ಹಿಂದೂಸ್ತಾನ್ ಟೈಮ್ಸ್ ಲೀಡರ್ಶಿಪ್ ಶೃಂಗಸಭೆ 2024 ರಲ್ಲಿ ಪ್ರಧಾನ ಮಂತ್ರಿಯವರ ಭಾಷಣದ ಇಂಗ್ಲಿಷ್ ಅವತರಣಿಕೆ

November 16th, 10:15 am

100 ವರ್ಷಗಳ ಹಿಂದೆ, ಹಿಂದೂಸ್ತಾನ್ ಟೈಮ್ಸ್ ಅನ್ನು ಪೂಜ್ಯ ಬಾಪು ಉದ್ಘಾಟಿಸಿದರು ... ಅವರು ಗುಜರಾತಿ ಭಾಷಣಕಾರರಾಗಿದ್ದರು, ಮತ್ತು ನೀವು 100 ವರ್ಷಗಳ ನಂತರ ಇನ್ನೊಬ್ಬ ಗುಜರಾತಿಯನ್ನು ಆಹ್ವಾನಿಸಿದ್ದೀರಿ. ನಾನು, ಹಿಂದೂಸ್ತಾನ್ ಟೈಮ್ಸ್ ಮತ್ತು ಕಳೆದ 100 ವರ್ಷಗಳಲ್ಲಿ ಈ ಐತಿಹಾಸಿಕ ಪ್ರಯಾಣದೊಂದಿಗೆ ಸಂಬಂಧ ಹೊಂದಿರುವವರು, ಅದನ್ನು ಪೋಷಿಸಲು ಕೊಡುಗೆ ನೀಡಿದವರು, ಹೋರಾಡಿದ ಮತ್ತು ಸವಾಲುಗಳನ್ನು ಎದುರಿಸಿದ ಆದರೆ ದೃಢವಾಗಿ ನಿಂತ ಎಲ್ಲರನ್ನೂ ಅಭಿನಂದಿಸುತ್ತೇನೆ. ಅವರೆಲ್ಲರೂ ಇಂದು ಅಭಿನಂದನೆಗೆ ಅರ್ಹರು ಮತ್ತು ಗೌರವಕ್ಕೆ ಅರ್ಹರು. 100 ವರ್ಷಗಳ ಪ್ರಯಾಣವನ್ನು ಪೂರ್ಣಗೊಳಿಸುವುದು ನಿಜಕ್ಕೂ ಮಹತ್ವದ್ದಾಗಿದೆ. ನೀವೆಲ್ಲರೂ ಈ ಮನ್ನಣೆಗೆ ಅರ್ಹರು, ಮತ್ತು ಭವಿಷ್ಯಕ್ಕಾಗಿ ನನ್ನ ಶುಭ ಹಾರೈಕೆಗಳನ್ನು ಸಲ್ಲಿಸುತ್ತೇನೆ. ನಾನು ಇಲ್ಲಿಗೆ ಬಂದಾಗ, ನಾನು ಕುಟುಂಬದ ಸದಸ್ಯರನ್ನು ಭೇಟಿಯಾದೆ ಮತ್ತು ಹಿಂದೂಸ್ತಾನ್ ಟೈಮ್ಸ್ ನ 100 ವರ್ಷಗಳ ಪ್ರಯಾಣವನ್ನು ಪ್ರದರ್ಶಿಸುವ ಗಮನಾರ್ಹ ಪ್ರದರ್ಶನವನ್ನು ವೀಕ್ಷಿಸುವ ಅವಕಾಶ ಸಿಕ್ಕಿತು. ನಿಮಗೆ ಸಮಯವಿದ್ದರೆ ಹೊರಡುವ ಮೊದಲು ಅಲ್ಲಿಗೆ ಭೇಟಿ ನೀಡಿ ಸ್ವಲ್ಪ ಸಮಯ ಕಳೆಯಲು ನಾನು ನಿಮ್ಮೆಲ್ಲರನ್ನೂ ಪ್ರೋತ್ಸಾಹಿಸುತ್ತೇನೆ. ಇದು ಕೇವಲ ಪ್ರದರ್ಶನವಲ್ಲ, ಆದರೆ ಒಂದು ಅನುಭವ. 100 ವರ್ಷಗಳ ಇತಿಹಾಸ ನನ್ನ ಕಣ್ಣ ಮುಂದೆ ಹಾದುಹೋದಂತೆ ಭಾಸವಾಯಿತು. ದೇಶ ಸ್ವಾತಂತ್ರ್ಯ ಪಡೆದ ದಿನದಿಂದ ಮತ್ತು ಸಂವಿಧಾನವನ್ನು ಜಾರಿಗೆ ತಂದ ದಿನದಿಂದ ನಾನು ಪತ್ರಿಕೆಗಳನ್ನು ನೋಡಿದೆ. ಮಾರ್ಟಿನ್ ಲೂಥರ್ ಕಿಂಗ್, ನೇತಾಜಿ ಸುಭಾಷ್ ಚಂದ್ರ ಬೋಸ್, ಡಾ.ಶ್ಯಾಮ್ ಪ್ರಸಾದ್ ಮುಖರ್ಜಿ, ಅಟಲ್ ಬಿಹಾರಿ ವಾಜಪೇಯಿ ಮತ್ತು ಡಾ.ಎಂ.ಎಸ್.ಸ್ವಾಮಿನಾಥನ್ ಅವರಂತಹ ಪ್ರಸಿದ್ಧ ಮತ್ತು ಪ್ರಖ್ಯಾತ ವ್ಯಕ್ತಿಗಳು ಹಿಂದೂಸ್ತಾನ್ ಟೈಮ್ಸ್ ಗೆ ಬರೆಯುತ್ತಿದ್ದರು. ಅವರ ಬರಹಗಳು ಪತ್ರಿಕೆಯನ್ನು ಅಪಾರವಾಗಿ ಶ್ರೀಮಂತಗೊಳಿಸಿದವು. ನಿಜವಾಗಿಯೂ, ನಾವು ಬಹಳ ದೂರ ಸಾಗಿದ್ದೇವೆ. ಸ್ವಾತಂತ್ರ್ಯಕ್ಕಾಗಿ ಹೋರಾಡುವುದರಿಂದ ಹಿಡಿದು ಸ್ವಾತಂತ್ರ್ಯದ ನಂತರ ಮಿತಿಯಿಲ್ಲದ ಭರವಸೆಯ ಅಲೆಗಳ ಮೇಲೆ ಸವಾರಿ ಮಾಡುವವರೆಗೆ, ಈ ಪ್ರಯಾಣವು ಅಸಾಧಾರಣ ಮತ್ತು ನಂಬಲಾಗದಂತಹದ್ದಾಗಿದೆ. ನಿಮ್ಮ ಪತ್ರಿಕೆಯಲ್ಲಿ, 1947 ರ ಅಕ್ಟೋಬರ್ ನಲ್ಲಿ ಕಾಶ್ಮೀರದ ಸೇರ್ಪಡೆಯ ನಂತರ ಇದ್ದ ಉತ್ಸಾಹವನ್ನು ನಾನು ಗ್ರಹಿಸಿದೆ, ಅದನ್ನು ಪ್ರತಿಯೊಬ್ಬ ನಾಗರಿಕರೂ ಅನುಭವಿಸಿದ್ದಾರೆ. ಆ ಕ್ಷಣದಲ್ಲಿ, ನಿರ್ಧಾರ ತೆಗೆದುಕೊಳ್ಳದಿರುವಿಕೆಯು ಕಾಶ್ಮೀರವನ್ನು ಏಳು ದಶಕಗಳ ಕಾಲ ಹಿಂಸಾಚಾರದಲ್ಲಿ ಮುಳುಗಿಸಿತು ಎಂಬುದನ್ನು ನಾನು ಅರಿತುಕೊಂಡೆ. ಇಂದು, ನಿಮ್ಮ ಪತ್ರಿಕೆ ಜಮ್ಮು ಮತ್ತು ಕಾಶ್ಮೀರದಲ್ಲಿ ದಾಖಲೆಯ ಮತದಾನದ ಸುದ್ದಿಗಳನ್ನು ವರದಿ ಮಾಡುತ್ತದೆ, ಇದು ಹಿಂದಿನದಕ್ಕೆ ತೀವ್ರವಾಗಿ ವ್ಯತಿರಿಕ್ತವಾಗಿದೆ. ಮತ್ತೊಂದು ಪತ್ರಿಕೆಯ ಪುಟವು ಗಮನ ಸೆಳೆಯುತ್ತದೆ ಮತ್ತು ಓದುಗರನ್ನು ಆಕರ್ಷಿಸುತ್ತದೆ. ಒಂದು ವಿಭಾಗವು ಅಸ್ಸಾಂ ಪ್ರಕ್ಷುಬ್ಧ ಪ್ರದೇಶವೆಂದು ಘೋಷಿಸಲಾಗಿದೆ ಎಂದು ವರದಿ ಮಾಡಿದರೆ, ಇನ್ನೊಂದು ವಿಭಾಗವು ಅಟಲ್ ಜಿ ಬಿಜೆಪಿಗೆ ಅಡಿಪಾಯ ಹಾಕಿದ ಬಗ್ಗೆ ಮಾತನಾಡಿತು. ಇಂದು ಅಸ್ಸಾಂನಲ್ಲಿ ಶಾಶ್ವತ ಶಾಂತಿಯನ್ನು ತರುವಲ್ಲಿ ಬಿಜೆಪಿ ಪ್ರಮುಖ ಪಾತ್ರ ವಹಿಸುತ್ತಿರುವುದು ಆಹ್ಲಾದಕರ ಕಾಕತಾಳೀಯವಾದ ಸಂಗತಿಯಾಗಿದೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ಹಿಂದೂಸ್ತಾನ್ ಟೈಮ್ಸ್ ನಾಯಕತ್ವ ಶೃಂಗಸಭೆ 2024 ಅನ್ನು ಉದ್ದೇಶಿಸಿ ಮಾತನಾಡಿದರು

November 16th, 10:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ಹಿಂದೂಸ್ತಾನ್ ಟೈಮ್ಸ್ ನಾಯಕತ್ವ ಶೃಂಗಸಭೆ 2024 ಅನ್ನು ಉದ್ದೇಶಿಸಿ ಮಾತನಾಡಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಹಿಂದೂಸ್ತಾನ್ ಟೈಮ್ಸ್ ಅನ್ನು 100 ವರ್ಷಗಳ ಹಿಂದೆ ಮಹಾತ್ಮ ಗಾಂಧಿಯವರು ಉದ್ಘಾಟಿಸಿದರು ಎಂದು ಹೇಳಿದರು. ಹಿಂದೂಸ್ತಾನ್ ಟೈಮ್ಸ್ ನ 100 ವರ್ಷಗಳ ಐತಿಹಾಸಿಕ ಪ್ರಯಾಣಕ್ಕಾಗಿ ಮತ್ತು ಅದರ ಉದ್ಘಾಟನೆಯಿಂದ ಅದರೊಂದಿಗೆ ಸಂಬಂಧ ಹೊಂದಿರುವ ಎಲ್ಲರಿಗೂ ಅಭಿನಂದನೆಗಳನ್ನು ತಿಳಿಸಿದರು. ಅವರ ಮುಂದಿನ ಪ್ರಯತ್ನಗಳಿಗೆ ಶುಭ ಹಾರೈಸಿದರು. ಸ್ಥಳದಲ್ಲಿ ಹಿಂದೂಸ್ತಾನ್ ಟೈಮ್ಸ್ ಪ್ರದರ್ಶನಕ್ಕೆ ಭೇಟಿ ನೀಡಿದ ಶ್ರೀ ಮೋದಿ, ಇದೊಂದು ಅಪೂರ್ವ ಅನುಭವವಾಗಿದೆ ಎಂದು ಹೇಳಿದರು ಮತ್ತು ಎಲ್ಲಾ ಪ್ರತಿನಿಧಿಗಳು ಇಲ್ಲಿಗೆ ಭೇಟಿ ನೀಡುವಂತೆ ಒತ್ತಾಯಿಸಿದರು. ಭಾರತಕ್ಕೆ ಸ್ವಾತಂತ್ರ್ಯ ದೊರೆತು ಸಂವಿಧಾನ ಜಾರಿಯಾದ ಕಾಲದ ಹಳೆಯ ದಿನಪತ್ರಿಕೆಗಳನ್ನು ಕಣ್ಣಾರೆ ಕಂಡಿದ್ದೇನೆ ಎಂದರು. ಮಾರ್ಟಿನ್ ಲೂಥರ್ ಕಿಂಗ್, ನೇತಾಜಿ ಸುಭಾಷಚಂದ್ರ ಬೋಸ್, ಡಾ.ಶ್ಯಾಮಪ್ರಸಾದ್ ಮುಖರ್ಜಿ, ಅಟಲ್ ಬಿಹಾರಿ ವಾಜಪೇಯಿ, ಡಾ.ಎಂ.ಎಸ್. ಸ್ವಾಮಿನಾಥನ್ ಅವರಂತಹ ಅನೇಕ ದಿಗ್ಗಜರು ಹಿಂದೂಸ್ತಾನ್ ಟೈಮ್ಸ್ ಗಾಗಿ ಲೇಖನಗಳನ್ನು ಬರೆದಿದ್ದಾರೆ ಎಂದು ಶ್ರೀ ಮೋದಿ ಹೇಳಿರು. ಸ್ವಾತಂತ್ರ್ಯದ ನಂತರದ ಅವಧಿಯಲ್ಲಿ ಭರವಸೆಯೊಂದಿಗೆ ಮುನ್ನಡೆಯುವ ಜೊತೆಗೆ ಸ್ವಾತಂತ್ರ್ಯ ಹೋರಾಟಕ್ಕೆ ಸಾಕ್ಷಿಯಾದ ಸುದೀರ್ಘ ಪ್ರಯಾಣವು ಅಸಾಧಾರಣ ಮತ್ತು ಅದ್ಭುತವಾಗಿದೆ ಎಂದು ಅವರು ಹೇಳಿದರು. 1947ರ ಅಕ್ಟೋಬರ್‌ನಲ್ಲಿ ಕಾಶ್ಮೀರವನ್ನು ಭಾರತದೊಂದಿಗೆ ವಿಲೀನದ ಸುದ್ದಿಯನ್ನು ಓದಿದ ನಂತರ ಪ್ರತಿಯೊಬ್ಬ ಪ್ರಜೆಯಂತೆ ನಾನು ಉತ್ಸುಕನಾಗಿದ್ದೇನೆ ಎಂದು ಪ್ರಧಾನಿ ಹೇಳಿದರು. ಆದಾಗ್ಯೂ, ಏಳು ದಶಕಗಳ ಕಾಲ ಅನಿರ್ದಿಷ್ಟತೆಯು ಕಾಶ್ಮೀರವನ್ನು ಹೇಗೆ ಹಿಂಸಾಚಾರದಲ್ಲಿ ಮುಳುಗಿಸಿತು ಎಂಬುದನ್ನೂ ಆ ಕ್ಷಣದಲ್ಲಿ ತಾನು ಅರಿತುಕೊಂಡೆನು ಎಂದು ಅವರು ಹೇಳಿದರು. ಆದರೆ ಇತ್ತೀಚಿನ ದಿನಗಳಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಚುನಾವಣೆಯಲ್ಲಿ ದಾಖಲೆಯ ಮತದಾನದ ಸುದ್ದಿ ಪತ್ರಿಕೆಗಳಲ್ಲಿ ಪ್ರಕಟವಾಗುತ್ತಿರುವುದು ಸಂತಸ ತಂದಿದೆ ಎಂದು ಅವರು ಹೇಳಿದರು. ಶ್ರೀ ಮೋದಿ ಅವರು ಪತ್ರಿಕೆಯಲ್ಲಿ ಅದರ ಒಂದು ಬದಿಯಲ್ಲಿ ಅಸ್ಸಾಂ ಅನ್ನು ಪ್ರಕ್ಷುಬ್ಧ ಪ್ರದೇಶವೆಂದು ಘೋಷಿಸಲಾಗಿದೆ ಎಂಬ ಸುದ್ದಿ ಇದೆ, ಇನ್ನೊಂದು ಬದಿಯಲ್ಲಿ ಅಟಲ್ ಜಿ ಅವರು ಭಾರತೀಯ ಜನತಾ ಪಕ್ಷದ ಅಡಿಪಾಯವನ್ನು ಹಾಕಿದರು ಎಂಬ ಸುದ್ದಿಯು ಪ್ರಕಟವಾಗಿರುವುದನ್ನು ಗಮನಿಸಿದರು. ಇಂದು ಅಸ್ಸಾಂನಲ್ಲಿ ಶಾಶ್ವತ ಶಾಂತಿಯನ್ನು ತರುವಲ್ಲಿ ಬಿಜೆಪಿ ದೊಡ್ಡ ಪಾತ್ರವನ್ನು ವಹಿಸುತ್ತಿರುವುದು ಕಾಕತಾಳೀಯವಾಗಿದೆ ಎಂದು ಅವರು ಹೇಳಿದರು.

ಇ ಸಂಜೀವನಿ ಅಪ್ಲಿಕೇಶನ್‌ನಲ್ಲಿ 10 ಕೋಟಿ ಟೆಲಿ ಸಮಾಲೋಚನೆ ಹೆಗ್ಗುರುತಿಗೆ ಪ್ರಧಾನಿ ನರೇಂದ್ರ ಮೋದಿ ಶ್ಲಾಘನೆ

February 17th, 11:20 am

ಇ ಸಂಜೀವನಿ ಆ್ಯಪ್‌ನಲ್ಲಿ 10 ಕೋಟಿ ಟೆಲಿ ಸಮಾಲೋಚನೆಗಳ ಹೆಗ್ಗುರುತು ಸಾಧಿಸಿರುವುದಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ.