August 15th, 07:00 am
ಈ ಸ್ವಾತಂತ್ರ್ಯೋತ್ಸವವು ನಮ್ಮ ಜನರ 140 ಕೋಟಿ ಸಂಕಲ್ಪಗಳ ಆಚರಣೆಯಾಗಿದೆ. ಈ ಸ್ವಾತಂತ್ರ್ಯೋತ್ಸವವು ಸಾಮೂಹಿಕ ಸಾಧನೆಗಳು ಮತ್ತು ಹೆಮ್ಮೆಯ ಕ್ಷಣವಾಗಿದೆ ಮತ್ತು ನಮ್ಮ ಹೃದಯಗಳು ಸಂತೋಷದಿಂದ ತುಂಬಿವೆ. ರಾಷ್ಟ್ರವು ನಿರಂತರವಾಗಿ ಏಕತೆಯ ಮನೋಭಾವವನ್ನು ಬಲಪಡಿಸುತ್ತಿದೆ. ಇಂದು, 140 ಕೋಟಿ ಭಾರತೀಯರು ತ್ರಿವರ್ಣ ಧ್ವಜದ ಬಣ್ಣಗಳಿಂದ ಕಂಗೊಳಿಸುತ್ತಿದ್ದಾರೆ. ಮರುಭೂಮಿಯಾಗಿರಲಿ, ಹಿಮಾಲಯದ ಶಿಖರಗಳಾಗಿರಲಿ, ಸಮುದ್ರ ತೀರಗಳಾಗಿರಲಿ, ಅಥವಾ ಜನನಿಬಿಡ ಪ್ರದೇಶಗಳಾಗಿರಲಿ, 'ಹರ್ ಘರ್ ತಿರಂಗಾ' ಹಾರುತ್ತಿದೆ, ಎಲ್ಲೆಡೆ ಒಂದೇ ಪ್ರತಿಧ್ವನಿ, ಒಂದೇ ಹರ್ಷೋದ್ಗಾರ: ನಮ್ಮ ಜೀವಕ್ಕಿಂತ ಪ್ರಿಯವಾದ ನಮ್ಮ ತಾಯ್ನಾಡಿಗೆ ಜೈ.India celebrates 79th Independence Day
August 15th, 06:45 am
PM Modi, in his address to the nation on the 79th Independence day paid tribute to the Constituent Assembly, freedom fighters, and Constitution makers. He reiterated that India will always protect the interests of its farmers, livestock keepers and fishermen. He highlighted key initiatives—GST reforms, Pradhan Mantri Viksit Bharat Rozgar Yojana, National Sports Policy, and Sudharshan Chakra Mission—aimed at achieving a Viksit Bharat by 2047. Special guests like Panchayat members and “Drone Didis” graced the Red Fort celebrations.ಜಲ ಜೀವನ್ ಮಿಷನ್ ಆರು ವರ್ಷ ಪೂರೈಸಿದ್ದು 15 ಕೋಟಿಗೂ ಹೆಚ್ಚು ಮನೆಗಳಿಗೆ ಶುದ್ಧ ಕುಡಿಯುವ ನೀರು ಸರಬರಾಜು ಖಾತರಿಪಡಿಸಲಾಗಿದೆ - ಪ್ರಧಾನಮಂತ್ರಿ
August 14th, 01:40 pm
ಭಾರತದಾದ್ಯಂತ ಲಕ್ಷಾಂತರ ಮನೆಗಳಿಗೆ ಸುರಕ್ಷಿತ ಮತ್ತು ಅಗತ್ಯವಿರುವಷ್ಟು ಶುದ್ಧ ಕುಡಿಯುವ ನೀರನ್ನು ಪ್ರತ್ಯೇಕವಾಗಿ ನಲ್ಲಿ ಸಂಪರ್ಕದ ಮೂಲಕ ಪೂರೈಸುವುದನ್ನು ಖಚಿತಪಡಿಸಿಕೊಳ್ಳುವ ಮೂಲಕ ಪರಿವರ್ತನಾತ್ಮಕ ಬದಲಾವಣೆಯನ್ನು ತಂದ ಪ್ರಮುಖ ಉಪಕ್ರಮವಾಗಿರುವ ಜಲ ಜೀವನ್ ಮಿಷನ್ ಆರು ವರ್ಷಗಳನ್ನು ಪೂರ್ಣಗೊಳಿಸಿರುವ ಈ ಸಂದರ್ಭವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುರುತಿಸಿದ್ದಾರೆ.ನವದೆಹಲಿಯಲ್ಲಿ ಸಂಸತ್ ಸದಸ್ಯರಿಗಾಗಿ ಹೊಸದಾಗಿ ನಿರ್ಮಿಸಲಾದ ಫ್ಲ್ಯಾಟ್‌ಗಳ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
August 11th, 11:00 am
ಶ್ರೀ ಓಂ ಬಿರ್ಲಾ ಜೀ, ಮನೋಹರ್ ಲಾಲ್ ಜೀ, ಕಿರಣ್ ರಿಜಿಜು ಜೀ, ಮಹೇಶ್ ಶರ್ಮಾ ಜೀ, ಎಲ್ಲಗೌರವಾನ್ವಿತ ಸಂಸತ್ ಸದಸ್ಯರು, ಲೋಕಸಭೆಯ ಪ್ರಧಾನ ಕಾರ್ಯದರ್ಶಿ, ಮಹಿಳೆಯರೇ ಮತ್ತು ಮಹನೀಯರೇ!ನವದೆಹಲಿಯಲ್ಲಿ ಸಂಸದರಿಗಾಗಿ ಹೊಸದಾಗಿ ನಿರ್ಮಿಸಲಾದ ವಸತಿ ಸಮುಚ್ಚಯವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಉದ್ಘಾಟಿಸಿದರು
August 11th, 10:30 am
ನವದೆಹಲಿಯ ಬಾಬಾ ಖರಕ್ ಸಿಂಗ್ ಮಾರ್ಗದಲ್ಲಿ ಸಂಸತ್ ಸದಸ್ಯರಿಗಾಗಿ ಹೊಸದಾಗಿ ನಿರ್ಮಿಸಲಾದ 184 ಟೈಪ್-VII ಬಹುಮಹಡಿ ವಸತಿ ಸಮುಚ್ಚಯವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಕರ್ತವ್ಯ ಪಥದಲ್ಲಿರುವ ಕರ್ತವ್ಯ ಭವನ ಎಂದು ಕರೆಯಲಾಗುವ ಸಾಮಾನ್ಯ ಕೇಂದ್ರ ಸಚಿವಾಲಯವನ್ನು ಇತ್ತೀಚೆಗೆ ಉದ್ಘಾಟಿಸಿದೆ ಮತ್ತು ಇಂದು ಸಂಸದರಿಗಾಗಿ ಹೊಸದಾಗಿ ನಿರ್ಮಿಸಲಾದ ವಸತಿ ಸಮುಚ್ಚಯವನ್ನು ಉದ್ಘಾಟಿಸುವ ಅವಕಾಶ ದೊರೆತಿದೆ ಎಂದು ಹೇಳಿದರು. ಭಾರತದ ನಾಲ್ಕು ಮಹಾ ನದಿಗಳಾದ ಕೃಷ್ಣಾ, ಗೋದಾವರಿ, ಕೋಸಿ ಮತ್ತು ಹೂಗ್ಲಿ ಹೆಸರುಗಳನ್ನು ಸಮುಚ್ಚಯದ ನಾಲ್ಕು ಗೋಪುರಗಳಿಗೆ ಇಡಲಾಗಿದೆ. ಲಕ್ಷಾಂತರ ಜನರಿಗೆ ಬದುಕು ನೀಡುವ ಈ ನದಿಗಳು ಈಗ ಸಾರ್ವಜನಿಕ ಪ್ರತಿನಿಧಿಗಳ ಜೀವನದಲ್ಲಿ ಹೊಸ ಸಂತೋಷದ ಅಲೆಯನ್ನು ತರುತ್ತವೆ ಎಂದು ಅವರು ಹೇಳಿದರು. ನದಿಗಳಿಗೆ ಹೆಸರಿಡುವ ಸಂಪ್ರದಾಯವು ದೇಶವನ್ನು ಏಕತೆಯ ಎಳೆಯಲ್ಲಿ ಬಂಧಿಸುತ್ತದೆ ಎಂದು ಅವರು ಹೇಳಿದರು. ಈ ಹೊಸ ಸಮುಚ್ಚಯವು ದೆಹಲಿಯಲ್ಲಿ ಸಂಸದರ ಜೀವನವನ್ನು ಇನ್ನಷ್ಟು ಸುಲಭಗೊಳಿಸುತ್ತದೆ. ದೆಹಲಿಯಲ್ಲಿ ಸಂಸದರಿಗೆ ಸರ್ಕಾರಿ ವಸತಿ ಸೌಕರ್ಯಗಳು ಈಗ ಹೆಚ್ಚಾಗಲಿವೆ ಎಂದು ಅವರು ಹೇಳಿದರು. ಪ್ರಧಾನಮಂತ್ರಿಯವರು ಎಲ್ಲಾ ಸಂಸದರನ್ನು ಅಭಿನಂದಿಸಿದರು ಮತ್ತು ವಸತಿ ಸಮುಚ್ಚಯ ನಿರ್ಮಾಣದಲ್ಲಿ ಭಾಗಿಯಾದ ಎಂಜಿನಿಯರ್ ಗಳು ಮತ್ತು ಕಾರ್ಮಿಕರನ್ನು ಶ್ಲಾಘಿಸಿದರು. ಯೋಜನೆಯನ್ನು ಪೂರ್ಣಗೊಳಿಸುವಲ್ಲಿ ಅವರ ಸಮರ್ಪಣೆ ಮತ್ತು ಕಠಿಣ ಪರಿಶ್ರಮವನ್ನು ಅವರು ಶ್ಲಾಘಿಸಿದರು.ಕರ್ನಾಟಕದ ಬೆಂಗಳೂರಿನಲ್ಲಿ ವಿವಿಧ ಮೆಟ್ರೋ ಯೋಜನೆಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
August 10th, 01:30 pm
ಕರ್ನಾಟಕ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಜೀ, ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಜೀ, ಕೇಂದ್ರದಲ್ಲಿನ ನನ್ನ ಸಹೋದ್ಯೋಗಿಗಳಾದ ಶ್ರೀ ಮನೋಹರ್ ಲಾಲ್ ಖಟ್ಟರ್ ಜೀ, ಶ್ರೀ ಹೆಚ್.ಡಿ. ಕುಮಾರಸ್ವಾಮಿ ಜೀ, ಶ್ರೀ ಅಶ್ವಿನಿ ವೈಷ್ಣವ್ ಜೀ, ಶ್ರೀ ವಿ. ಸೋಮಣ್ಣ ಜೀ, ಶ್ರೀಮತಿ ಶೋಭಾ ಜೀ, ಉಪಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಜೀ, ಕರ್ನಾಟಕ ಸರ್ಕಾರದ ಸಚಿವರಾದ ಶ್ರೀ ಬಿ. ಸುರೇಶ್ ಜೀ, ವಿರೋಧ ಪಕ್ಷದ ನಾಯಕರಾದ ಶ್ರೀ ಆರ್. ಅಶೋಕ್ ಜೀ, ಸಂಸದರಾದ ಶ್ರೀ ತೇಜಸ್ವಿ ಸೂರ್ಯ ಜೀ, ಡಾ. ಮಂಜುನಾಥ್ ಜೀ, ಶಾಸಕರಾದ ಶ್ರೀ ವಿಜಯೇಂದ್ರ ಯಡಿಯೂರಪ್ಪ ಜೀ, ಮತ್ತು ಕರ್ನಾಟಕದ ನನ್ನ ಸಹೋದರ ಸಹೋದರಿಯರೇ,ಬೆಂಗಳೂರಿನಲ್ಲಿ 22,800 ಕೋಟಿ ರೂಪಾಯಿಗಳ ಮೆಟ್ರೋ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
August 10th, 01:05 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬೆಂಗಳೂರಿನಲ್ಲಿ ಸುಮಾರು 7,160 ಕೋಟಿ ರೂ. ಮೌಲ್ಯದ ಬೆಂಗಳೂರು ಮೆಟ್ರೋದ ಹಳದಿ ಮಾರ್ಗವನ್ನು ಉದ್ಘಾಟಿಸಿದರು ಮತ್ತು 15,610 ಕೋಟಿ ರೂ.ಗಳಿಗೂ ಹೆಚ್ಚು ವೆಚ್ಚದ ಬೆಂಗಳೂರು ಮೆಟ್ರೋ ಹಂತ-3 ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದರು. ಅವರು ಬೆಂಗಳೂರಿನ ಕೆ ಎಸ್ ಆರ್ ರೈಲು ನಿಲ್ದಾಣದಲ್ಲಿ ಮೂರು ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳಿಗೆ ಚಾಲನೆ ನೀಡಿದರು. ನಂತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕದ ನೆಲಕ್ಕೆ ಕಾಲಿಟ್ಟಾಗ ತಮಗೆ ಒಂದು ರೀತಿಯ ಆತ್ಮೀಯತೆಯ ಭಾವನೆ ಮೂಡಿತು ಎಂದು ಹೇಳಿದರು. ಕರ್ನಾಟಕದ ಸಂಸ್ಕೃತಿಯ ಶ್ರೀಮಂತಿಕೆ, ಜನರ ವಾತ್ಸಲ್ಯ, ಮತ್ತು ಹೃದಯವನ್ನು ತಟ್ಟುವ ಕನ್ನಡ ಭಾಷೆಯ ಮಾಧುರ್ಯವನ್ನು ಶ್ಲಾಘಿಸಿದ ಶ್ರೀ ಮೋದಿ ಅವರು ಬೆಂಗಳೂರಿನ ಅಧಿದೇವತೆ ಅಣ್ಣಮ್ಮ ತಾಯಿಯ ಪಾದಗಳಿಗೆ ನಮಸ್ಕರಿಸುವುದರ ಮೂಲಕ ತಮ್ಮ ಭಾಷಣವನ್ನು ಆರಂಭಿಸಿದರು. ಶತಮಾನಗಳ ಹಿಂದೆ ನಾಡಪ್ರಭು ಕೆಂಪೇಗೌಡರು ಬೆಂಗಳೂರು ನಗರಕ್ಕೆ ಅಡಿಪಾಯ ಹಾಕಿದ್ದನ್ನು ಸ್ಮರಿಸಿದ ಪ್ರಧಾನ ಮಂತ್ರಿಗಳು, ಕೆಂಪೇಗೌಡರು ಸಂಪ್ರದಾಯದಲ್ಲಿ ಬೇರೂರಿರುವ ಜೊತೆಗೆ ಪ್ರಗತಿಯ ಹೊಸ ಎತ್ತರಗಳನ್ನು ತಲುಪುವ ನಗರದ ಕನಸು ಕಂಡಿದ್ದರು ಎಂದು ಹೇಳಿದರು. “ಬೆಂಗಳೂರು ಯಾವಾಗಲೂ ಆ ಮನೋಭಾವವನ್ನು ಜೀವಂತವಾಗಿರಿಸಿದೆ ಮತ್ತು ಅದನ್ನು ಕಾಪಾಡಿಕೊಂಡಿದೆ. ಇಂದು, ಬೆಂಗಳೂರು ಅದೇ ಕನಸನ್ನು ನನಸಾಗಿಸುತ್ತಿದೆ” ಎಂದು ಪ್ರಧಾನಮಂತ್ರಿ ಹೇಳಿದರು.ನವದೆಹಲಿಯ ಕರ್ತವ್ಯ ಪಥದಲ್ಲಿ ಕರ್ತವ್ಯ ಭವನ ಉದ್ಘಾಟನಾ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
August 06th, 07:00 pm
ಕೇಂದ್ರ ಸಚಿವ ಸಂಪುಟದ ನನ್ನೆಲ್ಲಾ ಸಹೋದ್ಯೋಗಿಗಳೆ, ಇಲ್ಲಿ ಉಪಸ್ಥಿತರಿರುವ ಗೌರವಾನ್ವಿತ ಸಂಸತ್ ಸದಸ್ಯರೆ, ಎಲ್ಲಾ ಸರ್ಕಾರಿ ನೌಕರರೆ, ಇತರೆ ಗಣ್ಯ ಅತಿಥಿಗಳೆ, ಮಹಿಳೆಯರೆ ಮತ್ತು ಮಹನೀಯರೆ!ನವದೆಹಲಿಯ ಕರ್ತವ್ಯ ಪಥದಲ್ಲಿ ಕರ್ತವ್ಯ ಭವನದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು
August 06th, 06:30 pm
ನವದೆಹಲಿಯ ಕರ್ತವ್ಯ ಪಥದಲ್ಲಿ ಇಂದು ಕರ್ತವ್ಯ ಭವನ-3 ಕಟ್ಟಡದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕ್ರಾಂತಿಯ ಮಾಸವಾದ ಆಗಸ್ಟ್, ಆಗಸ್ಟ್ 15 ಕ್ಕೆ ಮುನ್ನವೇ ಮತ್ತೊಂದು ಐತಿಹಾಸಿಕ ಮೈಲಿಗಲ್ಲನ್ನು ತಂದಿದೆ ಎಂದು ಹೇಳಿದರು. ಆಧುನಿಕ ಭಾರತ ನಿರ್ಮಾಣಕ್ಕೆ ಸಂಬಂಧಿಸಿದಂತೆ ಪ್ರಮುಖ ಸಾಧನೆಗಳಿಗೆ ಭಾರತ ಸಾಕ್ಷಿಯಾಗುತ್ತಿದೆ ಎಂದು ಅವರು ಹೇಳಿದರು. ನವದೆಹಲಿಯ ಇತ್ತೀಚಿನ ಮೂಲಸೌಕರ್ಯಗಳಾದ ಕರ್ತವ್ಯ ಪಥ, ಹೊಸ ಸಂಸತ್ತು ಕಟ್ಟಡ, ಹೊಸ ರಕ್ಷಣಾ ಕಚೇರಿಗಳ ಸಂಕೀರ್ಣ, ಭಾರತ ಮಂಟಪ, ಯಶೋಭೂಮಿ, ಹುತಾತ್ಮರಿಗೆ ಸಮರ್ಪಿತವಾದ ರಾಷ್ಟ್ರೀಯ ಯುದ್ಧ ಸ್ಮಾರಕ, ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆ ಮತ್ತು ಕರ್ತವ್ಯ ಭವನದ ನಿರ್ಮಾಣ ಮುಂತಾದದವುಗಳನ್ನು ಪಟ್ಟಿಮಾಡಿದರು. ಇವು ಕೇವಲ ಹೊಸ ಕಟ್ಟಡಗಳು ಅಥವಾ ಸಾಮಾನ್ಯ ಮೂಲಸೌಕರ್ಯಗಳಲ್ಲ ಎಂದು ಒತ್ತಿ ಹೇಳಿದ ಪ್ರಧಾನಮಂತ್ರಿ , ಅಮೃತ ಕಾಲದಲ್ಲಿ, ಅಭಿವೃದ್ಧಿ ಹೊಂದಿದ ಭಾರತವನ್ನು ರೂಪಿಸುವ ನೀತಿಗಳನ್ನು ಈ ಕಟ್ಟಡಗಳಲ್ಲಿ ರೂಪಿಸಲಾಗುತ್ತಿದೆ ಮತ್ತು ಮುಂಬರುವ ದಶಕಗಳಲ್ಲಿ, ರಾಷ್ಟ್ರದ ದಿಕ್ಕನ್ನು ಈ ಸಂಸ್ಥೆಗಳು ನಿರ್ಧರಿಸುತ್ತವೆ ಎಂದು ಹೇಳಿದರು. ಕರ್ತವ್ಯ ಭವನದ ಉದ್ಘಾಟನೆಗಾಗಿ ಎಲ್ಲಾ ನಾಗರಿಕರನ್ನು ಅಭಿನಂದಿಸಿದ ಅವರು, ಅದರ ನಿರ್ಮಾಣದಲ್ಲಿ ಭಾಗಿಯಾದ ಎಂಜಿನಿಯರ್ ಗಳು ಮತ್ತು ಕಾರ್ಮಿಕರಿಗೆ ಕೃತಜ್ಞತೆ ಸಲ್ಲಿಸಿದರು.2025ರ ಮುಂಗಾರು ಅಧಿವೇಶನದ ಆರಂಭದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
July 21st, 10:30 am
ಮುಂಗಾರು ಎಂದರೆ ಹೊಸತನ ಮತ್ತು ಸೃಷ್ಟಿಯ ಸಂಕೇತ. ಇಲ್ಲಿಯವರೆಗೆ ಬಂದಿರುವ ವರದಿಗಳ ಪ್ರಕಾರ, ಇಡೀ ದೇಶದಲ್ಲಿ ಉತ್ತಮ ಮಳೆಯಾಗಿದ್ದು, ಕೃಷಿ ವಲಯಕ್ಕೆ ಲಾಭವಾಗುವ ವಾತಾವರಣ ನಿರ್ಮಾಣವಾಗಿದೆ. ಮಳೆಯು ನಮ್ಮ ರೈತರ ಆರ್ಥಿಕತೆಗೆ ಮಾತ್ರವಲ್ಲದೆ, ದೇಶದ ಆರ್ಥಿಕತೆಗೂ, ಗ್ರಾಮೀಣ ಆರ್ಥಿಕತೆಗೂ ಮತ್ತು ಪ್ರತಿಯೊಂದು ಮನೆಯ ಆರ್ಥಿಕತೆಗೂ ಪ್ರಮುಖ ಪಾತ್ರ ವಹಿಸುತ್ತದೆ. ನಾನು ಪಡೆದಿರುವ ಮಾಹಿತಿಯ ಪ್ರಕಾರ, ಈ ವರ್ಷ ಜಲಾಶಯಗಳಲ್ಲಿ ಸಂಗ್ರಹವಾಗಿರುವ ನೀರಿನ ಪ್ರಮಾಣವು ಕಳೆದ ಹತ್ತು ವರ್ಷಗಳ ದಾಖಲೆಗಿಂತ ಸುಮಾರು ಮೂರು ಪಟ್ಟು ಹೆಚ್ಚಿದೆ. ಇದು ಮುಂಬರುವ ದಿನಗಳಲ್ಲಿ ದೇಶದ ಆರ್ಥಿಕತೆಗೆ ಹೆಚ್ಚಿನ ಪ್ರಯೋಜನ ನೀಡುತ್ತದೆ.ಸಂಸತ್ತಿನ ಮಳೆಗಾಲದ ಅಧಿವೇಶನದ ಆರಂಭವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ
July 21st, 09:54 am
ಸಂಸತ್ತಿನ ಮಳೆಗಾಲದ ಅಧಿವೇಶನದ ಆರಂಭದ ಸಂದರ್ಭದಲ್ಲಿ ಪ್ರಧಾನಿ ಮೋದಿ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದರು. ತಮ್ಮ ಹೇಳಿಕೆಗಳಲ್ಲಿ, ಅವರು ಭಯಾನಕ ಪಹಲ್ಗಾಮ್ ಹತ್ಯಾಕಾಂಡವನ್ನು ಪ್ರಸ್ತಾಪಿಸಿದರು ಮತ್ತು ಪಾಕಿಸ್ತಾನದ ಪಾತ್ರವನ್ನು ಬಹಿರಂಗಪಡಿಸುವಲ್ಲಿ ಭಾರತದ ರಾಜಕೀಯ ನಾಯಕತ್ವದ ಒಗ್ಗಟ್ಟಿನ ಧ್ವನಿಯನ್ನು ಶ್ಲಾಘಿಸಿದರು. ಡಿಜಿಟಲ್ ಇಂಡಿಯಾದ, ವಿಶೇಷವಾಗಿ ಯುಪಿಐನ ಜಾಗತಿಕ ಮನ್ನಣೆಯನ್ನು ಪ್ರಧಾನಿ ಗಮನಿಸಿದರು. ನಕ್ಸಲಿಸಂ ಮತ್ತು ಮಾವೋವಾದ ಕ್ಷೀಣಿಸುತ್ತಿದೆ ಎಂದು ಅವರು ದೃಢಪಡಿಸಿದರು ಮತ್ತು ಆಪರೇಷನ್ ಸಿಂಧೂರ್‌ನ ಯಶಸ್ಸನ್ನು ಸಹ ಶ್ಲಾಘಿಸಿದರು.TMC hatao, Bangla bachao: PM Modi in Durgapur, West Bengal
July 18th, 05:00 pm
In a stirring address to an enthusiastic crowd in Durgapur, West Bengal, PM Modi reignited the dream of a Viksit Bengal and assured the people that change is not just possible but inevitable. From invoking Bengal’s proud industrial and cultural legacy to exposing TMC’s failures, PM Modi presented a clear roadmap for restoring the state’s glory and integrating it into the journey of Viksit Bharat. He reaffirmed his unwavering commitment with a resounding assurance: “Viksit Bangla, Modi ki Guarantee!”PM Modi calls for a Viksit Bengal at Durgapur rally!
July 18th, 04:58 pm
In a stirring address to an enthusiastic crowd in Durgapur, West Bengal, PM Modi reignited the dream of a Viksit Bengal and assured the people that change is not just possible but inevitable. From invoking Bengal’s proud industrial and cultural legacy to exposing TMC’s failures, PM Modi presented a clear roadmap for restoring the state’s glory and integrating it into the journey of Viksit Bharat. He reaffirmed his unwavering commitment with a resounding assurance: “Viksit Bangla, Modi ki Guarantee!”ಬಿಹಾರದ ಮೋತಿಹಾರಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
July 18th, 11:50 am
ಈ ಪವಿತ್ರ ಶ್ರಾವಣ ಮಾಸದಲ್ಲಿ, ನಾನು ಬಾಬಾ ಸೋಮೇಶ್ವರನಾಥರ ಪಾದಗಳಿಗೆ ತಲೆ ಬಾಗಿ, ಅವರ ಆಶೀರ್ವಾದ ಬೇಡುತ್ತೇನೆ. ಬಿಹಾರದ ಎಲ್ಲಾ ಜನರು ಸಂತೋಷ ಮತ್ತು ಸಮೃದ್ಧಿಯಿಂದ ಇರುವಂತೆ ಆಶೀರ್ವದಿಸಲಿ ಎಂದು ಕೋರುತ್ತೇನೆ.ಬಿಹಾರದ ಮೋತಿಹಾರಿಯಲ್ಲಿ 7,000 ಕೋಟಿ ರೂ.ಗಿಂತಲೂ ಅಧಿಕ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
July 18th, 11:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬಿಹಾರದ ಮೋತಿಹಾರಿಯಲ್ಲಿ 7,000 ಕೋಟಿ ರೂ.ಗೂ ಅಧಿಕ ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಿದರು ಮತ್ತು ಅವುಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಪವಿತ್ರ ಸಾವನ್ (ಶ್ರಾವಣ) ಮಾಸದಲ್ಲಿ ಬಾಬಾ ಸೋಮೇಶ್ವರನಾಥನ ಪಾದಗಳಿಗೆ ನಮಸ್ಕರಿಸಿದ ಪ್ರಧಾನಮಂತ್ರಿಯವರು, ಬಿಹಾರದ ಎಲ್ಲ ನಿವಾಸಿಗಳ ಜೀವನದಲ್ಲಿ ಸಂತೋಷ ಮತ್ತು ಸಮೃದ್ಧಿ ನೆಲೆಸಲಿ ಎಂದು ಹಾರೈಸಿದರು. ಸಭಿಕರನ್ನು ಉದ್ದೇಶಿಸಿ ಮಾತನಾಡಿದ ಶ್ರೀ ಮೋದಿ, ಇದು ಚಂಪಾರಣ್ಯದ ಭೂಮಿ, ಇದು ಇತಿಹಾಸವನ್ನು ರೂಪಿಸಿದ ಭೂಮಿಯಾಗಿದೆ ಎಂದರು. ಸ್ವಾತಂತ್ರ್ಯ ಚಳವಳಿಯ ಸಮಯದಲ್ಲಿ, ಈ ಭೂಮಿ ಮಹಾತ್ಮ ಗಾಂಧಿಗೆ ಹೊಸ ದಿಕ್ಕನ್ನು ನೀಡಿತು. ಈ ಭೂಮಿಯಿಂದ ಪಡೆದ ಸ್ಫೂರ್ತಿ ಈಗ ಬಿಹಾರದ ಹೊಸ ಭವಿಷ್ಯವನ್ನು ರೂಪಿಸುತ್ತದೆ ಎಂದು ಅವರು ಒತ್ತಿ ಹೇಳಿದರು. ಈ ಅಭಿವೃದ್ಧಿ ಉಪಕ್ರಮಗಳಿಗಾಗಿ ಹಾಜರಿದ್ದ ಎಲ್ಲರಿಗೂ ಮತ್ತು ಬಿಹಾರದ ಜನರಿಗೆ ಅವರು ಅಭಿನಂದನೆ ಸಲ್ಲಿಸಿದರು.ರೋಜ್‌ಗಾರ್ ಮೇಳದ ಅಡಿಯಲ್ಲಿ 51,000 ಕ್ಕೂ ಹೆಚ್ಚು ನೇಮಕಾತಿ ಪತ್ರಗಳ ವಿತರಣೆಯ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅವತರಣಿಕೆ
July 12th, 11:30 am
ಕೇಂದ್ರ ಸರ್ಕಾರದಲ್ಲಿ ಯುವಜನರಿಗೆ ಶಾಶ್ವತ ಉದ್ಯೋಗಗಳನ್ನು ಒದಗಿಸುವ ನಮ್ಮ ಅಭಿಯಾನವು ಸ್ಥಿರವಾಗಿ ಮುಂದುವರಿಯುತ್ತಿದೆ. ಮತ್ತು ನಾವು ಇದಕ್ಕೆ ಹೆಸರುವಾಸಿಯಾಗಿದ್ದೇವೆ - ಯಾವುದೇ ಶಿಫಾರಸು ಇಲ್ಲ, ಭ್ರಷ್ಟಾಚಾರವಿಲ್ಲ. ಇಂದು, 51,000 ಕ್ಕೂ ಹೆಚ್ಚು ಯುವಜನರಿಗೆ ನೇಮಕಾತಿ ಪತ್ರಗಳನ್ನು ನೀಡಲಾಗಿದೆ. ಲಕ್ಷಾಂತರ ಯುವಜನರು ಈಗಾಗಲೇ ಇಂತಹ ರೋಜ್‌ಗಾರ್ ಮೇಳಗಳ (ಉದ್ಯೋಗ ಮೇಳಗಳು) ಮೂಲಕ ಭಾರತ ಸರ್ಕಾರದಲ್ಲಿ ಶಾಶ್ವತ ಉದ್ಯೋಗಗಳನ್ನು ಪಡೆದುಕೊಂಡಿದ್ದಾರೆ. ಈ ಯುವ ಜನರು ಈಗ ರಾಷ್ಟ್ರ ನಿರ್ಮಾಣದಲ್ಲಿ ಮಹತ್ವದ ಪಾತ್ರ ವಹಿಸುತ್ತಿದ್ದಾರೆ. ಇಂದು, ನಿಮ್ಮಲ್ಲಿ ಅನೇಕರು ಭಾರತೀಯ ರೈಲ್ವೆಯಲ್ಲಿ ನಿಮ್ಮ ಜವಾಬ್ದಾರಿಗಳನ್ನು ಪ್ರಾರಂಭಿಸಿದ್ದೀರಿ. ಕೆಲವರು ಈಗ ರಾಷ್ಟ್ರದ ಭದ್ರತೆಯ ರಕ್ಷಕರಾಗುತ್ತಾರೆ, ಅಂಚೆ ಇಲಾಖೆಯಲ್ಲಿ ನೇಮಕಗೊಂಡ ಇತರರು ಪ್ರತಿ ಹಳ್ಳಿಗೆ ಸರ್ಕಾರಿ ಸೇವೆಗಳನ್ನು ತಲುಪಿಸಲು ಸಹಾಯ ಮಾಡುತ್ತಾರೆ, ಕೆಲವರು ಎಲ್ಲರಿಗೂ ಆರೋಗ್ಯ ಮಿಷನ್‌ನ ಕಾಲಾಳುಗಳಾಗುತ್ತಾರೆ, ಅನೇಕ ಯುವ ವೃತ್ತಿಪರರು ಆರ್ಥಿಕ ಸೇರ್ಪಡೆಯನ್ನು ವೇಗಗೊಳಿಸಲು ಸಹಾಯ ಮಾಡುತ್ತಾರೆ ಮತ್ತು ಇತರರು ಭಾರತದ ಕೈಗಾರಿಕಾ ಅಭಿವೃದ್ಧಿಯನ್ನು ಮುಂದಕ್ಕೆ ಕೊಂಡೊಯ್ಯುತ್ತಾರೆ. ನಿಮ್ಮ ಇಲಾಖೆಗಳು ವಿಭಿನ್ನವಾಗಿರಬಹುದು, ಆದರೆ ಗುರಿ ಒಂದೇ ಆಗಿರುತ್ತದೆ. ಮತ್ತು ಆ ಗುರಿ ಏನು? ನಾವು ಇದನ್ನು ಮತ್ತೆ ಮತ್ತೆ ನೆನಪಿನಲ್ಲಿಟ್ಟುಕೊಳ್ಳಬೇಕು: ಇಲಾಖೆ, ಕಾರ್ಯ, ಸ್ಥಾನ ಅಥವಾ ಪ್ರದೇಶ ಏನೇ ಇರಲಿ - ಒಂದೇ ಮತ್ತು ಏಕೈಕ ಗುರಿ ರಾಷ್ಟ್ರಕ್ಕೆ ಸೇವೆ. ಮಾರ್ಗದರ್ಶಿ ತತ್ವ ಯಾವುದೆಂದರೆ : ನಾಗರಿಕ ಮೊದಲು. ದೇಶದ ಜನರಿಗೆ ಸೇವೆ ಸಲ್ಲಿಸಲು ನಿಮಗೆ ಉತ್ತಮ ವೇದಿಕೆ ನೀಡಲಾಗಿದೆ. ಜೀವನದ ಇಂತಹ ಮಹತ್ವದ ಹಂತದಲ್ಲಿ ಈ ದೊಡ್ಡ ಯಶಸ್ಸನ್ನು ಸಾಧಿಸಿದ್ದಕ್ಕಾಗಿ ನಾನು ನಿಮ್ಮೆಲ್ಲರನ್ನು ಅಭಿನಂದಿಸುತ್ತೇನೆ. ನಿಮ್ಮ ವೃತ್ತಿಜೀವನದ ಈ ಹೊಸ ಪ್ರಯಾಣಕ್ಕೆ ನನ್ನ ಶುಭಾಶಯಗಳನ್ನು ಕೋರುತ್ತೇನೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉದ್ಯೋಗ ಮೇಳವನ್ನು ಉದ್ದೇಶಿಸಿ ಮಾತನಾಡಿದರು
July 12th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಯೋಗ ಮೇಳವನ್ನುದ್ದೇಶಿಸಿ ಮಾತನಾಡಿದರು ಮತ್ತು ವಿವಿಧ ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಹೊಸದಾಗಿ ನೇಮಕಗೊಂಡ 51,000 ಕ್ಕೂ ಹೆಚ್ಚು ಯುವಜನರಿಗೆ ನೇಮಕಾತಿ ಪತ್ರಗಳನ್ನು ವಿತರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಭಾರತ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಈ ಯುವಜನರಿಗೆ ಇಂದು ಹೊಸ ಜವಾಬ್ದಾರಿಗಳ ಆರಂಭದ ದಿನವಾಗಿದೆ ಎಂದು ಹೇಳಿದರು. ವಿವಿಧ ಇಲಾಖೆಗಳಲ್ಲಿ ತಮ್ಮ ಸೇವೆಗಳನ್ನು ಪ್ರಾರಂಭಿಸಿದ ಯುವಜನರನ್ನು ಅವರು ಅಭಿನಂದಿಸಿದರು ಮತ್ತು ವಿಭಿನ್ನ ಪಾತ್ರಗಳ ಹೊರತಾಗಿಯೂ, ಅವರ ಸಾಮಾನ್ಯ ಗುರಿ ನಾಗರಿಕ ಮೊದಲು ಎಂಬ ತತ್ವದಿಂದ ಮಾರ್ಗದರ್ಶಿಸಲ್ಪಟ್ಟ ರಾಷ್ಟ್ರ ಸೇವೆಯಾಗಿದೆ ಎಂದು ಹೇಳಿದರು.