
ಪ್ಯಾರೀಸ್ ನಲ್ಲಿ ಭಾರತ-ಫ್ರಾನ್ಸ್ ಸಿಇಒ ಫೋರಂ ಉದ್ದೇಶಿಸಿ ಪ್ರಧಾನಮಂತ್ರಿ ಮಾಡಿದ ಭಾಷಣದ ಅನುವಾದ
February 12th, 12:45 am
ಇಲ್ಲಿ ಉಪಸ್ಥಿತರಿರುವ ಭಾರತ ಮತ್ತು ಫ್ರಾನ್ಸ್ ನ ಕೈಗಾರಿಕಾ ನಾಯಕರೇ,
ಕೇಂದ್ರ ಬಜೆಟ್ ಕುರಿತು ಪ್ರಧಾನಮಂತ್ರಿ ಹೇಳಿಕೆ
February 01st, 03:00 pm
ಭಾರತದ ಅಭಿವೃದ್ಧಿ ಪಯಣದಲ್ಲಿ ಇಂದು ಒಂದು ಪ್ರಮುಖ ಮೈಲಿಗಲ್ಲು! ಇದು 140 ಕೋಟಿ ಭಾರತೀಯರ ಆಕಾಂಕ್ಷೆಗಳ ಬಜೆಟ್, ಇದು ಪ್ರತಿಯೊಬ್ಬ ಭಾರತೀಯನ ಕನಸುಗಳನ್ನು ನನಸಾಗಿಸುವ ಬಜೆಟ್. ನಾವು ಯುವ ಸಮುದಾಯಕ್ಕೆ ಅನೇಕ ಕ್ಷೇತ್ರಗಳನ್ನು ತೆರೆದಿದ್ದೇವೆ. ಸಾಮಾನ್ಯ ನಾಗರಿಕರು ಅಭಿವೃದ್ಧಿ ಹೊಂದಿದ ಭಾರತದ ಧ್ಯೇಯವನ್ನು ಮುನ್ನಡೆಸಲಿದ್ದಾರೆ. ಈ ಬಜೆಟ್ ಶಕ್ತಿ ವರ್ಧಕವಾಗಿದೆ. ಈ ಬಜೆಟ್ ಉಳಿತಾಯವನ್ನು ಹೆಚ್ಚಿಸುತ್ತದೆ, ಹೂಡಿಕೆಯನ್ನು ಹೆಚ್ಚಿಸುತ್ತದೆ, ಜತೆಗೆ ಬಳಕೆಯನ್ನು ಸಹ ಹೆಚ್ಚಿಸುತ್ತದೆ ಮತ್ತು ಬೆಳವಣಿಗೆಯನ್ನು ತ್ವರಿತವಾಗಿ ಹೆಚ್ಚಿಸುತ್ತದೆ. ಈ ಜನತಾ ಜನಾರ್ದನ ಬಜೆಟ್, ಜನರ ಬಜೆಟ್ ನೀಡಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಅವರ ಇಡೀ ತಂಡವನ್ನು ನಾನು ಅಭಿನಂದಿಸುತ್ತೇನೆ.
ಕೇಂದ್ರ ಬಜೆಟ್ 2025-26ರ ಕುರಿತು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಹೇಳಿಕೆ
February 01st, 02:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಸಂದೇಶದ ಮೂಲಕ ಕೇಂದ್ರ ಬಜೆಟ್ 2025-26ರ ಕುರಿತು ತಮ್ಮ ಹೇಳಿಕೆಗಳನ್ನು ನೀಡಿದ್ದಾರೆ. ಭಾರತದ ಅಭಿವೃದ್ಧಿಯ ಪಯಣದಲ್ಲಿ ಇಂದು ಒಂದು ಪ್ರಮುಖ ಮೈಲಿಗಲ್ಲಾಗಿದೆ ಎಂದು ಒತ್ತಿ ಹೇಳಿದ ಶ್ರೀ ಮೋದಿ, ಈ ಬಜೆಟ್ 140 ಕೋಟಿ ಭಾರತೀಯರ ಆಕಾಂಕ್ಷೆಗಳನ್ನು ಪ್ರತಿಬಿಂಬಿಸುತ್ತದೆ ಮತ್ತು ಪ್ರತಿಯೊಬ್ಬ ನಾಗರಿಕನ ಕನಸುಗಳನ್ನು ಈಡೇರಿಸುತ್ತದೆ ಎಂದಿದ್ದಾರೆ. ಯುವಜನರಿಗಾಗಿ ಹಲವಾರು ಕ್ಷೇತ್ರಗಳನ್ನು ತೆರೆಯಲಾಗಿದೆ ಮತ್ತು ಸಾಮಾನ್ಯ ನಾಗರಿಕರು ವಿಕಸಿತ ಭಾರತ (ಅಭಿವೃದ್ಧಿ ಹೊಂದಿದ ಭಾರತ) ಅಭಿಯಾನವನ್ನು ಮುನ್ನಡೆಸಲಿದ್ದಾರೆ ಎಂದು ಅವರು ಒತ್ತಿ ಹೇಳಿದರು. ಈ ಬಜೆಟ್ ಉಳಿತಾಯ, ಹೂಡಿಕೆ, ಬಳಕೆ ಮತ್ತು ಬೆಳವಣಿಗೆಯನ್ನು ಹೆಚ್ಚಿಸುವ ಶಕ್ತಿಯನ್ನು ವೃದ್ಧಿಸುತ್ತದೆ ಎಂದು ಪ್ರಧಾನಿ ಒತ್ತಿ ಹೇಳಿದರು. ಈ 'ಜನತೆಯ ಬಜೆಟ್'ಗಾಗಿ ಕೇಂದ್ರ ಹಣಕಾಸು ಮತ್ತು ಸಾಂಸ್ಥಿಕ ವ್ಯವಹಾರಗಳ ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಮತ್ತು ಅವರ ತಂಡವನ್ನು ಅವರು ಅಭಿನಂದಿಸಿದರು.ಇಂಡೋನೇಷ್ಯಾ ಅಧ್ಯಕ್ಷರಾದ ಪ್ರಬೋವೊ ಸುಬಿಯಾಂಟೊ ಅವರನ್ನು ಸ್ವಾಗತಿಸಲು ಭಾರತ ಧನ್ಯ: ಪ್ರಧಾನಮಂತ್ರಿ
January 25th, 05:48 pm
ಇಂಡೋನೇಷ್ಯಾದ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಪ್ರಬೋವೊ ಸುಬಿಯಾಂಟೊ ಅವರನ್ನು ಸ್ವಾಗತಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಭಾರತ-ಇಂಡೋನೇಷ್ಯಾ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯ ವಿವಿಧ ಆಯಾಮಗಳನ್ನು ಚರ್ಚಿಸಲಾಗಿದೆ ಎಂದು ಹೇಳಿದರು. ಇಂಡೋನೇಷ್ಯಾ ನಮ್ಮ ಆಕ್ಟ್ ಈಸ್ಟ್ ನೀತಿಯ ಪ್ರಮುಖ ಭಾಗವಾಗಿದೆ ಮತ್ತು ಇಂಡೋನೇಷ್ಯಾದ ಬ್ರಿಕ್ಸ್ ಸದಸ್ಯತ್ವವನ್ನು ಭಾರತ ಸ್ವಾಗತಿಸುತ್ತದೆ ಎಂದು ಪ್ರಧಾನಮಂತ್ರಿ ಒತ್ತಿ ಹೇಳಿದ್ದಾರೆ.ಇಂಡೋನೇಷ್ಯಾ ಅಧ್ಯಕ್ಷರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನಮಂತ್ರಿಯವರ ಹೇಳಿಕೆಯ ಇಂಗ್ಲಿಷ್ ಅವತರಣಿಕೆ
January 25th, 01:00 pm
ಭಾರತದ ಮೊದಲ ಗಣರಾಜ್ಯೋತ್ಸವಕ್ಕೆ ಇಂಡೋನೇಷ್ಯಾ ನಮ್ಮ ಮುಖ್ಯ ಅತಿಥಿಯಾಗಿತ್ತು. ಮತ್ತು ನಾವು ನಮ್ಮ 75 ನೇ ಗಣರಾಜ್ಯೋತ್ಸವವನ್ನು ಆಚರಿಸುತ್ತಿರುವಾಗ, ಮತ್ತೊಮ್ಮೆ, ಇಂಡೋನೇಷ್ಯಾ ಈ ಮಹತ್ವದ ಸಂದರ್ಭದ ಭಾಗವಾಗಲು ಗೌರವಯುತವಾಗಿ ಒಪ್ಪಿಕೊಂಡಿದೆ ಎಂಬುದು ನಮಗೆ ಬಹಳ ಹೆಮ್ಮೆಯ ವಿಷಯವಾಗಿದೆ. ಈ ಸಂದರ್ಭದಲ್ಲಿ ನಾನು ಅಧ್ಯಕ್ಷ ಪ್ರಬೋವೊ ಅವರನ್ನು ಭಾರತಕ್ಕೆ ಹಾರ್ದಿಕವಾಗಿ ಸ್ವಾಗತಿಸುತ್ತೇನೆ.Politics is about winning people's hearts, says PM Modi in podcast with Nikhil Kamath
January 10th, 02:15 pm
Prime Minister Narendra Modi engages in a deep and insightful conversation with entrepreneur and investor Nikhil Kamath. In this discussion, they explore India's remarkable growth journey, PM Modi's personal life story, the challenges he has faced, his successes and the crucial role of youth in shaping the future of politics.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮ್ಮ ಮೊದಲ ಪಾಡ್ ಕಾಸ್ಟ್ ನಲ್ಲಿ ಉದ್ಯಮಿ ನಿಖಿಲ್ ಕಾಮತ್ ಅವರೊಂದಿಗೆ ಸಂವಾದ ನಡೆಸಿದರು
January 10th, 02:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಮ್ಮ ಮೊದಲ ಪಾಡ್ಕ್ಯಾಸ್ಟ್ನಲ್ಲಿ ಉದ್ಯಮಿ ಮತ್ತು ಹೂಡಿಕೆದಾರ ನಿಖಿಲ್ ಕಾಮತ್ ಅವರೊಂದಿಗೆ ವಿವಿಧ ವಿಷಯಗಳ ಕುರಿತು ಮಾತುಕತೆ ನಡೆಸಿದರು. ಅವರ ಬಾಲ್ಯದ ಬಗ್ಗೆ ಕೇಳಿದಾಗ, ಪ್ರಧಾನಿಯವರು ತಮ್ಮ ಆರಂಭಿಕ ಜೀವನದ ಅನುಭವಗಳನ್ನು ಹಂಚಿಕೊಂಡರು ಮತ್ತು ಉತ್ತರ ಗುಜರಾತ್ ನ ಮೆಹ್ಸಾನಾ ಜಿಲ್ಲೆಯ ಸಣ್ಣ ಪಟ್ಟಣವಾದ ವಡ್ನಗರದಲ್ಲಿನ ತಮ್ಮ ಮೂಲದ ಬಗ್ಗೆ ಮಾತನಾಡಿದರು. ಗಾಯಕ್ವಾಡ್ ಸಾಮ್ರಾಜ್ಯದ ವಡ್ನಗರ ಪಟ್ಟಣವು ಶಿಕ್ಷಣದ ಬಗೆಗಿನ ತನ್ನ ಬದ್ಧತೆಗೆ ಹೆಸರುವಾಸಿಯಾಗಿದ್ದು, ಕೊಳ, ಅಂಚೆ ಕಚೇರಿ ಮತ್ತು ಗ್ರಂಥಾಲಯದಂತಹ ಅಗತ್ಯ ಸೌಲಭ್ಯಗಳನ್ನು ಹೊಂದಿದೆ ಎಂದು ಅವರು ಹೇಳಿದರು. ಗಾಯಕ್ವಾಡ್ ರಾಜ್ಯ ಪ್ರಾಥಮಿಕ ಶಾಲೆ ಮತ್ತು ಭಾಗವತಾಚಾರ್ಯ ನಾರಾಯಣಾಚಾರ್ಯ ಪ್ರೌಢಶಾಲೆಯಲ್ಲಿ ಕಳೆದ ತಮ್ಮ ಶಾಲಾ ದಿನಗಳನ್ನು ಪ್ರಧಾನಮಂತ್ರಿಯವರು ನೆನೆದರು. ವಡ್ನಗರದಲ್ಲಿ ಸಾಕಷ್ಟು ಸಮಯ ಕಳೆದಿದ್ದ ಚೀನೀ ತತ್ವಜ್ಞಾನಿ ಕ್ಸುವಾನ್ ಜಾಂಗ್ ಅವರ ಕುರಿತು ನಿರ್ಮಿಸಲಾಗುತ್ತಿರುವ ಚಲನಚಿತ್ರದ ಬಗ್ಗೆ ಅವರು ಒಮ್ಮೆ ಚೀನೀ ರಾಯಭಾರ ಕಚೇರಿಗೆ ಬರೆದಿದ್ದರ ಬಗ್ಗೆ ಆಸಕ್ತಿದಾಯಕ ಮಾಹಿತಿಯನ್ನು ಹಂಚಿಕೊಂಡರು. 2014 ರಲ್ಲಿ ತಾವು ಭಾರತದ ಪ್ರಧಾನಿಯಾದಾಗ ಚೀನಾದ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಕ್ಸುವಾನ್ಜಾಂಗ್ ಮತ್ತು ತಮ್ಮ ಊರುಗಳ ನಡುವಿನ ಐತಿಹಾಸಿಕ ಸಂಬಂಧವನ್ನು ಉಲ್ಲೇಖಿಸಿ ಗುಜರಾತ್ ಮತ್ತು ವಡ್ನಗರಕ್ಕೆ ಭೇಟಿ ನೀಡುವ ಬಯಕೆಯನ್ನು ವ್ಯಕ್ತಪಡಿಸಿದ್ದನ್ನು ಪ್ರಧಾನಮಂತ್ರಿಯವರು ನೆನಪಿಸಿಕೊಂಡರು. ಈ ಸಂಪರ್ಕವು ಎರಡೂ ದೇಶಗಳ ನಡುವಿನ ಹಂಚಿಕೆಯ ಪರಂಪರೆ ಮತ್ತು ಬಲವಾದ ಸಂಬಂಧಗಳನ್ನು ಎತ್ತಿ ತೋರಿಸಿದೆ ಎಂದು ಅವರು ಹೇಳಿದರು.ಕುವೈತ್ನಲ್ಲಿ ಭಾರತೀಯ ಸಮುದಾಯ ಆಯೋಜಿಸಿದ್ದ ‘ಹಲಾ ಮೋದಿ’ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
December 21st, 06:34 pm
ಎರಡೂವರೆ ಗಂಟೆಗಳ ಹಿಂದೆಯಷ್ಟೇ ನಾನು ಕುವೈತ್ಗೆ ಬಂದೆ. ನಾನು ಇಲ್ಲಿಗೆ ಕಾಲಿಟ್ಟಾಗಿನಿಂದ, ಹೃದಯಾಂತರಾಳದ ಅನನ್ಯ ಭಾವನೆಯನ್ನು ಅನುಭವಿಸಿದೆ. ನೀವೆಲ್ಲರೂ ಭಾರತದ ವಿವಿಧ ರಾಜ್ಯಗಳಿಂದ ಬಂದಿದ್ದೀರಿ, ಆದರೆ ನಿಮ್ಮೆಲ್ಲರನ್ನು ನೋಡುವಾಗ ನನ್ನ ಮುಂದೆ ಒಂದು ಮಿನಿ ಹಿಂದೂಸ್ಥಾನವೇ ಜೀವಂತವಾಗಿದೆ ಎಂದು ಭಾಸವಾಗುತ್ತಿದೆ. ಇಲ್ಲಿ, ಉತ್ತರ, ದಕ್ಷಿಣ, ಪೂರ್ವ ಮತ್ತು ಪಶ್ಚಿಮದ ಜನರು ವಿಭಿನ್ನ ಭಾಷೆ ಮತ್ತು ಉಪಭಾಷೆಗಳನ್ನು ಮಾತನಾಡುವುದನ್ನು ನಾನು ನೋಡುತ್ತೇನೆ. ಆದರೂ, ಪ್ರತಿಯೊಬ್ಬರ ಹೃದಯದಲ್ಲಿ ಒಂದು ಸಾಮಾನ್ಯ ಪ್ರತಿಧ್ವನಿ ಇದೆ, ಪ್ರತಿಯೊಬ್ಬರ ಹೃದಯದಲ್ಲಿ ಒಂದು ಪ್ರತಿಧ್ವನಿಸುವ ಘೋಷಣೆ - ಭಾರತ್ ಮಾತಾ ಕಿ ಜೈ, ಭಾರತ್ ಮಾತಾ ಕಿ - ಜೈ.ಕುವೈತ್ನಲ್ಲಿ ನಡೆದ ‘ಹಾಲಾ ಮೋದಿ’ ಕಾರ್ಯಕ್ರಮದಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು
December 21st, 06:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕುವೈತ್ನಲ್ಲಿರುವ ಶೇಖ್ ಸಾದ್ ಅಲ್-ಅಬ್ದುಲ್ಲಾ ಒಳಾಂಗಣ ಕ್ರೀಡಾ ಸಂಕೀರ್ಣದಲ್ಲಿ ಆಯೋಜಿಸಲಾಗಿದ್ದ ‘ಹಾಲಾ ಮೋದಿ’ ವಿಶೇಷ ಕಾರ್ಯಕ್ರಮದಲ್ಲಿ ಅಲ್ಲಿನ ಭಾರತೀಯ ಸಮುದಾಯದ ಬೃಹತ್ ಸಭೆಯನ್ನುದ್ದೇಶಿಸಿ ಮಾತನಾಡಿದರು. ಕುವೈತ್ನ ಸಮುದಾಯದ ಹೆಚ್ಚಿನ ಭಾಗವನ್ನು ಪ್ರತಿನಿಧಿಸುವ ಭಾರತೀಯ ಪ್ರಜೆಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.ಪ್ರಧಾನಮಂತ್ರಿಯವರಿಂದ ಆಂಟಿಗುವಾ ಮತ್ತು ಬಾರ್ಬುಡಾದ ಪ್ರಧಾನಿಯವರ ಭೇಟಿ
November 21st, 09:37 am
ಅಭಿವೃದ್ಧಿ ಹೊಂದುತ್ತಿರುವ ಕಿರು ದ್ವೀಪ ರಾಷ್ಟ್ರಗಳು (ಎಸ್ ಐ ಡಿ ಎಸ್) ಗಾಗಿ ಸಾಮರ್ಥ್ಯ ನಿರ್ಮಾಣ ಹಾಗೂ ವ್ಯಾಪಾರ ಮತ್ತು ಹೂಡಿಕೆ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಕಾರ ಕುರಿತು ಉಭಯ ನಾಯಕರು ಚರ್ಚಿಸಿದರು. ಭಾರತ- ಕ್ಯಾರಿಕಾಮ್ ಪಾಲುದಾರಿಕೆಯನ್ನು ಬಲಪಡಿಸಲು ಪ್ರಧಾನಮಂತ್ರಿಗಳ ಏಳು ಅಂಶಗಳ ಯೋಜನೆಯನ್ನು ಪ್ರಧಾನಿ ಬ್ರೌನ್ ಶ್ಲಾಘಿಸಿದರು. ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತದ ಖಾಯಂ ಸದಸ್ಯತ್ವಕ್ಕೆ ಬೆಂಬಲವನ್ನು ಅವರು ಪುನರುಚ್ಚರಿಸಿದರು.ಡಿಜಿಟಲ್ ಪರಿವರ್ತನೆಯನ್ನು ಮುನ್ನಡೆಸುವ ಕುರಿತು ಆಸಿಯಾನ್-ಭಾರತ ಜಂಟಿ ಹೇಳಿಕೆ
October 10th, 05:42 pm
ಲಾವೋ ಪಿಡಿಆರ್ ನ ವಿಯೆಂಟಿಯಾನ್ ನಲ್ಲಿ 2024ರ ಅಕ್ಟೋಬರ್ 10 ರಂದು ನಡೆದ 21ನೇ ಆಸಿಯಾನ್-ಭಾರತ ಶೃಂಗಸಭೆಯ ಸಂದರ್ಭದಲ್ಲಿ ಆಗ್ನೇಯ ಏಷ್ಯಾ ರಾಷ್ಟ್ರಗಳ ಸಂಘ (ಆಸಿಯಾನ್) ಮತ್ತು ಭಾರತ ಗಣರಾಜ್ಯದ ಸದಸ್ಯ ರಾಷ್ಟ್ರಗಳಾದ ನಾವು;3ನೇ ಕೌಟಿಲ್ಯ ಅರ್ಥಶಾಸ್ತ್ರ ಸಮ್ಮೇಳನ-2024 ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
October 04th, 07:45 pm
ಜಗತ್ತಿನ 2 ಪ್ರಮುಖ ಪ್ರದೇಶಗಳು ಯುದ್ಧದ ಸ್ಥಿತಿಯಲ್ಲಿ ಇರುವ ಸಮಯದಲ್ಲೇ ಈ ಸಮ್ಮೇಳನ ಆಯೋಜಿಸಲಾಗಿದೆ. ಈ ಪ್ರದೇಶಗಳು ಜಾಗತಿಕ ಆರ್ಥಿಕತೆಗೆ ನಿರ್ಣಾಯಕವಾಗಿವೆ, ವಿಶೇಷವಾಗಿ ಇಂಧನ ಭದ್ರತೆಯ ವಿಷಯದಲ್ಲಿ. ಇಂತಹ ಮಹತ್ವದ ಜಾಗತಿಕ ಅನಿಶ್ಚಿಯದ ನಡುವೆ, ನಾವು ‘ಭಾರತದ ಯುಗ’ವನ್ನು ಚರ್ಚಿಸಲು ಇಲ್ಲಿ ಸೇರಿದ್ದೇವೆ. ಇಂದು ಭಾರತದಲ್ಲಿರುವ ನಂಬಿಕೆ ಅನನ್ಯವಾಗಿದೆ ಎಂಬುದನ್ನು ಇದು ತೋರಿಸುತ್ತದೆ. ಭಾರತದ ಆತ್ಮವಿಶ್ವಾಸವು ಅಸಾಧಾರಣವಾಗಿದೆ ಎಂಬುದನ್ನು ಸಹ ಇದು ತೋರಿಸುತ್ತದೆ.ನವದೆಹಲಿಯಲ್ಲಿ 3ನೇ ಕೌಟಿಲ್ಯ ಅರ್ಥಶಾಸ್ತ್ರ ಸಮಾವೇಶ(ಸಮ್ಮೇಳನ) ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
October 04th, 07:44 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿಂದು ಕೌಟಿಲ್ಯ ಅರ್ಥಶಾಸ್ತ್ರ ಸಮಾವೇಶ(ಸಮ್ಮೇಳನ) ಉದ್ದೇಶಿಸಿ ಭಾಷಣ ಮಾಡಿದರು. ಹಣಕಾಸು ಸಚಿವಾಲಯದ ಸಹಭಾಗಿತ್ವದಲ್ಲಿ “ದಿ ಇನ್‌ಸ್ಟಿಟ್ಯೂಟ್ ಆಫ್ ಎಕನಾಮಿಕ್ ಗ್ರೋಥ್” ಆಯೋಜಿಸಿರುವ ಕೌಟಿಲ್ಯ ಆರ್ಥಶಾಸ್ತ್ರ(ಆರ್ಥಿಕ) ಸಮ್ಮೇಳನವು ಹಸಿರು ಪರಿವರ್ತನೆ ಯೋಜನೆಗಳಿಗೆ ಹಣಕಾಸು ಒದಗಿಸುವುದು, ಭೂ-ಆರ್ಥಿಕ ಬೇರ್ಪಡಿಕೆ(ವಿಭಾಗೀಕರಣ) ಮತ್ತು ಬೆಳವಣಿಗೆಯ ಪರಿಣಾಮಗಳು, ಹೊಂದಾಣಿಕೆ ಕಾಪಾಡುವ ನೀತಿ ಕ್ರಮದ ತತ್ವಗಳು ಮತ್ತು ಇತರೆ ವಸ್ತು ವಿಷಯಗಳ ಮೇಲೆ ಗಮನ ಕೇಂದ್ರೀಕರಿಸುತ್ತದೆ.ಸ್ವಚ್ಛತಾ ಹಿ ಸೇವಾ 2024 ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಇಂಗ್ಲಿಷ್ ಅನುವಾದ
October 02nd, 10:15 am
ಇಂದು ಪೂಜ್ಯ ಬಾಪೂ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರಿ ಜೀ ಅವರ ಜನ್ಮ ದಿನ. ಬಾಪು ಭಾರತೀಯ ಶ್ರೇಷ್ಠ ಪುತ್ರರಾಗಿದ್ದು, ಅವರಿಗಾಗಿ ಶಿರಬಾಗಿ ನಮಿಸುತ್ತೇನೆ. ಗಾಂಧೀಜಿ ಅವರ ಕನಸುಗಳನ್ನು ಸಾಕಾರಗೊಳಿಸಲು ನಾವೆಲ್ಲರೂ ಒಟ್ಟಿಗೆ ಕೆಲಸ ಮಾಡಲು ಇದು ಸ್ಫೂರ್ತಿಯ ದಿನ. ದೇಶದ ಈ ಮಹಾನ್ ವ್ಯಕ್ತಿಗಳು ಭಾರತದ ಭವಿಷ್ಯವನ್ನು ಆಗಲೇ ಕಲ್ಪನೆ ಮಾಡಿಕೊಂಡಿದ್ದರು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸ್ವಚ್ಛ ಭಾರತ ದಿವಸ್ 2024 ರಲ್ಲಿ ಭಾಗವಹಿಸಿದರು
October 02nd, 10:10 am
ಸ್ವಚ್ಛತೆಗಾಗಿ ಅತ್ಯಂತ ಮಹತ್ವದ ಜನಾಂದೋಲನಗಳಲ್ಲಿ ಒಂದಾದ ಸ್ವಚ್ಛ ಭಾರತ ಅಭಿಯಾನ ಪ್ರಾರಂಭವಾಗಿ 10 ವರ್ಷಗಳನ್ನು ಪೂರೈಸಿದ ಸಂದರ್ಭದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಕ್ಟೋಬರ್ 2 ರಂದು 155 ನೇ ಗಾಂಧಿ ಜಯಂತಿಯ ಸಂದರ್ಭದಲ್ಲಿ ಸ್ವಚ್ಛ ಭಾರತ ದಿವಸ್ 2024 ಕಾರ್ಯಕ್ರಮದಲ್ಲಿ ಭಾಗವಹಿಸಿದರು. ನವದೆಹಲಿಯ ವಿಜ್ಞಾನ ಭವನದಲ್ಲಿ. ಅಮೃತ್ ಮತ್ತು ಅಮೃತ್ 2.0, ಸ್ವಚ್ಛ ಗಂಗಾ ರಾಷ್ಟ್ರೀಯ ಮಿಷನ್ ಮತ್ತು ಗೋಬರ್ಧನ್ ಯೋಜನೆ ಸೇರಿದಂತೆ 9600 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಹಲವಾರು ನೈರ್ಮಲ್ಯ ಮತ್ತು ಸ್ವಚ್ಛತೆ ಯೋಜನೆಗಳಿಗೆ ಶ್ರೀ ಮೋದಿ ಅವರು ಚಾಲನೆ ನೀಡಿದರು ಮತ್ತು ಅಡಿಪಾಯ ಹಾಕಿದರು. ಸ್ವಚ್ಛತಾ ಹಿ ಸೇವಾ 2024 ರ ಧ್ಯೇಯ 'ಸ್ವಭಾವ ಸ್ವಚ್ಛತಾ, ಸಂಸ್ಕಾರ ಸ್ವಚ್ಛತಾ' ಆಗಿದೆ.ಬ್ರೂನೈ ಸುಲ್ತಾನರು ಆಯೋಜಿಸಿದ್ದ ಔತಣಕೂಟದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣದ ಇಂಗ್ಲೀಷ್ ಅನುವಾದ
September 04th, 12:32 pm
ಆತ್ಮೀಯ ಸ್ವಾಗತ ಮತ್ತು ಆತಿಥ್ಯಕ್ಕಾಗಿ ನಾನು ಮಹಾರಾಜರು ಮತ್ತು ಇಡೀ ರಾಜಮನೆತನಕ್ಕೆ ನನ್ನ ಹೃತ್ಪೂರ್ವಕ ಕೃತಜ್ಞತೆ ವ್ಯಕ್ತಪಡಿಸುತ್ತೇನೆ. ಬ್ರೂನೈಗೆ ಭಾರತದ ಪ್ರಧಾನಮಂತ್ರಿಯೊಬ್ಬರ ಮೊದಲ ದ್ವಿಪಕ್ಷೀಯ ಭೇಟಿ ಇದಾಗಿದೆ. ಆದಾಗ್ಯೂ, ಇಲ್ಲಿ ನಾನು ಪಡೆದಿರುವ ಆತ್ಮೀಯತೆ ಮತ್ತು ಗೌರವ ನಮ್ಮ ದೇಶಗಳ ನಡುವಿನ ಶತಮಾನಗಳ ಹಳೆಯ ಬಾಂಧವ್ಯದ ಪ್ರತಿ ಕ್ಷಣವನ್ನು ನಾನು ನೆನಪಿಸಿಕೊಳ್ಳುತ್ತೇನೆ.ಭಾರತದ ಫಿನ್‌ಟೆಕ್ ಪರಿಸರ ವ್ಯವಸ್ಥೆಯು ಇಡೀ ಪ್ರಪಂಚದ ಜೀವನವನ್ನು ಸುಲಭಗೊಳಿಸುತ್ತದೆ: ಮುಂಬೈನ ಗ್ಲೋಬಲ್ ಫಿನ್‌ಟೆಕ್ ಫೆಸ್ಟ್‌ನಲ್ಲಿ ಪ್ರಧಾನಿ ಮೋದಿ
August 30th, 12:00 pm
ಗ್ಲೋಬಲ್ ಫಿನ್‌ಟೆಕ್ ಫೆಸ್ಟ್‌ನಲ್ಲಿ ಪಿಎಂ ಮೋದಿ ಅವರು ಭಾರತದ ಫಿನ್‌ಟೆಕ್ ಕ್ರಾಂತಿಯನ್ನು ಎತ್ತಿ ತೋರಿಸಿದರು, ಆರ್ಥಿಕ ಸೇರ್ಪಡೆ, ತ್ವರಿತ ಅಳವಡಿಕೆ ಮತ್ತು ಜಾಗತಿಕ ನಾವೀನ್ಯತೆಗಳ ಮೇಲೆ ಅದರ ಪ್ರಭಾವವನ್ನು ಪ್ರದರ್ಶಿಸಿದರು. ಜನ್ ಧನ್ ಯೋಜನೆ ಮತ್ತು ಪಿಎಂ ಸ್ವನಿಧಿ ಮೂಲಕ ಮಹಿಳೆಯರ ಸಬಲೀಕರಣದಿಂದ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಬ್ಯಾಂಕಿಂಗ್ ಪ್ರವೇಶವನ್ನು ಪರಿವರ್ತಿಸುವವರೆಗೆ, ಫಿನ್‌ಟೆಕ್ ಭಾರತದ ಆರ್ಥಿಕತೆ ಮತ್ತು ಜೀವನದ ಗುಣಮಟ್ಟವನ್ನು ಮರುರೂಪಿಸುತ್ತಿದೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ಮುಂಬೈನಲ್ಲಿ ನಡೆದ ಗ್ಲೋಬಲ್ ಫಿನ್ ಟೆಕ್ ಫೆಸ್ಟ್ (ಜಿಎಫ್ಎಫ್) 2024 ಉದ್ದೇಶಿಸಿ ಭಾಷಣ ಮಾಡಿದರು
August 30th, 11:15 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಹಾರಾಷ್ಟ್ರದ ಮುಂಬೈನ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ ಗ್ಲೋಬಲ್ ಫಿನ್ ಟೆಕ್ ಫೆಸ್ಟ್ (ಜಿಎಫ್ ಎಫ್) 2024 ಉದ್ದೇಶಿಸಿ ಭಾಷಣ ಮಾಡಿದರು. ಪ್ರಧಾನಮಂತ್ರಿ ಅವರು ಈ ಸಂದರ್ಭದಲ್ಲಿ ಪ್ರದರ್ಶಿಸಲಾದ ವಸ್ತುಪ್ರದರ್ಶನದ ವಾಕ್ ಥ್ರೋ ನಡೆಸಿದರು. ಜಿಎಫ್ಎಫ್ ಉತ್ಸವವನ್ನು ಪೇಮೆಂಟ್ಸ್ ಕೌನ್ಸಿಲ್ ಆಫ್ ಇಂಡಿಯಾ, ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಮತ್ತು ಫಿನ್ ಟೆಕ್ ಕನ್ವರ್ಜೆನ್ಸ್ ಕೌನ್ಸಿಲ್ ಜಂಟಿಯಾಗಿ ಆಯೋಜಿಸಿವೆ. ಇದು ಫಿನ್ ಟೆಕ್ ನಲ್ಲಿ ಭಾರತದ ದಾಪುಗಾಲುಗಳನ್ನು ಪ್ರದರ್ಶಿಸುವ ಮತ್ತು ಕ್ಷೇತ್ರದ ಪ್ರಮುಖ ಮಧ್ಯಸ್ಥಗಾರರನ್ನು ಒಟ್ಟುಗೂಡಿಸುವ ಗುರಿಯನ್ನು ಹೊಂದಿದೆ.ಆಗಸ್ಟ್ 30 ರಂದು ಮಹಾರಾಷ್ಟ್ರಕ್ಕೆ ಭೇಟಿ ನೀಡಲಿರುವ ಪ್ರಧಾನ ಮಂತ್ರಿ
August 29th, 04:47 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024 ರ ಆಗಸ್ಟ್ 30 ರಂದು ಮಹಾರಾಷ್ಟ್ರದ ಮುಂಬೈ ಮತ್ತು ಫ;ಲ್ಘರ್ ಗೆ ಭೇಟಿ ನೀಡಲಿದ್ದಾರೆ. ಮುಂಬೈನ ಜಿಯೋ ವರ್ಲ್ಡ್ ಸಮ್ಮೇಳನ ಸಭಾಂಗಣದಲ್ಲಿ ಪ್ರಧಾನಮಂತ್ರಿಯವರು ಬೆಳಿಗ್ಗೆ 11 ಗಂಟೆಗೆ ಗ್ಲೋಬಲ್ ಫಿನ್ ಟೆಕ್ ಫೆಸ್ಟ್ [ಜಿಎಫ್ಎಫ್] 2024 ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ತರುವಾಯ ಮಧ್ಯಾಹ್ನ 1;30ಕ್ಕೆ ಪ್ರಧಾನಮಂತ್ರಿಯವರು ಫಲ್ಘರ್ ನ ಸಿಐಡಿಸಿಒ ಕ್ರೀಡಾಂಗಣದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ ಮತ್ತು ಶಿಲಾನ್ಯಾಸ ನೆರವೇರಿಸಲಿದ್ದಾರೆ.ಭಾರತ-ಪೋಲೆಂಡ್ ನಡುವೆ ಕಾರ್ಯತಂತ್ರ ಸಹಭಾಗಿತ್ವದ ಅನುಷ್ಠಾನಕ್ಕಾಗಿ ಕ್ರಿಯಾಯೋಜನೆ (2024-2028)
August 22nd, 08:22 pm
ಪೋಲೆಂಡ್ ನ ವಾರ್ಸಾದಲ್ಲಿ 2024 ಆಗಸ್ಟ್ 22ರಂದು ಭಾರತ ಮತ್ತು ಪೋಲೆಂಡ್ ಪ್ರಧಾನ ಮಂತ್ರಿಗಳು ನಡೆಸಿದ ಮಾತುಕತೆ ವೇಳೆ ಸಾಧಿಸಿದ ಒಮ್ಮತಾಭಿಪ್ರಾಯದ ಮೇಲೆ ಕಾರ್ಯತಂತ್ರ ಸಹಭಾಗಿತ್ವ ಸ್ಥಾಪನೆಯಿಂದ ಉಂಟಾದ ದ್ವಿಪಕ್ಷೀಯ ಸಹಕಾರದ ಆವೇಗ ಗುರುತಿಸಿ, ಉಭಯ ನಾಯಕರು 5 ವರ್ಷಗಳ ಕ್ರಿಯಾಯೋಜನೆ(2024-2028) ರೂಪಿಸಲು ಮತ್ತು ಕಾರ್ಯಗತಗೊಳಿಸಲು ಒಪ್ಪಿಕೊಂಡರು. ಕ್ರಿಯಾಯೋಜನೆಯು 5 ವರ್ಷಗಳ ದ್ವಿಪಕ್ಷೀಯ ಸಹಭಾಗಿತ್ವವನ್ನು ಈ ಕೆಳಗಿನ ವಲಯಗಳಲ್ಲಿ ಆದ್ಯತೆಯಾಗಿ ರೂಪಿಸಲು ಮಾರ್ಗದರ್ಶನ ಮಾಡುತ್ತದೆ: