ಮಹಾರಾಷ್ಟ್ರದ ವಾರ್ಧಾದಲ್ಲಿ ರಾಷ್ಟ್ರೀಯ 'ಪಿಎಂ ವಿಶ್ವಕರ್ಮ' ವಾರ್ಷಿಕೋತ್ಸವ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ

September 20th, 11:45 am

2 ದಿನಗಳ ಹಿಂದೆಯಷ್ಟೇ ವಿಶ್ವಕರ್ಮ ಜಯಂತಿ ಆಚರಿಸಿದ್ದೆವು. ಇಂದು ನಾವು ವಾರ್ಧಾದ ಪವಿತ್ರ ಭೂಮಿಯಲ್ಲಿ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ಯಶಸ್ಸನ್ನು ಆಚರಿಸುತ್ತಿದ್ದೇವೆ. 1932ರ ಇದೇ ದಿನದಂದು ಮಹಾತ್ಮ ಗಾಂಧೀಜಿ ಅವರು ಅಸ್ಪೃಶ್ಯತೆಯ ವಿರುದ್ಧ ತಮ್ಮ ಅಭಿಯಾನ ಆರಂಭಿಸಿದ್ದರು ಎಂಬುದು ಇಂದಿನ ವಿಶೇಷ. ಈ ಹಿನ್ನೆಲೆಯಲ್ಲಿ ವಿನೋಬಾ ಭಾವೆ ಅವರ ಪುಣ್ಯಭೂಮಿ, ಮಹಾತ್ಮ ಗಾಂಧಿ ಅವರ ‘ಕರ್ಮಭೂಮಿ’ ಮತ್ತು ವಾರ್ಧಾ ಭೂಮಿಯಲ್ಲಿ ವಿಶ್ವಕರ್ಮ ಯೋಜನೆಯ 1 ವರ್ಷದ ಸಂಭ್ರಮಾಚರಣೆಯು ನಮ್ಮ ‘ವಿಕಸಿತ ಭಾರತ’(ಅಭಿವೃದ್ಧಿ ಹೊಂದಿದ ಭಾರತ)ದ ಸಂಕಲ್ಪಕ್ಕೆ ಹೊಸ ಚೈತನ್ಯ ನೀಡುವ ಸಾಧನೆ ಮತ್ತು ಸ್ಫೂರ್ತಿಯ ಸಂಗಮವಾಗಿದೆ. ವಿಶ್ವಕರ್ಮ ಯೋಜನೆ ಮೂಲಕ ನಾವು ಶ್ರಮದ ಮೂಲಕ ಸಮೃದ್ಧಿ ಮತ್ತು ಕೌಶಲ್ಯದ ಮೂಲಕ ಉತ್ತಮ ಭವಿಷ್ಯದ ಬದ್ಧತೆ ಹೊಂದಿದ್ದೇವೆ. ವಾರ್ಧಾದಲ್ಲಿ ಬಾಪು ಅವರ ಸ್ಫೂರ್ತಿಗಳು ಈ ಬದ್ಧತೆಗಳನ್ನು ಪೂರೈಸಲು ನಮಗೆ ಸಹಾಯ ಮಾಡುತ್ತದೆ. ಈ ಉಪಕ್ರಮಕ್ಕೆ ಸಂಬಂಧಿಸಿದ ಎಲ್ಲರಿಗೂ ಮತ್ತು ದೇಶಾದ್ಯಂತದ ಎಲ್ಲಾ ಫಲಾನುಭವಿಗಳಿಗೆ ನನ್ನ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ವಾರ್ಧಾದಲ್ಲಿ ರಾಷ್ಟ್ರೀಯ ಪ್ರಧಾನಮಂತ್ರಿ ವಿಶ್ವಕರ್ಮ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು

September 20th, 11:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಹಾರಾಷ್ಟ್ರದ ವಾರ್ಧಾದಲ್ಲಿ ರಾಷ್ಟ್ರೀಯ ಪ್ರಧಾನಮಂತ್ರಿ ವಿಶ್ವಕರ್ಮ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಪ್ರಧಾನಮಂತ್ರಿಯವರು ‘ಆಚಾರ್ಯ ಚಾಣಕ್ಯ ಕೌಶಲ್ಯ ಅಭಿವೃದ್ಧಿ’ಯೋಜನೆ ಮತ್ತು ‘ಪುಣ್ಯಶ್ಲೋಕ ಅಹಲ್ಯಾದೇವಿ ಹೋಳ್ಕರ್ ಮಹಿಳಾ ಸ್ಟಾರ್ಟಪ್ ಯೋಜನೆʼಗೆ ಚಾಲನೆ ನೀಡಿದರು. ಪ್ರಧಾನಮಂತ್ರಿ ವಿಶ್ವಕರ್ಮ ಫಲಾನುಭವಿಗಳಿಗೆ ಪ್ರಮಾಣಪತ್ರಗಳು ಮತ್ತು ಸಾಲಗಳನ್ನು ಬಿಡುಗಡೆ ಮಾಡಿದರು ಮತ್ತು ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಒಂದು ವರ್ಷದ ಪ್ರಗತಿಯನ್ನು ಗುರುತಿಸುವ ಸ್ಮರಣಾರ್ಥ ಅಂಚೆಚೀಟಿಯನ್ನು ಬಿಡುಗಡೆ ಮಾಡಿದರು. ಮಹಾರಾಷ್ಟ್ರದ ಅಮರಾವತಿಯಲ್ಲಿ ಪ್ರಧಾನಮಂತ್ರಿ ಮೆಗಾ ಇಂಟಿಗ್ರೇಟೆಡ್ ಟೆಕ್ಸ್‌ಟೈಲ್ ರೀಜನ್‌ ಅಂಡ್‌ ಅಪಾರಲ್ (ಪಿಎಂ ಮಿತ್ರಾ) ಪಾರ್ಕ್‌ ಗೆ ಶ್ರೀ ಮೋದಿಯವರು ಶಂಕುಸ್ಥಾಪನೆ ಮಾಡಿದರು. ಈ ಸಂದರ್ಭದಲ್ಲಿ ಆಯೋಜಿಸಲಾದ ವಸ್ತುಪ್ರದರ್ಶನವನ್ನು ಪ್ರಧಾನಿಯವರು ವೀಕ್ಷಿಸಿದರು.