ಕಾರ್ಯಕಾರ್ ಸುವರ್ಣ ಮಹೋತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
December 07th, 05:52 pm
ಕಾರ್ಯಕಾರ್(ಕಾರ್ಯಕರ್ತರು) ಸುವರ್ಣ ಮಹೋತ್ಸವದ ಶುಭ ಸಂದರ್ಭದಲ್ಲಿ ನಾನು ಭಗವಾನ್ ಸ್ವಾಮಿನಾರಾಯಣ ಅವರ ಪಾದಗಳಿಗೆ ತಲೆಬಾಗಿ ನಮಸ್ಕರಿಸುತ್ತೇನೆ. ಇಂದು ಪ್ರಮುಖ್ ಸ್ವಾಮಿ ಮಹಾರಾಜ್ ಅವರ 103ನೇ ಜನ್ಮದಿನ ಆಚರಿಸಲಾಗುತ್ತಿದೆ, ಅವರಿಗೂ ಸಹ ನಾನು ಗೌರವಪೂರ್ವಕವಾಗಿ ನಮಸ್ಕರಿಸುತ್ತೇನೆ, ಏಕೆಂದರೆ ಅವರು ದೈವಿಕ ಗುರು ಹರಿ ಪ್ರಗತ್ ಬ್ರಹ್ಮನ ಮೂರ್ತರೂಪವಾಗಿದ್ದರು. ಭಗವಾನ್ ಸ್ವಾಮಿನಾರಾಯಣ ಅವರ ಬೋಧನೆಗಳು ಮತ್ತು ಪ್ರಮುಖ್ ಸ್ವಾಮಿ ಮಹಾರಾಜ್ ಅವರ ಸಂಕಲ್ಪಗಳು ಮತ್ತು ನಿರ್ಣಯಗಳು ಪರಮ ಪೂಜ್ಯ ಗುರು ಹರಿ ಮಹಂತ್ ಸ್ವಾಮಿ ಮಹಾರಾಜ್ ಅವರ ಅವಿರತ ಪ್ರಯತ್ನ ಮತ್ತು ಸಮರ್ಪಣೆಯ ಮೂಲಕ ಇಂದು ಸಾಕಾರಗೊಳ್ಳುತ್ತಿವೆ. 1 ಲಕ್ಷ ಸ್ವಯಂಸೇವಕರು, ಯುವಕರು ಮತ್ತು ಮಕ್ಕಳನ್ನು ಒಳಗೊಂಡ ಈ ಭವ್ಯವಾದ ಸಾಂಸ್ಕೃತಿಕ ಕಾರ್ಯಕ್ರಮವು ಬೀಜ, ಮರ ಮತ್ತು ಹಣ್ಣುಗಳ ಸಾರವನ್ನು ಸುಂದರವಾಗಿ ಪ್ರತಿನಿಧಿಸುತ್ತಿದೆ. ನಾನು ನಿಮ್ಮ ನಡುವೆ ದೈಹಿಕವಾಗಿ ಇರಲು ಸಾಧ್ಯವಾಗದಿದ್ದರೂ, ಈ ಘಟನೆಯ ಚೈತನ್ಯ ಮತ್ತು ಶಕ್ತಿಯನ್ನು ನನ್ನ ಹೃದಯದಲ್ಲಿ ಆಳವಾಗಿ ಅನುಭವಿಸುತ್ತೇನೆ. ಇಂತಹ ಭವ್ಯವಾದ ಮತ್ತು ದಿವ್ಯವಾದ ಆಚರಣೆಯನ್ನು ಆಯೋಜಿಸಿದ್ದಕ್ಕಾಗಿ ಪರಮ ಪೂಜ್ಯ ಗುರು ಹರಿ ಮಹಂತ್ ಸ್ವಾಮಿ ಮಹಾರಾಜ್ ಮತ್ತು ಎಲ್ಲಾ ಪೂಜ್ಯ ಸಾಧು ಸಂತರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ, ಅವರಿಗೆ ಅಪಾರ ಗೌರವದಿಂದ ನಮಸ್ಕರಿಸುತ್ತೇನೆ.ಅಹಮದಾಬಾದ್‌ನಲ್ಲಿ ಕಾರ್ಯಕರ್ತರ ಸುವರ್ಣ ಮಹೋತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
December 07th, 05:40 pm
ಅಹಮದಾಬಾದ್‌ನಲ್ಲಿ ಆಯೋಜಿತವಾಗಿದ್ದ ಕಾರ್ಯಕರ್ತರ ಸುವರ್ಣ ಮಹೋತ್ಸವವನ್ನು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೊ ಕಾನ್ಫರೆನ್ಸ್ ಉದ್ದೇಶಿಸಿ ಭಾಷಣ ಮಾಡಿದರು. ಪರಮಪೂಜ್ಯ ಗುರು ಹರಿ ಮಹಂತ ಸ್ವಾಮಿ ಮಹಾರಾಜ್, ಪೂಜ್ಯ ಸಾಧು ಸಂತರು ಮತ್ತು ಸತ್ಸಂಗಿ ಕುಟುಂಬದ ಸದಸ್ಯರು ಮತ್ತು ಇತರೆ ಗಣ್ಯರು ಮತ್ತು ಪ್ರತಿನಿಧಿಗಳನ್ನು ಅವರು ಸ್ವಾಗತಿಸಿದರು. ಕಾರ್ಯಕರ್ತರ ಸುವರ್ಣ ಮಹೋತ್ಸವ ಸಂದರ್ಭದಲ್ಲಿ ಶ್ರೀ ಮೋದಿ ಅವರು ಭಗವಾನ್ ಸ್ವಾಮಿ ನಾರಾಯಣರ ಪಾದಗಳಿಗೆ ನಮಸ್ಕರಿಸಿ, ಇಂದು ಪ್ರಮುಖ್ ಸ್ವಾಮಿ ಮಹಾರಾಜರ 103ನೇ ಜನ್ಮದಿನವೂ ಆಗಿದೆ. ಭಗವಾನ್ ಸ್ವಾಮಿ ನಾರಾಯಣರ ಬೋಧನೆಗಳು, ಪ್ರಮುಖ ಸ್ವಾಮಿ ಮಹಾರಾಜರ ಸಂಕಲ್ಪಗಳು ಪರಮ ಪೂಜ್ಯ ಗುರು ಹರಿಮಹಂತ ಸ್ವಾಮಿ ಮಹಾರಾಜರ ಕಠಿಣ ಪರಿಶ್ರಮ ಮತ್ತು ಸಮರ್ಪಣೆಯಿಂದ ಇಂದು ಫಲ ನೀಡುತ್ತಿವೆ. ಯುವಕರು ಮತ್ತು ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳ ಜೊತೆಗೆ ಸುಮಾರು 1 ಲಕ್ಷ ಕಾರ್ಯಕರ್ತರು ಸೇರಿದಂತೆ ಇಂತಹ ಬೃಹತ್ ಕಾರ್ಯಕ್ರಮವನ್ನು ವೀಕ್ಷಿಸುತ್ತಿರುವುದು ಸಂತಸ ತಂದಿದೆ. ಸ್ಥಳದಲ್ಲಿ ದೈಹಿಕವಾಗಿ ಇಲ್ಲದಿದ್ದರೂ, ಈ ಕಾರ್ಯಕ್ರಮದ ಶಕ್ತಿಯನ್ನು ಅನುಭವಿಸಬಹುದಾಗಿದೆ. ಮಹಾರಥೋತ್ಸವದಲ್ಲಿ ಭಾಗಿಯಾಗಿರುವ ಪರಮಪೂಜ್ಯ ಗುರು ಹರಿಮಹಾಂತ ಸ್ವಾಮಿ ಮಹಾರಾಜರು, ಸಕಲ ಸಾಧು ಸಂತರಿಗೆ ಅವರು ಶುಭ ಕೋರಿದರು.ಪ್ರಧಾನಿ ನರೇಂದ್ರ ಮೋದಿ ಅವರು ಲಾವೊ ಪಿಡಿಆರ್ ಪ್ರಧಾನಿ ಅವರನ್ನು ಭೇಟಿ ಮಾಡಿದರು
October 11th, 12:32 pm
ಪ್ರಧಾನಿ ನರೇಂದ್ರ ಮೋದಿ ಅವರು ಲಾವೊ ಪಿಡಿಆರ್‌ನ ಪ್ರಧಾನ ಮಂತ್ರಿ ಎಚ್‌ಇ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದರು. ವಿಯೆಂಟಿಯಾನ್‌ನಲ್ಲಿರುವ ಶ್ರೀ ಸೋನೆಕ್ಸೇ ಸಿಫಾಂಡೋನ್. ಅಭಿವೃದ್ಧಿ ಪಾಲುದಾರಿಕೆ, ಸಾಮರ್ಥ್ಯ ನಿರ್ಮಾಣ, ವಿಪತ್ತು ನಿರ್ವಹಣೆ, ನವೀಕರಿಸಬಹುದಾದ ಇಂಧನ, ಪರಂಪರೆಯ ಮರುಸ್ಥಾಪನೆ, ಆರ್ಥಿಕ ಸಂಬಂಧಗಳು, ರಕ್ಷಣಾ ಸಹಯೋಗ ಮತ್ತು ಜನರಿಂದ ಜನರ ನಡುವಿನ ಸಂಬಂಧಗಳಂತಹ ದ್ವಿಪಕ್ಷೀಯ ಸಹಕಾರದ ವಿವಿಧ ಕ್ಷೇತ್ರಗಳನ್ನು ಅವರು ಚರ್ಚಿಸಿದರು.Cabinet approves Flood Management and Border Areas Programme (FMBAP) for the period 2021-26
February 21st, 11:36 pm
The Union Cabinet chaired by Prime Minister Shri Narendra Modi approved the proposal of Department of Water Resources, RD & GR for continuation of centrally sponsored Scheme, viz., “Flood Management and Border Areas Programme (FMBAP)” with total outlay of Rs. 4,100 crore for a period of 5 years from 2021-22 to 2025-26 (15th Finance Commission period).ತಮಿಳುನಾಡಿನ ತಿರುಚಿರಾಪಳ್ಳಿಯಲ್ಲಿ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
January 02nd, 12:30 pm
ತಮಿಳುನಾಡಿನ ರಾಜ್ಯಪಾಲ ಶ್ರೀ ಆರ್.ಎನ್.ರವಿ ಜೀ, ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಜೀ, ನನ್ನ ಸಂಪುಟ ಸಹೋದ್ಯೋಗಿಗಳಾದ ಜ್ಯೋತಿರಾದಿತ್ಯ ಸಿಂಧಿಯಾ ಜೀ ಮತ್ತು ಈ ಮಣ್ಣಿನ ಮಗ ಎಲ್.ಮುರುಗನ್ ಜೀ, ತಮಿಳುನಾಡು ಸರ್ಕಾರದ ಸಚಿವರು, ಸಂಸದರು ಮತ್ತು ಶಾಸಕರು ಮತ್ತು ತಮಿಳುನಾಡಿನ ನನ್ನ ಕುಟುಂಬ ಸದಸ್ಯರೇ!ತಮಿಳುನಾಡಿನ ತಿರುಚಿರಾಪಳ್ಳಿಯಲ್ಲಿ 20,000 ಕೋಟಿ ರೂ.ಗೂ ಹೆಚ್ಚು ಮೊತ್ತದ ಬಹುಅಭಿವೃದ್ಧಿ ಯೋಜನೆಗಳ ಉದ್ಘಾಟನೆ, ದೇಶಕ್ಕೆ ಸಮರ್ಪಣೆ ಮತ್ತು ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ
January 02nd, 12:15 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮಿಳುನಾಡಿನ ತಿರುಚಿರಾಪಳ್ಳಿಯಲ್ಲಿಂದು 20,000 ಕೋಟಿ ರೂ. ವೊತ್ತದ ಬಹುಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು, ರಾಷ್ಟ್ರಕ್ಕೆ ಸಮರ್ಪಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಬಹುಅಭಿವೃದ್ಧಿ ಯೋಜನೆಗಳು ತಮಿಳುನಾಡಿನಲ್ಲಿ ರೈಲು, ರಸ್ತೆ, ತೈಲ ಮತ್ತು ಅನಿಲ ಮತ್ತು ಹಡಗು ಕ್ಷೇತ್ರಗಳಂತಹ ಕ್ಷೇತ್ರಗಳನ್ನು ಒಳಗೊಂಡಿವೆ.Central Government continuously monitoring flood situation in Assam and working closely with State Government to provide all possible assistance: PM
June 23rd, 09:15 pm
Taking note of the flood in Assam, Prime Minister Narendra Modi said, The Central Government is continuously monitoring the flood situation in Assam and is working closely with the State Government to provide all possible assistance to overcome this challenge.ಬಿಸಿಲಿನ ಝಳ (ಶಾಖ ತರಂಗ) ನಿರ್ವಹಣೆ ಮತ್ತು ಮುಂಗಾರು ಸಿದ್ಧತೆಗಳಿಗೆ ಸಂಬಂಧಿಸಿದ ಪರಿಸ್ಥಿತಿ ಪರಾಮರ್ಶೆಗೆ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ ಪ್ರಧಾನ ಮಂತ್ರಿ.
May 05th, 08:09 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಬಿಸಿಲಿನ ಝಳ (ಶಾಖ ತರಂಗ) ನಿರ್ವಹಣೆ ಮತ್ತು ಮುಂಗಾರು ಸಿದ್ಧತಾಸ್ಥಿತಿಯ ಬಗ್ಗೆ ಪರಾಮರ್ಶೆ ನಡೆಸಿದರು.PSLV C52 ಮಿಷನ್‌ನ ಯಶಸ್ವಿ ಉಡಾವಣೆಗಾಗಿ ಭಾರತೀಯ ಬಾಹ್ಯಾಕಾಶ ವಿಜ್ಞಾನಿಗಳನ್ನು ಪ್ರಧಾನಿ ಅಭಿನಂದಿಸಿದ ಪ್ರಧಾನಿ
February 14th, 10:39 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು PSLV C52 ಮಿಷನ್ ಯಶಸ್ವಿ ಉಡಾವಣೆಗಾಗಿ ಭಾರತೀಯ ಬಾಹ್ಯಾಕಾಶ ವಿಜ್ಞಾನಿಗಳನ್ನು ಅಭಿನಂದಿಸಿದ್ದಾರೆ.ಗ್ರಾಮೀಣಾಭಿವೃದ್ಧಿಯ ಮೇಲೆ ಕೇಂದ್ರ ಮುಂಗಡಪತ್ರದ ಧನಾತ್ಮಕ ಪರಿಣಾಮ ಕುರಿತ ವೆಬಿನಾರಿನಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ
January 23rd, 05:24 pm
Prime Minister Narendra Modi paid tribute to Netaji Subhas Chandra Bose on his 125th birth anniversary. Addressing the gathering, he said, The grand statue of Netaji, who had established the first independent government on the soil of India, and who gave us the confidence of achieving a sovereign and strong India, is being installed in digital form near India Gate. Soon this hologram statue will be replaced by a granite statue.ಇಂಡಿಯಾ ಗೇಟ್ ಬಳಿ ನೇತಾಜಿ ಅವರ ಹಾಲೋಗ್ರಾಮ್ ಪ್ರತಿಮೆ ಅನಾವರಣಗೊಳಿಸಿದ ಪ್ರಧಾನಮಂತ್ರಿ; ಜೊತೆಗೆ ಸುಭಾಷ್ ಚಂದ್ರ ಬೋಸ್ ಆಪ್ದಾ ಪ್ರಬಂಧನ್ ಪುರಸ್ಕಾರ ಪ್ರದಾನ
January 23rd, 05:23 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂಡಿಯಾ ಗೇಟ್ ನಲ್ಲಿಂದು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಹಾಲೋಗ್ರಾಮ್ ಪ್ರತಿಮೆಯನ್ನು ಅನಾವರಣಗೊಳಿಸಿದರು. ನೇತಾಜಿ ಅವರ ಪ್ರತಿಮೆ ನಿರ್ಮಾಣ ಕಾರ್ಯ ಪೂರ್ಣಗೊಳ್ಳುವವರೆಗೆ ಈ ಹಾಲೋಗ್ರಾಮ್ ಪ್ರತಿಮೆ ಆ ಸ್ಥಳದಲ್ಲಿರಲಿದೆ. ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125ನೇ ಜಯಂತಿ ಆಚರಣೆ ವರ್ಷವಿಡೀ ನಡೆಯಲಿರುವ ಸ್ಥಳದಲ್ಲೇ ಪ್ರತಿಮೆಯನ್ನು ಅನಾವರಣ ಮಾಡಲಾಯಿತು.ನವೆಂಬರ್ 5ರಂದು ಕೇದಾರನಾಥಕ್ಕೆ ಭೇಟಿ ನೀಡಿ ಶ್ರೀ ಆದಿ ಶಂಕರಾಚಾರ್ಯರ ಸಮಾಧಿಯನ್ನು ಉದ್ಘಾಟಿಸಲಿರುವ ಪ್ರಧಾನಿ
October 28th, 06:17 pm
ಕೇದಾರನಾಥ ದೇವಾಲಯದಲ್ಲಿ ಪ್ರಧಾನಮಂತ್ರಿಯವರು ಪ್ರಾರ್ಥನೆ ಸಲ್ಲಿಸಲಿದ್ದಾರೆ. ಆ ನಂತರ ಅವರು ಶ್ರೀ ಆದಿ ಶಂಕರಾಚಾರ್ಯರ ಸಮಾಧಿಯನ್ನು ಉದ್ಘಾಟಿಸಲಿದ್ದಾರೆ. ಜೊತೆಗೆ ಶ್ರೀ ಆದಿ ಶಂಕರಾಚಾರ್ಯರ ಪ್ರತಿಮೆಯನ್ನೂ ಅವರು ಅನಾವರಣಗೊಳಿಸಲಿದ್ದಾರೆ. 2013ರ ಪ್ರವಾಹದಲ್ಲಿ ಹಾನಿಗೊಳಗಾಗಿದ್ದ ಸಮಾಧಿಯನ್ನು ಮರುನಿರ್ಮಾಣ ಮಾಡಲಾಗಿದೆ. ಯೋಜನೆಯ ಪ್ರಗತಿಯನ್ನು ನಿರಂತರವಾಗಿ ಪರಿಶೀಲಿಸಿ, ಮೇಲ್ವಿಚಾರಣೆ ನಡೆಸುತ್ತಿರುವ ಪ್ರಧಾನಮಂತ್ರಿಯವರ ಮಾರ್ಗದರ್ಶನದಲ್ಲಿ ಸಂಪೂರ್ಣ ಪುನರ್ನಿರ್ಮಾಣ ಕಾರ್ಯವನ್ನು ಕೈಗೊಳ್ಳಲಾಗಿದೆ.ಅಸ್ಸಾಂನ ಕೆಲವು ಭಾಗಗಳಲ್ಲಿ ಪ್ರವಾಹ ಪರಿಸ್ಥಿತಿಯ ಬಗ್ಗೆ ರಾಜ್ಯದ ಮುಖ್ಯಮಂತ್ರಿಗಳೊಂದಿಗೆ ಮಾತನಾಡಿದ ಪ್ರಧಾನಿ
August 31st, 10:52 am
ಅಸ್ಸಾಂನ ಕೆಲವು ಭಾಗಗಳಲ್ಲಿ ಪ್ರವಾಹ ಪರಿಸ್ಥಿತಿಯ ಬಗ್ಗೆ ರಾಜ್ಯದ ಮುಖ್ಯಮಂತ್ರಿ ಶ್ರೀ ಹಿಮಂತ ಬಿಸ್ವಾ ಶರ್ಮಾ ಅವರೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೂರವಾಣಿಯಲ್ಲಿ ಮಾತನಾಡಿ ಮಾಹಿತಿ ಪಡೆದರು. ಪರಿಸ್ಥಿತಿಯನ್ನು ನಿಭಾಯಿಸಲು ಕೇಂದ್ರದಿಂದ ಸಾಧ್ಯವಿರುವ ಎಲ್ಲ ಬೆಂಬಲ ನೀಡುವುದಾಗಿ ಪ್ರಧಾನಿ ಭರವಸೆ ನೀಡಿದರು.ಪಶ್ಚಿಮ ಬಂಗಾಳದ ಮಳೆ ಮತ್ತು ನೆರೆ ಸಂತ್ರಸ್ತರಿಗೆ ʻಪಿಎಂಎನ್ಆರ್‌ಎಫ್ʼನಿಂದ ಪರಿಹಾರ ಅನುಮೋದಿಸಿದ ಪ್ರಧಾನಿ
August 04th, 08:31 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳದಲ್ಲಿ ಮಳೆ ಮತ್ತು ನೆರೆಯಿಂದ ಪ್ರಾಣ ಕಳೆದುಕೊಂಡವರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ 50,000 ರೂ. ಪರಿಹಾರವನ್ನು ಅನುಮೋದಿಸಿದ್ದಾರೆ.ಮಧ್ಯ ಪ್ರದೇಶದ ಮಳೆ ಮತ್ತು ಪ್ರವಾಹ ಸಂತ್ರಸ್ತರಿಗೆ ʻಪಿಎಂಎನ್ಆರ್‌ಎಫ್ʼನಿಂದ ಪರಿಹಾರ ಅನುಮೋದಿಸಿದ ಪ್ರಧಾನಿ
August 04th, 08:29 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಧ್ಯಪ್ರದೇಶದಲ್ಲಿ ಮಳೆ ಮತ್ತು ಪ್ರವಾಹದಿಂದ ಪ್ರಾಣ ಕಳೆದುಕೊಂಡವರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ 50,000 ರೂ. ಪರಿಹಾರವನ್ನು ಅನುಮೋದಿಸಿದ್ದಾರೆ.ಪಶ್ಚಿಮ ಬಂಗಾಳದ ಕೆಲವು ಭಾಗಗಳಲ್ಲಿ ಪ್ರವಾಹ ಪರಿಸ್ಥಿತಿ ಕುರಿತು ಪಶ್ಚಿಮ ರಾಜ್ಯದ ಮುಖ್ಯಮಂತ್ರಿ ಜೊತೆ ಮಾತನಾಡಿದ ಪ್ರಧಾನಿ
August 04th, 01:27 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿ, ಜಲಾಶಯಗಳಿಂದ ನೀರು ಬಿಡುಗಡೆಯಿಂದಾಗಿ ರಾಜ್ಯದ ಕೆಲವು ಭಾಗಗಳಲ್ಲಿ ಉಂಟಾದ ಪ್ರವಾಹ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದಿದ್ದಾರೆ. ಪರಿಸ್ಥಿತಿಯನ್ನು ನಿಭಾಯಿಸುವ ನಿಟ್ಟಿನಲ್ಲಿ ಕೇಂದ್ರದಿಂದ ಸಾಧ್ಯವಿರುವ ಎಲ್ಲ ನೆರವನ್ನು ನೀಡುವ ಭರವಸೆ ನೀಡಿದರು.ಮಧ್ಯ ಪ್ರದೇಶದ ಕೆಲವು ಭಾಗಗಳಲ್ಲಿ ಉಂಟಾದ ಭಾರಿ ಮಳೆ ಮತ್ತು ಪ್ರವಾಹದಿಂದ ಬಾಧಿತರಾದವರಿಗೆ ನೆರವು ನೀಡಲು ರಾಜ್ಯ ಸರಕಾರದೊಂದಿಗೆ ಕೇಂದ್ರ ನಿಕಟವಾಗಿ ಕೆಲಸ ಮಾಡುತ್ತಿದೆ: ಪ್ರಧಾನಿ
August 04th, 01:23 pm
ರಾಜ್ಯದ ಕೆಲವು ಭಾಗಗಳಲ್ಲಿ ಭಾರಿ ಮಳೆ ಮತ್ತು ಪ್ರವಾಹದಿಂದ ಬಾಧಿತರಾದವರಿಗೆ ಸಹಾಯ ಮಾಡಲು ಕೇಂದ್ರ ಸರಕಾರವು ಮಧ್ಯಪ್ರದೇಶ ಸರಕಾರದೊಂದಿಗೆ ನಿಕಟವಾಗಿ ಕೆಲಸ ಮಾಡುತ್ತಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ. ಪ್ರಧಾನ ಮಂತ್ರಿಯವರು ಮುಖ್ಯಮಂತ್ರಿ ಶ್ರೀ ಶಿವರಾಜ ಸಿಂಗ್ ಚೌಹಾಣ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿ, ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ.ಮನ್ ಕಿ ಬಾತ್' ಸಕಾರಾತ್ಮಕತೆ ಮತ್ತು ಸೂಕ್ಷ್ಮತೆಯನ್ನು ಹೊಂದಿದೆ. ಇದು ಸಾಮೂಹಿಕ ಪಾತ್ರವನ್ನು ಹೊಂದಿದೆ:ಪ್ರಧಾನಿ ಮೋದಿ
July 25th, 09:44 am
ಮನ್ ಕಿ ಬಾತ್ ಸಂದರ್ಭದಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ಟೋಕಿಯೊ ಒಲಿಂಪಿಕ್ಸ್‌ಗಾಗಿ ಭಾರತದ ತುಕಡಿಯೊಂದಿಗೆ ನಡೆಸಿದ ಸಂವಾದವನ್ನು ನೆನಪಿಸಿಕೊಂಡರು ಮತ್ತು ದೇಶವಾಸಿಗಳು ಅವರನ್ನು ಬೆಂಬಲಿಸುವಂತೆ ಕರೆ ನೀಡಿದರು . ಅಮೃತ್ ಮಹೋತ್ಸವ ಕುರಿತು ಮಾತನಾಡಿದ ಪ್ರಧಾನಿ ಮೋದಿ ಅವರು ವಿಶೇಷ ವೆಬ್‌ಸೈಟ್ ಬಗ್ಗೆ ಪ್ರಸ್ತಾಪಿಸಿದರು, ಅಲ್ಲಿ ದೇಶಾದ್ಯಂತದ ನಾಗರಿಕರು ತಮ್ಮದೇ ಗೀತೆಯಲ್ಲಿ ರಾಷ್ಟ್ರಗೀತೆ ದಾಖಲಿಸಬಹುದು. ಅವರು ದೇಶದಾದ್ಯಂತ ಹಲವಾರು ಸ್ಪೂರ್ತಿದಾಯಕ ಕಥೆಗಳನ್ನು ಹಂಚಿಕೊಂಡರು, ನೀರಿನ ಸಂರಕ್ಷಣೆಯ ಮಹತ್ವವನ್ನು ಮತ್ತು ಹೆಚ್ಚಿನದನ್ನು ಎತ್ತಿ ತೋರಿಸಿದರು!ಮಹಾರಾಷ್ಟ್ರದಲ್ಲಿನ ಪ್ರವಾಹ ಪರಿಸ್ಥಿತಿ ಕುರಿತಂತೆ ಮಹಾರಾಷ್ಟ್ರ ಮುಖ್ಯಮಂತ್ರಿಯೊಂದಿಗೆ ಮಾತನಾಡಿದ ಪ್ರಧಾನಮಂತ್ರಿ
July 22nd, 09:59 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ಕೆಲವು ಭಾಗಗಳಲ್ಲಿ ಭಾರೀ ಮಳೆ ಮತ್ತು ಪ್ರವಾಹದಿಂದ ಉದ್ಭವಿಸಿರುವ ಪರಿಸ್ಥಿತಿಯ ಕುರಿತಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ಶ್ರೀ ಉದ್ಧವ್ ಠಾಕ್ರೆ ಅವರೊಂದಿಗೆ ಚರ್ಚಿಸಿದರು.ರಾಜ್ಯದ ಹಲವು ಭಾಗಗಳಲ್ಲಿ ಮಳೆ ಮತ್ತು ಪ್ರವಾಹದಿಂದ ಉಂಟಾಗಿರುವ ಪರಿಸ್ಥಿತಿಯ ಕುರಿತಂತೆ ಕರ್ನಾಟಕ ಮುಖ್ಯಮಂತ್ರಿಯೊಂದಿಗೆ ಮಾತುಕತೆ ನಡೆಸಿದ ಪ್ರಧಾನಮಂತ್ರಿ
October 16th, 09:07 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಜ್ಯದ ಅನೇಕ ಭಾಗಗಳಲ್ಲಿ ಮಳೆ ಮತ್ತು ಪ್ರವಾಹದಿಂದ ಉಂಟಾಗಿರುವ ಪರಿಸ್ಥಿತಿಯ ಕುರಿತಂತೆ ಕರ್ನಾಟಕದ ಮುಖ್ಯಮಂತ್ರಿ ಶ್ರೀ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಮಾತುಕತೆ ನಡೆಸಿದರು.