ನವದೆಹಲಿಯ ಭಾರತ ಮಂಟಪದಲ್ಲಿ ರಷ್ಯಾ ಅಧ್ಯಕ್ಷರಾದ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ನಡೆದ ಭಾರತ-ರಷ್ಯಾ ಬಿಸಿನೆಸ್ ಫೋರಂನಲ್ಲಿ ಪ್ರಧಾನಮಂತ್ರಿ ಅವರ ಭಾಷಣ
December 05th, 03:45 pm
ಇಂದು ಇಷ್ಟು ದೊಡ್ಡ ನಿಯೋಗದೊಂದಿಗೆ ಈ ಕಾರ್ಯಕ್ರಮದ ಭಾಗವಾಗಿರುವುದು ಅಧ್ಯಕ್ಷರಾದ ಪುಟಿನ್ ಅವರ ಅತ್ಯಂತ ಪ್ರಮುಖ ನಿರ್ಧಾರ ಹಾಗೂ ಹೆಜ್ಜೆ ಎಂದು ನಾನು ಭಾವಿಸುತ್ತೇನೆ. 'ಇಂಡಿಯಾ ರಷ್ಯಾ ಬಿಸಿನೆಸ್ ಫೋರಂ'ನಲ್ಲಿ ಭಾಗವಹಿಸಿರುವ ನಿಮ್ಮೆಲ್ಲರನ್ನೂ ನಾನು ತುಂಬು ಹೃದಯದಿಂದ ಸ್ವಾಗತಿಸುತ್ತೇನೆ. ನಿಮ್ಮೆಲ್ಲರ ನಡುವೆ ಇರುವುದು ನನಗೆ ಅತ್ಯಂತ ಸಂತಸದ ವಿಷಯವಾಗಿದೆ. ಈ ವೇದಿಕೆಗೆ ಆಗಮಿಸಿ ತಮ್ಮ ಅಮೂಲ್ಯವಾದ ಅನಿಸಿಕೆಗಳನ್ನು ಹಂಚಿಕೊಂಡಿದ್ದಕ್ಕಾಗಿ ನನ್ನ ಸ್ನೇಹಿತರಾದ ಅಧ್ಯಕ್ಷ ಪುಟಿನ್ ಅವರಿಗೆ ನಾನು ಹೃತ್ಪೂರ್ವಕ ಕೃತಜ್ಞತೆಯನ್ನು ಸಲ್ಲಿಸುತ್ತೇನೆ. ವ್ಯಾಪಾರ-ವಹಿವಾಟಿಗೆ ಸರಳ ಮತ್ತು ಸುಗಮವಾದ ವ್ಯವಸ್ಥೆಗಳನ್ನು ರೂಪಿಸಲಾಗುತ್ತಿದೆ. ಭಾರತ ಮತ್ತು ಯುರೇಷಿಯನ್ ಎಕನಾಮಿಕ್ ಯೂನಿಯನ್ ನಡುವಿನ ಮುಕ್ತ ವ್ಯಾಪಾರ ಒಪ್ಪಂದದ (FTA) ಕುರಿತು ಚರ್ಚೆಗಳು ಪ್ರಾರಂಭವಾಗಿವೆ.ರಷ್ಯಾ ಅಧ್ಯಕ್ಷರಾದ ಘನತೆವೆತ್ತ ಶ್ರೀ ವ್ಲಾದಿಮಿರ್ ಪುಟಿನ್ ಅವರೊಂದಿಗೆ ಭಾರತ – ರಷ್ಯಾ ವಾಣಿಜ್ಯ ವೇದಿಕೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
December 05th, 03:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ಭಾರತ ಮಂಟಪದಲ್ಲಿ ರಷ್ಯಾ ಅಧ್ಯಕ್ಷ ಘನತೆವೆತ್ತ ಶ್ರೀ ವ್ಲಾದಿಮಿರ್ ಪುಟಿನ್ ಅವರೊಂದಿಗೆ ಭಾರತ-ರಷ್ಯಾ ವ್ಯಾಪಾರ ವೇದಿಕೆಯನ್ನುದ್ದೇಶಿಸಿ ಇಂದು ಮಾತನಾಡಿದರು. ತಮ್ಮ ಭಾಷಣದ ಆರಂಭದಲ್ಲಿ ಪ್ರಧಾನಮಂತ್ರಿ ಅವರು, ಘನತೆವೆತ್ತ ಅಧ್ಯಕ್ಷ ಪುಟಿನ್, ಭಾರತ ಮತ್ತು ವಿದೇಶಗಳ ನಾಯಕರು ಮತ್ತು ಎಲ್ಲಾ ಗೌರವಾನ್ವಿತ ಅತಿಥಿಗಳಿಗೆ ಶುಭಾಶಯ ಕೋರಿದರು. ಭಾರತ ರಷ್ಯಾ ವ್ಯಾಪಾರ ವೇದಿಕೆಯು ಅಧ್ಯಕ್ಷ ಪುಟಿನ್ ಅವರ ಮಹತ್ವದ ಉಪಕ್ರಮವನ್ನು ಪ್ರತಿಬಿಂಬಿಸುತ್ತದೆ, ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ದೊಡ್ಡ ನಿಯೋಗವನ್ನು ಕರೆತಂದಿದ್ದಾರೆ ಎಂದು ಹೇಳಿದರು. ಸಭೆಯಲ್ಲಿ ಭಾಗವಹಿಸಿದ ಎಲ್ಲರಿಗೂ ತಮ್ಮ ಹೃತ್ಪೂರ್ವಕ ಸ್ವಾಗತವನ್ನು ಕೋರಿದ ಪ್ರಧಾನಮಂತ್ರಿ ಮೋದಿ, ಇಂದು ಗಣ್ಯರ ಜೊತೆ ಇರುವುದು ಬಹಳ ಸಂತೋಷ ತಂದಿದೆ ಎಂದು ಹರ್ಷ ವ್ಯಕ್ತಪಡಿಸಿದರು. ವೇದಿಕೆಯಲ್ಲಿ ಭಾಗಿಯಾಗಿದ್ದಕ್ಕಾಗಿ ಮತ್ತು ತಮ್ಮ ಅಮೂಲ್ಯವಾದ ಆಲೋಚನೆಗಳನ್ನು ಹಂಚಿಕೊಂಡಿದ್ದಕ್ಕಾಗಿ ಶ್ರೀ ಮೋದಿ ಅವರು ತಮ್ಮ ಸ್ನೇಹಿತ ಅಧ್ಯಕ್ಷ ಪುಟಿನ್ ಅವರಿಗೆ ತುಂಬು ಹೃದಯದ ಕೃತಜ್ಞತೆ ಸಲ್ಲಿಸಿದರು. ವ್ಯಾಪಾರಕ್ಕಾಗಿ ಸರಳೀಕರಣಕೃತ ಮತ್ತು ಪೂರ್ವ ಅಂದಾಜಿನ ಕಾರ್ಯವಿಧಾನಗಳನ್ನು ರೂಪಿಸಲಾಗುತ್ತಿದೆ ಎಂದು ತಿಳಿಸಿದ ಅವರು, ಭಾರತ ಮತ್ತು ಯುರೇಷಿಯನ್ ಆರ್ಥಿಕ ಒಕ್ಕೂಟದ ನಡುವೆ ಮುಕ್ತ ವ್ಯಾಪಾರ ಒಪ್ಪಂದದ ಬಗ್ಗೆ ಚರ್ಚೆಗಳು ಪ್ರಾರಂಭವಾಗಿವೆ ಎಂದು ಮಾಹಿತಿ ನೀಡಿದರು.ನವದೆಹಲಿಯ ಭಾರತ್ ಮಂಟಪದಲ್ಲಿ ವಿಶ್ವ ಆಹಾರ ಭಾರತ - 2025 ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
September 25th, 06:16 pm
ರಷ್ಯಾದ ಉಪ ಪ್ರಧಾನಮಂತ್ರಿ ಶ್ರೀ ಡಿಮಿಟ್ರಿ ಪತ್ರುಶೇವ್ ಅವರೆ, ನನ್ನ ಸಂಪುಟ ಸಹೋದ್ಯೋಗಿಗಳಾದ ಚಿರಾಗ್ ಪಾಸ್ವಾನ್ ಮತ್ತು ಶ್ರೀ ರವನೀತ್, ಶ್ರೀ ಪ್ರತಾಪರಾವ್ ಜಾಧವ್, ವಿವಿಧ ದೇಶಗಳಿಂದ ಇಲ್ಲಿಗೆ ಬಂದಿರುವ ಸಚಿವರೆ ಮತ್ತು ಪ್ರತಿನಿಧಿಗಳೆ, ಗೌರವಾನ್ವಿತ ಅತಿಥಿಗಳೆ, ಮಹಿಳೆಯರೆ ಮತ್ತು ಮಹನೀಯರೆ!ವಿಶ್ವ ಆಹಾರ ಭಾರತ 2025 ನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
September 25th, 06:15 pm
ನವದೆಹಲಿಯ ಭಾರತ್ ಮಂಟಪದಲ್ಲಿ ಇಂದು ನಡೆದ ವರ್ಲ್ಡ್ ಫುಡ್ ಇಂಡಿಯಾ 2025 ರ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಭೆಯನ್ನುದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿ ಅವರು, ರೈತರು, ಉದ್ಯಮಿಗಳು, ಹೂಡಿಕೆದಾರರು, ನಾವೀನ್ಯಕಾರರು ಮತ್ತು ಗ್ರಾಹಕರು ಎಲ್ಲರೂ ಒಟ್ಟಾಗಿ ಈ ಕಾರ್ಯಕ್ರಮದಲ್ಲಿ ಹಾಜರಿರುವುದನ್ನು ಗುರುತಿಸಿದರು, ಇದು ವರ್ಲ್ಡ್ ಫುಡ್ ಇಂಡಿಯಾವನ್ನು ಹೊಸ ಪರಿಚಯಗಳು, ಹೊಸ ಸಂಪರ್ಕ ಮತ್ತು ಸೃಜನಶೀಲತೆಯ ವೇದಿಕೆಯನ್ನಾಗಿ ಮಾಡಿವೆ ಎಂದು ಹೇಳಿದರು. ತಾವು ಈಗಷ್ಟೇ ಪ್ರದರ್ಶನಗಳಿಗೆ ಭೇಟಿ ನೀಡಿದ್ದನ್ನು ಹಂಚಿಕೊಂಡ ಅವರು, ಪ್ರಾಥಮಿಕ ಗಮನವು ಪೌಷ್ಟಿಕಾಂಶ, ತೈಲ ಬಳಕೆ ಕಡಿಮೆ ಮಾಡುವುದು ಮತ್ತು ಪ್ಯಾಕೇಜ್ ಮಾಡಿದ ಉತ್ಪನ್ನಗಳಲ್ಲಿ ಆರೋಗ್ಯಕರ ಅಂಶಗಳನ್ನು ಹೆಚ್ಚಿಸುವುದರ ಬಗ್ಗೆ ಇರುವುದಕ್ಕೆ ಸಂತೋಷ ವ್ಯಕ್ತಪಡಿಸಿದರು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲರಿಗೂ ಪ್ರಧಾನಮಂತ್ರಿಯವರು ಅಭಿನಂದನೆಗಳು ಮತ್ತು ಶುಭಾಶಯಗಳನ್ನು ವ್ಯಕ್ತಪಡಿಸಿದರು.ಸೆಪ್ಟೆಂಬರ್ 25 ನವದೆಹಲಿಯ ಭಾರತ ಮಂಟಪದಲ್ಲಿ ನಡೆಯಲಿರುವ 'ವಿಶ್ವ ಆಹಾರ ಮೇಳ ಭಾರತ 2025' ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಭಾಗವಹಿಸಲಿದ್ದಾರೆ
September 24th, 06:33 pm
'ಪ್ರಧಾನಮಂತ್ರಿ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಔಪಚಾರೀಕರಣ' (PMFME) ಯೋಜನೆಯಡಿ, ಆಹಾರ ಸಂಸ್ಕರಣಾ ವಲಯದಲ್ಲಿನ ಸೂಕ್ಷ್ಮ ಯೋಜನೆಗಳಿಗಾಗಿ ಸುಮಾರು 26,000 ಫಲಾನುಭವಿಗಳಿಗೆ ₹770 ಕೋಟಿಗೂ ಅಧಿಕ ಮೊತ್ತದ ಸಾಲ-ಸಂಯೋಜಿತ ನೆರವನ್ನು ವಿತರಿಸಲಾಗುವುದು.ಡೆನ್ಮಾರ್ಕ್ ಪ್ರಧಾನಮಂತ್ರಿ ಶ್ರೀಮತಿ ಮೆಟ್ಟೆ ಫ್ರೆಡೆರಿಕ್ಸೆನ್ ಅವರೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ದೂರವಾಣಿ ಸಂಭಾಷಣೆ
September 16th, 07:29 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಡೆನ್ಮಾರ್ಕ್ ಪ್ರಧಾನಮಂತ್ರಿ ಶ್ರೀಮತಿ ಮೆಟ್ಟೆ ಫ್ರೆಡೆರಿಕ್ಸೆನ್ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು.ಪ್ರಧಾನಮಂತ್ರಿ ಅವರನ್ನು ಭೇಟಿಯಾದ 2024ನೇ ಬ್ಯಾಚ್‌ನ ಐ.ಎಫ್.ಎಸ್ ಅಧಿಕಾರಿ ತರಬೇತಿದಾರರು
August 19th, 08:34 pm
ಭಾರತೀಯ ವಿದೇಶಾಂಗ ಸೇವೆ (ಐ.ಎಫ್.ಎಸ್)ಯ 2024ರ ಬ್ಯಾಚ್ ನ ಅಧಿಕಾರಿ ತರಬೇತಿದಾರರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಅವರ 7, ಲೋಕ ಕಲ್ಯಾಣ ಮಾರ್ಗದ ನಿವಾಸದಲ್ಲಿ ಭೇಟಿಯಾದರು. 2024ರ ಈ ಬ್ಯಾಚ್‌ನಲ್ಲಿ ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ಬಂದಿರುವ 33 ಐ.ಎಫ್.ಎಸ್ ಅಧಿಕಾರಿ ತರಬೇತಿದಾರರಿದ್ದಾರೆ.ಪ್ರಧಾನಮಂತ್ರಿ ಅವರಿಂದ ನವದೆಹಲಿಯಲ್ಲಿ ಆಗಸ್ಟ್ 7ರಂದು ಎಂ.ಎಸ್. ಸ್ವಾಮಿನಾಥನ್ ಶತಮಾನೋತ್ಸವ ಅಂತಾರಾಷ್ಟ್ರೀಯ ಸಮ್ಮೇಳನ ಉದ್ಘಾಟನೆ
August 06th, 12:20 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಗಸ್ಟ್ 7 ರಂದು ಬೆಳಿಗ್ಗೆ 9 ಗಂಟೆಗೆ ನವದೆಹಲಿಯ ಐಸಿಎಆರ್ ಪುಸಾದಲ್ಲಿ ಎಂ.ಎಸ್. ಸ್ವಾಮಿನಾಥನ್ ಶತಮಾನೋತ್ಸವ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.ಜಂಟಿ ಹೇಳಿಕೆ: ಭಾರತ ಮತ್ತು ಬ್ರೆಜಿಲ್ - ಉನ್ನತ ಉದ್ದೇಶಗಳನ್ನು ಹೊಂದಿರುವ ಎರಡು ಶ್ರೇಷ್ಠ ರಾಷ್ಟ್ರಗಳು
July 09th, 05:55 am
ಭಾರತ ಗಣರಾಜ್ಯದ ಪ್ರಧಾನ ಮಂತ್ರಿಯವರಾದ ಗೌರವಾನ್ವಿತ ಶ್ರೀ ನರೇಂದ್ರ ಮೋದಿ ಅವರು ಜುಲೈ 8, 2025 ರಂದು ಬ್ರೆಜಿಲ್ ಗೆ ಅಧಿಕೃತ ಭೇಟಿ ನೀಡಿದರು. ಫೆಡರೇಟಿವ್ ರಿಪಬ್ಲಿಕ್ ಆಫ್ ಬ್ರೆಜಿಲ್ ನ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಲೂಯಿಜ್ ಇನಾಸಿಯೊ ಲುಲಾ ಡ ಸಿಲ್ವಾ ಅವರ ಆಹ್ವಾನದ ಮೇರೆಗೆ ಈ ಭೇಟಿಯನ್ನು ಕೈಗೊಳ್ಳಲಾಯಿತು. ಸುಮಾರು ಎಂಟು ದಶಕಗಳಿಂದ ಬ್ರೆಜಿಲ್-ಭಾರತ ಸಂಬಂಧಗಳ ಮೂಲಾಧಾರವಾಗಿರುವ ಸ್ನೇಹ ಮತ್ತು ವಿಶ್ವಾಸದ ಉತ್ಸಾಹದಲ್ಲಿ ಈ ಭೇಟಿ ನಡೆಯಿತು. 2006ರಲ್ಲಿ, ಈ ಸಂಬಂಧವನ್ನು ಕಾರ್ಯತಂತ್ರದ ಪಾಲುದಾರಿಕೆಗೆ ಏರಿಸಲಾಯಿತು.ಏಪ್ರಿಲ್ 03-06, 2025 ರಿಂದ ಪ್ರಧಾನ ಮಂತ್ರಿಯವರ ಥೈಲ್ಯಾಂಡ್ ಮತ್ತು ಶ್ರೀಲಂಕಾ ಭೇಟಿ
April 02nd, 02:00 pm
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಬ್ಯಾಂಕಾಕ್‌ನಲ್ಲಿ ನಡೆಯಲಿರುವ 6 ನೇ ಬಿಮ್‌ಸ್ಟೆಕ್ ಶೃಂಗಸಭೆಯಲ್ಲಿ ಭಾಗವಹಿಸಲು ಥೈಲ್ಯಾಂಡ್‌ಗೆ (ಏಪ್ರಿಲ್ 3-4, 2025) ಭೇಟಿ ನೀಡಲಿದ್ದಾರೆ. ನಂತರ, ಅಧ್ಯಕ್ಷ ಅನುರ ಕುಮಾರ ದಿಸಾನಾಯಕ ಅವರ ಆಹ್ವಾನದ ಮೇರೆಗೆ ಅವರು ಶ್ರೀಲಂಕಾಕ್ಕೆ (ಏಪ್ರಿಲ್ 4-6, 2025) ರಾಜ್ಯ ಭೇಟಿ ನೀಡಲಿದ್ದಾರೆ.ಇತ್ತೀಚಿನ “ಮನ್ ಕಿ ಬಾತ್” ಸಂಚಿಕೆಯಲ್ಲಿ ಬೊಜ್ಜಿನ ವಿರುದ್ಧ ಸಾಮೂಹಿಕ ಕ್ರಮಕ್ಕೆ ಪ್ರಧಾನಮಂತ್ರಿಯವರು ಕರೆ ನೀಡಿದ್ದಾರೆ
February 24th, 09:11 am
ಹೆಚ್ಚುತ್ತಿರುವ ಬೊಜ್ಜು ಪ್ರಮಾಣವನ್ನು ಎದುರಿಸುವ ತುರ್ತು ಅಗತ್ಯವನ್ನು ವಿವರಿಸುತ್ತಾ, ಖಾದ್ಯ ತೈಲ ಸೇವನೆಯನ್ನು ಕಡಿಮೆ ಮಾಡುವ ಉದ್ದೇಶವನ್ನು ಪ್ರತಿಪಾದಿಸಲು ಪ್ರಮುಖ ವ್ಯಕ್ತಿಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ನಾಮನಿರ್ದೇಶನ ಮಾಡಿದರು. ಆರೋಗ್ಯದ ಕುರಿತಾದ ಆಂದೋಲನವನ್ನು ಮತ್ತಷ್ಟು ವಿಸ್ತರಿಸಲು ಇನ್ನೂ 10 ಜನರನ್ನು ಪರಸ್ಪರ ನಾಮನಿರ್ದೇಶನ ಮಾಡುವಂತೆ ಪ್ರಧಾನಮಂತ್ರಿಯವರು ಒತ್ತಾಯಿಸಿದರು.ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ 2024ರಲ್ಲಿ ಭಾಗವಹಿಸುವವರೊಂದಿಗೆ ಡಿಸೆಂಬರ್ 11ರಂದು ಸಂವಾದ ನಡೆಸಲಿರುವ ಪ್ರಧಾನಮಂತ್ರಿ
December 09th, 07:38 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡಿಸೆಂಬರ್ 11 , 2024 ರಂದು ಸಂಜೆ 4:30 ಗಂಟೆಗೆ ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ 2024 ರ ಗ್ರಾಂಡ್ ಫಿನಾಲೆಯಲ್ಲಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಯುವ ನವೋದ್ಯಮಿಗಳೊಂದಿಗೆ ಸಂವಾದ ನಡೆಸಲಿದ್ದಾರೆ . ಗ್ರ್ಯಾಂಡ್ ಫಿನಾಲೆಯಲ್ಲಿ 1300ಕ್ಕೂ ಹೆಚ್ಚು ವಿದ್ಯಾರ್ಥಿಗಳ ತಂಡಗಳು ಭಾಗವಹಿಸುತ್ತವೆ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.ವರ್ಲ್ಡ್ ಫುಡ್ ಇಂಡಿಯಾ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿಯವರ ಸಂದೇಶ
September 19th, 12:30 pm
ವರ್ಲ್ಡ್ ಫುಡ್ ಇಂಡಿಯಾ ಕಾರ್ಯಕ್ರಮದಲ್ಲಿ ತಮ್ಮ ಸಂದೇಶದಲ್ಲಿ, ಪ್ರಧಾನಿ ಮೋದಿ ಅವರು, ಭಾರತವು ರೋಮಾಂಚಕ ಮತ್ತು ವೈವಿಧ್ಯಮಯ ಆಹಾರ ಸಂಸ್ಕೃತಿಯನ್ನು ಹೊಂದಿದೆ. ಭಾರತೀಯ ಆಹಾರ ಪರಿಸರ ವ್ಯವಸ್ಥೆಯ ಬೆನ್ನೆಲುಬು ರೈತ. ಇದು ಪಾಕಶಾಲೆಯ ಉತ್ಕೃಷ್ಟತೆಯ ಪೌಷ್ಟಿಕ ಮತ್ತು ರುಚಿಕರವಾದ ಸಂಪ್ರದಾಯಗಳ ರಚನೆಯನ್ನು ಖಾತ್ರಿಪಡಿಸಿದ ರೈತರು. ನಾವೀನ್ಯತೆ ನೀತಿಗಳು ಮತ್ತು ಕೇಂದ್ರೀಕೃತ ಅನುಷ್ಠಾನದೊಂದಿಗೆ ನಾವು ಅವರ ಕಠಿಣ ಪರಿಶ್ರಮವನ್ನು ಬೆಂಬಲಿಸುತ್ತಿದ್ದೇವೆ.2030 ರವರೆಗಿನ ಅವಧಿಗೆ ರಷ್ಯಾ-ಭಾರತ ಆರ್ಥಿಕ ಸಹಕಾರದ ಕಾರ್ಯತಂತ್ರದ ಕ್ಷೇತ್ರಗಳ ಅಭಿವೃದ್ಧಿ ಕುರಿತ ನಾಯಕರ ಜಂಟಿ ಹೇಳಿಕೆ
July 09th, 09:49 pm
2024ರ ಜುಲೈ 8-9 ರಂದು ಮಾಸ್ಕೋದಲ್ಲಿ ನಡೆದ ರಷ್ಯಾ ಮತ್ತು ಭಾರತದ ನಡುವಿನ 22ನೇ ವಾರ್ಷಿಕ ದ್ವಿಪಕ್ಷೀಯ ಶೃಂಗಸಭೆಯ ನಂತರ, ರಷ್ಯಾ ಒಕ್ಕೂಟದ ಅಧ್ಯಕ್ಷ ಘನತೆವೆತ್ತ ಶ್ರೀ ವ್ಲಾದಿಮಿರ್ ಪುಟಿನ್ ಮತ್ತು ಭಾರತ ಗಣರಾಜ್ಯದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರುPM praises SCO Millets Food Festival in Mumbai's Taj Mahal Palace
April 16th, 10:02 am
The Prime Minister, Shri Narendra Modi has praised SCO Millets Food Festival in Mumbai's Taj Mahal Palace.'ಕೃಷಿ ಮತ್ತು ಸಹಕಾರಿ ಸಂಸ್ಥೆಗಳು' ಕುರಿತ ಬಜೆಟ್ ನಂತರದ ವೆಬಿನಾರ್ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
February 24th, 11:40 am
ಬಜೆಟ್ ಸಂಬಂಧಿಸಿದ ಈ ನಿರ್ಣಾಯಕ ವೆಬಿನಾರ್‌ಗೆ ನಿಮ್ಮೆಲ್ಲರಿಗೂ ಆತ್ಮೀಯ ಸ್ವಾಗತ. ಕಳೆದ 8-9 ವರ್ಷಗಳಂತೆ ಈ ಬಾರಿಯೂ ಬಜೆಟ್ ನಲ್ಲಿ ಕೃಷಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ. ಕಳೆದ ಕೆಲವು ವರ್ಷಗಳಿಂದ ನೀವು ಬಜೆಟ್ ಮರುದಿನ ದಿನಪತ್ರಿಕೆಗಳನ್ನು ನೋಡುತ್ತಿದ್ದರೆ, ಪ್ರತಿ ಬಜೆಟ್ ನಲ್ಲಿ 'ಗ್ರಾಮಗಳು, ಬಡವರು ಮತ್ತು ರೈತರ ಬಜೆಟ್' ಎಂದು ಕರೆಯುವುದು ನಿಮಗೆ ತಿಳಿದಿರುತ್ತದೆ. ನಮ್ಮ ಆಡಳಿತ ಪ್ರಾರಂಭವಾಗುವ ಮೊದಲು 2014ರಲ್ಲಿ ಕೃಷಿ ಬಜೆಟ್ 25 ಸಾವಿರ ಕೋಟಿ ರೂ.ಗಿಂತ ಕಡಿಮೆ ಇತ್ತು. ಇಂದು ದೇಶದ ಕೃಷಿ ಬಜೆಟ್ 1 ಲಕ್ಷ 25 ಸಾವಿರ ಕೋಟಿ ರೂ.ಗಿಂತ ಅಧಿಕ ಅನುದಾನಕ್ಕೆ ಏರಿಕೆ ಕಂಡಿದೆ.ಕೃಷಿ ಮತ್ತು ಸಹಕಾರ ಕುರಿತ ಮುಂಗಡಪತ್ರ ನಂತರದ ವೆಬಿನಾರ್ ಉದ್ದೇಶಿಸಿ ಭಾಷಣ ಮಾಡಿದ ಪ್ರಧಾನಮಂತ್ರಿ
February 24th, 11:39 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಆಯುವ್ಯಯ ನಂತರದಲ್ಲಿ “ಕೃಷಿ ಮತ್ತು ಸಹಕಾರ” ಕುರಿತ ವೆಬಿನಾರ್ ಉದ್ದೇಶಿಸಿ ಮಾತನಾಡಿದರು. 2023 ರ ಕೇಂದ್ರ ಆಯವ್ಯಯದ ಉಪಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಸರ್ಕಾರ ಆಲೋಚನೆಗಳು ಮತ್ತು ಸಲಹೆಗಳನ್ನು ಪಡೆಯಲು 12 ಆಯವ್ಯಯ ನಂತರದ ವೆಬಿನಾರ್ ಗಳನ್ನು ಆಯೋಜಿಸಿದ್ದು, ಈ ಪೈಕಿ ಇದು ಎರಡನೇ ವೆಬಿನಾರ್ ಆಗಿದೆ.Seventh meeting of Governing Council of NITI Aayog concludes
August 07th, 05:06 pm
The Prime Minister, Shri Narendra Modi, today heralded the collective efforts of all the States in the spirit of cooperative federalism as the force that helped India emerge from the Covid pandemic.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಐ2ಯು2 ಶೃಂಗಸಭೆಯನ್ನು ಉದ್ದೇಶಿಸಿ ಮಾಡಿದ ಭಾಷಣದ ಅನುವಾದ
July 14th, 04:51 pm
ಮೊದಲನೆಯದಾಗಿ, ಪ್ರಧಾನಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಪ್ರಧಾನಿ ಲ್ಯಾಪಿಡ್ ಅವರಿಗೆ ಅಭಿನಂದನೆಗಳು ಮತ್ತು ಶುಭಾಶಯಗಳು.ರಷ್ಯಾ ಒಕ್ಕೂಟದ ಅಧ್ಯಕ್ಷರಾದ ಗೌರವಾನ್ವಿತ ವ್ಲಾದಿಮಿರ್ ಪುಟಿನ್ ಅವರೊಂದಿಗೆ ದೂರವಾಣಿ ಮೂಲಕ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತುಕತೆ
July 01st, 03:34 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಷ್ಯಾ ಒಕ್ಕೂಟದ ಅಧ್ಯಕ್ಷರಾದ ಗೌರವಾನ್ವಿತ ವ್ಲಾದಿಮಿರ್ ಪುಟಿನ್ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದರು.