India's journey over the past decade has been one of scale, speed and sustainability: PM Modi in Guyana
November 22nd, 03:02 am
PM Modi addressed the Indian community in Georgetown, Guyana, thanking President Dr. Irfaan Ali for the warm welcome and hospitality. He highlighted planting a tree as part of the Ek Ped Maa ke Naam initiative and received Guyana's highest national honor, dedicating it to 1.4 billion Indians and the Indo-Guyanese community. Reflecting on his earlier visit, he praised the enduring bond between India and Guyana.Prime Minister Shri Narendra Modi addresses the Indian Community of Guyana
November 22nd, 03:00 am
PM Modi addressed the Indian community in Georgetown, Guyana, thanking President Dr. Irfaan Ali for the warm welcome and hospitality. He highlighted planting a tree as part of the Ek Ped Maa ke Naam initiative and received Guyana's highest national honor, dedicating it to 1.4 billion Indians and the Indo-Guyanese community. Reflecting on his earlier visit, he praised the enduring bond between India and Guyana."ಸಾಮಾಜಿಕ ಒಳಗೊಳ್ಳುವಿಕೆ ಮತ್ತು ಹಸಿವು ಹಾಗು ಬಡತನದ ವಿರುದ್ಧದ ಹೋರಾಟ" ಕುರಿತ ಜಿ 20 ಅಧಿವೇಶನದಲ್ಲಿ ಪ್ರಧಾನಮಂತ್ರಿಯವರ ಹೇಳಿಕೆಗಳು
November 18th, 08:00 pm
ಮೊದಲಿಗೆ, ಜಿ 20 ಶೃಂಗಸಭೆಯ ಆಯೋಜನೆಗಾಗಿ ಮಾಡಿದ ಭವ್ಯ ವ್ಯವಸ್ಥೆಗಳಿಗಾಗಿ ಮತ್ತು ಯಶಸ್ವಿ ಜಿ 20 ಅಧ್ಯಕ್ಷತೆಗಾಗಿ ನಾನು ಅಧ್ಯಕ್ಷ ಲುಲಾ ಅವರನ್ನು ಅಭಿನಂದಿಸಲು ಬಯಸುತ್ತೇನೆ.ಸಾಮಾಜಿಕ ಒಳಗೊಳ್ಳುವಿಕೆ ಮತ್ತು ಹಸಿವು ಮತ್ತು ಬಡತನದ ವಿರುದ್ಧದ ಹೋರಾಟ ಕುರಿತ ಜಿ 20 ಅಧಿವೇಶನವನ್ನುದ್ದೇಶಿಸಿ ಪ್ರಧಾನಮಂತ್ರಿ ಭಾಷಣ
November 18th, 07:55 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು 'ಸಾಮಾಜಿಕ ಒಳಗೊಳ್ಳುವಿಕೆ ಮತ್ತು ಹಸಿವು ಮತ್ತು ಬಡತನದ ವಿರುದ್ಧದ ಹೋರಾಟ' ಕುರಿತ ಜಿ 20 ಶೃಂಗಸಭೆಯ ಉದ್ಘಾಟನಾ ಅಧಿವೇಶನವನ್ನುದ್ದೇಶಿಸಿ ಭಾಷಣ ಮಾಡಿದರು. ಶೃಂಗಸಭೆಯ ಆತಿಥ್ಯ ವಹಿಸಿದ್ದಕ್ಕಾಗಿ ಮತ್ತು ಅವರ ಆತ್ಮೀಯ ಆತಿಥ್ಯಕ್ಕಾಗಿ ಬ್ರೆಜಿಲ್ ಅಧ್ಯಕ್ಷ ಘನತೆವೆತ್ತ ಶ್ರೀ ಲೂಯಿಸ್ ಇನಾಸಿಯೊ ಲುಲಾ ಡಾ ಸಿಲ್ವಾ ಅವರಿಗೆ ಪ್ರಧಾನಮಂತ್ರಿಯವರು ಧನ್ಯವಾದ ಅರ್ಪಿಸಿದರು. ಸುಸ್ಥಿರ ಅಭಿವೃದ್ಧಿ ಗುರಿಗಳ ಮೇಲೆ ಕೇಂದ್ರೀಕರಿಸಿದ ಬ್ರೆಜಿಲ್ ಜಿ 20 ಕಾರ್ಯಸೂಚಿಯನ್ನು ಅವರು ಶ್ಲಾಘಿಸಿದರು, ಈ ವಿಧಾನವು ಜಾಗತಿಕ ದಕ್ಷಿಣದ ಕಾಳಜಿಗಳನ್ನು ಎತ್ತಿ ತೋರಿಸಿದೆ ಮತ್ತು ಹೊಸದಿಲ್ಲಿ ಜಿ 20 ಶೃಂಗಸಭೆಯ ಜನ ಕೇಂದ್ರಿತ ನಿರ್ಧಾರಗಳನ್ನು ಮುಂದಕ್ಕೆ ಕೊಂಡೊಯ್ದಿದೆ ಎಂದು ಹೇಳಿದರು. ಒಂದು ಭೂಮಿ, ಒಂದು ಕುಟುಂಬ, ಒಂದು ಭವಿಷ್ಯ ಕ್ಕಾಗಿ ಭಾರತದ ಜಿ 20 ಅಧ್ಯಕ್ಷತೆಯ ಕರೆ ರಿಯೋ ಸಂಭಾಷಣೆಗಳಲ್ಲಿ ಪ್ರತಿಧ್ವನಿಸುತ್ತಲೇ ಇದೆ ಎಂದು ಅವರು ಒತ್ತಿ ಹೇಳಿದರು.ಭಾರತವು ಅನುಯಾಯಿಯಲ್ಲ, ಆದರೆ ಮೊದಲು ಚಲಿಸುವ ದೇಶ: ಬೆಂಗಳೂರಿನಲ್ಲಿ ಪ್ರಧಾನಿ ಮೋದಿ
April 20th, 04:00 pm
ಭಾರತದ ಡಿಜಿಟಲ್ ಕ್ರಾಂತಿಯಲ್ಲಿ ಬೆಂಗಳೂರಿನ ಪಾತ್ರ ಮಹತ್ವದ್ದು: ಬೆಂಗಳೂರಿನಲ್ಲಿ ಪ್ರಧಾನಿ ಮೋದಿಪ್ರಧಾನಿ ಮೋದಿ ಅವರು ಕರ್ನಾಟಕದ ಚಿಕ್ಕಬಳ್ಳಾಪುರ ಮತ್ತು ಬೆಂಗಳೂರಿನಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದರು
April 20th, 03:45 pm
ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದ ಚಿಕ್ಕಬಳ್ಳಾಪುರ ಮತ್ತು ಬೆಂಗಳೂರಿನಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದರು. ರೋಮಾಂಚಕ ಗುಂಪನ್ನುದ್ದೇಶಿಸಿ ಮಾತನಾಡಿದ ಅವರು, ಎನ್‌ಡಿಎ ಸರ್ಕಾರದ ಸಾಧನೆಗಳನ್ನು ಎತ್ತಿ ತೋರಿಸಿದರು ಮತ್ತು ಭವಿಷ್ಯದ ಯೋಜನೆಗಳನ್ನು ವಿವರಿಸಿದರು.ಮಾರ್ಚ್ 13 ರಂದು ಅನನುಕೂಲಕರ ವಿಭಾಗಗಳಿಗೆ ಸಾಲ ಬೆಂಬಲಕ್ಕಾಗಿ ರಾಷ್ಟ್ರವ್ಯಾಪಿ ವ್ಯಾಪ್ತಿಯನ್ನು ಗುರುತಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಪ್ರಧಾನಮಂತ್ರಿ
March 12th, 06:43 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024ರ ಮಾರ್ಚ್ 13ರಂದು ಸಂಜೆ 4 ಗಂಟೆಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಅನನುಕೂಲಕರ ವರ್ಗಗಳಿಗೆ ಸಾಲ ಬೆಂಬಲಕ್ಕಾಗಿ ರಾಷ್ಟ್ರವ್ಯಾಪಿ ವ್ಯಾಪ್ತಿಯನ್ನು ಗುರುತಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಪ್ರಧಾನಮಂತ್ರಿಯವರು ಪ್ರಧಾನ ಮಂತ್ರಿ ಸಮಾಜಿಕ ಉತ್ಥಾನ್ ಎವಮ್ ರೋಜ್ ಗಾರ್ ಆಧಾರ್ ಜನಕಲ್ಯಾಣ (ಪಿಎಂ-ಸೂರಜ್) ರಾಷ್ಟ್ರೀಯ ಪೋರ್ಟಲ್ ಗೆ ಚಾಲನೆ ನೀಡಲಿದ್ದಾರೆ ಮತ್ತು ದೇಶದ ಅನನುಕೂಲಕರ ವರ್ಗಗಳ ಒಂದು ಲಕ್ಷ ಉದ್ಯಮಿಗಳಿಗೆ ಸಾಲ ಬೆಂಬಲವನ್ನು ಮಂಜೂರು ಮಾಡಲಿದ್ದಾರೆ. ಇದಲ್ಲದೆ, ಪರಿಶಿಷ್ಟ ಜಾತಿಗಳು, ಹಿಂದುಳಿದ ವರ್ಗಗಳು ಮತ್ತು ನೈರ್ಮಲ್ಯ ಕಾರ್ಮಿಕರು ಸೇರಿದಂತೆ ಅನನುಕೂಲಕರ ಗುಂಪುಗಳ ವಿವಿಧ ಸರ್ಕಾರಿ ಯೋಜನೆಗಳ ಫಲಾನುಭವಿಗಳೊಂದಿಗೆ ಪ್ರಧಾನಿ ಸಂವಾದ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭಿಕರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ನವದೆಹಲಿಯ ನಡೆದ ʻಭಾರತ್ ಟೆಕ್ಸ್-2024ʼ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿಗಳ ಭಾಷಣದ ಕನ್ನಡ ಪಠ್ಯಾಂತರ
February 26th, 11:10 am
ನನ್ನ ಕ್ಯಾಬಿನೆಟ್ ಸಹೋದ್ಯೋಗಿಗಳಾದ ಪಿಯೂಷ್ ಗೋಯಲ್ ಅವರೇ ಮತ್ತು ದರ್ಶನ ಜರ್ದೋಶ್ ಅವರೇ, ವಿವಿಧ ದೇಶಗಳ ರಾಯಭಾರಿಗಳೇ, ಹಿರಿಯ ರಾಜತಾಂತ್ರಿಕರೇ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅಧಿಕಾರಿಗಳೇ, ಫ್ಯಾಷನ್ ಮತ್ತು ಜವಳಿ ಪ್ರಪಂಚದ ಎಲ್ಲಾ ಸಹವರ್ತಿಗಳೇ, ಯುವ ಉದ್ಯಮಿಗಳೇ, ವಿದ್ಯಾರ್ಥಿಗಳೇ, ನಮ್ಮ ನೇಕಾರರು ಮತ್ತು ಕುಶಲಕರ್ಮಿಗಳೇ ಹಾಗೂ ಮಹಿಳೆಯರೇ ಮತ್ತು ಮಹನೀಯರೇ! ಭಾರತ್ ಮಂಟಪದಲ್ಲಿ ʻಭಾರತ್ ಟೆಕ್ಸ್ʼ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಕ್ಕಾಗಿ ನಿಮ್ಮೆಲ್ಲರಿಗೂ ಅಭಿನಂದನೆಗಳು! ಇಂದಿನ ಕಾರ್ಯಕ್ರಮವು ಖುದ್ದು ಬಹಳ ವಿಶೇಷವಾಗಿದೆ. ಇದು ಏಕೆ ವಿಶೇಷವೆಂದರೆ ಇದು ಭಾರತದ ಎರಡು ಅತಿದೊಡ್ಡ ಪ್ರದರ್ಶನ ಕೇಂದ್ರಗಳಾದ ʻಭಾರತ್ ಮಂಟಪʼ ಮತ್ತು ʻಯಶೋಭೂಮಿʼಯಲ್ಲಿ ಏಕಕಾಲದಲ್ಲಿ ನಡೆಯುತ್ತಿದೆ. ಇಂದು, 3,000ಕ್ಕೂ ಹೆಚ್ಚು ಪ್ರದರ್ಶಕರು... 100 ದೇಶಗಳಿಂದ ಸುಮಾರು 3,000 ಖರೀದಿದಾರರು... 40,000ಕ್ಕೂ ಹೆಚ್ಚು ವ್ಯಾಪಾರ ಸಂದರ್ಶಕರು... ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದೇವೆ. ಈ ಕಾರ್ಯಕ್ರಮವು ಜವಳಿ ಪರಿಸರ ವ್ಯವಸ್ಥೆಯ ಎಲ್ಲಾ ಪಾಲುದಾರರನ್ನು ಮತ್ತು ಇಡೀ ಮೌಲ್ಯ ಸರಪಳಿಯನ್ನು ಒಗ್ಗೂಡಿಸಲು ವೇದಿಕೆಯನ್ನು ಒದಗಿಸುತ್ತಿದೆ.ನವದೆಹಲಿಯಲ್ಲಿ ಭಾರತ್ ಟೆಕ್ಸ್ 2024 ಉದ್ಘಾಟಿಸಿದ ಪ್ರಧಾನಿ
February 26th, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ್ ಮಂಟಪದಲ್ಲಿ ದೇಶದಲ್ಲಿ ಆಯೋಜಿಸಿರುವ ಅತಿದೊಡ್ಡ ಜಾಗತಿಕ ಜವಳಿ ಮೇಳ ಎಂದು ಹೆಸರಾಗಿರುವ ಭಾರತ್ ಟೆಕ್ಸ್ 2024 ಅನ್ನು ಉದ್ಘಾಟಿಸಿದರು. ಮೇಳದಲ್ಲಿ ಪ್ರದರ್ಶಿಸಿರುವ ಮಳಿಗೆಗಳಲ್ಲಿ ಓಡಾಡಿದ ಪ್ರಧಾನಿ ಅವರು ಅಲ್ಲಿನ ವಸ್ತುಗಳನ್ನು ವೀಕ್ಷಿಸಿದರು.ಮಹಿಳೆಯರಲ್ಲಿ ಜಾಗೃತಿ ಮೂಡಿಸುವ ಉತ್ಸಾಹದಲ್ಲಿ ಪ್ರಧಾನ ಮಂತ್ರಿ ಅವರ ಮೆಚ್ಚುಗೆ ಗಳಿಸಿದ ಡುಂಗರಪುರದ ಮಹಿಳಾ ಉದ್ಯಮಿ
January 18th, 04:04 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಕ್ಷಿತ್ ಭಾರತ್ ಸಂಕಲ್ಪ ಯಾತ್ರೆಯ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು. ದೇಶಾದ್ಯಂತದ ವಿಕ್ಷಿತ್ ಭಾರತ್ ಸಂಕಲ್ಪ ಯಾತ್ರೆಯ ಸಾವಿರಾರು ಫಲಾನುಭವಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರು, ಸಂಸದರು, ಶಾಸಕರು ಮತ್ತು ಸ್ಥಳೀಯ ಮಟ್ಟದ ಪ್ರತಿನಿಧಿಗಳು ಪಾಲ್ಗೊಂಡಿದ್ದರು.ವಿಶ್ವಕರ್ಮ ಯೋಜನೆ ಮತ್ತು ಸಿರಿಧಾನ್ಯಗಳ ಬಗ್ಗೆ ಜಾಗೃತಿ ಮೂಡಿಸುತ್ತಿರುವ ‘ಕುಮ್ಹಾರ್’ ಸಮುದಾಯದ ಮಹಿಳಾ ಉದ್ಯಮಿ
December 27th, 02:37 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಫಲಾನುಭವಿಗಳೊಂದಿಗೆ ವಾಸ್ತವೋಪಮದ (ವಿಡಿಯೋ ಕಾನ್ಫರೆನ್ಸಿಂಗ್) ಮೂಲಕ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು.ನಮ್ಮ ರಾಷ್ಟ್ರದಲ್ಲಿ ಹೂಡಿಕೆ ಮಾಡಲು ನಾವು ಜಗತ್ತನ್ನೇ ಸ್ವಾಗತಿಸುತ್ತೇವೆ. ಭಾರತ ನಿಮ್ಮನ್ನು ನಿರಾಶೆಗೊಳಿಸುವುದಿಲ್ಲ: ಪ್ರಧಾನ ಮಂತ್ರಿಗಳು
November 26th, 08:58 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಭಾರತವು ಹೂಡಿಕೆದಾರರ ನೆಚ್ಚಿನ ತಾಣವಾಗಿದ್ದು ಉದ್ಯಮಿಗಳಲ್ಲಿರುವ ಆಶಾವಾದವನ್ನು ಸಂತಸ ತಂದಿದೆ ಎಂದು ಹೆಮ್ಮೆಯಿಂದ ನುಡಿದಿದ್ದಾರೆ.PM Modi's 'Vocal for Local' call resonates with the masses
November 11th, 10:59 am
Following Prime Minister Modi's 'Vocal for Local' appeal during 'Mann Ki Baat' in October 2023 episode, the initiative has received widespread endorsement from citizens nationwide. The movement has sparked a groundswell of support for 'Made in India' products during the festive season, encouraging local artisans, innovators and entrepreneurs.ಸೆಪ್ಟೆಂಬರ್ 26-27, 2023 ರಂದು ಗುಜರಾತ್ ಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
September 25th, 05:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 26-27, 2023 ರಂದು ಗುಜರಾತ್ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಸೆಪ್ಟೆಂಬರ್ 27 , 2023ರಂದು ಬೆಳಗ್ಗೆ ಸುಮಾರು 10 ಗಂಟೆಗೆ, ವೈಬ್ರೆಂಟ್ ಗುಜರಾತ್ ಗ್ಲೋಬಲ್ ಶೃಂಗಸಭೆಯ 20 ವರ್ಷಗಳ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರು ಭಾಗವಹಿಸಲಿದ್ದಾರೆ. ಅದರ ನಂತರ, ಮಧ್ಯಾಹ್ನ 12:45 ರ ಸುಮಾರಿಗೆ, ಪ್ರಧಾನಮಂತ್ರಿಯವರು ಛೋಟೌಡೆಪುರದ ಬೋಡೆಲಿಯನ್ನು ತಲುಪಲಿದ್ದಾರೆ, ಅಲ್ಲಿ ಅವರು ರೂ.5200 ಕೋಟಿಗೂ ಅಧಿಕ ಮೌಲ್ಯದ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಲಿದ್ದಾರೆ ಮತ್ತು ದೇಶಕ್ಕೆ ಸಮರ್ಪಿಸಲಿದ್ದಾರೆ.ಇನ್ನಷ್ಟು ಬೆಳೆಯಲು ಬಲವಾದ ಬಯಕೆಯನ್ನು ಹೊಂದಿರುವ ಭಾರತವು ಜಾಗತಿಕ ಹೊಳಪಿನ ತಾಣವಾಗಿದೆ: ಪ್ರಧಾನ ಮಂತ್ರಿ
July 16th, 08:36 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕ್ಯಾಪಿಟಲ್ ಗ್ರೂಪ್ ನ ಈ ದಶಕದಲ್ಲಿ ಭಾರತವು ಉದಯೋನ್ಮುಖ ಮಾರುಕಟ್ಟೆಯಾಗಲಿದೆಯೇ? ಎಂಬ ಶೀರ್ಷಿಕೆಯ ಲೇಖನವನ್ನು ಹಂಚಿಕೊಂಡಿದ್ದಾರೆ.ಅಮೇರಿಕಾದಲ್ಲಿರುವ ಭಾರತೀಯ ಸಮುದಾಯದ ಸದಸ್ಯರೊಂದಿಗೆ ಪ್ರಧಾನಮಂತ್ರಿಯವರು ಸಂವಾದ ನಡೆಸಿದರು
June 24th, 07:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜೂನ್ 23, 2023 ರಂದು ವಾಷಿಂಗ್ಟನ್ ಡಿಸಿಯ ರೊನಾಲ್ಡ್ ರೇಗನ್ ಸೆಂಟರ್ ನಲ್ಲಿ ಭಾರತೀಯ ಸಮುದಾಯದ ಸದಸ್ಯರೊಂದಿಗೆ ಸಂವಾದ ನಡೆಸಿದರು.ಉತ್ಪಾದನೆ ಸಂಪರ್ಕಿತ ಉತ್ತೇಜನಾ ಯೋಜನೆ(ಪಿಎಲ್ಐ)ಯು ಉಕ್ಕು ವಲಯಕ್ಕೆ ಶಕ್ತಿ ತುಂಬಿದೆ; ನಮ್ಮ ಯುವ ಸಮುದಾಯದ ಉದ್ಯಮಶೀಲರಿಗೆ ಅವಕಾಶಗಳನ್ನು ಸೃಷ್ಟಿಸಲಿದೆ: ಪ್ರಧಾನಿ
March 17th, 09:41 pm
ಆತ್ಮನಿರ್ಭರ್ ಭಾರತ ಕಟ್ಟುವ ಗುರಿ ಸಾಧಿಸಲು ಉಕ್ಕು ವಲಯ ನಿರ್ಣಾಯಕ ಎಂದು ಪ್ರಧಾನಿ ತಿಳಿಸಿದ್ದಾರೆ. ಉತ್ಪಾದನೆ ಸಂಪರ್ಕಿತ ಉತ್ತೇಜನಾ ಯೋಜನೆಯು ಉಕ್ಕು ವಲಯಕ್ಕೆ ಸ್ಪಷ್ಟವಾಗಿ ಶಕ್ತಿ ತುಂಬಿದೆ. ನಮ್ಮ ಯುವಕರು ಮತ್ತು ಉದ್ಯಮಶೀಲರಿಗೆ ವಿಪುಲ ಅವಕಾಶಗಳನ್ನು ಸೃಷ್ಟಿಸುತ್ತದೆ ಎಂದು ಅವರು ಹೇಳಿದ್ದಾರೆ.'ಪಿಎಂ ವಿಶ್ವಕರ್ಮ ಕೌಶಲ್ ಸಮ್ಮಾನ್ (ಪಿಎಂ ವಿಕಾಸ್)' ಕುರಿತ ಬಜೆಟ್ ನಂತರದ ವೆಬಿನಾರ್ ನಲ್ಲಿ ಪ್ರಧಾನ ಮಂತ್ರಿ ಅವರ ಭಾಷಣದ ಕನ್ನಡ ಅನುವಾದ
March 11th, 10:36 am
ಕಳೆದ ಹಲವಾರು ದಿನಗಳಿಂದ, ಬಜೆಟ್ ನಂತರದ ವೆಬಿನಾರ್ ಗಳ ಸರಣಿ ನಡೆಯುತ್ತಿದೆ. ಕಳೆದ ಮೂರು ವರ್ಷಗಳಿಂದ, ನಾವು ಪ್ರತಿ ಬಜೆಟ್ ನಂತರ ಬಜೆಟ್ ಬಗ್ಗೆ ಮಧ್ಯಸ್ಥಗಾರರೊಂದಿಗೆ ಮಾತನಾಡುವ ಸಂಪ್ರದಾಯವನ್ನು ಪ್ರಾರಂಭಿಸಿದ್ದೇವೆ. ಮತ್ತು ನಾವು ಸಾಧ್ಯವಾದಷ್ಟು ಬೇಗ ಬಜೆಟ್ ಅನ್ನು ಕೇಂದ್ರೀಕೃತ ರೀತಿಯಲ್ಲಿ ಹೇಗೆ ಕಾರ್ಯಗತಗೊಳಿಸಬೇಕು? ಮಧ್ಯಸ್ಥಗಾರರು ಯಾವ ಸಲಹೆಗಳನ್ನು ನೀಡುತ್ತಾರೆ? ಅವರ ಸಲಹೆಗಳನ್ನು ಸರ್ಕಾರ ಹೇಗೆ ಕಾರ್ಯಗತಗೊಳಿಸಬೇಕು? ಅಂದರೆ, ಚಿಂತನ-ಮಂಥನ ಅಧಿವೇಶನಗಳು ಬಹಳ ಚೆನ್ನಾಗಿ ನಡೆಯುತ್ತಿವೆ. ರೈತರು, ಮಹಿಳೆಯರು, ಯುವಕರು, ಬುಡಕಟ್ಟು ಜನಾಂಗದವರು, ನಮ್ಮ ದಲಿತ ಸಹೋದರ ಸಹೋದರಿಯರು ಮತ್ತು ಅಂತಹ ಸಾವಿರಾರು ಪಾಲುದಾರರೊಂದಿಗೆ ಬಜೆಟ್ ನೇರ ಸಂಬಂಧವನ್ನು ಹೊಂದಿರುವ ಎಲ್ಲಾ ವ್ಯಾಪಾರ ಮತ್ತು ಉದ್ಯಮ, ಸಂಘಗಳೊಂದಿಗಿನ ಚರ್ಚೆಯಿಂದ ಅತ್ಯುತ್ತಮ ಸಲಹೆಗಳು ಹೊರಹೊಮ್ಮಿವೆ ಎಂದು ನನಗೆ ಸಂತೋಷವಾಗಿದೆ. ಸರ್ಕಾರಕ್ಕೂ ಉಪಯುಕ್ತವಾದ ಸಲಹೆಗಳು ಬಂದಿವೆ. ಮತ್ತು ಈ ಬಾರಿ, ಬಜೆಟ್ ವೆಬಿನಾರ್ ಗಳಲ್ಲಿ, ಆಯವ್ಯಯದಲ್ಲಿ ಏನು ಇರಬೇಕು ಅಥವಾ ಇರಬಾರದು ಎಂದು ಚರ್ಚಿಸುವ ಬದಲು, ಎಲ್ಲಾ ಪಾಲುದಾರರು ಈ ಬಜೆಟ್ ಅನ್ನು ಹೆಚ್ಚು ಪ್ರಯೋಜನಕಾರಿಯಾಗಿಸುವ ಮಾರ್ಗಗಳ ಬಗ್ಗೆ ಸೂಚ್ಯವಾಗಿ ಚರ್ಚಿಸಿದ್ದಾರೆ ಎಂಬುದು ನನಗೆ ತುಂಬಾ ಸಂತೋಷದ ವಿಷಯವಾಗಿದೆ.'ಪ್ರಧಾನಮಂತ್ರಿ ವಿಶ್ವಕರ್ಮ ಕೌಶಲ ಸಮ್ಮಾನ್' ಕುರಿತು ಬಜೆಟ್ ನಂತರದ ವೆಬಿನಾರ್ ಉದ್ದೇಶಿಸಿ ಮಾತನಾಡಿದ ಪ್ರಧಾನಿ
March 11th, 10:12 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ‘ಪ್ರಧಾನಮಂತ್ರಿ ವಿಶ್ವಕರ್ಮ ಕೌಶಲ ಸಮ್ಮಾನ್’ ವಿಷಯ ಕುರಿತು ಬಜೆಟ್ ನಂತರದ ವೆಬಿನಾರ್ ಅನ್ನು ಉದ್ದೇಶಿಸಿ ಮಾತನಾಡಿದರು. ಕೇಂದ್ರ ಬಜೆಟ್ 2023 ರಲ್ಲಿ ಘೋಷಿಸಲಾದ ಉಪಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಆಲೋಚನೆಗಳು ಮತ್ತು ಸಲಹೆಗಳನ್ನು ಪಡೆಯಲು ಸರ್ಕಾರವು ಆಯೋಜಿಸಿರುವ 12 ಬಜೆಟ್ ನಂತರದ ವೆಬಿನಾರ್‌ಗಳ ಸರಣಿಯಯಲ್ಲಿ ಇದು ಕೊನೆಯದಾಗಿದೆ.ಮಹಾರಾಷ್ಟ್ರದ ಮರೋಲ್ ನಲ್ಲಿ ಅಲ್ಜಾಮಿಯಾ-ಟುಸ್-ಸೈಫಿಯಾದ ಹೊಸ ಕ್ಯಾಂಪಸ್ ಉದ್ಘಾಟನೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
February 10th, 08:27 pm
ಪೂಜ್ಯ ಸೈದ್ನಾ ಮುಫದ್ದಲ್ ಜೀ, ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಜೀ, ಉಪ ಮುಖ್ಯಮಂತ್ರಿ ದೇವೇಂದ್ರ ಜೀ ಮತ್ತು ಈ ಸಮಾರಂಭದಲ್ಲಿ ಹಾಜರಿರುವ ಇತರ ಎಲ್ಲ ಗಣ್ಯರೇ !