ನೇಪಾಳದ ಪ್ರಧಾನಮಂತ್ರಿಯಾಗಿ ಆಯ್ಕೆಯಾದ ಕೆ.ಪಿ.ಶರ್ಮಾ ಓಲಿ ಅವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅಭಿನಂದನೆ

July 15th, 11:39 am

ನೇಪಾಳದ ಪ್ರಧಾನಮಂತ್ರಿಯಾಗಿ ಆಯ್ಕೆಯಾದ ಶ್ರೀ.ಕೆ.ಪಿ.ಶರ್ಮಾ ಓಲಿ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ಭಾರತ ಮತ್ತು ನೇಪಾಳ ನಡುವಿನ ಸ್ನೇಹದ ಆಳ ಬಾಂಧವ್ಯವನ್ನು ಇನ್ನಷ್ಟು ಗಟ್ಟಿಗೊಳಿಸಲು ಮತ್ತು ಪರಸ್ಪರ ಸಹಕಾರ ವಿಸ್ತರಿಸಲು ನಿಕಟವಾಗಿ ಕಾರ್ಯನಿರ್ವಹಿಸುವ ಆಶಯವನ್ನು ಅವರು ವ್ಯಕ್ತಪಡಿಸಿದ್ದಾರೆ.

ಆಸ್ಟ್ರಿಯಾದ ಚಾನ್ಸೆಲರ್ ಜೊತೆಗಿನ ಜಂಟಿ ಮಾಧ್ಯಮಗೋಷ್ಠಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಮಾಧ್ಯಮ ಹೇಳಿಕೆಯ ಇಂಗ್ಲೀಷ್ ಅನುವಾದ

July 10th, 02:45 pm

ಮೊದಲನೆಯದಾಗಿ, ಆತ್ಮೀಯ ಸ್ವಾಗತ ಮತ್ತು ಆತಿಥ್ಯಕ್ಕಾಗಿ ಚಾನ್ಸೆಲರ್ ನೆಹಮ್ಮರ್ ಅವರಿಗೆ ನನ್ನ ಕೃತಜ್ಞತೆಗಳು. ನನ್ನ ಮೂರನೇ ಅವಧಿಯ ಪ್ರಾರಂಭದಲ್ಲಿಯೇ ಆಸ್ಟ್ರಿಯಾಕ್ಕೆ ಭೇಟಿ ನೀಡುವ ಅವಕಾಶ ಸಿಕ್ಕಿದ್ದು ನನಗೆ ಸಂತಸ ತಂದಿದೆ. ನನ್ನ ಈ ಭೇಟಿ ಐತಿಹಾಸಿಕವೂ ವಿಶೇಷವೂ ಆಗಿದೆ. ನಲವತ್ತೊಂದು ವರ್ಷಗಳ ನಂತರ ಭಾರತದ ಪ್ರಧಾನಿಯೊಬ್ಬರು ಆಸ್ಟ್ರಿಯಾಕ್ಕೆ ಭೇಟಿ ನೀಡಿದ್ದಾರೆ. ನಮ್ಮ ದ್ವಿಪಕ್ಷೀಯ ಸಂಬಂಧಗಳು 75 ವರ್ಷಗಳನ್ನು ಪೂರೈಸಿರುವ ಸಂದರ್ಭದಲ್ಲಿ ಈ ಭೇಟಿ ನಡೆಯುತ್ತಿರುವುದು ಸಹ ಸಂತಸದ ಕಾಕತಾಳೀಯವಾಗಿದೆ.

​​​​​​​ಅರಬ್‌ ಸಂಯುಕ್ತ ಸಂಸ್ಥಾನದ ಅಬುಧಾಬಿಯಲ್ಲಿ ನಡೆದ ʻಅಹ್ಲನ್ ಮೋದಿ’ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಪಠ್ಯಾಂತರ

February 13th, 11:19 pm

ಇಂದು, ನೀವು ಅಬುಧಾಬಿಯಲ್ಲಿ ಇತಿಹಾಸ ನಿರ್ಮಿಸಿದ್ದೀರಿ. ಅರಬ್‌ ಸಂಯುಕ್ತ ಸಂಸ್ಥಾನದ(ಯುಎಇ) ವಿವಿಧ ಮೂಲೆಗಳಿಂದ ಮತ್ತು ಭಾರತದ ವಿವಿಧ ರಾಜ್ಯಗಳಿಂದ ನೀವು ಬಂದಿದ್ದೀರಿ, ಆದರೆ ಎಲ್ಲರ ಹೃದಯಗಳು ಪರಸ್ಪರ ಬೆಸೆದುಕೊಂಡಿವೆ. ಈ ಐತಿಹಾಸಿಕ ಕ್ರೀಡಾಂಗಣದಲ್ಲಿ ಪ್ರತಿ ಹೃದಯ ಮಿಡಿತವು ಹೇಳುತ್ತಿದೆ - ʻಭಾರತ-ಯುಎಇ ಸ್ನೇಹವು ಚಿರಾಯುವಾಗಲಿʼ! ಪ್ರತಿ ಉಸಿರು ಹೇಳುತ್ತಿದೆ - ʻಭಾರತ-ಯುಎಇ ಸ್ನೇಹ ಚಿರಾಯುವಾಗಲಿ! ಪ್ರತಿಯೊಂದು ಧ್ವನಿಯೂ ಹೇಳುತ್ತಿದೆ - ʻಭಾರತ-ಯುಎಇ ಸ್ನೇಹವು ಚಿರಾಯುವಾಗಲಿ! ನಾವು ಈ ಕ್ಷಣವನ್ನು ಪೂರ್ಣವಾಗಿ ಬದುಕಬೇಕು. ಇಂದು, ನಾವು ಜೀವಮಾನವಿಡೀ ನಮ್ಮೊಂದಿಗೆ ಉಳಿಯುವ ನೆನಪುಗಳನ್ನು ಸಂಗ್ರಹಿಸಬೇಕಾಗಿದೆ - ಜೀವಮಾನವಿಡೀ ನನ್ನೊಂದಿಗೆ ಉಳಿಯುವ ನೆನಪುಗಳು...

ಯು.ಎ.ಇ.ಯಲ್ಲಿ ನಡೆದ ಭಾರತೀಯ ಸಮುದಾಯದ -''ಅಹ್ಲಾನ್ ಮೋದಿ'' ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರ ಸಂವಾದ

February 13th, 08:30 pm

ಯು.ಎ.ಇ.ಯಲ್ಲಿನ ಭಾರತೀಯ ಸಮುದಾಯವು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಗೌರವಾರ್ಥವಾಗಿ ಆಯೋಜಿಸಿದ ''ಅಹ್ಲಾನ್ ಮೋದಿ'' ಕಾರ್ಯಕ್ರಮದಲ್ಲಿ ಯು.ಎ.ಇ.ಯಲ್ಲಿರುವ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಅವರು ಮಾತನಾಡಿದರು. ಯು.ಎ.ಇ.ಯ 7 ಎಮಿರೇಟ್ಸ್ ನಾದ್ಯಂತ ಭಾರತೀಯ ಅನಿವಾಸಿ ಸಮುದಾಯ (ಡಯಾಸ್ಪೊರಾ) ಬೃಹತ್ ಪ್ರಮಾಣದಲ್ಲಿ ಭಾಗವಹಿಸುವಿಕೆ ಮತ್ತು ಎಲ್ಲಾ ಸಮುದಾಯಗಳ ಭಾರತೀಯರನ್ನು ''ಅಹ್ಲಾನ್ ಮೋದಿ'' ಕಾರ್ಯಕ್ರಮ ಒಳಗೊಂಡಿತ್ತು. ಯು.ಎ.ಇ.ಯ ಪ್ರಜೆಗಳಾದ ಅರಬಿ(ಎಮಿರಾಟಿ)ಗಳು ಸಹ ಪ್ರೇಕ್ಷಕರಾಗಿ ಒಳಗೊಂಡಿದ್ದರು.